ಮಡಿಕೇರಿ ಅ.1 NEWS DESK : ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‍ಷನ್ ಸೊಸೈಟಿ, ಕೊಡಗು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ, ರಕ್ತ ನಿಧಿ ಕೇಂದ್ರ, ಜಿಲ್ಲಾ ಆಸ್ಪತ್ರೆ, ಮಡಿಕೇರಿ ರೋಟರಿ ಮತ್ತು ಮಡಿಕೇರಿ ಮಾಜಿ ಸೈನಿಕರ ಸಂಘ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕೊಡಗು ಶಾಖೆಯ ಸಂಯುಕ್ತ ಆಶ್ರಯದಲ್ಲಿ ನಗರದ ರೋಟರಿ ಹಾಲ್‍ನಲ್ಲಿ “ಸ್ವಯಂಪ್ರೇರಿತ ರಕ್ತದಾನ ದಿನಾಚರಣೆ’ ಹಾಗೂ ‘ಸ್ವಯಂಪ್ರೇರಿತ ರಕ್ತದಾನ ಶಿಬಿರ’ ನಡೆಯಿತು. ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ಜಿಲ್ಲಾ ಏಡ್ಸ್ ನಿಯಂತ್ರಣ ಅಧಿಕಾರಿ ಡಾ.ಎನ್.ಆನಂದ್ ಮಾತನಾಡಿ, ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ ಕಾರ್ಯಕ್ರಮದ ಮಹತ್ವದ ಕುರಿತು ವಿವರಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಅವರು ಮಾತನಾಡಿ ಕೊಡಗು ಜಿಲ್ಲೆಯಲ್ಲಿ ರಕ್ತದ ಅಗತ್ಯ ತುಂಬಾ ಇದೆ. ಎಲ್ಲಾ ಸಂಘ ಸಂಸ್ಥೆಗಳ ಸಹಕಾರದಿಂದ ಹೆಚ್ಚು ರಕ್ತದಾನ…
ಲೇಖಕ: admin
ಮಡಿಕೇರಿ ಅ.1 NEWS DESK : ಪೊನ್ನಂಪೇಟೆ ತಾಲ್ಲೂಕಿನ ಕಿರುಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಿರುಗೂರು, ಮತ್ತೂರು ಮತ್ತು ಕೋಟೂರು ಗ್ರಾಮಗಳ ತೋಟದ ಲೈನ್ ಮನೆಗಳಲ್ಲಿ ವಾಸವಿರುವ ಅಸ್ಸಾಂ ಮತ್ತಿತರ ಹೊರ ರಾಜ್ಯಗಳ ಕಾರ್ಮಿಕರ ಹೆಸರುಗಳನ್ನು ದಾಖಲೆ ಸಹಿತ ನೋಂದಣಿ ಮಾಡದಿದ್ದಲ್ಲಿ ಪೊಲೀಸರ ಸಹಕಾರದಿಂದ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಗ್ರಾ.ಪಂ ಅಧ್ಯಕ್ಷ ಚೆಪ್ಪುಡಿರ ರಾಕೇಶ್ ದೇವಯ್ಯ ಎಚ್ಚರಿಕೆ ನೀಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಇದೇ ಸೆ.12 ರಿಂದ 30 ರವರೆಗೆ ಹೆಸರು ನೋಂದಣಿಗೆ ಅವಕಾಶ ನೀಡಲಾಗಿತ್ತು. ನಿಗಧಿತ ಅವಧಿ ಪೂರ್ಣಗೊಂಡಿದ್ದು, ನೋಂದಣಿಗೆ ಬಾಕಿ ಇರುವ ಕಾರ್ಮಿಕರ ಹೆಸರುಗಳನ್ನು ಕಡ್ಡಾಯವಾಗಿ ತಕ್ಷಣ ನೋಂದಾಯಿಸಿಕೊಳ್ಳಬೇಕೆಂದು ಮನವಿ ಮಾಡಿದ್ದಾರೆ. ಈಗಾಗಲೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಕಾರ್ಮಿಕರ ಹೆಸರು ನೋಂದಣಿಗೆ ಸೂಚನೆ ನೀಡಿದ್ದಾರೆ. ಜಿಲ್ಲೆ ಹಾಗೂ ಜಿಲ್ಲೆಯ ಜನರ ಸುರಕ್ಷತೆಯ ದೃಷ್ಟಿಯಿಂದ ಹೆಸರು ನೋಂದಾಯಿಸದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ. ಕಾರ್ಮಿಕರ ಆಧಾರ್ ಕಾರ್ಡ್ ಪ್ರತಿ, ರೇಷನ್ ಕಾರ್ಡ್ ಪ್ರತಿ,…
ಮಡಿಕೇರಿ ಅ.1 NEWS DESK : ವಿಶ್ವ ರೇಬಿಸ್ ದಿನದ ಪ್ರಯುಕ್ತ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ಕೂಡಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದಲ್ಲಿ “Breaking Rabies boundries ರೇಬಿಸ್ ಗಡಿಯನ್ನು ಮುರಿಯುವುದು” ಎಂಬ ಧ್ಯೇಯದೊಂದಿಗೆ ಕೊಡಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರೇಬಿಸ್ ತಡೆ ಹಾಗೂ ಲಸಿಕೆಗಳ ಮಹತ್ವದ ಕುರಿತು ಜನಜಾಗೃತಿ ಕಾರ್ಯಕ್ರಮ ನಡೆಯಿತು. ನೋಡಲ್ ಅಧಿಕಾರಿ ಹಾಗೂ ಸಮುದಾಯ ವೈದ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾದ್ಯಪಕರಾದ ಡಾ.ಕೃತಿಕಾ ಮಾತನಾಡಿ, ರೇಬಿಸ್ ರೋಗ ಎಷ್ಟು ಮಾರಕ, ರೇಬಿಸ್ ಕಾಯಿಲೆ ಹರಡುವ ಬಗ್ಗೆ ಹಾಗೂ ರೇಬಿಸ್ ಲಸಿಕೆ ತೆಗೆದುಕೊಳ್ಳುವ ವಿಧಾನ ಹಾಗೂ ರೇಬಿಸ್ ರೋಗ ತಡೆಗಟ್ಟುವಿಕೆ ಬಗ್ಗೆ ವಿವರಿಸಿದರು. ಜಿಲ್ಲ್ಲಾ ಶಸ್ತ್ರಚಿಕಿತ್ಸಕ ಡಾ.ನಜುಂಡಯ್ಯ ಮಾತನಾಡಿ, ರೇಬಿಸ್ ಕಾಯಿಲೆಯು ಎಷ್ಟು ಮಾರಕವೆಂದು, ಸೂಕ್ತ ಲಸಿಕೆ ಪಡೆಯುವುದು ಅನಿವಾರ್ಯ ಎಂದು ತಿಳಿಸಿದರು. ಹುಚ್ಚು ನಾಯಿ ಕಡಿತದಿಂದ ದೇಶದಲ್ಲಿ ವರ್ಷಕ್ಕೆ 15 ರಿಂದ 20 ಸಾವಿರ ಮಂದಿ ಬಲಿಯಾಗುತ್ತಿದ್ದು ಈ ಪೈಕಿ ಶೇ.40 ರಷ್ಟು 15 ವರ್ಷದ…
ಮಡಿಕೇರಿ ಅ.1 NEWS DESK : ನಾಡ ಹಬ್ಬ ದಸರಾ ಪ್ರಯುಕ್ತ ಅ.3 ರಂದು ಮಡಿಕೇರಿಯಲ್ಲಿ ನಾಲ್ಕು ಶಕ್ತಿ ದೇವತೆಗಳ ಕರಗ ಮಹೋತ್ಸವ ಆರಂಭಗೊಳ್ಳಲಿದ್ದು, ಗಣ್ಯರು ಸೇರಿದಂತೆ ಸಾವಿರಾರು ಭಕ್ತಾದಿಗಳು ಪಾಲ್ಗೊಳ್ಳಲಿದ್ದಾರೆ. ಈ ಸಂಬಂಧ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಮತ್ತು ವಾಹನ ಸುಗಮ ಸಂಚಾರಕ್ಕೆ ಅನುವುಕಲ್ಪಿಸಿ ಕೊಡುವ ನಿಟ್ಟಿನಲ್ಲಿ ಮುಂಜಾಗೃತ ಕ್ರಮವಾಗಿ ಬೆಳಿಗ್ಗೆಯಿಂದಲೇ ಪಂಪ್ ಕೆರೆಯಿಂದ ( ಕರಗ ಹೋರಡುವ ಸ್ಥಳ) ಹಿಡಿದ್ದು, ಎವಿ ಶಾಲೆ ಜಂಕ್ಷನ್ ವರೆಗೆ ರಸ್ತೆಯ ಎರಡು ಬದಿಯಲ್ಲಿ ವಾಹನ ನಿಲುಗಡೆಯನ್ನು ತಾತ್ಕಾಲಿಕವಾಗಿ ಸಂಪೂರ್ಣ ನಿಷೇಧಿಸಲಾಗಿದೆ. ಎವಿ ಶಾಲಾ ಜಂಕ್ಷನ್ ನಿಂದ ಐಜಿ ವೃತ್ತದವರಗೆ ರಸ್ತೆಯ ಒಂದು ಭಾಗದಲ್ಲಿ ಅಂದರೆ ರಸ್ತೆಯ ಎಡ ಭಾಗದಲ್ಲಿ ಮಾತ್ರ ವಾಹನ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ. ನಂತರ ಐಜಿ ವೃತ್ತದಿಂದ ಕಾಲೇಜು ರಸ್ತೆ ಮಾರ್ಗವಾಗಿ ರಾಮಮಂದಿರ ದೇವಾಲಯದವರೆಗೆ ಸಂಜೆ 6 ಗಂಟೆಯ ನಂತರ ರಸ್ತೆಯ ಎರಡು ಭಾಗದಲ್ಲಿಯೂ ವಾಹನ ನಿಲುಗಡೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಆದ್ದರಿಂದ ಸಾರ್ವಜನಿಕರು ಸಹಕರಿಸಿ, ಕರಗ ಮಹೋತ್ಸವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಮಡಿಕೇರಿ…
ಮಡಿಕೇರಿ ಅ.1 NEWS DESK : ಬಿದ್ದು ಸಿಕ್ಕಿದ ಬೆಲೆಬಾಳುವ ಮೊಬೈಲ್ ಫೋನ್‍ಅನ್ನು ವಾರಸುದಾರರಿಗೆ ಹಿಂತಿರುಗಿಸುವ ಮೂಲಕ ನಗರದ ಸಂಚಾರಿ ಪೊಲೀಸರು ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ನಗರದ ಐಜಿ ವೃತ್ತದ ಬಳಿ ಮಡಿಕೇರಿ ಸಂಚಾರಿ ಪೊಲೀಸ್ ಠಾಣೆಯ ಉಪ ನೀರಿಕ್ಷಕ ಶ್ರೀಧರ್ ಅವರಿಗೆ ಬೆಲೆಬಾಳುವ ಮೊಬೈಲ್ ಫೋನ್ ಬಿದ್ದುಸಿಕ್ಕಿದ್ದು, ಅದನ್ನು ವಾರಸುದಾರರಿಗೆ ಒಪ್ಪಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಮಡಿಕೇರಿ ಅ.1 NEWS DESK : 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ನಿವೃತ್ತಿ ಆರ್ಥಿಕ ಸೌಲಭ್ಯ ಕಲ್ಪಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ನಿವೃತ್ತ ನೌಕರರ ವೇದಿಕೆಯ ಕೊಡಗು ಜಿಲ್ಲಾ ಘಟಕ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ಜಿಲ್ಲಾಧಿಕಾರಿಗಳ ಕಚೇರಿ ಎದುರು ಘೋಷಣೆಗಳನ್ನು ಕೂಗಿ ಆರ್ಥಿಕ ತಾರತಮ್ಯವನ್ನು ಸರಿಪಡಿಸುವಂತೆ ಒತ್ತಾಯಿಸಿದ ಪ್ರತಿಭಟನಾಕಾರರು, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು. 2022ರ ಜುಲೈ 1ರಿಂದ 2024ರ ಜುಲೈ 31ರ ಅವಧಿಯಲ್ಲಿ ನಿವೃತ್ತಿಯಾದ ನೌಕರರಿಗೆ 6ನೇ ಆಯೋಗದ ಲೆಕ್ಕಾಚಾರದ ಅನುಸಾರ ಡಿ.ಸಿ.ಆರ್.ಜಿ. ಕಮ್ಯುಟೇಶನ್, ರಜೆ ನಗದೀಕರಣಗಳ ನಿವೃತ್ತಿ ಆರ್ಥಿಕ ಸೌಲಭ್ಯವನ್ನು ನೀಡಿದ್ದಾರೆ. ಈ ಕ್ರಮದಿಂದ ನಮಗೆ ಆರ್ಥಿಕ ನಷ್ಟವುಂಟಾಗಿ ಅನ್ಯಾಯವಾಗಿದೆ. ಸರ್ಕಾರ ತಕ್ಷಣ 2022ರ ಜುಲೈ 1ರಿಂದ 2024ರ ಜುಲೈ 31ರ ಅವಧಿಯೊಳಗೆ ನಿವೃತ್ತಿಯಾಗಿರುವ ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ನಿವೃತ್ತಿ ಆರ್ಥಿಕ ಸೌಲಭ್ಯ ಕಲ್ಪಿಸಬೇಕು ಎಂದು ವೇದಿಕೆಯ ಜಿಲ್ಲಾ ಸಂಚಾಲಕ ಪಿ.ಎಸ್.ಜನಾರ್ಧನ…
ವಿರಜಪೇಟೆ ಅ.1 NEWS DESK : ವಿರಾಜಪೇಟೆ ಕಲ್ಲುಬಾಣೆಯ ಕಲ್ಲುಬಾಯ್ಸ್ ತಂಡದ ವತಿಯಿಂದ ಎರಡನೇ ವರ್ಷದ ಫುಟ್ಬಾಲ್ ಪಂದ್ಯಾವಳಿಯು ನ.15 ರಿಂದ 17ರ ವರೆಗೆ ವಿರಾಜಪೇಟೆ ನಗರದ ತಾಲ್ಲೂಕು ಮೈದಾನದಲ್ಲಿ ನಡೆಯಲಿದೆ ಎಂದು ಕಲ್ಲುಬಾಯ್ಸ್‍ನ ಅಧ್ಯಕ್ಷ ರಹೀಂ ಇಚ್ಚಿಯಪ್ಪ ಮಾಹಿತಿ ನೀಡಿದರು. ವಿರಾಜಪೇಟೆಯ ಟಿ.ಕೆ.ಟಿ. ಟವರ್‍ನಲ್ಲಿ ನಡೆದ ಪೋಸ್ಟರ್ ಬಿಡುಗಡೆ ಕಾರ್ಯಕ್ರಮದಲ್ಲಿ ಲೈಕ್ ಸಂಸ್ಥೆಯ ಮಾಲೀಕ ರಾಸಿಕ್ ಕ್ರೀಡಾಕೂಟದ ಪೋಸ್ಟರ್‍ನ್ನು ಬಿಡುಗಡೆ ಮಾಡಿದರು. ಇದೇ ಸಂದರ್ಭ ವಿರಾಜಪೇಟೆ ಪಟ್ಟಣ ಪಂಚಾಯಿತಿ ಸದಸ್ಯರಾದ ಮಹಮ್ಮದ್ ರಾಫಿ ಮಾತನಾಡಿ ಪಂದ್ಯಾವಳಿಗೆ ಶುಭಹಾರೈಸಿದರು. ಈ ಸಂದರ್ಭ ಕ್ರೀಡಾಕೂಟದ ಪ್ರೇಮಿಗಳಾದ ಸಿ.ಎ.ನಾಸಿರ್, ಶಂಶಿರ್, ಚೇಕು, ಯ್ಯಯ್ಯ ಸೇರಿದಂತೆ ಕೀಡಾ ಪ್ರೇಮಿಗಳು ಹಾಜರಿದ್ದರು.
ಮಡಿಕೇರಿ ಅ.1 NEWS DESK : ನಗರದ ಕೊಡಗು ವಿದ್ಯಾಲಯ ವಿದ್ಯಾಸಂಸ್ಥೆಯ ವತಿಯಿಂದ ದ್ವಿತೀಯ ಬಾರಿಗೆ ಅ.4 ರಿಂದ 7 ರವರೆಗೆ ಸಿಬಿಎಸ್‍ಇ ದಕ್ಷಿಣ ವಲಯದ ವಲಯ 2ರ ಹಾಕಿ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ ಎಂದು ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲರಾದ ಕೆ.ಎಸ್.ಸುಮಿತ್ರ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ದಕ್ಷಿಣ ವಲಯಕ್ಕೆ ಒಳಪಡುವ ಕರ್ನಾಟಕ, ಕೇರಳ ಮತ್ತು ಮಹಾರಾಷ್ಟ್ರಗಳಲ್ಲಿನ ಸಿಬಿಎಸ್‍ಇ ಶಿಕ್ಷಣ ಸಂಸ್ಥೆಗಳ ಕ್ರೀಡಾಪಟುಗಳಿಗೆ ಸೀಮಿತವಾಗಿ ಆಯೋಜಿತ ಹಾಕಿ ಪಂದ್ಯಾವಳಿಯ ಪಂದ್ಯಗಳು ಕೂಡಿಗೆ ಮತ್ತು ಸೋಮವಾರಪೇಟೆಯ ಆಸ್ಟ್ರೋ ಟರ್ಫ್ ಮೈದಾನದಲ್ಲಿ ನಡೆಯಲಿದೆ ಎಂದರು. 14 ವರ್ಷದೊಳಗಿನ, 17 ವರ್ಷದೊಳಗಿನ ಮತ್ತು 19 ವರ್ಷದೊಳಗಿನ ಮೂರು ವಿಭಾಗಗಳಲ್ಲಿ ಬಾಲಕ ಮತ್ತು ಬಾಲಕಿಯರಿಗೆ ಪ್ರತ್ಯೇಕವಾಗಿ ಪಂದ್ಯಾವಳಿ ನಡೆಯಲಿದ್ದು, ಒಟ್ಟು 37 ತಂಡಗಳು ಪಾಲ್ಗೊಳ್ಳಲಿವೆ. ಕ್ರೀಡಾಪಟುಗಳು, ತರಬೇತುದಾರರು ಮತ್ತು ವ್ಯವಸ್ಥಾಪಕರು ಸೇರಿದಂತೆ ಸುಮಾರು 700 ಮಂದಿ ಭಾಗವಹಿಸಲಿದ್ದಾರೆ. ಲೀಗ್ ಮತ್ತು ನಾಕೌಟ್ ಮಾದರಿಯಲ್ಲಿ 60 ಪಂದ್ಯಾಟಗಳು ನಡೆಯಲಿದ್ದು, ಹಾಕಿ ಕೂರ್ಗ್‍ನ ಅಂತರಾಷ್ಟ್ರೀಯ ಮಟ್ಟದ ತೀರ್ಪುಗಾರರು ಪಂದ್ಯಗಳನ್ನು ನಿರ್ವಹಿಸಲಿದ್ದಾರೆ…
ಮಡಿಕೇರಿ ಅ.1 NEWS DESK : ಕೊಡವ ಯುವ ಕ್ರೀಡಾ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಮತ್ತು ಲೆದರ್‌ಬಾಲ್ ಕ್ರಿಕೆಟ್ ಗೆ ಉತ್ತೇಜನ ನೀಡುವ ಉದ್ದೇಶದಿಂದ ಕೂರ್ಗ್ ಕ್ರಿಕೆಟ್ ಫೌಂಡೇಶನ್ ವತಿಯಿಂದ ಏ.1 ರಿಂದ 20ರ ವರೆಗೆ ಪಾಲಿಬೆಟ್ಟದಲ್ಲಿ ಕೊಡವ ಕ್ರಿಕೆಟ್ ಲೆದರ್‌ಬಾಲ್ ಪ್ರೀಮಿಯರ್ ಲೀಗ್ ಸೀಸನ್-2 ಕ್ರಿಕೆಟ್ ಪಂದ್ಯಾವಳಿ ನಡೆಯಲಿದೆ ಎಂದು ಫೌಂಡೇಶನ್‍ನ ಅಧ್ಯಕ್ಷ ಪೊರುಕೊಂಡ ಸುನಿಲ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಾಲಿಬೆಟ್ಟದ ಟಾಟಾ ಕಾಫಿ ಸಂಸ್ಥೆಯ ಕ್ರಿಕೆಟ್ ಮೈದಾನದಲ್ಲಿ ಟಿ-20 ಮಾದರಿಯ ಪಂದ್ಯಾವಳಿ ನಡೆಯಲಿದ್ದು, ವಿಜೇತರಿಗೆ ಆಕರ್ಷಕ ನಗದು ಹಾಗೂ ಟ್ರೋಫಿ ನೀಡಲಾಗುವುದು ಎಂದರು. ಸೀಸನ್-1 ರ ಪ್ರಾಂಚೈಸಿಗಳು ಮುಂದುವರೆಯಲಿದ್ದು, ಇವರೊಂದಿಗೆ ಮತ್ತಷ್ಟು ಪ್ರಾಂಚೈಸಿಗಳು ಪಾಲ್ಗೊಳ್ಳವ ನಿರೀಕ್ಷೆ ಇದೆ. ಒಂದು ತಂಡದಲ್ಲಿ 15 ಮಂದಿ ಇರಲಿದ್ದು, ಈ ಪಂದ್ಯ ಕೊಡವ ಕ್ರೀಡಾ ಪ್ರತಿಭೆಗಳಿಗೆ ಸೀಮಿತವಾಗಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಜನಾಂಗದ ಪ್ರತಿಭೆಗಳನ್ನು ಗುರುತಿಸಿ ಲೆದರ್‍ಬಾಲ್ ಕ್ರಿಕೆಟ್ ಗೆ ಉತ್ತೇಜನ ನೀಡುವ ಗುರಿ ಹೊಂದಿದ್ದೇವೆ. ಯುವ ಪ್ರತಿಭೆಗಳು ಲೆದರ್‌ಬಾಲ್ ಕ್ರಿಕೆಟ್…
ಮಡಿಕೇರಿ ಅ.1 NEWS DESK : ಜೆಸಿಐ ಪೊನ್ನಂಪೇಟೆ ನಿಸರ್ಗ ಘಟಕದ ವತಿಯಿಂದ ಅ.5 ರಂದು ಮಲೆನಾಡ ಮಡಿಲಲ್ಲಿ ಜೆಸಿ ನಿಸರ್ಗ ರಾಜ್ಯಮಟ್ಟದ ಕೆಸರುಗದ್ದೆ ಕ್ರೀಡಾಕೂಟ ನಡೆಯಲಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಘಟಕದ ಅಧ್ಯಕ್ಷ ಪೆಮ್ಮಂಡ ಬೋಪಣ್ಣ ಅವರು ಪೊನ್ನಂಪೇಟೆ ತಾಲ್ಲೂಕಿನ ಬೇಗೂರುಕೊಲ್ಲಿಯಲ್ಲಿ ಒಂದು ದಿನ ನಡೆಯುವ ಕ್ರೀಡಾಕೂಟದ ಕುರಿತು ಮಾಹಿತಿ ನೀಡಿದ್ದಾರೆ. ಬೆಳಿಗ್ಗೆ 9.30 ಗಂಟೆಗೆ ಪಂದ್ಯಾವಳಿಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಅವರು ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಹುದಿಕೇರಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಅಜ್ಜಿಕುಟ್ಟೀರ ಪ್ರವೀಣ್ ಮುತ್ತಪ್ಪ, ಹುದಿಕೇರಿ ಗ್ರಾ.ಪಂ ಅಧ್ಯಕ್ಷರಾದ ಕುಪ್ಪಣಮಡ ಕೆ.ಕಾವೇರಮ್ಮ, ಕೊಡಗು ಜಿಲ್ಲಾ ಗ್ಯಾರಂಟಿ ಅನುಷ್ಠನಾ ಸಮಿತಿ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ವಲಯ 14 ಜೆಎಸಿ ವಲಯ ಆಡಳಿತ ಮಂಡಳಿಯ ಸಲಹೆಗಾರ ಎ.ಎಸ್.ನರೈನ್ ಕಾರ್ಯಪ್ಪ, ಹುದಿಕೇರಿ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಎಂ.ಎಂ.ನವೀನ್ ಪಾಲ್ಗೊಳ್ಳಲಿದ್ದಾರೆ. ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಬಿ.ಶೆಟ್ಟಿಗೇರಿ ಗ್ರಾಮದ ನಾಮೇರ ನವೀನ್,…






