ಸುಂಟಿಕೊಪ್ಪ,ಆ.17 NEWS DESK : ಸುಂಟಿಕೊಪ್ಪ ಸೇರಿದಂತೆ ಹೋಬಳಿ ವ್ಯಾಪ್ತಿಯಲ್ಲಿ ಶ್ರಾವಣ ಮಾಸದ ಹುಣ್ಣಿಮೆಯ ಹಿಂದಿನ ಶುಕ್ರವಾರ ವರಮಹಾಲಕ್ಷ್ಮಿ ಹಬ್ಬವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಹಲವು ಮನೆಗಳಲ್ಲಿ ಮುತ್ತೈದೆಯರು ಮುಂಜಾನೆ ದೇವರಿಗೆ ನೈವೇದ್ಯವನ್ನು ತಯಾರಿಸಿ ಕಳಸ ವಿಶೇಷ ಪೂಜೆ ಸಲ್ಲಿಸಿದರು. ನೆರೆಹೊರೆಯವರಿಗೆ ಅರಶಿನ, ಕುಂಕುಮ, ಹೂ ನೀಡಿ ಪ್ರಸಾದವನ್ನು ನೀಡುವುದರ ಜೊತೆಯಲ್ಲಿ ಕೆಲವು ಮನೆಗಳಲ್ಲಿ ಅನ್ನದಾನದ ವ್ಯವಸ್ಥೆಯನ್ನು ಕೂಡ ಕಲ್ಪಿಸಲಾಗಿತ್ತು.
ಲೇಖಕ: admin
ಮಡಿಕೇರಿ ಆ.17 NEWS DESK : ನಗರದ ಶ್ರೀಕೋಟೆ ಮಾರಿಯಮ್ಮ ದೇವಾಲಯದಲ್ಲಿ ಕಳ್ಳತನ ನಡೆದಿದ್ದು, ಚೋರರು ಚಿನ್ನಾಭರಣ ಮತ್ತು ಕಾಣಿಕೆ ಹಣವನ್ನು ದೋಚಿದ್ದಾರೆ. ದೇವಾಲಯದ ಬಾಗಿಲಿನ ಬೀಗ ಮುರಿದು ಒಳ ಪ್ರವೇಶಿಸಿರುವ ಕಳ್ಳರು ಮಾರಿಯಮ್ಮ ದೇವಿಯ ಮೂರ್ತಿ ಮೇಲಿನ ಲಕ್ಷಾಂತರ ರೂ.ಮೌಲ್ಯದ ಆಭರಣ ಮತ್ತು ಕಾಣಿಕೆ ಹುಂಡಿಯಲ್ಲಿದ್ದ ಹಣವನ್ನು ಕದ್ದೊಯ್ದಿದ್ದಾರೆ. ಕೆಲವು ಆಭರಣಗಳನ್ನು ಅಲ್ಲೇ ಬಿಟ್ಟು ಹೋಗಿದ್ದಾರೆ. ದೇವಾಲಯದಲ್ಲಿರುವ ಸಿಸಿ ಕ್ಯಾಮರಾದ ದಿಕ್ಕನ್ನು ಬದಲಿಸಿ ಈ ಕೃತ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಸ್ಥಳಕ್ಕೆ ಮಡಿಕೇರಿ ನಗರ ಠಾಣಾ ಪೋಲಿಸರು ಹಾಗೂ ಶ್ವಾನದಳ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಚೋರರ ಪತ್ತೆಗೆ ತನಿಖೆ ಕೈಗೊಂಡಿದ್ದಾರೆ.
ಕುಶಾಲನಗರ ಆ.17 NEWS DESK : ಪ್ರತಿಯೊಂದು ಕ್ಷೇತ್ರದಲ್ಲಿ ಮಹಿಳೆಯರು ತಮ್ಮನ್ನು ತೊಡಗಿಸಿಕೊಂಡು ಸಮಾಜದ ಏಳಿಗೆಯಲ್ಲಿ ಪ್ರಮುಖ ಪಾತ್ರ ವಹಿಸಬೇಕೆಂದು ಜಿ.ಪಂ ಮಾಜಿ ಅಧ್ಯಕ್ಷರಾದ ಕೆ.ಪಿ.ಚಂದ್ರಕಲಾ ಕರೆ ನೀಡಿದ್ದಾರೆ. ಕುಶಾಲನಗರ ಭೂಮಿಕ ಮಹಿಳಾ ಹಿತ ರಕ್ಷಣಾ ವೇದಿಕೆಯಿಂದ ಸ್ವಾತಂತ್ರ್ಯೋತ್ಸವ ಅಂಗವಾಗಿ ಕನ್ನಿಕಾ ಇಂಟರ್ನ್ಯಾಷನಲ್ ಸಭಾಂಗಣದಲ್ಲಿ ಹಮ್ಮಿಕೊಂಡ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ನೊಂದ ಮಹಿಳೆಯರಿಗೆ ಸಂಘಟನೆ ಮೂಲಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸಿಕೊಳ್ಳಬೇಕು ಎಂದು ಹೇಳಿದ ಚಂದ್ರಕಲಾ ಅವರು ಎಲ್ಲಾ ರೀತಿಯ ಸಲಹೆ ಸಹಕಾರಗಳನ್ನು ತಮ್ಮ ಮೂಲಕ ನೀಡುವುದಾಗಿ ತಿಳಿಸಿದರು. ಇದೇ ಸಂದರ್ಭ ಸಮಾಜ ಸೇವಕಿ ಕಮಲಾ ಕರಿಯಪ್ಪ ಖ್ಯಾತ ನಾಟಿ ವೈದ್ಯೆ ಅಯಿನಮಂಡ ಲೀಲಾವತಿ ಗಣಪತಿ, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಹಾಗೂ ಹಿರಿಯ ರಾಜಕೀಯ ಧುರೀಣರಾದ ಕೆ ಪಿ ಚಂದ್ರಕಲಾ, ವೇದಿಕೆ ಅಧ್ಯಕ್ಷೆ ಫಿಲೋಮಿನಾ ಅವರುಗಳನ್ನು ವೇದಿಕೆ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಮುಖ್ಯ ಅತಿಥಿಗಳಾಗಿ ಪುರಸಭಾ ಸದಸ್ಯೆ ರೂಪ ಉಮಾ ಶಂಕರ್ ಮಾತನಾಡಿದರು.…
ಮಡಿಕೇರಿ NEWS DESK ಆ.16 : “ಬ್ರೈನೋಬ್ರೈನ್ ಇಂಟರ್ ನ್ಯಾಷನಲ್ ದುಬೈ ಸಂಸ್ಥೆಯ ವತಿಯಿಂದ ಇತ್ತೀಚೆಗೆ ಬೆಂಗಳೂರಿನ ನಿಮ್ಹಾನ್ಸ್ ಕನ್ವೆನ್ಷನ್ ಸೆಂಟರ್‌ನಲ್ಲಿ ಆಯೋಜಿಸಲಾಗಿದ್ದ “157ನೇ ರಾಜ್ಯ ಮಟ್ಟದ “ಬ್ರೈನೋಬ್ರೈನ್ ಸ್ಪರ್ಧೆ-2024”ರಲ್ಲಿ ಮಡಿಕೇರಿಯ “ಬ್ರೈನೋಬ್ರೈನ್” ಕೇಂದ್ರದ 69 ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿ ಪದಕ ಪಡೆದಿದ್ದಾರೆ. ಈ ಸ್ಪರ್ಧೆಯಲ್ಲಿ ಕರ್ನಾಟಕದ ಒಟ್ಟು 80 “ಬ್ರೈನೋಬ್ರೈನ್” ಕೇಂದ್ರಗಳಿಂದ ಸುಮಾರು 2200 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಮಡಿಕೇರಿ “ಬ್ರೈನೋಬ್ರೈನ್” ಕೇಂದ್ರದ ತರಬೇತುದಾರರಾದ ಮಾಪಂಗಡ ಕವಿತಾ ಕರುಂಬಯ್ಯ ಅವರ ನೇತೃತ್ವದಲ್ಲಿ ವಿವಿಧ ವಿಭಾಗಗಳಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ಕೇವಲ 3 ನಿಮಿಷದಲ್ಲಿ ವಿವಿಧ ರೀತಿಯ ಲೆಕ್ಕಗಳನ್ನು ಅತೀ ಚುರುಕಾಗಿ ಮಾಡುವ ಮೂಲಕ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಶೇ.100ರಷ್ಟು ಫಲಿತಾಂಶದೊಂದಿಗೆ 39 ಚಾಂಪಿಯನ್ ಟ್ರೋಫಿ, 24 ಚಿನ್ನದ ಪದಕ ಮತ್ತು 6 ಬೆಳ್ಳಿಯ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. “157ನೇ ರಾಜ್ಯ ಮಟ್ಟದ “ಬ್ರೈನೋಬ್ರೈನ್ ಸ್ಪರ್ಧೆ-2024”ರಲ್ಲಿ ಮಡಿಕೇರಿ “ಬ್ರೈನೋಬ್ರೈನ್” ಕೇಂದ್ರಕ್ಕೆ “ಬೆಸ್ಟ್ ಪ್ರಾಂಚೈಸಿ” ಮತ್ತು “ಬೆಸ್ಟ್ ಫ್ಯಾಕಲ್ಟಿ” ಪ್ರಶಸ್ತಿ ಲಭಿಸಿದ್ದು, ವಿದ್ಯಾರ್ಥಿಗಳ ಕಠಿಣ ಪರಿಶ್ರಮದ…
ಚೆಟ್ಟಳ್ಳಿ ಆ.17 NEWS DESK : ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಚೇರಿಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದಿಂದ ನಡೆಯಿತು. ಸಂಘದ ಅಧ್ಯಕ್ಷ ಬಲ್ಲಾರಂಡಮಣಿ ಉತ್ತಪ್ಪ ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯೋತ್ಸವದ ಮಹತ್ವವನ್ನು ಸಾರಿದರು. ರಾಷ್ಟ್ರ ರಕ್ಷಣೆ ಹಾಗೂ ರಾಷ್ಟ್ರ ಭಕ್ತಿಗೆ ನಾವೆಲ್ಲರೂ ಬದ್ಧರಾಗಬೇಕೆಂದು ಯುವ ಜನತೆಗೆ ಕರೆ ನೀಡಿದರು. ಶಾಲಾ ಪಠ್ಯಪುಸ್ತಕದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಕುರಿತಾದ ಪಠ್ಯವನ್ನು ಅಳವಡಿಸಬೇಕು ಜೊತೆಗೆ ಅವರ ಕುರಿತಾದ ಅಧ್ಯಯನವನ್ನು ಪ್ರತ್ಯೇಕ ತರಗತಿಯಲ್ಲಿ ನೀಡಬೇಕೆಂದರು. ಈ ಸಂದರ್ಭ ಸಂಘದ ಉಪಾಧ್ಯಕ್ಷ ಪೇರಿಯನ ಎಸ್.ಪೂರ್ಣಚ್ಚ ಸೇರಿದಂತೆ ಆಡಳಿತ ಮಂಡಳಿ ಸದಸ್ಯರು, ಮುಖ್ಯಕಾರ್ಯನಿರ್ವಹಣಾಧಿಕಾರಿ ನಂದಿನಿ ಸಿಬ್ಬಂದಿ ವರ್ಗ ಹಾಗೂ ಸಾರ್ವಜನಿಕರು ಹಾಜರಿದ್ದರು.
ಮಡಿಕೇರಿ ಆ.16 NEWS DESK : ಚೇರಳ ಶ್ರೀಮಂಗಲ ಗ್ರಾಮದ ಕಾಫಿ ಬೋರ್ಡ್ ವಾರ್ಡ್‍ನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 78ನೇ ಸ್ವಾತಂತ್ಯೋತ್ಸವ ಸಂಭ್ರಮದಿಂದ ನಡೆಯಿತು. ಸ್ಥಳೀಯ ವಾರ್ಡ್‍ನ ಗ್ರಾ.ಪಂ ಸದಸ್ಯರಾದ ಪೇರಿಯನ ನಂದಿನಿ ಉದಯ ಧ್ವಜಾರೋಹಣ ನೆರವೇರಿಸಿ ಸ್ವಾತಂತ್ಯೋತ್ಸವದ ಸಂದೇಶ ನೀಡಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಗ್ರಾ.ಪಂ ಸದಸ್ಯ ಬಲ್ಲಾರಂಡ ಕಂಠಿ ಕಾರ್ಯಪ್ಪ ಅವರು ವಿದ್ಯಾರ್ಥಿಗಳು ಸರ್ಕಾರದ ಶೈಕ್ಷಣಿಕ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಆ ಮೂಲಕ ಉತ್ತಮ ಶಿಕ್ಷಣ ಪಡೆದು ದೇಶದ ಮಾದರಿ ಪ್ರಜೆಗಳಾಗಿ ಗುರುತಿಸಿಕೊಳ್ಳಬೇಕೆಂದು ಕರೆ ನೀಡಿದರು. ಕಾಫಿ ಸಂಶೋಧನಾ ಕೇಂದ್ರದ ಉಪನಿರ್ದೇಶಕಿ ಡಾ.ಜೀನಾ ದೇವಸ್ಯ, ಶಾಲೆಯ ಶಿಕ್ಷಕ ವೃಂದ ಹಾಗೂ ಪೋಷಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಬೆಂಗಳೂರು, ಆ 16 NEWS DESK : ಭಾರತ ಚುನಾವಣಾ ಆಯೋಗವು ಅರ್ಹತಾ ದಿನಾಂಕ: 01.01.2025 ರಂತೆ ಭಾವಚಿತ್ರ ಸಹಿತ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2025 ರ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಪೂರ್ವ ಪರಿಷ್ಕರಣೆ ಚಟುವಟಿಕೆಗಳ ಸಮಯದಲ್ಲಿ ರಾಜ್ಯದ ಎಲ್ಲಾ ಮತಗಟ್ಟೆ ಮಟ್ಟದ ಅಧಿಕಾರಿಗಳು ಪ್ರತಿ ಮನೆಗೂ ಭೇಟಿ ನೀಡಿ ಪರಿಶೀಲನೆ ಕೈಗೊಳ್ಳುತ್ತಾರೆ. ಈ ಸಮಯದಲ್ಲಿ ಸಾರ್ವಜನಿಕರು ಯಾವುದೇ ರೀತಿಯ ತಿದ್ದುಪಡಿಗಳು, ಹೆಸರು ನೋಂದಣಿ, ಮೃತ ಮತ್ತು ಸ್ಥಳಾಂತರಗೊಂಡ ಮತದಾರರ ಹೆಸರುಗಳ ತೆಗೆದು ಹಾಕುವಿಕೆ ಮತ್ತು ಮುಂಬರುವ ಅರ್ಹತಾ ದಿನಾಂಕಗಳಂತೆ 18 ವರ್ಷ ತುಂಬುವ ಯುವ ಮತದಾರರ ಹೆಸರು ಸೇರ್ಪಡೆ ಕುರಿತು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಹಕ್ಕು ಮತ್ತು ಆಕ್ಷೇಪಣೆಗಳ ಅವಧಿಯಲ್ಲಿ ವಿಶೇಷ ಅಭಿಯಾನ ದಿನಾಂಕಗಳನ್ನು ನಿಗಧಿಪಡಿಸಲಾಗಿದೆ. ಸಾರ್ವಜನಿಕರು ವಿಶೇಷ ಅಭಿಯಾನಗಳ ಸೌಲಭ್ಯವನ್ನು ಬಳಸಿಕೊಳ್ಳುವಂತೆ ಹಾಗೂ ಅವಶ್ಯವಿರುವ ತಿದ್ದುಪಡಿ, ಸೇರ್ಪಡೆ ಹಾಗೂ ತೆಗೆದುಹಾಕುವಿಕೆಗಳಿಗೆ ಅರ್ಜಿಗಳನ್ನು ಸಲ್ಲಿಸುವಂತೆ ಮುಖ್ಯ ಚುನಾವಣಾಧಿಕಾರಿಗಳು ಮತದಾರರಲ್ಲಿ ಮನವಿ ಮಾಡಿದ್ದಾರೆ. ಸಾರ್ವಜನಿಕರು ಅರ್ಜಿ ನಮೂನೆ 6 ಮತ್ತು8 ಗಳನ್ನು ಸಲ್ಲಿಸುವಾಗ…
ಸಿದ್ದಾಪುರ ಆ.16 NEWS DESK : ಇಂಜಲಗೆರೆಯ ಭಗವತಿ ಯುವಕ ಸಂಘದ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಉರಗ ರಕ್ಷಕ ಗುಯ್ಯ ಗ್ರಾಮದ ಸುರೇಶ್ ಪೂಜಾರಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭ ಗ್ರಾಮದ ಹಿರಿಯರಾದ ವೆಂಕಟಪ್ಪ ರೈ, ಮೋಹನ್, ಸುರೇಶ್ ಸೇರಿದಂತೆ ಪ್ರಮುಖರು ಹಾಜರಿದ್ದರು. ಕಳೆದ ಹಲವು ವರ್ಷಗಳಿಂದಲೂ ಸುರೇಶ್ ಪೂಜಾರಿ 13 ಸಾವಿರಕ್ಕೂ ಹೆಚ್ಚು ಹಾವುಗಳನ್ನು ರಕ್ಷಣೆ ಮಾಡಿ ಕಾಡಿಗೆ ಬಿಡುವಲ್ಲಿ ಯಶಸ್ವಿಯಾಗಿದ್ದಾರೆ. ಜೀವದ ಹಂಗು ತೊರೆದು ವಿಷಕಾರಿ ಹಾವುಗಳನ್ನು ಸುರಕ್ಷಿತವಾಗಿ ಸೆರೆ ಹಿಡಿದು ರಕ್ಷಣೆ ಮಾಡಿರುವ ಇವರ ಸಾಧನೆಯನ್ನು ಗುರುತಿಸಿ ಸನ್ಮಾನಿಸಿ ಗೌರವಿಸಲಾಗಿದೆ ಎಂದು ಸಮಿತಿಯ ಪ್ರಮುಖರು ತಿಳಿಸಿದ್ದಾರೆ.
ಮಡಿಕೇರಿ ಆ.16 NEWS DESK : ಬಿರುನಾಣಿ ವಿದ್ಯುತ್ ಫೀಡರ್‍ನ ನಿರ್ವಹಣಾ ಕಾಮಗಾರಿ ಕೈಗೊಂಡಿರುವುದರಿಂದ ಆ.17 ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆ ವರೆಗೆ 66/11 ಕೆವಿ ಶ್ರೀಮಂಗಲ ವಿದ್ಯುತ್ ವಿತರಣಾ ಕೇಂದ್ರದ ಎಫ್ 4 ಫೀಡರ್ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುತ್ತದೆ. ಆದ್ದರಿಂದ, ಬಿರುನಾಣಿ, ಪೂಕೊಳ, ಬಾಡಗರಕೇರಿ ಹಾಗೂ ತೆರಾಲು ಗ್ರಾಮ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯಪಾಲಕ ಎಂಜಿನಿಯರ್ ಅನಿತಾ ಬಾಯಿ ಕೋರಿದ್ದಾರೆ.
ಮಡಿಕೇರಿ ಆ.16 NEWS DESK : ಕೊಡಗು ಜಿಲ್ಲೆಯಲ್ಲಿ ನೈರುತ್ಯ ಮುಂಗಾರು ಮಳೆಯು ಸೆಪ್ಟೆಂಬರ್ 30 ವರೆಗೂ ಇರಲಿದ್ದು, ಆ ದಿಸೆಯಲ್ಲಿ ಆಗಸ್ಟ್ ಅಂತ್ಯದವರೆಗೂ ಹೆಚ್ಚಿನ ಎಚ್ಚರ ವಹಿಸಬೇಕಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ನಿರ್ದೇಶನ ನೀಡಿದ್ದಾರೆ. ವಿಡಿಯೊ ಸಂವಾದ ಮೂಲಕ ಅಧಿಕಾರಿಗಳ ಜತೆ ನಡೆದ ಸಭೆಯಲ್ಲಿ ಜಿಲ್ಲೆಯ ಭೂ ಕುಸಿತ ಹಾಗೂ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಅಗತ್ಯ ಮುನ್ನೆಚ್ಚರ ವಹಿಸಬೇಕು. ಈಗ ಮಳೆ ಕಡಿಮೆ ಆಗಿದ್ದರೂ ಸಹ ಮುಂದಿನ ದಿನಗಳಲ್ಲಿ ಉತ್ತಮ ಮಳೆ ಆಗುವ ಸಾಧ್ಯತೆ ಇದೆ. ಆದ್ದರಿಂದ ಭಾರತೀಯ ಹವಾಮಾನ ಇಲಾಖೆ ಕಾಲಾ ಕಾಲಕ್ಕೆ ಹೊರಡಿಸುವ ಮಾಹಿತಿಯಂತೆ ಅಗತ್ಯ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು. ಅಧಿಕಾರಿಗಳು ಮತ್ತು ಎಂಜಿನಿಯರ್‍ಗಳು ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಪ್ರಥಮ ಆದ್ಯತೆ ನೀಡಬೇಕು. ನೋಡಲ್ ಅಧಿಕಾರಿಗಳು, ವಿವಿಧ ವಿಭಾಗದ ಎಂಜಿನಿಯರ್‍ಗಳು, ತಾ.ಪಂ.ಇಒಗಳು, ತಹಶೀಲ್ದಾರರು ಸೇರಿದಂತೆ ಪ್ರತಿಯೊಬ್ಬರೂ ತಮ್ಮ ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಹೆಚ್ಚಿನ ನಿಗಾ ವಹಿಸಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದರು.…






