ಲೇಖಕ: admin

ಮಡಿಕೇರಿ ಆ.16 NEWS DESK : ಕೋಲ್ಕೋತ್ತಾದಲ್ಲಿ  ಮಹಿಳಾ ವೃತ್ತಿಪರ ವೈದ್ಯೆ ಮೇಲೆ ನಡೆದ ದಾರುಣ ಅತ್ಯಾಚಾರ ಹಾಗೂ ಕೊಲೆ ಗೈದಿರುವುದನ್ನು ಖಂಡಿಸಿ ನೀಮಾ ವೈದ್ಯರು ಕಪ್ಪುಪಟ್ಟಿ ಧರಿಸಿ ಕಾಯ೯ನಿವ೯ಹಿಸಿದರು. ಭಾರತದ ಐ.ಎಸ್.ಎಂ ವೈದ್ಯರ ಸಂಘ  ನೀಮಾ ನೀಡಿದ ಕೆರೆಗೆ ಸ್ಪಂದಿಸಿ  ಕೊಡಗು  ಜಿಲ್ಲೆಯಾದ್ಯಂತ NIMA ವೈದ್ಯರು  ಕಪ್ಪು ಪಟ್ಟಿ ಧರಿಸಿ ಕಾರ್ಯ ನಿರ್ವಹಿಸಿದರು. ಭಾರತಾದ್ಯಂತ  ಈ ಸಂಘದ ಸದಸ್ಯರಾಗಿರುವ   3,00,000ಕ್ಕೂ ಅಧಿಕ  ಆಯುಷ್ ವೈದ್ಯರು ಕಪ್ಪು ಪಟ್ಟಿ ಧರಿಸುವುದರೊಂದಿಗೆ ಘಟನೆಯನ್ನು ಖಂಡಿಸಿ ಆದಷ್ಟು ಶೀಘ್ರವಾಗಿ ಸಂತ್ರಸ್ತೆಯ ಕುಟುಂಬಕ್ಕೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಸಿ.ಬಿ.ಐ. ತನಿಖೆ ನಡೆಸುವಂತೆ ಒತ್ತಾಯಿಸಿದರು.  

Read More

ಮಡಿಕೇರಿ ಆ.16 NEWS DESK : ಕೊಡಗು ಸಂಸ್ಕೃತಿ ಸಿರಿ ಬಳಗ ಟ್ರಸ್ಟ್ ಹಾಗೂ ನ್ಯಾಷನಲ್ ಮೆಡಿಕೋಸ್ ಸಂಸ್ಥೆ ಕೊಡಗು ಘಟಕದ ಆಶ್ರಯದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕವಿಗೋಷ್ಠಿ-ದೇಶಭಕ್ತಿ ಗೀತೆ ಸ್ಪರ್ಧೆ ಮತ್ತು ಪೊಲೀಸ್ ಹಾಗೂ ಸಾರ್ವಜನಿಕರಿಗೆ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ನಡೆಯಿತು. ನಗರದ ಪೊಲೀಸ್ ಮೈತ್ರಿ ಭವನದಲ್ಲಿ ನಡೆದ ಕಾರ್ಯಕ್ರಮವನ್ನು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರ್ ರಾಜ್ ಧ್ವಜಾರೋಹಣ ನೆರವೇರಿಸಿ, ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿದರು. ಕವಿಗೋಷ್ಠಿ-ದೇಶಭಕ್ತಿ ಗೀತೆ ಸ್ಪರ್ಧೆಯನ್ನು ಕನ್ನಡ ಸರಿಗಮಪ ಖ್ಯಾತಿಯ ಯುವ ಗಾಯಕ ಅನ್ವಿತ್‍ಕುಮಾರ್, ಸಾಹಿತಿ ಹಂಚೆಟ್ಟಿರ ಫ್ಯಾನ್ಸಿ ಮುತ್ತಣ್ಣ ಉದ್ಘಾಟಿಸಿದರು. ನ್ಯಾಷನಲ್ ಮೆಡಿಕೋಸ್ ಸಂಸ್ಥೆಯ ಅಧ್ಯಕ್ಷ ಡಾ. ಮೋಹನ್ ಅಪ್ಪಾಜಿ ಹಾಗೂ ಸಂಸ್ಕೃತಿ ಸಿರಿ ಬಳಗ ಟ್ರಸ್ಟಿನ ಅಧ್ಯಕ್ಷೆ ಈರಮಂಡ ಹರಿಣಿ ವಿಜಯ್ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು. ವೈದ್ಯರುಗಳಾದ ಮಡಿಕೇರಿಯ ಮಕ್ಕಳ ತಜ್ಞ ಡಾ.ದೇವಯ್ಯ, ಡಾ. ಶ್ಯಾಮ್ ಅಪ್ಪಣ್ಣ, ಡಾ. ಆನಂದ್, ಡಾ.ಲೋಕೇಶ್, ಡಾ. ಸುಧಾಕರ್, ಡಾ.ಅನುಶ್ರೀ, ಡಾ.ದೀಪಾ ಸೇರಿದಂತೆ ಮೈಸೂರಿನ…

Read More

ಮಡಿಕೇರಿ ಆ.16 NEWS DESK : ಸಿದ್ದಾಪುರದ ಕಾಫಿ ತೋಟಗಳು ಸೇರಿದಂತೆ ಕೊಡಗು ಜಿಲ್ಲೆಯ ವಿವಿಧೆಡೆ ನಡೆಯುತ್ತಿರುವ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯನ್ನು ಸ್ಥಗಿತಗೊಳಿಸಬೇಕೆಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಆ.18 ರಂದು ಸುಂಟಿಕೊಪ್ಪದಲ್ಲಿ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮ ನಡೆಯಲಿದೆ ಎಂದು ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಅಂದು 10.30 ಗಂಟೆಗೆ ಮಾನವ ಸರಪಳಿ ನಿರ್ಮಿಸಿ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯನ್ನು ವಿರೋಧಿಸಿ ಹಕ್ಕೊತ್ತಾಯ ಮಂಡಿಸಲಾಗುವುದು. ಕೊಡವ ಲ್ಯಾಂಡ್ ನ ಸಂರಕ್ಷಣೆಗಾಗಿ ಸರ್ವ ಕೊಡವರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಪತ್ರಿಕಾ ಪ್ರಕಟಣೆಯಲ್ಲಿ ಅವರು ಮನವಿ ಮಾಡಿದ್ದಾರೆ. ಕೊಡಗಿನಲ್ಲಿ ನಿರಂತರವಾಗಿ ಹೊರ ಪ್ರದೇಶದ ಬಂಡವಾಳಶಾಹಿಗಳಿಗೆ, ಕಾರ್ಪೋರೇಟ್ ವಲಯಕ್ಕೆ, ಬಹುರಾಷ್ಟ್ರೀಯ ಕಂಪೆನಿಗಳಿಗೆ, ಅನಿವಾಸಿ ಭಾರತೀಯರಿಗೆ, ರೆಸಾರ್ಟ್ ಮಾಫಿಯಾಗಳಿಗೆ, ದೊಡ್ಡ ಉದ್ಯಮಿಪತಿಗಳಿಗೆ ಭೂಮಿಯನ್ನು ಮಿತಿ ಮೀರಿ ನೀಡಿದರೆ ಭವಿಷ್ಯತ್ತಿಗೆ ತೊಂದರೆಯಾಗಲಿದೆ. ಈ ಹಿಂದೆ 2018 ರಲ್ಲಿ ಸೂರ್ಲಬ್ಬಿ ನಾಡ್, ಮುತ್ತುನಾಡ್, ಪೊರಮಲೆನಾಡ್ ಮತ್ತು ಬದಿಗೇರಿನಾಡ್ ನಲ್ಲಿ ಭೀಕರ ಜಲಕಂಟಕದಿಂದ ಅನಾಹುತ ಸಂಭವಿಸಿತ್ತು,…

Read More

ನಾಪೋಕ್ಲು ಆ.16 NEWS DESK : ಬೆಟ್ಟಗೇರಿ ಗ್ರಾಮ ಪಂಚಾಯತಿಯ ಅರ್ವತೋಕ್ಲು ಗ್ರಾಮದ ಬೇಕೋಟು ಮಕ್ಕ ಕ್ಲಬ್ ನ ವತಿಯಿಂದ 78ನೇ ಸ್ವತಂತ್ರೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕ್ಲಬ್‍ನ ಅಧ್ಯಕ್ಷ ಟಿ.ಎಸ್.ವಿವೇಕ್ ಧ್ವಜಾರೋಹಣ ನೆರವೇರಿಸಿ ದಿನದ ಮಹತ್ವದ ಬಗ್ಗೆ ಮಾತನಾಡಿದರು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಕಡ್ಲೇರ ಎಂ.ಗಣೇಶ್ ಭಾಗವಹಿಸಿ ಮಾತನಾಡಿ, ಬೇಕೋಟ್ ಮಕ್ಕ ಕ್ಲಬ್ ನ ಕಾರ್ಯವೈಖರಿನ್ನು ಶ್ಲಾಘೀಸಿದರು. ಈ ಸಂದರ್ಭ ಸಂಘದ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಹಾಜರಿದ್ದರು. ನೆರೆದಿದ್ದವರಿಗೆ ಸಿಹಿ ಹಂಚಿ, ರಾಷ್ಟ್ರಗೀತೆಯೊಂದಿಗೆ ಮುಕ್ತಾಯಗೊಳಿಸಲಾಯಿತು. ವರದಿ : ದುಗ್ಗಳ ಸದಾನಂದ. 

Read More

ಮಡಿಕೇರಿ ಆ.16 NEWS DESK : ಕೋಲ್ಕೋತ್ತಾದ ಆರ್ ಜಿಆರ್ ವೈದ್ಯಕೀಯ ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆಯ ಮೇಲೆ ನಡೆದ ಅತ್ಯಾಚಾರ, ಹತ್ಯೆ ಹಾಗೂ ಆಸ್ಪತ್ರೆ ಮೇಲೆ ದುಷ್ಕಮಿ೯ಗಳ ದಾಳಿಯನ್ನ ಖಂಡಿಸಿ ಆ.17 ರಿಂದ 18 ರ ಬೆಳಗ್ಗಿನವರೆಗೆ ರಾಷ್ಟ್ರವ್ಯಾಪಿ ವೈದ್ಯಕೀಯ ಸೇವೆಗಳನ್ನು ಬಂದ್ ಮಾಡುವುದಾಗಿ ಭಾರತೀಯ ವೈದ್ಯಕೀಯ ಸಂಘ ಘೋಷಿಸಿದ್ದು, ಕೊಡಗಿನಲ್ಲಿಯೂ ವೈದ್ಯಕೀಯ ಸೇವೆಗಳು ಬಂದ್ ಆಗಲಿದೆ ಎಂದು ಸಂಘದ ಜಿಲ್ಲಾ ಘಟಕ ಮಾಹಿತಿ ನೀಡಿದೆ. ಕೊಡಗು ಜಿಲ್ಲೆಯ ಸಕಾ೯ರಿ ಮತ್ತು ಖಾಸಗಿ ಆಸ್ಪತ್ರೆಗಳು, ಕ್ಲಿನಿಕ್ ಗಳಲ್ಲಿ ಆ.17 ರಂದು ಬೆಳಗ್ಗೆ 6 ಗಂಟೆಯಿಂದ ಆ.18 ರ ಬೆಳಗ್ಗೆ 6 ಗಂಟೆಯವರೆಗೆ ಎಲ್ಲಾ ರೀತಿಯ ವೈದ್ಯಕೀಯ ಸೇವೆಗಳು ಸ್ಥಗಿತಗೊಳ್ಳಲಿದೆ. ಹೊರ ರೋಗಿಗಳ ಚಿಕಿತ್ಸಾ ಸೇವೆ ಮತ್ತು ಶಸ್ತ್ರಚಿಕಿತ್ಸಾ ಘಟಕಗಳು ಈ ಅವಧಿಯಲ್ಲಿ ಕಾಯ೯ನಿವ೯ಹಿಸುವುದಿಲ್ಲ ಎಂದು ಮಾಹಿತಿ ನೀಡಿರುವ ಭಾರತೀಯ ವೈದ್ಯಕೀಯ ಸಂಘದ ಕೊಡಗು ಘಟಕದ ಅಧ್ಯಕ್ಷ ಡಾ.ಶ್ಯಾಮ್ ಅಪ್ಪಣ್ಣ ಮತ್ತು ಪ್ರಧಾನ ಕಾಯ೯ದಶಿ೯ ಡಾ.ಸಿ.ಆರ್.ಪ್ರಶಾಂತ್ ವೈದ್ಯರ ಈ ಮುಷ್ಕರಕ್ಕೆ ಸಾವ೯ಜನಿಕರೂ ಸಹಕಾರ…

Read More

ಮಡಿಕೇರಿ ಆ.16 NEWS DESK : ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ “ಕೊಡವ ಕಥೆ ಜೊಪ್ಪೆ”ಯನ್ನು ಹೊರತರಲು ಸೂಕ್ತ ಕತೆಗಳನ್ನು ಆಹ್ವಾನಿಸಿದೆ. ಸುಮಾರು 25 ರಿಂದ 30ರಷ್ಟು ಕತೆಗಳನ್ನು ಒಂದೇ ಪುಸ್ತಕದಲ್ಲಿ ಪ್ರಕಟಿಸಲಾಗುವುದು. ಕತೆಗಳನ್ನು ಎ 4 ಅಳತೆಯ ಕಾಗದದಲ್ಲಿ ಸ್ಪುಟವಾಗಿ ಬರೆದಿದ್ದು 5-6 ಪುಠಗಳನ್ನು ಮೀರುವಂತಿಲ್ಲ. ಕಥಾವಸ್ತು ಕತೆಗಾರರ ಕಲ್ಪನೆಗೆ ಬಿಟ್ಟಿದ್ದು. ಕತೆಗಳು ಪ್ರತ್ಯಕ್ಷ-ಪರೋಕ್ಷವಾಗಿ ಯಾರದ್ದು ತೇಜೋವಧೆಯಾಗಲಿ, ಜಾತಿ-ಧರ್ಮಗಳ ಭಾವನೆಗಳಿಗೆ ಘಾಸಿ ಉಂಟು ಮಾಡುವುದಾಗಿರಕೂಡದು. ಅಂತಿದ್ದಲ್ಲಿ ಅದರ ಸಾಧಕ-ಭಾದಕಗಳಿಗೆ ಕತೆಗಾರರೇ ಜವಾಬ್ದಾರರಾಗುವುದು. ಕತೆಗಳು ಸಾಧ್ಯವಾದಷ್ಟು ಕೊಡವ ಸಂಸ್ಕೃತಿ-ಪದ್ಧತಿ, ಮೂಲತನಕ್ಕೆ ಒತ್ತುಕೊಡುವಂತಿದ್ದು ಸಾರ್ವಕಾಲಿಕವಾಗಿರಲಿ. ಪ್ರಕಟಿತ ಕಥೆಗಳಿಗೆ ಅಕಾಡೆಮಿ ಗೊತ್ತು ಪಡಿಸಿರುವಂತೆ ಸಂಭಾವನೆ ನೀಡುವುದು. ಕಥೆಗಾರರು ತಮ್ಮ ಸ್ವಪರಿಚಯವನ್ನು 4-5 ವಾಕ್ಯಗಳಿಗೆ ವೀರದಂತೆ ಬರೆದು ಕೊಡುವುದು. ಪ್ರತಿಯೊಬ್ಬ ಕಥೆಗಾರರು ತಮ್ಮ ಇತ್ತೀಚಿನ ಭಾವಚಿತ್ರದೊಂದಿಗೆ ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಲಗತ್ತಿಸುವುದು. ಕತೆಗಳನ್ನು ಕಳುಹಿಸಿಕೊಡಲು ಅಂತಿಮ ದಿನಾಂಕ 20.09.2024. ಒಬ್ಬರು ಒಂದಕ್ಕಿಂತ ಹೆಚ್ಚಿನ ಕತೆಗಳನ್ನು ಕಳುಹಿಸುವಂತಿಲ್ಲ. ಕೊಡವ ಕಥೆ ಜೊಪ್ಪೆಗೆ ನಿಮ್ಮ ಕಥೆಗಳನ್ನು…

Read More

ನವದೆಹಲಿ ಆ.16 NEWS DESK : 70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ವಿಜೇತರನ್ನು ಪ್ರಕಟಿಸಲಾಗಿದೆ. ಕನ್ನಡದ ಕಾಂತಾರ ಸಿನಿಮಾದಲ್ಲಿ ಅತ್ಯುತ್ತಮ ಅಭಿನಯಕ್ಕಾಗಿ ನಟ ರಿಷಭ್ ಶೆಟ್ಟಿ ಅತ್ಯುತ್ತಮ ನಟ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಅತ್ಯುತ್ತಮ ಜನಪ್ರಿಯ ಹಾಗೂ ಮನರಂಜನಾ ಚಿತ್ರವಾಗಿ ಎರಡು ವಿಭಾಗದಲ್ಲಿ ‘ಕಾಂತಾರ’ ಪ್ರಶಸ್ತಿ ಬಾಚಿಕೊಂಡಿದೆ. 2022ನೇ ಸಾಲಿನಲ್ಲಿ ಚಿತ್ರರಂಗದಲ್ಲಿ ಅತ್ಯುತ್ತಮ ಸಾಧನೆಗೈದ ಚಿತ್ರಗಳ ಪಟ್ಟಿಯನ್ನು ಕೇಂದ್ರ ವಾರ್ತಾ ಪ್ರಸಾರ ಮತ್ತು ಮಾಹಿತಿ ಸಚಿವಾಲಯ ಘೋಷಿಸಿದೆ. ಅತ್ಯುತ್ತಮ ನಟರ ರೇಸ್ ನಲ್ಲಿ ರಿಷಬ್ ಶೆಟ್ಟಿ ಹಾಗೂ ಮಲೆಯಾಳಂ ನಟ ಮಮ್ಮುಟ್ಟಿ ನಡುವೆ ಭಾರಿ ಸ್ಪರ್ಧೆ ಎರ್ಪಟ್ಟಿತ್ತು. ಕೊನೆಗೆ ರಿಷಭ್ ಶೆಟ್ಟಿಗೆ ಪ್ರಶಸ್ತಿ ಒಲಿದುಬಂದಿದೆ. ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್-2 ಅತ್ಯುತ್ತಮ ಕನ್ನಡ ಚಿತ್ರವಾಗಿ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿದೆ. ಸಾಹಸ ನಿರ್ದೇಶನ ವಿಭಾಗದಲ್ಲೂ ಕೆಜಿಎಫ್-2 ಪ್ರಶಸ್ತಿ ಗೆದ್ದಿದೆ.

Read More

ಮಡಿಕೇರಿ ಆ.16 NEWS DESK : ಶನಿವಾರಸಂತೆ ಪೊಲೀಸ್ ಠಾಣಾ ವೃತ್ತ ನಿರೀಕ್ಷಕ ಪ್ರೀತಮ್ ಡಿ.ಶ್ರೇಯಕರ್ ಅವರು ಕರ್ನಾಟಕ ಮುಖ್ಯಮಂತ್ರಿ ಪದಕಕ್ಕೆ ಆಯ್ಕೆಯಾಗಿದ್ದಾರೆ. ವೃತ್ತನಿರೀಕ್ಷಕ ಪ್ರೀತಮ್ ಡಿ.ಶ್ರೇಯಕರ್ ಅವರು ಸಿಐಡಿ ವಿಭಾಗದಲ್ಲಿ ಸಲ್ಲಿಸಿದ ಸೇವೆಯನ್ನು ಗುರುತಿಸಿ ಮುಖ್ಯಮಂತ್ರಿ ಪದಕಕ್ಕೆ ಆಯ್ಕೆ ಮಾಡಲಾಗಿದ್ದು, ಬೆಂಗಳೂರಿನ ರಾಜಭವನದಲ್ಲಿ ಪದಕ ಪ್ರಧಾನ ಮಾಡಲಾಗುವುದು.

Read More

ನಾಪೋಕ್ಲು ಆ.16 NEWS DESK : ಬೆಟ್ಟಗೇರಿ ಗ್ರಾ.ಪಂ ವ್ಯಾಪ್ತಿಯ ಬಕ್ಕದಲ್ಲಿ ವಿವಿಧ ಸ್ವಸಹಾಯ ಸಂಘ, ಸ್ತ್ರೀಶಕ್ತಿ ಸಂಘ ಹಾಗೂ ಸಾರ್ವಜನಿಕರ ಸಹಯೋಗದಲ್ಲಿ 78ನೇ ಸ್ವಾತಂತ್ರ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಊರಿನ ಹಿರಿಯರಾದ ನೆಯ್ಯಣಿರ ಕಮಲ ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಪಂಚಾಯತ್ ಉಪಾಧ್ಯಕ್ಷ ಬೈತಡ್ಕ ಡೆಲ್ವಿ ದೇವಯ್ಯ, ಮಾಜಿ ಯೋಧ ಹೊಸೊಕ್ಲು ಮೊಣ್ಣಪ್ಪ, ಅಂಗನವಾಡಿ ಕಾರ್ಯಕರ್ತೆ ಶೈಲಜಾ, ಊರಿನ ಪ್ರಮುಖರು, ಅಂಗನವಾಡಿ ಮಕ್ಕಳು ಭಾಗವಹಿಸಿ ಪರಸ್ಪರ ಸಿಹಿ ಹಂಚಿ ಸ್ವಾತಂತ್ರ್ಯ ಹಬ್ಬವನ್ನು ಸಂಭ್ರಮಿಸಿದರು. ವರದಿ : ದುಗ್ಗಳ ಸದಾನಂದ. 

Read More

ನಾಪೋಕ್ಲು ಆ.16 NEWS DESK : ವಿವಿಧ ಶಾಲಾ ಕಾಲೇಜುಗಳಲ್ಲಿ, ಸಂಘ ಸಂಸ್ಥೆಗಳಲ್ಲಿ ,ಅಂಗನವಾಡಿಗಳಲ್ಲಿ ಸ್ವಾತಂತ್ರ್ಯ ದಿನೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಶ್ರೀ ರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಸ್ಥೆಯ ಅಧ್ಯಕ್ಷ ಕಲಿಯಂಡ ಹ್ಯಾರಿ ಮಂಡಣ್ಣ ಅಧ್ಯಕ್ಷತೆ ವಹಿಸಿ ಧ್ವಜಾರೋಹಣ ನೆರವೇರಿಸಿ ಕೊಟ್ಟರು. ಸಂಸ್ಥೆಯ ನಿರ್ದೇಶಕರಾದ ಕಲ್ಯಾಟಂಡ ಪೂಣಚ್ಚ, ಮಕ್ಕಿ ಸುಬ್ರಹ್ಮಣ್ಯ, ಪ್ರಾಂಶುಪಾಲರಾದ ಬಿ.ಎಂ. ಶಾರದ. ದಿನದ ಮಹತ್ವದ ಬಗ್ಗೆ ಮಾತನಾಡಿ, ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ಗುಣಗಾನ ಮಾಡಿ ವಿದ್ಯಾರ್ಥಿಗಳಿಗೆ ಕಿವಿ ಮಾತನ್ನ ಹೇಳಿದರು. ಈ ಸಂದರ್ಭ ಉಪಾಧ್ಯಕ್ಷ ನೆರವಂಡ ಸುನಿಲ್ ದೇವಯ್ಯ ,ನಿರ್ದೇಶಕರಾದ ಬೊಪ್ಪಂಡ ಕುಶಾಲಪ್ಪ,ಅಪ್ಪಾರಂಡ ಅಪ್ಪಯ್ಯ, ಅಪ್ಪಚೆಟ್ಟೊಳಂಡ ನವೀನ್ ಅಪ್ಪಯ್ಯ,ಚೌರೀರ ಮಂದಣ್ಣ ಶಾಲಾ ಶಿಕ್ಷಕ ಮತ್ತು ಸಿಬ್ಬಂದಿಗಳು, ಪೋಷಕರು ಪಾಲ್ಗೊಂಡಿದ್ದರು. ವಿದ್ಯಾರ್ಥಿಗಳಿಗೆ ದೇಶಭಕ್ತಿ ಗೀತೆ ಗಾಯನ ಸ್ಪರ್ಧೆ, ಭಾಷಣ ಸ್ಪರ್ಧೆ, ಛದ್ಮವೇಷ ಸ್ಪರ್ಧೆ ನಡೆಯಿತು. ವರದಿ : ದುಗ್ಗಳ ಸದಾನಂದ. 

Read More