ಮಡಿಕೇರಿ ಜೂ.5 NEWS DESK : ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್ ನ ಮೊದಲ ಸಭೆ ಕೊಡಗು ಜಿಲ್ಲಾ ಕಾಂಗ್ರೆಸ್ ನ ಪ್ರಧಾನ ಕಚೇರಿಯಲ್ಲಿ ಮಹಿಳಾ ಕಾಂಗ್ರೆಸ್ ನಗರಾಧ್ಯಕ್ಷೆ ಶಶಿಕಲಾ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಟಿ.ಪಿ.ರಮೇಶ್ ಅವರು ಮಹಿಳಾ ಘಟಕವನ್ನು ಮತ್ತಷ್ಟು ಸದೃಢಗೊಳಿಸಿ ಪಕ್ಷ ಸಂಘಟನೆಗೆ ಆದ್ಯತೆ ನೀಡಬೇಕು ಎಂದು ತಿಳಿಸಿದರು. ಪಕ್ಷದ ಜಿಲ್ಲಾ ಗೌರವ ಪ್ರಧಾನ ಕಾರ್ಯದರ್ಶಿ ವಿ.ಪಿ.ಸುರೇಶ್ ಅವರು ಮಾತನಾಡಿ ಜಿಲ್ಲೆಯಲ್ಲಿ ಪಕ್ಷ ಸಂಘಟನೆಯಲ್ಲಿ ಮಹಿಳಾ ಘಟಕ ಪ್ರಮುಖ ಪಾತ್ರ ವಹಿಸಬೇಕು. ಎಲ್ಲಾ ವಾರ್ಡ್‍ಗಳಲ್ಲಿ ಕಾರ್ಯಕರ್ತರನ್ನು ಸಕ್ರಿಯಗೊಳಿಸಬೇಕು ಎಂದು ಕರೆ ನೀಡಿದರು. ಮಡಿಕೇರಿ ನಗರ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಆಚಾರ್ಯ ಅವರು ಮಾತನಾಡಿ ಮಹಿಳಾ ಘಟಕ ಪಕ್ಷ ಸಂಘಟನೆಗೆ ಮೊದಲ ಆದ್ಯತೆ ನೀಡಬೇಕು. ಸರಕಾರದ ಯೋಜನೆಗಳನ್ನು ಜನರಿಗೆ ತಿಳಿಸಬೇಕು ಎಂದು ಹೇಳಿದರು. ಮಹಿಳಾ ಅಧ್ಯಕ್ಷೆ ಶಶಿಕಲಾ ಮಾತನಾಡಿ ಪಕ್ಷದ ಬಲವರ್ಧನೆಗೆ ಎಲ್ಲಾ ಮಹಿಳಾ ಕಾರ್ಯಕರ್ತರು ಕೈಜೋಡಿಸಬೇಕು,…
ಲೇಖಕ: admin
ಮಡಿಕೇರಿ ಜೂ.5 NEWS DESK : ಕಾಡಾನೆ ದಾಳಿಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ತಿತಿಮತಿ ಸಮೀಪದ ಕೋಣನಕಟ್ಟೆ ಗ್ರಾಮದ ಕಾಫಿ ತೋಟವೊಂದರಲ್ಲಿ ನಡೆದಿದೆ. ನಾಗಲ್ಯಾಂಡ್ ಕೇಡರ್ ಹಿರಿಯ ಐಪಿಎಸ್ ಅಧಿಕಾರಿ ಐಜಿಪಿ ಅಣ್ಣಳಮಾಡ ಸುನಿಲ್ ಅಚ್ಚಯ್ಯ ಅವರ ಪತ್ನಿ ಸಂಧ್ಯಾ (51) ಎಂಬುವವರೇ ಮೃತ ದುರ್ದೈವಿ. ಇಂದು ಬೆಳಿಗ್ಗೆ ಕೋಣನಕಟ್ಟೆಯಲ್ಲಿರುವ ಕಾಫಿ ತೋಟವನ್ನು ವೀಕ್ಷಿಸುತ್ತಿದ್ದ ಸಂದರ್ಭ ಕಾಡಾನೆ ಏಕಾಏಕಿ ದಾಳಿ ಮಾಡಿದೆ. ತೀವ್ರವಾಗಿ ಗಾಯಗೊಂಡ ಸಂಧ್ಯಾ ಅವರನ್ನು ಗೋಣಿಕೊಪ್ಪಲು ಆಸ್ಪತ್ರೆಗೆ ಕರೆ ತರುವ ಸಂದರ್ಭ ಮಾರ್ಗ ಮಧ್ಯೆ ಮೃತಪಟ್ಟರು ಎಂದು ತಿಳಿದು ಬಂದಿದೆ. ಕಾಡಾನೆ ದಾಳಿ ಸಂದರ್ಭ ತೋಟದಲ್ಲಿದ್ದ ಕೆಲವು ಕಾರ್ಮಿಕರು ಓಡಿ ಹೋಗಿ ಜೀವ ಉಳಿಸಿಕೊಂಡಿದ್ದಾರೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿದರು. ಕಾಡಾನೆಗಳ ಉಪಟಳ ಮಿತಿ ಮೀರಿರುವ ಕುರಿತು ಸ್ಥಳೀಯ ಗ್ರಾಮಸ್ಥರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಣ್ಣಳಮಾಡ ಸಂಧ್ಯಾ ಅವರು ತಮ್ಮ ಇಬ್ಬರು ಪುತ್ರಿಯರ ಜೊತೆಯಲ್ಲಿ ಬೆಂಗಳೂರಿನ ಸುಲ್ತಾನ್ ಪಾಳ್ಯದಲ್ಲಿ ವಾಸವಾಗಿದ್ದು, ಪತಿ ಸುನೀಲ್ ಅಚ್ಚಯ್ಯ ಅವರು…
ಮಡಿಕೇರಿ NEWS DESK ಜೂ.5 : ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಅಧಿಕಾರ ವಹಿಸಿಕೊಂಡ ನಂತರ ಪ್ರತಿ ಗ್ರಾ.ಪಂ ಮಟ್ಟದಲ್ಲಿ “ಭಾರತ್ ಜೋಡೋ ಯುವ ಸಂಘ” ವನ್ನು ಸ್ಥಾಪಿಸುವುದಾಗಿ ಘೋಷಿಸಿದ್ದಾರೆ. ಇದು ರಾಜಕೀಯ ಪ್ರೇರಿತ ಸಂಘಟನೆಯಾಗಿದ್ದು, ಇದನ್ನು ಬಿಜೆಪಿ ತೀವ್ರವಾಗಿ ವಿರೋಧಿಸುತ್ತದೆ ಎಂದು ಸೋಮವಾರಪೇಟೆ ಬಿಜೆಪಿ ಮಂಡಲದ ವಕ್ತಾರ ಬಲ್ಲಾರಂಡ ಕಂಠಿ ಕಾರ್ಯಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು “ಭಾರತ್ ಜೋಡೋ ಯುವ ಸಂಘ” ವನ್ನು ಮುನ್ನಡೆಸಲು ಸರಕಾರದ ಮೂಲಕ ತಲಾ 10 ಲಕ್ಷ ರೂ. ಬಿಡುಗಡೆ ಮಾಡುವುದಾಗಿ ನೂತನ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಇದು ಜನರು ಪಾವತಿಸಿದ ತೆರಿಗೆ ಹಣವಾಗಿದ್ದು, ಯಾವುದೇ ಕಾರಣಕ್ಕು ಈ ರೀತಿಯ ರಾಜಕೀಯ ಲಾಭದ ದೃಷ್ಟಿಕೋನದ ಸಂಘಗಳಿಗೆ ವಿನಿಯೋಗ ಮಾಡಬಾರದು ಮತ್ತು ಗ್ರಾಮಗಳಲ್ಲಿ ಸಂಘರ್ಷಕ್ಕೆ ಕಾರಣವಾಗಬಲ್ಲ ಸಂಘಟನೆಗಳನ್ನು ಸರಕಾರ ರಚಿಸಬಾರದು ಎಂದು ಒತ್ತಾಯಿಸಿದ್ದಾರೆ. ಈ ಹಿಂದೆ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವ ಹಗಲುಗನಸಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು “ಭಾರತ್ ಜೋಡೋ” ಯಾತ್ರೆಯನ್ನು ದೇಶವ್ಯಾಪಿ…
ಮಡಿಕೇರಿ NEWS DESK ಜೂ.5 : ಕೊಡಗು ಜಿಲ್ಲೆಯ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಮಡಿಕೇರಿ ತಾಲ್ಲೂಕು ವಿಶ್ವಕರ್ಮ ಸಮಾಜ ಸೇವಾ ಸಂಘ ಒತ್ತಾಯಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಸಂಘದ ತಾಲ್ಲೂಕು ಅಧ್ಯಕ್ಷ ಜಗದೀಶ್ ಆಚಾರ್ಯ ಅವರು ಜಿಲ್ಲೆಯ ಇಬ್ಬರು ಉತ್ಸಾಹಿ ಶಾಸಕರು ಜಾತ್ಯಾತೀತ ಮತ್ತು ಪಕ್ಷಾತೀತವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರತಿ ಸಮಸ್ಯೆಗಳಿಗೆ ಖುದ್ದು ಸ್ಪಂದಿಸುತ್ತಿರುವ ಶಾಸಕದ್ವಯರ ಸೇವೆ ರಾಜ್ಯಕ್ಕೂ ವ್ಯಾಪಿಸಿದರೆ ಯುವಶಕ್ತಿಗೆ ಪ್ರೇರಣೆಯಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕಾವೇರಿನಾಡು ಕೊಡಗಿಗೆ ಸಚಿವ ಸ್ಥಾನ ನೀಡುವ ಮೂಲಕ ರಾಜಕೀಯವಾಗಿ ಬಲ ತುಂಬಬೇಕು. ಇದರಿಂದ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ಜಗದೀಶ್ ಆಚಾರ್ಯ ತಿಳಿಸಿದ್ದಾರೆ.
ಮಡಿಕೇರಿ NEWS DESK ಜೂ.5 : ಅರಣ್ಯ ಪ್ರದೇಶದಲ್ಲಿರುವ ತೇಗ, ನೀಲಗಿರಿ ಮತ್ತು ಅಕೇಶಿಯ ಮರಗಳನ್ನು ತೆರವುಗೊಳಿಸಿ ವನ್ಯಜೀವಿಗಳ ಆಹಾರಕ್ಕೆ ಪೂರಕವಾದ ಮರಗಳನ್ನು ಬೆಳೆಸಲು ಯೋಜನೆ ರೂಪಿಸಬೇಕು. ಆ ಮೂಲಕ ವನ್ಯಜೀವಿಗಳ ದಾಳಿಯನ್ನು ತಡೆಗಟ್ಟಬೇಕು ಎಂದು ಒತ್ತಾಯಿಸಿ ಹ್ಯೂಮನ್ ರೈಟ್ಸ್ ಇಂಟರ್ ನ್ಯಾಷನಲ್ ಫೆಡರೇಷನ್ ಸಂಘಟನೆ ಕೊಡಗು ಜಿಲ್ಲಾಧಿಕಾರಿಗಳು ಹಾಗೂ ಅರಣ್ಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿದೆ. ಸಂಘಟನೆಯ ರಾಜ್ಯಾಧ್ಯಕ್ಷ ಹರೀಶ್ ಜಿ.ಆಚಾರ್ಯ ಅವರ ನೇತೃತ್ವದಲ್ಲಿ ಅಧಿಕಾರಿಗಳನ್ನು ಭೇಟಿಯಾದ ಪ್ರಮುಖರು ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಮತ್ತಿತರ ಜಿಲ್ಲೆಗಳಲ್ಲಿ ಕಾಡು ಪ್ರಾಣಿ ಹಾಗೂ ಮಾನವ ಸಂಘರ್ಷ ಅತಿಯಾಗುತ್ತಿದೆ. ಕಾಡಾನೆ, ಹುಲಿ ಸೇರಿದಂತೆ ವನ್ಯಜೀವಿಗಳ ದಾಳಿಯಿಂದ ಅಮಾಯಕ ಜೀವಗಳು ಬಲಿಯಾಗುತ್ತಿವೆ ಮತ್ತು ಕೃಷಿ ಫಸಲು ನಾಶವಾಗುತ್ತಿದೆ. ಈ ಸಮಸ್ಯೆಯನ್ನು ಸರಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದರು. ಅರಣ್ಯ ಭಾಗದಲ್ಲಿ ಆಹಾರ ಹಾಗೂ ನೀರಿನ ಕೊರತೆ ಎದುರಾಗಿರುವುದೇ ವನ್ಯಜೀವಿಗಳ ಉಪಟಳಕ್ಕೆ ಕಾರಣವಾಗಿದೆ. ಕಾಡು ಪ್ರಾಣಿಗಳಿಗೆ ಬೇಕಾದ ಆಹಾರಕ್ಕೆ ಪೂರಕವಾದ ಗಿಡ ಮರಗಳನ್ನು ಬೆಳೆಸುವ ಬದಲು ಪ್ರಕೃತಿಗೆ…
ಮಡಿಕೇರಿ NEWS DESK ಜೂ.5 : ಕಾಡಾನೆ ದಾಳಿಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ತಿತಿಮತಿ ಸಮೀಪದ ಕೋಣನಕಟ್ಟೆ ಗ್ರಾಮದ ಕಾಫಿ ತೋಟವೊಂದರಲ್ಲಿ ನಡೆದಿದೆ. ಐಜಿಪಿ ಅಣ್ಣಳಮಾಡ ಸುನಿಲ್ ಅಚ್ಚಯ್ಯ ಅವರ ಪತ್ನಿ ಸಂಧ್ಯಾ (51) ಎಂಬುವವರೇ ಮೃತ ದುರ್ದೈವಿ. ಇಂದು ಬೆಳಿಗ್ಗೆ ಕೋಣನಕಟ್ಟೆಯಲ್ಲಿರುವ ಕಾಫಿ ತೋಟವನ್ನು ವೀಕ್ಷಿಸುತ್ತಿದ್ದ ಸಂದರ್ಭ ಕಾಡಾನೆ ಏಕಾಏಕಿ ದಾಳಿ ಮಾಡಿದೆ. ತೀವ್ರವಾಗಿ ಗಾಯಗೊಂಡ ಸಂಧ್ಯಾ ಅವರನ್ನು ಗೋಣಿಕೊಪ್ಪಲು ಆಸ್ಪತ್ರೆಗೆ ಕರೆ ತರುವ ಸಂದರ್ಭ ಮಾರ್ಗ ಮಧ್ಯೆ ಮೃತಪಟ್ಟರು ಎಂದು ತಿಳಿದು ಬಂದಿದೆ. ಕಾಡಾನೆ ದಾಳಿ ಸಂದರ್ಭ ತೋಟದಲ್ಲಿದ್ದ ಕೆಲವು ಕಾರ್ಮಿಕರು ಓಡಿ ಹೋಗಿ ಜೀವ ಉಳಿಸಿಕೊಂಡಿದ್ದಾರೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಕಾಡಾನೆಗಳ ಉಪಟಳ ಮಿತಿ ಮೀರಿರುವ ಕುರಿತು ಸ್ಥಳೀಯ ಗ್ರಾಮಸ್ಥರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮಡಿಕೇರಿ NEWS DESK ಜೂ.5 : ಬೆಂಗಳೂರಿನ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ, “ಶಕ್ತಿ” ದಿನ ಪತ್ರಿಕೆಯ ಸೇವೆಯನ್ನು ಪರಿಗಣಿಸಿ ಗೌರವಿಸುತ್ತಿದೆ. ಜೂ.6 ರಂದು ತುಮಕೂರುವಿನಲ್ಲಿ ನಡೆಯಲಿರುವ ಸಂಸ್ಥೆಯ ರಾಜ್ಯಮಟ್ಟದ ಸಮ್ಮೇಳನದಲ್ಲಿ, ಕೊಡಗು ಜಿಲ್ಲೆಯಲ್ಲಿ 7 ದಶಕಗಳಿಂದ ಕಾರ್ಯನಿರ್ವಹಿಸುತ್ತಿರುವ “ಶಕ್ತಿ” ದಿನ ಪತ್ರಿಕೆಯನ್ನು ಸನ್ಮಾನದ ಮೂಲಕ ಗೌರವಿಸಲಾಗುವುದು ಎಂದು ಸಂಸ್ಥೆಯ ಅಧ್ಯಕ್ಷೆ ಉಮಾ ರೆಡ್ಡಿ ತಿಳಿಸಿದ್ದಾರೆ.
ಮಡಿಕೇರಿ NEWS DESK ಜೂ. 5: ಇತ್ತೀಚೆಗೆ ಬಳ್ಳಾರಿಯ ಸಿರಿಗೇರಿಯಲ್ಲಿ ನಡೆದ ಸಮಾರಂಭದಲ್ಲಿ ‘ಶಕ್ತಿ’ ಸಲಹಾ ಸಂಪಾದಕ ಬಿ.ಜಿ. ಅನಂತಶಯನ ಅವರಿಗೆ ಪ್ರತಿಷ್ಠಿತ “ಪಿ. ಲಂಕೇಶ್ ಮಾಧ್ಯಮ ಪ್ರಶಸ್ತಿ” ಪ್ರದಾನ ಮಾಡಲಾಯಿತು. ಸಿರಿಗೇರಿ ಅನ್ನಪೂರ್ಣ ಪ್ರಕಾಶನದವರು ವರ್ಷಂಪ್ರತಿ ರಾಜ್ಯದ ಉತ್ತಮ ಸಣ್ಣ ಪತ್ರಿಕೆಯ ಸಂಪಾದಕರಿಗೆ ಕೊಡ ಮಾಡುವ ಪ್ರಶಸ್ತಿಯನ್ನು, ಕರ್ನಾಟಕ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ.ಜಿ. ಪ್ರದಾನ ಮಾಡಿದರು. ಈ ಸಂದರ್ಭ ಮಾತನಾಡಿದ ಅವರು, ಪತ್ರಿಕೆಗಳು ದಮನಿತರ, ಶೋಷಿತರ, ಅವಕಾಶ ವಂಚಿತರ ಪರವಾಗಿ ಹೆಚ್ಚು ಕೆಲಸ ಮಾಡಬೇಕೆಂದು ಬಯಸಿದರು. ದಿವಂಗತ ಪಿ. ಲಂಕೇಶ್ ಅವರು ಸಾಮಾಜಿಕ ಕಳಕಳಿ ಹೊಂದಿದ್ದು, ಹರಿತ ಬರಹಕ್ಕೆ ಜಾಹೀರಾತು ಇಲ್ಲದೆಯೇ ಪತ್ರಿಕೆಯನ್ನು ಹೊರತಂದುದು ಒಂದು ಮಾದರಿ ಎಂದರು. ಲಂಕೇಶ್ ಮಾಧ್ಯಮ ಪ್ರಶಸ್ತಿ ಏಳು ದಶಕ ಕಂಡ ‘ಶಕ್ತಿ’ ದಿನಪತ್ರಿಕೆಗೆ ಸಲ್ಲುತ್ತಿರುವದು ಹೆಮ್ಮೆಯ ವಿಚಾರ ಎಂದು ಶ್ಲಾಘಿಸಿದರು. ಮಾಧ್ಯಮಗಳಿಂದ ಸೈಬರ್ ಕ್ರೈಂ, ಮಹಿಳೆ-ಮಕ್ಕಳಿಗೆ, ಅವಿದ್ಯಾವಂತರಿಗೆ ಆಗುವ ಅನ್ಯಾಯಗಳನ್ನು ಹತ್ತಿಕ್ಕಲು ಕೈ ಜೋಡಿಸಬೇಕು ಎಂದು ಪಲ್ಲವಿ ಕರೆ ನೀಡಿದರು.…
ಮೈಸೂರು ಜೂ.4 NEWS DESK : ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 142ನೇ ಜಯಂತಿ ಅಂಗವಾಗಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಹಾಗೂ ರಾಜವಂಶಸ್ಥರಾದ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಇಂದು ಮೈಸೂರು ನಗರದಲ್ಲಿ ಆಯೋಜಿಸಲಾದ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸೇವಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ರಾಜರ್ಷಿಗೆ ಗೌರವ ನಮನ ಸಲ್ಲಿಸಿದರು. ಬೆಳಿಗ್ಗೆ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದ ಅವರು ನಾಡದೇವತೆ ಶ್ರೀ ಚಾಮುಂಡೇಶ್ವರಿ ಅಮ್ಮನವರಿಗೆ ವಿಶೇಷ ಪೂಜೆ ಸಲ್ಲಿಸಿ ರಾಜ್ಯದ ಸಮೃದ್ಧಿ, ಜನರ ಸುಖ-ಶಾಂತಿ ಹಾಗೂ ಅಭಿವೃದ್ಧಿಗಾಗಿ ಪ್ರಾರ್ಥಿಸಿದರು. ದೇವಾಲಯದ ವಿಶೇಷ ಅಧಿಕಾರಿ ಹಾಗೂ ಪ್ರಧಾನ ಅರ್ಚಕರ ಸಮ್ಮುಖದಲ್ಲಿ ನಡೆದ ಪೂಜಾ ಕಾರ್ಯಕ್ರಮದ ಬಳಿಕ, ದೇವಾಲಯದ ಆವರಣದಲ್ಲಿ ಆಯೋಜಿಸಲಾಗಿದ್ದ ಅನ್ನಸಂತರ್ಪಣೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಯದುವೀರ್ ಒಡೆಯರ್ ಸ್ವತಃ ಭಕ್ತರಿಗೆ ಅನ್ನ ಬಡಿಸುವ ಮೂಲಕ ಸೇವಾ ಮನೋಭಾವವನ್ನು ವ್ಯಕ್ತಪಡಿಸಿದರು. ನಂತರ ನಗರದ ಹೃದಯಭಾಗದಲ್ಲಿರುವ ಕೆ.ಆರ್. ವೃತ್ತದಲ್ಲಿ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪ್ರತಿಮೆಗೆ ಪುಷ್ಪಾರ್ಚನೆ…
ಮಡಿಕೇರಿ ಜೂ.4 NEWS DESK : ಜಿಲ್ಲಾ ಪೊಲೀಸ್ ಘಟಕದಲ್ಲಿ ಸೇವೆ ಸಲ್ಲಿಸಿ ವಯೋ ನಿವೃತ್ತಿ ಹೊಂದಿದ ಹೆಡ್ ಕಾನ್ಸ್‌ಟೇಬಲ್ ಜಿ.ಪಿ.ಪುಟ್ಟರಾಜು ಅವರನ್ನು ಜಿಲ್ಲಾ ಪೊಲೀಸ್ ಇಲಾಖೆಯ ಪರವಾಗಿ ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಡಲಾಯಿತು.






