ಮಡಿಕೇರಿ ಅ.17 NEWS DESK : ಶ್ರೀ ಕಾವೇರಿ ಭಕ್ತ ಮಂಡಳಿ ವತಿಯಿಂದ ಅ.18 ರಂದು ನಗರದ ಮೇಲಿನ ಗೌಡ ಸಮಾಜದ ಬಳಿ ಕಾವೇರಿ ತೀರ್ಥ ವಿತರಣೆ ನಡೆಯಲಿದೆ. ಬೆಳಿಗ್ಗೆ 8 ಗಣಪತಿ ಹೋಮ, ಮಧ್ಯಾಹ್ನ 12 ಗಂಟೆಗೆ ಮಹಾ ಪೂಜೆ ನಂತರ ಪ್ರಸಾದ ವಿನಿಯೋಗ ಹಾಗೂ ಅನ್ನ ಸಂತರ್ಪಣೆ ನಡೆಯಲಿದೆ. ಮಧ್ಯಾಹ್ನ 2 ಗಂಟೆಗೆ ಅಲಂಕೃತ ಮಂಟಪದಲ್ಲಿ ಮಡಿಕೇರಿ ನಗರದ ಸರ್ವ ಭಕ್ತಾದಿಗಳಿಗೆ ತೀರ್ಥ ಪ್ರಸಾದ ವಿತರಿಸಲಾಗುವುದು. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಕಾವೇರಿ ಭಕ್ತ ಮಂಡಳಿ ಅಧ್ಯಕ್ಷರು, ಕಾರ್ಯದರ್ಶಿ ಮನವಿ ಮಾಡಿದ್ದಾರೆ.
ಲೇಖಕ: admin
ಸಿದ್ದಾಪುರ ಅ.17 NEWS DESK : ಮಾಲ್ದಾರೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಾರ್ವಜನಿಕರಿಗೆ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಬೋಧಕ ಆಸ್ಪತ್ರೆ ಸಹಯೋಗದಲ್ಲಿ ಆಯುಷ್ಮಾನ್ ಭಾರತ ಕಾರ್ಯಕ್ರಮದ ಅಡಿಯಲ್ಲಿ ನಡೆದ ಶಿಬಿರದಲ್ಲಿ ಸಾಂಕ್ರಾಮಿಕ ಮತ್ತು ಅಸಾಂಕ್ರಾಮಿಕ ರೋಗಗಳ ತಪಾಸಣೆ ಮತ್ತು ಅದರ ಬಗ್ಗೆ ಮಾಹಿತಿಯನ್ನು ನೀಡಲಾಯಿತು. ಒಟ್ಟು 161 ಮಂದಿ ಆರೋಗ್ಯ ಸೇವೆಗಳ ಸದುಪಯೋಗ ಪಡೆದುಕೊಂಡರು. ಈ ಸಂದರ್ಭ ವೈದ್ಯರುಗಳಾದ ಡಾ.ಕರುಣಾಕರ್, ಡಾ.ಶರವಣ್, ಡಾ.ಸಲ್ಮಾ ಶಾಝಿಯಾ, ಡಾ.ನಿರಂಜನ್, ಡಾ. ಸಾಗರ್, ಡಾ.ಶಾರೂಕ್ ಹಾಗೂ ಆಶಾ ಕಾರ್ಯಕರ್ತೆಯರು ಮತ್ತು ಇತರ ಸಿಬ್ಬಂದಿಗಳು ಹಾಜರಿದ್ದರು.
ಮಡಿಕೇರಿ ಅ.17 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ ತಾ. ಕನ್ನಡ ಸಾಹಿತ್ಯ ಪರಿಷತ್ತು, ನಾಪೋಕ್ಲು ಹಾಗೂ ಮೂರ್ನಾಡು ಹೋ. ಕ.ಸಾ.ಪ., ಶ್ರೀ ಅಗಸ್ತ್ಯೇಶ್ವರ ದೇವಸ್ಥಾನ ಸಮಿತಿ, ಮಹಾದೇವ ಸ್ಪೋಟ್ರ್ಸ್ ಕ್ಲಬ್, ಬಲಮುರಿ ಇವರ ಸಂಯುಕ್ತಾಶ್ರಯದಲ್ಲಿ ಶ್ರೀ ಕಾವೇರಿ ತೀರ್ಥೋದ್ಭವದ ಪ್ರಯುಕ್ತ ಕಾವೇರಿಯ ಎರಡನೆಯ ಪುಣ್ಯಕ್ಷೇತ್ರ ಬಲಮುರಿಯ ಶ್ರೀ ಅಗಸ್ತ್ಯೇಶ್ವರ ದೇವಸ್ಥಾನದಲ್ಲಿ ಭಕ್ತಿ ಗೀತೆ ಗಾಯನ ಕಾರ್ಯಕ್ರಮವು ಅಕ್ಟೋಬರ್, 18 ರಂದು ಬೆಳಗ್ಗೆ 9 ಗಂಟೆಗೆ ನಡೆಯಲಿದೆ. ನಾಪೋಕ್ಲು ರವಿ ಓಂಕಾರ್ ಮ್ಯೂಸಿಕ್ ಹಾಗೂ ಸ್ಥಳೀಯ ಕಲಾವಿದರಿಂದ ಭಕ್ತಿಗೀತೆ ಗಾಯನ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಮಡಿಕೇರಿ ಅ.17 NEWS DESK : ಪ್ರಸಕ್ತ ಸಾಲಿನ ಆಯವ್ಯಯದಲ್ಲಿ ಘೋಷಣೆಯಂತೆ ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಹಾಗೂ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ಸಹಯೋಗದಲ್ಲಿ ಸಂಚಾರಿ/ ವಲಸೆ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಿಸುವ ಯೋಜನೆಯನ್ನು ಅನುಷ್ಠಾನ ಮಾಡಲಾಗುತ್ತಿದ್ದು, ಕನಿಷ್ಠ 20 ಕುರಿ ಹೊಂದಿದ್ದು, ಸಂಚಾರಿ/ವಲಸೆ ಹೋಗುವ ಕುರಿಗಾಹಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸಂಚಾರಿ ವಲಸೆ ಕುರಿಗಾಹಿಗಳು ಗುರುತಿನ ಚೀಟಿಯನ್ನು ಪಡೆಯಲು ತಮ್ಮ ವ್ಯಾಪ್ತಿಯ ಸ್ಥಳೀಯ ಪಶುವೈದ್ಯಾಧಿಗಳ ಕಚೇರಿಯಲ್ಲಿ ಅರ್ಜಿಯನ್ನು ಪಡೆದು ಭರ್ತಿ ಮಾಡಿದ ಅರ್ಜಿ ಹಾಗೂ ಅಗತ್ಯ ದಾಖಲಾತಿಗಳೊಂದಿಗೆ ಅಕ್ಟೋಬರ್, 31 ರೊಳಗೆ ತಮ್ಮ ತಮ್ಮ ತಾಲ್ಲೂಕಿನ ಸಹಾಯಕ ನಿರ್ದೇಶಕರು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಇವರಿಗೆ ಅರ್ಜಿ ಸಲ್ಲಿಸಬೇಕಿದೆ. ಹೆಚ್ಚಿನ ಮಾಹಿತಿಗೆ ಕೊಡಗು ಜಿಲ್ಲೆ ಎಲ್ಲಾ ತಾಲ್ಲೂಕುಗಳ ಸಹಾಯಕ ನಿರ್ದೇಶಕರು(ಆಡಳಿತ), ಪಶುಪಾಲನೆ ಮತ್ತು ಪಶು ವೈಧ್ಯಕೀಯ ಸೇವಾ ಇಲಾಖೆ, ಪಶು ಆಸ್ಪತ್ರೆ ಹಾಗೂ ಸಹಾಯಕ ನಿರ್ದೇಶಕರು, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ…
ಪುತ್ತೂರು ಅ.17 NEWS DESK : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಶ್ರಯದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಂಗಳೂರು ವಿಭಾಗ ಮಟ್ಟದ ಪುರುಷರ ಕಬಡ್ಡಿ ಪಂದ್ಯಾವಳಿಯು ಅ.18 ರಂದು ಕಾಲೇಜಿನ ಆವರಣದಲ್ಲಿ ನಡೆಯಲಿದೆ. ಅಂದು ಬೆಳಗ್ಗೆ 9.30 ಕ್ಕೆ ಉದ್ಘಾಟನಾ ಸಮಾರಂಭವು ನಡೆಯಲಿದ್ದು, ಬೆಳ್ತಂಗಡಿಯಲ್ಲಿ ಪೊಲೀಸ್ ಸಬ್ ಇನ್ಸ್‍ಪೆಕ್ಟರ್ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಹಿರಿಯ ವಿದ್ಯಾರ್ಥಿ ಮುರಳೀಧರ್.ಎಸ್.ನಾಯ್ಕ್ ಪಂದ್ಯಾವಳಿಗೆ ಚಾಲನೆ ನೀಡಲಿದ್ದಾರೆ. ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಸುಬ್ರಮಣ್ಯ ಭಟ್.ಟಿ.ಎಸ್ ಗೌರವ ಅತಿಥಿಗಳಾಗಿ ಉಪಸ್ಥಿತರಿರುತ್ತಾರೆ. ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ಸಮಾರಂಭದ ಅಧ್ಯಕ್ಷತೆ ವಹಿಸುತ್ತಾರೆ. ಮ್ಯಾಟ್ ಅಂಕಣದಲ್ಲಿ ನಡೆಯುವ ಈ ಪಂದ್ಯಾಟದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಂಗಳೂರು ವಿಭಾಗದ ವಿವಿಧ ಇಂಜಿನಿಯರಿಂಗ್ ಕಾಲೇಜುಗಳ 15 ತಂಡಗಳು ಭಾಗವಹಿಸುತ್ತವೆ ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ.
ಮಡಿಕೇರಿ ಅ.17 NEWS DESK : ಜೀವನದಿ ಕಾವೇರಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ಇಂದು (ಅ.17) ಬೆಳಗ್ಗೆ 7 ಗಂಟೆ 40 ನಿಮಿಷಕ್ಕೆ ಸಲ್ಲುವ ತುಲಾ ಲಗ್ನದಲ್ಲಿ ಭಕ್ತರ ಹರ್ಷೋದ್ಘಾರದ ನಡುವೆ ಪವಿತ್ರ ತೀರ್ಥೋದ್ಭವವಾಯಿತು. ಭಕ್ತರ ಜಯಘೋಷ, ವಿವಿಧ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಕುಂಡಿಕೆಯಲ್ಲಿ ತಾಯಿ ಕಾವೇರಿ ತೀರ್ಥರೂಪಿಣಿಯಾಗಿ ಕಾಣಿಸಿಕೊಂಡಳು. ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಶಾಸಕರಾದ ಡಾ.ಮಂತರ್ ಗೌಡ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಶ್ರೀಭಗಂಡೇಶ್ವರ-ತಲಕಾವೇರಿ ದೇವಾಲಯದ ಹೆಚ್ಚುವರಿ ಕಾರ್ಯನಿರ್ವಾಹಕ ಅಧಿಕಾರಿ ಎನ್.ಜಿ.ಚಂದ್ರಶೇಖರ್, ತಕ್ಕ ಮುಖ್ಯಸ್ಥರಾದ ಬಳ್ಳಡ್ಕ ಸಿ.ಅಪ್ಪಾಜಿ, ಕೋಡಿ.ಯು. ಮೋಟಯ್ಯ ಮಠಾಧೀಶರು ಮತ್ತಿತರ ಗಣ್ಯರು ತೀರ್ಥೋದ್ಭವದ ಪವಿತ್ರ ಕ್ಷಣಕ್ಕೆ ಸಾಕ್ಷಿಯಾದರು. ಜಿಲ್ಲೆಯ ವಿವಿಧ ಭಾಗಗಳಿಂದ ಭಕ್ತರು ಭಾಗಮಂಡಲ ಕ್ಷೇತ್ರಕ್ಕೆ ಆಗಮಿಸಿ ಶ್ರೀಭಗಂಡೇಶ್ವರನಿಗೆ ಪೂಜೆ ಸಲ್ಲಿಸಿದರು. ನಂತರ ಕಾಲ್ನಡಿಗೆಯ ಮೂಲಕ ಕಾವೇರಿ…
ಮಡಿಕೇರಿ ಅ.16 NEWS DESK : ರಾಷ್ಟ್ರೀಯ ಏಡ್ಸ್ ನಿಯಂತ್ರಣ ಮಂಡಳಿ ನವದೆಹಲಿ ಇವರಿಂದ ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‍ಷನ್ ಸೊಸೈಟಿಗೆ ಅಡಿಯಲ್ಲಿ ಮಂಜೂರಾಗಿರುವ ಮತ್ತು ಪ್ರಸ್ತುತ ಖಾಲಿ ಇರುವ ಡೆಸಿಗ್ನೇಟೆಡ್ ಎಸ್.ಟಿ.ಐ/ ಆರ್.ಟಿ.ಐ ಕ್ಲಿನಿಕ್‍ಗಳಲ್ಲಿ ಖಾಲಿ ಇರುವ ಆಪ್ತ ಸಮಾಲೋಚಕರು ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಸೂಚಿಸಲಾಗಿದ್ದು, ಆಪ್ತಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಯ ಹೆಸರು: ಆಪ್ತಸಮಾಲೋಚಕರ ಹುದ್ದೆ ಜಿಲ್ಲಾ ಆಸ್ಪತ್ರೆ, ಮಡಿಕೇರಿ. ಹುದ್ದೆಯ ಸಂಖ್ಯೆ: 1 (ಗುತ್ತಿಗೆ ಆಧಾರದ ಮೇಲೆ 1 ವರ್ಷ ಗುತ್ತಿಗೆ ಆಧಾರ) ವೇತನಶ್ರೇಣಿ: ಸಂಚಿತ ಮೊತ್ತ ಮಾಸಿಕ ರೂ.21000, ಗರಿಷ್ಠ ವಯೋಮಿತಿ: 60 ವರ್ಷ ಅರ್ಹತೆ ಸಮಾಜ ಕಾರ್ಯ/ ಮನೋವಿಜ್ಞಾನ/ ಸಮಾಜಶಾಸ್ತ್ರ/ ಮಾನವ ಶಾಸ್ತ್ರ/ ಮಾನವ ಅಭಿವೃದ್ಧಿ/ ನರ್ಸಿಂಗ್‍ನಲ್ಲಿ ಸ್ನಾತಕೋತ್ತರ ಪದವಿ ಹೊಂದಿದವರು ಅಥವಾ ಸಮಾಜ ಕಾರ್ಯ/ ಮನೋವಿಜ್ಞಾನ / ಸಮಾಜಶಾಸ್ತ್ರ/ ಮಾನವ ಶಾಸ್ತ್ರ/ ಮಾನವ ಅಭಿವೃದ್ಧಿಯಲ್ಲಿ ಪದವಿ ಹೊಂದಿದವರು, ನರ್ಸಿಂಗ್-ಕೌನ್ಸೆಲಿಂಗ್‍ನಲ್ಲಿ 3 ವರ್ಷಗಳ ಅನುಭವದೊಂದಿಗೆ / ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮದ…
ಮಡಿಕೇರಿ ಅ.16 NEWS DESK : ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ದಿನಾಂಕ 04-11-2002 ರಂದು ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಪ್ರಾರಂಭಗೊಂಡ ‘ಸಾಂತ್ವನ ಮಹಿಳಾ ಸಹಾಯವಾಣಿ’ ಕೊಡಗಿನಾದ್ಯಂತ ಸಮಾಜದ ನೊಂದ ಮಹಿಳೆಯರು ಪ್ರತಿಯೊಂದು ಸ್ತರದಲ್ಲಿ ಎದುರಿಸುತ್ತಿರುವ ಹಲವಾರು ಸಮಸ್ಯೆಗಳನ್ನು ದಾಖಲಿಸಿಕೊಂಡು ತಕ್ಷಣಕ್ಕೆ ಸರಿಯಾದ ಸಲಹೆ ಸೂಚನೆಗಳನ್ನು ನೀಡಿ ನೆರವು ಕಲ್ಪಿಸುತ್ತಾ ಬಂದಿದೆ. ಸಾಂತ್ವನ ಕೇಂದ್ರದಲ್ಲಿ ಈವರೆಗೆ 5248 ವಿವಿಧ ಸ್ವರೂಪದ ಪ್ರಕರಣಗಳು ದಾಖಲಾಗಿದ್ದು 5232 ಪ್ರಕರಣಗಳು ಇತ್ಯರ್ಥಗೊಂಡಿರುತ್ತದೆ. 2024-2ನೇ ಆರ್ಥಿಕ ಸಾಲಿನಲ್ಲಿ ಏಪ್ರಿಲ್ ತಿಂಗಳಿನಿಂದ 2024 ರ ಏಪ್ರಿಲ್, 01 ರಿಂದ ಸೆಪ್ಟೆಂಬರ್ ತಿಂಗಳ ಅಂತ್ಯದವರೆಗೆ, 130 ಪ್ರಕರಣಗಳು ದಾಖಲಾಗಿ 117 ಪ್ರಕರಣಗಳು ಇತ್ಯರ್ಥಗೊಂಡು ಉಳಿದ 13 ಪ್ರಕರಣಗಳು ಇತ್ಯರ್ಥದ ಹಂತದಲ್ಲಿರುತ್ತದೆ. ಹಾಗೆಯೇ ವಿವಿಧ ಸ್ವರೂಪದ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು ರೂ.1,55,000 ಗಳನ್ನು ಸಾಂತ್ವನ ಕೇಂದ್ರ ಹಾಗೂ ನ್ಯಾಯಾಲಯದ ಮೂಲಕ ಫಲಾನುಭವಿಗಳಿಗೆ 2023-24ನೇ ಸಾಲಿನಲ್ಲಿ ಕೊಡಿಸಿಕೊಡಲಾಗಿದೆ. ಮಹಿಳಾ ಸಹಾಯವಾಣಿಯ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಸಾಂತ್ವನ…
ಮಡಿಕೇರಿ ಅ.16 NEWS DESK : ಕೊಡಗು ವಿಶ್ವವಿದ್ಯಾನಿಲಯ ಅತಿಥಿ ಉಪನ್ಯಾಸಕರುಗಳ ಸಮಸ್ಯೆಗಳಿಗೆ ಶೀಘ್ರ ಸ್ಪಂದಿಸದಿದ್ದಲ್ಲಿ ಹೋರಾಟವನ್ನು ತೀವ್ರಗೊಳಿಸುವುದಾಗಿ ಕೊಡಗು ಅತಿಥಿ ಉಪನ್ಯಾಸಕರ ಸಂಘದ ಅಧ್ಯಕ್ಷ ಎಂ.ಎ.ಶ್ಯಾಮ್ ಪ್ರಸಾದ್ ಎಚ್ಚರಿಕೆ ನೀಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಹಲವು ಬಾರಿ ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿ ಅತಿಥಿ ಉಪನ್ಯಾಸಕರು ಅನುಭವಿಸುತ್ತಿರುವ ಸಮಸ್ಯೆಗಳನ್ನು ಮನವರಿಕೆ ಮಾಡಿಕೊಡಲಾಗಿದೆ. ಆದರೆ ಇಲ್ಲಿಯವರೆಗೆ ಯಾವುದೇ ಸ್ಪಂದನೆ ದೊರೆತ್ತಿಲ್ಲವೆಂದು ಟೀಕಿಸಿದ್ದಾರೆ. 2023ರ ಆಗಸ್ಟ್ ಮತ್ತು ಸೆಪ್ಟೆಂಬರ್ ಹಾಗೂ 2024ರ ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ನಡೆದ ಪರೀಕ್ಷಾ ಕೊಠಡಿ ಮೇಲ್ವಿಚಾರಕರ ಕೆಲಸ ಹಾಗೂ 2024 ಜುಲೈ ತಿಂಗಳಿನಲ್ಲಿ ನಡೆಸಿದ ಉತ್ತರ ಪತ್ರಿಕೆಯ ಮೌಲ್ಯಮಾಪನದ ಸಂಭಾವನೆಯನ್ನು ನೀಡದೆ ಇರುವುದರಿಂದ ಅತಿಥಿ ಉಪನ್ಯಾಸಕರು ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಇದಕ್ಕೆ ಕೊಡಗು ವಿಶ್ವ ವಿದ್ಯಾನಿಲಯದ ಆಡಳಿತ ವೈಫಲ್ಯವೇ ಕಾರಣ. ಅಲ್ಲದೆ ರಾಜ್ಯ ಕಾಲೇಜು ಶಿಕ್ಷಣ ಇಲಾಖೆಯ ದುರ್ಬಲ ಆಡಳಿತದಿಂದಾಗಿ ಅತಿಥಿ ಉಪನ್ಯಾಸಕರ ಸೇವಾಭದ್ರತೆ ಮತ್ತು ಇಡಿಗಂಟು ಸೌಲಭ್ಯ ಮರೀಚಿಕೆಯಾಗಿದೆ ಎಂದು ಆರೋಪಿಸಿದ್ದಾರೆ. ಅತಿಥಿ…
ಮಡಿಕೇರಿ ಅ.16 NEWS DESK : ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ 6ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ರಮವು ಅ.21 ರಿಂದ ನ.20 ರವರೆಗೆ ಕೊಡಗು ಜಿಲ್ಲೆಯಾದ್ಯಂತ ನಡೆಯಲಿದ್ದು, ದನ, ಎಮ್ಮೆಗಳಿಗೆ ಲಸಿಕೆ ಹಾಕಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಕೋರಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಜಾನುವಾರುಗಳಿಗೆ ಕಾಲುಬಾಯಿ ಜ್ವರ ರೋಗ ನಿಯಂತ್ರಣದ 6ನೇ ಸುತ್ತಿನ ಲಸಿಕಾ ಅಭಿಯಾನದ ಜಿಲ್ಲಾ ಮಟ್ಟದ ನಿರ್ವಹಣಾ ಸಮಿತಿ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ 6ನೇ ಸುತ್ತಿನ ಕಾಲುಬಾಯಿ ಜ್ವರ ರೋಗ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ದನ ಮತ್ತು ಎಮ್ಮೆಗೆ ಕಾಲುಬಾಯಿ ರೋಗ ಕಾಣಿಸಿಕೊಳ್ಳಲಿದೆ. ಆದ್ದರಿಂದ ಸರ್ಕಾರದ ನಿರ್ದೇಶನದಂತೆ ಜಾನುವಾರುಗಳಿಗೆ ಲಸಿಕೆ ಹಾಕುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಕೊಡಗು ಜಿಲ್ಲೆ ಬೆಟ್ಟಗುಡ್ಡ ಪ್ರದೇಶವಾಗಿರುವುದರಿಂದ ಅಲ್ಲಲ್ಲಿ ಮನೆಗಳು ಇರುವುದರಿಂದ ಲಸಿಕೆ ಹಾಕಲು ಯಾವುದೇ ಜಾನುವಾರು…






