ಮಡಿಕೇರಿ NEWS DESK ಸೆ.27 : ರೋಟರಿ ಕ್ಲಬ್ ಮಡಿಕೇರಿ ವತಿಯಿಂದ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ನಲ್ಲಿ ರೋಟರ‍್ಯಾಕ್ಟ್ ಕ್ಲಬ್‌ನ ಪದಗ್ರಹಣ ಸಮಾರಂಭ ನಡೆಯಿತು. ಪಿಡಿಜಿ ರೋಟರಿಯನ್ ಎಂ.ಸುರೇಶ್ ಚಂಗಪ್ಪ ಪದಗ್ರಹಣ ಅಧಿಕಾರಿಯಾಗಿ ರೋಟರ‍್ಯಾಕ್ಟ್ ಕ್ಲಬ್‌ನ ಸದಸ್ಯರುಗಳಿಗೆ ಪ್ರಮಾಣವಚನ ಬೋಧಿಸಿದರು. ನಂತರ ಮಾತನಾಡಿದ ಅವರು ಇಂದಿನ ಯುವ ಪೀಳಿಗೆಗೆ ತಂತ್ರಜ್ಞಾನ ಹೆಚ್ಚು ಅನುಕೂಲಕರವಾಗಿದೆ. ಮುಂದುವರಿದ ಕಾಲಘಟ್ಟದಲ್ಲಿ ನವೀನ ತಂತ್ರಜ್ಞಾನವನ್ನು ಸದುಪಯೋಗಪಡಿಸಿಕೊಂಡು ಜಾತಿ, ಧರ್ಮ ಎಲ್ಲವನ್ನೂ ಮೀರಿ ಮನುಷ್ಯತ್ವವನ್ನು ಅಳವಡಿಸಿಕೊಂಡು ಸಮಾಜಮುಖಿಯಾಗಿ ಕೆಲಸ ಮಾಡಬೇಕಾದ ಪರಿಸ್ಥಿತಿ ನಮ್ಮ ಜಗತ್ತಿನಲ್ಲಿ ಬಂದೊದಗಿದೆ. ತಾವು ರೋಟರಿ ಸಂಸ್ಥೆಯ ಭಾಗವಾಗಿ ಭಾತೃತ್ವವನ್ನು ನಮ್ಮ ಪರಿಸರದಲ್ಲಿ ಗಟ್ಟಿಯಾಗಿ ಬೇರೂರುವಂತೆ ಕೆಲಸ ಮಾಡಬೇಕೆಂದು ನೂತನ ಪದಾಧಿಕಾರಿಗಳಿಗೆ ಹಾಗೂ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ರೋಟರಿ ಕ್ಲಬ್‌ನ ಅಧ್ಯಕ್ಷ ಎಂ.ಸುದಯ್ ನಾಣಯ್ಯ ಅವರು ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿ ಮಾತನಾಡಿ ವಿದ್ಯಾರ್ಥಿಗಳು ರೋಟರ‍್ಯಾಕ್ಟ್ ಕ್ಲಬ್ ಗೆ ನೀಡಲಾಗುವ ಪ್ರಶಸ್ತಿಗೆ ಭಾಜನರಾಗಬೇಕು. ಈ ನಿಟ್ಟಿನಲ್ಲಿ ತಮ್ಮ ಕಾರ್ಯಚಟುವಟಿಕೆಯನ್ನು ರೂಪಿಸಿ ಅನುಷ್ಠಾನ ಮಾಡಬೇಕೆಂದು…
ಲೇಖಕ: admin
ಮಡಿಕೇರಿ ಸೆ.27 NEWS DESK : ಜಿಲ್ಲೆಯಲ್ಲಿ ಸೆ.29 ರಂದು ನಡೆಯುವ ‘ಗ್ರಾಮ ಆಡಳಿತ ಅಧಿಕಾರಿ’ ಹುದ್ದೆಯ ನೇರ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಯನ್ನು (ಕಡ್ಡಾಯ ಕನ್ನಡ) ಪರೀಕ್ಷಾ ಪ್ರಾಧಿಕಾರ ಮಾರ್ಗಸೂಚಿ ಅನ್ವಯ ವ್ಯವಸ್ಥಿತವಾಗಿ ನಡೆಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು ಸ್ಪರ್ಧಾತ್ಮಕ ಪರೀಕ್ಷೆಯನ್ನು ಕಟ್ಟುನಿಟ್ಟಾಗಿ ನಡೆಸುವಂತೆ ನಿರ್ದೇಶನ ನೀಡಿದರು. ಪರೀಕ್ಷಾ ಪ್ರಾಧಿಕಾರದ ಮಾರ್ಗಸೂಚಿಯನ್ನು ಪ್ರತಿಯೊಬ್ಬರೂ ಓದಿಕೊಂಡು ಪರೀಕ್ಷೆಯನ್ನು ನಡೆಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಸೂಚಿಸಿದರು. ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಮಂಜುಳ ಮಾತನಾಡಿ, ಮಡಿಕೇರಿಯ ಸರ್ಕಾರಿ ಪದವಿ ಪೂರ್ವ ಕಾಲೇಜು, ಸಂತ ಮೈಕಲರ ಪದವಿ ಪೂರ್ವ ಕಾಲೇಜು, ಸಂತ ಜೋಸೆಫರ ಸಂಯುಕ್ತ ಪದವಿ ಪೂರ್ವ ಕಾಲೇಜು ಮತ್ತು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು, ಹಾಗೆಯೇ ಕುಶಾಲನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಕನ್ನಡ ಭಾರತಿ ಪದವಿ ಪೂರ್ವ ಕಾಲೇಜು ಈ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಜಿಲ್ಲೆಯಲ್ಲಿ…
ಮಡಿಕೇರಿ ಸೆ.27 NEWS DESK : ಕೊಡಗು ಜಿಲ್ಲೆಯಲ್ಲಿ ವಿದ್ಯಾಭ್ಯಾಸ ಸಾಲ ಸಾಮಾನ್ಯವಾಗಿ ವಾಣಿಜ್ಯ ಬ್ಯಾಂಕುಗಳಲ್ಲಿ ಮಾತ್ರ ಪಡೆಯಲು ಅವಕಾಶವಿದೆ. ಆದರೆ ಜಿಲ್ಲೆಯ ರೈತರು ಮತ್ತು ಬ್ಯಾಂಕಿನ ಹಾಲಿ ಗ್ರಾಹಕರ ಮಕ್ಕಳು ದೇಶ ಮತ್ತು ವಿದೇಶದಲ್ಲಿನ ಪ್ರತಿಷ್ಠಿತ ವಿದ್ಯಾ ಸಂಸ್ಥೆಗಳಲ್ಲಿ ಉನ್ನತ ವ್ಯಾಸಂಗ ಮಾಡಲು ವಿದ್ಯಾಭ್ಯಾಸ ಸಾಲ ಪಡೆಯಲು ವಂಚಿತರಾಗಿರುವುದನ್ನು ಪರಿಗಣಿಸಿ ರೈತರ ಮಕ್ಕಳಿಗೆ ಅನುಕೂಲವಾಗುವಂತೆ ಅವಶ್ಯವಿರುವ “ವಿದ್ಯಾ ಸಹಕಾರ” ವೆಂಬ ವಿದ್ಯಾಭ್ಯಾಸ ಸಾಲದ ಯೋಜನೆಯನ್ನು ಬ್ಯಾಂಕಿನಲ್ಲಿ ಪ್ರಪ್ರಥಮವಾಗಿ ಜಾರಿಗೊಳಿಸಿ ವೈಯಕ್ತಿಕ ಗರಿಷ್ಠ ರೂ.60 ಲಕ್ಷ ವರೆಗೆ ಸಾಲ ನೀಡಲಾಗುತ್ತಿದ್ದು, ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳುವಂತೆ ಕೊಡಗು ಜಿಲ್ಲಾ ಕೇಂದ್ರ ಬ್ಯಾಂಕಿನ ಅಧ್ಯಕ್ಷ ಕೊಡಂದೇರ ಬಾಂಡ್ ಗಣಪತಿ ತಿಳಿಸಿದ್ದಾರೆ. 2023-24 ನೇ ಸಾಲಿನಲ್ಲಿ ಒಟ್ಟು ವ್ಯವಹಾರ ರೂ.2926.07 ಕೋಟಿ ದಾಖಲಿಸಿದೆ. ಕಳೆದ ಸಾಲಿನ ಒಟ್ಟು ವ್ಯವಹಾರಕ್ಕಿಂತ ಈ ಬಾರಿ ರೂ 524.97 ಏರಿಕೆಯನ್ನು ಕಂಡಿದೆ ಎಂದು ಹೇಳಿದ್ದಾರೆ. ರೈತ ಸದಸ್ಯರ ಬೆಳೆ ಸಾಲದ ಬೇಡಿಕೆಯನ್ನು ಪೂರೈಸಲು ಅನುಕೂಲವಾಗುವಂತೆ ಬ್ಯಾಂಕು ಜಿಲ್ಲೆಯ ಪ್ರಾಥಮಿಕ…
ಮಡಿಕೇರಿ NEWS DESK ಸೆ.27 : ಮಡಿಕೇರಿ ದಸರಾ ಜನೋತ್ಸವದ ವೇದಿಕೆ ಸಮಿತಿಯನ್ನು ರಚಿಸಲಾಗಿದ್ದು, ಕನ್ನಂಡ ಕವಿತಾ ಕಾವೇರಮ್ಮ ಅವರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ದಸರಾ ಕಚೇರಿಯಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು, ಪ್ರಧಾನ ಕಾರ್ಯದರ್ಶಿಯಾಗಿ ಬಾಳೆಯಡ ಸಬಿತಾ, ಉಪಾಧ್ಯಕ್ಷರಾಗಿ ಅಂಬೆಕಲ್ಲು ನವೀನ್ ಕುಶಾಲಪ್ಪ, ಖಜಾಂಚಿ ಕನ್ನಂಡ ಸುನಿತಾ ಸಂಪತ್ ಹಾಗೂ ಕಾರ್ಯದರ್ಶಿಯಾಗಿ ಸುನಿಲ್ ಟಿ.ಎಸ್ ನೇಮಕಗೊಂಡಿದ್ದಾರೆ. ಮಡಿಕೇರಿ ದಸರಾ ಜನೋತ್ಸವವನ್ನು ಅದ್ದೂರಿ ಮತ್ತು ಅರ್ಥಪೂರ್ಣವಾಗಿ ನಡೆಸಲು ವೇದಿಕೆ ಸಮಿತಿ ಸಂಪೂರ್ಣ ಸಹಕಾರವನ್ನು ನೀಡಲಿದೆ ಎಂದು ನೂತನ ಅಧ್ಯಕ್ಷರಾದ ಕನ್ನಂಡ ಕವಿತಾ ಕಾವೇರಮ್ಮ ತಿಳಿಸಿದರು.
ಮೈಸೂರು ಸೆ.27 NEWS DESK : ಮೈಸೂರಿನಲ್ಲಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಮೈಸೂರು ಹಾಗೂ ಪ್ರವಾಸೋದ್ಯಮ ನೇರ ಪಾಲುದಾರರ ಸಹಯೋಗದೊಂದಿಗೆ ಮೈಸೂರಿನ ಅರಮನೆ ಮುಂಭಾಗ ಆಯೋಜಿಸಿದ್ದ “ವಿಶ್ವ ಪ್ರವಾಸೋದ್ಯಮ ದಿನಾಚರಣೆ”ಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು.
ಬೆಂಗಳೂರು NEWS DESK ಸೆ.27 : ದೇಶಾದ್ಯಂತ ನಡೆಯುತ್ತಿರುವ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ರಾಜ್ಯದಲ್ಲಿ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ. ಸದಸ್ಯತ್ವ ನೋಂದಣಿಯಲ್ಲಿ ಬೆಂಗಳೂರು ಉತ್ತರ ಜಿಲ್ಲೆಯ ಯಲಹಂಕ ವಿಧಾನಸಭಾ ಕ್ಷೇತ್ರ ದೇಶದಲ್ಲೇ ಮೊದಲ ಸ್ಥಾನ ಪಡೆದಿದೆ. 1,45,312 ಸದಸ್ಯರನ್ನು ನೋಂದಾಯಿಸುವ ಮೂಲಕ ಯಲಹಂಕ ಶಾಸಕ ಎಸ್ ಆರ್.ವಿಶ್ವನಾಥ್ ಅವರು ಹೊಸ ದಾಖಲೆ ಬರೆದಿದ್ದಾರೆ. ಶಾಸಕರ ಇಚ್ಛಾಶಕ್ತಿ, ಕಾರ್ಯಕರ್ತರ ಪರಿಶ್ರಮ ಮಾದರಿಯಾಗಿದೆ ಎಂದು ಬಿಜೆಪಿ ಮುಖಂಡರು ಬಣ್ಣಿಸಿದ್ದಾರೆ.
ಮಡಿಕೇರಿ ಸೆ.27 NEWS DESK : ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಆರ್.ಪಾಟೀಲ ಸೆ.29 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಸಚಿವರು ಬೆಳಿಗ್ಗೆ 10 ಗಂಟೆಗೆ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಬೋಧಕ ಆಸ್ಪತ್ರೆಯ ಎಂ.ಆರ್.ಐ ಸ್ಕ್ಯಾನಿಂಗ್ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಕೃಷ್ಣಗೌಡ ತಾಯಣ್ಣವರ ತಿಳಿಸಿದ್ದಾರೆ.
ವಿರಾಜಪೇಟೆ ಸೆ.27 NEWS DESK : ವಿರಾಜಪೇಟೆ ತಾಲ್ಲೂಕಿನ ಚೂರಿಕಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ತಾಲ್ಲೂಕು ಮಟ್ಟದ ಕ್ರೀಡಾಕೂಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲೆಯ ವಿದ್ಯಾರ್ಥಿನಿಯರ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಈ ತಂಡದಲ್ಲಿ ಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿಯರಾದ ಗಳಾದ ಶಕ್ತಿದೇಚಮ್ಮ, ಪಿ.ಸಾಂಚ್ ಬೋಪಣ್ಣ, ಕೆ.ಐ.ಶಿಪ್ರಾ ಕಾಳಪ್ಪ, ಪಿ.ಪಿ.ಕ್ಷಮಾ ಕಾವೇರಮ್ಮ, 9ನೇ ತರಗತಿ ವಿದ್ಯಾರ್ಥಿಗಳಾದ ಎಸ್.ಎಸ್.ರಶ್ಮಿ ಪೊನ್ನಮ್ಮ, ಪಿ.ಸಿ.ಕಾಜಲ್, ಬಿ.ಬಿ.ದೀಪ್ತಿ ತಂಗಮ್ಮ, ಬಿ.ಎಸ್.ಸೃಷ್ಟಿ, ಕೆ.ಎಂ.ಯಶ್ಮಿತಾ, ಬಿ.ಎಸ್.ತನ್ಯ ರೈ ಹಾಗೂ ಪಿ.ಯು.ತನಿಷ ಪ್ರತಿನಿಧಿಸಿರುತ್ತಾರೆ. ಇವರಿಗೆ ಶಾಲಾ ದೈಹಿಕ ಶಿಕ್ಷಕಿಯರುಗಳಾದ ಮೋನಿಕಾ ಹಾಗೂ ಲಾವಣ್ಯ ತರಬೇತಿ ನೀಡಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಆಡಳಿತ ಮಂಡಳಿಯವರು, ಪ್ರೌಢಶಾಲಾ ಮತ್ತು ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿಯರು, ಬೋಧಕ ಮತ್ತು ಭೋಧಕೇತರ ಸಿಬ್ಬಂದಿ ವರ್ಗದವರು ಪೋಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಸಂದರ್ಭದಲ್ಲಿ ದೈಹಿಕ ಶಿಕ್ಷಕಿಯರುಗಳಾದ ಮೋನಿಕಾ, ಲಾವಣ್ಯ ಉಪಸ್ಥಿತರಿದ್ದರು.
ವಿರಾಜಪೇಟೆ ಸೆ.27 NEWS DESK : ವಿರಾಜಪೇಟೆ ತಾಲ್ಲೂಕಿನ ಕೆ.ಪಿ.ಎಸ್ ಪ್ರೌಢಶಾಲೆ ಶಾಲೆಯಲ್ಲಿ ನಡೆದ ತಾಲ್ಲೂಕು ಮಟ್ಟದ ಕ್ರೀಡಾಕೂಟದ ಪ್ರಾಥಮಿಕ ವಿಭಾಗದ ಬಾಲಕಿಯರ ಖೋ-ಖೋ ಪಂದ್ಯಾವಳಿಯಲ್ಲಿ ಕಾವೇರಿ ಶಾಲೆಯ ವಿದ್ಯಾರ್ಥಿಗಳು ದ್ವಿತೀಯ ಸ್ಥಾನವನ್ನು ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ. ಪಂದ್ಯಾವಳಿಯಲ್ಲಿ ಶಾಲೆಯ 6ನೇ ತರಗತಿಯ ವಿದ್ಯಾರ್ಥಿಗಳಾದ ಎಂ.ಜಿ.ಚಾಲ್ಸಿ, ಪಿ.ಎಸ್.ಶಾನ್ವಿ ಪೊನ್ನಮ್ಮ, ಯಾನಿ ಬೆಳ್ಳಿಯಪ್ಪ, ನಿಯತ್ತಿ ರಾಜ ಪುರೋಹಿತ್, ಕೆ.ಎಸ್.ದಿಯಾ ಫಾತಿಮಾ, ಕೆ.ಸಿ.ಲಿವ್ಯ, ಎನ್.ಎಸ್.ಮೋಕ್ಷಿತ, 7ನೇ ತರಗತಿ ವಿದ್ಯಾರ್ಥಿಗಳಾದ ಸ್ಫೂರ್ತಿ ದೇಚಮ್ಮ, ಶತಕ ಕಾವೇರಮ್ಮ, ಪಿ.ಬಿ.ದೇಚಮ್ಮ, ಕೆ.ಎಂ.ದೇಚಮ್ಮ ಹಾಗೂ ಪಿ.ಎಂ.ಫಿದಾ ಫಾತಿಮಾ ಪ್ರತಿನಿಧಿಸಿದ್ದಾರೆ. ಇವರಿಗೆ ಶಾಲಾ ದೈಹಿಕ ಶಿಕ್ಷಕಿಯರುಗಳಾದ ಮೋನಿಕಾ ಹಾಗೂ ಲಾವಣ್ಯ ತರಬೇತಿ ನೀಡಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಆಡಳಿತ ಮಂಡಳಿಯವರು, ಪ್ರೌಢಶಾಲಾ ಮತ್ತು ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿಯರು, ಬೋಧಕ ಮತ್ತು ಭೋಧಕೇತರ ಸಿಬ್ಬಂದಿ ವರ್ಗದವರು ಪೋಷಕರು ಮೆಚ್ಚುಗೆ ವ್ಯಕ್ತಪಡಿಸಿರುತ್ತಾರೆ. ಈ ಸಂದರ್ಭ ದೈಹಿಕ ಶಿಕ್ಷಕಿಯರುಗಳಾದ ಮೋನಿಕಾ ಹಾಗೂ ಸಹ ಶಿಕ್ಷಕಿ ಶ್ರುತಿ ಹಾಜರಿದ್ದರು.
ಸೋಮವಾರಪೇಟೆ ಸೆ.27 NEWS DESK : ಸೋಮವಾರಪೇಟೆ ಮಹಿಳಾ ಸಮಾಜದಲ್ಲಿ ನಡೆದ ನಗರ ಕಾಂಗ್ರೆಸ್ ಸಮಿತಿ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ 7ನೇ ರ್ಯಾಂಕ್ ಪಡೆದ ಸೋಮವಾರಪೇಟೆಯ ಸಿಂಚನಾ ಅವರನ್ನು ಶಾಸಕ ಡಾ. ಮಂತರ್‍ಗೌಡ ಸನ್ಮಾನಿಸಿದರು. ಕಾಂಗ್ರೆಸ್ ಮುಖಂಡರಾದ ಬಿ.ಬಿ.ಸತೀಶ್, ಹೆಚ್.ಸಿ.ನಾಗೇಶ್, ಕೆ.ಎ.ಆದಂ, ಹೆಚ್.ಆರ್.ಸುರೇಶ್, ಶುಭ, ಬಿ.ಸಿ.ವೆಂಕಟೇಶ್ ಇದ್ದರು.






