ವಿರಾಜಪೇಟೆ ಸೆ.23 NEWS DESK : ಕೊಡವರು ಮುಂದೆ ಬಂದರೆ ಮಾತ್ರ ಜನಾಂಗದ ಅಭಿವೃದ್ಧಿ ಸಾಧ್ಯ. ಕೊಡಗಿನ ಹಬ್ಬ ಹರಿದಿನಗಳನ್ನು ಎಲ್ಲರೂ ಒಗ್ಗಟ್ಟಾಗಿ ಆಚರಿಸುವಂತಾಗಬೇಕು ಎಂದು ಕುಪ್ಪಂಡ ಛಾಯಾ ನಂಜಪ್ಪ ಹೇಳಿದರು. ವಿರಾಜಪೇಟೆ ಕೊಡವ ಪೊಮ್ಮಕ್ಕಡ ಒಕ್ಕೂಟದ ವತಿಯಿಂದ ಕೊಡವ ಸಮಾಜದ ಆವರಣದಲ್ಲಿ ಕೈಲ್‍ಪೊಳ್ದ್ ಹಬ್ಬದ ಪ್ರಯುಕ್ತ ನಡೆದ ಒತ್ತೊರ್ಮೆ ಕೂಟದಲ್ಲಿ ಮುಖ್ಯ ಅತಿಥಿಗಳಾಗಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಕೊಡವರು ತಮ್ಮ ಆಚಾರ, ವಿಚಾರ, ಪದ್ಧತಿ, ಪರಂಪರೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಎಲ್ಲೂ ರಾಜಕೀಯ ಬೆರೆಸಬಾರದು. ಕೊಡವಾಮೆ ಬಗ್ಗೆ, ಕೊಡವ ಜನಾಂಗದ ಬಗ್ಗೆ, ಸಂಸ್ಕೃತಿ, ಆಚಾರ, ವಿಚಾರ ಪದ್ಧತಿ ಪರಂಪರೆ ಉಳಿಸಿ ಬೇಳೆಸಬೇಕು, ಕೊಡವರು ಸ್ವಾಭಿಮಾನಿಗಳು ಹಾಗೂ ಬದುಕಿನ ಪ್ರತಿ ಹೆಜ್ಜೆಯಲ್ಲೂ ಕೊಡವತನವನ್ನು ಮರೆಯಬಾರದು ಎಂದರಲ್ಲದೆ ತಾವು ಉದ್ಯಮದಲ್ಲಿ ಹೇಗೆ ಸತತವಾದ ಪ್ರಯತ್ನದಿಂದ ಮುಂದೆ ಬರಲು ಸಾಧ್ಯವಾಯಿತು ಎನ್ನುವುದರ ಬಗ್ಗೆ ಸವಿಸ್ತಾರವಾಗಿ ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಒಕ್ಕೂಟದ ಅಧ್ಯಕ್ಷೆ ಮನೆಯಪಂಡ ಕಾಂತಿ ಸತೀಶ್, ಸೆಪ್ಟೆಂಬರ್ ಮೊದಲ ವಾರದಲ್ಲಿ…
ಲೇಖಕ: admin
ಸಿದ್ದಾಪುರ ಸೆ.24 NEWS DESK : ಗುಹ್ಯ, ಕರಡಿಗೋಡು, ಸಿದ್ದಾಪುರ ಸುತ್ತಮುತ್ತಲ ಸದಸ್ಯರ ಸಹಕಾರದಿಂದ ಸಿದ್ದಾಪುರದ ಗುಹ್ಯ ಅಗಸ್ತ್ಯೇಶ್ವರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಪ್ರಗತಿಯತ್ತ ಸಾಗುತ್ತಿದ್ದು, 2023 -24ನೇ ಸಾಲಿನ ಪ್ರಸಕ್ತ ವರ್ಷ 1.06ಕೋಟಿ ನಿವ್ವಳ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಎಂ.ಎಸ್.ವೆಂಕಟೇಶ್ ತಿಳಿಸಿದ್ದಾರೆ. ಸಿದ್ದಾಪುರ ಎಂ.ಜಿ.ರಸ್ತೆಯಲ್ಲಿರುವ ಸಂಘದ ಕಟ್ಟಡ ಸಭಾಂಗಣದಲ್ಲಿ ನಡೆದ 94ನೇ ವಾರ್ಷಿಕ ಮಹಾಸಭೆಯಲ್ಲಿ ಮಾತನಾಡಿ, ಗುಹ್ಯ, ಕರಡಿಗೋಡು, ಸಿದ್ದಾಪರ ಈ ಮೂರು ಗ್ರಾಮಗಳ ವ್ಯಾಪ್ತಿಯನ್ನೊಳಗೊಂಡ ಗುಹ್ಯ ಅಗಸ್ತೇಶ್ವರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಪಾಲು ಬಂಡವಾಳ ರೂ. 2.23 ಕೋಟಿಗಳಿದ್ದು, ಠೇವಣಿಗಳು ರೂ.46.15 ಕೋಟೆ ಹಾಗೂ ಸದಸ್ಯರುಗಳಿಗೆ ಕೃಷಿ ಹಾಗೂ ಕೃಷಿಯೇತರ ಸಾಲ ಸೇರಿ ಒಟ್ಟು ರೂ. 30.20 ಕೋಟೆ ಹೊರಬಾಕಿ ಸಾಲವಿರುತ್ತದೆ. ಸಂಘದಲ್ಲಿ ದುಡಿಯುವ ಬಂಡವಾಳ ರೂ. 56.16 ಕೋಟಿ ಹಾಗೂ 2023-24 ನೇ ಸಾಲಿನಲ್ಲಿ ರೂ. 225.77 ಕೋಟಿ ವ್ಯವಹಾರ ನಡೆಸಲಾಗಿದೆ. ಪ್ರಸಕ್ತ ವರ್ಷ ರೂ. 1.06 ಕೋಟಿ…
ಸೋಮವಾರಪೇಟೆ ಸೆ.24 NEWS DESK : ಕರ್ನಾಟಕ ಛಾಯಾಚಿತ್ರ ಗ್ರಾಹಕರ ಸಂಘದಿಂದ ಬೆಂಗಳೂರಿನಲ್ಲಿ ಆಯೋಜಿಸಿದ್ದ ರಾಷ್ಟ್ರಮಟ್ಟದ ಫೋಟೋಗ್ರಫಿ ಸ್ಪರ್ಧೆಯಲ್ಲಿ ಸೋಮವಾರಪೇಟೆಯ ರಮ್ಯ ಸ್ಟುಡಿಯೋ ಮಾಲೀಕ ವಿನೋದ್ ಜಯರಾಂ ಅವರು ಕಂಚಿನ ಪದಕಕ್ಕೆ ಭಾಜನರಾಗಿದ್ದಾರೆ. ದೇಶದ ವಿವಿಧ ಭಾಗಗಳಿಂದ 247 ಮಂದಿ ಛಾಯಾಚಿತ್ರಗಾರರು ಭಾಗವಹಿಸಿದ್ದ ಸ್ಪರ್ಧೆಯಲ್ಲಿ 3046 ಛಾಯಾಚಿತ್ರಗಳು ಸ್ಪರ್ಧೆಯಲ್ಲಿದ್ದವು. ಇದರಲ್ಲಿ ಮದುವೆ ಶಾಸ್ತ್ರ ವಿಭಾಗದ ಸ್ಪರ್ಧೆಯಲ್ಲಿ ವಿನೋದ್ ಜಯರಾಂ ಅವರು ಕಂಚಿನ ಪದಕಕ್ಕೆ ಭಾಜನರಾಗಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದ ತ್ರಿಪುರವಾಸಿನಿ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಕರ್ನಾಟಕ ಛಾಯಾಚಿತ್ರಗ್ರಾಹಕರ ಸಂಘದ ಕಾರ್ಯದರ್ಶಿಗಳು ಹಾಗೂ ವಿಭಾಗದ ಅಧ್ಯಕ್ಷರಾದ ಎ.ಎಂ. ಮುರುಳಿ, ಕಾರ್ಯದರ್ಶಿ ಬಿ.ಎನ್. ಉಮಾಶಂಕರ್, ಫೆಡರೇಷನ್ ಆಫ್ ಇಂಡಿಯನ್ ಫೋಟೋಗ್ರಫಿ ಅಧ್ಯಕ್ಷ ಸಿ.ಆರ್. ಸತ್ಯನಾರಾಯಣ, ಯೂತ್ ಫೋಟೋಗ್ರಫಿ ಸೊಸೈಟಿ ಅಧ್ಯಕ್ಷ ಮಂಜು ವಿಕಾಸ್ ಶಾಸ್ತ್ರೀ ಅವರುಗಳು ಪ್ರಶಸ್ತಿ ಪ್ರದಾನ ಮಾಡಿದರು. ಸಮಾರಂಭದಲ್ಲಿ ಸೋಮವಾರಪೇಟೆ ತಾಲೂಕು ಪುಷ್ಪಗಿರಿ ಛಾಯಾಗ್ರಾಹಕರ ಸಂಘದ ಅಧ್ಯಕ್ಷ ವಿನಯ್, ಜಿಲ್ಲಾ ಛಾಯಾಚಿತ್ರ ಗ್ರಾಹಕರ ಕ್ಷೇಮಾಭಿವೃದ್ಧಿ ಸಂಘದ ಮಾಜಿ ಅಧ್ಯಕ್ಷ ಎಸ್.ಆರ್.ವಸಂತ್, ವಂದನ…
ಮಡಿಕೇರಿ ಸೆ.25 NEWS DESK : ಕರ್ನಾಟಕ ಗ್ರಾಮೀಣ ಬ್ಯಾಂಕ್ ಮಡಿಕೇರಿ ಪ್ರಾದೇಶಿಕ ಕಚೇರಿ ವತಿಯಿಂದ ನಗರದಲ್ಲಿ ಸ್ವಚ್ಛತೆಯೇ ಸೇವೆ ಅಭಿಯಾನ 2024 ಹಿನ್ನಲೆ ವಿವಿಧಡೆ ಸ್ವಚ್ಛತಾ ಕಾರ್ಯ ನಡೆಯಿತು. ಪ್ರಾದೇಶಿಕ ವ್ಯವಸ್ಥಾಪಕ ಉದಯ್ ಕುಮಾರ್ ಮಾತನಾಡಿ, ನಮ್ಮ ಮನೆಯ ಸುತ್ತಮುತ್ತಲ ಪ್ರದೇಶ ಹಾಗೂ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಕೇವಲ ಒಬ್ಬಿಬ್ಬರಿಂದ ಇಂತಹ ಕಾರ್ಯ ಸಾಧ್ಯವಿಲ್ಲ. ಪ್ರತಿಯೊಬ್ಬರು ಕೈಜೋಡಿಸಿದಾಗ ಬದಲಾವಣೆ ಸಾಧ್ಯವಿರುತ್ತದೆ. ಸ್ವಚ್ಛತಾ ಕಾರ್ಯಕ್ರಮ ಒಂದು ಅವಧಿಗೆ ಸೀಮಿತವಾಗಿರದೇ ನಿರಂತರ ಅಭಿಯಾನವಾದಾಗ ಸ್ವಚ್ಛ ನಗರವಾಗಲು ಸಾಧ್ಯ. ಪರಿಸರ ಸ್ವಚ್ಛತೆಯಿಂದ ಮನುಷ್ಯನ ಆರೋಗ್ಯ ಉತ್ತಮವಾಗುತ್ತದೆ. ಹಾಗಾಗಿ, ಎಲ್ಲರೂ ತಮ್ಮ ಸುತ್ತಲಿನ ಪರಿಸರದ ಸ್ವಚ್ಛತೆ ಕಾಪಾಡಲು ಹೆಚ್ಚಿನ ಒತ್ತು ನೀಡಬೇಕಿದೆ. ಪ್ರಕೃತಿಗೆ ವಿರುದ್ಧವಾಗಿ ಪ್ರತಿಕ್ರಿಯಿಸಿದಾಗ, ಅದು ಮನುಷ್ಯನ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಹಾಗಾಗಿ ಪರಿಸರವನ್ನು ಹಾಳಗೆಡಹದೆ, ಶುಚಿತ್ವದಿಂದ ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು. ಅಭಿಯಾನದ ಹಿನ್ನಲೆ ನಗರದ ಮುನ್ಸಿಪಾಲ್ ಪೌರಕಾರ್ಮಿಕರಾದ ಲಕ್ಷ್ಮೀ ಹಾಗೂ ಮುರ್ಗಾ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಇದೆ ವೇಳೆ ಸ್ವಚ್ಛತೆಯಿಂದ…
ಮಡಿಕೇರಿ ಸೆ.25 NEWS DESK : ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯನ್ನು ವಿರೋಧಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಸೆ.30 ರಂದು ಶ್ರೀಮಂಗಲ, ಅ.5 ರಂದು ತಿತಿಮತಿ ಮತ್ತು ಅ.9 ರಂದು ಅಮ್ಮತ್ತಿಯಲ್ಲಿ ಶಾಂತಿಯುತ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮ ನಡೆಯಲಿದೆ ಎಂದು ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಶ್ರೀಮಂಗಲದಲ್ಲಿ ಬೆಳಿಗ್ಗೆ 10.30 ಗಂಟೆಗೆ ಮಾನವ ಸರಪಳಿ ನಿರ್ಮಿಸಿ ಹಕ್ಕೊತ್ತಾಯ ಮಂಡಿಸಲಾಗುವುದು. ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮದಲ್ಲಿ ಸರ್ವ ಕೊಡವರು ಪಾಲ್ಗೊಳ್ಳುವ ಮೂಲಕ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯ ವಿರುದ್ಧ ಸಿಎನ್‍ಸಿ ನಡೆಸುತ್ತಿರುವ ಹೋರಾಟಕ್ಕೆ ಕೈಜೋಡಿಸಬೇಕೆಂದು ಮನವಿ ಮಾಡಿದ್ದಾರೆ. ಆದಿಮಸಂಜಾತ ಕೊಡವರ ಭೂಮಿಯ ಹಕ್ಕನ್ನು ರಕ್ಷಿಸಲು ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿ ವಿರುದ್ಧ ಹೋರಾಟ ಅನಿವಾರ್ಯವಾಗಿದೆ. “ಕೊಡವ ಲ್ಯಾಂಡ್” ಸ್ವಯಂ ನಿರ್ಣಯದ ಭೂರಾಜಕೀಯ ಸ್ವಾಯತ್ತತೆ ಘೋಷಣೆ ಮತ್ತು ಕೊಡವರಿಗೆ ಎಸ್‍ಟಿ ಟ್ಯಾಗ್ ನೀಡುವುದು ಅಗತ್ಯವಾಗಿದೆ. ಇದಕ್ಕಾಗಿ ವ್ಯಾಪಕ ಜನಜಾಗೃತಿ ಮತ್ತು ಜಿಲ್ಲೆಯಾದ್ಯಂತ ಶಾಂತಿಯುತ ಬೃಹತ್…
ವಿರಾಜಪೇಟೆ ಸೆ.25 NEWS DESK : ವಿರಾಜಪೇಟೆ ಪಟ್ಟಣದ ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್.ಎಸ್.ಎಸ್. ಘಟಕದ ವಿದ್ಯಾರ್ಥಿಗಳು ಎನ್ ಎಸ್ ಎಸ್ ದಿವಸದ ಪ್ರಯುಕ್ತ ವಿರಾಜಪೇಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಸ್ವಚ್ಛತಾ ಅಭಿಯಾನ ನಡೆಸಿದರು. ಸ್ವಚ್ಛತಾ ಹೈ ಸೇವಾ ಎಂಬ ದ್ಯೇಯ ವಾಕ್ಯದಡಿಯಲ್ಲಿ ಶ್ರಮದಾನ ಮಾಡಿದರು. ವಿರಾಜಪೇಟೆ ಸೆಂಟ್ ಆನ್ಸ್ ಪದವಿ ಕಾಲೇಜಿನ ವ್ಯವಸ್ಥಾಪಕ ಹಾಗೂ ಪ್ರಾಂಶುಪಾಲರಾದ ರೆ. ಫಾ. ಮದಲೈ ಮುತ್ತು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಸಮಾಜದ ಒಳಿತು ರಾಷ್ಟ್ರೀಯ ಸೇವಾ ಯೋಜನೆಯ ಉದ್ದೇಶವಾಗಿದ್ದು, ವಿದ್ಯಾರ್ಥಿಗಳು ಸಮಾಜದ ಹಾಗೂ ರಾಷ್ಟ್ರದ ಅಭಿವೃದ್ಧಿಗೆ ನಿಸ್ವಾರ್ಥವಾಗಿ ಸೇವೆಯನ್ನು ಸಲ್ಲಿಸಬೇಕು ಎಂದರು. ವಿರಾಜಪೇಟೆ ತಾಲ್ಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಹಾಗೂ ಶಸ್ತ್ರ ಚಿಕಿತ್ಸಕರಾದ ಡಾ.ವಿಶ್ವನಾಥ್ ಸಿಂಪಿ ಮಾತನಾಡಿ, ಸ್ವಚ್ಛತಾ ಅಭಿಯಾನವು ಎನ್.ಎಸ್.ಎಸ್. ದ್ಯೇಯವಾಗಿದ್ದು ವಿದ್ಯಾರ್ಥಿಗಳು ತಮ್ಮ ಸೇವೆಯನ್ನು ಸಮಾಜಕ್ಕೆ ಸಲ್ಲಿಸುತ್ತಿರುವುದು ಗಮನಾರ್ಹವಾಗಿದೆ. ಸೇವಾ ಮನೋಭಾವನೆಯನ್ನು ಬೆಳೆಸುವುದರ ಜೊತೆಗೆ ವ್ಯಕ್ತಿತ್ವ ವಿಕಸನಕ್ಕೆ ರಾಷ್ಟ್ರೀಯ ಸೇವಾ ಯೋಜನೆ ಸಹಕಾರಿಯಾಗಿದೆ ಎಂದರು. ಸಾಮಾಜಿಕ ಕಳಕಳಿಯಲ್ಲಿ…
ಮಡಿಕೇರಿ ಸೆ.25 NEWS DESK : ಮದೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ 2023-24 ನೇ ಸಾಲಿನಲ್ಲಿ ರೂ.25.02 ಲಕ್ಷ ಲಾಭ ಗಳಿಸಿದೆ ಮತ್ತು ಲೆಕ್ಕಪರಿಶೋಧನಾ ವರ್ಗೀಕರಣದಲ್ಲಿ “ಎ” ಶ್ರೇಣಿ ಪಡೆದಿದೆ ಎಂದು ಸಂಘದ ಅಧ್ಯಕ್ಷ ಧನಂಜಯ ಆಗೋಳಿಕಜೆ ಅವರು ತಿಳಿಸಿದ್ದಾರೆ. ಸಂಘದ ಸಭಾಂಗಣದಲ್ಲಿ ನಡೆದ 2023-24ನೇ ಸಾಲಿನ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಅನೇಕ ಸಹಕಾರಿಗಳ ಪರಿಶ್ರಮದಿಂದ ಮದೆ ಸಹಕಾರ ಸಂಘ ರಚನೆಗೊಂಡಿದೆ ಎಂದು ಸ್ಮರಿಸಿಕೊಂಡರು. ಕಳೆದ ವರ್ಷ ಸದಸ್ಯರ ಖಾತೆಗಳಿಗೆ ಪ್ರಿಂಟೆಡ್ ಪಾಸ್ ಪುಸ್ತಕ ನೀಡಲಾಗಿದೆ. ಇ- ಸ್ಟ್ಯಾಂಪ್ ವಿತರಣೆ ವ್ಯವಸ್ಥೆ ಕಲ್ಪಿಸಲಾಗಿದೆ. ಸಂಘದ ಭದ್ರತೆಯ ದೃಷ್ಟಿಯಿಂದ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ. ಬ್ಯಾಂಕಿಂಗ್ ವಿಭಾಗಕ್ಕೆ ನೂತನ ಕೌಂಟರ್, ಸಂಘದ ಸುತ್ತ ಕಾಂಪೌಂಡ್ ನಿರ್ಮಾಣ, ಬೋರ್ ವೆಲ್ ಕೊರೆಯಿಸಿ ಸಮರ್ಪಕ ನೀರಿನ ವ್ಯವಸ್ಥೆ ಮಾಡಲಾಗಿದೆ. ಸಂಘದ ಸಭಾಂಗಣವನ್ನು ದುರಸ್ತಿಗೊಳಿಸಿ ಹೊಸ ವಿನ್ಯಾಸದೊಂದಿಗೆ ಸುಸಜ್ಜಿತಗೊಳಿಸಲಾಗಿದೆ. ಸದಸ್ಯರ ಅನುಕೂಲಕ್ಕಾಗಿ ಸಾಲದ ಬಡ್ಡಿಯನ್ನು ಕಡಿಮೆ ಮಾಡಲಾಗಿದೆ. ಕಲಿಕೆಯಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ…
ಮಡಿಕೇರಿ ಸೆ.25 NEWS DESK : ಹಾಕತ್ತೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ 2023-24ನೇ ಸಾಲಿನಲ್ಲಿ 10ನೇ ತರಗತಿ ಓದುತ್ತಿದ್ದ ಬಿ.ಎನ್.ಪೃಥ್ವಿ ವಿಜ್ಞಾನ ಶಿಕ್ಷಕಿ ಎಂ.ವನಜ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ್ದ ಕಾಳುಮೆಣಸು ಶುದ್ಧೀಕರಿಸುವ ಯಂತ್ರದ ಪರಿಕಲ್ಪನೆಯು ರಾಷ್ಟ್ರೀಯ ಮಟ್ಟದ ಇನ್ಸ್‌ಪೈರ್ ಮಾನಕ್ ಅವಾರ್ಡ್ ಗೆ ಆಯ್ಕೆಯಾಗಿದೆ. ಪೃಥ್ವಿ ಮಂಡಿಸಿದ ಈ ಪರಿಕಲ್ಪನೆಯ ಸಾಧನವು ಸಣ್ಣ ಖರ್ಚಿನಲ್ಲಿ ಕಾಳುಮೆಣಸು ಶುದ್ಧೀಕರಿಸುವ ಯಂತ್ರವಾಗಿದ್ದು, ಇಂದಿನ ದುಬಾರಿ ಜೀವನದಲ್ಲಿ ರೈತರಿಗೆ ಇದು ವರದಾನವಾಗಲಿದೆ. ಪೃಥ್ವಿ ಪ್ರಸ್ತುತ ಸಂತ ಮೈಕಲರ ಕಾಲೇಜಿನಲ್ಲಿ ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ. ಇವಳು ಮೇಕೇರಿ ಗ್ರಾಮದ ಬಿಲ್ಲವರ ನಂದಕುಮಾರ್ ಮತ್ತು ಶಶಿಕಲ ದಂಪತಿಯ ಪುತ್ರಿ.
ಮಡಿಕೇರಿ ಸೆ.25 NEWS DESK : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಬದಲಿ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಕೇಳುವ ನೈತಿಕತೆ ಬಿಜೆಪಿಗೆ ಇಲ್ಲವೆಂದು ಕೊಡಗು ಜಿಲ್ಲಾ ಕಾಂಗ್ರೆಸ್ ವಕ್ತಾರ ತೆನ್ನಿರ ಮೈನಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಉಚ್ಚ ನ್ಯಾಯಾಲಯ ತನ್ನ ನಿಲುವು ಪ್ರಕಟಿಸಿದ್ದು, ಮುಂದಿನ ಕಾನೂನು ಹೋರಾಟದ ಬಗ್ಗೆ ಕಾಂಗ್ರೆಸ್ ಪಕ್ಷದ ಪ್ರಮುಖರು ಸಿದ್ಧತೆ ಮಾಡಿಕೊಳ್ಳುತ್ತಿರುವುದಾಗಿ ತಿಳಿಸಿದರು. ಮುಡಾ ಪ್ರಕರಣ ಸಂಬಂಧ ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸುವ ಬಿಜೆಪಿಯವರು ಮೊದಲು, ನೈತಿಕತೆ ಎನ್ನುವುದು ಮೋದಿ ಮತ್ತು ಸಿದ್ದರಾಮಯ್ಯ ಅವರಿಗೆ ಪ್ರತ್ಯೇಕವಾಗಿದೆಯೇ ಎಂದು ಉತ್ತರಿಸಬೇಕು. ಗುಜರಾತ್‍ನಲ್ಲಿ 2002 ರಲ್ಲಿ ನಡೆದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ 2008 ರಲ್ಲಿ ಸರ್ವೋಚ್ಚ ನ್ಯಾಯಾಲಯ ತನಿಖೆಗೆ ಸೂಚನೆ ನೀಡಿದ ಸಂದರ್ಭ ಮುಖ್ಯಮಂತ್ರಿಯಾಗಿದ್ದ ಮೋದಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆಯನ್ನೇನು ನೀಡಿರಲಿಲ್ಲವೆಂದು ಆರೋಪಿಸಿದರು. ಇದೀಗ ಮುಡಾ ಹಗರಣದಲ್ಲಿ ಬಿಜೆಪಿಯವರು ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆ ಕೇಳುವುದರಲ್ಲಿ ಏನು…
ಮಡಿಕೇರಿ ಸೆ.25 NEWS DESK : ಭಾರತೀಯ ಜನತಾ ಪಾರ್ಟಿ ವತಿಯಿಂದ ದೀನ್ ದಯಾಳ್ ಉಪಾಧ್ಯಾಯ ಅವರ 108ನೇ ಜನ್ಮದಿನವನ್ನು ಮಡಿಕೇರಿಯಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕೊಡಗು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ದೀನ್ ದಯಾಳ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವ ಅರ್ಪಿಸಲಾಯಿತು. ಈ ಸಂದರ್ಭ ಮಾಜಿ ಸ್ಪೀಕರ್ ಕೆ.ಜಿ.ಬೋಪಯ್ಯ ಮಾತನಾಡಿ, ತನ್ನ ಇಡೀ ಜೀವನವನ್ನೇ ಸಮಾಜಕ್ಕಾಗಿ ಸಮರ್ಪಿಸಿದ ಜನಸಂಘದ ಸಂಸ್ಥಾಪಕ ಪ್ರಧಾನ ಕಾರ್ಯದರ್ಶಿಗಳಾಗಿದ್ದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರು ಎಲ್ಲರಿಗೂ ಮಾದರಿಯಾಗಿದ್ದರು ಎಂದರು. ಜಿಲ್ಲಾಧ್ಯಕ್ಷ ರವಿ ಕಾಳಪ್ಪ ಮತ್ತು ನಗರ ಅಧ್ಯಕ್ಷ ಉಮೇಶ್ ಸುಬ್ರಮಣ್ಯ ಮಾತನಾಡಿ ದೀನ್ ದಯಾಳ್ ಉಪಾಧ್ಯಾಯರ ಜೀವನ ಮತ್ತು ಆದರ್ಶಗಳನ್ನು ವಿವರಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ, ನಗರ ಸಭಾ ಸದಸ್ಯರು, ಪಕ್ಷದ ಕಾರ್ಯ ಕರ್ತರು ಹಾಜರಿದ್ದರು. ಪ್ರಧಾನ ಕಾರ್ಯದರ್ಶಿ ಗಳಾದ ಬಿ.ಕೆ.ಜಗದೀಶ್ ಸ್ವಾಗತಿಸಿದರು. ಕವನ್ ಕಾವೇರಪ್ಪ ವಂದಿಸಿದರು.






