ಲೇಖಕ: admin

ತಿತಿಮತಿ NEWS DESK ಆ.11 : ಆದಿವಾಸಿ ಬುಡಕಟ್ಟು ಜನಾಂಗದ ರಕ್ಷಣೆಯೊಂದಿಗೆ ಆದಿವಾಸಿಗಳ ಆಚಾರ- ವಿಚಾರ, ಸಂಸ್ಕೃತಿ ಹಾಗೂ ಜೀವನ ಕ್ರಮಗಳ ಕುರಿತು ಬೆಳಕು ಚೆಲ್ಲುವ ಮೂಲಕ ಇಂದಿನ ಯುವ ಪೀಳಿಗೆಗೆ ಪರಿಚಯಿಸುವ ದಿಸೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕರ್ನಾಟಕ ರಾಜ್ಯ ಸಂಸ್ಥೆಯ ವತಿಯಿಂದ ಸ್ಕೌಟ್ಸ್ ಮತ್ತು ಗೈಡ್ಸ್ ನ ಕೊಡಗು ಜಿಲ್ಲಾ ಸಂಸ್ಥೆಯ ಆಶ್ರಯದಲ್ಲಿ ಬರುವ 2024 ರ ಡಿಸೆಂಬರ್ ತಿಂಗಳಿನಲ್ಲಿ ರಾಜ್ಯಮಟ್ಟದ ಬುಡಕಟ್ಟು ಜನಾಂಗದ ವಿದ್ಯಾರ್ಥಿಗಳ ಸಮಾವೇಶ ಸಂಘಟಿಸಲು ನಿರ್ಧರಿಸಲಾಗಿದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕೊಡಗು ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ.ಬೇಬಿಮ್ಯಾಥ್ಯೂ ತಿಳಿಸಿದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕೊಡಗು ಜಿಲ್ಲಾ ಸಂಸ್ಥೆ ಮತ್ತು ಪೊನ್ನಂಪೇಟೆ ಸ್ಥಳೀಯ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಪೊನ್ನಂಪೇಟೆ ಸಮೀಪದ ಮರೂರು- ತಿತಿಮತಿ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯಲ್ಲಿ ಏರ್ಪಡಿಸಲಾಗಿದ್ದ ವಿಶ್ವ ಬುಡಕಟ್ಟು ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮೊದಲಿಗೆ ಬುಡಕಟ್ಟು…

Read More

ಪೆರಾಜೆ NEWS DESK ಆ.11 : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು, ಸಂಪಾಜೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಪೆರಾಜೆ ಜ್ಯೋತಿ ವಿದ್ಯಾ ಸಂಘದ ಸಂಯುಕ್ತಾಶ್ರಯದಲ್ಲಿ ಜ್ಯೋತಿ ಪ್ರೌಢಶಾಲೆಯ ಸಭಾಂಗಣದಲ್ಲಿ ದಿ.ಗಂಗಾಧರ ಶೇಟ್ ಹಾಗೂ ಸುಲೋಚನಾ ಬಾಯಿ ಸ್ಮಾರಕ ದತ್ತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಪ್ರಯುಕ್ತ ಆಯೋಜಿಸಲಾಗಿದ್ದ ಕೊಡಗಿನ ಸ್ವಾತಂತ್ರ್ಯ ಹೋರಾಟಗಾರರ ನೆನಪಿನ ಉಪನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಜಿಲ್ಲೆಯ ಹಿರಿಯ ಸಾಹಿತಿ, ಕೊಡಗಿನ ಗೌರಮ್ಮ ಪ್ರಶಸ್ತಿ ಪುರಸ್ಕೃತೆ ಸಹನಾ ಕಾಂತಬೈಲು ಕೊಡಗಿನಲ್ಲಿ ನಡೆದ ಸ್ವಾತಂತ್ರ್ಯ ಹೋರಾಟದ ಮೆಲುಕು ಹಾಕಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್, ನಮ್ಮ ದೇಶಕ್ಕೆ ಸ್ವಾತಂತ್ರ‍್ಯ ಸುಲಭವಾಗಿ ಸಿಕ್ಕಿಲ್ಲ, ಹಲವರ ತ್ಯಾಗ ಬಲಿದಾನ, ಹೋರಾಟಗಳಿಂದ ದೊರೆತ್ತಿದ್ದು, ಇಂದಿನ ಯುವ ಪೀಳಿಗೆಗೆ ಇದನ್ನು ತಿಳಿಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಗೋಣಿಕೊಪ್ಪದ ಎಂ.ಜಿ.ಮೋಹನ್ ಅವರು ಅವರ ತಂದೆ ತಾಯಿಗಳ ಹೆಸರಿನಲ್ಲಿ…

Read More

ಮಡಿಕೇರಿ NEWS DESK ಆ.11 : ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ಮತ್ತು ಹಿಂದೂಗಳ ಸುರಕ್ಷತೆಗೆ ಒತ್ತಾಯಿಸಿ ಹಿಂದೂ ಹಿತರಕ್ಷಣಾ ಸಮಿತಿ ವತಿಯಿಂದ ಆ.12 ರಂದು ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತ ಹಾಗೂ ಕುಶಾಲನಗರದ ಗಣಪತಿ ದೇವಾಲಯದ ಬಳಿ ಸಂಜೆ 4 ಗಂಟೆಗೆ ಮಾನವ ಸರಪಳಿ ಪ್ರತಿಭಟನೆ ನಡೆಯಲಿದೆ ಎಂದು ಸಂಘಟನೆಯ ಪ್ರಮುಖರು ತಿಳಿಸಿದ್ದಾರೆ.

Read More

ಮಡಿಕೇರಿ NEWS DESK ಆ.11 : ಶ್ರಮಜೀವಿಗಳಾದ ಹಮಾಲಿ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಹಮಾಲಿ ಕಾರ್ಮಿಕರ ಫೆಡರೇಷನ್ ತಲೆಹೊರೆ ಕಾರ್ಮಿಕರ ಸಂಘ ಆ.18 ರಂದು ಬಳ್ಳಾರಿ ಜಿಲ್ಲೆಯ ಸಿರಗುಪ್ಪದಲ್ಲಿ ನಡೆಸುತ್ತಿರುವ ರಾಜ್ಯ ಸಮಾವೇಶದ ಪ್ರಚಾರದ ಭಿತ್ತಿಪತ್ರವನ್ನು ಇಂದು ನೆಲ್ಲಿಹುದಿಕೇರಿಯ ಕಟ್ಟಡ ಕಾರ್ಮಿಕರ ಸಂಘದ ಕಚೇರಿಯಲ್ಲಿ ಬಿಡುಗಡೆಗೊಳಿಸಲಾಯಿತು. ಹಮಾಲಿ ಕಾರ್ಮಿಕರ ಸಂಘದ ಕೊಡಗು ಜಿಲ್ಲಾ ಘಟಕದ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಭಿತ್ತಿಪತ್ರ ಬಿಡುಗಡೆಗೊಳಿಸಿ ಮಾತನಾಡಿದ ಸಂಘಟನೆಯ ಜಿಲ್ಲಾಧ್ಯಕ್ಷ ಪಿ.ಆರ್.ಭರತ್ ಅವರು, ಸಿರಗುಪ್ಪದ ಎಪಿಎಂಸಿ ಆವರಣದಲ್ಲಿ ನಡೆಯುವ ಸಮಾವೇಶದಲ್ಲಿ ಜಿಲ್ಲೆಯ ನೂರಕ್ಕೂ ಹೆಚ್ಚು ಕಾರ್ಮಿಕರು ಪಾಲ್ಗೊಳ್ಳಲಿದ್ದಾರೆ ಎಂದರು. ಹಮಾಲಿ ಕಾರ್ಮಿಕರಿಗೆ ಕಾರ್ಮಿಕ ಇಲಾಖೆ ನಿಗಧಿ ಪಡಿಸಿರುವ ಕನಿಷ್ಠ ವೇತನ ನೀಡಬೇಕು, ಕಾರ್ಮಿಕ ಕಾನೂನುಗಳನ್ನು ಕಡ್ಡಾಯವಾಗಿ ಜಾರಿಗೆ ತರಬೇಕು, ಕೆಲಸದ ಭದ್ರತೆ ಮತ್ತು ಸುರಕ್ಷತೆ ನೀಡಬೇಕು, ಕಾರ್ಮಿಕರಿಗೆ ಸಾಮಾಜಿಕ ಭದ್ರತೆಯನ್ನು ಕಲ್ಪಿಸಬೇಕು, ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಗೆ ಕಾಯಕಲ್ಪ ನೀಡಬೇಕು, ಪ್ರಧಾನಮಂತ್ರಿ ಜೀವವಿಮಾ ಯೋಜನೆ ಮತ್ತು ಪಿಂಚಣಿಯ ಶ್ರಮಯೋಗಿ ಯೋಜನೆಯ…

Read More

ಮಡಿಕೇರಿ ಆ.11 : ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಅಂಬೇಡ್ಕರ್ ಅವರ ಹೆಸರಿನಲ್ಲಿ ಶನಿವಾರಸಂತೆ ಹೋಬಳಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಭವನದ ಕಾಮಗಾರಿ ಕಳೆದ ಎರಡು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದು, ಆಡಳಿತ ವ್ಯವಸ್ಥೆಯ ನಿರ್ಲಕ್ಷ್ಯದ ವಿರುದ್ಧ ಹೋರಾಟ ನಡೆಸಲು ದಲಿತ ಸಂಘಟನೆಗಳು ನಿರ್ಧರಿಸಿವೆ. ಡಾ.ಅಂಬೇಡ್ಕರ್ ಭವನದ ನಿರ್ಲಕ್ಷ್ಯದ ಕುರಿತು ಇಂದು ಶನಿವಾರಸಂತೆಯ ಪ್ರವಾಸಿ ಮಂದಿರದಲ್ಲಿ ಸಭೆ ನಡೆಸಿದ ದಲಿತ ಸಂಘರ್ಷ ಸಮಿತಿಯ ಮುಖಂಡರು ಅಪೂರ್ಣಗೊಂಡಿರುವ ಭವನ ಪಾಳುಬಿದ್ದಿದ್ದು, ಇದು ಕಳವಳಕಾರಿ ಬೆಳವಣಿಗೆಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಸಂವಿಧಾನವನ್ನು ರಚಿಸಿ ಇಡೀ ದೇಶಕ್ಕೆ ಪ್ರೇರಣೆಯಾದ ಮಹಾನಾಯಕನ ಹೆಸರಿನ ಯೋಜನೆಯೊಂದು ಪೂರ್ಣಗೊಳ್ಳದೆ ಕಾಡು ಪಾಲಾಗಿರುವುದು ಖಂಡನೀಯ. ಆಮೆಗತಿಯ ಕಾಮಗಾರಿಯ ಕುರಿತು ಸಮಾಜ ಕಲ್ಯಾಣ ಇಲಾಖೆ ಸಚಿವರು ಹಾಗೂ ಶಾಸಕರ ಬಳಿ ದೂರಿಕೊಂಡಿದ್ದಾಗ ಉತ್ತಮ ಸ್ಪಂದನೆ ದೊರೆತು ಶೀಘ್ರ ಯೋಜನೆ ಪೂರ್ಣಗೊಳ್ಳುತ್ತದೆ ಎನ್ನುವ ವಿಶ್ವಾಸ ಮೂಡಿತ್ತು. ಆದರೆ ಎರಡು ವರ್ಷ ಕಳೆದರೂ ಭವನದ ಕಾಮಗಾರಿ ಪೂರ್ಣಗೊಂಡಿಲ್ಲ. ಈ ನಿರ್ಲಕ್ಷ್ಯ ಮನೋಭಾವ ಇಡೀ ದಲಿತ ಸಮುದಾಯಕ್ಕೆ ನೋವನ್ನುಂಟು ಮಾಡಿದೆ ಎಂದು…

Read More

ಮಡಿಕೇರಿ NEWS DESK ಆ.11 : ವಿಶ್ವದೆಲ್ಲೆಡೆ ಹಿಂದೂಗಳನ್ನು ಸಂಘಟಿಸುವ ಕಾರ್ಯದಲ್ಲಿ ಸಕ್ರಿಯವಾಗಿರುವ ವಿಶ್ವ ಹಿಂದು ಪರಿಷದ್ ಕರ್ನಾಟಕ ದಕ್ಷಿಣ ಪ್ರಾಂತದ ಕಾರ್ಯಾಲಯದ ನೂತನ ಭವನ ಇಂದು ಬೆಂಗಳೂರಿನಲ್ಲಿ ಲೋಕಾರ್ಪಣೆಗೊಂಡಿತು. ಉದ್ಘಾಟನಾ ಸಮಾರಂಭದಲ್ಲಿ ಆದಿಚುಂಚನಗಿರಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಹಾಗೂ ಆರ್ಟ್ ಆಫ್ ಲೀವಿಂಗ್‌ನ ಶ್ರೀ ರವಿಶಂಕರ ಗುರೂಜಿ ಸಾನ್ನಿಧ್ಯ ವಹಿಸಿದ್ದರು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಕಾರ್ಯವಾಹರಾದ ದತ್ತಾತ್ರೇಯ ಹೊಸಬಾಳೆ ಹಾಗೂ ವಿಶ್ವ ಹಿಂದೂ ಪರಿಷದ್ ನ ಅಂತರರಾಷ್ಟ್ರೀಯ ಅಧ್ಯಕ್ಷ ಅಲೋಕ್ ಕುಮಾರ್ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಬೆಂಗಳೂರಿನ ಚಾಮರಾಜಪೇಟೆ ಶಂಕರಮಠದ ಸಮಾನಾಂತರ ರಸ್ತೆಯಲ್ಲಿರುವ ವಿಹಿಂಪ ಕಚೇರಿ ಸ್ಥಳದಲ್ಲಿ ನೂತನವಾಗಿ ನಿರ್ಮಿಸಿರುವ ಕಾರ್ಯಾಲಯದ ಕಟ್ಟಡಕ್ಕೆ “ಧರ್ಮಶ್ರೀ” ಎಂದು ನಾಮಕರಣ ಮಾಡಲಾಗಿದೆ. ದೇಶ, ಧರ್ಮ, ಸಂಸ್ಕೃತಿ, ಸಂಸ್ಕಾರದ ಪ್ರಚಾರಕ್ಕಾಗಿ ಜಗತ್ತಿನಾದ್ಯಂತ ಇರುವ ಹಿಂದುಗಳನ್ನು ಸಂಘಟಿಸುವ ಕಾರ್ಯದಲ್ಲಿ ತೊಡಗಿರುವ ವಿಶ್ವ ಹಿಂದು ಪರಿಷದ್ ನ ವಿವಿಧ ವಿಭಾಗಗಳು ನೂತನ ಭವನ “ಧರ್ಮಶ್ರೀ” ಯಲ್ಲಿ ಕಾರ್ಯನಿರ್ವಸಲಿದೆ ಎಂದು ಕಾರ್ಯಕ್ರಮದಲ್ಲಿ ಪಾಲ್ಗೊಂಡ ಕೊಡಗು ಜಿಲ್ಲೆಯ…

Read More

ಮಾದಾಪುರ NEWS DESK ಆ.10 : ಅತ್ಯಂತ ಸೂಕ್ಷ್ಮ ಪ್ರದೇಶವಾಗಿರುವ ಕೊಡಗು ಜಿಲ್ಲೆಯ ಪ್ರಕೃತಿಯ ಮೇಲಿನ ದಾಳಿಯೇ ಇತ್ತೀಚೆಗೆ ಸಂಭವಿಸಿದ ವಿಕೋಪಗಳಿಗೆ ಕಾರಣ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಿದ್ದಾಪುರದ ಕಾಫಿ ತೋಟಗಳು ಸೇರಿದಂತೆ ಕೊಡಗು ಜಿಲ್ಲೆಯ ವಿವಿಧೆಡೆ ನಡೆಯುತ್ತಿರುವ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯನ್ನು ಸ್ಥಗಿತಗೊಳಿಸಬೇಕೆಂದು ಒತ್ತಾಯಿಸಿ ಸಿಎನ್‌ಸಿ ವತಿಯಿಂದ ಉತ್ತರ ಕೊಡಗಿನ ಮಾದಾಪುರದಲ್ಲಿ ನಡೆದ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮದ ನೇತೃತ್ವ ವಹಿಸಿ ಅವರು ಮಾತನಾಡಿದರು. ಕೊಡಗಿನಲ್ಲಿ ನಿರಂತರವಾಗಿ ಹೊರ ಪ್ರದೇಶದ ಬಂಡವಾಳಶಾಹಿಗಳಿಗೆ, ಕಾರ್ಪೋರೇಟ್ ವಲಯಕ್ಕೆ, ಬಹುರಾಷ್ಟಿçÃಯ ಕಂಪೆನಿಗಳಿಗೆ, ಅನಿವಾಸಿ ಭಾರತೀಯರಿಗೆ, ರೆಸಾರ್ಟ್ ಮಾಫಿಯಾಗಳಿಗೆ, ದೊಡ್ಡ ಉದ್ಯಮಿಪತಿಗಳಿಗೆ ಭೂಮಿಯನ್ನು ಮಿತಿ ಮೀರಿ ನೀಡಿದರೆ ಭವಿಷ್ಯತ್ತಿಗೆ ತೊಂದರೆಯಾಗಲಿದೆ. ಈ ಹಿಂದೆ 2018 ರಲ್ಲಿ ಸೂರ್ಲಬ್ಬಿ ನಾಡ್, ಮುತ್ತುನಾಡ್, ಪೊರಮಲೆನಾಡ್ ಮತ್ತು ಬದಿಗೇರಿನಾಡ್ ನಲ್ಲಿ ಭೀಕರ ಜಲಕಂಟಕದಿAದ ಅನಾಹುತ ಸಂಭವಿಸಿತ್ತು, ಅಲ್ಲದೆ ಅನೇಕ ಮನೆಗಳು ನಾಶವಾಗಿದ್ದವು. ಸೂರ್ಲಬ್ಬಿ ನಾಡಿನ ಪಕ್ಕದಲ್ಲೇ ಇರುವ…

Read More

ಗೋಣಿಕೊಪ್ಪ NEWS DESK ಆ.10 : ಕಾಫಿ ಮಂಡಳಿ ಗೊಣಿಕೊಪ್ಪಲು ವತಿಯಿಂದ ಬಾಳೆಲೆ ಗ್ರಾಮ ಪಂಚಾಯಿತಿ  ಸಹಯೋಗದೊಂದಿಗೆ ಬಾಳೆಲೆ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಅ.13 ರಂದು ಬೆಳಿಗ್ಗೆ 10 ಗಂಟೆಯಿಂದ ಸಾಮರ್ಥ್ಯ ನಿರ್ಮಾಣ ಕಾರ್ಯಗಾರ ನಡೆಯಲಿದೆ. ಈ ವರ್ಷದ ಅಧಿಕ ಮಳೆಯಿoದಾಗಿ ಕಾಫಿ ಗಿಡಗಳಲ್ಲಿ ಕಾಣಿಸಿಕೊಂಡಿರುವ ಕೊಳೆರೋಗ ಕಾಫಿ ಉದುರುವಿಕೆ, ಮರು ನಾಟಿ, ಗೋದಾಮು, ಕಾಫಿ ಕಣ, ಹೊಸ ಕೆರೆ, ಬಾವಿ, ಹನಿ ನೀರಾವರಿ ಉಪಕರಣ, ಮೋಟಾರ್ ಸಬ್ಸಿಡಿ ಮತ್ತಿತರ ವಿಚಾರಗಳ ಕುರಿತು ಕಾರ್ಯಾಗಾರದಲ್ಲಿ ಮಾಹಿತಿ ನೀಡಲಾಗುವುದು. ಬೆಳೆಗಾರರು ಕಾರ್ಯಾಗಾರದ ಸದುಪಯೋಗ ಪಡೆದುಕೊಳ್ಳುವಂತೆ ಕಾಫಿ ಮಂಡಳಿ ಮನವಿ ಮಾಡಿದೆ.

Read More

ಕೊಡ್ಲಿಪೇಟೆ NEWS DESK ಆ.10 : “ಜಾತ್ಯಾತೀತತೆ ಭಾರತದ ಧರ್ಮ” ಎಂಬ ಶೀರ್ಷಿಕೆಯೊಂದಿಗೆ ಆಗಸ್ಟ್ 15 ರಂದು ದೇಶದ  ಸ್ವಾತಂತ್ರ್ಯೋತ್ಸವದ ಅಂಗವಾಗಿ ಎಸ್ ವೈ ಎಸ್ ಕೊಡಗು ಜಿಲ್ಲಾ ಸಮಿತಿಯ ವತಿಯಿಂದ ಸಂಜೆ 4 ಗಂಟೆಗೆ ಸುಂಟಿಕೊಪ್ಪದಲ್ಲಿ ನಡೆಯುವ ರಾಷ್ಟ್ರ ರಕ್ಷಾ ಸಂಗಮ ಕಾರ್ಯಕ್ರಮದ ಪ್ರಚಾರ ಕೊಡ್ಲಿಪೇಟೆ ಎಸ್ ಕೆ ಎಸ್ ಎಸ್ ಎಫ್ ಶಾಖಾ ಕಚೇರಿಯಲ್ಲಿ ನಡೆಯಿತು. ಪ್ರಚಾರ ಕಾರ್ಯಕ್ರಮದಲ್ಲಿ SYS ಕೊಡಗು ಉಪಾಧ್ಯಕ್ಷರಾದ ಹಂಸ ಹಾಜಿ, ಪ್ರಧಾನ ಕಾರ್ಯದರ್ಶಿ ಅಶ್ರಫ್ ಫೈಝಿ, ಪ್ರಮುಖರಾದ ಹಮೀದ್ ಮೌಲವಿ, ಜಿಲ್ಲಾ ನಾಯಕರುಗಳು, ಎಸ್ ವೈ ಎಸ್ ಆಮಿಲಾ ಉಪಾಧ್ಯಕ್ಷರಾದ ಅಬ್ದುಲ್ ರಹಮಾನ್, ಸದಸ್ಯರುಗಳಾದ ಉಮ್ಮರ್, ಶೇಖಬ್ಬ, ಎಸ್ ಕೆ ಎಸ್ ಎಸ್ ಎಫ್ ಜೊತೆ ಕಾರ್ಯದರ್ಶಿ ಮುಸ್ತಫಾ ಸಬ್ಬಿ ಹಾಗೂ ಶಾಖೆಯ ಇತರ ಸದಸ್ಯರುಗಳು ಭಾಗವಹಿಸಿದ್ದರು.

Read More

ವಿರಾಜಪೇಟೆ NEWS DESK ಆ.10 : ವಿರಾಜಪೇಟೆ ತಾಲ್ಲೂಕಿನ ಮಗ್ಗುಲ ಗ್ರಾಮದ ಶ್ರೀ ಶನೀಶ್ವರ ಮತ್ತು ನವಗ್ರಹ ದೇವಾಲಯದಲ್ಲಿ ಶ್ರಾವಣ ಮಾಸದ ಪ್ರಥಮ ಶನಿವಾರದ ವಿಶೇಷ ಪೂಜಾ ಕೈಂಕರ್ಯಗಳು ಶ್ರದ್ಧಾಭಕ್ತಿಯಿಂದ ನಡೆಯಿತು. ಅರ್ಚಕರಾದ ಸಂತೋಷ್ ಹೆಬ್ಬಾರ್ ಮತ್ತು ಪವನ್ ಕುಮಾರ್ ಭಟ್ ಸಾರಥ್ಯದಲ್ಲಿ ಗಣಪತಿ ಹೋಮ, ನವಗ್ರಹ ಪೂಜೆ, ಶನಿ ಶಾಂತಿ,ಶನಿ ಜಪ, ರಾಹು ಕೇತು ಜಪ, ಕುಂಕುಮಾರ್ಚನೆ, ಮೃತ್ಯುಂಜಯ ಜಪ ಪೂಜಾದಿಗಳು ಜರುಗಿತು. ಮಧ್ಯಾಹ್ನ ಶ್ರೀ ಶನೀಶ್ವರ ಸ್ವಾಮಿಗೆ ಮಹಾ ಮಂಗಳಾರತಿ, ಮಾಹಾಪೂಜೆ ನೆರವೇರಿತು. ದೇಗುಲ ತಕ್ಕರಾದ ಚೊಕಂಡ ರಮೇಶ್ ಮತ್ತು ಕುಟುಂಬಸ್ಥರು, ಪುರೋಹಿತ ವರ್ಗ, ಗ್ರಾಮಸ್ಥರು, ನಗರ ಮತ್ತು ಸ್ಥಳೀಯ ಗ್ರಾಮಗಳಿಂದ ಅಧಿಕ ಸಂಖ್ಯೆಯ ಭಕ್ತರು ಪೂಜೆಯಲ್ಲಿ ಪಾಲ್ಗೊಂಡಿದ್ದರು.  ದೇವಾಲಯದಲ್ಲಿ ತಾ 17 ,24, 31 ರಂದು ಶ್ರಾವಣ ಶನಿವಾರದ ವಿಶೇಷ ಪೂಜೆಗಳು ನಡೆಯಲಿದೆ ಹಾಗೂ ಭಕ್ತರಿಗೆ ಅನ್ನಸಂತರ್ಪಣೆಯಾಗಲಿದೆ ಎಂದು ಆಡಳಿತ ಮಂಡಳಿ ತಿಳಿಸಿದೆ.

Read More