ಲೇಖಕ: admin

ಮಡಿಕೇರಿ NEWS DESK ಆ.23 : ಹಾಡಹಗಲೇ ಚೇರಂಬಾಣೆ ಗ್ರಾಮದ ಮನೆಯೊಂದಕ್ಕೆ ನುಗ್ಗಿ ಮಹಿಳೆಯೊಬ್ಬರನ್ನು ಬೆದರಿಸಿ ಚಿನ್ನಾಭರಣಗಳನ್ನು ದರೋಡೆ ಮಾಡಿದ ಆರೋಪಿಯನ್ನು ಪ್ರಕರಣ ನಡೆದ ಕೇವಲ 6 ಗಂಟೆಗಳಲ್ಲಿ ಬಂಧಿಸುವಲ್ಲಿ ಮಡಿಕೇರಿ ಗ್ರಾಮಾಂತರ, ಭಾಗಮಂಡಲ ಮತ್ತು ನಾಪೋಕ್ಲು ಪೊಲೀಸರು ಯಶಸ್ವಿಯಾಗಿದ್ದಾರೆ. ಚೇರಂಬಾಣೆ ನಿವಾಸಿ ಸುದರ್ಶನ್ (24) ಎಂಬಾತನೇ ಬಂಧಿತ ಆರೋಪಿ. ಸಣ್ಣಪಲಿಕೋಟು ಬಸ್ ನಿಲ್ದಾಣದ ಬಳಿ ಈತನನ್ನು ಪೊಲೀಸರು ಬಂಧಿಸಿದ್ದು, ಕಳವು ಮಾಡಿದ್ದ 60 ಗ್ರಾಂ 530 ಮಿಲಿ ಚಿನ್ನಾಭರಣ, ರೂ.620 ನಗದು ಮತ್ತು ಕೃತ್ಯಕ್ಕೆ ಬಳಸಿದ್ದ ಚಾಕುವನ್ನು ವಶಪಡಿಸಿಕೊಂಡಿದ್ದಾರೆ. ::: ಪ್ರಕರಣದ ಹಿನ್ನೆಲೆ ::: ಆ.22 ರಂದು ಭಾಗಮಂಡಲ ಪೊಲೀಸ್ ಠಾಣಾ ವ್ಯಾಪ್ತಿಯ ಚೇರಂಬಾಣೆ ಗ್ರಾಮದ ನಿವಾಸಿ ಗೋಪಾಲಕೃಷ್ಣ ಕೆ.ಕೆ ಅವರ ತಾಯಿ ಮನೆಯಲ್ಲಿ ಒಬ್ಬರೇ ಇದ್ದ ಸಂದರ್ಭ ಬೆಳಿಗ್ಗೆ ಸುಮಾರು 11.30 ಗಂಟೆಗೆ ಆರೋಪಿ ಮನೆಗೆ ನುಗ್ಗಿದ್ದಾನೆ. ಚಾಕು ತೋರಿಸಿ, ಬೆದರಿಸಿ, ಹಲ್ಲೆ ಮಾಡಿ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಮತ್ತು ಮನೆಯ ಗಾಡ್ರೇಜ್‌ನಲ್ಲಿದ್ದ ಚಿನಾಭರಣಗಳನ್ನು ದೋಚಿದ್ದಾನೆ ಎಂದು ಭಾಗಮಂಡಲ…

Read More

ಮಡಿಕೇರಿ NEWS DESK ಆ.23 : ಕೊಡವರ ಹತ್ಯೆಯಾದ ದೇವಟ್ ಪರಂಬು ಸ್ಮಾರಕ ಪ್ರದೇಶದಲ್ಲಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಮಾಸಿಕ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಸಿತು. ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಹಾಗೂ ಪ್ರಮುಖರು ಹಿರಿಯರಿಗೆ ಪುಷ್ಪನಮನ ಸಲ್ಲಿಸಿ ಕೊಡವಲ್ಯಾಂಡ್ ಪರ ಹಕ್ಕೊತ್ತಾಯ ಮಂಡಿಸಿದರು. ವಿಶ್ವಾಸಘಾತುಕ “ಕೆಳದಿ/ಪಾಲೇರಿ ರಾಜ ಪರಿವಾರದ ಅಧೀನದಲ್ಲಿದ್ದ ಕೊಡಗು ರಾಜ್ಯವನ್ನು ಪರಾಕ್ರಮಿ ಕೊಡವರು ಹೈದರ್ ಮತ್ತು ಟಿಪ್ಪುವಿನ ಆಕ್ರಮಣದಿಂದ 32 ಕ್ಕೂ ಹೆಚ್ಚು ಬಾರಿ ಕಾಪಾಡಿದರು. ಈ ಸೋಲಿನ ಸೇಡು ತೀರಿಸಿಕೊಳ್ಳಲು, ಟಿಪ್ಪು ಕೊಡವ ಬುಡಕಟ್ಟು ಜನಾಂಗವನ್ನು ವಂಚನೆಯ ಮೂಲಕ ಸಂಪೂರ್ಣವಾಗಿ ನಾಶಮಾಡಲು ಸಂಚು ಹೂಡಿದನು. ಟಿಪ್ಪು ಸಂಚಿನಿAದ ದೇವಟ್ ಪರಂಬುವಿನಲ್ಲಿ ನಡೆದ ನರಮೇಧದ ಸ್ಮರಣಾರ್ಥ ಅಂತರರಾಷ್ಟ್ರೀಯ ಸ್ಮಾರಕ ನಿರ್ಮಾಣ ಮಾಡಬೇಕು ಮತ್ತು ಕೊಡವರ ನರಮೇಧವನ್ನು ವಿಶ್ವ ರಾಷ್ಟçಸಂಸ್ಥೆ ಯುಎನ್‌ಒ ಅಂತರರಾಷ್ಟ್ರೀಯ ಹತ್ಯಾಕಾಂಡದ ನೆನಪಿನ ಪಟ್ಟಿಯಲ್ಲಿ ಸೇರಿಸಬೇಕು ಎಂದು ನಾಚಪ್ಪ ಇದೇ ಸಂದರ್ಭ ಒತ್ತಾಯಿಸಿದರು. ಕೊಡವಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆ ನೀಡಬೇಕು, ಆದಿಮಸಂಜಾತ ಕೊಡವ ಜನಾಂಗೀಯ ಬುಡಕಟ್ಟು ಜನಾಂಗಕ್ಕೆ ಎಸ್‌ಟಿ…

Read More

ಮಡಿಕೇರಿ ಆ.23 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ನಗರಸಭೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ, ಪದವಿ ಪೂರ್ವ ಶಿಕ್ಷಣ, ಕಾಲೇಜು ಶಿಕ್ಷಣ ಇಲಾಖೆ ಹಾಗೂ ಸರ್ವೋದಯ ಸಮಿತಿ ಇವರ ಸಹಕಾರದಲ್ಲಿ ಆಚರಿಸುತ್ತಿರುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155 ನೇ ಜಯಂತಿಯ ದಿನಾಚರಣೆ ಅಂಗವಾಗಿ ವಿದ್ಯಾರ್ಥಿ ಹಾಗೂ ಯುವಜನರಲ್ಲಿ ಮಹಾತ್ಮ ಗಾಂಧೀಜಿಯವರ ಬದುಕು, ಸ್ವಾತಂತ್ರ್ಯ ಚಳುವಳಿ, ಸರಳತೆ, ಅಹಿಂಸಾ ಮಾರ್ಗ, ಅಸ್ಪೃಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು ಮತ್ತಿತರ ವಿಚಾರಗಳ ಬಗ್ಗೆ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ/ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಬಾಪೂಜಿ ಪ್ರಬಂಧ ಸ್ಪರ್ಧೆಯು ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ನಡೆಯಲಿದೆ. ವಿವಿಧ ವಿಷಯಗಳ ಕುರಿತು ಪ್ರೌಢಶಾಲೆ, ಪದವಿ ಪೂರ್ವ ಶಿಕ್ಷಣ ಹಾಗೂ ಪದವಿ-ಸ್ನಾತಕೋತ್ತರ ಪದವಿಗಳ ಹಂತದ ವಿದ್ಯಾರ್ಥಿಗಳಿಗೆ ಒಟ್ಟು 3 ವಿಭಾಗಗಳಲ್ಲಿ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ವಿವಿಧ ಇಲಾಖೆಗಳ ಸಹಕಾರದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಆಯೋಜಿಸಲಾಗಿದೆ. ವಿಜೇತರಿಗೆ…

Read More

ಕುಶಾಲನಗರ ಆ.23 NEWS DESK : ಕೂಡುಮಂಗಳೂರು(ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ  ವಿಜ್ಞಾನ ಸಂಘ, ಎಸ್.ಡಿ.ಎಂ.ಸಿ. ಮತ್ತು ಎನ್.ಎಸ್.ಎಸ್.ಘಟಕದ ಆಶ್ರಯದಲ್ಲಿ ರಾಷ್ಟ್ರೀಯ ಅಂತರಿಕ್ಷ ದಿನಾಚರಣೆಯನ್ನು ಆಚರಿಸುವ ಮೂಲಕ ಚಂದ್ರಯಾನ ಯಶಸ್ವಿ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಯಿತು. ರಾಷ್ಟ್ರೀಯ ಅಂತರಿಕ್ಷ ದಿನಾಚರಣೆಯ ಮಹತ್ವ ಕುರಿತು ಮಾಹಿತಿ ನೀಡಿದ ಶಾಲಾ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್, ಚಂದ್ರಯಾನ-3 ರ ಯಶಸ್ಸಿನ ಸ್ಮರಣಾರ್ಥವಾಗಿ ಆಗಸ್ಟ್ 23ರಂದು ಬಾಹ್ಯಾಕಾಶ ದಿನ ಆಚರಿಸಲಾಗುತ್ತಿದೆ. ಇಂತಹ ದಿನಗಳು ವಿದ್ಯಾರ್ಥಿಗಳಲ್ಲಿ ಬಾಹ್ಯಾಕಾಶದ ಕುರಿತು ವೈಜ್ಞಾನಿಕ ಸಂಶೋಧನೆಗಳನ್ನು ಮತ್ತು ಸಾಹಸಗಳನ್ನು ಕೈಗೊಳ್ಳಲು ಪ್ರೇರೇಪಣೆ ಸಿಗುತ್ತದೆ ಎಂದರು. ಅಂತರಿಕ್ಷ ಕ್ಷೇತ್ರದಲ್ಲಿ ನಮ್ಮ ದೇಶವನ್ನು ಮತ್ತಷ್ಟು ಉನ್ನತ ಸ್ಥಾನಕ್ಕೇರಿಸಲು ಈ ದಿನ ಸಹಕಾರಿಯಾಗಿದೆ ಎಂದು ಪ್ರೇಮಕುಮಾರ್ ತಿಳಿಸಿದರು. ಭಾರತದ ಬಾಹ್ಯಾಕಾಶ ಸಾಧನೆಗಳ ಕುರಿತು ಮಾಹಿತಿ ನೀಡಿದ ಶಾಲೆಯ ವಿಜ್ಞಾನ ಸಂಘದ ಉಸ್ತುವಾರಿ ಶಿಕ್ಷಕಿ ಬಿ.ಡಿ.ರಮ್ಯ ಮಾತನಾಡಿ, ಬಾಹ್ಯಾಕಾಶ ಸಾಧನೆಗಳ ಪೈಕಿ ಚಂದ್ರಯಾನ-3 ಯೋಜನೆಗೆ ವಿಶೇಷ ಸ್ಥಾನವಿದೆ. ಕಳೆದ ವರ್ಷ ಆ.23ರಂದು ಚಂದ್ರಯಾನ-3 ಮಿಷನ್‌ನ ವಿಕ್ರಮ್‌ ಲ್ಯಾಂಡರ್‌ ಚಂದ್ರನ ದಕ್ಷಿಣ…

Read More

ಮಡಿಕೇರಿ NEWS DESK ಆ.23 : ಮಹಿಳೆಯರು ಶಿಕ್ಷಣದಿಂದ ವಂಚಿತರಾಗಬಾರದು, ಸಾಮಾಜಿಕ ಪಿಡುಗಿನಿಂದ ನೊಂದಿರುವ ಮಹಿಳೆಗೆ ನೆರವು ಮತ್ತು ಸೌಲಭ್ಯ ಕಲ್ಪಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ಅವರು ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ, ಇವರ ಸಹಯೋಗದೊಂದಿಗೆ 2024-25 ನೇ ಸಾಲಿನ ಮಿಷನ್ ಶಕ್ತಿ ಯೋಜನೆಯಡಿ “ಬೇಟಿ ಪಡಾವೋ-ಬೇಟಿ ಬಚಾವೋ” ಜಿಲ್ಲಾ ಮಟ್ಟದ ಕಾರ್ಯಕ್ರಮದ ಪ್ರಯುಕ್ತ ನಗರದ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಕಟ್ಟಡ ಕಾರ್ಮಿಕರಿಗೆ “ವಿಶ್ವ ಮಾನವ ಕಳ್ಳ ಸಾಗಾಣಿಕೆ’ ತಡೆ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಾನವ ಕಳ್ಳ ಸಾಗಾಣಿಕೆಯ ಸಮಸ್ಯೆ ಮಹಿಳೆಯರನ್ನು ಹೆಚ್ಚಾಗಿ ಕಾಡುತ್ತಿದೆ. ಸಾಮಾನ್ಯರಂತೆ ಜೀವನ ನಡೆಸಲು ಸಾಧ್ಯವಾಗುತ್ತಿಲ್ಲ, ಬೇರೆ ಬೇರೆ ಕೆಲಸ ಕಾರ್ಯಗಳಿಗೆ ಬಳಸಿಕೊಳ್ಳಲಾಗುತ್ತಿದೆ. ಸಾಮಾಜಿಕ ಪಿಡುಗಿನಿಂದ ನೊಂದಿರುವ…

Read More

ಮಡಿಕೇರಿ ಆ.23 NEWS DESK : ವಿರಾಜಪೇಟೆಯ ಕುಟ್ಟಂದಿಯ ಕೆ.ಬಿ ಪ್ರೌಢಶಾಲೆಯಲ್ಲಿ ಕಳೆದ 30 ವರ್ಷಗಳಿಂದ ದೈಹಿಕ ಶಿಕ್ಷಕರಾಗಿ ಸೇವೆ ಸಲ್ಲಿಸಿರುವ ಶಿವಣ್ಣ ಎಸ್. ಅವರಿಗೆ ಶ್ರೀ ಕೆಂಗಲ್ ಹನುಮಂತಯ್ಯ ಸದ್ಭಾವನಾ ರಾಷ್ಟ್ರ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರತಿ ವರ್ಷ ವಿರಾಜಪೇಟೆಯ ನಾಟ್ಯ ಮಯೂರಿ ನೃತ್ಯ ಟ್ರಸ್ಟ್ ರಾಜ್ಯದ ಎಲ್ಲಾ ಜಿಲ್ಲೆಗಳ ಸಾಧಕರನ್ನು ಗುರುತಿಸಿ ನೀಡುತ್ತಿರುವ ಪ್ರಶಸ್ತಿಗೆ ಈ ಬಾರಿ ಕೊಡಗು ಜಿಲ್ಲೆಯಿಂದ ಶಿವಣ್ಣ ಅವರನ್ನು ಆಯ್ಕೆ ಮಾಡಲಾಗಿತ್ತು. ವಿಧಾನಸೌಧದ ಕಲಾಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಟ್ರಸ್ಟ್ ನ ಪ್ರಮುಖರು ಹಾಗೂ ಮುಖ್ಯ ಅತಿಥಿಗಳು ಪ್ರಶಸ್ತಿ ಪ್ರದಾನ ಮಾಡಿದರು. ಹವ್ಯಾಸಿ ರಂಗಭೂಮಿ ಕಲಾವಿದರು, ಹಾಡುಗಾರರೂ ಆಗಿರುವ ಶಿವಣ್ಣ ಅವರು ಭಾರತ ಸೇವಾದಳ, ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯಲ್ಲೂ ಸೇವೆ ಸಲ್ಲಿಸಿದ್ದಾರೆ. ಇತ್ತೀಚೆಗಷ್ಟೇ ನಿವೃತ್ತಿ ಹೊಂದಿರುವ ಇವರು ಕಿರುತೆರೆಯ ಧಾರಾವಾಹಿಯೊಂದರಲ್ಲಿ ಅಭಿನಯಿಸುವ ತಯಾರಿಯಲ್ಲಿದ್ದಾರೆ.

Read More

ಮಡಿಕೇರಿ ಆ.23 NEWS DESK : ಐತಿಹಾಸಿಕ ಮಡಿಕೇರಿ ದಸರಾ ಜನೋತ್ಸವದ ಪೂರ್ವ ಸಿದ್ಧತೆಗಾಗಿ ನಗರದ ಶ್ರೀಪೇಟೆ ರಾಮಮಂದಿರದಲ್ಲಿ ದಸರಾ ಸಮಿತಿ ವತಿಯಿಂದ ವಿಶೇಷ ಪೂಜೆ ಸಲ್ಲಿಸಲಾಯಿತು. ಸಮಿತಿಯ ಕಾರ್ಯಾಧ್ಯಕ್ಷ ಪ್ರಕಾಶ್ ಆಚಾರ್ಯ, ಮೂಡ ಅಧ್ಯಕ್ಷ ಹಾಗೂ ನಗರಸಭಾ ಸದಸ್ಯ ಬಿ.ವೈ.ರಾಜೇಶ್, ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ, ಸದಸ್ಯ ಅರುಣ್ ಶೆಟ್ಟಿ, ಮೂಡ ಸದಸ್ಯ ಕಾನೆಹಿತ್ಲು ಮೊಣ್ಣಪ್ಪ, ಮಡಿಕೇರಿ ದಸರಾ ಸಾಂಸ್ಕೃತಿಕ ಸಮಿತಿಯ ಅಧ್ಯಕ್ಷ ಅನಿಲ್ ಹೆಚ್.ಟಿ, ಪ್ರಮುಖರಾದ ಸತೀಶ್ ಪೈ, ಸದಾ ಮುದ್ದಪ್ಪ, ಬೊಳ್ಳಜಿರ ಬಿ.ಅಯ್ಯಪ್ಪ ಹಾಗೂ ಸಮಿತಿಯ ಪದಾಧಿಕಾರಿಗಳು ದಸರಾ ಉತ್ಸವದ ಯಶಸ್ಸಿಗೆ ಪ್ರಾರ್ಥನೆ ಸಲ್ಲಿಸಿದರು. ನಗರಸಭೆ ಸದಸ್ಯರು, ದಶಮಂಟಪ ಸಮಿತಿಯ ಪದಾಧಿಕಾರಿಗಳು, ದಸರಾ ಉತ್ಸವ ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರು ಹಾಜರಿದ್ದರು.

Read More

ಮಡಿಕೇರಿ ಆ.23 NEWS DESK : ಪ್ರಸಕ್ತ (2024-25) ಸಾಲಿನಲ್ಲಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಯೋಜನೆಗಳಾದ ಉದ್ಯೋಗಿನಿ ಯೋಜನೆ, ಧನಶ್ರೀ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ, ಚೇತನ ಯೋಜನೆಗಳಿಗೆ ಸೇವಾ ಸಿಂಧು ಪೋರ್ಟಲ್‍ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿದಾರರು ಹತ್ತಿರದ ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸುವುದು, ಅರ್ಜಿ ಸಲ್ಲಿಸಲು ಸೆಪ್ಟೆಂಬರ್, 21 ರ ಸಂಜೆ 5.30 ರವರೆಗೆ ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಡಗು ಜಿಲ್ಲೆ ಹಾಗೂ ಜಿಲ್ಲಾ ಅಭಿವೃದ್ಧಿ ನಿರೀಕ್ಷಕರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಕಚೇರಿ, ಕೊಡಗು ಜಿಲ್ಲೆ ಇವರನ್ನು ಹಾಗೂ ದೂ.ಸಂ.08272-228010, 9482194105 ನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

Read More

ಮಡಿಕೇರಿ ಆ.23 NEWS DESK  : ನೆಲ್ಲಿಹುದಿಕೇರಿಯ ನೈಮ ಎಜುಕೇಷನಲ್ ಮತ್ತು ವೆಲ್ಫೇರ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆ.27 ರಿಂದ ನೆಲ್ಲಿಹುದಿಕೇರಿಯಲ್ಲಿ ‘ಸ್ವಾಭಿಮಾನದ ಬದುಕಿಗೆ ಶಿಕ್ಷಣ’ ಎಂಬ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ನಡೆಯಲಿದೆ ಎಂದು ಟ್ರಸ್ಟ್‍ನ ಅಧ್ಯಕ್ಷ ಒ.ಎಂ.ನೌಷದ್ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸಕ್ತ ಸಾಲಿನ ಅಕ್ಟೋಬರ್ ಕೊನೆಯ ವಾರದಲ್ಲಿ ಬರಲಿರುವ ಕಂದಾಯ ಪರಿವೀಕ್ಷಕರ ಹುದ್ದೆ, ಎಎಸ್‍ಐ ಮತ್ತು ಪಿಡಿಒ ಆಯ್ಕೆಯ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರ್ವ ತಯಾರಿ ನಡೆಸುವ ಅಭ್ಯರ್ಥಿಗಳಿಗೆ ಅಗತ್ಯ ತರಬೇತಿಯಲ್ಲಿ ನೀಡುವ ಉದ್ದೇಶದಿಂದ ನೆಲ್ಲಿಹುದಿಕೇರಿಯ ಶಾದಿ ಮಹಲ್‍ನಲ್ಲಿ ತರಬೇತಿ ಆಯೋಜಿಸಲಾಗಿದೆ. ಈಗಾಗಲೆ ಸುಮಾರು 64 ವಿದ್ಯಾರ್ಥಿಗಳಿಗೆ ಆನ್ ಲೈನ್ ಮೂಲಕ ತರಬೇತಿ ನೀಡುತ್ತಿದ್ದು, ಆ.27ರ ಬಳಿಕ ಪ್ರತಿ ಭಾನುವಾರ ನುರಿತ ವಿಷಯ ತಜ್ಞರಿಂದ ತರಬೇತಿಯನ್ನು ನೀಡಲಾಗುತ್ತದೆಂದು ತಿಳಿಸಿದರು. ತರಬೇತಿ ಶಿಬಿರವನ್ನು ಅಂದು ಬೆಳಿಗ್ಗೆ 10.30 ಗಂಟೆಗೆ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಉದ್ಘಾಟಿಸಲಿದ್ದಾರೆ ಎಂದು ಮಾಹಿತಿ ನೀಡಿದರು. ಜಿಲ್ಲೆಯ ಶೈಕ್ಷಣಿಕ ಮತ್ತು ಸಮಾಜ ಸೇವಾ…

Read More

ಮಡಿಕೇರಿ ಆ.23 NEWS DESK : ನಾಲಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಿಸಲಾಯಿತು. ದಾನಿಗಳಾದ  ಕೋಡಿಮಣಿಯಂಡ ಶರಣ್ ಕುಟ್ಟಪ್ಪ ವಿದ್ಯಾರ್ಥಿಗಳಿಗೆ ಸಮವಸ್ತ್ರ ವನ್ನು ಕೊಡುಗೆಯಾಗಿ ನೀಡಿದ್ದು, ಶಾಲೆಯ ಮುಖ್ಯ ಶಿಕ್ಷಕರು, ಶಿಕ್ಷಕರು ಎಸ್.ಡಿ.ಎಂ.ಸಿ ಸದಸ್ಯರು ಶ್ಲಾಘನೆ ವ್ಯಕ್ತಪಡಿಸಿದರು.

Read More