ಸೋಮವಾರಪೇಟೆ ಸೆ.24 NEWS DESK : ಅಭಿವೃದ್ಧಿ ಮತ್ತು ಸಂಘಟನೆಯನ್ನು ಮಾಡಿದರೆ ಮುಂದಿನ ವರ್ಷ ನಡೆಯುವ ಚುನಾವಣೆಯಲ್ಲಿ ಪಟ್ಟಣ ಪಂಚಾಯಿತಿ ಆಡಳಿತವನ್ನು ಕಾಂಗ್ರೆಸ್ ಪಕ್ಷ ಹಿಡಿಯಬಹುದು ಎಂದು ಶಾಸಕ ಡಾ.ಮಂತರ್‍ಗೌಡ ಹೇಳಿದರು. ಪಟ್ಟಣದ ಮಹಿಳಾ ಸಮಾಜದಲ್ಲಿ ನಡೆದ ನಗರ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ನೆರವೇರಿಸಿ ಮಾತನಾಡಿದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಟ್ಟಣದ ಎಲ್ಲಾ ಬೂತ್‍ಗಳಲ್ಲಿ ನನಗೆ ಉತ್ತಮ ಬೆಂಬಲ ಸಿಕ್ಕಿದೆ. ಪಟ್ಟಣದ ನಿವಾಸಿಗಳ ಕಷ್ಟಸುಖದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿ, ಪ್ರೀತಿ ಗಳಿಸಬೇಕು. ನಾನು ಕೂಡ ಎಲ್ಲಾ ವಾರ್ಡ್‍ಗಳಿಗೆ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಆಲಿಸಿ, ಪರಿಹಾರ ಕಲ್ಪಿಸಲು ಶ್ರಮವಹಿಸುತ್ತೇನೆ ಎಂದು ಅಭಯ ನೀಡಿದರು. ಹಲವು ವರ್ಷಗಳಿಂದ ಪಟ್ಟಣದ ಸರ್ವತೋಮುಖ ಅಭಿವೃದ್ಧಿಯಲ್ಲಿ ಹಿನ್ನೆಡೆಯಾಗಿದೆ ಎಂಬುದನ್ನು ಜನರ ಬಾಯಿಂದ ಕೇಳಿದ್ದೇನೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿರುವುದರಿಂದ ಪಂಚಾಯಿತಿಗೆ ಹೆಚ್ಚಿನ ಅನುದಾನ ತರಲು ಪ್ರಯತ್ನ ಮಾಡುತ್ತೇನೆ. ಈಗಾಗಲೇ ಅಮೃತ್ ಯೋಜನೆಯಲ್ಲಿ ಸರ್ಕಾರ 12 ಕೋಟಿ ರೂ.ಹಣವನ್ನು ಬಿಡುಗಡೆ ಮಾಡಿದೆ. ಈ ಯೋಜನೆಯಲ್ಲಿ ಪಟ್ಟಣಕ್ಕೆ ಹಾರಂಗಿಯಿಂದ ಕುಡಿಯುವ ನೀರು…
ಲೇಖಕ: admin
ಸುಂಟಿಕೊಪ್ಪ ಸೆ.24 NEWS DESK : ಸರ್ಕಾರ ಮಹಿಳೆಯರ ರಕ್ಷಣೆಗಾಗಿ ಮತ್ತು ಸುರಕ್ಷತೆಯ ದಿಸೆಯಲ್ಲಿ ಹಲವು ಕಠಿಣ ರೀತಿಯ ಕಾನೂನುಗಳನ್ನು ಜಾರಿಗೆ ತಂದಿದ್ದು, ಮಹಿಳೆಯರು ಕಾನೂನಿನ ಮಾಹಿತಿಯನ್ನು ಪಡೆದುಕೊಂಡು ಇತರರಿಗೆ ತಿಳಿಸುವಂತೆ ಠಾಣಾಧಿಕಾರಿ ಚಂದ್ರಶೇಖರ್ ಮಾಹಿತಿ ನೀಡಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ನಾಕೂರು ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾನ್‍ಬೈಲ್ ಸರಕಾರಿ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ಕಾನ್‍ಬೈಲ್ ಕಾರ್ಯಕ್ಷೇತ್ರದ ಸ್ವಸಹಾಯ ಸಂಘದ ಮಹಿಳೆಯರಿಗೆ ನಡೆದ ಕಾನೂನು ಅರಿವು ಕಾರ್ಯಕ್ರಮ ನಡೆಯಿತು. ಸುಂಟಿಕೊಪ್ಪ ಪೊಲೀಸ್ ಠಾಣಾಧಿಕಾರಿ ಚಂದ್ರಶೇಖರ್ ಮಾತನಾಡಿ, ವಾಹನಗಳನ್ನು ಚಲಾಯಿಸುವಾಗ ವಾಹನದ ಪರವನಾಗಿ ದಾಖಲಾತಿಗಳನ್ನು ವಾಹನದಲ್ಲಿರಿಸಿಕೊಂಡಿರಬೇಕು, ಸಂಚಾರಿ ನಿಯಮವನ್ನು ಪಾಲಿಸಬೇಕು, ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ವಾಹನಗಳನ್ನು ಚಲಾಯಿಸಲು ನೀಡಬೇಡಿ ತಪ್ಪಿದಲ್ಲಿ ಪೋಷಕರಿಗೆ ದಂಡ ಹಾಗೂ ಜೈಲು ಶಿಕ್ಷೆಯಾಗಲಿದೆ ಎಂದು ಎಚ್ಚರಿಕೆ ನೀಡಿದರು. ಪ್ರಸ್ತುತ ದಿನಗಳಲ್ಲಿ ಮಹಿಳೆಯರು ಮತ್ತು ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿದೆ. ಹೆಣ್ಣು ಮಕ್ಕಳು ಮತ್ತು ಮಹಿಳೆಯರಿಗೆ ಮೇಲೆ ದೌರ್ಜನ್ಯ,…
ಮಡಿಕೇರಿ ಸೆ.24 NEWS DESK : ಕೊಡಗು ಜಿಲ್ಲಾ ವಿಷ್ಣು ಸೇನಾ ಸಮಿತಿ ವತಿಯಿಂದ ಕನ್ನಡದ ಹಿರಿಯ ನಟ ಸಾಹಸಸಿಂಹ ಡಾ.ವಿಷ್ಣುವರ್ಧನ್ ಅವರ 74ನೇ ಜನ್ಮದಿನವನ್ನು ಸಂಭ್ರಮದಿಂದ ಆಚರಿಸಲಾಯಿತು. ನಗರದ ಅಂಬೇಡ್ಕರ್ ಭವನದಲ್ಲಿ ವಿಷ್ಣು ಸೇನಾ ಸಮಿತಿಯ ಅಧ್ಯಕ್ಷ ಎಂ.ಹೆಚ್.ರಫೀಕ್ ದಾದ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಕ್ ಕತ್ತರಿ ಸಂಭ್ರಮಿಸಿದರು. ಖ್ಯಾತ ಜೂನಿಯರ್ ವಿಷ್ಣುವರ್ಧನ್ ಮುಖ್ಯ ಅತಿಥಿಗಳಾಗಿ ಆಗಮಿಸಿ ಸಾರ್ವಜನಿಕರನ್ನು ರಂಜಿಸಿದರು. ಹಿರಿಯ ಪತ್ರಕರ್ತ, ರವಿ ಪ್ರೆಸ್‍ನ ಮಾಲೀಕ ಎಂ.ಪಿ.ಕೃಷ್ಣರಾಜ್ ಮಾತನಾಡಿ, ವಿಷ್ಣು ಸೇನಾ ಸಮಿತಿಯ ವತಿಯಿಂದ ಹಲವು ಜನಪರ ಕೆಲಸ ಕಾರ್ಯಗಳು ಮಾಡುತ್ತಾ ಬರಲಾಗಿದೆ. ಮುಂದೆಯೂ ಉತ್ತಮ ಕಾರ್ಯಕ್ರಮ ನಡೆಸುವಂತಾಗಲಿ ಎಂದು ಶುಭ ಹಾರೈಸಿದರು. ಕೊಡಗು ಹಿತರಕ್ಷಣಾ ವೇದಿಕೆಯ ಅಧ್ಯಕ್ಷ ರವಿಗೌಡ ಮಾತನಾಡಿ, ಎಲ್ಲರೂ ಸೇರಿ ಒಂದು ಸಂಘವನ್ನು ಕಟ್ಟಬಹುದು ಆದರೆ ಅದನ್ನು ಉಳಿಸಿ ಬೆಳೆಸಿಕೊಂಡು ಹೋಗುವುದು ಬಹಳ ಕಷ್ಟ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅಭಿಮಾನಿಗಳ ಸಂಘದ ಜಿಲ್ಲಾಧ್ಯಕ್ಷ ಮುನೀರ್ ಮಾಚರ್ ಹಾಗೂ ಸಮಾಜ…
ಕಣಿವೆ ಸೆ.24 NEWS DESK : ತಲಾ ತಲಾಂತರಗಳಿಂದ ಅರಣ್ಯದೊಳಗೆ ಹಾಗೂ ಅರಣ್ಯದಂಚಿನಲ್ಲಿ ವಾಸಿಸುತ್ತಿರುವ ಜೇನುಕುರುಬ ಹಾಗೂ ಕೊರಗ ಸಮುದಾಯದ ಗಿರಿಜನರಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಯಾವೊಂದು ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿಲ್ಲ ಎಂದು ಆರೋಪಿಸಿ ಸರ್ಕಾರಗಳ ಧೋರಣೆಗಳ ವಿರುದ್ಧ ಬೃಹತ್ ಜನಾಂದೋಲನ ರೂಪಿಸಿ ಪ್ರತಿಭಟನೆ ನಡೆಸುವ ಸಂಬಂಧ ಕೊಡಗು, ಮೈಸೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಆದಿವಾಸಿ ಪ್ರಮುಖರ ಸಭೆ ಬಸವನಹಳ್ಳಿಯಲ್ಲಿ ನಡೆಯಿತು. ಆದಿವಾಸಿಗಳ ಸಮುದಾಯದ ರಾಜ್ಯ ನಾಯಕ ಜೆ.ಟಿ.ರಾಜಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮೂರು ಜಿಲ್ಲೆಗಳ 50ಕ್ಕೂ ಹೆಚ್ಚು ಆದಿವಾಸಿ ಪ್ರಮುಖರು ಪಾಲ್ಗೊಂಡಿದ್ದರು. ಪ್ರಾಚೀನ ಕಾಲದಿಂದಲೂ ಅರಣ್ಯದಲ್ಲಿ ವಾಸಿಸುತ್ತಾ ಬದುಕು ನಡೆಸಿಕೊಂಡು ಬರುತ್ತಿರುವ ಜೇನು ಕುರುಬ ಹಾಗೂ ಕೊರಗ ಸಮುದಾಯಗಳ ಪ್ರಾಚೀನ ಬುಡಕಟ್ಟು ಗುಂಪನ್ನು ಸರ್ಕಾರಗಳು ಅನೇಕ ದಶಕಗಳಿಂದಲೂ ಕಡೆಗಣಿಸುತ್ತಲೇ ಬಂದಿವೆ. ಹುಲಿ ಸಂರಕ್ಷಣಾ ಯೋಜನೆ ಹಾಗೂ ಕಸ್ತೂರಿ ರಂಗನ್ ವರದಿ ಜಾರಿಯ ಹೆಸರಿನಲ್ಲಿ ಆದಿವಾಸಿಗಳನ್ನು ಒಕ್ಕಲೆಬ್ಬಿಸಲು ಪರಿಸರವಾದಿಗಳ ಮಾತು ಕೇಳಿ ಗಿರಿಜನರನ್ನು ಒಕ್ಕಲೆಬ್ಬಿಸಲು ನಡೆಸಿರುವ ಹುನ್ನಾರದ ವಿರುದ್ಧ ಶೀಘ್ರದಲ್ಲಿಯೇ…
ಮಡಿಕೇರಿ ಸೆ.24 NEWS DESK : ಮಡಿಕೇರಿಯ ಅಶೋಕಪುರ ಗಣಪತಿ ಉತ್ಸವ ಸಮಿತಿಯಿಂದ ಪ್ರತಿಷ್ಠಾಪಿಸಿದ್ದ ಗೌರಿ ಗಣೇಶ ಮೂರ್ತಿ ವಿಸರ್ಜನೋತ್ಸವವು ಸಂಭ್ರಮದಿಂದ ನಡೆಯಿತು. 50ನೇ ವರ್ಷದ ಗಣೇಶೋತ್ಸವ ಸಂಭ್ರಮದಲ್ಲಿರುವ ಅಶೋಕಪುರದ ಗಣಪತಿ ಉತ್ಸವ ಸಮಿತಿ ಅಲ್ಲಿನ ಶ್ರೀ ಅನ್ನಪೂರ್ಣೆಶ್ವರಿ ದೇಗುಲದಲ್ಲಿ ಪ್ರತಿಷ್ಠಾಪಿಸಿದ್ದ ಉತ್ಸವ ಮೂರ್ತಿಗಳನ್ನು ಮಂಟಪದಲ್ಲಿಟ್ಟು ವಿಶೇಷ ಪೂಜೆ ಸಲ್ಲಿಸಿ ಶೋಭಾಯಾತ್ರೆಗೆ ಚಾಲನೆ ನೀಡಿತು. ಮಂಟಪದಲ್ಲಿ ‘ಗಣಪತಿಯಿಂದ ಶತಮಹಿಷಿಯ ಸಂಹಾರ” ಎಂಬ ಕಥಾ ಸಾರಾಂಶವನ್ನು ಅಳವಡಿಸಲಾಗಿತ್ತು. ಗಣೇಶ ಸೇರಿದಂತೆ ದೇವಾನು ದೇವತೆ, ಅಸುರರ ಕಲಾಕೃತಿಗಳು ಮಂಟಪದ ಅಂದವನ್ನು ಹೆಚ್ಚಿಸಿದವು. ರಂಗುರಂಗಿನ ಕಾಗದದ ಸ್ಪೋಟಕಗಳು, ಚಿಮ್ಮುವ ಬೆಂಕಿ, ಪಟಾಕಿಗಳು ಮೈನವಿರೇಳುವಂತೆ ಮಾಡಿದವು. ಗಜಾನನನಿಂದ ಶತಮಹಿಷಿಯ ಸಂಹಾರ ಕಥಾ ಸಾರಾಂಶವನ್ನು ಸಮಿತಿ ಮನಮೋಹಕವಾಗಿ ಪ್ರಸ್ತುತಪಡಿಸಿತು. ಅಶೋಕಪುರದಿಂದ ಹೊರಟ ಮಂಟಪ ಫೀಲ್ಡ್ ಮಾರ್ಷಲ್ ಕಾರ್ಯಪ್ಪ, ಜನರಲ್ ತಿಮ್ಮಯ್ಯ ವೃತ್ತ, ಮಂಗೇರಿರ ಮುತ್ತಣ್ಣ ವೃತ್ತ, ಇಂದಿರಾಗಾಂಧಿ ವೃತ್ತದಲ್ಲಿ ಜನರಿಗೆ ಪ್ರದರ್ಶನ ನೀಡಿತು. ಅದ್ದೂರಿಯಾಗಿ ನಡೆದ ಗಣೇಶ ವಿಜರ್ಸನೆ ಶೋಭಾಯಾತ್ರೆಗೆ ನಗರ ಸೇರಿದಂತೆ ವಿವಿಧೆಡೆಗಳಿಂದ ಜನರು ಆಗಮಿಸಿ ಕಟ್ಟಡ,…
ಸುಂಟಿಕೊಪ್ಪ ಸೆ.24 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಕಾನ್‍ಬೈಲ್ ಒಕ್ಕೂಟ, ಶ್ರೀ ತಲಕಾವೇರಿ ಜ್ಞಾನ ವಿಕಾಸ ಕೇಂದ್ರ ಹಾಗೂ ಸೇವಾ ಭಾರತಿ ಸಹಯೋಗದೊಂದಿಗೆ ಗ್ರಾಮಸ್ಥರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಕಾನ್‍ಬೈಲ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಶಿಬಿರದಲ್ಲಿ ಸ್ತ್ರೀರೋಗ, ತಜ್ಞರು ಮಧುಮೇಹ, ರಕ್ತದೊತ್ತಡ, ವಿವಿಧ ಕಾಯಿಲೆಗಳಿಗೆ ಸಂಬಂಧಿಸಿದ ನುರಿತ ತಜ್ಞರುಗಳಿಂದ ತಪಾಸಣೆ ನಡೆಸಿ ಜೌಷಧಿಗಳನ್ನು ನೀಡಲಾಯಿತು. ಸೇವಾ ಭಾರತೀಯ ಅಧ್ಯಕ್ಷ ಚಂದ್ರನ್ ಹಾಗೂ ತಿಮ್ಮಪ್ಪ ಅವರ ನೇತೃತ್ವದಲ್ಲಿ ಡಾ.ಶಶಾಂಕ್, ಡಾ.ನಾರಾಯಣ್ ತಂಡದವರು ಆಗಮಿಸಿ 100ಕ್ಕೂ ಹೆಚ್ಚು ಮಂದಿಯನ್ನು ತಪಾಸಣೆ ನಡೆಸಿದರು. ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶಿಬಿರದ ಸದುಪಯೋಗವನ್ನು ಪಡಿಸಿಕೊಂಡರು. ಈ ಸಂದರ್ಭ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾನ್‍ಬೈಲ್ ಒಕ್ಕೂಟ ಹಾಗೂ ಶ್ರೀ ತಲಕಾವೇರಿ ಜ್ಞಾನ ವಿಕಾಸ ಕೇಂದ್ರ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಸಿದ್ದಾಪುರ NEWS DESK ಸೆ.24 : ಸೂರಿಗಾಗಿ ಸಮರ ಘೋಷವಾಕ್ಯದೊಂದಿಗೆ ಭಾರತ ಕಮ್ಯುನಿಸ್ಟ್ ಪಕ್ಷ ರಾಜ್ಯ ವ್ಯಾಪಿ ನಡೆಸುತ್ತಿರುವ ಹೋರಾಟದ ಭಾಗವಾಗಿ ಪೊನ್ನಂಪೇಟೆ ತಾಲ್ಲೂಕು ಕಾರ್ಯನಿರ್ವಾಹಣಾಧಿಕಾರಿ ಕಛೇರಿ ಎದುರು ಪಕ್ಷದ ಕೊಡಗು ಘಟಕ ಪ್ರತಿಭಟನೆ ನಡೆಸಿತು. ಜಿಲ್ಲೆಯಲ್ಲಿರುವ ಬಡವರಿಗೆ ನಿವೇಶನ ನೀಡಬೇಕು. ವಸತಿ ರಹಿತರ ನೋಂದಣಿ ಕಾರ್ಯ ಸ್ಥಗಿತಗೊಂಡಿದ್ದು, ಇದನ್ನು ಪುನರಾರಂಭಿಸಬೇಕು ಎಂದು ಹೊರಾಟಗಾರರು ಒತ್ತಾಯಿಸಿದರು. ನಗರದ ಬಸ್ ನಿಲ್ದಾಣದಿಂದ ತಾಲ್ಲೂಕು ಕಛೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ನಿವೇಶನ ರಹಿತರು, ಕಮ್ಯುನಿಷ್ಟ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಹೋರಾಟವನ್ನು ತೀವ್ರಗೊಳಿಸುವ ಎಚ್ಚರಿಕೆ ನೀಡಿದರು. ಭಾರತ ಕಮ್ಯುನಿಷ್ಟ್ ಪಕ್ಷದ ರಾಜ್ಯ ಸಹ ಕಾರ್ಯದರ್ಶಿ ಬಿ.ಅಮ್ಜದ್ ಮಾತನಾಡಿ ಸೂರಿಗಾಗಿ ಸಮರ ಘೋಷಣೆಯಲ್ಲಿ 50 ಲಕ್ಷಕ್ಕೂ ಹೆಚ್ಚು ಕುಟುಂಬಗಳಿಗೆ ನಿವೇಶನ ಒದಗಿಸುವಂತೆ ಪಕ್ಷದ ವತಿಯಿಂದ ರಾಜ್ಯವ್ಯಾಪ್ತಿ ಹೋರಾಟ ನಡೆಸಲಾಗುತ್ತಿದೆ. ರಾಜ್ಯದಲ್ಲಿ ಒತ್ತುವರಿದಾರರಿಗೆ ಭೋಗ್ಯಕ್ಕೆ ಸರ್ಕಾರಿ ಜಮೀನು ನೀಡುವ ಪ್ರಕ್ರಿಯೆ ನಡೆಯುತ್ತಿದ್ದು, ಇದು ನಿವೇಶನ ರಹಿತ ಬಡವರ ವಿರೋಧಿ ನೀತಿಯಾಗಿದೆ ಎಂದು ಆರೋಪಿಸಿದರು. ಮೊದಲು ಬಡವರಿಗೆ ನಿವೇಶನ…
ಮಡಿಕೇರಿ ಸೆ.24 NEWS DESK : ಗೊಣಿಕೊಪ್ಪಲು ಕಾಫಿ ಮಂಡಳಿ ವತಿಯಿಂದ ನಿಟ್ಟೂರು ಗ್ರಾ.ಪಂ ಸಹಯೋಗದೊಂದಿಗೆ ಬೆಳೆಗಾರರಿಗೆ ಗ್ರಾಮ ಮಟ್ಟದ ಕಾಫಿ ಕಾರ್ಯಾಗಾರ ನಡೆಯಿತು. ನಿಟ್ಟೂರು ಗ್ರಾ.ಪಂ ಸಮುದಾಯ ಭವನದಲ್ಲಿ ಕಾರ್ಯಾಗಾರದಲ್ಲಿ ಕಾಫಿ ಮಂಡಳಿಯ ಉಪನಿರ್ದೇಶಕರಾದ ಡಾ.ಶ್ರೀದೇವಿ ಮತ್ತು ಗೊಣಿಕೊಪ್ಪಲು ಕಾಫಿ ಮಂಡಳಿಯ ಸಂಪರ್ಕಾಧಿಕಾರಿ ಮುಖಾರೀಬ್ ಮಾತನಾಡಿ, ಬೆಳೆಗಾರರಿಗೆ ಅತೀ ಹೆಚ್ಚಿನ ಮಳೆಯಿoದಾಗಿ ಕಾಫಿ ಗಿಡಗಳಲ್ಲಿ ಕೊಳೆರೋಗ ನಿರ್ವಹಣೆ ಮತ್ತು ಕಾಫಿ ಉದುರುವುದರ ಬಗ್ಗೆ ಹಾಗೂ ಮರು ನಾಟಿ, ಗೋಡೌನ್, ಕಾಫಿ ಕಣ, ಹೊಸ ಕೆರೆ, ಬಾವಿ, ಸ್ಪ್ರಿಂಕ್ಲರ್ ಉಪಕರಣ, ಮೋಟಾರ್, ಮಿನಿ ಟ್ರ್ಯಾಕ್ಟರ್ ಮುಂತಾದವುಗಳಿಗೆ ಸಬ್ಸಿಡಿಯನ್ನು ಕಾಫಿ ಮಂಡಳಿಯಿಂದ ನೀಡುತ್ತಿರುವ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭ ನಿಟ್ಟೂರು ಗ್ರಾ.ಪಂ ಅಧ್ಯಕ್ಷ ಅಮ್ಮುಣಿ, ಉಪಾಧ್ಯಕ್ಷ ಚಕ್ಕೇರ ಸೂರ್ಯ ಅಯ್ಯಪ್ಪ, ಸದಸ್ಯರಾದ ಕಾಟಿ ಮಾಡ ಶರೀನ್ ಮುತ್ತಣ್ಣ, ಪಡಿಞರಂಡ ಕವಿತಾ ಪ್ರಭು, ಗ್ರಾ.ಪಂಚಾಯತ್ ಅಭಿವೃದ್ದಿ ಅಧಿಕಾರಿಗಳಾದ ಸುರೇಶ್, ಪ್ರಮುಖರಾದ ಪಾರುವಂಗಡ ಪವನ್, ಮುಕ್ಕಾಟಿರ ಪ್ರಿಸ್ಸ್ ಮುಂತಾದವರು ಹಾಜರಿದ್ದರು.
ಮಡಿಕೇರಿ ಸೆ.24 NEWS DESK : ಭಾಗಮಂಡಲದ ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಮಡಿಕೇರಿ ತಾಲ್ಲೂಕು ಮಟ್ಟದ ಪದವಿ ಪೂರ್ವ ಕಾಲೇಜು ವಿಭಾಗದ ವಾಲಿಬಾಲ್ ಪಂದ್ಯಾವಳಿಯಲ್ಲಿ ಹೊದವಾಡದ ರಾಫೆಲ್ಸ್ ಇಂಟರ್ನ್ಯಾಷನಲ್ ಪಿಯು ಕಾಲೇಜು ಬಾಲಕರ ತಂಡ ಚಾಂಪಿಯನ್ ಪ್ರಶಸ್ತಿಯನ್ನು ಅಲಂಕರಿಸಿ, ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ಫೈನಲ್ ಪಂದ್ಯದಲ್ಲಿ ಮಡಿಕೇರಿಯ ಸಂತ ಮೈಕಲರ ಪಿಯು ಕಾಲೇಜು ತಂಡವನ್ನು 2-0 ನೇರ ಸೆಟ್ ಗಳಿಂದ ಮಣಿಸಿ ರಾಫೆಲ್ಸ್ ಪಿಯು ಕಾಲೇಜು ತಂಡವು ಪ್ರಶಸ್ತಿ ಗೆದ್ದಿತ್ತು. ಸೆಮಿಫೈನಲ್ ಪಂದ್ಯದಲ್ಲಿ ಆತಿಥೇಯ ಕಾವೇರಿ ಕಾಲೇಜು ತಂಡವನ್ನು 2-1 ಸೆಟ್ ಗಳ ಅಂತರದಿಂದ ಸೋಲಿಸಿತು. ಕ್ವಾಟರ್ ಫೈನಲ್ ಪಂದ್ಯದಲ್ಲಿ ಅರುಣ ಪದವಿ ಪೂರ್ವ ಕಾಲೇಜು ಚೇರಂಬಾಣೆ ತಂಡವನ್ನು 2-0 ನೇರ ಸೆಟ್ ಗಳಿಂದ ಸೋಲಿಸಿತ್ತು. ರಾಫೆಲ್ಸ್ ಇಂಟರ್ನ್ಯಾಷನಲ್ ಪಿಯು ಕಾಲೇಜು ತಂಡವು ಸತತ ಮೂರನೇ ಬಾರಿಗೆ ಮಡಿಕೇರಿ ತಾಲೂಕಿನ ಮಟ್ಟದ ಪದವಿ ಪೂರ್ವ ಕಾಲೇಜು ವಿಭಾಗದ ಬಾಲಕರ ವಾಲಿಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ್ದು,ಕಳೆದ ವರ್ಷ ಹಾಸನದಲ್ಲಿ ನಡೆದ…
ಮಡಿಕೇರಿ NEWS DESK ಸೆ.23 : ವಿರಾಜಪೇಟೆ ತಾಲ್ಲೂಕಿನ ಬೆಳ್ಳರಿಮಾಡು ಗ್ರಾಮ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದೆ. ತೋಟಗಳಿಗೆ ನುಗ್ಗಿ ಬೆಳೆ ನಷ್ಟ ಮಾಡುತ್ತಿರುವ ಗಜಪಡೆ ಮನೆಯಂಗಳಕ್ಕೂ ಬಂದು ಆತಂಕ ಮೂಡಿಸುತ್ತಿವೆ. ಗ್ರಾಮದ ಪುಟ್ಟಿಚಂಡ ಪದ್ಮಿನಿ ಮುದ್ದಪ್ಪ ಅವರ ಕಾಫಿ ತೋಟಕ್ಕೆ ತಡರಾತ್ರಿ ನಾಲ್ಕು ಕಾಡಾನೆಗಳು ದಾಳಿ ಮಾಡಿವೆ. ಬೆಳೆ ಹಾನಿ ಮಾಡಿದ್ದು, ಕಾಡನೆಗಳ ಸಂಚಾರದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಕಳೆದ ಅನೇಕ ದಿನಗಳಿಂದ ಈ ಭಾಗದಲ್ಲಿ ಕಾಡಾನೆಗಳ ಹಿಂಡು ಉಪಟಳ ನೀಡುತ್ತಿರುವ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ಇದ್ದರೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲವೆಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಅಪಾರ ಬೆಳೆ ನಷ್ಟವಾಗುತ್ತಿರುವುದಲ್ಲದೆ, ಮನೆಯಿಂದ ಹೊರಗೆ ಬರಲು ಭಯವಾಗುತ್ತಿದೆ ಎಂದು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.






