ಮಡಿಕೇರಿ ಸೆ.23 NEWS DESK : ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ ಹಾಗೂ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿಗಳಿಗೆ ಮತ್ತು ಸಂಸ್ಥೆಗಳಿಗೆ ರಾಜ್ಯ ಪ್ರಶಸ್ತಿ ನೀಡಲು ನಾಮ ನಿರ್ದೇಶನಗಳನ್ನು ಸಲ್ಲಿಸಲು ಹಾಗೂ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಮಕ್ಕಳ ದಿನಾಚರಣೆ-2024ರ ಪ್ರಯುಕ್ತ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣದ ರಕ್ಷಣೆಗಾಗಿ ಧೈರ್ಯ ಸಾಹಸ ಪ್ರದರ್ಶಿಸಿದ 6 ರಿಂದ 18 ವರ್ಷದೊಳಗಿನ ಬಾಲಕರಿಗಾಗಿ “ಹೊಯ್ಸಳ ಮತ್ತು ಬಾಲಕಿಯರಿಗೆ “ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ. ಪ್ರಕರಣವು 01.08.2023 ರಿಂದ 31.07.2024 ರೊಳಗೆ ನಡೆದಿರಬೇಕು. ದಿನಾಂಕ: 01.08.2006 ರಂದು ಹಾಗೂ ನಂತರ ಜನಿಸಿದ ಮಕ್ಕಳು ಈ ಪ್ರಶಸ್ತಿಗೆ ಅರ್ಹರಾಗಿರುತ್ತಾರೆ. ಪ್ರಶಸ್ತಿಗೆ ಆಯ್ಕೆಯಾದ ಮಕ್ಕಳಿಗೆ ತಲಾ ರೂ.10 ಸಾವಿರಗಳ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಒಳಗೊಂಡಿರುತ್ತದೆ. ಇದೇ ಸಂದರ್ಭದಲ್ಲಿ ಮಕ್ಕಳ ಕಲ್ಯಾಣ…
ಲೇಖಕ: admin
ಮಡಿಕೇರಿ ಸೆ.20 NEWS DESK : 66/11 ಕೆವಿ ವಿರಾಜಪೇಟೆ ವಿದ್ಯುತ್ ಉಪ-ಕೇಂದ್ರದಲ್ಲಿ ನಿರ್ವಹಣೆ ಕಾರ್ಯ ನಿರ್ವಹಿಸಬೇಕಾಗಿರುವುದರಿಂದ ಕ.ವಿ.ಪ್ರ.ನಿ.ನಿ ರವರ ಕೋರಿಕೆಯಂತೆ ಸೆ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ 66/11ಕೆವಿ ವಿರಾಜಪೇಟೆ,33/11 ಕೆವಿ ಮೂರ್ನಾಡು ಹಾಗೂ 33/11 ಕೆವಿ ಸಿದ್ದಾಪುರ ವಿದ್ಯುತ್ ಉಪಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ವಿರಾಜಪೇಟೆ, ಬಿ.ಶೆಟ್ಟಗೇರಿ, ಬೇತ್ರೀ, ಕಡಂಗಮರೂರು ಕಾಕೋಟುಪರಂಬು, ಅಮ್ಮತ್ತಿ, ಸಿದ್ದಾಪುರ, ಮಾಲ್ದಾರೆ, ಮೂರ್ನಾಡು, ಮರಗೋಡು, ನಾಪೋಕ್ಲು, ಕಕ್ಕಬೆ, ಅರೆಕಾಡು, ಐಯ್ಯಂಗೇರಿ ಹಾಗೂ ಸುತ್ತಮುತ್ತಲ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.
ಮಡಿಕೇರಿ ಸೆ.23 NEWS DESK : `ಕನ್ನಡ ಭಾಷಾ ಬೋಧಕರು ಕೇವಲ ಬೋಧಕರಲ್ಲ. ಅವರು ಸಮಾಜವನ್ನು ತಿದ್ದುವ ರಾಯಭಾರಿಗಳು. ವಿದ್ಯಾರ್ಥಿಗಳಲ್ಲಿ ಅವರು ಸಾಹಿತ್ಯದ ಮೂಲಕ ಸಾಮಾಜಿಕ ಮೌಲ್ಯಗಳನ್ನು ಬಿತ್ತಬೇಕು’ ಎಂದು ಮೈಸೂರು ವಿಶ್ವವಿದ್ಯಾನಿಲಯದ ಗಾಂಧಿ ಅಧ್ಯಯನ ಕೇಂದ್ರದ ನಿರ್ದೇಶಕ ಪ್ರೊ.ಎಸ್.ನರೇಂದ್ರಕುಮಾರ್ ತಿಳಿಸಿದರು. ದಲಿತ ಸಾಹಿತ್ಯ ಪರಿಷತ್ತಿನ ಕೊಡಗು ಜಿಲ್ಲಾ ಘಟಕದ ವತಿಯಿಂದ ನಗರದ ವಾಣಿಜ್ಯೋದ್ಯಮಿಗಳ ಸಹಕಾರ ಸಂಘದ ಸಭಾಂಗಣದಲ್ಲಿ ನಡೆದ ಕನ್ನಡ ಭಾಷಾ ಬೋಧಕರಿಗಾಗಿ ಏರ್ಪಡಿಸಿದ್ದ ಜಿಲ್ಲಾಮಟ್ಟದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಭಾವನಾಜೀವಿಗಳೂ ಆಗಿರುವ ಅವರು ಸೋಮಾರಿತನ ತೋರದೇ ಸಾಹಿತ್ಯಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. `ಗೈಡ್’ ಮೇಲೆ ಅವಲಂಬಿತರಾಗದೇ ಪಠ್ಯವನ್ನು ಆಳವಾಗಿ ಅಧ್ಯಯನ ಮಾಡಬೇಕು ಎಂದು ಕರೆ ನೀಡಿದರು. `ಕನ್ನಡ ಸಾಹಿತ್ಯದಲ್ಲಿ ಪರಿವರ್ತನೆಯ ಹೆಗ್ಗುರುತುಗಳು’ ವಿಷಯ ಕುರಿತು ಸುದೀರ್ಘ ಉಪನ್ಯಾಸ ನೀಡಿದ ಅವರು, `ಪಂಪ ಹೇಳಿದ `ಮನುಷ್ಯಜಾತಿ ತಾನೊಂದೆ ವಲಂ’ ಮಾತಿನಿಂದ ಹಿಡಿದು ದೇವನೂರ ಮಹಾದೇವ ಅವರ `ಸಂಬಂಜ ಅನ್ನೋದು ದೊಡ್ಡದು ಕಣಾ’ ಎಂಬ ಮಾತಿನವರೆಗೆ ಅನೇಕ ಕವಿವಾಣಿಗಳನ್ನು ಉಲ್ಲೇಖಿಸಿ ಗಮನ ಸೆಳೆದರು.…
ಸುಂಟಿಕೊಪ್ಪ,ಸೆ.23 NEWS DESK : ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸುಂಟಿಕೊಪ್ಪ ಸಂತ ಮೇರಿ ಆಂಗ್ಲ ಮಾಧ್ಯಮ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆಯನ್ನು ತೋರುವುದರೊಂದಿಗೆ ಹಲವು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದಾರೆ. ಕೋಲಾರದ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ 15 ವರ್ಷದ ವಿಭಾಗದ ಟಾಟಾ ಸ್ಪರ್ಧೆಯಲ್ಲಿ ವಿಕೆ ಹರಿಪ್ರಿಯಾ ಪ್ರಥಮ, 14 ವರ್ಷದ ವಿಭಾಗದಲ್ಲಿ ಎಂ.ಎಸ್.ದಿಗಂತ್ ಕುಳಿತೆ ಹಾಗೂ ಕಾಟಾ ವಿಭಾಗದಲ್ಲಿ ಪ್ರಥಮ, 13 ವರ್ಷದ ವಿಭಾಗದಲ್ಲಿ ಆರ್.ಜೀವಿಕ ಕುಮಿತೆ ಹಾಗೂ ಕಾಟಾ ಪ್ರಥಮ, 12 ವರ್ಷ ವಿಭಾಗ ದಲ್ಲಿ ವಿ.ಕೆ.ಚೈತನ್ಯ ಕುಳಿತೆ ಪ್ರಥಮ ಹಾಗೂ ಕಾಟಾ ವಿಭಾಗದಲ್ಲಿ ದ್ವಿತೀಯ, 12 ವರ್ಷ ವಿಭಾಗದಲ್ಲಿ ದಿವಿನ್ ಕಮಿತೆ ಹಾಗೂ ಕಾಟಾ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಸೀನಿಯರ್ ವಿಭಾಗದಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜಿನ ವಿದ್ಯಾರ್ಥಿಗಳಾದ ಕೆ.ಎಸ್.ಅಕ್ಷಯ್ ಹಾಗೂ ಎ.ಅಂಕಿತ್ ಕುಮಿತೆ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾರೆ. ಇವರು ಕರಾಟೆ ತರಬೇತುದಾರರಾದ ರೇನ್ಸಿ ಮುಖೇಶ್ ಅವರ ಶಿಷ್ಯರಾಗಿದ್ದಾರೆ. ವಿದ್ಯಾರ್ಥಿಗಳ ಸಾಧನೆಯನ್ನು ಸಂತ ಮೇರಿ ಆಂಗ್ಲ…
ಬೆಂಗಳೂರು NEWS DESK ಸೆ.23 : ಸಂಚಾರಿ ನಿಯಮಗಳನ್ನು ಶಿಸ್ತಿನಿಂದ ಪಾಲಿಸಿದರೆ ಬಹುತೇಕ ಅಪಘಾತಗಳು ಸಂಭವಿಸುವುದೇ ಇಲ್ಲ. ಕುಡಿದು ವಾಹನ ಓಡಿಸುವುದನ್ನು ನೂರಕ್ಕೆ ನೂರರಷ್ಟು ನಿಲ್ಲಿಸಿ. ನಿಮ್ಮ ಕುಟುಂಬಗಳನ್ನು ಅನಾಥ ಮಾಡಬೇಡಿ ಎಂದು ಯುವ ಸಮೂಹಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ವಿಧಾನಸೌಧದ ಬಳಿ ನೂತನ ಆಂಬ್ಯುಲೆನ್ಸ್ ಗಳಿಗೆ ಹಸಿರು ನಿಶಾನೆ ತೋರಿ ಅವರು ಮಾತನಡಿದರು. ಮೊಬೈಲ್ ಮಾತಾಡಿಕೊಂಡು ವಾಹನ ಓಡಿಸಿದರೆ ಅಪಘಾತಗಳಾಗದೆ ಇರುತ್ತದಾ ಎಂದು ಪ್ರಶ್ನಿಸಿದ ಸಿಎಂ, ನಿಮ್ಮ ಜೀವಕ್ಕೆ ನೀವೇ ಜವಾಬ್ದಾರಿ. ನಿಮ್ಮ ಕುಟುಂಬಕ್ಕೆ ನೀವೇ ಜವಾಬ್ದಾರಿ. ಆದ್ದರಿಂದ ಸಂಚಾರಿ ನಿಯಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸಿ ಎಂದರು. ::: ಲೈಸೆನ್ಸ್ ರದ್ದು ::: ಸಂಚಾರಿ ನಿಯಮ ಪಾಲಿಸದೆ ವಾಹನ ಓಡಿಸುವವರ, ಕುಡಿದು ವಾಹನ ಚಲಾಯಿಸುವರ ಚಾಲನಾ ಪರವಾನಗಿಯನ್ನು ರದ್ದು ಮಾಡಿ ಎಂದು ಮುಖ್ಯಮಂತ್ರಿಗಳು ಇದೇ ಸಂದರ್ಭ ಸಾರಿಗೆ ಸಚಿವರಿಗೆ ಸೂಚನೆ ನೀಡಿದರು. ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಗ್ಯಾರಂಟಿ ಅನುಷ್ಠಾನ ಸಮಿತಿ ರಾಜ್ಯಾಧ್ಯಕ್ಷ ಎಚ್.ಎಂ.ರೇವಣ್ಣ ಸೇರಿ…
ಮಡಿಕೇರಿ ಸೆ.23 NEWS DESK : ಬಾಳುಗೋಡು ಕೊಡವ ಸಮಾಜದ ವಿವಿಧ ಕಾಮಗಾರಿಗಳಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ ನೀಡಿದರು. ಕೊಡವ ಸಮಾಜಗಳ ಅಭಿವೃದ್ದಿಗೆಂದು ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿಯಲ್ಲಿ ಬಿಡುಗಡೆಗೊಂಡಿದ್ದ 10 ಕೋಟಿ ರೂ.ಗಳಲ್ಲಿ ಬಾಳುಗೋಡುವಿನ ಮೈದಾನ. ತಡೆಗೋಡೆ ನಿರ್ಮಾಣ, ಶಾಶ್ವತ ವೇದಿಕೆ ನಿರ್ಮಾಣ, ಯುದ್ದ ಸ್ಮಾರಕ, ಕಟ್ಟಡಗಳಿಗೆ ಪೈಂಟಿ0ಗ್ ಸೇರಿದಂತೆ 6 ಕೋಟಿ ವೆಚ್ಚದ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಲಾಯಿತು. ಈ ಸಂದರ್ಭ ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಕೊಡವ ಸಮಾಜಗಳ ಒಕ್ಕೂಟದ ಅಧ್ಯಕ್ಷ ಕಳ್ಳಿಚಂಡ ವಿಷ್ಣು ಕಾರ್ಯಪ್ಪ ಸೇರಿದಂತೆ ವಿವಿಧ ಸಮಿತಿಗಳ ಸದಸ್ಯರು ಹಾಜರಿದ್ದರು.
ನಾಪೋಕ್ಲು ಸೆ.23 NEWS DESK : ಮಡಿಕೇರಿ ತಾಲ್ಲೂಕು ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಬೆಟ್ಟಗೇರಿ ವಲಯದ ಕಾರುಗುಂದ ಗ್ರಾಮದ ಗೌಡ ಸಮಾಜದಲ್ಲಿ 1855ನೇ ಮದ್ಯವರ್ಜನ ಶಿಬಿರ ನಡೆಯಿತು. 5ನೇ ದಿನದ ಗುಂಪು ಸಲಹೆ ಕಾರ್ಯಕ್ರಮದಲ್ಲಿ ಚಾಮರಾಜ ಜೋಡಿ ರಸ್ತೆ ಮೈಸೂರು ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು ಉಪನ್ಯಾಸಕ ಪಟ್ಟಡ ಶಿವಕುಮಾರ್ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಮಾತನಾಡಿ, ಪ್ರತಿಯೊಬ್ಬ ವ್ಯಕ್ತಿಯ ಒಳಗೆ ಅದ್ಭುತ ಶಕ್ತಿಯಿದೆ. ಅದನ್ನು ಅರಿತು ಕಾರ್ಯೋನ್ಮುಖವಾದರೆ ಅಭಿವೃದ್ಧಿ ಹೊಂದಲು ಸಾಧ್ಯ. ಆದರೆ ಮದ್ಯ ವ್ಯಸನಿಗಳು ಮದ್ಯದಲ್ಲಿ ಶಕ್ತಿಯಿದೆ ಎಂಬ ಭ್ರಮೆಯಿಂದ ಜೀವನ ಹಾಳು ಮಾಡಿಕೊಳ್ಳುತ್ತಾರೆ ಎಂದು ಉಪನ್ಯಾಸಕ ಪಟ್ಟಡ ಶಿವಕುಮಾರ್ ಅಭಿಪ್ರಾಯಪಟ್ಟರು. ಮದ್ಯ ಬಿಡುವವರು ಕುಂಟು ನೆಪಗಳನ್ನು ಹೇಳುತ್ತ ಮುಂದಕ್ಕೆ ಹಾಕುವ ಬದಲು ತಕ್ಷಣವೇ ಮದ್ಯ ತ್ಯಜಿಸಿ, ತಮ್ಮ ಕುಟುಂಬಕ್ಕೆ ಹಾಗೂ ಸಮಾಜಕ್ಕೆ ಆದರ್ಶ ವ್ಯಕ್ತಿಗಳಾಗಿ ಬದುಕಿ ಎಂದು ಶಿಬಿರಾರ್ಥಿಗಳಿಗೆ ಆತ್ಮಸ್ಥೈರ್ಯವನ್ನು ತುಂಬಿದರುದರು. ಕಾರ್ಯಕ್ರಮದಲ್ಲಿ ಮದ್ಯವರ್ಜನ ವ್ಯವಸ್ಥಾಪನಾ ಸಮಿತಿ ಗೌರವ…
ಬೆಂಗಳೂರು ಸೆ.23 NEWS DESK : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರದ 65 ಆಧುನಿಕ ಜೀವ ರಕ್ಷಕ ಸವಲತ್ತುಗಳಿರುವ ಆ್ಯಂಬುಲೆನ್ಸ್ ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆ ಮಾಡಿದರು. ವಿಧಾನಸೌಧ ಮುಂಭಾಗದ ಮೆಟ್ಟಿಲುಗಳ ಮೇಲೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ “ಮುಖ್ಯಮಂತ್ರಿಗಳ ಆಪತ್ಕಾಲಯಾನ ಸೇವೆ” ನೂತನ 65 ಆ್ಯಂಬುಲನ್ಸ್ ಗಳನ್ಮು ಲೋಕಾರ್ಪಣೆ” ಮಾಡಿದರು. ಅಪಘಾತದ ಸಂದರ್ಭದಲ್ಲಿ ಗೋಲ್ಡರ್ ಹವರ್ ಬಹಳ ಮುಖ್ಯ. ಈ ಒಂದು ಗಂಟೆಯಲ್ಲಿ ಅಗತ್ಯ ತುರ್ತು ಚಿಕಿತ್ಸೆ ಸಿಕ್ಕರೆ ನೂರಾರು ಪ್ರಾಣಗಳನ್ನು ಉಳಿಸಲು ಸಾಧ್ಯವಿದೆ. ಈ ಪ್ರಾಣ ಉಳಿಸುವ ಕಾರ್ಯಕ್ಕೆ ಈ ಆ್ಯಂಬುಲೆನ್ಸ್ ಗಳು ನೆರವಾಗುತ್ತವೆ ಎಂದರು. ಸದ್ಯ 65 ಆಧನಿಕ ಮತ್ತು ಪ್ರಾಥಮಿಕ ಆ್ಯಂಬುಲೆನ್ಸ್ ಗಳನ್ನು ಲೋಕಾರ್ಪಣೆ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಇಡೀ ರಾಜ್ಯಕ್ಕೆ ಆಧುನಿಕ ಸವಲತ್ತುಗಳಿರುವ ಆ್ಯಂಬುಲೆನ್ಸ್ ಗಳನ್ನು ವಿಸ್ತರಿಸಲಾಗುವುದು ಎಂದರು. ಸಂಚಾರಿ ನಿಯಮಗಳನ್ನು ಶಿಸ್ತಿನಿಂದ ಪಾಲಿಸಿದರೆ ಬಹುತೇಕ ಅಪಘಾತಗಳು ಸಂಭವಿಸುವುದೇ ಇಲ್ಲ. ಕುಡಿದು ವಾಹನ ಓಡಿಸುವುದನ್ನು ನೂರಕ್ಕೆ ನೂರರಷ್ಟು ನಿಲ್ಲಿಸಿ.…
ನಾಪೋಕ್ಲು ಸೆ.23 NEWS DESK : ಬೆಂಗಳೂರಿನ ಕೊಡಗು ಗೌಡ ಸಮಾಜದ ಪ್ರಾಯೋಜಕತ್ವದಲ್ಲಿ ಓಜಸ್ವಿ ಫೌಂಡೇಶನ್ ವತಿಯಿಂದ ಚೇರಂಬಾಣೆ ಅರುಣಾ ಪದವಿ ಪೂರ್ವ ಕಾಲೇಜಿನಲ್ಲಿ ಪ್ರೌಢಶಾಲಾ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಸಿದ್ಧತೆ ಕುರಿತು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲಾಯಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಸಿ.ಐ.ಟಿ ಪೊನ್ನಂಪೇಟೆ ಉಪನ್ಯಾಸಕರಾದ ಕವಿತಾ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿ ವಿದ್ಯಾರ್ಥಿಗಳಲ್ಲಿ ಏಕಾಗ್ರತೆ, ಸಮಯ ಪಾಲನೆ, ಶಿಸ್ತು ಮತ್ತು ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ನಂತರ ತಮ್ಮ ಭವಿಷ್ಯವನ್ನು ಹೇಗೆ ರೂಪಿಸಿಕೊಳ್ಳಬಹುದು ಎಂಬುದರ ಬಗ್ಗೆ ಪ್ರೊಜೆಕ್ಟರ್ (ಕಿರುತೆರೆ) ಮೂಲಕ ಮನಮುಟ್ಟುವಂತೆ ಸಮಗ್ರ ಮಾಹಿತಿಯನ್ನು ನೀಡಿದರು. ಅರುಣಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಿ.ಎಸ್.ರಾಮಕೃಷ್ಣ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶೆಟ್ಟೆಜನ ಬ್ರಿಜೇಶ್, ವಿದ್ಯಾ ಸಂಸ್ಥೆಯ ಉಪನ್ಯಾಸಕರಾದ ಚನ್ನಬಸಪ್ಪ, ದಾಮೋದರ್ ನಾಯಕ್ ಮತ್ತು ಶಿಕ್ಷಕರಾದ ಪರಮೇಶ್ ಮತ್ತು ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು. ವರದಿ : ದುಗ್ಗಳ ಸದಾನಂದ
ನಾಪೋಕ್ಲು ಸೆ.23 NEWS DESK : ಕುಂಜಿಲದ ಆಕ್ಸ್ ಫರ್ಡ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರೋಟರಿ ಮಡಿಕೇರಿ ವುಡ್ಸ್ ವತಿಯಿಂದ ಇಂಟರ‍್ಯಾಕ್ಟ್ ಕ್ಲಬ್ ಸ್ಥಾಪನೆಯಾಯಿತು. ರೊಟರಿಯನ್ ಬಿ.ಜಿ.ಅನಂತ ಶಯನ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ರೋಟರಿ ವುಡ್ಸ್ ಅಧ್ಯಕ್ಷ ಹರೀಶ್ ಕಿಗ್ಗಾಲ್ ವಿದ್ಯಾರ್ಥಿಗಳಿಗೆ ಉತ್ತಮ ನಾಯಕತ್ವ ಗುಣವನ್ನು ಬೆಳೆಸುವಂತೆ ಕಿವು ಮಾತು ಹೇಳಿದರು. ರೋಟರಿ ಎಸ್.ಎಸ್ ಸ್ಥಾಪನಾ ಅಧ್ಯಕ್ಷ ಸಂಪತ್ ಕುಮಾರ್ ಕ್ಲಬ್ ನ ಜವಾಬ್ದಾರಿಗಳನ್ನು ವಿದ್ಯಾರ್ಥಿಗಳಿಗೆ ಮನ ಮುಟ್ಟುವಂತೆ ಮಾರ್ಗದರ್ಶನ ನೀಡಿದರು. ಶಾಲೆಯ ಇಂಟರ‍್ಯಾಕ್ಟ್ ಕಬ್ಲ್ ನ ಅಧ್ಯಕ್ಷೆ ಹತ್ತನೇ ತರಗತಿ ವಿದ್ಯಾರ್ಥಿನಿ ಅಫ್ರ ಪರ್ವೀನ್ ಇಂಟರ‍್ಯಾಕ್ಟ್ ಕ್ಲಬ್ ನಿಂದ ವಿದ್ಯಾರ್ಥಿಗಳಿಗಾಗುವ ಪ್ರಯೋಜನದ ಬಗ್ಗೆ ಮಾತನಾಡಿದರು. ವೇದಿಕೆಯಲ್ಲಿ ರೋಟರಿ ಕಾರ್ಯದರ್ಶಿ ಕಿರಣ್ ಕುಂದರ್, ಶಾಲೆಯ ವ್ಯವಸ್ಥಾಪಕ ಶಾಹಿದ್ ಅಲಿ, ಶಾಲಾ ಮುಖ್ಯೋಪಾಧ್ಯಾಯಿನಿ ಎಂ.ಎಂ.ಕವಿತ, ಶಾಲಾ ಇಂಟರ‍್ಯಾಕ್ಟ್ ಕ್ಲಬ್ ಸಂಘಟಕರಾದ ಪಿ.ಪಿ.ರಕ್ಷಿತ, ಶಾಲಾ ಅಧ್ಯಾಪಕ ವೃಂದದವರು, ವಿದ್ಯಾರ್ಥಿಗಳು ಹಾಜರಿದ್ದರು. ವರದಿ : ದುಗ್ಗಳ ಸದಾನಂದ.






