ಲೇಖಕ: admin

ವಿರಾಜಪೇಟೆ ಸೆ.23 NEWS DESK : ಕರ್ನಾಟಕ ದಲಿತ ಸಂಘರ್ಷ ಸಮಿತಿ ವಿರಾಜಪೇಟೆ ತಾಲೂಕು ತಾಲ್ಲೂಕು ಸಮಿತಿ ವತಿಯಿಂದ 2023-24 ನೇ ಸಾಲಿನಲ್ಲಿ ವಿರಾಜಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಪ್ರೌಢ ಶಾಲೆಯಲ್ಲಿ ಅತೀ ಹೆಚ್ಚು ಫಲಿತಾಂಶ ಬರಲು ಕಾರಣಕರ್ತರಾದ ಪ್ರಾಂಶುಪಾಲರು, ಉಪನ್ಯಾಸಕರು, ಶಿಕ್ಷಕರು ಹಾಗೂ ಅತೀ ಹೆಚ್ಚು ಅಂಕಗಳನ್ನು ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ವಿರಾಜಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಚಿಲ್ಲವಂಡ ಕಾವೇರಪ್ಪ ಮಾತನಾಡಿ, ವಿದ್ಯಾರ್ಥಿಗಳ ಪರೀಕ್ಷಾ ಸಾಧನೆಯ ಹಿಂದೆ ಶಿಕ್ಷಕರ ಶ್ರಮ ಅಡಗಿದ್ದು ಇನ್ನು ಮುಂದೆಯೂ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಸಾಧನೆ ಮಾಡಬೇಕೆಂದರು. ವಿದ್ಯಾರ್ಥಿಗಳು ಚೆನ್ನಾಗಿ ಓದಿ ರಾಷ್ಟ್ರಕ್ಕೆ ಕೊಡುಗೆಯನ್ನು ಕೊಡಬೇಕೆಂದು ಕಿವಿಮಾತು ಹೇಳಿದರು.ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್.ದಿವಾಕರ ಮಾತನಾಡಿ, ಇಂದಿನ ಕಾರ್ಯಕ್ರಮವು ಅರ್ಥಪೂರ್ಣವಾಗಿದ್ದು ವಿದ್ಯಾರ್ಥಿಗಳ ಸಾಧನೆ ಹಾಗೂ ಸಂಸ್ಥೆಯ ಅಭಿವೃದ್ದಿ ಯಲ್ಲಿ ಶಿಕ್ಷಕರ ಪಾತ್ರ ಅಪಾರವಾಗಿದೆ.…

Read More

ಮಡಿಕೇರಿ ಸೆ.23 NEWS DESK : ಸಮಾಜ ಕಲ್ಯಾಣ ಇಲಾಖಾ ವತಿಯಿಂದ 2024-25 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಕಾನೂನು ಪದವೀಧರರು ಹಿರಿಯ ವಕೀಲರ ಬಳಿ ವೃತ್ತಿ ತರಬೇತಿ ಪಡೆಯುವ ಅವಧಿಯಲ್ಲಿ ಶಿಷ್ಯವೇತನ ಪಾವತಿಸುವ ಸಲುವಾಗಿ ಅರ್ಜಿ ಸಲ್ಲಿಸಲು ದಿನಾಂಕವನ್ನು ವಿಸ್ತರಿಸಲಾಗಿದ್ದು, ಅರ್ಹ ಕಾನೂನು ಪದವೀಧರರು ಸೆಪ್ಟೆಂಬರ್, 30 ರವರೆಗೆ ಇಲಾಖಾ ವೆಬ್‍ಸೈಟ್: www.sw.kar.nic.in ನಲ್ಲಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿಯನ್ನು ಸಲ್ಲಿಸುವ ಪರಿಶಿಷ್ಟ ಜಾತಿಯ ಅಭ್ಯರ್ಥಿಯು ಕೊಡಗು ಜಿಲ್ಲೆಯವರಾಗಿರಬೇಕು. ಅಭ್ಯರ್ಥಿಗಳು 40 ವರ್ಷ ವಯೋಮಿತಿಯೊಳಗಿರಬೇಕು. ಅರ್ಜಿ ಸಲ್ಲಿಸಲು ನಿಗಧಿಪಡಿಸಿದ ಕೊನೆಯ ದಿನಾಂಕಕ್ಕೆ ಮೊದಲು 03 ಅಥವಾ 05 ವರ್ಷಗಳ ಒಳಗಡೆ ಕಾನೂನು ಪದವಿ ಪಡೆದಿರಬೇಕು. ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳನ್ನು ಜಿಲ್ಲಾ ಪ್ರಾಸಿಕ್ಯೂಟ್ ಬಳಿ ಅಥವಾ 20 ವರ್ಷಕ್ಕಿಂತ ಹೆಚ್ಚಿನ ಅನುಭವ ಹೊಂದಿರುವ ವಕೀಲರ ಬಳಿ ತರಬೇತಿಗೆ ನಿಯೋಜಿಸಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳು ಯಾವುದೇ ಕಾರಣಕ್ಕೂ ತರಬೇತಿಯನ್ನು ಪೂರ್ಣಗೊಳಿಸದೆ ಬಿಟ್ಟು ಹೋಗಬಾರದು. ರಾಜ್ಯ ಅಥವಾ ಕೇಂದ್ರ ಸರ್ಕಾರಿ ನೌಕರಿ ಸಿಕ್ಕಿದಲ್ಲಿ ಮಾತ್ರ ನಿಯಮಾನುಸಾರ ಸಡಿಲಗೊಳಿಸಲಾಗುವುದು.…

Read More

ಮಡಿಕೇರಿ ಸೆ.23 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕೊಡಮಾಡುವ ಪ್ರತಿಷ್ಠಿತ “ಗೌರಮ್ಮ ದತ್ತಿ ಪ್ರಶಸ್ತಿ”ಗೆ ಕೊಡಗು ಜಿಲ್ಲೆಯ ಮಹಿಳಾ ಲೇಖಕಿಯರು ಬರೆದು ಪ್ರಕಟಿಸಿದ ಕನ್ನಡ ಭಾಷೆಯ ಕೃತಿಗಳನ್ನು ಆಹ್ವಾನಿಸಲಾಗಿದೆ. 2024-25 ನೇ ಸಾಲಿನ ಪ್ರಶಸ್ತಿ ಪುರಸ್ಕಾರ ಪಡೆಯಲು ಆಸಕ್ತ ಲೇಖಕಿಯರು ತಾವು ರಚಿಸಿದ  ಪುಸ್ತಕದ ನಾಲ್ಕು ಪ್ರತಿಗಳನ್ನು ಅರ್ಜಿಯೊಂದಿಗೆ ಕಳುಹಿಸಿ ತಕ್ಕದ್ದು. 2019ರ ನಂತರ ಪ್ರಕಟಿತ ಪುಸ್ತಕಗಳನ್ನು ಮಾತ್ರ ಕಳುಹಿಸಿತಕ್ಕದ್ದು. ಕಳುಹಿಸುವ ಕೃತಿಗೆ ಯಾವುದೇ ಪ್ರಶಸ್ತಿ ಬಂದಿರಕೂಡದು. ಓರ್ವ ಲೇಖಕಿ ಒಂದು ಪುಸ್ತಕವನ್ನು ಮಾತ್ರ ಕಳುಹಿಸತಕ್ಕದ್ದು. ಕಳುಹಿಸಬೇಕಾದ ವಿಳಾಸ : ಅಧ್ಯಕ್ಷರು, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಅಂಬೇಡ್ಕರ್ ಭವನದ ಬಳಿ, ಸುದರ್ಶನ ವೃತ್ತ, ಮಡಿಕೇರಿ. ಮೊಬೈಲ್ ಸಂಖ್ಯೆ _94483 46276. ಇಲ್ಲಿಗೆ ದಿನಾಂಕ 05.10.2024 ರ ಒಳಗಾಗಿ ತಲುಪಿಸಬೇಕೆಂದು ಪರಿಷತ್ತಿನ ಅಧ್ಯಕ್ಷರಾದ ಎಂ.ಪಿ. ಕೇಶವ ಕಾಮತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಸುಂಟಿಕೊಪ್ಪ ಸೆ.23 NEWS DESK : ಜಿಲ್ಲಾ ಮಟ್ಟದ 14ರ ವಯೋಮನದ ಟೇಬಲ್ ಟೆನ್ನಿಸ್  ಪಂದ್ಯಾವಳಿಯಲ್ಲಿ ಸಂತ ಮೇರಿ ಆಂಗ್ಲ ವಿದ್ಯಾ ಸಂಸ್ಥೆಯ ಬಾಲಕಿಯರ ತಂಡ ಗೆಲುವು ಸಾಧಿಸುವ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅರ‍್ವತೋಕ್ಲುವಿನ ಸರ್ವೂದೈವತ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿಯಲ್ಲಿ ವಿದ್ಯಾ ಸಂಸ್ಥೆಯ ಬಾಲಕಿಯರಾದ ನಿಬ್ರ ಫಾತೀಮಾ, ಅಹಾಲ್ಯ, ಸಮೀಕ್ಷ ಅನುಷ್ಕ, ಚೈತನ್ಯ ಸ್ಪರ್ಧಿಸಿದರು. ಪೈನಲ್ ಪಂದ್ಯದಲ್ಲಿ ಅರ‍್ವತೋಕ್ಲುವಿನ ಸರ್ವೂದೈವತ ಶಾಲೆಯ ತಂಡವನ್ನು ಮಣಿಸುವ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ. ತರುಬೇತುದಾರರಾಗಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಚಂದ್ರಶೇಖರ್ ಕಾರ್ಯನಿರ್ವಹಿಸಿದರು. ಸಂತ ಮೇರಿ ಆಂಗ್ಲ ವಿದ್ಯಾ ಸಂಸ್ಥೆಯ ಬಾಲಕಿಯರ ತಂಡದ ಕ್ರೀಡಾ ಸಾಧನೆಯನ್ನು ಶಾಲೆಯ ವ್ಯವಸ್ಥಾಪಕರಾದ ರೇ.ಫಾ.ವಿಜಯಕುಮಾರ್, ಸಂತ ಮೇರಿ ಆಂಗ್ಲ ವಿದ್ಯಾ ಸಂಸ್ಥೆಯ ಪ್ರಾಂಶುಪಾಲರಾದ ಸೇಲ್ವರಾಜ್ ಪ್ರಶಂಸಿದ್ದಾರೆ.

Read More

ಪುತ್ತೂರು ಸೆ.23 NEWS DESK : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸ್ನಾತಕೋತ್ತರ ಎಂಸಿಎ ವಿಭಾಗದ ನಿರ್ದೇಶಕಿಯಾಗಿ ಡಾ.ಜ್ಯೋತಿಮಣಿ.ಕೆ ಪದ ಸ್ವೀಕಾರ ಮಾಡಿದ್ದಾರೆ. ಇವರು ಎಂಸಿಎ ಮತ್ತು ಎಂಎಸ್‍ಸಿ ಪದವಿಯನ್ನು ಪಡೆದುಕೊಂಡು ಡಾಟಾ ಮೈನಿಂಗ್ ಹಾಗೂ ಮೆಷಿನ್ ಲರ್ನಿಂಗ್ ವಿಭಾಗದಲ್ಲಿ ಸಂಶೋಧನೆಯನ್ನು ಮಾಡಿ ಡಾಕ್ಟರೇಟ್ ಪದವಿಯನ್ನು ಗಳಿಸಿಕೊಂಡಿದ್ದಾರೆ. ಹದಿನೆಂಟು ವರ್ಷಗಳ ಅಧ್ಯಾಪನದ ಅನುಭವವನ್ನು ಹೊಂದಿರುವ ಇವರು ಕಂಪ್ಯೂಟರ್ ವಿಭಾಗದ ನೂತನ ತಂತ್ರಜ್ಞಾನಗಳ ಬಗ್ಗೆ ಅಪಾರ ತಿಳುವಳಿಕೆಯನ್ನು ಹೊಂದಿದ್ದಾರೆ. ಕಾಲೇಜು ಆಡಳಿತ ಮಂಡಳಿಯ ಪದಾಧಿಕಾರಿಗಳು, ಪ್ರಾಂಶುಪಾಲರು, ವಿವಿಧ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು ಪದ ಸ್ವೀಕಾರ ಕಾರ್ಯಕ್ರಮದಲ್ಲಿ ಹಾಜರಿದ್ದು ಶುಭ ಹಾರೈಸಿದರು ಎಂದು ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ ತಿಳಿಸಿದ್ದಾರೆ.

Read More

ಮಡಿಕೇರಿ ಸೆ.23 NEWS DESK  : ನಾಪೋಕ್ಲು ಟೌನ್ ಮುಹಿಯದ್ದೀನ್ ಸುನ್ನಿ ಮುಸ್ಲಿಂ ಜಮಾಅತ್ ಆಶ್ರಯದಲ್ಲಿ “ಮದದೇ ಮದೀನಾ” ಬೃಹತ್ ಮಿಲಾದ್ ಸಮಾವೇಶ ನಾಪೋಕ್ಲುವಿನಲ್ಲಿ ನಡೆಯಿತು.ನಾಪೋಕ್ಲು ಮಾರುಕಟ್ಟೆ ಆವರಣದಲ್ಲಿ ಮೂರು ದಿನಗಳ ಕಾಲ ನಡೆದ ಸಮಾವೇಶಕ್ಕೆ ಜುಮುಅ ನಮಾಜ್‍ನ ನಂತರ ನಾಪೋಕ್ಲು ಟೌನ್ ಮುಹಿಯದ್ದೀನ್ ಸುನ್ನಿ ಮುಸ್ಲಿಂ ಜಮಾಅತ್‍ನ ಅಧ್ಯಕ್ಷ ಎಂ.ಹೆಚ್.ಅಬ್ದುಲ್ ರೆಹಮಾನ್  ಧ್ವಜಾರೋಹಣ ನೆರವೇರಿಸುವ ಮೂಲಕ ಚಾಲನೆ  ನೀಡಿದರು. ಮದದೇ ಮದೀನಾ 2024 ಮಿಲಾದ್ ಸಮಾವೇಶದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ  ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಭಾಗವಹಿಸಿ ಮಾತನಾಡಿ ಸಮಾಜದಲ್ಲಿ ಉತ್ತಮ ಕೆಲಸವನ್ನು ಮಾಡುತ್ತಿರುವ ಸಂಘಟನೆಯು ಮುಂದಿನ ದಿನಗಳಲ್ಲಿ ಮತ್ತಷ್ಟು ಯಶಸ್ಸನ್ನು ಕಾಣುತ್ತಾ ಸಮಾಜಕ್ಕೆ ಉತ್ತಮ ಸಂದೇಶ ನೀಡುವಂತಾಗಲಿ ಎಂದು ಹಾರೈಸಿದರು. ಇದೇ ಸಂದರ್ಭ ಶಾಸಕರನ್ನು  ಜಮಾಅತ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

Read More

ಸೋಮವಾರಪೇಟೆ ಸೆ.23 NEWS DESK : ಚೌಡ್ಲು ವಿಶ್ವ ಮಾನವ ಕುವೆಂಪು ವಿದ್ಯಾ ಸಂಸ್ಥೆಯ ಪ್ರೌಢಶಾಲಾ ವಿದ್ಯಾರ್ಥಿ ಲಾಂಚನ್ ಚೆಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಗೋಣಿಕೊಪ್ಪಲು ಅರ್ವತ್ತೂಕ್ಲುವಿನಲ್ಲಿ ನೆಡದ ಪ್ರೌಢಶಾಲಾ ವಿಭಾಗದ ಜಿಲ್ಲಾ ಮಟ್ಟದ ಚೆಸ್ ಪಂದ್ಯಾವಳಿಯಲ್ಲಿ ಆಯ್ಕೆಯಾಗಿದ್ದು, ಅಕ್ಟೊಂಬರ್ ತಿಂಗಳಲ್ಲಿ ಹಾವೇರಿಯಲ್ಲಿ ನಡೆಯುವ ರಾಜ್ಯ ಮಟ್ಟದ ಪಂದ್ಯಾವಳಿಯಲ್ಲಿ ಕೊಡಗು ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾನೆ.

Read More

ಸೋಮವಾರಪೇಟೆ ಸೆ.23 NEWS DESK : ವಿಶ್ವಕರ್ಮ ಸಮಾಜದ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷ ಎಸ್.ಬಿ.ಯಶ್ವಂತ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸೋಮವಾರಪೇಟೆ ಮಹಿಳಾ ಸಮಾಜದ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ವಿವಿಧ ವಿಷಯಗಳ ಕುರಿತು ಚರ್ಚಿಸಲಾಯಿತು. ಸಂಘದ ಹೆಸರಿನಲ್ಲಿ ಸ್ಥಳ ಖರೀದಿಸಿದ್ದು, ಇಲ್ಲಿಯವರೆಗೂ ಕಟ್ಟಡ ನಿರ್ಮಾಣಕ್ಕೆ ಮುಂದಾಗಿಲ್ಲ. ಎಲ್ಲ ಸದಸ್ಯರು ಸಹಕಾರ ಪಡೆದುಕೊಂಡು ಕಟ್ಟಡ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಸದಸ್ಯರು ಹೇಳಿದರು. ಸಭೆಯಲ್ಲಿ 2024-25ನೇ ಸಾಲಿನ ನೂತನ ಆಡಳಿತ ಮಂಡಳಿ ರಚಿಸಲಾಯಿತು. ಅಧ್ಯಕ್ಷರಾಗಿ ಎಸ್.ಎನ್.ಅಜಯ್, ಉಪಾಧ್ಯಕ್ಷರಾಗಿ ಎನ್.ಪಿ.ರಾಜು, ಪ್ರಧಾನ ಕಾರ್ಯದರ್ಶಿಯಾಗಿ ಎಸ್.ಎ.ಲೋಹಿತಾಶ್ವ, ಉಪ ಕಾರ್ಯದರ್ಶಿಯಾಗಿ ಕೆ.ವಿ.ಯೋಗೇಶ್, ಖಜಾಂಚಿಯಾಗಿ ಎಸ್.ಜೆ.ದೇವದಾಸ್ ಆಯ್ಕೆಯಾದರು. ಮಹಿಳಾ ಘಟಕದ ಅಧ್ಯಕ್ಷರಾಗಿ ರೇಷ್ಮಾ ನಿಖಿಲ್, ಉಪಾಧ್ಯಕ್ಷರಾಗಿ ಶುಭಾ ಬಾಬುರಾಯ ಹಾಗೂ ಕಾರ್ಯದರ್ಶಿಯಾಗಿ ಸರಿತಾ ಅಜಯ್ ಆಯ್ಕೆಯಾದರು.

Read More

ಸಿದ್ದಾಪುರ ಸೆ.23 NEWS DESK : ಜಿಲ್ಲಾ ಕೃಷಿ ವಿಜ್ಞಾನ ಸಂಸ್ಥೆಯ ಹಾಗೂ ಓ.ಡಿ.ಪಿ ಸಂಸ್ಥೆ  ಸಹ ಭಾಗಿತ್ವದಲ್ಲಿ ರೈತ ಮಹಿಳೆಯರಿಗೆ ಒಂದು ದಿನದ ಕೃಷಿ ಚಟುವಟಿಕೆಗಳ ತರಬೇತಿ ಶಿಬಿರ ನಡೆಯಿತು. ಸಿದ್ದಾಪುರ ಗ್ರಾ.ಪಂ ಸಭಾಂಗಣದಲ್ಲಿ ನಡೆದ ಕಾರ್ಯಾಗಾರವನ್ನು ಗ್ರಾ.ಪಂ ಅಧ್ಯಕ್ಷೆ ಪ್ರೇಮಾ ಗೋಪಾಲ ಉದ್ಘಾಟಿಸಿದರು. ನಂತರ ಕೃಷಿ ವಿಸ್ತರಣಾ ಶಿಕ್ಷಣ ಘಟಕದ ಪ್ರಾಧ್ಯಾಪಕ ಡಾ.ದೇವರಾಜ್ ಮಾತನಾಡಿ, ಜಿಲ್ಲೆಯಾದ್ಯಂತ ಪೌಷ್ಠಿಕ ಕೃಷಿ ತರಬೇತಿ ಶಿಬಿರವನ್ನು ಹಮ್ಮಿಕೊಂಡಿದ್ದು, ಇದರ ಭಾಗವಾಗಿ ರೈತ ಮಹಿಳೆಯರು ತಮ್ಮ ಕೈತೋಟದಲ್ಲಿ ಪೌಷ್ಠಿಕವಾಗಿ ತಾಜಾ ತರಕಾರಿ ಬೆಳೆಗಳನ್ನು ಯಾವ ರೀತಿ ಬೆಳೆಯುವ ಬಗ್ಗೆ ಮಾಹಿತಿ ನೀಡಿದರು. ಕೃಷಿ ಇಲಾಖೆಯ ಸ್ವರ್ಣ ಮಾತನಾಡಿ, ಆಧುನಿಕ ಕೃಷಿ ಪದ್ಧತಿ ಬೇಸಾಯ ಹೊಸ ತಳಿಗಳ ಬಗ್ಗೆ ಜಿಲ್ಲಾ ಕೃಷಿ ತರಬೇತಿ ಕೇಂದ್ರದಿಂದ ಹಳ್ಳಿಗಳಿಗೆ ಭೇಟಿ ನೀಡಿ ಮಾಹಿತಿ ನೀಡಲಾಗುತ್ತಿದ್ದು, ರೈತರು ಇದರ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಕರೆ ನೀಡಿದರು. ತೋಟಗಾರಿಕೆ ವಿಸ್ತರಣೆ ವಿಭಾಗದ ಲತ ಮಾತನಾಡಿ ಬೆಳೆಗಳಿಗೆ ಬರುವ ರೋಗಗಳು, ಕೀಟನಾಶಕ ಹಾಗೂ ಆರ್ಥಿಕ…

Read More

ನವದೆಹಲಿ NEWS DESK ಸೆ.23 : ಮೂರು ದಿನಗಳ ಕಾಲ ಅಮೆರಿಕ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿಯವರು ನ್ಯೂಯಾರ್ಕ್‌ನಲ್ಲಿ ಅನಿವಾಸಿ ಭಾರತೀಯರನ್ನುದ್ದೇಶಿಸಿ ಮಾತನಾಡಿದರು.

Read More