ಲೇಖಕ: admin

  ಕುಶಾಲನಗರ, ಸೆ.23 NEWS DESK : ವಿದ್ಯಾರ್ಥಿಗಳಲ್ಲಿ  ವೈಜ್ಞಾನಿಕ ಪ್ರತಿಭೆ ಮತ್ತು ಹವ್ಯಾಸ ಅನ್ವೇಷಣೆಗಳನ್ನು ಗುರುತಿಸಲು ಮತ್ತು ಪ್ರಶಂಸಿಸಲು ವಿಜ್ಞಾನ ವಸ್ತು ಪ್ರದರ್ಶನಗಳು ಉತ್ತಮ ವೇದಿಕೆ ಒದಗಿಸುತ್ತವೆ ಎಂದು ಕೂಡಿಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಯ ಪ್ರಾಂಶುಪಾಲ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ (ಆಡಳಿತ) ಎಂ.ಚಂದ್ರಕಾಂತ್ ಹೇಳಿದರು. ಬೆಂಗಳೂರಿನ ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ವಸ್ತು ಸಂಗ್ರಹಾಲಯದ ಸಹಯೋಗದೊಂದಿಗೆ ಶಾಲಾ ಶಿಕ್ಷಣ ಇಲಾಖೆ ಹಾಗೂ ಕೂಡಿಗೆ ಡಯಟ್ ಸಂಸ್ಥೆಯ ವತಿಯಿಂದ ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ವಿಜ್ಞಾನ ಮತ್ತು ಗಣಿತ ಸಂಘದ‌ ಆಶ್ರಯದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಕೊಡಗು ಜಿಲ್ಲಾಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಉದ್ಘಾಟಿಸಿ ಮಾತನಾಡಿದರು. ವಿಜ್ಞಾನ ವಸ್ತು ಪ್ರದರ್ಶನಗಳು ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಹಾಗೂ ತಾರ್ಕಿಕ ಶಕ್ತಿ ಬೆಳವಣಿಗೆಗೆ ಸಹಕಾರಿಯಾಗಿವೆ ಎಂದರು. ವಿಜ್ಞಾನ ವಸ್ತು ಪ್ರದರ್ಶನದಿಂದ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಪ್ರತಿಭೆಯ ಅನಾವರಣಕ್ಕೆ ಉತ್ತಮ‌ ವೇದಿಕೆಯ ಅವಕಾಶವನ್ನು…

Read More

ಮಡಿಕೇರಿ NEWS DESK ಸೆ.22 : ಕೊಡಗು ಪ್ರೆಸ್ ಕ್ಲಬ್ ನ ನೂತನ ಆಡಳಿತ ಮಂಡಳಿಯ ಪದಗ್ರಹಣ ಸಮಾರಂಭ ಮಡಿಕೇರಿ ಸಮೀಪದ ಕ್ಯಾಪಿಟಲ್ ವಿಲೇಜ್ ನಲ್ಲಿ ನಡೆಯಿತು. ಶಕ್ತಿ ದಿನಪತ್ರಿಕೆಯ ಪ್ರಧಾನ ಸಂಪಾದಕ ಜಿ.ರಾಜೇಂದ್ರ ಅವರು, ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕ್ಲಬ್ ನ ನೂತನ ಅಧ್ಯಕ್ಷರಾಗಿ ಬೊಳ್ಳಜಿರ ಬಿ.ಅಯ್ಯಪ್ಪ ಹಾಗೂ ಪದಾಧಿಕಾರಿಗಳು ಅಧಿಕಾರ ಸ್ವೀಕರಿಸಿದರು. ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಹಾಗೂ ಕೊಡಗು ಪ್ರೆಸ್ ಕ್ಲಬ್ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಅವರು ಪ್ರಮಾಣ ವಚನ ಬೋಧಿಸಿದರು. ಮುಖ್ಯ ಅತಿಥಿಗಳಾಗಿ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷೆ ಬಿ.ಆರ್.ಸವಿತಾ ರೈ ಪಾಲ್ಗೊಂಡಿದ್ದರು.

Read More

ಮಡಿಕೇರಿ NEWS DESK ಸೆ.22 : ಐತಿಹಾಸಿಕ ಮಡಿಕೇರಿ ದಸರಾವನ್ನು ಈ ಬಾರಿ ವಿಜ್ರಂಭಣೆಯಿAದ ಆಚರಿಸಲಾಗುವುದು. ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಮಾನ ಆದ್ಯತೆ ನೀಡಲಾಗುವುದು ಎಂದು ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ತಿಳಿಸಿದ್ದಾರೆ. ನಾಡಹಬ್ಬ ಮಡಿಕೇರಿ ದಸರಾ ಕಚೇರಿಯನ್ನು ಉದ್ಘಾಟಿಸಿ ಮತ್ತು ವಿಶೇಷ ಪೂಜೆಯಲ್ಲಿ ಪಾಲ್ಗೊಂಡ ನಂತರ ಮಾತನಾಡಿದ ಅವರು ಅದ್ದೂರಿ ದಸರಾ ಆಚರಣೆಗೆ ಸರ್ಕಾರದಿಂದ ಅಗತ್ಯ ಅನುದಾನದ ನೆರವು ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಈ ಬಾರಿ ಮಡಿಕೇರಿ ದಸರಾ ಹಬ್ಬವನ್ನು ವಿಭಿನ್ನವಾಗಿ ಆಚರಿಸಲು ನಿರ್ಧರಿಸಲಾಗಿದೆ. ಮಕ್ಕಳ ದಸರಾ, ಮಹಿಳಾ ದಸರಾ, ಜಾನಪದ ಮತ್ತು ಯುವ ದಸರಾದೊಂದಿಗೆ ಕಾಫಿ ದಸರಾವನ್ನೂ ಕೂಡ ಆಯೋಜಿಸಲಾಗಿದೆ. ಕಾಫಿ ಬೆಳೆಗಾರರಿಂದ ಇದಕ್ಕೆ ಉತ್ತಮ ಸ್ಪಂದನ ಕೂಡ ದೊರಕಿದೆ ಎಂದರು. ದಶಮಂಟಪಗಳ ಶೋಭಾಯಾತ್ರೆಯೊಂದಿಗೆ 9 ದಿನಗಳ ಕಾಲ ನಗರದಲ್ಲಿ ನಡೆಯುವ ಅರ್ಥಪೂರ್ಣ ದಸರಾ ಉತ್ಸವ ಆಯೋಜನೆಗಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಇದರ ಯಶಸ್ಸಿಗೆ ಎಲ್ಲರೂ ಸಹಕಾರ ನೀಡಬೇಕು ಎಂದು ಡಾ.ಮಂತರ್ ಗೌಡ ಹೇಳಿದರು. ದಸರಾ…

Read More

ಮಡಿಕೇರಿ NEWS DESK ಸೆ.22 : ಮಡಿಕೇರಿಯ ಶಾಂತಿನಿಕೇತನ ಯುವಕ ಸಂಘ 46 ನೇ ವರ್ಷದ ಅದ್ದೂರಿಯ ಗಣೇಶೋತ್ಸವಕ್ಕೆ ಸಂಭ್ರಮದ ಶೋಭಾಯಾತ್ರೆಯ ಮೂಲಕ ತೆರೆ ಎಳೆಯಿತು. “ಲೋಕ ಕಲ್ಯಾಣಕ್ಕಾಗಿ ಮಯೂರೇಶನಿಂದ ಸಿಂಧು ದೈತ್ಯ ರಾಜನ ಸಂಹಾರ” ಎಂಬ ಕಥಾವಸ್ತುವನ್ನು ಅಳವಡಿಸಿಕೊಂಡಿದ್ದ ವಿದ್ಯುತ್ ದೀಪಲಂಕೃತ ಮಂಟಪ ಶೋಭಾಯಾತ್ರೆಯಲ್ಲಿ ವಿಜ್ರಂಭಿಸಿತು. ಅದ್ದೂರಿ ಶಬ್ಧ ಮತ್ತು ಬೆಳಕಿನ ಆಕರ್ಷಣೆ, ಬೃಹತ್ ಗಾತ್ರದ ದೃಶ್ಯಮೂರ್ತಿಗಳ ಚಲನವಲನ, ಆಕರ್ಷಕ ವೇದಿಕೆಯ ವಿನ್ಯಾಸ, ಕಥಾವಸ್ತುವನ್ನು ಪ್ರಸ್ತುತ ಪಡಿಸಿದ ರೀತಿ ಸಾವಿರಾರು ಜನರನ್ನು ಮಂತ್ರ ಮುಗ್ಧಗೊಳಿಸಿತು. ಶಾಂತಿನಿಕೇತನ ಯುವಕ ಸಂಘದ ಅಧ್ಯಕ್ಷ ಕೆ.ಹೆಚ್.ಚೇತನ್ ಅವರ ನೇತೃತ್ವದಲ್ಲಿ ಸಂಘದ ಸದಸ್ಯರು ಹಾಗೂ ತಾಂತ್ರಿಕ ವರ್ಗ ಶ್ರಮವಹಿಸಿ ಕಾರ್ಯನಿರ್ವಹಿಸಿ ನಗರದ ಜನತೆಯ ಮೆಚ್ಚುಗೆಗೆ ಪಾತ್ರರಾದರು. ಶಿಸ್ತುಬದ್ಧ ಶೋಭಾಯಾತ್ರೆಯ ಮೂಲಕ ಇತರರಿಗೆ ಮಾದರಿಯಾದರು. ಮಹಾಪೂಜೆಯ ನಂತರ ನಗರದಲ್ಲಿ ಶ್ರೀಮಹಾಗಣಪತಿ ಮೂರ್ತಿಯ ಶೋಭಾಯಾತ್ರೆ ಸಾಗಿತು.

Read More

ಮಡಿಕೇರಿ NEWS DESK ಸೆ.22 : ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ನಗರ ಸಂಚಾರ ಮಾಡಿದರು. ನಗರಸಭೆ ವ್ಯಾಪ್ತಿಯ ವಿವಿಧ ಬಡಾವಣೆಗಳಿಗೆ ಭೇಟಿ ನೀಡಿದ ಅವರು ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾರ್ಯವನ್ನು ದಸರಾ ಹಬ್ಬದೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಿದರು. ಇಂದಿರಾನಗರ ರಸ್ತೆ, ಶ್ರೀಕೋದಂಡರಾಮ ದೇವಾಲಯ ಬಳಿಯ ರಸ್ತೆ, ಭಗವತಿ ನಗರದ ಬಳಿಯ ಅಬ್ಬಿಫಾಲ್ಸ್ ರಸ್ತೆ ಸೇರಿದಂತೆ ವಿವಿಧ ಬಡಾವಣೆಗಳ ರಸ್ತೆ ಕಾಮಗಾರಿಗೆ ಶಾಸಕರು ಭೂಮಿಪೂಜೆ ನೆರವೇರಿಸಿದರು. ಗೌಳಿಬೀದಿ ಸೇರಿದಂತೆ ವಿವಿಧೆಡೆ ಅಪೂರ್ಣಗೊಂಡಿರುವ ರಸ್ತೆ ಮತ್ತು ಚರಂಡಿ ಕಾಮಗಾರಿಗಳನ್ನು ಪರಿಶೀಲಿಸಿದ ಅವರು ಗುತ್ತಿಗೆದಾರರೊಂದಿಗೆ ಚರ್ಚಿಸಿದರು. ದಸರಾ ಹಬ್ಬ ಸಮೀಪಿಸುತ್ತಿದೆ, ಯಾವುದೇ ಕಾರಣಕ್ಕೂ ಕಾಮಗಾರಿ ವಿಳಂಬವಾಗಬಾರದು. ಗುಣಮಟ್ಟದೊಂದಿಗೆ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಬೇಕು. ಹಬ್ಬದ ಸಂದರ್ಭ ನಗರದ ರಸ್ತೆಗಳು ಉತ್ತಮ ಸ್ಥಿತಿಯಲ್ಲಿರಬೇಕು, ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಡಾ.ಮಂತರ್ ಗೌಡ ತಿಳಿಸಿದರು. ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ.ವೈ.ರಾಜೇಶ್, ಸದಸ್ಯರುಗಳಾದ ಆರ್.ಪಿ.ಚಂದ್ರಶೇಖರ್, ಮಿನಾಜ್ ಪ್ರವೀಣ್, ನಗರಸಭೆಯ ಮಾಜಿ…

Read More

ಮಡಿಕೇರಿ NEWS DESK ಸೆ.22 : ಉತ್ತಮ ಕಾರ್ಯನಿರ್ವಹಣೆಗಾಗಿ ಮದೆ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಕೊಡಗು ಜಿಲ್ಲಾ ಡಿ.ಸಿ.ಸಿ ಬ್ಯಾಂಕ್ ಪ್ರಶಸ್ತಿ ನೀಡಿದೆ. ಸಂಘದ ಅಧ್ಯಕ್ಷ ಧನಂಜಯ ಅಗೋಳಿಕಜೆ ಪ್ರಶಸ್ತಿ ಸ್ವೀಕರಿಸಿದರು.

Read More

ಮಡಿಕೇರಿ NEWS DESK ಸೆ.22 : ಕುಶಾಲನಗರ ಪುರಸಭೆಯ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಗೆ ಸಂಬಂಧಿಸಿದಂತೆ ಕಾನೂನಿನ ಚೌಕಟ್ಟಿನಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ತಹಶೀಲ್ದಾರರನ್ನು ನಿಂಧಿಸಿರುವ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರ ನಡೆಯನ್ನು ತೀವ್ರವಾಗಿ ಖಂಡಿಸುವುದಾಗಿ ಜಿಲ್ಲಾ ಕಾಂಗ್ರೆಸ್‌ನ ಐಎನ್‌ಟಿಯುಸಿ ಸಂಘಟನೆಯ ಜಿಲ್ಲಾಧ್ಯಕ್ಷ ಬಿ.ಡಿ.ಅಣ್ಣಯ್ಯ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಶಾಲನಗರ ಪುರಸಭೆಗೆ ನಾಮನಿರ್ದೇಶಿತಗೊಂಡಿರುವ ಇಬ್ಬರು ಸದಸ್ಯರುಗಳಿಗೆ ನಿಯಮಾನುಸಾರ ಮತ ಚಲಾಯಿಸುವ ಹಕ್ಕು ಇದೆ. ಈ ವಿಚಾರದಲ್ಲಿ ಕಾನೂನಿನ ಆದೇಶದಂತೆ ತಹಶೀಲ್ದಾರ್ ನಡೆದುಕೊಂಡಿದ್ದಾರೆ. ಆದರೆ ಕಾನೂನಿನ ಬಗ್ಗೆ ಅರಿವಿಲ್ಲದ ಬಿಜೆಪಿ ಮಂದಿ ಪ್ರತಿಭಟನೆ ನಡೆಸಿ ಗೊಂದಲ ಸೃಷ್ಟಿಸಿದ್ದಾರೆ. ಸ್ಥಳಕ್ಕೆ ಬಂದ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ತಮ್ಮ ಸ್ಥಾನದ ಘನತೆಯನ್ನು ಮರೆತು ತಹಶೀಲ್ದಾರರನ್ನು ನಿಂದಿಸಿದ್ದಾರೆ ಎಂದು ಆರೋಪಿಸಿದರು. ವಿರೋಧ ಪಕ್ಷದ ನಾಯಕರು ಸರ್ಕಾರಿ ಅಧಿಕಾರಿಗಳೊಂದಿಗೆ ಯಾವ ರೀತಿ ನಡೆದುಕೊಳ್ಳಬೇಕು ಎಂಬುವುದನ್ನು ಮೊದಲು ಅರಿತುಕೊಳ್ಳಲಿ. ನಾಮನಿರ್ದೇಶಿತ ಸದಸ್ಯರಿಗೆ ಇರುವ ಮತದಾನದ ಹಕ್ಕಿನ ಕುರಿತು ಜಾರಿಯಲ್ಲಿರುವ ಆದೇಶವನ್ನು ಅಧ್ಯಯನ ಮಾಡಲಿ ಎಂದು ಒತ್ತಾಯಿಸಿದರು. ಕೊಡಗು…

Read More

ಮಡಿಕೇರಿ NEWS DESK ಸೆ.22 : ಸರ್ಕಾರದ ನಿರ್ದೇಶನದಂತೆ ಜಿಲ್ಲೆಯ ಎಲ್ಲಾ ಸಹಕಾರ ಬ್ಯಾಂಕ್‌ಗಳಲ್ಲಿ ಕೃಷಿಕರಿಗೆ ಸರ್ಕಾರದ ನಿರ್ದೇಶನದಂತೆ ಶೂನ್ಯ ಬಡ್ಡಿ ದರದಲ್ಲಿ 3 ರಿಂದ 5 ಲಕ್ಷ ರೂ.ವರೆಗೂ ಸಾಲ ನೀಡಲು ಮುಂದಾಗಲಾಗಿದೆ ಎಂದು ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ಅಧ್ಯಕ್ಷರಾದ ಕೊಡಂದೇರ ಪಿ.ಗಣಪತಿ ಅವರು ತಿಳಿಸಿದ್ದಾರೆ. ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ “ಉನ್ನತಿ ಭವನ”ದ ದಿ:ಪಂದ್ಯAಡ.ಐ.ಬೆಳ್ಯಪ್ಪ ಸ್ಮಾರಕ ಸಭಾಂಗಣದಲ್ಲಿ ಶನಿವಾರ ನಡೆದ ಬ್ಯಾಂಕಿನ 99 ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೃಷಿಕರ ಶ್ರೇಯೋಭಿವೃದ್ಧಿಗಾಗಿ ಸರ್ಕಾರ ಹಲವು ಕಾರ್ಯಕ್ರಮ ಹಮ್ಮಿಕೊಂಡಿದೆ. ಆ ನಿಟ್ಟಿನಲ್ಲಿ ಶೂನ್ಯ ಬಡ್ಡಿ ದರದಲ್ಲಿ 5 ಲಕ್ಷ ರೂ.ವರೆಗೂ ಸಾಲವನ್ನು ಸಹಕಾರ ಬ್ಯಾಂಕುಗಳ ಮೂಲಕ ವಿತರಿಸಲಾಗುತ್ತಿದೆ ಎಂದು ಬಾಂಡ್ ಗಣಪತಿ ಅವರು ಹೇಳಿದರು. ‘ಪ್ರಸಕ್ತ ಸಾಲಿನಲ್ಲಿ ಸರ್ಕಾರದ ಕೃಷಿ ಅಲ್ವಾವಧಿ ರೂ.5 ಲಕ್ಷಕ್ಕೆ ಏರಿಸಿದೆ. ಹಾಗೆಯೇ ಮಧ್ಯಮಾವಧಿ ಬಡ್ಡಿ ರಿಯಾಯಿತಿ ಯೋಜನೆಯಡಿ ಗರಿಷ್ಠ ಮಿತಿ ರೂ.15 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಕೊಡಗು…

Read More

ಮಡಿಕೇರಿ NEWS DESK ಸೆ.21 : ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ, ಭಾಗಮಂಡಲ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯ ವತಿಯಿಂದ ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಜಾತ್ರೆಯ ಪ್ರಯುಕ್ತ ಶ್ರೀ ಭಗಂಡೇಶ್ವರ ಮತ್ತು ತಲಕಾವೇರಿ ದೇವಾಲಯಗಳಲ್ಲಿ ವಿವಿಧ ಕಾರ್ಯಕ್ರಮಗಳು ನಡೆಯಲಿದೆ. ಸೆಪ್ಟೆಂಬರ್, 26 ರಂದು ಬೆಳಗ್ಗೆ 8.35 ನಿಮಿಷಕ್ಕೆ ಸಲ್ಲುವ ತುಲಾ ಲಗ್ನದಲ್ಲಿ ಪತ್ತಾಯಕ್ಕೆ ಅಕ್ಕಿ ಹಾಕುವುದು. ಅಕ್ಟೋಬರ್, 04 ರಂದು ಬೆಳಗ್ಗೆ 10.21 ನಿಮಿಷಕ್ಕೆ ಸಲ್ಲುವ ವೃಶ್ಚಿಕ ಲಗ್ನದಲ್ಲಿ ‘ಆಜ್ಞಾ ಮುಹೂರ್ತ’, ಅಕ್ಟೋಬರ್, 14 ರಂದು ಬೆಳಗ್ಗೆ 11.35 ನಿಮಿಷಕ್ಕೆ ಸಲ್ಲುವ ಧನು ಲಗ್ನದಲ್ಲಿ ‘ಅಕ್ಷಯ ಪಾತ್ರೆ ಇರಿಸುವುದು’, ಅಕ್ಟೋಬರ್, 14 ರಂದು ಸಂಜೆ 4.15 ನಿಮಿಷಕ್ಕೆ ಸಲ್ಲುವ ಕುಂಭ ಲಗ್ನದಲ್ಲಿ ‘ಕಾಣಿಕೆ ಡಬ್ಬಿ ಇಡುವುದು’. ಅಕ್ಟೋಬರ್, 17 ರಂದು ಬೆಳಗ್ಗೆ 7.40 ಗಂಟೆಗೆ ಸಲ್ಲುವ ತುಲಾ ಲಗ್ನದಲ್ಲಿ ‘ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ’ ಜರುಗಲಿದೆ.

Read More

ಮಡಿಕೇರಿ ಸೆ.21 NEWS DESK : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನಾ ಇಲಾಖೆ ವತಿಯಿಂದ ಸೋಮವಾರಪೇಟೆ ಗೆಜ್ಜೆ ಹಣಕೋಡು ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಮಾಸಾಚರಣೆ ಹಾಗೂ ಮಾತೃವಂದನಾ ವಿಶೇಷ ಅಭಿಯಾನ ಕಾರ್ಯಕ್ರಮವು ಶನಿವಾರ ನಡೆಯಿತು. ಗ್ರಾ.ಪಂ. ಅಧ್ಯಕ್ಷರಾದ ಗೋಪಾಲಕೃಷ್ಣ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಉತ್ತಮವಾದ ಕಾರ್ಯಕ್ರಮ ವನ್ನು ಹಮ್ಮಿಕೊಂಡಿದ್ದು ಇಂದು ನಮ್ಮ ಆರೋಗ್ಯ ನಮ್ಮ ಕೈನಲ್ಲಿ ಹಿಡಿದಿಟ್ಟುಕೊಳ್ಳುವಂತಹ ಪರಿಸ್ಥಿತಿ ಉಂಟಾಗಿದೆ. ಸಾಧ್ಯವಾದಷ್ಟು ಮನೆಯ ಹಿತ್ತಲಿನಲ್ಲಿ ಬೆಳೆದ ತರಕಾರಿಗಳನ್ನು ಸೆವಿಸೋದು ಉತ್ತಮ ಎಂದರು. ಹಾಗೆಯೇ ಇಲಾಖಾ ವತಿಯಿಂದ ದೊರೆಯುವ ಹಲವಾರು ಯೋಜನೆಯ ಕುರಿತು ತಿಳಿದುಕೊಂಡು ಮುಂದಿನ ದಿನಗಳಲ್ಲಿ ಜನರಿಗೆ ಇಂತಹ ಮಾಹಿತಿಯ ಅವಶ್ಯಕತೆ ಇದೆ. ಈ ಕಾರ್ಯಕ್ರಮದ ಮುಖಾಂತರ ಎಲ್ಲಾ ಜನರ ಮನೆಗಳಿಗೆ ಮಾಹಿತಿ ಪಸರಿಸಲಿ, ಉತ್ತಮ ಸಮಾಜ ನಿರ್ಮಾಣವಾಗಲಿ ಎಂದು ತಿಳಿಸಿದರು. ಶಿಶು ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಸಾವಿತ್ರವ್ವ ಅಧ್ಯಕ್ಷ ಸ್ಥಾನವನ್ನು ವಹಿಸಿ ಮಾತನಾಡಿ ಪೋಷಣ್…

Read More