ಮಡಿಕೇರಿ ಮಾ.16 NEWS DESK : ಸ್ವಚ್ಛ ಕೊಡಗು-ಸುಂದರ ಕೊಡಗು ಹೆಸರಿನಲ್ಲಿ ಪ್ರಸಿದ್ಧ ಪುಣ್ಯ ಕ್ಷೇತ್ರಗಳು ಸೇರಿದಂತೆ ಪ್ರವಾಸಿ ಸ್ಥಳಗಳು, ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಸ್ವಚ್ಛತಾ ಅಭಿಯಾನವು ನಡೆಯಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಅರಣ್ಯ, ಪ್ರವಾಸೋದ್ಯಮ ಹಾಗೂ ಪ್ರವಾಸೋದ್ಯಮ ಇಲಾಖೆಯ ಪಾಲುದಾರರು ಹಾಗೂ ಇತರರ ಸಹಕಾರದಲ್ಲಿ ಸ್ವಚ್ಛ ಹಾಗೂ ಸುಂದರ ಕೊಡಗು ಅಭಿಯಾನ ನಡೆಯಿತು. ನಗರದ ರಾಜಾಸೀಟು ಉದ್ಯಾನವನದಲ್ಲಿ ಅಭಿಯಾನಕ್ಕೆ ಚಾಲನೆ ನೀಡಿದ ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ಕೂರ್ಗ್ ಹೋಟೆಲ್ ಮತ್ತು ರೆಸಾರ್ಟ್ ಅಸೋಷಿಯೇಷನ್ ಅಧ್ಯಕ್ಷರಾದ ದಿನೇಶ್ ಕಾರ್ಯಪ್ಪ, ಹೋಂ ಸ್ಟೇ ಅಸೋಷಿಯೇಷನ್ ಅಧ್ಯಕ್ಷರಾದ ಮೋಂತಿ ಗಣೇಶ್, ಪ್ರವಾಸೋದ್ಯಮ ಪಾಲುದಾರರಾದ ಬಿ.ಜಿ.ಅನಂತಶಯನ, ಜಿ.ಚಿದ್ವಿಲಾಸ್, ಎಫ್‍ಎಂಸಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಬಿ.ರಾಘವ, ಓಂಕಾರೇಶ್ವರ ದೇವಸ್ಥಾನದ ಅಧ್ಯಕ್ಷರಾದ ಚುಮ್ಮಿ ದೇವಯ್ಯ, ಟೂರ್ ಅಂಡ್ ಟ್ರಾವೆಲ್ ಅಸೋಷಿಯೇಷನ್ ಅಧ್ಯಕ್ಷರಾದ ವಸಂತ, ಕೂರ್ಗ್ ಹೋಟೆಲ್ ಮತ್ತು ರೆಸಾರ್ಟ್ ಅಸೋಷಿಯೇಷನ್ ಕಾರ್ಯದರ್ಶಿ ನಾಸೀರ್, ಪ್ರವಾಸೋದ್ಯಮ ಇಲಾಖೆಯ ಸಮಾಲೋಚಕರಾದ ಜತಿನ್, ಇತರರು ಇದ್ದರು. ಚೇಂಬರ್…
ಲೇಖಕ: admin
ಮಡಿಕೇರಿ ಮಾ.16 NEWS DESK : ಹೋಂ ನರ್ಸಿಂಗ್ ಕೇರ್ ಟೇಕರ್ ಆಗಿ ವಯೋವೃದ್ಧರೊಬ್ಬರ ಮನೆಯಲ್ಲಿ ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪದಡಿ ವ್ಯಕ್ತಿಯೊಬ್ಬನನ್ನು ಮಡಿಕೇರಿ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ತಾಲ್ಲೂಕಿನ ಮಣ್ಣೂರು ಗ್ರಾಮದ ಭದ್ರಪ್ಪ ಬಸಪ್ಪ ಹಡಪದ (27) ಬಂಧಿತ ಆರೋಪಿಯಾಗಿದ್ದಾನೆ. ಈತನ ಬಳಿಯಿಂದ ರೂ.5,09,000 ನಗದು, 137 ಗ್ರಾಂ ಚಿನ್ನಾಭಾರಣಗಳು ಹಾಗೂ 1 ಮೊಬೈಲ್ ಫೋನ್ ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮಡಿಕೇರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜು ಹಿಂಭಾಗದ ಬಡಾವಣೆಯ ನಿವಾಸಿ ಪಾರ್ಥಸಾರಥಿ ಎಂಬುವವರ ಅಣ್ಣ ವಯೋವೃದ್ಧರಾಗಿದ್ದು, ಇವರನ್ನು ನೋಡಿಕೊಳ್ಳುವ ಸಲುವಾಗಿ ಹೋಂ ನಸಿರ್ಂಗ್ (Care Taker) ಕೆಲಸಕ್ಕಾಗಿ ಕೊಪ್ಪಳ ಜಿಲ್ಲೆ ಮೂಲದವನೆಂದು ಹೇಳಿಕೊಂಡು ವ್ಯಕ್ತಿಯೊಬ್ಬ ನೇಮಕಗೊಂಡಿದ್ದ. ಈತ ಇದೇ ಫೆ.28 ರಂದು ಮನೆಯಲ್ಲಿಟ್ಟಿದ್ದ ಅಂದಾಜು 80 ಗ್ರಾಂ ತೂಕದ ಚಿನ್ನಾಭರಣಗಳನ್ನು ಹಾಗೂ ರೂ.5,50,000 ನಗದನ್ನು ಕಳವು ಮಾಡಿದ್ದಾನೆ ಎಂದು ಆರೋಪಿಸಿ ಮಡಿಕೇರಿ ನಗರ ಪೊಲೀಸ್…
ಮಡಿಕೇರಿ ಮಾ.16 NEWS DESK : ದಕ್ಷಿಣ ಕೊಡಗಿನ ತಿತಿಮತಿ ಬಳಿ ಅಕ್ರಮವಾಗಿ ದನಗಳನ್ನು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪತ್ತೆ ಹಚ್ಚಿರುವ ಜಿಲ್ಲಾ ಪೊಲೀಸರು, ಈ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಚೆನ್ನಯ್ಯನಕೋಟೆಯ ಕೆ.ಎಂ.ಉಬೈದ್(36), ಕೇರಳದ ಮಾನಂದವಾಡಿಯ ಕಾಟಿಕೊಳಂನ ಅಬ್ದುಲ್ ರೆಹಮಾನ್.ಪಿ, (34) ಹಾಗೂ ನಾಪೋಕ್ಲು ಸಮೀಪದ ಕೊಟ್ಟಮುಡಿಯ ಪಿ.ಎಂ.ಮುಜೀಬ್(36) ಬಂಧಿತ ಆರೋಪಿಗಳು. ಬಂಧಿತರಿಂದ 1,43,500 ರೂ. ನಗದು, ಮಹೀಂದ್ರ ಸ್ಕಾರ್ಪಿಯೋ, ಮಹೀಂದ್ರ ಬೊಲೇರೋ ಪಿಕ್‍ಅಪ್, ಚವರ್ ಲೆಟ್ ವಾಹನ ಹಾಗೂ 2 ಎತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ಬಿಳಿಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2 ಎತ್ತುಗಳನ್ನು ಹಾಗೂ ಹುಣಸೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹೀಂದ್ರ ಬೊಲೆರೋ ವಾಹನವನ್ನು ಕಳವು ಮಾಡಿರುವುದು ಪ್ರಾಥಮಿಕ ತನಿಖೆಯಲ್ಲಿ ಕಂಡು ಬಂದಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ. ತಿತಿಮತಿ ಉಪಠಾಣೆ ಸಮೀಪ ಹೆದ್ದಾರಿಯಲ್ಲಿ ಅಕ್ರಮವಾಗಿ ದನ ಸಾಗಾಟ ಮಾಡುತ್ತಿರುವ ಕುರಿತು ದೊರೆತ ಮಾಹಿತಿ ಮೇರೆಗೆ ಪೊಲೀಸರು ವಾಹನ ತಪಾಸಣೆ ನಡೆಸಿದರು. ಈ ಸಂದರ್ಭ ಒಂದು ಕಾರನ್ನು…
ವಿರಾಜಪೇಟೆ ಮಾ.16 NEWS DESK : ಕುಶಾಲನಗರ ತಾಲ್ಲೂಕಿನ ಚೆಟ್ಟಳ್ಳಿಯ ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನದವನ್ನು ವಿಧಾನಸಭೆಯ ಮಾಜಿ ಅಧ್ಯಕ್ಷ ಕೊಂಬಾರನ ಜಿ.ಬೋಪಯ್ಯ ಅವರು ಲೋಕಾರ್ಪಣೆಗೊಳಿಸಿದರು. ಕೊಡಗಿನ ಗೌಡ ಸಂಪ್ರದಾಯದಂತೆ ಭವನ ಉದ್ಘಾಟನಾ ಕಾರ್ಯಕ್ರಮ ನಡೆದು ಗೌಡ ಜನಾಂಗದವರು ತಮ್ಮ ಸಾಂಪ್ರಾದಾಯಿಕ ಉಡುಪಿನಲ್ಲಿ ಕಂಗೊಳಿಸಿದರು. ಚೇರಳ ಭಾಗಕ್ಕೆ ಸೇರಿದ 80 ಗೌಡ ಕುಟುಂಬಗಳಿಂದ ಮದುವೆಯಾಗಿ ತೆರಳಿದ ಮಹಿಳೆಯರನ್ನು ತವರೂರಿನಲ್ಲಿ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು. ಅಲ್ಲದೇ ಕಟ್ಟಡ ನಿರ್ಮಾಣ ಕತೃಗಳಾದ ಕೆಮ್ಮಾರನ ಸುರೇಶ್, ನೂಜಿಬೈಲು ಗಣಪತಿ, ಕೋಳಿಮಾಡು ಪಾಪು ಉತ್ತಪ್ಪ, ಸಮಾಜಕ್ಕೆ ಅತಿ ಹೆಚ್ಚಿನ ಧನಸಹಾಯ ನೀಡಿದ ಹೊಸಮನೆ ಪೂವಯ್ಯ ಅವರ ಪರವಾಗಿ ಮಗ ಜಿತೇಂದ್ರ, ಪೇರಿಯನ ಉದಯಕುಮಾರ್, ಗೌಡ ಸಮಾಜದ ಸಂಸ್ಥಾಪಕರಾದ ಮರದಾಳು ಉಲ್ಲಾಸ, ಮರದಾಳು ಗೋಪಾಲ, ಮರದಾಳು ಜನಾರ್ಧನ, ಪೇರಿಯನ ಪ್ರಕಾಶ್ ಸೇರಿದಂತೆ ಸಮುದಾಯ ಭವನಕ್ಕೆ ಧನಸಹಾಯ ನೀಡಿದವರನ್ನು, ಕಟ್ಟಡ ನಿರ್ಮಾಣದ ಕನಸು ಹೊತ್ತು ಸದಾ ಕೈ ಜೊಢಿಸಿದ ಮಹನೀಯರನ್ನು, ಗೌಡ ಸಮಾಜದ ಸಭೆ ನಡೆಸಲು ಸ್ಥಳಾವಕಾಶ…
ಸೋಮವಾರಪೇಟೆ ಮಾ.16 NEWS DESK : ಎಸ್‍ಎಸ್‍ಎಲ್‍ಸಿ ಪರೀಕ್ಷೆ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದ್ದು, ವಿದ್ಯಾರ್ಥಿಗಳು ಸಮಯದ ಮೌಲ್ಯ ಅರಿತು ಪರಿಶ್ರಮಪಟ್ಟು ವಿದ್ಯಾಭ್ಯಾಸ ಮಾಡಬೇಕು ಎಂದು ಸೋಮವಾರಪೇಟೆಯ ವಿರಕ್ತ ಮಠದ ಶ್ರೀ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ ಹೇಳಿದರು. ಸೋಮವಾರಪೇಟೆ ಎಸ್.ಜೆ.ಎಂ ಶಾಲೆಯಲ್ಲಿ ನಡೆದ ಎಸ್.ಎಸ್.ಎಲ್.ಸಿ ಮಕ್ಕಳಿಗೆ ಪರೀಕ್ಷಾ ಸಿದ್ದತೆಯ ಬಗ್ಗೆ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ವಿದ್ಯಾರ್ಥಿಗಳು ಶಿಕ್ಷಕರು ಮಾಡುವ ಪಾಠವನ್ನು ಗಮನದಿಂದ ಕೇಳಿ ಕಲಿಕೆಯಲ್ಲಿ ಮುನ್ನಡೆಯಬೇಕು. ಸರ್ಕಾರಿ ಶಾಲೆಗಳು ಉತ್ತಮ ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳಿಗೆ ಸಂಸ್ಕಾರವನ್ನು ಕೂಡ ಕಲಿಸಿಕೊಡುತ್ತವೆ ಎಂದರು. ಇಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣದಿಂದ ದೂರವಿದ್ದು ಓದಿನ ಕಡೆ ಹೆಚ್ಚಿನ ಗಮನ ಹರಿಸಬೇಕು. ಸಮಯ ಸಿಕ್ಕಾಗ ಪತ್ರಿಕೆಗಳನ್ನು ಓದುವ ಅಭ್ಯಾಸ ಬೆಳೆಸಿಕೊಂಡರೆ ಸಾಮಾನ್ಯ ಜ್ಞಾನವೂ ಹೆಚ್ಚುತ್ತದೆ ಎಂದು ಸಲಹೆ ನೀಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಕೃಷ್ಣಪ್ಪ ಮಾತನಾಡಿ, ಎಸ್‍ಎಸ್‍ಎಲ್‍ಸಿ ಪರೀಕ್ಷೆ ಆರಂಭವಾಗಲಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಧೈರ್ಯದಿಂದ ಪರೀಕ್ಷೆ ಎದುರಿಸಬೇಕು. ಪರೀಕ್ಷೆ ಜೀವನದ ಮಹತ್ವದ ಹಂತವಾಗಿದ್ದು ಶ್ರಮಪಟ್ಟು ಓದಿ…
ಸೋಮವಾರಪೇಟೆ ಮಾ.16 NEWS DESK : ಶ್ರೀ ಆಂಜನೇಯಸ್ವಾಮಿ ದೇವಾಲಯ ಸಮಿತಿ ವತಿಯಿಂದ ಮಾ.27 ರಂದು ಅರ್ಥಪೂರ್ಣವಾಗಿ ಶ್ರೀ ರಾಮನವಮಿ ಉತ್ಸವ ಆಚರಿಸಲಾಗುವುದು ಎಂದು ಶ್ರೀ ಆಂಜನೇಯ ದೇವಾಲಯ ಸಮಿತಿ ಅಧ್ಯಕ್ಷ ಸಿ.ಪಿ.ಗೋಪಾಲ್ ಹೇಳಿದರು. ಮಾ.19 ರಿಂದ 27 ರ ತನಕ ಪ್ರತಿದಿನ ಬೆಳಿಗ್ಗೆ ಮತ್ತು ಸಂಜೆ 6 ಗಂಟೆಯಿಂದ 8 ಗಂಟೆ ತನಕ ವಿಶೇಷ ಪೂಜೆ ನಡೆಯಲಿದೆ. 19 ರಿಂದ ದಿನಕ್ಕೊಂದರಂತೆ ಶ್ರೀಗಂಧ, ವಿಳ್ಯೆದೆಲೆ, ಬೆಣ್ಣೆ, ಕೇಸರಿ, ತುಳಸಿ, ಕುಂಕುಮ, ಹೂವಿನ ಮತ್ತು ಮುತ್ತಿನ ಆಲಂಕಾರರನ್ನು ಶ್ರೀರಾಮನ ಉತ್ಸವ ಮೂರ್ತಿಗೆ ಮಾಡಿ ಪೂಜೆ ಸಲ್ಲಿಸಲಾಗುತ್ತದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. 27 ರ ಸಂಜೆ 6 ಗಂಟೆಯಿಂದ ಶ್ರೀ ರಾಮಾಂಜನೇಯೋತ್ಸವ ಮೆರವಣಿಗೆ ಪಟ್ಟಣದ ನಿಗದಿತ ರಸ್ತೆಯಲ್ಲಿ ನಡೆಯಲಿದೆ. ಕಳೆದ 60 ವರ್ಷಗಳಿಂದಲೂ ಅಂಜನೇಯ ದೇವಾಲಯದಲ್ಲಿ ರಾಮನವಮಿ ಆಚರಿಸಿ, ಮೆರವಣಿಗೆ ಮಾಡಲಾಗುತ್ತಿದೆ. 27 ರಂದು ಪಾನಕ ವಿತರಣೆ, ಅನ್ನದಾನ ನಡೆಯಲಿದೆ ಎಂದು ಹೇಳಿದರು. ಅಂದಾಜು 4.50 ಕೋಟಿ ರೂ.ಗಳ ವೆಚ್ಚದಲ್ಲಿ ಆಂಜನೇಯ ದೇವಾಲಯದ…
ಮಡಿಕೇರಿ NEWS DESK ಮಾ.16 : ಜಿಲ್ಲೆಯಲ್ಲಿ ಗೃಹಬಳಕೆ ಎಲ್‌ಪಿಜಿ ಸಿಲಿಂಡರ್‌ಗಳು ಸಮರ್ಪಕ ಸಂಗ್ರಹವಿದ್ದು, ಗೃಹ ಬಳಕೆಯ ಅನಿಲ ಸಿಲಿಂಡರ್‌ಗಳ ಸರಬರಾಜಿನಲ್ಲಿ ಯಾವುದೇ ವ್ಯತ್ಯಯ ಇರುವುದಿಲ್ಲ. ಗ್ರಾಹಕರುಗಳು ಸಾಮಾಜಿಕ ಜಾಲ ತಾಣದಲ್ಲಿ ಹರಿದಾಡುತ್ತಿರುವ ಸುಳ್ಳು ವದಂತಿಗಳಿಗೆ ಕಿವಿಗೊಡಬಾರದು ಹಾಗೂ ಯಾವುದೇ ಆತಂಕಕ್ಕೆ ಒಳಗಾಗದೇ ಅಗತ್ಯವಿರುವ ಪ್ರಮಾಣದಲ್ಲಿ ಮಾತ್ರ ಬುಕ್ ಮಾಡಿ ಗ್ಯಾಸ್ ಸಿಲಿಂಡರ್ ಪಡೆದುಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ತಿಳಿಸಿದ್ದಾರೆ. ಅಡುಗೆ ಅನಿಲವನ್ನು ಮಿತ ಬಳಕೆ ಪೂರೈಕೆಗಾಗಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಎಲ್‌ಪಿಜಿ ವಿತರಕರೊಂದಿಗೆ ಸಮಾಲೋಚನೆ ನಡೆಸಲಾಗಿದೆ. ಗೃಹ ಬಳಕೆ ಗ್ಯಾಸ್ ಸಿಲಿಂಡರ್‌ಗಳ ಸಮರ್ಪಕ ಸಂಗ್ರಹ ಮತ್ತು ಸರಬರಾಜು ಲಭ್ಯವಿದ್ದು, ಎಂದಿನoತೆ ಎಲ್‌ಪಿಜಿ ವಿತರಕರು ಗ್ರಾಹಕರ ಮನೆ ಬಾಗಿಲಿಗೆ ಸರಬರಾಜು ಮಾಡಲಿದ್ದಾರೆ. ಈ ಬಗ್ಗೆ ಜಿಲ್ಲೆಯ ಎಲ್ಲಾ ಎಲ್‌ಪಿಜಿ ವಿತರಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಸಾರ್ವಜನಿಕರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗದೆ ಅಗತ್ಯವಿರುವ ಪ್ರಮಾಣದಲ್ಲಿ ಗ್ಯಾಸ್ ಸಿಲಿಂಡರ್ ಪಡೆಯಬಹುದು. ಗೃಹ ಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ವಿತರಣೆಯಲ್ಲಿ ಏನಾದರೂ ಕುಂದುಕೊರತೆಗಳು ಕಂಡುಬAದಲ್ಲಿ…
ಮಡಿಕೇರಿ NEWS DESK ಮಾ.16 : ಕೊಡಗು ಜಿಲ್ಲೆಯ 2026-27 ನೇ ಸಾಲಿಗೆ ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಆಸಕ್ತಿಯುಳ್ಳ ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಗೆ (ಎನ್.ಜಿ.ಓ) ಆಸಕ್ತ ಅಭಿವ್ಯಕ್ತಿ ಸ್ವ-ಇಚ್ಛೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ “Expression of Interest’’ ಅನ್ನು ಮಾರ್ಚ್, 13 ರಿಂದ 23 ರವರೆಗೆ ಕರೆಯಲಾಗಿದ್ದು, ಹೆಚ್ಚಿನ ಮಾಹಿತಿಗೆ https://kppp.karnataka.gov.in/ ಅಲ್ಲಿ ನೋಡಬಹುದಾಗಿದೆ ಹಾಗೂ ಜಿಲ್ಲಾ ಅಂಧತ್ವ ನಿಯಂತ್ರಣಾಧಿಕಾರಿಗಳ ಕಚೇರಿ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಮಡಿಕೇರಿ, ಕೊಡಗು ಜಿಲ್ಲೆ ವಿಳಾಸ: dbcskodagu@gmail.com ಇವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಧತ್ವ ನಿಯಂತ್ರಣಾಧಿಕಾರಿ ಅವರು ಕೋರಿದ್ದಾರೆ.
ಮಡಿಕೇರಿ NEWS DESK ಮಾ.15 : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನ ಕಾರ್ಯಕಾರಿ ಮಂಡಳಿಯ ಸದಸ್ಯ, ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಸದಸ್ಯ, ಮಡಿಕೇರಿ ಪುರಸಭೆಯ ಮಾಜಿ ಉಪಾಧ್ಯಕ್ಷ ಹಾಗೂ ಗಾಯಕ ನಗರದ ಹಿಲ್ ರೋಡ್ ನಿವಾಸಿ ಲಿಯಾಕತ್ ಆಲಿ (69) ಅವರು ಇಂದು ಮುಂಜಾನೆ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಮೃತರ ಅಂತಿಮ ಸಂಸ್ಕಾರ ಸಂಜೆ ನಗರದ ರಾಣಿಪೇಟೆಯಲ್ಲಿರುವ ಖಬರಸ್ಥಾನದಲ್ಲಿ ನಡೆಯಿತು. ಉತ್ತಮ ಗಾಯಕರಾಗಿದ್ದ ಲಿಯಾಕತ್ ಆಲಿ ಅವರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸೇರಿದಂತೆ, ಹಲವು ಸಂಘ ಸಂಸ್ಥೆಗಳಲ್ಲಿ ತಮ್ಮನ್ನು ತೊಡಿಸಿಕೊಂಡಿದ್ದರು. ನಗರದ ರಾಜಾಸೀಟು ಮಾರ್ಗದ ಬಳಿಯ ಉದ್ಯಾನವನದಲ್ಲಿ ರಾಷ್ಟ್ರ ಕವಿ ಕುವೆಂಪು ಅವರ ಪುತ್ಥಳಿಯ ಸ್ಥಾಪನೆಯಲ್ಲಿ ಇವರು ಪ್ರಮುಖ ಪಾತ್ರ ವಹಿಸಿದ್ದರು. ಮಾಜಿ ಸಚಿವ ಎಂ.ಸಿ.ನಾಣಯ್ಯ ಅವರ ಬೆಂಬಲಿಗರಾಗಿದ್ದ ಲಿಯಾಕತ್ ಆಲಿ ಹಲವು ವರ್ಷಗಳ ಕಾಲ ರಾಜಕೀಯವಾಗಿಯೂ ಗುರುತಿಸಿಕೊಂಡಿದ್ದರು. *ಕಸಾಪ ಸಂತಾಪ* ಸ್ನೇಹಜೀವಿ ಲಿಯಾಕತ್ ಆಲಿ ಅವರ ನಿಧನಕ್ಕೆ…
ಸುಂಟಿಕೊಪ್ಪ NEWS DESK ಮಾ.15 : ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವವು ತಾ. 21ರಿಂದ 23 ರವರೆಗೆ ವಿಶೇಷ ಪೂಜೆಗಳು ನಡೆಯಲಿದೆ ಎಂದು ಶ್ರೀ.ಚಾಮುಂಡೇಶ್ವರಿ ಮತ್ತು ಶ್ರೀಮುತ್ತಪ್ಪ ದೇವಸ್ಥಾನ ಸಮಿತಿಯ ಅಧ್ಯಕ್ಷ ಪಟ್ಟೆಮನೆ ಉದಯಕುಮಾರ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಶನಿವಾರ ದಂದು ಬೆಳಿಗ್ಗೆ 6.30 ಗಂಟೆಗೆ ಗಣಪತಿ ಹವನ 7.15 ಗಂಟೆಗೆ ಶುದ್ಧಿ ಪುಣ್ಯಾಹ, 7.30 ಗಂಟೆಗೆ ಬಾವುಟವನ್ನು ಏರಿಸುವುದು, ಸಂಜೆ 4 ಗಂಟೆಗೆ ಶ್ರೀ ಮುತ್ತಪ್ಪ ದೇವರ ಮಲೆ ಇಳಿಸುವಿಕೆ, ರಾತ್ರಿ 6 ಗಂಟೆಗೆ ಚಂಡೆಮೇಳ, 7. ಗಂಟೆಗೆ ಶ್ರೀಮುತ್ತಪ್ಪ ವೆಳ್ಳಾಟಂ ನಡೆಯಲಿದೆ. ತಾ.22 ಭಾನುವಾರ ದಂದು ಬೆಳಿಗ್ಗೆ 7 ಗಂಟೆಗೆ ವಾದ್ಯಮೇಳ, 11 ಗಂಟೆಗೆ ಶ್ರೀ.ಶಾಸ್ತಪ್ಪನ ವೆಳಾಳಟಂ,ಮಧ್ಯಾಹ್ನ 1 ಗಂಟೆಗೆ ಶ್ರೀ ಗುಳಿಗವೆಳ್ಳಾಟಂ, ಸಂಜೆ 4 ಗಂಟೆಗೆ ಅಡಿಯರ ಮೆರವಣಿಗೆ, ರಾತ್ರಿ 7 ಗಂಟೆಗೆ ಶ್ರೀ. ಮುತ್ತಪ್ಪ ವೆಳ್ಳಾಟಂ, 8 ಗಂಟೆಗೆ ಶ್ರೀ. ಚಾಮುಂಡೇಶ್ವರಿ ಮತ್ತು ಶ್ರೀ ರಕ್ತ…






