ಮಡಿಕೇರಿ NEWS DESK ಆ.6 : ಕೇರಳದ ವಯನಾಡಿನಲ್ಲಿ ನಡೆದ ದುರಂತ ಮತ್ತು 2018, 2019 ರಲ್ಲಿ ಕೊಡಗಿನಲ್ಲಿ ನಡೆದಿರುವ ಮಳೆ ಅನಾಹುತದ ಆತಂಕ ಹಸಿರಾಗಿರುವ ಬೆನ್ನಲ್ಲೆ ಜಿಯೋಲಾಜಿಕಲ್ ಸರ್ವೇ ಆಫ್ ಇಂಡಿಯಾದ ಭೂ ಗರ್ಭ ಶಾಸ್ತ್ರಜ್ಞರ ತಂಡ ಜಿಲ್ಲೆಗೆ ಭೇಟಿ ನೀಡಲು ಮುಂದಾಗಿದೆ. ಮುಂದಿನ ವಾರ ಈ ವಿಜ್ಞಾನಿಗಳ ತಂಡ ಜಿಲ್ಲೆಗೆ ಆಗಮಿಸುವ ನಿರೀಕ್ಷೆಗಳಿದ್ದು, ಭೂ ಕುಸಿತದ ಪ್ರದೇಶಗಳನ್ನು ಅಧ್ಯಯನ ನಡೆಸಲಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ. ಭೂಕುಸಿತ ಘಟನೆ ವರದಿಯಾದ ಎಲ್ಲಾ ಗ್ರಾಮಗಳಿಗೂ ತೆರಳಿ ವಾಸ್ತವ ಸ್ಥಿತಿ, ಭೌಗೋಳಿಕ ಲಕ್ಷಣಗಳು, ಭೂಪದರಗಳ ರಚನೆ, ಕಲ್ಲಿನ ವಿಧಗಳು ಮತ್ತು ಭೂಕುಸಿತಕ್ಕೆ ಕಾರಣವಾದ ಅಂಶಗಳ ಕುರಿತು ಅಧ್ಯಯನ ನಡೆಸಲಿದೆ. ತಮ್ಮ ಪರಿಶೀಲನೆಯ ವರದಿಯನ್ನು ಜಿಲ್ಲಾಡಳಿತಕ್ಕೆ ನೀಡಲಿದ್ದಾರೆ ಎಂದು ಹೇಳಿದರು. ಜಿಎಸ್‌ಐ ವಿಜ್ಞಾನಿಗಳು 2018ರಲ್ಲಿ ಜಿಲ್ಲೆಯಲ್ಲಿ ಸಂಭವಿಸಿದ ಭಾರೀ ಪ್ರಾಕೃತಿಕ ವಿಕೋಪ ಸಂದರ್ಭ ಜಿಲ್ಲೆಗೆ ಆಗಮಿಸಿ ವಿವಿಧ ಭೂಕುಸಿತ ಪ್ರದೇಶಗಳಿಗೆ ತೆರಳಿ ಪರಿಶೀಲನೆ ನಡೆಸಿದ್ದರು. ವಿಜ್ಞಾನಿಗಳಾದ ಸುನಂದನ್…
ಲೇಖಕ: admin
ಸುಂಟಿಕೊಪ್ಪ NEWS DESK ಆ.6: ಚೆಟ್ಟಳ್ಳಿ ಚೇರಳ ಶ್ರೀಮಂಗಲ ಗ್ರಾಮದ ಹೊಸಮನೆ ಹೆಚ್.ಟಿ.ಪೂವಯ್ಯ ಅವರ ತೋಟಕ್ಕೆ ನುಗ್ಗಿದ ಕಾಡಾನೆಗಳು ನಿರಂತರ ದಾಳಿ ಮಾಡುತ್ತಿದ್ದು ಕೃಷಿ ಫಸಲನ್ನು ನಾಶ ಪಡಿಸಿ ಸುಮಾರು 1.50 ಲಕ್ಷ ಅಧಿಕ ನಷ್ಟ ಸಂಭವಿಸಿದೆ ಎಂದು ಅರಣ್ಯ ಇಲಾಖೆಗೆ ದೂರು ನೀಡಿದ್ದಾರೆ. ಕಳೆದ ಎರಡು ತಿಂಗಳಿನಿಂದ ಕಾಡಾನೆಗಳು ಈ ಭಾಗದಲ್ಲಿ ನಿರಂತರ ದಾಳಿ ಮಾಡುತ್ತಿದ್ದು ಹಗಲಿನಲ್ಲಿ ಬೇರೆಡೆ ವಾಸ್ಥವ್ಯ ಹೂಡುತ್ತಿದೆ. ರಾತ್ರಿ ವೇಳೆ ಆಗಮಿಸಿದ ಕಾಡಾನೆಗಳು ಅಡಿಕೆ, ಕಾಫಿ, ಕರಿಮೆಣಸು ಎಲ್ಲವನ್ನು ನಾಶಪಡಿಗಾಗಿದ್ದು ರೂ 1.50 ಲಕ್ಷದಷ್ಟು ಅಧಿಕ ನಷ್ಟ ಉಂಟಾಗಿದೆ ಆಳಲನ್ನು ತೋಡಿಕೊಂಡರು. ಪರಿಹಾರಕ್ಕೆ ಹಲವಾರು ಬಾರಿ ಮನವಿಸಲ್ಲಿಸಿದರೂ ಪರಿಹಾರ ಗಗನ ಕುಸುಮವಾಗಿದೆ. ಇದರಿಂದ ಕೃಷಿಯನ್ನು ನಂಬಿ ಜೀವನ ನಡೆಸುವವರಿಗೆ ಆನೆಕಾಟದಿಂದ ಮುಕ್ತಿಯಿಲ್ಲದಂತಾಗಿದೆ. ಇಲಾಖೆಯ ಅಧಿಕಾರಿಗಳು ಉಡಾಫೆ ಉತ್ತರವನ್ನು ನೀಡುತ್ತಾರೆ. ಪೊನ್ನತ್‌ಮೊಟ್ಟೆಯಿಂದ ಮೊದೂರು ಭಾಗದಲ್ಲಿ ಅಡೆತಡೆಯಿಲ್ಲದೆ ಆನೆಗಳು ಆರಾಮವಾಗಿ ಕಾಡಿನಿಂದ ನಾಡಿಗೆ ಲಗ್ಗೆಯಿಡುತ್ತಿದೆ. ಈ ಭಾಗದಲ್ಲಿ ಟ್ರಂಚ್, ಸೋಲಾರ್ ಬೇಲಿ,ದುರಸ್ಥಿಗೊಂಡು ಆನೆಗಳಿಗೆ ಈ ಭಾಗದಲ್ಲಿ ಆನೆಗಳ ಹಾವಳಿ…
ಕುಶಾಲನಗರ NEWS DESK ಆ.6 : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸೋಮವಾರಪೇಟೆ ತಾಲ್ಲೂಕಿನ ಆಶ್ರಯದಲ್ಲಿ ಕುಶಾಲನಗರ ಸಮೀಪ ಮಾದಾಪಟ್ಟಣ ಗ್ರಾಮದಲ್ಲಿ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದ ಅಡಿಯಲ್ಲಿ ಪೌಷ್ಟಿಕ ಆಹಾರ ಸಿರಿಧಾನ್ಯಗಳ ಬಳಕೆ ಮಾಹಿತಿ ಕಾರ್ಯಾಗಾರ ನಡೆಯಿತು. ಯೋಜನೆಯ ಕೊಡಗು ಜಿಲ್ಲಾ ನಿರ್ದೇಶಕರಾದ ಲೀಲಾವತಿ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಪ್ರತಿಯೊಬ್ಬರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಎಂದು ಕರೆ ನೀಡಿದರು. ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡ ಪತ್ರಕರ್ತೆ ಹಾಗೂ ನಾಟಿ ವೈದ್ಯರಾದ ವನಿತಾ ಚಂದ್ರಮೋಹನ್ ಮಾತನಾಡಿ ಪೌಷ್ಟಿಕ ಆಹಾರ ಪದ್ಧತಿ, ಪ್ರಕೃತಿದತ್ತ ಗಿಡಮೂಲಿಕೆಗಳ ಬಗ್ಗೆ ಹಾಗೂ ಅದರಿಂದ ಉಂಟಾಗುವ ಪ್ರಯೋಜನಗಳ ಬಗ್ಗೆ ಸಮಗ್ರ ಮಾಹಿತಿ ಒದಗಿಸಿದರು. ಯೋಜನೆಯ ಕಾರ್ಯಕರ್ತರು ಸ್ವತಹ ತಯಾರಿಸಿ ತಂದ ಆಹಾರ ವಸ್ತುಗಳ ಪೌಷ್ಟಿಕತೆ ಮತ್ತಿತರ ಆರೋಗ್ಯ ವಿಷಯಗಳ ಪ್ರಾಮುಖ್ಯತೆ, ಔಷಧಿಯ ಗುಣಗಳ ಬಗ್ಗೆ ಮಹಿಳೆಯರಿಗೆ ಅರಿವು ಮೂಡಿಸಿದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಕ್ಷೇತ್ರ ಯೋಜನಾಧಿಕಾರಿ ಹೆಚ್ ರೋಹಿತ್ ಮಾತನಾಡಿದರು. ಸಂಘದ ಸದಸ್ಯರು ತಾವು ತಯಾರಿಸಿದ ಪೌಷ್ಠಿಕ ಆಹಾರಗಳನ್ನು ಪ್ರದರ್ಶನಕ್ಕೆ ಇಡಲಾಗಿತ್ತು. ಆರೋಗ್ಯ…
ವಿರಾಜಪೇಟೆ NEWS DESK ಆ.6 : ವಿರಾಜಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಕೊಡಗು ಪ್ರೆಸ್ ಕ್ಲಬ್ ಸಂಯುಕ್ತ ಆಶ್ರಯದಲ್ಲಿ ವಿರಾಜಪೇಟೆ ತಾಲ್ಲೂಕು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆ ಏರ್ಪಡಿಸಲಾಗಿದೆ ಎಂದು ಸ್ಪರ್ಧೆಯ ಸಂಚಾಲಕ ಎಂ.ಎ ಕೃಷ್ಣ ತಿಳಿಸಿದ್ದಾರೆ. ವಿರಾಜಪೇಟೆ ಭೌಗೋಳಿಕ ತಾಲ್ಲೂಕಿನ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ‘ನವ ಭಾರತ ನಿರ್ಮಾಣದಲ್ಲಿ ಯುವ ಜನತೆಯ ಪಾತ್ರ’ ಎಂಬ ವಿಷಯದಲ್ಲಿ ಸ್ಪರ್ಧೆ ನಡೆಯಲಿದ್ದು, ಒಂದು ಶಾಲೆಯಿಂದ ಒಂದು ವಿದ್ಯಾರ್ಥಿ ಮತ್ತು ಒಂದು ವಿಧ್ಯಾರ್ಥಿನಿಗೆ ಮಾತ್ರ ಅವಕಾಶವಿರುತ್ತದೆ. ಕನ್ನಡ ಭಾಷೆಯಲ್ಲಿ ಮಾತ್ರ ಭಾಷಣ ಸ್ಪರ್ಧೆ ನಡೆಯಲಿದ್ದು, ಸ್ಪರ್ಧೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಶಾಲಾ ಮುಖ್ಯೋಪಾಧ್ಯಾಯರಿಂದ ವ್ಯಾಸಾಂಗ ದೃಢೀಕರಣ ಪತ್ರವನ್ನು ಕಡ್ಡಾಯವಾಗಿ ತರಬೇಕು. ಸ್ಪರ್ಧೆಗೆ ಗರಿಷ್ಠ 3 ನಿಮಿಷ ಮಾತ್ರ ಅವಕಾಶವಿರುತ್ತದೆ. ಸಿದ್ದಾಪುರದ ವಿರಾಜಪೇಟೆ ರಸ್ತೆಯ ಸೆಂಟನರಿ ಚರ್ಚ್ ಹಾಲ್ ಸಭಾಂಗಣದಲ್ಲಿ ಸ್ಪರ್ಧೆ ನಡೆಯಲಿದ್ದು, ಆ.12 ರ ಒಳಗಾಗಿ ವಿದ್ಯಾರ್ಥಿಗಳ ಹೆಸರನ್ನು ನೊಂದಾಯಿಸಬೇಕು. ಆ.14 ರಂದು ಮದ್ಯಾಹ್ನ ವಿದ್ಯಾರ್ಥಿಗಳಿಗೆ ಭೋಜನದ…
ಮಡಿಕೇರಿ NEWS DESK ಆ.6 : ಕೊಡಗು ಜಿಲ್ಲೆಯಲ್ಲಿ ಕೆಲಸದಲ್ಲಿ ತೊಡಗಿರುವ ಬಾಲ ಹಾಗೂ ಕಿಶೋರ ಕಾರ್ಮಿಕರನ್ನು ರಕ್ಷಿಸಿ, ಪುನರ್ವಸತಿಗೊಳಿಸಿ ಶಿಕ್ಷಣ ಮುಂದುವರಿಕೆಗೆ ಅವಕಾಶ ಮಾಡಿಕೊಡುವ ಉದ್ದೇಶದಿಂದ ಆಗಸ್ಟ್ 31 ರವರೆಗೆ ರಕ್ಷಣಾ ಕಾರ್ಯಚರಣೆಯನ್ನು ನಡೆಸಲು ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ನಿರ್ದೇಶನ ನೀಡಿದೆ. ಆ ನಿಟ್ಟಿನಲ್ಲಿ ಕೊಡಗು ಜಿಲ್ಲೆಯಾದ್ಯಂತ ಮಕ್ಕಳ ರಕ್ಷಣಾ ಕಾರ್ಯಾಚರಣೆ ಕೈಗೊಳ್ಳಲಾಗುತ್ತಿದ್ದು, ಈ ಸಂದರ್ಭದಲ್ಲಿ ಕೆಲಸದಲ್ಲಿ ತೊಡಗಿರುವ ಬಾಲ ಹಾಗೂ ಕಿಶೋರ ಕಾರ್ಮಿಕರು ಕಂಡುಬಂದಲ್ಲಿ, ಅವರನ್ನು ರಕ್ಷಿಸಿ, ಪುನರ್ವಸತಿಗೊಳಿಸಿ, ಶಿಕ್ಷಣ ಮುಂದುವರಿಕೆಗೆ ಅವಕಾಶ ಮಾಡಿಕೊಡುವುದು ಹಾಗೂ ಕೆಲಸಕ್ಕೆ ನಿಯೋಜಿಸಿಕೊಂಡ ಮಾಲೀಕರ ಮೇಲೆ ಕಾನೂನು ಕ್ರಮ ಕೈಗೊಳ್ಳುವುದು ಈ ಕಾರ್ಯಾಚರಣೆಯ ಉದ್ದೇಶವಾಗಿರುತ್ತದೆ ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಕಾವೇರಿ ಅವರು ಮಾಹಿತಿ ನೀಡಿದ್ದಾರೆ. ಸ್ವಾತಂತ್ರ ದಿನಾಚರಣೆ ಪ್ರಯುಕ್ತ ಆಗಸ್ಟ್ 31 ರ ವರೆಗೆ ಮಕ್ಕಳ ರಕ್ಷಣಾ ಕಾರ್ಯಾಚರಣೆಗೆ ಸಂಬಂಧಿಸಿದಂತೆ ತಪಾಸಣೆ ಮತ್ತು ಹಠಾತ್ ದಾಳಿ ನಡೆಸುವಂತೆ ಸೂಚಿಸಿದ್ದ ಹಿನ್ನೆಲೆಯಲ್ಲಿ ಮಂಗಳವಾರ ಮಡಿಕೇರಿ ನಗರದ ಹಳೇ ಖಾಸಗಿ ಬಸ್ಸ್…
ಐಗೂರು NEWS DESK ಆ.6 : ಲೀಡ್ ಬ್ಯಾಂಕ್ ಕೊಡಗು ಮತ್ತು ನಬಾರ್ಡ್ ನ ಸಂಯುಕ್ತಾಶ್ರಯದಲ್ಲಿ ಐಗೂರಿನ ಬ್ಯಾಂಕ್ ಆಫ್ ಬರೋಡ ವತಿಯಿಂದ ಜನ ಸುರಕ್ಷ ಯೋಜನೆ ಕಾರ್ಯಕ್ರಮ ನಡೆಯಿತು. ಪ್ರಧಾನಮಂತ್ರಿ ಜನ್ ಧನ ಯೋಜನೆ ಮತ್ತು ಪ್ರಧಾನಮಂತ್ರಿ ಬೀಮಾ ಯೋಜನೆ, ಅಟಲ್ ಪಿಂಚಣಿ ಯೋಜನೆಯ ಬಗ್ಗೆ ಆರ್ಥಿಕ ಸಾಕ್ಷರತಾ ಸಮಾಲೋಚಕರಾದ ದಿವ್ಯಾ ಬಿ.ಸಿ ಹಾಗೂ ಹರೀಶ್ ಸಿ.ಜಿ ಅವರು ಗ್ರಾಹಕರಿಗೆ ವಿವರಿಸಿದರು. ಸಾಮಾನ್ಯ ಜನರಿಗೂ ಬ್ಯಾಂಕ್ ನ ಎಲ್ಲಾ ಯೋಜನೆಗಳ ಸೌಲಭ್ಯಗಳು ದೊರಕಬೇಕು ಎಂದರು. ಸೈಬರ್ ಕ್ರೈಮ್ ಬಗ್ಗೆ ತಿಳಿಸಲಾಯಿತು. ಐಗೂರಿನ ಬ್ಯಾಂಕ್ ಆಫ್ ಬರೋಡ ಬ್ಯಾಂಕ್ ನ ವ್ಯವಸ್ಥಾಪಕ ಪಯಾಪಲ್ಲಿ ಆನಂದ್ ಬಾಬು ಹಾಗೂ ಬ್ಯಾಂಕ್ ನ ಸಿಬ್ಬಂದಿಗಳು ಹಾಗೂ ಗ್ರಾಹಕರು ಭಾಗವಹಿಸಿದ್ದರು.
ಮಡಿಕೇರಿ NEWS DESK ಆ.6 : ಗರ್ಭಿಣಿ ಹಾಗೂ ಬಾಣಂತಿಯರಿಗೆ ಸಕಾಲದಲ್ಲಿ ಚಿಕಿತ್ಸೆ ನೀಡುವ ಮೂಲಕ ಶಿಶು ಮತ್ತು ತಾಯಿ ಮರಣ ಆಗದಂತೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಾರ್ಯಕ್ರಮಗಳ ಸಂಬಂಧ ಮಾಹಿತಿ ಪಡೆದು ಅವರು ಮಾತನಾಡಿದರು. ಆಸ್ಪತ್ರೆಗೆ ಬರುವ ರೋಗಿಗಳನ್ನು ತಕ್ಷಣವೇ ಆರೋಗ್ಯ ವಿಚಾರಿಸಿ ಸೂಕ್ತ ಚಿಕಿತ್ಸೆ ನೀಡುವಂತಾಗಬೇಕು. ಯಾವುದೇ ಕಾರಣಕ್ಕೂ ಸತಾಯಿಸಬಾರದು. ಹೊರರೋಗಿಗಳು ಹೆಚ್ಚಿನ ಸಂಖ್ಯೆಯಲ್ಲಿ ಇದ್ದಲ್ಲಿ, ಹೆಚ್ಚಿನ ಕೌಂಟರ್‌ಗಳನ್ನು ತೆರೆಯಬೇಕು. ಸೂಕ್ತ ಸ್ಪಂದನೆ ಅತೀ ಮುಖ್ಯ ಎಂದು ಜಿಲ್ಲಾಧಿಕಾರಿ ಅವರು ಸೂಚಿಸಿದರು. ಪ್ರತಿಯೊಬ್ಬರಿಗೂ ಆರೋಗ್ಯ ಸೇವೆ ಪಡೆಯುವಂತಾಗಲು ಮಾಹಿತಿ ಶಿಕ್ಷಣದ ಮೂಲಕ ಹೆಚ್ಚಿನ ಜಾಗೃತಿ ಮೂಡಿಸಬೇಕು. ಹಾಡಿಗಳು ಸೇರಿದಂತೆ ಎಲ್ಲೆಡೆ ಆರೋಗ್ಯ ಬಗ್ಗೆ ಹೆಚ್ಚಿನ ಮಾಹಿತಿ ನೀಡುವಂತಾಗಬೇಕು ಎಂದು ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು. ಎಲ್ಲರಿಗೂ ಆರೋಗ್ಯ ಸೌಲಭ್ಯಗಳು ತಲುಪಬೇಕು. ಸರ್ಕಾರದ ನಿರ್ದೇಶನಗಳನ್ನು ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್…
ಮಡಿಕೇರಿ NEWS DESK ಆ.6 : ಕೊಡಗು ಜಿಲ್ಲೆಯ ವಿವಿಧೆಡೆಯ ಭೂಕುಸಿತಕ್ಕೆ ಸಂಬಂಧಿಸಿದಂತೆ ಅಧ್ಯಯನ ಮಾಡಲು ಹಾಗೂ ಲ್ಯಾಂಡ್ ಸ್ಲೈಡ್ ಸಸ್ಪೆಕ್ಟಿಭವ್ ಮ್ಯಾಪಿಂಗ್ (Landslide suspectibility Mapping-LSM) ಗೆ ಸಂಬಂಧಪಟ್ಟಂತೆ ಮಡಿಕೇರಿಯ ಶಾಸಕ ಡಾ.ಮಂತರ್ ಗೌಡ ಅವರು ನಿರಂತರ ಟ್ವೀಟ್, ಮಾಧ್ಯಮ ಹೇಳಿಕೆ ಹಾಗೂ ಮನವಿಯ ಮೂಲಕ ಗಮನ ಸೆಳೆದ ನಂತರ ಜಿಯೋ ಲಾಜಿಕಲ್ ಸರ್ವೆ ಆಫ್ ಇಂಡಿಯಾ ಅಲರ್ಟ್ ಆಗಿದ್ದು, ಮುಂದಿನ ವಾರ ಜಿಲ್ಲೆಗೆ ಭೇಟಿ ನೀಡಲಿದೆ. ಈಗಾಗಲೇ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಬೂಕುಸಿತದ ಪ್ರದೇಶದ ಅಧ್ಯಯನಕ್ಕೆ ಜಿಯೋ ಲಾಜಿಕಲ್ ಸರ್ವೆ ಆಫ್ ಇಂಡಿಯಾ ಮುಂದಿನ ವಾರ ಮಡಿಕೇರಿಗೆ ಭೇಟಿ ನೀಡಲಿದೆ ಎಂದು ಮಾಹಿತಿ ನೀಡಿದ್ದಾರೆ. ಶಾಸಕ ಡಾ.ಮಂತರ್ ಗೌಡ ಅವರು ಸೂಕ್ತ ಸಂದರ್ಭದಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ಗಮನ ಸೆಳೆಯುವ ಪ್ರಯತ್ನ ಮಾಡಿ ವಿಷಯದ ಗಂಭೀರತೆಯನ್ನು ಮಂಡಿಸಿರುವುದು ಸ್ವಾಗತಾರ್ಹ. ಇಂದಿನ ಪರಿಸ್ಥಿತಿಯಲ್ಲಿ ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾದ ಅಗತ್ಯತೆಯನ್ನು ವಿವರಿಸಿದ್ದು, ಭೂಕುಸಿತದ ವಿಷಯದಲ್ಲಿ ಭವಿಷ್ಯದ ದಿನಗಳಲ್ಲಿ…
ಮಡಿಕೇರಿ ಆ.6 NEWS DESK : ಕೊಡಗು ಜಿಲ್ಲೆಯ ಕೆಲವು ತೋಟಗಳ ಲೈನ್ ಮನೆಗಳಲ್ಲಿರುವ ಆದಿವಾಸಿ ಕಾರ್ಮಿಕ ವರ್ಗ ಶೋಷಣೆ ಮತ್ತು ದೌರ್ಜನ್ಯಕ್ಕೆ ಒಳಗಾಗುತ್ತಿದೆ ಎಂದು ಆರೋಪಿಸಿರುವ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ಜಿಲ್ಲಾ ಸಂಚಾಲಕ ವೈ.ಕೆ.ಗಣೇಶ್, ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಸೂಕ್ತ ತನಿಖೆ ನಡೆಸಿ ನ್ಯಾಯ ಒದಗಿಸಲು ಮುಂದಾಗಬೇಕೆಂದು ಒತ್ತಾಯಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಲವು ತೋಟದ ಲೈನ್‍ಮನೆಗಳಲ್ಲಿ ಕಾರ್ಮಿಕರಾಗಿ ದುಡಿಯುತ್ತಿರುವ ಆದಿವಾಸಿ ಕುಟುಂಬಗಳ ಮೇಲೆ ದೌರ್ಜನ್ಯ ನಡೆಯುತ್ತಿದೆ. ಸರ್ಕಾರ ನಿಗಧಿಪಡಿಸಿರುವ ವೇತನವನ್ನು ನೀಡದೆ ವಂಚಿಸಲಾಗುತ್ತಿದೆ. ವಿಶ್ರಾಂತಿಗೂ ಅವಕಾಶವಿಲ್ಲದಂತೆ ಹೆಚ್ಚಿನ ಅವಧಿ ದುಡಿಸಿಕೊಳ್ಳಲಾಗುತ್ತಿದೆ. ದೌರ್ಜನ್ಯಕ್ಕೆ ಒಳಗಾದವರು ಲೈನ್‍ಮನೆಯಿಂದ ಹೊರಬರಲು ಪ್ರಯತ್ನಿಸಿದರೆ ಅವರ ಮೂಲ ದಾಖಲಾತಿ ಮತ್ತು ಸಾಮಾಗ್ರಿಗಳನ್ನು ಕಸಿದುಕೊಂಡು ಸಾಲದ ಹಣವನ್ನು ತೀರಿಸುವಂತೆ ಒತ್ತಡ ಹೇರುತ್ತಿದ್ದಾರೆ ಎಂದು ಎಂದು ಆರೋಪಿಸಿದರು. ಈ ಬಗ್ಗೆ ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ದಾಖಲಿಸಲಾಗಿದೆ. ಆದರೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿರುವ ವೈ.ಕೆ.ಗಣೇಶ್, ಪೊಲೀಸ್ ಠಾಣೆಯಲ್ಲಿ ಪ್ರಕರಣ…
ಕುಶಾಲನಗರ ಆ.6 NEWS DESK : ಕುಶಾಲನಗರ ಗಣಪತಿ ದೇವಾಲಯದ ಮೂಲ ವಿಗ್ರಹಕ್ಕೆ ದಾನಿಗಳು 12ನೇ ಅವತಾರದ ಬೆಳ್ಳಿಯ ಕವಚವನ್ನು ಅರ್ಪಿಸಿದರು. ಮೂಲತಃ ಬೆಂಗಳೂರಿನ ನಿವಾಸಿಗಳು ಪ್ರಸಕ್ತ ಅಮೆರಿಕದಲ್ಲಿ ಉದ್ಯೋಗದಲ್ಲಿರುವ ವಿದ್ಯಾ ಮಂಜುನಾಥ ದಂಪತಿಗಳು ದೇವಾಲಯದಲ್ಲಿ ಪೂಜಾ ಕಾರ್ಯಕ್ರಮ ನೆರವೇರಿಸಿ ದೇವಾಲಯ ಆಡಳಿತ ಮಂಡಳಿಗೆ ಹಸ್ತಾಂತರ ಮಾಡಿದರು. ಶ್ರೀ ಗಣಪತಿಯ 32 ಅವತಾರದಲ್ಲಿ ಈಗಾಗಲೇ 12ನೇ ಅವತಾರದ ಬೆಳ್ಳಿಯ ಕವಚ ದೇವರಿಗೆ ಸಮರ್ಪಣೆಯಾಗಿದೆ. ಇನ್ನೂ 20 ಅವತಾರಗಳ ಕವಚಗಳು ಮುಂದಿನ ದಿನಗಳಲ್ಲಿ ದಾನಿಗಳಿಂದ ದೊರೆಯುವ ಆಶಯವನ್ನು ದೇವಾಲಯದ ಪ್ರಧಾನ ಅರ್ಚಕ ಆರ್.ಕೆ.ನಾಗೇಂದ್ರ ಬಾಬು ವ್ಯಕ್ತಪಡಿಸಿದರು. ಈ ಸಂಬಂಧ ದೇವಾಲಯದಲ್ಲಿ ವಿಶೇಷ ಹೋಮ ಹವನಾದಿ ಕಾರ್ಯಕ್ರಮಗಳು ಜರಗಿದವು. ದೇವಾಲಯದ ಆಡಳಿತ ಮಂಡಳಿ ಗೌರವಾಧ್ಯಕ್ಷ ವಿ.ಎನ್.ವಸಂತ್ ಕುಮಾರ್, ಅರ್ಚಕರಾದ ರಾಘವೇಂದ್ರ ಭಟ್ ಮತ್ತು ಆಡಳಿತ ಮಂಡಳಿ ಸದಸ್ಯರು, ಭಕ್ತಾದಿಗಳು ಇದ್ದರು.






