ಲೇಖಕ: admin

ಮಡಿಕೇರಿ ಆ.6 NEWS DESK : ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿ ಮಾಡಿ ಕೊಡಗು ಜಿಲ್ಲೆಯ ಮಳೆಹಾನಿ, ಗುಡ್ಡ ಕುಸಿತಗಳ ಬಗ್ಗೆ ಚರ್ಚೆ ನಡೆಸಿದರು.

Read More

ಮಡಿಕೇರಿ ಆ.6 NEWS DESK : ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಹಾಗೂ ಮಡಿಕೇರಿಯ ಪೊಮ್ಮಕ್ಕಡ ಒಕ್ಕೂಟದ ಸಹಯೋಗದಲ್ಲಿ ಕಕ್ಕಡ ನಮ್ಮೆಯನ್ನು ಸಂಭ್ರಮದಿಂದ ಆಚರಿಸಲಾಯಿತು.  ಕೊಡವ ಸಮಾಜದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದ ಕಾರ್ಯಕ್ರಮವನ್ನು ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷ ಮಂಡುವಂಡ ಪಿ.ಮುತ್ತಪ್ಪ ಉದ್ಘಾಟಿಸಿ ಮಾತನಾಡಿ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಮೊದಲ ಕಾರ್ಯಕ್ರಮವಾದ ಕಕ್ಕಡ ನಮ್ಮೆಯನ್ನು ಆಚರಿಸುತಿವುದು ಹೆಮ್ಮೆಯ ವಿಷಯ ಎಂದರು. ಸಾಹಿತ್ಯದ ಬೆಳವಣಿಗೆಗೆ ಅಕಾಡೆಮಿಯು ಇನ್ನಷ್ಟು ಕಾರ್ಯವನ್ನು ಮಾಡುವಂತಾಗಲಿ ಎಂದು ಆಶಿಸಿದರು. ಕೊಡವ ಭಾ಼ಷಿಕ ಜನಾಂಗವನ್ನು ಒಗ್ಗೂಡುಸುವ ಮೂಲಕ ಕೊಡವ ಸಂಸ್ಕೃತಿಯನ್ನು ಉಳಿಸಿ ಬೆಳೆಸುವಂತಾಗಬೇಕೆಂದರು. ಕಕ್ಕಡ ತೀನಿ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದ ಉದ್ಯಮಿ ಕುಪ್ಪಂಡ ಛಾಯಾನಂಜಪ್ಪ, ಸಮಾಜದಲ್ಲಿ ಮಹಿಳೆಯ ಸಾಧನೆಯ ಹಿಂದಿನ ಶ್ರಮದ ಬಗ್ಗೆ ವಿವರಿಸದಲ್ಲದೆ ಮಡಿಕೇರಿಯ ಪೊಮ್ಮಕ್ಕಡ ಕೂಟದ ಸಾಧನೆ ಬಗ್ಗೆ ಪ್ರಶಂಸಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಅಜ್ಜಿನೀಕಂಡ ಮಹೇಶ್ ನಾಚಯ್ಯ, ಕೊಡವ ಜನಾಂಗದ ಕೃಷಿ ಬದುಕಿನ ವಿಶೇಷತೆಯ ಬಗ್ಗೆ…

Read More

ಮಡಿಕೇರಿ ಆ.6 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಆಧಾರ ರಹಿತ ಆಪಾದನೆ ಮಾಡಿ ಅವರ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಷಡ್ಯಂತ್ರ ಮಾಡುತ್ತಿರುವ ಶಕ್ತಿಗಳ ವಿರುದ್ಧ ಆ.8 ರಂದು ಕುಶಾಲನಗರದಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಅಹಿಂದ ಒಕ್ಕೂಟದ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಕುರುಬ ಸಮಾಜದ ರಾಜ್ಯ ನಿರ್ದೇಶಕ ಕೆ.ಬಿ.ಶಾಂತಪ್ಪ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಇಲ್ಲಸಲ್ಲದ ಆರೋಪ ಹೊರಿಸಿ ಪ್ರತಿಭಟನೆ ನಡೆಸುವ ಮೂಲಕ ಅವರನ್ನು ತೇಜೋವಧೆ ಮಾಡಲು ಹೋರಟಿರುವ ಪ್ರತಿಪಕ್ಷಗಳ ಕುತಂತ್ರವನ್ನು ಜನರಿಗೆ ಮನವರಿಕೆ ಮಾಡಲಾಗುವುದು, ಸತ್ಯವನ್ನು ಜನರ ಮುಂದೆ ಇಡುವ ಉದ್ದೇಶದಿಂದ ಕೊಡಗು ಜಿಲ್ಲಾ ಅಹಿಂದ ಒಕ್ಕೂಟ, ಕುರುಬ ಸಮಾಜ ಹಾಗೂ ಪ್ರಗತಿಪರ ಸಂಘಟನೆಗಳಿಂದ ಆ.8 ರಂದು ಕುಶಾಲನಗರದ ಕಾರ್ಯಪ್ಪ ವೃತ್ತದಿಂದ ನಗರದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು ರಾಜಕೀಯ ರಹಿತವಾಗಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು. ಮೂಡ ಹಗರಣದಲ್ಲಿ ಮುಖ್ಯಮಂತ್ರಿಗಳ ವಿರುದ್ಧ ವಿನಾಕಾರಣ ಆರೋಪ ಹೊರಿಸಿ ಸುಳ್ಳನ್ನು ಸತ್ಯ…

Read More

ನಾಪೋಕ್ಲು ಆ.6 NEWS DESK : ಬಿಲ್ಲವ ಸಮಾಜದ ಸ್ಥಾಪನೆಗೆ ನಾಪೋಕ್ಲುವಿನಲ್ಲಿ ಅಭೂತಪೂರ್ವ ಸ್ಪಂದನೆ ದೊರೆತಿದ್ದು, ಸದಸ್ಯರ ಸಹಕಾರದಿಂದ ಸಂಘವನ್ನು ಮತ್ತಷ್ಟು ಅಭಿವೃದ್ಧಿಪಡಿಸಲಾಗುವುದು ಎಂದು ಸಂಘದ ಅಧ್ಯಕ್ಷ ಬಿ.ಎಂ.ಪ್ರತೀಪ ಹೇಳಿದರು. ನಾಪೋಕ್ಲುವಿನ ಕೊಡವ ಸಮಾಜದಲ್ಲಿ ಆಯೋಜಿಸಲಾಗಿದ್ದ ಬಿಲ್ಲವ ಸಮಾಜದ ಆಟಿಡೊಂಜಿ ದಿನ ಕಾರ್ಯಕ್ರಮದ ಬಳಿಕ ಜರುಗಿದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನೂತನವಾಗಿ ಸ್ಥಾಪಿತವಾದ ಸಮಾಜದಲ್ಲಿ 217 ಮಂದಿ ಸದಸ್ಯರಿದ್ದಾರೆ. ಬಿಲ್ಲವ ಸಮಾಜಕ್ಕೆ ಒಳಪಟ್ಟ ಪ್ರತಿಯೊಬ್ಬರ ಮನೆಗೆ ತೆರಳಿದಾಗ ಎಲ್ಲರೂ ಉತ್ತಮವಾಗಿ ಸ್ಪಂದಿಸಿದ್ದಾರೆ. ಮುಂದಿನ ದಿನಗಳಲ್ಲಿ ಎಲ್ಲರ ಸಹಕಾರದಿಂದ ಸಂಘದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು. ಬಿಲ್ಲವ ಸಮಾಜ ಕೇವಲ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸುವುದಕ್ಕೆ ಸೀಮಿತವಾಗಬಾರದು. ಸಮಾಜದ ಬಡವರ ಏಳಿಗೆಗಾಗಿ ಹಾಗೂ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ಶ್ರಮಿಸಲಿದೆ ಎಂದರು. ಸಭೆಯಲ್ಲಿ ಸಂಘದ ವತಿಯಿಂದ ನೂತನವಾಗಿ ಮರಣ ನಿಧಿ ಸ್ಥಾಪಿಸಲಾಯಿತು ಹಾಗೂ ಸಂಘದ ಶ್ರೇಯೋಭಿವೃದ್ಧಿಯ ಬಗ್ಗೆ ಚರ್ಚಿಸಿ ಒಪ್ಪಿಗೆ ಪಡೆದು ಕೆಲವು ನಿರ್ಧಾರಗಳನ್ನು ತೆಗೆದುಕೊಳ್ಳಲಾಯಿತು. ನೂತನ ಆಡಳಿತ ಮಂಡಲಿಗೆ ಚುನಾವಣೆ…

Read More

ಮಡಿಕೇರಿ ಆ.6 NEWS DESK : ವಿಶ್ವ ರಾಷ್ಟ್ರ ಸಂಸ್ಥೆಯ ಜಾಗತಿಕ ಆದಿಮ ಸಂಜಾತ ಜನಾಂಗಗಳ ಹಕ್ಕುಗಳ ದಿನಾಚರಣೆಯ ಅಂಗವಾಗಿ ಆ.9 ರಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಬೆಳಿಗ್ಗೆ 10.30 ಗಂಟೆಯಿಂದ 11.30 ರವರೆಗೆ ಶಾಂತಿಯುತ ಧರಣಿ ಸತ್ಯಾಗೃಹ ನಡೆಸಿ ಕೊಡವರ ವಿವಿಧ ಹಕ್ಕುಗಳನ್ನು ಮಂಡಿಸಲಾಗುವುದು ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸಾಂವಿಧಾನಿಕ ಹಕ್ಕುಗಳಿಂದ ವಂಚಿತವಾಗಿರುವ ಆದಿಮಸಂಜಾತ ಕೊಡವ ಬುಡಕಟ್ಟು ಜನರ ಬೇಡಿಕೆಗಳ ಬಗ್ಗೆ ದೇಶದ ಆಡಳಿತ ವ್ಯವಸ್ಥೆ ಮತ್ತು ವಿಶ್ವದ ಗಮನ ಸೆಳೆಯವ ಸಲುವಾಗಿ ಧರಣಿ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ. ಕೊಡವರು ಈ ಪವಿತ್ರ ಕೊಡವ ನೆಲದ ಮೂಲನಿವಾಸಿ ಆದಿಮಸಂಜಾತ ಬುಡಕಟ್ಟು ಸಮುದಾಯದವರಾಗಿದ್ದಾರೆ. ಕೊಡವರಿಗಿರುವ ಏಕೈಕ ನೆಲೆ ಕೊಡವ ಲ್ಯಾಂಡ್ ಕೊಡವರ ಸಾಂಪ್ರದಾಯಿಕ ಹಾಗೂ ಅವಿಭಾಜ್ಯ ಮಾತೃಭೂಮಿಯಾಗಿದೆ. ಕೊಡವರ ಜನ್ಮಭೂಮಿ ಈ ಭೂಮಂಡಲದಷ್ಟೇ ಪ್ರಾಚೀನವಾಗಿದೆ. ಕೊಡವ ಬುಡಕಟ್ಟು ಜನಾಂಗವು ಮಾನವ ಜನಾಂಗದಷ್ಟೇ ಹಳೆಯದಾಗಿದೆ. ಈ ಕೊಡವ ಮಣ್ಣಿನಲ್ಲಿ…

Read More

ನಾಪೋಕ್ಲು ಆ.6 NEWS DESK : ನಾಪೋಕ್ಲುವಿನ ಇಂದಿರಾನಗರದ ವಿವೇಕಾನಂದ ಸಂಘದ ವತಿಯಿಂದ 19ನೇ ವರ್ಷದ ಗೌರಿ-ಗಣೇಶೋತ್ಸವದ ಆಮಂತ್ರಣ ಪತ್ರವನ್ನು ಬಿಡುಗಡೆ ಮಾಡಲಾಯಿತು. ಇಂದಿರಾನಗರದಲ್ಲಿ ಸಂಘದ ಅಧ್ಯಕ್ಷ ಸುದೀಪ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ವನಜಾಕ್ಷಿ ರೇಣುಕೇಶ್ ಮತ್ತು ಮಾಜಿ ಸೈನಿಕ ಕೊಂಡಿರ ಗಣೇಶ್ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಿದರು. ಈ ಸಂದರ್ಭ ಸಂಘದ ಉಪಾಧ್ಯಕ್ಷ ಯು.ಕೆ.ಶಶಿ, ಕಾರ್ಯದರ್ಶಿ ಸಂದೇಶ್, ಖಜಾಂಚಿ ಮತ್ತು ಉಸ್ತುವಾರಿ ಡಿ.ಆರ್.ಜಲೇಂದ್ರ. ನಿರ್ದೇಶಕರಾದ ಅನಿಲ್, ಗಣೇಶ್, ಪ್ರಕಾಶ್, ಪಟ್ಟಾಭಿ ಪ್ರಕಾಶ್ ಇನ್ನಿತರ ಸದಸ್ಯರು ಹಾಜರಿದ್ದರು. ವರದಿ : ದುಗ್ಗಳ ಸದಾನಂದ. 

Read More

ಮಡಿಕೇರಿ ಆ.6 NEWS DESK : ಲೋಕಸೇವಾ ಆಯೋಗದ ಐಎಎಸ್ ಮತ್ತು ಐಪಿಎಸ್ ಪರೀಕ್ಷೆಗಳನ್ನು ಸುಲಭವಾಗಿ ಎದುರಿಸಲು ಅನುಕೂಲವಾಗುವಂತೆ ಬೆಂಗಳೂರಿನ ಕರ್ನಾಟಕ ಆರ್ಯವೈಶ್ಯ ಮಹಾಸಭಾದ ವಾಸವಿ ಅಕಾಡೆಮಿ ಮಧ್ಯಮ ಹಾಗೂ ಬಡ ಕುಟುಂಬಗಳ ವಿದ್ಯಾರ್ಥಿಗಳಿಗಾಗಿ 6ನೇ ಬ್ಯಾಚ್ ನ ಉಚಿತ ತರಬೇತಿ ಕಾರ್ಯಾಗಾರವನ್ನು ಆಯೋಜಿಸಿದೆ ಎಂದು ಕರ್ನಾಟಕ ಆರ್ಯವೈಶ್ಯ ಮಹಾಸಭಾ ನಿರ್ದೇಶಕ ಬಿ.ಆರ್.ನಾಗೇಂದ್ರ ಪ್ರಸಾದ್ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಬೆಂಗಳೂರು ನಗರದ ವಿಜಯನಗರ ಬಡಾವಣೆಯ ಚಂದ್ರಾ ಲೇಔಟ್‍ನಲ್ಲಿರುವ ವಾಸವಿ ಅಕಾಡೆಮಿ ಈಗಾಗಲೇ 5 ತಂಡಗಳಿಗೆ ಉತ್ತಮ ಶಿಕ್ಷಣ ನೀಡಿದೆ. ಇದೀಗ 2025ರಲ್ಲಿ ನಡೆಯುವ ಲೋಕಸೇವಾ ಆಯೋಗದ ಪರೀಕ್ಷೆಗಳನ್ನು ಬರೆಯಲು ಇಚ್ಛಿಸುವ ವಿದ್ಯಾರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕೊಡಗು ಜಿಲ್ಲೆಯ ವಿದ್ಯಾರ್ಥಿಗಳು ಇದರ ಲಾಭ ಪಡೆದುಕೊಳ್ಳುವಂತೆ ಮನವಿ ಮಾಡಿದ್ದಾರೆ. ಯಾವುದೇ ಪದವೀಧರರು ಯು.ಪಿ.ಎಸ್.ಸಿ ಪರೀಕ್ಷೆಗಳನ್ನು ತೆಗೆದುಕೊಳ್ಳಲು ಅವಕಾಶವಿದೆ. 2025ರಲ್ಲಿ ಪರೀಕ್ಷೆ ಬರೆಯುವ ಆಸಕ್ತ ವಿದ್ಯಾರ್ಥಿಗಳಿಗೆ ಮಾತ್ರ ತರಬೇತಿ ನೀಡಲಾಗುತ್ತಿದ್ದು, ಎಲ್ಲಾ ತರಗತಿಗಳು ಸಂಪೂರ್ಣ ಉಚಿತವಾಗಿರುತ್ತದೆ. ಯಾವುದೇ ಸಮುದಾಯದ ವಿದ್ಯಾರ್ಥಿಗಳು ನಮ್ಮ ಸಂಸ್ಥೆಯ…

Read More

ಮಡಿಕೇರಿ NEWS DESK ಆ.6 : ಹೊದ್ದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಭಾರೀ ಮಳೆಯಿಂದ ಹಾನಿಯಾದ ಮನೆಗಳಿಗೆ ಟಾರ್ಪಲ್, ಆಹಾರ ಸಾಮಾಗ್ರಿ ಕಿಟ್ ಹಾಗೂ ಸ್ವಚ್ಛತಾ ಸಾಮಾಗ್ರಿಗಳನ್ನು ಗ್ರಾಮ ಪಂಚಾಯತಿ ವಿಪತ್ತು ನಿರ್ವಹಣಾ ಕಾರ್ಯಪಡೆ ವತಿಯಿಂದ ವಿತರಿಸಲಾಯಿತು. ಈ ಸಂದರ್ಭ ಗ್ರಾ.ಪಂ ಅಧ್ಯಕ್ಷ ಹೆಚ್.ಎ ಹಂಸ, ಉಪಾಧ್ಯಕ್ಷ ಅನುರಾಧ, ಸದಸ್ಯರು, ಪಿಡಿಒ ಅಬ್ದುಲ್ಲ, ಗ್ರಾಮ ಲೆಕ್ಕಾಧಿಕಾರಿ ಸಂತೋಷ್ ಪಾಟೀಲ್ ಹಾಗೂ ಸಮಿತಿಯ ಸರ್ವ ಸದಸ್ಯರು ಹಾಜರಿದ್ದರು.

Read More

ಸೋಮವಾರಪೇಟೆ ಆ.6 NEWS DESK : ಪ್ರಾಥಮಿಕ ಶಾಲಾ ಶಿಕ್ಷಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕ ಒತ್ತಾಯಿಸಿದೆ. ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎನ್.ಮಂಜುನಾಥ್ ಅವರ ನೇತೃತ್ವದಲ್ಲಿ ತಹಶೀಲ್ದಾರ್ ನವೀನ್ ಕುಮಾರ್ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ ಸಂಘದ ಪ್ರಮುಖರು, 2017ರ ಹೊಸ ವೃಂದ ಮತ್ತು ನೇಮಕಾತಿ ನಿಯಮಗಳಿಂದ 2016ಕ್ಕಿಂತ ಮೊದಲು ನೇಮಕವಾದ ಶಿಕ್ಷಕರಿಗೆ ಬಡ್ತಿ, ವರ್ಗಾವಣೆಗಳಲ್ಲಿ ಆಗುತ್ತಿರುವ ಅನ್ಯಾಯಗಳನ್ನು ಸರಿಪಡಿಸಿಸುವುದು. ಅರ್ಹ ಪ್ರಾಥಮಿಕ ಶಾಲಾ ಶಿಕ್ಷಕರುಗಳಿಗೆ ಹಿಂದಿನಂತೆ ಪೌಢಶಾಲೆಗಳಿಗೆ ಬಡ್ತಿ ನೀಡುವುದು, ಮುಖ್ಯ ಶಿಕ್ಷಕರು ಮತ್ತು ಹಿರಿಯ ಮುಖ್ಯ ಶಿಕ್ಷಕರ ಹುದ್ದೆಗಳಿಗೆ ಸೇವಾ ಜೇಷ್ಠತೆ ಆಧಾರದ ಮೇಲೆ ಬಡ್ತಿ ನೀಡುವಂತೆ ಒತ್ತಾಯಿಸಿದರು. ಶಿಕ್ಷಕರ ಸಂಘದ ಜಿಲ್ಲಾ ಘಟಕದ ಉಪಾಧ್ಯಕ್ಷ ಕರುಂಬಯ್ಯ, ರಾಜ್ಯ ನಾಮ ನಿರ್ದೇಶಿತ ಉಪಾಧ್ಯಕ್ಷ ಎಸ್.ಎ.ಯೋಗೇಶ್. ತಾಲ್ಲೂಕು ಘಟಕದ ಅಧ್ಯಕ್ಷ ಟಿ.ಕೆ.ಬಸವರಾಜು, ಸರ್ಕಾರಿ ನೌಕರರ ಸಂಘದ ಪ್ರದಾನ ಕಾರ್ಯದರ್ಶಿ ಎನ್.ಎಂ.ನಾಗೇಶ್ ಸೇರಿದಂತೆ ಪದಾಧಿಕಾರಿಗಳು ಹಾಜರಿದ್ದರು.

Read More

ವಿರಾಜಪೇಟೆ ಆ.6 NEWS DESK : ವಿರಾಜಪೇಟೆಯ ಮಗ್ಗುಲ ಗ್ರಾಮದ ಶ್ರೀ ಶನೇಶ್ವರ ದೇವಾಲಯದಲ್ಲಿ ಶ್ರಾವಣ ಮಾಸದ ವಿಶೇಷ ಪೂಜೆಗಳು ಆ.10 ರಿಂದ ಆರಂಭಗೊಳ್ಳಲಿದೆ. ಅಂದು ಬೆಳಿಗ್ಗೆ 10 ಗಂಟೆಗೆ ಗಣಪತಿ ಹೋಮದೊಂದಿಗೆ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಆರಂಭಗೊಳ್ಳಲಿದ್ದು, ಮಹಾ ಪೂಜೆಯ ಬಳಿಕ ಅನ್ನಸಂತರ್ಪಣೆ ನಡೆಯಲಿದೆ. ಆ.17, 24, ಮತ್ತು 31 ನಾಲ್ಕು ಶನಿವಾರದಂದು ಶ್ರಾವಣ ಮಾಸ ಪೂಜೆಗಳು ನಡೆಯಲಿದೆ. ಶ್ರಾವಣ ಮಾಸದ ವಿಶೇಷ ದಿನಗಳಲ್ಲಿ ನವಗ್ರಹ ಪೂಜೆ, ಶನಿಶಾಂತಿ ಪೂಜೆ, ಶನಿಜಪ ತಪ ಮುಂತಾದ ಪೂಜೆಗಳು ಜರುಗಲಿದೆ. ಅಪರಾಹ್ನ 1 ಗಂಟೆಗೆ ನಾಡಿನ ಸುಭಿಕ್ಷೆಗಾಗಿ ಶ್ರೀ ಸ್ವಾಮಿಗೆ ವಿಶೇಷ ಮಾಹಾ ಪೂಜೆ ನಡೆಯಲಿದ್ದು, ನಂತರ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನೆರವೇರಲಿದೆ. ನಾಲ್ಕು ವಾರಗಳ ಶ್ರೀ ಸ್ವಾಮಿಗೆ ಸಲ್ಲುವ ಶ್ರಾವಣ ಮಾಸ ವಿಶೇಷ ಪೂಜೆಗಳಲ್ಲಿ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಶ್ರೀ ಸ್ವಾಮಿಯ ಅನುಗ್ರಹ ಪಡೆದುಕೊಳ್ಳುವಂತೆ ದೇವಾಲಯದ ಆಡಳಿತ ಮಂಡಳಿ ಮನವಿ ಮಾಡಿದೆ. ಹೆಚ್ಚಿನ ಮಾಹಿತಿಗಾಗಿ ಅರ್ಚಕರು 9449359210 ಮತ್ತು ಅದ್ಯಕ್ಷರು…

Read More