ವಿರಾಜಪೇಟೆ ಆ.6 NEWS DESK : ವಿರಾಜಪೇಟೆ ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ ತರಗತಿ ಪ್ರತಿನಿಧಿಗಳು ಹಾಗೂ ವಿದ್ಯಾರ್ಥಿ ಸಂಘಕ್ಕೆ ಚುನಾವಣೆ ಮೂಲಕ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಪ್ರಧಾನ ಕಾರ್ಯದರ್ಶಿಯಾಗಿ ದ್ವಿತೀಯ ಪಿಯು ತರಗತಿಯ ಹರ್ಷ, ಜಂಟಿ ಕಾರ್ಯದರ್ಶಿಗಳಾಗಿ ಕೃತಿಕ್ ರೋಷನ್ ಹಾಗೂ ವಿ.ಎಸ್.ದೀಷ್ಮ , ಕ್ರೀಡಾ ಕಾರ್ಯದರ್ಶಿಯಾಗಿ ವಿದ್ಯಾರ್ಥಿ ಕೆ.ಎಸ್.ನಾಣಯ್ಯ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಸಿ.ವಿ.ಅನನ್ಯ ಆಯ್ಕೆಯಾದರು. ಈ ಆಯ್ಕೆ ಪ್ರಕ್ರಿಯೆಯಲ್ಲಿ ಕಾಲೇಜು ಪ್ರಾಂಶುಪಾಲರಾದ ನಾಣಯ್ಯ ಹಾಗೂ ಉಪನ್ಯಾಸಕರು ಹಾಜರಿದ್ದರು.
ಲೇಖಕ: admin
ಸೋಮವಾರಪೇಟೆ NEWS DESK ಆ.5 : ಸೋಮವಾರಪೇಟೆ ತಾಲ್ಲೂಕು ಒಕ್ಕಲಿಗರ ಯುವ ವೇದಿಕೆ ವತಿಯಿಂದ ಶಾಂತಳ್ಳಿ ಗ್ರಾಮದಲ್ಲಿ ಭಾನುವಾರ ನಡೆದ 9ನೇ ವರ್ಷದ ಕೆಸರುಗದ್ದೆ ಕ್ರೀಡಾಕೂಟದ ಮಹಿಳೆಯರ ಥ್ರೋಬಾಲ್ ಸ್ಪರ್ಧೆಯಲ್ಲಿ ಭಾಗ್ಯ ಟೀಮ್ ಪ್ರಥಮ ಹಾಗೂ ಮಸಗೋಡು ಮಹಿಳೆಯರ ತಂಡ ದ್ವಿತೀಯ ಸ್ಥಾನ ಪಡೆಯಿತು. ಪುರುಷರ ವಾಲಿಬಾಲ್‌ನಲ್ಲಿ ಕೂಗೂರ್ ಬಾಯ್ಸ್ ತಂಡ (ಪ್ರ) ತಾಕೇರಿ ತಂಡ (ದ್ವೀ) ಪುರುಷರ ಹಗ್ಗಜಗ್ಗಾಟದಲ್ಲಿ ಸಂಪಾಜೆ ತಂಡ (ಪ್ರ),ಸೋಮವಾರಪೇಟೆ ರಾಕ್‌ಸ್ಟಾರ್ ತಂಡ(ದ್ವಿ) ಮಹಿಳೆಯರ ಹಗ್ಗಾಜಗ್ಗಾಟದಲ್ಲಿ ಹಾನಗಲ್ಲು ಗ್ರಾಮದ ಸರಸ್ವತಿ ಯುವತಿ ಮಂಡಳಿ(ಪ್ರ), ಶಾಂತಳ್ಳಿ ಕುಮಾರಲಿಂಗೇಶ್ವರ ಯುವತಿ ಮಂಡಳಿ (ದ್ವಿ) ಸ್ಥಾನಪಡೆಯಿತು. ಪ್ರೇಕ್ಷಕರನ್ನು ರಂಜಿಸಿದ ಗಂಡಹೆAಡತಿ ಓಟದಲ್ಲಿ ಮೂದ್ರವಳ್ಳಿ ಗ್ರಾಮದ ಪೂಜಾ ರಾಕೇಶ್ ಪ್ರಥಮ, ಶಾಂತಳ್ಳಿ ಲೇಖಾ ಕುಮಾರ್ ದ್ವಿತೀಯ ಸ್ಥಾನ ಪಡೆದರು. ಕೆಸರುಗದ್ದೆ ಓಟದ ಮಹಿಳೆಯರ ವಿಭಾಗದಲ್ಲಿ ಶಾಂತಳ್ಳಿ ಜಯಪ್ರಧ ಮೇದಪ್ಪ(ಪ್ರ), ಡಾ.ಅಮೂಲ್ಯ(ದ್ವಿ), ಪುರುಷರ ವಿಭಾಗದಲ್ಲಿ ವಿಕ್ರಂ ಸಾಗರ್(ಪ್ರ), ಎಚ್.ಡಿ.ತೇಜಸ್ವಿ(ದ್ವಿ) ವಯಸ್ಕರ ಮಹಿಳೆಯರ ವಿಭಾಗದಲ್ಲಿ ಹರ್ಷಿತ್(ಪ್ರ), ನಿಶಾ, ಮತ್ತು ವಿದ್ಯಾ (ದ್ವಿ), ಪುರುಷರ ವಿಭಾಗದಲ್ಲಿ ಸುನಿಲ್…
ಮಡಿಕೇರಿ NEWS DESK ಆ.5 : ಕೊಡಗು ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ವಿದ್ಯುತ್ ಚಿತಾಗಾರ ನಿರ್ಮಾಣ ಮಾಡಬೇಕೆಂದು ಆಗ್ರಹಿಸಿ ಬಹುಜನ ಸಮಾಜ ಪಾರ್ಟಿ ವತಿಯಿಂದ ಆ.7ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಸ್ವಾತಂತ್ರ್ಯ ಬಂದು 77 ವರ್ಷ ಕಳೆದರೂ ಇನ್ನೂ ಕೂಡ ಕೊಡಗು ಜಿಲ್ಲೆಯ ಮೂಲ ನಿವಾಸಿಗಳು, ಬಡವರ್ಗದವರಿಗೆ ಮೂಲಭೂತ ಸೌಕರ್ಯಗಳು ಲಭಿಸಿಲ್ಲ. ಜಿಲ್ಲೆಯಲ್ಲಿ ಸಾಮಾನ್ಯವಾಗಿ ಮೂರರಿಂದ ನಾಲ್ಕು ತಿಂಗಳ ಕಾಲ ಮಳೆಗಾಲ ಇರುತ್ತದೆ. ಈ ಸಂದರ್ಭದಲ್ಲಿ ಸಾವನ್ನಪ್ಪುವವರ ಶವ ಸಂಸ್ಕಾರಕ್ಕೆ ಅಗ್ತಯವಾಗಿ ಬೇಕಾಗುವ ಕಟ್ಟಿಗೆಗಳು ಸಿಗುವದಿಲ್ಲ. ಬೇಸಿಗೆಯಲ್ಲಿಯೂ ಕಟ್ಟಿಗೆಗಳ ಅಭಾವವಿರುತ್ತದೆ. ಅರಣ್ಯ ಪ್ರದೇಶದಿಂದ ಕಟ್ಟಿಗೆ ತರಲು ಅರಣ್ಯ ಇಲಾಖೆಯ ಅಭ್ಯಂತರವಿರುತ್ತದೆ. ಇದರಿಂದ ಜನಸಾಮಾನ್ಯರಿಗೆ ತುಂಬಾ ತೊಂದರೆಯಾಗುತ್ತದೆ. ಈ ಬಗ್ಗೆ ಜಿಲ್ಲೆಯ ಯಾವದೇ ಜನಪ್ರತಿನಿಧಿಗಳಾಗಿ, ಅದಿಕಾರಿಗಳಾಗಿ ಇದುವರೆಗೆ ಗಮನ ಹರಿಸಿಲ್ಲ. ಈ ಬಗ್ಗೆ ಪಕ್ಷದ ವತಿಯಿಂದ ಕಳೆದ ಫೆಬ್ರವರಿಯಲ್ಲಿ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಮನವಿ ಕೂಡ ಸಲ್ಲಿಸಲಾಗಿತ್ತು. ಆದರೂ ಇದುವರೆಗೆ ಯಾವದೇ ಸ್ಪಂದನ ದೊರೆತಿಲ್ಲವೆಂದು ಬಿಎಸ್‌ಪಿ ಜಿಲ್ಲಾಧ್ಯಕ್ಷ ಆಟ್ರಂಗಡ ದಿವಿಲ್‌ಕುಮಾರ್ ಹಾಗೂ ಕೊಡಗು ಜಿಲ್ಲಾ…
ಶನಿವಾರಸಂತೆ NEWS DESK ಆ.5 : ಮಹಾಮೈತ್ರಿ ಬುದ್ಧ ವಿಹಾರ ನಿರ್ಮಾಣ ಸಂಬಂಧ ಕೊಡಗು ಜಿಲ್ಲಾ ಮಹಾಮೈತ್ರಿ ಬುದ್ಧ ವಿಹಾರ ಟ್ರಸ್ಟ್ ರಚನೆಗೊಂಡಿದ್ದು, ಅಧ್ಯಕ್ಷರಾಗಿ ಮಾನವ ಬಂಧುತ್ವ ವೇದಿಕೆಯ ಅಧ್ಯಕ್ಷ ಜೆ.ಎಲ್.ಜನಾರ್ಧನ್ ಆಯ್ಕೆಯಾಗಿದ್ದಾರೆ. ಶನಿವಾರಸಂತೆಯ ಪ್ರವಾಸಿ ಮಂದಿರದಲ್ಲಿ ಸಭೆ ನಡೆಸಿದ ಪ್ರಮುಖರು ಅಧ್ಯಕ್ಷರಾದಿಯಾಗಿ ಇತರ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಿದರು. ಗೌರವಾಧ್ಯಕ್ಷರಾಗಿ ಜೆ.ಆರ್.ಪಾಲಾಕ್ಷ, ಪ್ರಧಾನ ಕಾರ್ಯದರ್ಶಿಯಾಗಿ ಎಂ.ಎಸ್.ವೀರೇಂದ್ರ, ಖಜಾಂಚಿ ಮಂಜು ಪೈಂಟರ್, ಉಪಾಧ್ಯಕ್ಷರಾಗಿ ನಿಂಗರಾಜು ಚೀಕನಹಳ್ಳಿ, ಮಂಜುನಾಥ ಎಂ.ಕೆ, ಗುರು ಕಾಜೂರು, ಸಹ ಕಾರ್ಯದರ್ಶಿಯಾಗಿ ನವೀನ್ ಕೊಡ್ಲಿಪೇಟೆ, ಟ್ರಸ್ಟಿಗಳಾಗಿ ಎಂ.ಜೆ.ನಾಗರಾಜ್, ರಾಮನಾಯಕ್, ಮಂಜುನಾಥ ಎಂ.ಎನ್, ಮಹಾದೇವ, ಮೋಹನ್, ಪಾಪು, ವಿಶ್ವ ಮಾದ್ರೆ, ಮಂಜು, ಯೋಗೇಶ್ ಹಾಗೂ ಪುಟ್ಟರಾಜು, ಅವರುಗಳನ್ನು ಆಯ್ಕೆ ಮಾಡಲಾಯಿತು. ನೂತನ ಅಧ್ಯಕ್ಷ ಜೆ.ಎಲ್.ಜನಾರ್ಧನ್ ಅವರು ಮಾತನಾಡಿ ಬುದ್ಧ ವಿಹಾರ ಯೋಜನೆಗೆ ಎಲ್ಲರೂ ಕೈಜೋಡಿಸಬೇಕು ಮತ್ತು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿ ಯಶಸ್ಸುಗೊಳಿಸಬೇಕು ಎಂದು ಕರೆ ನೀಡಿದರು. ಗೌರವಾಧ್ಯಕ್ಷ ಜೆ.ಆರ್.ಪಾಲಾಕ್ಷ ಅವರು ಮಾತನಾಡಿ ಮಹಾಮೈತ್ರಿ ಬುದ್ಧ ವಿಹಾರ ನಿರ್ಮಾಣದ ಉದ್ದೇಶ ಹಾಗೂ ಟ್ರಸ್ಟ್…
ಮಡಿಕೇರಿ NEWS DESK ಆ.5 : ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರ ಅಧ್ಯಕ್ಷತೆಯ ಸೋಮವಾರಪೇಟೆ ತಾಲ್ಲೂಕು ಅಕ್ರಮ ಸಕ್ರಮ (ಬಗರ್ ಹುಕುಂ) ಸಮಿತಿಯ ನಾಮ ನಿರ್ದೇಶಿತ ಸದಸ್ಯರಾಗಿ ಆಯ್ಕೆಯಾದ ಜೆ.ಎಲ್.ಜನಾರ್ಧನ್ ಅವರನ್ನು ದಲಿತ ಸಂಘಟನೆಗಳ ಪ್ರಮುಖರು ಶನಿವಾರಸಂತೆಯಲ್ಲಿ ಆತ್ಮೀಯವಾಗಿ ಸನ್ಮಾನಿಸಿ ಅಭಿನಂದಿಸಿದರು. ಶನಿವಾರಸಂತೆ ಪ್ರವಾಸಿ ಮಂದಿರದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಜೆ.ಎಲ್.ಜನಾರ್ಧನ್ ಅವರು ಸರ್ಕಾರ ನೀಡಿರುವ ಜವಾಬ್ದಾರಿಯನ್ನು ದಕ್ಷತೆಯಿಂದ ನಿಭಾಯಿಸುವ ಮೂಲಕ ಶಾಸಕರು ನನ್ನ ಮೇಲಿಟ್ಟಿರುವ ವಿಶ್ವಾಸವನ್ನು ಉಳಿಸಿಕೊಳ್ಳುವುದಾಗಿ ತಿಳಿಸಿದರು. ದಲಿತ ಸಂಘರ್ಷ ಸಮಿತಿ ಸಂಘಟನೆಗಳ ಐಕ್ಯ ಹೋರಾಟ ಚಾಲನಾ ಸಮಿತಿಯ ಅಧ್ಯಕ್ಷ ಜೆ.ಆರ್.ಪಾಲಾಕ್ಷ, ಪ್ರಧಾನ ಕಾರ್ಯದರ್ಶಿ ಎಂ.ಎಸ್.ವೀರೇಂದ್ರ, ಪ್ರಮುಖರಾದ ರಾಮ ಕುಮಾರ್, ಮಂಜು ಪೈಂಟರ್, ಗುರು ಕಾಜೂರು, ನವೀನ್, ನಾಗರಾಜ್ ಎಂ.ಜೆ, ಮಂಜುನಾಥ ಮಾದ್ರೆ, ವಿಶ್ವ ಎಂ.ಪಿ, ನಿಂಗರಾಜು ಚೀಕನಹಳ್ಳಿ ಮತ್ತಿತರರು ಉಪಸ್ಥಿತರಿದ್ದರು.
ಮಡಿಕೇರಿ ಆ.5 NEWS DESK : ಕೊಡವ ಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ ಮತ್ತು ಎಸ್‍ಟಿ ಟ್ಯಾಗ್ ಕುರಿತು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಬೇಡಿಕೆಗೆ ಪೂರಕವಾಗಿ ಆಯೋಗವನ್ನು ರಚಿಸಬೇಕೆಂದು ಖ್ಯಾತ ಅರ್ಥಶಾಸ್ತ್ರಜ್ಞ, ಹಾರ್ವರ್ಡ್ ವಿದ್ವಾಂಸ ಕೇಂದ್ರದ ಮಾಜಿ ಸಚಿವ ಡಾ.ಸುಬ್ರಮಣಿಯನ್ ಸ್ವಾಮಿ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿಯ ರಿಟ್ ಅರ್ಜಿ ವಿಚಾರಣೆ ಇಂದು ಹೈಕೋರ್ಟ್‍ನಲ್ಲಿ ನಡೆಯಿತು. ಕರ್ನಾಟಕ ರಾಜ್ಯ ಶ್ರೇಷ್ಠ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ನಿಲಯ್ ವಿಪಿನ್ ಚಂದ್ರ ಅಂಜಾರಿಯಾ ಅವರನ್ನೊಳಗೊಂಡ ವಿಭಾಗೀಯ ಪೀಠ ರಿಟ್ ಅರ್ಜಿಯ ವಿಚಾರಣೆಯನ್ನು ನಡೆಸಿತು. ಡಾ.ಸುಬ್ರಮಣಿಯನ್ ಸ್ವಾಮಿ ಅವರ ಕಾನೂನು ಸಹಾಯಕರಾದ ಹೈಕೋರ್ಟ್ ವಕೀಲ ಕಿರಣ್ ನಾರಾಯಣ್, ಸುಪ್ರೀಂಕೋರ್ಟ್ ವಕೀಲ ಸತ್ಯ ಸಬರವಾಲ್ ಹಾಗೂ ವಿಶೇಷ್ ಕನೋಡಿಯ ಅವರುಗಳು ಭಾಗಿಯಾಗಿದ್ದರು. ಸಿಎನ್‍ಸಿಯ ಬೇಡಿಕೆಗೆ ಆಕ್ಷೇಪ ಸಲ್ಲಿಸಿದ ಪ್ರತಿವಾದಿಗಳ ಅಹವಾಲನ್ನು ಕೂಡ ಆಲಿಸಿದ ನ್ಯಾಯಾಲಯ ವಿಚಾರಣೆಯನ್ನು 2024 ಅಕ್ಟೋಬರ್ 21ಕ್ಕೆ ಮುಂದೂಡಿತು. ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಅರ್ಜಿದಾರ ಸಂಖ್ಯೆ-2 ಆಗಿದ್ದಾರೆ. ಕೇಂದ್ರ ಕಾನೂನು ಸಚಿವಾಲಯ,…
ಮಡಿಕೇರಿ ಆ.5 NEWS DESK : ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮದಿಂದ 2024-25 ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಅರಿವು-ಶೈಕ್ಷಣಿಕ ನೇರಸಾಲ ಯೋಜನೆ(ಹೊಸದು), ಗಂಗಾ ಕಲ್ಯಾಣ ಯೋಜನೆ, ಸ್ವಯಂ ಉದ್ಯೋಗ ನೇರಸಾಲ(ಬ್ಯಾಂಕ್‍ಗಳ ಸಹಯೋಗದೊಂದಿಗೆ), ಸ್ವಾವಲಂಬಿ ಸಾರಥಿ ಯೋಜನೆ, ವಿದೇಶಿ ವ್ಯಾಸಂಗ ಯೋಜನೆ, ಈ ಯೋಜನೆಗಳಡಿ ಸಹಾಯಧನ, ಸಾಲ ಸೌಲಭ್ಯ ಪಡೆಯಲು ಇಚ್ಚಿಸುವವರಿಂದ ಆನ್‍ಲೈನ್ ಮೂಲಕ ಸೇವಾಸಿಂಧು ಪೋರ್ಟಲ್ ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಕಾಡುಗೊಲ್ಲ ಜಾತಿಗೆ ಸೇರಿರಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪಡೆದಿರಬೇಕು. (ಪ್ರಮಾಣ ಪತ್ರವು ಚಾಲ್ತಿಯಲ್ಲಿರಬೇಕು), ವಯೋಮಿತಿ 18 ರಿಂದ 55 ವರ್ಷಗಳ ಮಿತಿಯಲ್ಲಿರಬೇಕು. ನಿಗಮದ, ಸರ್ಕಾರದ ಯಾವುದಾದರೂ ಯೋಜನೆಗಳಡಿ ಈ ಹಿಂದೆ ಸೌಲಭ್ಯ ಪಡೆದಿರಬಾರದು. ಕುಟುಂಬದ ಒಬ್ಬರಿಗೆ ಮಾತ್ರ ಸೌಲಭ್ಯ ಒದಗಿಸಲಾಗುವುದು. ಅರಿವು ಯೋಜನೆಯಡಿ ವಯೋಮಿತಿ 18 ರಿಂದ 30 ವರ್ಷಗಳ ಮಿತಿಯಲ್ಲಿರಬೇಕು. ವಾರ್ಷಿಕ ವರಮಾನ ರೂ.3.50 ಲಕ್ಷಗಳು, ಸ್ವಾವಲಂಬಿ ಸಾರಥಿ ಯೋಜನೆಯಡಿ ಅರ್ಜಿದಾರರು 21…
ಮಡಿಕೇರಿ ಆ.5 NEWS DESK : ಆಟಿ ಪ್ರಯುಕ್ತ ಕೊಡಗು ಯುವ ಬಂಟ್ಸ್ ಅಸೋಸಿಯೇಷನ್ ಮತ್ತು ಮಡಿಕೇರಿ ನಗರ ಬಂಟರ ಮಹಿಳಾ ಘಟಕದ ಸಹಯೋಗದಲ್ಲಿ 2ನೇ ವರ್ಷದ ಆಟಿಡೊಂಜಿ ದಿನ ಬಂಟೆರೆನ ಸಮ್ಮಿಲನ ಕಾರ್ಯಕ್ರಮ ನಡೆಯಿತು. ನಗರದ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಕೊಡಗು ಜಿಲ್ಲಾ ಬಂಟರ ಸಂಘದ ಗೌರವಾಧ್ಯಕ್ಷ ಐತ್ತಪ್ಪ ರೈ ಉದ್ಘಾಟಿಸಿ, ಶುಭಕೋರಿದರು. ಮಡಿಕೇರಿ ನಗರ ಬಂಟರ ಮಹಿಳಾ ಘಟಕದ ಅಧ್ಯಕ್ಷೆ ಸೌಮ್ಯ ಸದಾಶಿವ ರೈ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಯುವ ಬಂಟ್ಸ್ ಅಸೋಸಿಯೇಷನ್ ಅಧ್ಯಕ್ಷ ಸದಾನಂದ ರೈ, ಜಿಲ್ಲಾ ಬಂಟರ ಸಂಘದ ಕಾರ್ಯದರ್ಶಿ ಬಿ.ಸಿ.ಹರೀಶ್ ರೈ, ಬಂಟರ ಮಹಿಳಾ ಘಟಕದ ಉಪಾಧ್ಯಕ್ಷೆ ಬೇಬಿ ಜಯ ರಾಮ್ ರೈ, ಪ್ರಧಾನ ಕಾರ್ಯದರ್ಶಿ ಸುಜಾತ ಗಣೇಶ್ ರೈ, ಯುವ ಬಂಟ್ಸ್ ಅಸೋಸಿಯೇಷನ್ ಉಪಾಧ್ಯಕ್ಷ ಸುಜಿತ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ನಿತಿನ್ ರೈ, ಖಜಾಂಚಿ ಶಿವಪ್ರಸಾದ್ ರೈ, ನಿವೃತ್ತ ಪಿಎಸ್‍ಐ ಬಾಲಕೃಷ್ಣ ರೈ, ನಗರಸಭಾ ಸದಸ್ಯ ಅರುಣ್ ಶೆಟ್ಟಿ ಮತ್ತಿತರರು…
ಮಡಿಕೇರಿ ಆ.5 NEWS DESK : ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು-ಮೂರು ದಿನಗಳಿಂದ ಮಳೆ ಕಡಿಮೆಯಾಗಿದೆ ಎಂದು ಅಧಿಕಾರಿಗಳು ಮೈಮರೆಯಬಾರದು. ಮುಂದಿನ ಮೂರು-ನಾಲ್ಕು ದಿನಗಳ ನಂತರ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆದ್ದರಿಂದ ಭೂಕುಸಿತ ಹಾಗೂ ಪ್ರವಾಹ ಪೀಡಿತ ಸೂಕ್ಷ್ಮ ಪ್ರದೇಶಗಳಲ್ಲಿ ಅಗತ್ಯ ಕಟ್ಟೆಚ್ಚರ ವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ನಿರ್ದೇಶನ ನೀಡಿದ್ದಾರೆ. ವಿಡಿಯೋ ಸಂವಾದ ಮೂಲಕ ಅಧಿಕಾರಿಗಳ ಜೊತೆ ಸಭೆ ನಡೆಸಿದ ಜಿಲ್ಲಾಧಿಕಾರಿ ಅವರು ಮುಂದಿನ 10 ರಿಂದ 15 ದಿನಗಳ ಕಾಲ ಸಾಕಷ್ಟು ಎಚ್ಚರವಹಿಸಬೇಕಿದೆ. ಆ ನಿಟ್ಟಿನಲ್ಲಿ ಭೂಕುಸಿತ ಹಾಗೂ ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿ, ಅಲ್ಲಿನ ಜನರಿಗೆ ಮಾಹಿತಿ ನೀಡುವಂತಾಗಬೇಕು ಎಂದು ಜಿಲ್ಲಾಧಿಕಾರಿ ಸಲಹೆ ಮಾಡಿದರು. ಹತ್ತಿರದ ವಯನಾಡು ಜಿಲ್ಲೆಯಲ್ಲಿ ಸಂಭವಿಸಿ ಪ್ರಾಕೃತಿಕ ವಿಕೋಪದ ದುರಂತ ಎಲ್ಲಿಯೂ ಮರುಕಳುಹಿಸಬಾರದು. ಜನ ಜಾನುವಾರುಗಳ ರಕ್ಷಣೆ ಅತೀ ಮುಖ್ಯವಾಗಿದೆ. ಆ ನಿಟ್ಟಿನಲ್ಲಿ ಯಾವುದೇ ರೀತಿಯ ಪ್ರಾಣ ಹಾನಿ ಉಂಟಾಗದಂತೆ…
ಗೋಣಿಕೊಪ್ಪ ಆ.5 NEWS DESK : ಕವಯತ್ರಿ ಹಾಗೂ ಲೇಖಕಿ ಸ್ಮಿತಾ ಅಮೃತರಾಜ್‍ಗೆ ರಾಜ್ಯ ಮಟ್ಟದ ಅಪ್ಪ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಅವರ ‘ನೆಲದಾಯ ಪರಿಮಳ’ ಲಲಿತ ಪ್ರಬಂಧ ಸಂಕಲನಕ್ಕೆ ರಾಜ್ಯ ಮಟ್ಟದ ‘ಅಪ್ಪ ಪ್ರಶಸ್ತಿ’ ದೊರೆತಿದೆ. ತುಮಕೂರಿನ ಕನ್ನಡ ಭವನದಲ್ಲಿ ನಡೆದ ‘ಮುಂಗಾರು ಕವಿಗೋಷ್ಠಿ’ಯಲ್ಲಿ ಪ್ರಶಸ್ತಿ ಪ್ರದಾನ ನಡೆಯಿತು. ಬಹುಮುಖಿ ಗೆಳೆಯರ ಬಳಗ, ಸುದ್ದಿ ಸಂಗಾತಿ ಧ್ವನಿ ಯೂಟ್ಯೂಬ್ ಚಾನಲ್ ಹಾಗೂ ಅಪೂರ್ವ ಪ್ರಕಾಶನದ ಸಂಯುಕ್ತ ಆಶ್ರಯದಲ್ಲಿ ಕೊಡಮಾಡುವ ಚೊಚ್ಚಲ ವರ್ಷದ ಈ ‘ಅಪ್ಪ ಪ್ರಶಸ್ತಿ’ಯನ್ನು ಖ್ಯಾತ ಸಾಹಿತಿ ಹಾಗೂ ಚಲನಚಿತ್ರ ನಿರ್ದೇಶಕ ನಾಡೋಜ ಡಾ. ಬರಗೂರು ರಾಮಚಂದ್ರಪ್ಪ, ಸಾಹಿತಿ ಮತ್ತು ಸಂಘಟಕ ಟಿ.ಸತೀಶ್ ಜವರೇಗೌಡ, ಲೇಖಕಿ ಬಾ.ಹ.ರಮಾಕುಮಾರಿ, ಹಡವನಹಳ್ಳಿ ವೀರಣ್ಣಗೌಡ ಉಪಸ್ಥಿತಿಯಲ್ಲಿ ಸ್ಮಿತಾ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಪ್ರಶಸ್ತಿಯು ಐದು ಸಾವಿರ ನಗದು, ಪ್ರಶಸ್ತಿ ಫಲಕ ಮತ್ತು ಪತ್ರ ಒಳಗೊಂಡಿದೆ. ಸ್ಮಿತಾ ಅಮೃತರಾಜ್ ಅವರು ಈ ವರೆಗೆ ಒಟ್ಟು ಏಳು ಪುಸ್ತಕಗಳನ್ನು ರಚಿಸಿದ್ದಾರೆ. ಕಾಲ ಕಾಯುವುದಿಲ್ಲ, ತುಟಿಯಂಚಿನಲ್ಲಿ…






