ಲೇಖಕ: admin

ಕೊಡ್ಲಿಪೇಟೆ ಸೆ.18 NEWS DESK : ಮಕ್ಕಳಲ್ಲಿ ಅಡಗಿರುವ ಅಂತರಿಕ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಲು ಪ್ರತಿಭಾ ಕಾರಂಜಿ ಸಾಂಸ್ಕೃತಿಕ ಕಾಲೋತ್ಸವ ಸ್ಪರ್ಧೆಗಳು ಉತ್ತಮ ವೇದಿಕೆಯಾಗಿವೆ ಎಂದು ಕೊಡ್ಲಿಪೇಟೆ ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ ಹೇಳಿದರು. ಕೊಡಗು ಜಿಲ್ಲಾ ಪಂಚಾಯಿತಿ,ಶಾಲಾ ಶಿಕ್ಷಣ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಮತ್ತು ಸಮನ್ವಯಾಧಿಕಾರಿಗಳ ಕಚೇರಿ ಸೋಮವಾರಪೇಟೆ, ಸಮೂಹ ಸಂಪನ್ಮೂಲ ಕೇಂದ್ರ ಕೊಡ್ಲಿಪೇಟೆ ಸಂಯುಕ್ತಾಶ್ರಯದಲ್ಲಿ ಕೊಡ್ಲಿಪೇಟೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಬುಧವಾರ ಏರ್ಪಡಿಸಿದ್ದ ಪ್ರತಿಭಾ ಕಾರಂಜಿ ಸಾಂಸ್ಕೃತಿಕ ಕಾಲೋತ್ಸವ ಸ್ಪರ್ಧಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳಿಗೆ ಕೇವಲ ಶಿಕ್ಷಣ, ಕ್ರೀಡೆ ಕೊಟ್ಟರೆ ಸಾಲದು ಜೊತೆಗೆ ಮಕ್ಕಳಲ್ಲಿ ಅಂತರಿಕವಾಗಿ ಅಡಗಿರುವ ಪ್ರತಿಭೆಯನ್ನು ಹೊರತರುವ ಕೆಲಸವನ್ನು ಮಾಡಬೇಕು. ಶಾಲಾಭಿವೃದ್ಧಿ ಸಮಿತಿ, ಪೋಷಕರು ಹಾಗೂ ಶಿಕ್ಷಕ ಸಮನ್ವಯತೆ ಕೆಲಸ‌ ಮಾಡಿದರೆ ಗುಣಮಟ್ಟದ ಶಿಕ್ಷಣದೊಂದಿಗೆ ಉತ್ತಮ ಶಾಲೆಯಾಗಿ ರೂಪುಗೊಳಿಸಲು ಸಾಧ್ಯವಾಗುತ್ತದೆ ಎಂದರು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳನ್ನು ಶೇಕಡಾವಾರು ಅಂಕಗಳಲ್ಲಿ ಗುರುತಿಸುವ ಕೆಲಸ‌ ಮಾಡುತ್ತಿರುವುದು ಸರಿಯಲ್ಲ.…

Read More

ನಾಪೋಕ್ಲು ಸೆ.18 NEWS DESK : ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಕ್ಕಬ್ಬೆ ಕಾರ್ಯಕ್ಷೇತ್ರದ ಸ್ಫೂರ್ತಿ ಜ್ಞಾನ ವಿಕಾಸ ಕೇಂದ್ರ ಸಭೆಯನ್ನು ಕಕ್ಕಬ್ಬೆ ಮಹಿಳಾ ಸಮಾಜದಲ್ಲಿ ನಡೆಸಲಾಯಿತು. ಸಭೆಯಲ್ಲಿ ನಾಪೋಕ್ಲು ಗ್ರಾ.ಪಂ ಸದಸ್ಯರಾದ ಅರುಣ್ ಬೇಬ ಅವರು ವಿಕಾಸ ಕೇಂದ್ರ ಸದಸ್ಯರಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳ ಬಗ್ಗೆ ಉತ್ತಮವಾದ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಸದಸ್ಯರಿಗೆ ಕೆಲವು ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತರಾದವರಿಗೆ ಬಹುಮಾನವನ್ನು ವಿತರಿಸಲಾಯಿತು. ಸಭೆಯಲ್ಲಿ ಜ್ಞಾನ ವಿಕಾಸ ಸಮನ್ವಯಧಿಕಾರಿ ಮಾಲಿನಿ , ಸೇವಾಪ್ರತಿನಿಧಿ ಹಾಗೂ ಸಂಘಗಳ ಸದಸ್ಯರು ಹಾಜರಿದ್ದರು. ವರದಿ : ದುಗ್ಗಳ ಸದಾನಂದ. 

Read More

ಪುತ್ತೂರು ಸೆ.18 NEWS DESK : ನಮ್ಮ ಕನ್ನಡದ ನೆಲ ವಿಜ್ಞಾನ ತಂತ್ರಜ್ಞಾನದ ತವರೂರಾಗಿದೆ. ಇದರ ಬುನಾದಿಯಲ್ಲಿ ಸರ್.ಎಂ.ವಿಶ್ವೇಶ್ವರಯ್ಯನವರ ಆಗಾಧ ಪರಿಶ್ರಮ, ದೂರದೃಷ್ಟಿ ಹಾಗೂ ಸಮಾಜಮುಖಿ ಯೋಜನೆಗಳಿವೆ. ಇವರ ಕಾರ್ಯತತ್ಪರತೆಯು ಇಂದಿನ ಯುವ ಜನತೆಗೆ ದಾರಿದೀಪವಾಗಿದೆ ಎಂದು ಅಸೋಸಿಯೇಶನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್(ಇಂಡಿಯಾ) ಬೆಳ್ತಂಗಡಿ ಘಟಕದ ಅಧ್ಯಕ್ಷ ಜಗದೀಶ್ ಪ್ರಸಾದ್.ಎನ್ ಹೇಳಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಆಶ್ರಯದಲ್ಲಿ ನಡೆದ ಇಂಜಿನಿಯರ್ಸ್ ಡೇ ಆಚರಣೆ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತಾಡಿದರು. ಯಾವುದೇ ಕೆಲಸ ಮಾಡುವಾಗ ತಮ್ಮ ಆತ್ಮಸಾಕ್ಷಿಗೆ ತಕ್ಕಂತೆ ಕೆಲಸ ಮಾಡಬೇಕು, ದಿನದಿಂದ ದಿನಕ್ಕೆ ಬದಲಾಗುವ ತಂತ್ರಜ್ಞಾನವನ್ನು ಇಂಜಿನಿಯರುಗಳು ತಮ್ಮ ಕಾರ್ಯಕ್ಷೇತ್ರದಲ್ಲಿ ಅಳವಡಿಸಿಕೊಂಡು ಸಮಾಜದ ಉನ್ನತಿಗೆ ಮತ್ತು ರಾಷ್ಟ್ರದ ಏಳಿಗೆಗೆ ಶ್ರಮಿಸಬೇಕು ಎಂದರು. ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ ಮಾತನಾಡಿ ವಿಶ್ವೇಶವರಯ್ಯನವರಿಗೆ ಹೋಲಿಸುವ ಇನ್ನೊಬ್ಬ ವ್ಯಕ್ತಿ ನಮಗೆ ಸಿಗಲಾರರು. ಲಂಚಕೋರತನ, ಲಾಭಕೋರತನದ ಸವಾಲನ್ನು ಎದುರಿಸುತ್ತಿರುವ ಸಮಾಜದಲ್ಲಿ ಸರ್.ಎಂ.ವಿ ಯವರ ನಿಸ್ವಾರ್ಥ ದುಡಿಮೆ ನಮಗೆ…

Read More

ಮಡಿಕೇರಿ ಸೆ.18 NEWS DESK : ನಾಪೋಕ್ಲು ಟೌನ್ ಮುಹಿಯದ್ದೀನ್ ಸುನ್ನಿ ಮುಸ್ಲಿಂ ಜಮಾಅತ್ ಆಶ್ರಯದಲ್ಲಿ ಸೆ.20 ರಿಂದ 22ರ ವರೆಗೆ “ಮದದೇ ಮದೀನಾ” ಬೃಹತ್ ಮಿಲಾದ್ ಸಮಾವೇಶ ನಾಪೋಕ್ಲುವಿನಲ್ಲಿ ನಡೆಯಲಿದೆ ಎಂದು ಜಮಾಅತ್‍ನ ಅಧ್ಯಕ್ಷ ಎಂ.ಹೆಚ್.ಅಬ್ದುಲ್ ರೆಹಮಾನ್ ತಿಳಿಸಿದರು.  ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಪೋಕ್ಲು ಮಾರುಕಟ್ಟೆ ಆವರಣದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಸಮಾವೇಶಕ್ಕೆ ಸೆ.20 ರಂದು ಜುಮುಅ ನಮಾಜ್‍ನ ನಂತರ ನಾಪೋಕ್ಲು ಟೌನ್ ಮುಹಿಯದ್ದೀನ್ ಸುನ್ನಿ ಮುಸ್ಲಿಂ ಜಮಾಅತ್‍ನ ಅಧ್ಯಕ್ಷ ಎಂ.ಹೆಚ್.ಅಬ್ದುಲ್ ರೆಹಮಾನ್ ನೇತೃತ್ವದಲ್ಲಿ ಧ್ವಜಾರೋಹಣ ನೆರವೇರಿಸುವ ಮೂಲಕ ಚಾಲನೆ ದೊರೆಯಲಿದೆ ಎಂದರು. ಸಂಜೆ 7 ಗಂಟೆಗೆ ಧಾರ್ಮಿಕ ಪ್ರಭಾಷಣ ನಡೆಯಲಿದ್ದು, ನಾಪೋಕ್ಲು ಟೌನ್ ಮುಸ್ಲಿಂ ಜಮಾಅತ್ ಮುದರಿಸ್ ಅಶ್ರಫ್ ಅಹ್ಸನಿ ಕಾಮಿಲ್ ಸಖಾಫಿ ಉದ್ಘಾಟಿಸಲಿದ್ದಾರೆ. ಮಿಲಾದ್ ಸ್ವಾಗತ ಸಮಿತಿ ಗೌರವಾಧ್ಯಕ್ಷ ಉಸ್ಮಾನ್ ಹಾಜಿ ಅಧ್ಯಕ್ಷತೆ ವಹಿಸಲಿದ್ದು, ನಾಪೋಕ್ಲು ಟೌನ್ ಸುನ್ನಿ ಮುಸ್ಲಿಂ ಜಮಾಅತ್ ಖತೀಬ್ ಉಬೈದ್ ಸಖಾಫಿ ಅಲ್ ಅಝ್‍ಹರಿ ವಯನಾಡ್ ಮುಖ್ಯ ಪ್ರಭಾಷಣ ಮಾಡಲಿದ್ದಾರೆ.…

Read More

ಮಡಿಕೇರಿ ಸೆ.18 NEWS DESK : ಕೊಡಗು ಪ್ರೆಸ್ ಕ್ಲಬ್ ನ ನೂತನ ಆಡಳಿತ ಮಂಡಳಿಯ ಪದಗ್ರಹಣ ಸಮಾರಂಭ ಸೆ.22 ರಂದು ಬೆಳಿಗ್ಗೆ 10.30 ಗಂಟೆಗೆ ಮಡಿಕೇರಿ ಸಮೀಪದ ಕ್ಯಾಪಿಟಲ್ ವಿಲೇಜ್ ನಲ್ಲಿ ನಡೆಯಲಿದೆ. ಶಕ್ತಿ ದಿನಪತ್ರಿಕೆಯ ಪ್ರಧಾನ ಸಂಪಾದಕ ಜಿ.ರಾಜೇಂದ್ರ ಅವರು, ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ನೂತನ ಅಧ್ಯಕ್ಷರಾಗಿ ಬೊಳ್ಳಜಿರ ಬಿ.ಅಯ್ಯಪ್ಪ ಹಾಗೂ ಪದಾಧಿಕಾರಿಗಳು ಅಧಿಕಾರ ಸ್ವೀಕರಿಸಲಿದ್ದಾರೆ. ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಹಾಗೂ ಕೊಡಗು ಪ್ರೆಸ್ ಕ್ಲಬ್ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾದ ಅಜ್ಜಮಾಡ ರಮೇಶ್ ಕುಟ್ಟಪ್ಪ ಅವರು ಪ್ರಮಾಣ ವಚನ ಬೋಧಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷೆ ಬಿ.ಆರ್.ಸವಿತಾ ರೈ ಪಾಲ್ಗೊಳ್ಳಲಿದ್ದಾರೆ.

Read More

ಸುಂಟಿಕೊಪ್ಪ ಸೆ.18 NEWS DESK : ಶ್ರೀದೇವಿ ನಾರ್ಗಾಣೆ ಗ್ರಾಮದ ಶ್ರೀ ವಿನಾಯಕ ಸೇವಾ ಸಮಿತಿಯ 11ನೇ ವರ್ಷದ ಗೌರಿ ಗಣೇಶೋತ್ಸವದ ಅಂಗವಾಗಿ ಅಣ್ಣಪ್ಪಸ್ವಾಮಿ ದೇವಸ್ಥಾನದಲ್ಲಿ ಶ್ರೀ ಗೌರಿ ಗಣೇಶ ಉತ್ಸವ ಮೂರ್ತಿಯನ್ನು ಶ್ರದ್ಧಾಭಕ್ತಿಯಿಂದ ವಿಸರ್ಜಿಸಲಾಯಿತು. ಗಣೇಶನ ಮೂರ್ತಿಯನ್ನು ಭವ್ಯ ಮಂಟಪದಲ್ಲಿರಿಸಿ ಗ್ರಾಮದ ಮುಖ್ಯ ಬೀದಿಯಲ್ಲಿ ಅದ್ಧೂರಿಯಾಗಿ ಮೆರವಣಿಗೆ ನಡೆಸಲಾಯಿತು. ಅಣ್ಣಪ್ಪಸ್ವಾಮಿ ದೇವಾಲಯದಲ್ಲಿ ಶ್ರೀಗೌರಿ ಗಣೇಶ ಉತ್ಸವ ಮೂರ್ತಿಗೆ 9 ದಿನಗಳ ಕಾಲ ಆರ್ಚಕರುಗಳಾದ ಅವಿನಾಶ್ ಆರಾಧ್ಯ, ಲೋಕೇಶ್ ಆರಾಧ್ಯ ಹಾಗೂ ಪ್ರಕಾಶ್ ಆರಾಧ್ಯ ತಂಡದವರು ವಿಶೇಷ ಪೂಜೆಯನ್ನು ಸಲ್ಲಿಸಿದರು. ನಂತರ ಶ್ರೀಗೌರಿ ಗಣೇಶ ಉತ್ಸವ ಮೂರ್ತಿಯನ್ನು ಗದ್ದೆಹಳ್ಳದ ವರೆಗೆ ಶೋಭಾಯಾತ್ರೆ ಡಿಜೆ ಪಟಾಕಿಗಳನ್ನು ಸಿಡಿಸುವ ಮೂಲಕ ಉತ್ಸವ ಮೂರ್ತಿಯನ್ನು ನಾರ್ಗಾಣೆ ಗ್ರಾಮದ ಶ್ರೀದೇವಿ ಕೆರೆಯಲ್ಲಿ ವಿಸರ್ಜಿಸಲಾಯಿತು. ಈ ಸಂದರ್ಭ ಅಧ್ಯಕ್ಷ ಪುನೀತ್ ಕುಮಾರ್, ಉಪಾಧ್ಯಕ್ಷ ಮನುಕುಮಾರ್, ಪ್ರಧಾನ ಕಾರ್ಯದರ್ಶಿ ಆಕಾಶ್, ಖಜಾಂಚಿ ಮೋಹನ, ಸಹಕಾರ್ಯದರ್ಶಿಗಳಾಗಿ ಶಿವಪ್ರಸಾದ್, ಅನಿ, ಸಂಘಟನಾ ಕಾರ್ಯದರ್ಶಿ ಶ್ರೀನಿ, ಮುರುಗ, ಬಿಂದು, ಮಣಿ, ವಸಂತ, ದಯಾನಂದ, ಕಿರಣ್,…

Read More

ಕುಶಾಲನಗರ ಸೆ.18 NEWS DESK : ಮಾನವನ ಉತ್ತಮ ಆರೋಗ್ಯಕ್ಕೆ ಶುದ್ಧ ಗಾಳಿ ಹಾಗೂ ಪರಿಶುದ್ಧ ನೀರು ಅತೀ ಮುಖ್ಯವಾಗಿದ್ದು, ಇದನ್ನು ಸಂರಕ್ಷಿಸಿ ಮುಂದಿನ ಪೀಳಿಗೆಗೂ ಜೋಪಾನಗೊಳಿಸಬೇಕಾದುದು ಎಲ್ಲರ ಕರ್ತವ್ಯ ಎಂದು ಕೂಡಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ದೀಪಿಕಾ ಮೂರ್ತಿ ಹೇಳಿದರು. ಕೂಡ್ಲೂರು ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ “ಪರಿಸರ ಮಾಲಿನ್ಯ ತಡೆಗಟ್ಟಲು ಸಾರ್ವಜನಿಕರ ಪಾತ್ರ ” ಎಂಬ ಪ್ರಬಂಧ ಸ್ಪರ್ಧೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ಸುತ್ತಮುತ್ತಲಿನ ಪರಿಸರವ ಕಲುಷಿತವಾಗದಂತೆ ಸ್ವಚ್ಛಂದವಾಗಿ ಇಟ್ಟುಕೊಳ್ಳುವ ಮೂಲಕ ಉತ್ತಮ ಆರೋಗ್ಯ ಹೊಂದಲು ಅವರು ಕರೆ ನೀಡಿದರು. ಆರೋಗ್ಯ ಶಿಕ್ಷಣ ಅಧಿಕಾರಿ ಹೆಚ್.ಕೆ.ಶಾಂತಿ ಈ ಸಂದರ್ಭ ಮಾತನಾಡಿ, ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆಗೆ ಹೆಚ್ಚಿನ ಒತ್ತು ನೀಡುವ ಮೂಲಕ ಗಾಳಿ, ನೀರು ಹಾಗೂ ಮಣ್ಣನ್ನು ಸಂರಕ್ಷಿಸಬೇಕೆಂದರು. ಕೂಡ್ಲೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ಮಾತನಾಡಿ ವಿದ್ಯಾರ್ಥಿಗಳಲ್ಲಿ ಪರಿಸರದ ಜಾಗೃತಿ ಮೂಡಿಸುವ ಸಲುವಾಗಿ ಕೂಡ್ಲೂರು ಸರ್ಕಾರಿ…

Read More

ಮಡಿಕೇರಿ ಸೆ.18 NEWS DESK : ಮಡಿಕೇರಿ ಪಟ್ಟಣ ಸಹಕಾರ ಬ್ಯಾಂಕ್ ಪ್ರಗತಿಯ ಪಥದಲ್ಲಿ ಮುನ್ನಡೆಯುತ್ತಿದ್ದು, 2023-24ನೇ ಸಾಲಿನಲ್ಲಿ 33.09 ಲಕ್ಷ ನಿವ್ವಳ ಲಾಭ ಗಳಿಸಿದ್ದು, ಸಂಘದ ಮಹಾಸಭೆ ಸೆ.21 ರಂದು ನಗರದ ಕೊಡವ ಸಮಾಜದಲ್ಲಿ ನಡೆಯಲಿದೆಯೆಂದು ಸಂಘದ ಅಧ್ಯಕ್ಷರಾದ ಜಿ.ಎಂ.ಸತೀಶ್ ಪೈ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬ್ಯಾಂಕಿನಿಂದ ಗ್ರಾಹಕರುಗಳಿಗೆ 2847.48 ಲಕ್ಷ ರೂ. ವಿವಿಧ ರೂಪದ ಸಾಲಗಳನ್ನು ವಿತರಿಸಿದೆ. ಇದರಲ್ಲಿ ಜಾಮೀನು ಸಾಲವಾಗಿ 579.98 ಲಕ್ಷ, ಮನೆ ಆಧಾರ ಸಾಲ 959.04 ಲಕ್ಷ, ಚಿನ್ನಾಭರಣ ಈಡಿನ ಸಾಲವಾಗಿ 1,048 ಲಕ್ಷ ಸಾಲ ನೀಡಲಾಗಿದೆ. ಬ್ಯಾಂಕ್ ಪ್ರಸಕ್ತ ಸಾಲಿನಲ್ಲಿ ಒಟ್ಟು 481.23 ಲಕ್ಷ ವಹಿವಾಟು ನಡೆಸಿದೆ. ಸಾಲ ವಸೂಲಾತಿಯ ಪ್ರಮಾಣ ಶೇ.95.50 ರಷ್ಟು ಇರುವುದಾಗಿ ತಿಳಿಸಿದರು. ಬ್ಯಾಂಕಿನ ಜನರಲ್ ತಿಮ್ಮಯ್ಯ ರಸ್ತೆಯಲ್ಲಿನ ಶಾಖೆಯಲ್ಲಿ 106.15 ಲಕ್ಷ ಒಟ್ಟು ವ್ಯವಹಾರ ನಡೆಸಲಾಗಿದ್ದು, 16.50 ಲಕ್ಷ ಲಾಭ ಗಳಿಸಿದೆ ಹಾಗೂ 620.67 ಲಕ್ಷ ರೂ.ಗಳನ್ನು ವಿವಿಧ ರೂಪದ ಸಾಲವಾಗಿ ವಿತರಿಸಲಾಗಿದೆ ಎಂದರು. ಸುದ್ದಿಗೋಷ್ಠಿಯಲ್ಲಿ…

Read More

ಮಡಿಕೇರಿ ಸೆ.18 NEWS DESK : ಕೊಡಗು ಕಾಫಿ ಬೆಳೆಗಾರರ ಸಹಕಾರ ಸಂಘ 2023-24ನೇ ಸಾಲಿನಲ್ಲಿ ದಶಕಗಳಿಂದ ಬಾಕಿ ಉಳಿದಿರುವ ಸಾಲಗಳನ್ನು ಹೊರತು ಪಡಿಸಿದಂತೆ 28.90 ಲಕ್ಷ ರೂ. ನಿವ್ವಳ ಲಾಭ ಗಳಿಸಿದೆಯೆಂದು ಸಂಘದ ಅಧ್ಯಕ್ಷ ಎಂ.ಬಿ.ದೇವಯ್ಯ ಅವರು ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗು ಕಾಫಿ ಬೆಳೆಗಾರರ ಸಹಕಾರ ಸಂಘಕ್ಕೆ ಸಾಲದ ಹೊರೆಯೂ ಇದೆ. ಜಿಲ್ಲಾ ಕೇಂದ್ರ ಸಹಕಾರ ಸಂಘಕ್ಕೆ 114.47 ಲಕ್ಷ ರೂ. ಸಾಲ ಮರುಪಾವತಿ ಬಾಕಿ ಇದ್ದರೆ, ಸರಕಾರದ ಸಾಲ 203.94 ಲಕ್ಷ ರೂ.ಗಳಿದೆ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‍ಗೆ ಪ್ರತಿ ತಿಂಗಳು 3.11 ಲಕ್ಷ ರೂ. ಮರು ಪಾವತಿಯಾಗಬೇಕಾಗಿದೆ. ಈ ನಿಟ್ಟಿನಲ್ಲಿ ಸಂಘಕ್ಕೆ ಸರ್ಕಾರ ಅಗತ್ಯ ಸಹಕಾರ ನೀಡಬೇಕೆಂದು ಮನವಿ ಮಾಡಿದರು. ಸಂಘವು ಪೆಟ್ರೋಲ್ ಬಂಕು ವ್ಯವಹಾರವನ್ನು ನಡೆಸುತ್ತಿದ್ದು, ಹುಣಸೂರು ಬಂಕ್‍ನಿಂದ 42.54 ಲಕ್ಷ ಮತ್ತು ಹೆಬ್ಬಾಲೆ ಬಂಕ್‍ನಿಂದ 14.12 ಲಕ್ಷ ಆದಾಯ ಬಂದಿದೆ. ಕಾಫಿ ಪುಡಿ ಮಾರಾಟ ವ್ಯವಹಾರದಲ್ಲಿ ಒಟ್ಟು 7486 ಕೆ.ಜಿ. ಕಾಫಿ…

Read More

ಬೆಂಗಳೂರು ಸೆ.18 NEWS DESK : ರಾಜ್ಯದಲ್ಲಿ ಡ್ರಗ್ಸ್ ಹಾವಳಿ ನಿಯಂತ್ರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವಿಧ ಇಲಾಖೆಗಳ ಸಚಿವರು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿ, ಮಾದಕ ವಸ್ತುಗಳ ಮಾರಾಟ ಜಾಲವನ್ನು ಬುಡಸಮೇತ ಕಿತ್ತೆಸೆಯಲು ಕಠಿಣ ಕ್ರಮ ಕೈಗೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.  ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ರಾಜ್ಯದಲ್ಲಿ ಡ್ರಗ್ಸ್ ಜಾಲದ ಬೇರುಗಳನ್ನೇ ಕತ್ತರಿಸಲು ತೀರ್ಮಾನ ಮಾಡಿದ್ದೇವೆ. ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ, ಇದಕ್ಕಾಗಿ ಇನ್ನಷ್ಟು ಕಠಿಣ, ನಿರ್ದಾಕ್ಷಿಣ್ಯವಾದ ಕ್ರಮಗಳನ್ನು ಕೈಗೊಳ್ಳಲು ಇಂದು ನಿರ್ಧರಿಸಲಾಗಿದೆ. ಗೃಹ ಸಚಿವರ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚನೆ ಮಾಡಲಾಗಿದ್ದು, ಮೇಲಿಂದ ಮೇಲೆ ಸಭೆಗಳನ್ನು ನಡೆಸಿ, ಅಗತ್ಯ ಕಾರ್ಯತಂತ್ರ ರೂಪಿಸಲು ಸೂಚನೆ ನೀಡಲಾಗಿದೆ. ಟಾಸ್ಕ್ ಫೋರ್ಸ್ ನಲ್ಲಿ ಆರೋಗ್ಯ ಸಚಿವರು, ಶಿಕ್ಷಣ ಸಚಿವರು, ವೈದ್ಯಕೀಯ ಶಿಕ್ಷಣ ಸಚಿವರು ಇರುತ್ತಾರೆ. ಠಾಣಾಧಿಕಾರಿಗಳಿಗೆ ಗೊತ್ತಿಲ್ಲದೆ ಡ್ರಗ್ಸ್ ದಂಧೆ ನಡೆಯಲು ಸಾಧ್ಯವಿಲ್ಲ. ಹೀಗಾಗಿ ಠಾಣಾಧಿಕಾರಿ ಡಿವೈಎಸ್‌ಪಿ, ಎಸಿಪಿ ಮತ್ತು…

Read More