ಲೇಖಕ: admin

ಸೋಮವಾರಪೇಟೆ ಆ.5 NEWS DESK : ಸೋಮವಾರಪೇಟೆ ತಾಲ್ಲೂಕು ಒಕ್ಕಲಿಗರ ಯುವ ವೇದಿಕೆ ವತಿಯಿಂದ ಶಾಂತಳ್ಳಿ ಗ್ರಾಮದ ಕೆ.ಎಲ್.ಸತೀಶ್ ಮತ್ತು ಬಿದ್ದಪ್ಪ ಅವರ ಗದ್ದೆಯಲ್ಲಿ 9ನೇ ವರ್ಷದ ಕೆಸರುಗದ್ದೆ ಕ್ರೀಡಾಕೂಟ ಸಂಭ್ರಮದಿಂದ ನಡೆಯಿತು. ಕ್ರೀಡಾಕೂಟವನ್ನು ವಿಧಾನಪರಿಷತ್ ಮಾಜಿ ಸದಸ್ಯ ಎಸ್.ಜಿ.ಮೇದಪ್ಪ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಒಕ್ಕಲುತನ ಮೂಲ ಕಸುಬು ಮಾಡಿಕೊಂಡಿರುವ ಒಕ್ಕಲಿಗರಿಗೂ, ಕೆಸರಿಗೂ ಅವಿನಾಭಾವ ಸಂಬಂಧವಿದೆ. ಕೆಸರುಗದ್ದೆ ಕ್ರೀಡಾಕೂಟ ಎಂಬುದು ಜನಾಂಗದ ನಿಜವಾದ ಕ್ರೀಡೆಯಾಗಿದೆ. ಇದನ್ನು ಉಳಿಸಿಬೆಳೆಸಿಕೊಂಡು ಹೋಗುವುದು ಯುವ ಜನಾಂಗದ ಕರ್ತವ್ಯವಾಗಿದೆ. ಒಕ್ಕಲಿಗರು ಯಾವತ್ತು ಒಗ್ಗಟ್ಟಾಗಿರಬೇಕು. ನಮ್ಮ ಸಂಸ್ಕøತಿ, ಆಚಾರ-ವಿಚಾರವನ್ನು ಕಾಪಾಡಿಕೊಳ್ಳಲು ರಾಜಕೀಯ ರಹಿತವಾಗಿ ಒಗ್ಗಟ್ಟಾಗಿರಬೇಕು ಎಂದು ಹೇಳಿದರು. ರಾಜ್ಯ ಒಕ್ಕಲಿಗರ ಸಂಘದ ಜಿಲ್ಲಾ ನಿರ್ದೇಶಕ ಹರಪಳ್ಳಿ ರವೀಂದ್ರ ಮಾತನಾಡಿ, ರಾಜ್ಯ ಒಕ್ಕಲಿಗರ ಸಂಘ ಜನಾಂಗದ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಶೈಕ್ಷಣಿಕ ಕ್ಷೇತ್ರದಲ್ಲಿ ನಮ್ಮ ಜನಾಂಗದ ಮಕ್ಕಳು ಇನ್ನಷ್ಟು ಸಾಧನೆ ಮಾಡಬೇಕಾಗಿದೆ. ಗ್ರಾಮೀಣ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ಸಿಗಬೇಕು. ಸೋಮವಾರಪೇಟೆಯಲ್ಲಿ ಒಕ್ಕಲಿಗರ ಸಂಘದಿಂದ 9.99ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಒಕ್ಕಲಿಗರ…

Read More

ಸುಂಟಿಕೊಪ್ಪ ಆ.5 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನ ವಿಕಾಸ ಸಂಸ್ಥೆ ಹಾಗೂ ಸ್ಪಷ್ಟ ದೃಷ್ಟಿ ಪ್ರಕಾರ ಭವಿಷ್ಯ ಸಂಸ್ಥೆಯ ಸಹಯೋಗದಲ್ಲಿ ಸುಂಟಿಕೊಪ್ಪದ ಮಂಜಿಕೆರೆಯಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ ನಡೆಯಿತು. ಮಂಜಿಕೆರೆ ಸಮುದಾಯ ಭವನದಲ್ಲಿ ನಡೆದ ಶಿಬಿರವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನ ವಿಕಾಸ ಸಂಸ್ಥೆಯ ಮೇಲ್ವಿಚಾರಕಿ ಸಮನ್ವಯಾಧಿಕಾರಿ ಮಾಲಿನಿ ಉದ್ಘಾಟಿಸಿದರು. ಸ್ಪಷ್ಟ ದೃಷ್ಟಿ ಪ್ರಕಾರ ಭವಿಷ್ಯ ಸಂಸ್ಥೆಯ ಮುಖ್ಯಸ್ಥ ಜಲೀಲ್ ಮಾತನಾಡಿ, ಮಾನವನ ದೇಹದ ಅಂಗಗಳಲ್ಲಿ ಕಣ್ಣು ಮಹತ್ವದಾಗಿದೆ. ಆದ್ದರಿಂದ ಕಾಲ ಕಾಲಕ್ಕೆ ಕಣ್ಣಿನ ಪರೀಕ್ಷೆಯನ್ನು ನಡೆಸುವ ಮೂಲಕ ದೃಷ್ಟಿದೋಷವನ್ನು ನಿವಾರಿಸಿಕೊಳ್ಳಬೇಕು ಎಂದರು. ವೈದ್ಯರಿಂದ ಕಣ್ಣಿನ ದೃಷ್ಟಿಯ ಬಗ್ಗೆ ಸಲಹೆ ಸೂಚನೆಗಳನ್ನು ಪಡೆದುಕೊಳ್ಳುವುದು ಸೂಕ್ತ. ವ್ಯಕ್ತಿ ಲವ ಲವಿಕೆಯಿಂದ ಇರಬೇಕಾದರೆ ಸ್ವಚ್ಛಂದವಾಗಿ ತಮ್ಮ ಕಾರ್ಯವನ್ನು ತಾವೇ ಕಾರ್ಯನಿರ್ವಹಿಸಬೇಕಾದರೆ, ಕಣ್ಣು ದೃಷ್ಟಿ ಅವಶ್ಯಕವಾಗಿರುತ್ತದೆ. ಪ್ರತಿಯೊಬ್ಬರು ಕಣ್ಣಿನ ಬಗ್ಗೆ ನಿರಾಸಕ್ತಿ ತೋರಬಾರದೆಂದು ಅವರು ಕಿವಿಮಾತು ಹೇಳಿದರು. 125ಕ್ಕೂ ಹೆಚ್ಚಿನ ಮಂದಿ ಶಿಬಿರವನ್ನು ಸದುಪಯೋಗ…

Read More

ಮಡಿಕೇರಿ ಆ.5 NEWS DESK : ವಿರಾಜಪೇಟೆಯ ಕೊಡಗು ಹೆಗ್ಗಡೆ ಸಮಾಜ ವತಿಯಿಂದ ಕಕ್ಕಡ-18 ಕಾರ್ಯಕ್ರಮವನ್ನು ಸಂಭ್ರಮದಿಂದ ಆಚರಿಸಲಾಯಿತು.ಸಮಾಜದ ಉಪಾಧ್ಯಕ್ಷ ಕೊರಕುಟ್ಟೀರ ಸರಾ ಚಂಗಪ್ಪ ಮಾತನಾಡಿ, ಕಕ್ಕಡ ಮಾಸದಲ್ಲಿ ಬಾರಿ ಮಳೆಯ ಮತ್ತು ನಿರಂತರ ಕೃಷಿಚಟುವಟಿಕೆಗಳ ಮಧ್ಯೆ ಈ ಔಷಧೀಯ ಗುಣಗಳುಳ್ಳ ಆಹಾರ ಸೇವನೆಯಿಂದ ನಮ್ಮ ಪೂರ್ವಜರು ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುತ್ತಿದ್ದರು. ಕಕ್ಕಡ ತಿಂಗಳಲ್ಲಿ ಕೃಷಿಯನ್ನು ಹೊರತುಪಡಿಸಿ ಮತ್ಯವುದೇ ಚಡುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಿರಲಿಲ್ಲ. ಆದರೆ ಇಂದಿನ ದಿನಗಳಲ್ಲಿ ಯುವಕರು ಕೃಷಿಯತ್ತ ಹೆಚ್ಚಿನ ಗಮನಹರಿಸದಿರುವುದು ವಿಷಾದನೀಯ ಎಂದರು. ಸಮಾಜದ ಅಧ್ಯಕ್ಷ  ಪಡಿಞರಂಡ ಅಯ್ಯಪ್ಪ ಮಾತನಾಡಿ, ಕಟ್ಟಿಕಾವೇರಪ್ಪ ಹದಿನೇಳು ವರ್ಷ ಯಾವುದೇ ಕಪ್ಪು ಚುಕ್ಕೆಗಳಿಲ್ಲದೆ ಸೇವೆಸಲ್ಲಿಸಿದ್ದು, ಇವರ ಸೇವಾವಧಿಯ ಆರಂಭದಲ್ಲಿ ಬಿಟ್ಟಂಗಾಲದಲ್ಲಿ ಸಮಾಜದ ಕಟ್ಟಡ ನಿರ್ಮಾಣ ಹಂತದಲ್ಲಿತ್ತು, ಈ ಸಂದರ್ಭದಲ್ಲಿ ಇವರು ತಮ್ಮ ವೈಯಕ್ತಿಕ ಕೆಲಸಗಳನ್ನು ಬಿಟ್ಟು ಸಮಾಜದ ಕೆಲಸದಲ್ಲಿ ತೊಡಗಿಸಿಕೊಂಡದನ್ನು ನೆನಪಿಸಿಕೊಂಡರು. ಕೊಡಗು ಹೆಗ್ಗಡೆ ಸಮಾಜದ ಗೌರವ ಕಾರ್ಯದದರ್ಶಿ ಸ್ವಇಚ್ಚೆಯಿಂದ ರಾಜಿನಾಮೆ ನೀಡಿದ್ದ ಚಂಗಚಂಡ ಕಟ್ಟಿಕಾವೇರಪ್ಪ ಅವರನ್ನು ಸನ್ಮಾನಿಸಿ, ಬೀಳ್ಕೊಡಲಾಯಿತು. ಸಭಾ ಕಾರ್ಯಕ್ರಮದ ನಂತರ…

Read More

ಕುಶಾಲನಗರ ಆ.5 NEWS DESK: ಕೂಡಿಗೆಯ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ( ಡಯಟ್ ) ಯಲ್ಲಿ ಹಿರಿಯ ಶ್ರೇಣಿ ಉಪನ್ಯಾಸಕರಾಗಿ ಸೇವೆಸಲ್ಲಿಸಿ ಜುಲೈ ಮಾಹೆಯ ಅಂತ್ಯಕ್ಕೆ ಸೇವಾ ನಿವೃತ್ತಿ ಹೊಂದಿದ ಬಿ.ಸಿ.ಚಿನ್ನೇಗೌಡ ಅವರಿಗೆ ಡಯಟ್ ಸಂಸ್ಥೆ ಮತ್ತು ಶಿಕ್ಷಣ ಇಲಾಖೆಯ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಡಲಾಯಿತು. ಬೀಳ್ಕೊಡುಗೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ( ಅಭಿವೃದ್ಧಿ) ಹಾಗೂ ಡಯಟ್ ಸಂಸ್ಥೆಯ ಪ್ರಾಂಶುಪಾಲ ಎಂ.ಚಂದ್ರಕಾಂತ್ ಮಾತನಾಡಿ, ಶಿಕ್ಷಣ ಇಲಾಖೆಯಲ್ಲಿ 30 ವರ್ಷಗಳ ಕಾಲ ಸೇವೆ ಸಲ್ಲಿಸಿ ಇದೀಗ ನಿವೃತ್ತಿಗೊಳ್ಳುತ್ತಿರುವ ಉಪನ್ಯಾಸಕ ಚಿನ್ನೇಗೌಡ ಅವರು, ಶೈಕ್ಷಣಿಕ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿ ವಿದ್ಯಾರ್ಥಿ ವೃಂದ ಹಾಗೂ ಅಧಿಕಾರಿ ವರ್ಗದ ಪ್ರೀತಿಗೆ ಪಾತ್ರರಾಗಿದ್ದಾರೆ ಎಂದರು. ಚಿನ್ನೇಗೌಡ ಅವರು ಸಂಸ್ಥೆಯ ಏಳಿಗೆ ಜತೆಗೆ ಶೈಕ್ಷಣಿಕ ಪ್ರಗತಿಗೆ ಮಕ್ಕಳಿಗೆ ಶಿಕ್ಷಣ ನೀಡುವ ಕಾರ್ಯ ಮಾಡಿದ್ದಾರೆ. ಸದಾ ಹಸನ್ಮುಖಿ ಹಾಗೂ ಕ್ರಿಯಾಶೀಲ ವ್ಯಕ್ತಿತ್ವ ಹೊಂದಿರುವ ಮಂಜುನಾಥ್ ಅವರು ನಿವೃತ್ತಿ ಜೀವನದಲ್ಲಿ…

Read More

ಮಡಿಕೇರಿ NEWS DESK ಆ.5 : ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸಂಪಾಜೆ ಸಮೀಪ ಕೊಯನಾಡಿನಲ್ಲಿ ನಡೆದಿದೆ. ಮೈಸೂರು ಮೂಲದ ಪವನ್ ಹಾಗೂ ಮನೋಜ್ ಮೃತ ಯುವಕರು ಎಂದು ಗುರುತಿಸಲಾಗಿದೆ. ಭಾನುವಾರ ರಾತ್ರಿ ಈ ಘಟನೆ ನಡೆದಿದ್ದು, ಇಬ್ಬರು ಯುವಕರು ಮೈಸೂರಿನಿಂದ ಧರ್ಮಸ್ಥಳದ ಕಡೆಗೆ ಪ್ರಯಾಣ ಬೆಳೆಸಿದ್ದರು ಎಂದು ಹೇಳಲಾಗಿದೆ. ಬೈಕ್ ಅಪಘಾತದ ಸಂದರ್ಭ ಇಬ್ಬರು ಪಕ್ಕದ ಚರಂಡಿಗೆ ಎಸೆಯಲ್ಪಟ್ಟು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಆದರೆ ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ರಾತ್ರಿ ನಡೆದ ಘಟನೆ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಅಪಘಾತದ ಕುರಿತು ತನಿಖೆ ಕೈಗೊಂಡಿದ್ದಾರೆ.

Read More

ಕುಟ್ಟ NEWS DESK ಆ.4 : ಕುಟ್ಟ ಕೊಡವ ಸಮಾಜದ ವತಿಯಿಂದ ಕಕ್ಕಡ 18 ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು. ವಿರಾಜಪೇಟೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಅವರು ಮಾತನಾಡಿ ಹಬ್ಬಗಳ ಆಚರಣೆಯೊಂದಿಗೆ ಪ್ರಕೃತಿಯ ಮಹತ್ವವನ್ನು ನಾವು ಅರಿತುಕೊಳ್ಳಬೇಕು ಎಂದರು. ಪತ್ನಿ ಕಾಂಚನ್ ಪೊನ್ನಣ್ಣ ಹಾಗೂ ಕೊಡವ ಸಮಾಜದ ಪ್ರಮುಖರು ಉಪಸ್ಥಿತರಿದ್ದರು.

Read More

ಕುಶಾಲನಗರ NEWS DESK ಆ.4 : ಕರ್ನಾಟಕ ರಾಜ್ಯ ದಲಿತ ಸಾಹಿತ್ಯ ಪರಿಷತ್ತಿನ ಕೊಡಗು ಜಿಲ್ಲಾ ಘಟಕದ ಪದಾಧಿಕಾರಿಗಳ ಆಯ್ಕೆ ಮತ್ತು ತಾಲ್ಲೂಕು ಅಧ್ಯಕ್ಷರುಗಳ ನಾಮನಿರ್ದೇಶನದ ಪ್ರಕ್ರಿಯೆ ಇಂದು ಕುಶಾಲನಗರದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ನಡೆಯಿತು. ಕೊಡಗು ಜಿಲ್ಲಾ ದಲಿತ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಅರ್ಜುನ್ ಮೌರ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮುಂದಿನ ಕಾರ್ಯಕ್ರಮದ ರೂಪುರೇಷೆ ಹಾಗೂ ತಾಲ್ಲೂಕು ಘಟಕಗಳ ಸಮಿತಿಗಳ ಬಗ್ಗೆ ಚರ್ಚಿಸಿ ನಿರ್ಣಯಗಳನ್ನು ತೆಗೆದುಕೊಳ್ಳಲಾಯಿತು. ಜಿಲ್ಲಾ ದಸಾಪ ಉಪಾಧ್ಯಕ್ಷರಾಗಿ ರಾಜೀವ್.ಪಿ, ಕಾರ್ಯದರ್ಶಿ ಡಾ.ಕಾವೇರಿ, ಖಜಾಂಚಿ ಗಿರೀಶ್, ಮಾಧ್ಯಮ ಹಾಗೂ ಪತ್ರಿಕಾ ಸಲಹೆಗಾರರಾಗಿ ಸತೀಶ್ ಕುಮಾರ್, ಕಾನೂನು ಸಲಹೆಗಾರರಾಗಿ ಜಯೇಂದ್ರ, ನಿರ್ದೇಶಕರುಗಳಾಗಿ ಜಯಪ್ಪ ಹಾನಗಲ್, ಮಂಜುಳ ಜೆ.ಕೆ, ರಘುರಾಜ್, ನಾಗರಾಜ್ ಹಾಗೂ ಸರೋಜ ಬಿ.ಡಿ ಅವರುಗಳನ್ನು ಆಯ್ಕೆ ಮಾಡಲಾಯಿತು. ಸಲಹಾ ಮಂಡಳಿಗೆ ಡಾ.ಜೆ.ಸೋಮಣ್ಣ, ವಿ.ಪಿ.ಶಶಿಧರ್, ಕೆ.ಆರ್.ವಿದ್ಯಾಧರ, ರಾಮ್ ಕುಮಾರ್, ರಾಜೇಶ್ ಪದ್ಮನಾಭ ಅವರುಗಳನ್ನು ನಾಮನಿರ್ದೇಶನ ಮಾಡಲು ತೀರ್ಮಾನಿಸಲಾಯಿತು. ಅಕ್ಟೋಬರ್ ತಿಂಗಳಿನಲ್ಲಿ ರಾಯಚೂರಿನಲ್ಲಿ ನಡೆಯುತ್ತಿರುವ ಅಖಿಲ ಭಾರತ ದಲಿತ ಸಾಹಿತ್ಯ…

Read More

ಕುಣಿಗಲ್ NEWS DESK ಆ.4 : ತಾನು ಸಾಯುವುದಾಗಿ ಸಹೋದರನಿಗೆ ವೀಡಿಯೋ ಕಳುಹಿಸಿ ದೊಡ್ಡಕೆರೆಯ ಕೋಡಿ ಹಾಲಮಡುವಿನ ನಾಲೆಯ ನೀರಿಗೆ ಹಾರಿ ಯುವಕನ್ನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಣಿಗಲ್  ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ನಡೆದಿದೆ. ಪಟ್ಟಣದ ಮಹಾವೀರ ನಗರದ ನಿವಾಸಿ ಬಿ.ಆನಂದ್ (28) ಮೃತ ಯುವಕನಾಗಿದ್ದು, ಆ.2 ರಂದು ಮನೆಯಿಂದ ಹೊರ ಹೋದವರು ಮತ್ತೆ ಮರಳಲಿಲ್ಲ ಎಂದು ತಿಳಿದು ಬಂದಿದೆ. ಆನಂದ್ ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು “ನನ್ನ ಸಾವಿಗೆ ಯಾರು ಕಾರಣರಲ್ಲ, ನಾನು ಬದುಕಬೇಕು ಅನ್ನಿಸುತ್ತಿಲ್ಲ, ಹಾಗಾಗಿ ನಾನು ಸಾಯುತ್ತಿದ್ದೇನೆ” ಎಂದು ತನ್ನ ಸಹೋದರ ಸಾಗರ್‌ ಗೆ ವೀಡಿಯೋ ಮಾಡಿ ಕಳುಹಿಸಿದ್ದರು. ಕುಣಿಗಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ನಾಲೆಯಿಂದ ಮೃತದೇಹವನ್ನು ಹೊರತೆಗೆಯಲಾಗಿದೆ.

Read More

ಸಾಗರ್ NEWS DESK ಆ.4 : ದೇವಾಲಯವೊಂದರ ಗೋಡೆ ಕುಸಿದು ಬಿದ್ದು 10ರಿಂದ 15 ವರ್ಷದ 9 ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಸಾಗರ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಭಾನುವಾರ ನಡೆದಿದೆ. ಶಹಪುರ್ ಗ್ರಾಮದ ಹರ್ದೌಲ್ ಬಾಬಾ ದೇವಸ್ಥಾನದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದ ವೇಳೆ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಧಾರಾಕಾರ ಮಳೆಯಿಂದಾಗಿ ಪಾಳು ಬಿದ್ದಿದ್ದ ಗೋಡೆ ಕುಸಿದು ಬಿದ್ದು ಈ ಘಟನೆ ಸಂಭವಿಸಿದ್ದು, ಮೃತರ ಕುಟುಂಬಕ್ಕೆ ಸರ್ಕಾರ ತಲಾ 4ಲಕ್ಷ ರೂ. ಪರಿಹಾರ ಘೋಷಿಸಿದೆ. ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಭೇಟಿ ನೀಡಿದ್ದಾರೆ.

Read More

ಬೆಂಗಳೂರು NEWS DESK ಆ.4: ಕ್ರೀಡಾ ಸಾಧಕರನ್ನು ಗುರುತಿಸಿ ಪ್ರೋತ್ಸಾಹ ನೀಡುವ ಮೂಲಕ ಕ್ರೀಡಾ ಚಟುವಟಿಕೆಗಳಿಗೆ ರಾಜ್ಯ ಸರ್ಕಾರ ಎಲ್ಲಾ ರೀತಿಯ ನೆರವು ಒದಗಿಸಲು ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಅವರು ಭಾನುವಾರ ಕೃಷ್ಣಾದಲ್ಲಿ ಭಾನುವಾರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿoದ ಒಲoಪಿಕ್ಸ್, ಪ್ಯಾರಾಲಿoಪಿಕ್ಸ್, ಏಷಿಯನ್ ಗೇಮ್ಸ್, ಪ್ಯಾರಾ ಏಷಿಯನ್ ಗೇಮ್ಸ್, ಕಾಮನ್ವೆಲ್ತ್ ಗೇಮ್ ಗಳಲ್ಲಿ ಪದಕ ವಿಜೇತ 12ಮಂದಿ  ಸಾಧಕ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರದ ಇಲಾಖೆಗಳಲ್ಲಿ ಗ್ರೂಪ್ ಎ, ಬಿ ಮತ್ತು ಇತರ ಹುದ್ದೆಗಳಿಗೆ ನೇಮಕಾತಿಗೆ ಆಫರ್ ಲೆಟರ್ ವಿತರಿಸಿ ಮಾತನಾಡಿದರು. ಈ ಹಿಂದೆ ಮುಖ್ಯಮಂತ್ರಿಯಾಗಿದ್ದಾಗ 2016-17ರ ಅವಧಿಯಲ್ಲಿ ಹುಬ್ಬಳ್ಳಿಯಲ್ಲಿ ಒಲಂಪಿಕ್ಸ್‌ ಅಸೋಸಿಯೇಶನ್‌ ವತಿಯಿಂದ ಆಯೋಜಿಸಲಾಗಿದ್ದ ಕ್ರೀಡಾಕೂಟದ ಸಂದರ್ಭದಲ್ಲಿ, ಒಲಂಪಿಕ್ಸ್‌, ಏಶ್ಯಾಡ್‌ ಮತ್ತು ಕಾಮನ್‌ವೆಲ್ತ್‌ನಂತಹ ಕ್ರೀಡಾಕೂಟಗಳಲ್ಲಿ ಸಾಧನೆ ಮಾಡುವ ಕ್ರೀಡಾಳುಗಳಿಗೆ ಸರ್ಕಾರಿ ನೌಕರಿ ಒದಗಿಸುವುದಾಗಿ ಘೋಷಣೆ ಮಾಡಿದ್ದೆ. ಸರ್ಕಾರ ಬದಲಾದ ಬಳಿಕ ಇದು ನೆನೆಗುದಿಗೆ ಬಿದ್ದಿತ್ತು. ಇದೀಗ ಈ ಕಾರ್ಯಕ್ಕೆ ಚಾಲನೆ ನೀಡಲಾಗಿದೆ ಎಂದು ಹೇಳಿದರು. ಈ ಹಿಂದೆ…

Read More