ತಿತಿಮತಿ NEWS DESK ಆ.4 : ತಿತಿಮತಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ “ಆ್ಯಂಟಿ ಮೈಕ್ರೋಬಿಯಲ್ ಸ್ವೀವರ್ಡ್‌ಶಿಪ್ ಗಾಗಿ ಆ್ಯಂಟಿ ಬಯೋಗ್ರಾಮ್‌ಗಳ ತರಬೇತಿ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಅವರು, ಇಂದಿನ ಕಾಲಮಾನದಲ್ಲಿ, ಆರೋಗ್ಯದ ಮಹತ್ವದ ಬಗ್ಗೆ ಪ್ರತಿಯೊಬ್ಬರು ತಿಳಿದುಕೊಂಡಿರಬೇಕು ಎಂದರು. ಬದಲಾವಣೆಗಳಿಗೆ ಅನುಗುಣವಾಗಿ ನಮ್ಮನ್ನು ನಾವು ತೊಡಗಿಸಿಕೊಂಡು ಆರೋಗ್ಯ ಕ್ಷೇತ್ರದಲ್ಲಿ ಮತ್ತಷ್ಟು ಉನ್ನತಿಯನ್ನು ಹೊಂದಬೇಕೆಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಆಸ್ಪತ್ರೆಯ ವೈದ್ಯರು, ಸಿಬ್ಬಂದಿಗಳು, ಗ್ರಾಮ ಪಂಚಾಯತಿ ಸದಸ್ಯರು ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.
ಲೇಖಕ: admin
ಮಡಿಕೇರಿ NEWS DESK ಆ.4 : ಕೊಡವ ಜನಾಂಗವೂ ಈ ಮಣ್ಣಿನ ಮೂಲದಿಂದ ಬೆಳೆದು ಬಂದಿದೆ. ಭೂಮಿಯೆ ನಮ್ಮ ಎಲ್ಲಾ ಸಂಸ್ಕೃತಿ ಮತ್ತು ಬದುಕಿನ ಮೂಲ, ಹಾಗೇ ಒಂದು ಜಾನಾಂಗದ ಹೆಗ್ಗುರುತೇ ಆ ಜನಾಂಗದ ಭಾಷೆ. ಭಾಷೆ ಮತ್ತು ಮಣ್ಣಿನ ಮೂಲತನ ಉಳಿದರೆ ಮಾತ್ರ ಕೊಡವಾಮೆ ಬೆಳೆಯಲಿದೆ ಎಂದು ಕೊಡವಾಮೆರ ಕೊಂಡಾಟ ಸಂಘಟನೆಯ ಅಧ್ಯಕ್ಷ ಚಾಮೆರ ದಿನೇಶ್ ಬೆಳ್ಯಪ್ಪ ಅಭಿಪ್ರಾಯಪಟ್ಟಿದ್ದಾರೆ. ಪೊನ್ನಂಪೇಟೆ ತಾಲ್ಲೂಕು ಬೇಗೂರಿನ ಪಟ್ಟಕೇರಿ ಅಂಬಲ ಸಂಘಟನೆಯ ಎಂಟನೇ ವರ್ಷದ ಬೇಲ್ ನಮ್ಮೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಭೂಮಿ ಮತ್ತು ಭಾಷೆಯನ್ನು ಉಳಿಸುವಂತೆ ಕರೆ ನೀಡಿದರು. ಕೊಡವರ ಹುಟ್ಟಿನಿಂದ ಸಾವಿನವರೆಗೆ, ಪ್ರತೀ ಹಬ್ಬ ಹಾಗೂ ಆಚರಣೆಗಳು ಭೂಮಿ ಮತ್ತು ಗದ್ದೆಯ ಸುತ್ತಲೇ ನಿಂತಿದೆ. ಪ್ರತಿಯೊಂದು ಆಚರಣೆಗಳು ಕೂಡ ಕೃಷಿ ಆಧಾರಿತವಾಗಿಯೇ ಇದೆ. ನಮ್ಮ ಸಂಪ್ರದಾಯ ಆಚರಣೆಯ ಮೂಲ ಹೆಗ್ಗುರತೇ ಭಾಷೆ. ನಾವೆಷ್ಟೇ ಮುಂದುವರೆದು ಏನೇ ಸಾಧನೆಗಳನ್ನು ಮಾಡಿದರೂ ನಮ್ಮ ಭಾಷೆಯನ್ನು ಕಡೆಗಣಿಸಿದರೆ ನಾವು ಇದ್ದೂ ಇಲ್ಲದಂತೆ. ಆದ್ದರಿಂದ ಈ ಕೊಡಗಿನ…
ಸುಂಟಿಕೊಪ್ಪ NEWS DESK ಆ.4 : ಮನೆಯ ಹಿಂಭಾಗದಲ್ಲಿದ್ದ ವ್ಯಕ್ತಿಯೊಬ್ಬರು ಆಯತಪ್ಪಿ ಶೀಟ್ ನ ಮೇಲೆ ಬಿದ್ದು ಮೃತಪಟ್ಟಿರುವ ಘಟನೆ ಸುಂಟಿಕೊಪ್ಪದಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಬೈಕ್ ಮೆಕಾನಿಕ್ ಶಶಿ(40) ಎಂಬುವವರೇ ಮೃತ ದುರ್ದೈವಿ. ಗಂಭೀರವಾಗಿ ಗಾಯಗೊಂಡಿದ್ದ ಶಶಿ ಅವರನ್ನು ಮಡಿಕೇರಿಯ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಯಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು ಎಂದು ತಿಳಿದು ಬಂದಿದೆ. ಮೃತರು ಪತ್ನಿ, ಓರ್ವ ಪುತ್ರಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ಪತ್ನಿ ಸಂಧ್ಯಾ ಗ್ರಾ.ಪಂ ಕಚೇರಿ ಸಿಬ್ಬಂದಿಯಾಗಿದ್ದಾರೆ.
ಕುಶಾಲನಗರ NEWS DESK ಆ.4 : ಕೇರಳದ ವೈನಾಡ್ ನಲ್ಲಿ ಭೂ ಕುಸಿತದಿಂದ ಸಂತ್ರಸ್ತರಾದ ನಾಗರಿಕರಿಗೆ ಸಹಾಯ ಹಸ್ತ ಚಾಚುವ ಸಂಬಂಧ ಕುಶಾಲನಗರ ಕಾವೇರಿ ಆಟೋ ನಿಲ್ದಾಣದ ಚಾಲಕರ ತಂಡ ಅಗತ್ಯ ವಸ್ತುಗಳೊಂದಿಗೆ 8 ಆಟೋಗಳಲ್ಲಿ ತೆರಳಿ ಭಾನುವಾರ ಸ್ವಯಂಸೇವಕರಾಗಿ ಕೆಲಸ ನಿರ್ವಹಿಸಿದರು. ಕುಶಾಲನಗರ ಸರಕಾರಿ ಆಸ್ಪತ್ರೆ ಹಿಂಭಾಗದಲ್ಲಿರುವ ಕಾವೇರಿ ಆಟೋ ಚಾಲಕ ಮಾಲೀಕರು, ಚಾಲಕರು ಅಕ್ಕಿ ಬೇಳೆ ಎಣ್ಣೆ ದಿನಸಿ ಪದಾರ್ಥಗಳು ಬಟ್ಟೆಗಳು ಸೇರಿದಂತೆ ಅಗತ್ಯ ವಸ್ತುಗಳನ್ನು ತಮ್ಮ ಆಟೋಗಳಲ್ಲಿ ತುಂಬಿಸಿ ಭಾನುವಾರ ಮುಂಜಾನೆ 5 ಗಂಟೆ ವೇಳೆಗೆ 8 ಆಟೋಗಳಲ್ಲಿ ಸುಮಾರು ಹತ್ತಕ್ಕೂ ಅಧಿಕ ಮಂದಿ ತೆರಳಲಿದ್ದಾರೆ. ಅಲ್ಲಿಯ ಸಂತ್ರಸ್ತರಿಗೆ ನೆರವು ನೀಡುವುದು ಮತ್ತು ತಮ್ಮ ವಾಹನದ ಮೂಲಕ ಅಲ್ಲಿನ ಜನರಿಗೆ ತಮ್ಮ ಕೈಲಾದಷ್ಟು ಸೇವೆ ಸಲ್ಲಿಸುವುದರೊಂದಿಗೆ ಸಂತ್ರಸ್ತರಿಗೆ ಅನುಕೂಲ ಕಲ್ಪಿಸುವುದು ತಮ್ಮ ಉದ್ದೇಶವಾಗಿದೆ ಎಂದು ತಂಡದ ಪ್ರಮುಖರಾದ ಅರೀಫ್ ತಿಳಿಸಿದ್ದಾರೆ. ಚಾಲಕರಾದ ಆರೀಫ್, ಚೇತನ್, ನೂತನ್, ಮಹೇಶ್ ವಿಜಯ್ ಪ್ರಜ್ವಲ್ ಹಮೀದ್, ಕುಮಾರ್ ಮತ್ತಿತರರು ತೆರಳಿ ತಮ್ಮೊಂದಿಗೆ ಒಯ್ದ ದಿನ ನಿತ್ಯದ ಅಗತ್ಯ…
ಮಡಿಕೇರಿ NEWS DESK ಆ.4 : ಕ್ರೋಧಿ ಸಂವತ್ಸರದ ಗ್ರೀಷ್ಮ ಋತುವಿನ ದಕ್ಷಿಣಾಯನ ಕರ್ಕಾಟಕ ಮಾಸ ಆಷಾಢ ಕೃಷ್ಣಪಕ್ಷದ ಅಮಾವಾಸ್ಯೆಯ ದಿನವಾದ ಇಂದು ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ “ಪೊಲಿಂಕಾನ ಉತ್ಸವ” ವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಶ್ರೀ ಭಗಂಡೇಶ್ವರ ದೇವಾಲಯದ ಪ್ರಧಾನ ಅರ್ಚಕರಾದ ಎಸ್.ರವಿಕುಮಾರ್ ಅವರ ನೇತೃತ್ವದಲ್ಲಿ “ಪೊಲಿಂಕಾನ ಉತ್ಸವ” ಮತ್ತು ಮಹಾಪೂಜೆ ನಡೆಯಿತು. ತುಂಬಿ ಹರಿಯುತ್ತಿರುವ ಕಾವೇರಿಗೆ ತ್ರಿವೇಣಿ ಸಂಗಮದಲ್ಲಿ ಬಾಗಿನ ಅರ್ಪಿಸಲಾಯಿತು. ದೇವಾಲಯದ ಕಾರ್ಯನಿರ್ವಾಹಣಾಧಿಕಾರಿಗಳಾದ ಚಂದ್ರಶೇಖರ್ ಎನ್.ಜಿ, ತಕ್ಕಮುಖ್ಯಸ್ಥರಾದ ಬಳ್ಳಡ್ಕ ಬಿ.ಸಿ.ಅಪ್ಪಾಜಿ, ಶ್ರೀ ತಲಕಾವೇರಿ ದೇವಾಲಯದ ತಕ್ಕಮುಖ್ಯಸ್ಥರಾದ ಕೋಡಿ ಯು.ಮೋಟಯ್ಯ, ಸಿಬ್ಬಂದಿ ವರ್ಗ ಹಾಗೂ ಭಕ್ತಾದಿಗಳು ಉತ್ಸವದಲ್ಲಿ ಪಾಲ್ಗೊಂಡಿದ್ದರು.
ಸೋಮವಾರಪೇಟೆ NEWS DESK ಆ.4 : ಭಾರತೀಯ ಸೇನೆ (BSF)ಯಲ್ಲಿ ದೇಶದ ಗಡಿಗಳಲ್ಲಿ ಸುಧೀರ್ಘ 22 ವರ್ಷಗಳ ಕಾಲ ಸೇವೆ ಸಲ್ಲಿಸಿ ಸ್ವಗ್ರಾಮಕ್ಕೆ ಮರಳಿರುವ ಸೋಮವಾರಪೇಟೆ ತಾಲ್ಲೂಕು ಬಿಳಹ ಗ್ರಾಮದ ಕರುಣಾಕರ್ ಅವರನ್ನು ಹಿಂದು ಜಾಗರಣ ವೇದಿಕೆ ಹಾಗೂ ಸ್ಥಳೀಯ ಸಂಘಸಂಸ್ಥೆಗಳ ನೇತೃತ್ವದಲ್ಲಿ ಇಂದು ನಡೆದ ಅರ್ಥಪೂರ್ಣ ಕಾರ್ಯಕ್ರಮದಲ್ಲಿ ಗೌರವಿಸಿ ಆತ್ಮೀಯವಾಗಿ ಬರ ಮಾಡಿಕೊಳ್ಳಲಾಯಿತು.
ಮಡಿಕೇರಿ NEWS DESK ಆ.4 : ಭಾರತ ದೇಶದಲ್ಲಿ ನಡೆದ ಸ್ವಾತಂತ್ರ್ಯ ಹೋರಾಟಗಳು ಅಖಂಡ ಭಾರತಕ್ಕಾಗಿ ನಡೆದಿತ್ತು. ಆದರೆ ಭಾರತದ ಸ್ವಾತಂತ್ರ್ಯ ಹೋರಾಟಗಾರರ ಕನಸಾಗಿದ್ದ ಅಖಂಡ ಭಾರತವನ್ನು ತ್ರಿಖಂಡವಾಗಿ ತುಂಡರಿಸಲು ಕಾರಣವಾದ ಅಂದಿನ ನೈಜ ಘಟನೆಗಳನ್ನು ಯುವ ಸಮೂಹಕ್ಕೆ ನೆನಪಿಸುವುದು, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರ ಯೋಧರ ಸ್ಮರಣೆ ಮಾಡುವುದು ಹಾಗೂ ಕಳೆದು ಹೋದ ಭಾರತದ ಭೂಭಾಗಗಳನ್ನು ಮತ್ತೆ ಪಡೆಯುವ ಸಂಕಲ್ಪದೊಂದಿಗೆ ಹಿಂದು ಜಾಗರಣ ವೇದಿಕೆಯು ಕೊಡಗು ಜಿಲ್ಲೆಯ ಆರು ಕಡೆ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ವೇದಿಕೆಯ ಜಿಲ್ಲಾ ಸಂಯೋಜಕರಾದ ಕುಕ್ಕೇರ ಅಜಿತ್ ತಿಳಿಸಿದ್ದಾರೆ. ಪ್ರತೀ ವರ್ಷ ದೇಶದಾದ್ಯಂತ ಸ್ವಾತಂತ್ರ್ಯೋತ್ಸವಕ್ಕೆ ಮುಂಚಿತವಾಗಿ ಆಗಸ್ಟ್ ತಿಂಗಳಿನಲ್ಲಿ ಅಖಂಡ ಭಾರತ ಸಂಕಲ್ಪ ದಿನವನ್ನು ಆಯೋಜಿಸುತ್ತಿದೆ. ಅದರಂತೆ ಆ.7ರಂದು ವೀರಾಜಪೇಟೆ, ಆ.9ರಂದು ಮಡಿಕೇರಿ, ಆ.10ರಂದು ಮಾದಾಪುರ, ಆ.11ರಂದು ಕೊಡ್ಲಿಪೇಟೆ, 12ರಂದು ಪೊನ್ನಂಪೇಟೆ ಹಾಗೂ ಆ.14ರಂದು ಕುಶಾಲನಗರದಲ್ಲಿ ಅಖಂಡ ಭಾರತ ಸಂಕಲ್ಪ ದಿನ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದ ಅಂಗವಾಗಿ ಪಂಜಿನ ಮೆರವಣಿಗೆ ಹಾಗೂ ವಾಹನ ಜಾಥ ಸಾಗಲಿದೆ.…
ನವದೆಹಲಿ NEWS DESK ಆ.4 : (ಕೋವರ್ ಕೊಲ್ಲಿ ಇಂದ್ರೇಶ್) ಕೇರಳದ ವಯನಾಡ್ ಜಿಲ್ಲೆಯ ಮೆಪ್ಪಾಡಿ ಬಳಿಯ ಗುಡ್ಡಗಾಡು ಪ್ರದೇಶಗಳಲ್ಲಿ ಭಾರೀ ಭೂಕುಸಿತದ ನಂತರ ಕೇಂದ್ರ ಸರ್ಕಾರ ಜುಲೈ 31 ರಂದು ವಿವರವಾದ ಕರಡು ಅಧಿಸೂಚನೆಯನ್ನು ಹೊರಡಿಸಿದ್ದು , ಇದು ಸುಮಾರು ಶೇ.36 ಪಶ್ಚಿಮ ಘಟ್ಟಗಳನ್ನು ಪರಿಸರ ಸೂಕ್ಷ್ಮ ಎಂದು ಘೋಷಿಸಲು ಪ್ರಸ್ತಾಪಿಸಿದೆ. ಈ ಪ್ರದೇಶವು ವಯನಾಡಿನ 13 ಹಳ್ಳಿಗಳನ್ನು ಮತ್ತು ಕೇರಳ ರಾಜ್ಯದಲ್ಲಿ ಸುಮಾರು 10,000 ಚದರ ಕಿ.ಮೀ. ಪ್ರದೇಶವನ್ನು ಸೂಕ್ಷ್ಮ ವ್ಯಾಪ್ತಿಗೆ ತರಲಾಗುತ್ತಿದೆ. ಆ ಪ್ರಕಾರ ಪಶ್ಚಿಮ ಘಟ್ಟಗಳ ಸುಮಾರು 57,000 ಚದರ ಕಿಲೋಮೀಟರ್ ಪ್ರದೇಶವನ್ನು ‘ಪರಿಸರ ಸೂಕ್ಷ್ಮ ಪ್ರದೇಶ’ ಎಂದು ಘೋಷಿಸಲು ನಿರ್ಧರಿಸಿದೆ. ಈ ಕುರಿತು ಕೇಂದ್ರಕ್ಕೆ ತಮ್ಮ ಅಭಿಪ್ರಾಯಗಳನ್ನು ನೀಡಲು ನಾಗರಿಕರಿಗೆ 60 ದಿನಗಳ ಕಾಲಾವಕಾಶ ನೀಡಲಾಗಿದೆ, ನಂತರ ಅಂತಿಮ ಅಧಿಸೂಚನೆಯನ್ನು ರಾಜ್ಯವಾರು ಅಥವಾ ಸಂಯೋಜಿತ ಆದೇಶವನ್ನು ಪ್ರಕಟಿಸಲಾಗುವುದು ಎಂದು ಕರಡು ಅಧಿಸೂಚನೆಯಲ್ಲಿ ಹೇಳಲಾಗಿದೆ. ಮಹಾರಾಷ್ಟ್ರ, ಕರ್ನಾಟಕ, ಕೇರಳ, ತಮಿಳುನಾಡು, ಗೋವಾ ಮತ್ತು ಗುಜರಾತ್ -…
ಸೋಮವಾರಪೇಟೆ NEWS DESK ಆ.3 : ಸೋಮವಾರಪೇಟೆ ಸಮೀಪದ ನಗರೂರು ಗ್ರಾಮ ನಿವಾಸಿ ದಿ. ಅಪ್ಪಯ್ಯ ಅವರ ಪುತ್ರಿ ಪಾರ್ವತಿ (55) ಅವರು ಶನಿವಾರ ಅನಾರೋಗ್ಯದಿಂದ ನಿಧನರಾದರು. ಮೃತರು ಅವಿವಾಹಿತರಾಗಿದ್ದು, ತಾಯಿ, ಸಹೋದರ, ಈರ್ವರು ಸಹೋದರಿಯರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಭಾನುವಾರ ಮಧ್ಯಾಹ್ನ 12 ಗಂಟೆಗೆ ನಗರೂರು ತೋಟದಲ್ಲಿ ನಡೆಯಲಿದೆ.
ಸೋಮವಾರಪೇಟೆ NEWS DESK ಆ.3 : ಸಮೀಪದ ಗಾಂಧಿನಗರದಲ್ಲಿರುವ ಶ್ರೀ ದೊಡ್ಡಮಾರಿಯಮ್ಮ ದೇವಾಲಯದಲ್ಲಿ ಆಷಾಡ ಮಾಸದ ವಿಶೇಷ ಪೂಜೋತ್ಸವ ಹಲವು ಪೂಜಾ ವಿಧಿ ವಿಧಾನಗಳೊಂದಿಗೆ ಶುಕ್ರವಾರ ನೆರವೇರಿತು. ದೇವಾಲಯದ ಪ್ರಧಾನ ಅರ್ಚಕ ಬಸವಕುಮಾರ್ ಶಾಸ್ತ್ರಿ ಅವರ ಪೌರೋಹಿತ್ಯದಲ್ಲಿ ಪ್ರತಿ ಮಂಗಳವಾರ ಮತ್ತು ಶುಕ್ರವಾರದಂದು ದೇವಿಗೆ ವಿಶೇಷ ಅಲಂಕಾರಗಳೊಂದಿಗೆ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು. ಆಷಾಡ ಮಾಸದ ಕೊನೆಯ ಶುಕ್ರವಾರದಂದು ಬೆಳಗ್ಗಿನಿಂದ ಸಂಜೆಯವರೆಗೂ ವಿವಿಧ ಸೇವೆಗಳು ನಡೆದವು. ಮಧ್ಯಾಹ್ನ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ದೇವಾಲಯ ಸಮಿತಿ ಅಧ್ಯಕ್ಷ ಗಂಗಾಧರ್ ಸೇರಿದಂತೆ ಸಮಿತಿ ಪದಾಧಿಕಾರಿಗಳು, ಭಕ್ತಾದಿಗಳು ಭಾಗವಹಿಸಿದ್ದರು.






