ಲೇಖಕ: admin

ಸೋಮವಾರಪೇಟೆ NEWS DESK ಅ.3 : ಐಗೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಆಟಿ 18 ರ ಅಂಗವಾಗಿ ಶಾಲಾ ಮಕ್ಕಳಿಗೆ ಬಿಸಿಯೂಟದೊಂದಿಗೆ ಮಧುಭಾನ ಸೊಪ್ಪಿನ ಪಾಯಸವನ್ನು ಶನಿವಾರ ವಿತರಿಸಲಾಯಿತು. ಕೊಡಗಿನಲ್ಲಿ ಆಟಿ 18 ರ ಸಂದರ್ಭ ಔಷಧೀಯ ಗುಣಗಳುಳ್ಳ ಸೊಪ್ಪಿನ ಮಹತ್ವದ ಕುರಿತು ಮುಖ್ಯ ಶಿಕ್ಷಕ ಯಶ್ವಂತ್ ಕುಮಾರ್ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಮಧುಭಾನ ಸೊಪ್ಪಿನಿಂದ ಮಾಡಿದ ಖಾದ್ಯಗಳಲ್ಲಿ ಔಷಧಿ ಗುಣವಿರುತ್ತದೆ ಎಂಬ ನಂಬಿಕೆ ಜನರಲ್ಲಿದೆ. ವರ್ಷಕ್ಕೊಮ್ಮೆ ಈ ಸೊಪ್ಪಿನಿಂದ ತಯಾರಿಸಿದ ಖಾದ್ಯವನ್ನು ಸೇವಿಸುವುದು ವಾಡಿಕೆ. ವಿಶೇಷ ಪರಿಮಳಯುಕ್ತವಾಗಿರುವ ಈ ಗಿಡಕ್ಕೆ ಆರೋಗ್ಯ ಪೂರಕ ಹಾಗು ಹಲವು ರೋಗಗಳನ್ನು ಗುಣಪಡಿಸುವ ಶಕ್ತಿ ಇದೆ ಎನ್ನಲಾಗುತ್ತದೆ ಎಂದು ಹೇಳಿದರು. ಸಹಶಿಕ್ಷಕರುಗಳಾದ ಎಸ್.ಎಸ್.ರಂಜಿತ, ಕೃಷ್ಣಪ್ಪ, ರೇಖಾ, ಮಂಜುನಾಥ್, ಗುಲಾಬಿ ಮತ್ತು ಅಕ್ಷರ ದಾಸೋಅ ಸಿಬ್ಬಂದಿಗಳು ಇದ್ದರು.

Read More

ಮಡಿಕೇರಿ NEWS DESK ಆ.3 : ವಾರಣಾಸಿಯ ಗಂಗಾ ಆರತಿಯ ಮಾದರಿಯಲ್ಲಿ ಜೀವನದಿ ಕಾವೇರಿಗೆ ಆರತಿ ಬೆಳಗುವ ಕುರಿತು ರಾಜ್ಯ ಸರ್ಕಾರ ತೆಗೆದುಕೊಂಡಿರುವ ನಿರ್ಧಾರವನ್ನು ಸ್ವಾಗತಿಸಿರುವ ಕಾವೇರಿ ರಿವರ್ ಸೇವಾ ಟ್ರಸ್ಟ್ ಅಧ್ಯಕ್ಷ ಎಂ.ಎನ್.ಚ0ದ್ರಮೋಹನ್ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೃತಜ್ಞತೆ ಸಲ್ಲಿಸಿದರು. ಕಾವೇರಿ ಆರತಿ ಕಾವೇರಿಯ ಉಗಮಸ್ಥಾನ ಕೊಡಗು ಜಿಲ್ಲೆಯಲ್ಲೇ ಆಗಬೇಕೆಂದು ಮನವಿ ಮಾಡಿದರು. ಈ ಸಂದರ್ಭ ಶಾಸಕದ್ವಯರಾದ ಡಾ.ಮಂತರ್ ಗೌಡ ಹಾಗೂ ಎ.ಎಸ್.ಪೊನ್ನಣ್ಣ ಉಪಸ್ಥಿತರಿದ್ದರು.

Read More

ಕೇರಳ NEWS DESK ಆ.3 : ವಯನಾಡಿನ ಚೂರಲ್​​ಮಲ ಮತ್ತು ಮುಂಡಕೈ ಪ್ರದೇಶದಲ್ಲಿ ಸಂಭವಿಸಿದ ಭೂಕುಸಿತದಿಂದ ಪಾರಾದವರು ಈಗ ಸಂತ್ರಸ್ತರ ಶಿಬಿರದಲ್ಲಿದ್ದಾರೆ. ತಮ್ಮ ಒಡಹುಟ್ಟಿದವರು, ಕುಟುಂಬದ ಸದಸ್ಯರನ್ನು ಕಳೆದುಕೊಂಡು ಇವರು ಕಣ್ಣೀರು ಹಾಕುತ್ತಿದ್ದಾರೆ. ಭೂಕುಸಿತ ಸಂಭವಿಸಿದ ಆ ರಾತ್ರಿ ಪ್ರಾಣಾಪಾಯದಿಂದ ಪಾರಾದವರಿದ್ದಾರೆ. ಹಾಗೆ ಪಾರಾದ ಸುಜಾತಾ ಮತ್ತು ಅವರ ಕುಟುಂಬಕ್ಕೆ ಕಾಡಾನೆಯೊಂದು ಬೆಟ್ಟದಲ್ಲಿ ಕಾವಲಾಗಿ ನಿಂತಿತ್ತು. ” ಅದು ಸೋಮವಾರ ರಾತ್ರಿ 4 ಗಂಟೆಯಿಂದ ಭಾರೀ ಮಳೆಯಾಗುತ್ತಿದ್ದರಿಂದ, ಮಧ್ಯರಾತ್ರಿ 1.15 ಕ್ಕೆ ಎಚ್ಚರವಾಯಿತು. ದೊಡ್ಡ ಶಬ್ದ ಕೇಳಿಸಿದ ಬೆನ್ನಲ್ಲೇ ನಮ್ಮ ಮನೆಗೆ ನೀರು ನುಗ್ಗಿತು. ನಾವೆಲ್ಲರೂ ಹಾಸಿಗೆಯ ಮೇಲೆ ಕುಳಿತೆವು . ಆಗ ನಮ್ಮ ನೆರೆಹೊರೆಯವರ ಮನೆಗಳ ಅವಶೇಷಗಳ ಜೊತೆಗೆ ದೊಡ್ಡ ಮರದ ದಿಮ್ಮಿಗಳು ಮನೆಯ ಮೇಲೆ ಬಡಿಯುತ್ತಿದ್ದವು. ನಮ್ಮ ಮನೆಯ ಮೇಲ್ಛಾವಣಿ ನಮ್ಮ ಮೇಲೆ ಕುಸಿದು ಬಿದ್ದಿದ್ದು, ನನ್ನ ಮಗಳು ಗಂಭೀರವಾಗಿ ಗಾಯಗೊಂಡಿದ್ದಾಳೆ. ಗುಡ್ಡ ಜರಿದು ಮನೆ ಉರುಳಿ ಬಿದ್ದಾಗ ಮನೆಯ ಚಿಮಿಣಿಯಲ್ಲಿ ಸ್ವಲ್ಪ ಜಾಗ ಕಾಣಿಸಿತು. ನಾನು ಇಟ್ಟಿಗೆ…

Read More

ಮಡಿಕೇರಿ NEWS DESK ಆ.3 : ರೈತ ಸಂಘದ ಕೊಡಗು ಜಿಲ್ಲಾಧ್ಯಕ್ಷ ಕಾಡ್ಯಮಾಡ ಮನು ಸೋಮಯ್ಯ ಅವರ ನೇತೃತ್ವದಲ್ಲೇ ಜಿಲ್ಲಾ ಸಮಿತಿ ಮುಂದುವರಿಯಲಿದೆ. ಮನು ಸೋಮಯ್ಯ ಸೇರಿದಂತೆ ಕೆಲವರನ್ನು ಪದಚ್ಯುತಗೊಳಿಸಿರುವ ರಾಜ್ಯ ಪದಾಧಿಕಾರಿಗಳ ಕ್ರಮ ಖಂಡನೀಯವೆಂದು ರೈತ ಸಂಘದ ಪ್ರಧಾನ ಕಾರ್ಯದರ್ಶಿ ಚೆಟ್ರುಮಾಡ ಸುಜಯ್ ಬೋಪಯ್ಯ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗು ಜಿಲ್ಲೆಯ 5 ತಾಲ್ಲೂಕು ರೈತ ಸಂಘಟನೆಗಳು ಮನು ಸೋಮಯ್ಯ ಅವರ ನೇತೃತ್ವದಲ್ಲಿ ಕೊಡಗು ಜಿಲ್ಲಾ ರೈತ ಸಂಘದ ಹೆಸರಿನಲ್ಲಿ ಮುನ್ನಡೆಯಲು ನಿರ್ಣಯ ಕೈಗೊಂಡಿವೆ ಎಂದರು. ಮನು ಸೋಮಯ್ಯ ಅವರ ಬೆಳವಣಿಗೆ ಮತ್ತು ಹೋರಾಟವನ್ನು ಸಹಿಸದೆ ರೈತ ಸಂಘದ ಕೆಲವು ರಾಜ್ಯ ಪದಾಧಿಕಾರಿಗಳು ಜಿಲ್ಲಾಧ್ಯಕ್ಷರ ಸಹಿತ ಕೆಲವು ಪದಾಧಿಕಾರಿಗಳನ್ನು ಪದಚ್ಯುತಿಗೊಳಿಸಿದ್ದಾರೆ. ರೈತ ಸಂಘದ ರಾಜ್ಯ ಪದಾಧಿಕಾರಿಗಳ ಅವಧಿ ಮುಗಿದಿದ್ದರೂ ಅಧಿಕಾರದಲ್ಲಿ ಮುಂದುವರೆಯುವ ಮೂಲಕ ಅಸಂವಿಧಾನಿಕವಾಗಿ ನಡೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಜು.23ರಂದು ಕೊಡಗು ಜಿಲ್ಲೆಯ ಸಮಿತಿಗಳ ಸಭೆ ನಡೆಸಿ ರಾಜ್ಯ ಸಮಿತಿಯ ನಿರ್ಧಾರವನ್ನು ಖಂಡಿಸಲಾಗಿದೆ. ಅಲ್ಲದೆ ಮನು ಸೋಮಯ್ಯ…

Read More

ಮಡಿಕೇರಿ ಆ.3 NEWS DESK  : ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಪಿತೂರಿ ನಡೆಸುತ್ತಿದೆ ಎಂದು ಆರೋಪಿಸಿ ಕುಶಾಲನಗರದಲ್ಲಿ ಬ್ಲಾಕ್ ಕಾಂಗ್ರೆಸ್ ಪ್ರತಿಭಟನೆ ನಡೆಸಿತು. ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್ ಅವರ ನೇತೃತ್ವದಲ್ಲಿ ತಹಶೀಲ್ದಾರ್ ಹಾಗೂ ತಾಲ್ಲೂಕು ದಂಡಾಧಿಕಾರಿಗಳ ಕಚೇರಿ ಎದುರು ಕಾಂಗ್ರೆಸ್ ಪ್ರಮುಖರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

Read More

ಮಡಿಕೇರಿ ಆ.3 NEWS DESK : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಪುಸ್ತಕ ಪ್ರಕಟಣೆ ಯೋಜನೆಯಡಿ ಪುಸ್ತಕಗಳನ್ನು ಪ್ರಕಟಿಸಲು ಉದ್ದೇಶಿಸಲಾಗಿದೆ. ಆದ್ದರಿಂದ ಲೇಖಕರು ಅರೆಭಾಷೆಯಲ್ಲಿ ಕಥೆ, ಕವನ, ಲೇಖನ, ಅಜ್ಜಿ ಕಥೆ, ಜಾನಪದ, ವಿಚಾರ ಸಾಹಿತ್ಯ, ಲಲಿತ ಪ್ರಬಂಧ, ಸಂಶೋಧನ ಕೃತಿಗಳು ಮತ್ತಿತರವನ್ನು ಅರೆಭಾಷೆಯಲ್ಲಿ ಬರಹದಲ್ಲಿ ಬರೆದು ಹಸ್ತಪ್ರತಿಯನ್ನು ಅಕಾಡೆಮಿಗೆ ಸಲ್ಲಿಸುವಂತೆ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ಮತ್ತು ರಿಜಿಸ್ಟ್ರಾರ್ ಚಿನ್ನಸ್ವಾಮಿ ಅವರು ಕೋರಿದ್ದಾರೆ. ತಮ್ಮ ಹಸ್ತಪ್ರತಿಗಳನ್ನು ಸಲ್ಲಿಸಲು 2024 ಆಗಸ್ಟ್ 31 ಕೊನೆ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಅಧ್ಯಕ್ಷರು/ ರಿಜಿಸ್ಟ್ರಾರ್, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಕಾಫಿ ಕೃಪಾ, ರಾಜಸೀಟು ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ. ಮೊ ನಂ 6362522677 ಸಂಪರ್ಕಿಸಬಹುದು. arebaseacademy@gmail.com ವಿಶೇಷ ಸೂಚನೆ ಪುಸ್ತಕಗಳ ಆಯ್ಕೆಯ ಹಕ್ಕು ಅಕಾಡೆಮಿಯದಾಗಿದೆ. ಹಾಗೂ ಬರಹ ಕನಿಷ್ಟ 70 ರಿಂದ 80 ಪುಟಗಳಿರಬೇಕು ಎಂದು ಪ್ರಕಟಣೆ ತಿಳಿಸಿದೆ.

Read More

ಮಡಿಕೇರಿ ಆ.3 NEWS DESK : ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2024-25 ನೇ ಸಾಲಿನಲ್ಲಿ ವಿವಿಧ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಗಳಡಿ ಸಾಲ-ಸೌಲಭ್ಯವನ್ನು ಪಡೆಯಲು ಇಚ್ಛಿಸುವವರು ಕಡ್ಡಾಯವಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದೆ. ಅರ್ಜಿ ಸಲ್ಲಿಸಲು ಆಗಸ್ಟ್, 31 ಕೊನೆಯ ದಿನವಾಗಿದೆ. ಶೈಕ್ಷಣಿಕ ಸಾಲ ಯೋಜನೆಗೆ ಕೊನೆ ದಿನಾಂಕ ಇರುವುದಿಲ್ಲ. ಯೋಜನೆಗಳ ವಿವರ: ಶ್ರೀ ಶಹಜೀರಾಜೇ ಸಮೃದ್ಧಿ ಯೋಜನೆ (ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯಧನ), ಜೀಜಾವುಜಲಭಾಗ್ಯಯೋಜನೆಯ (ಗಂಗಾ ಕಲ್ಯಾಣ ನೀರಾವರಿ ಯೋಜನೆ), ಅರಿವು ಶೈಕ್ಷಣಿಕ ಸಾಲ ಯೋಜನೆಯ (ಹೊಸದಾಗಿ), ಅರಿವು ಶೈಕ್ಷಣಿಕ ಸಾಲ ಯೋಜನೆಯ(ನವೀಕರಣ), ರಾಜಶ್ರೀ ಶಾಹುಮಹಾರಾಜ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆ, ರಾಜಶ್ರೀ ಶಾಹುಮಹಾರಾಜ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆ(ನವೀಕರಣ) ಮರಾಠ ಮಿಲ್ಟ್ರಿ ಹೋಟೆಲ್ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆಯ, ಸ್ವಾವಲಂಬಿ ಸಾರಥಿಯೋಜನೆ, ಸ್ವಾತಂತ್ರ್ಯಯ ಅಮೃತ್ ಮೊಹೋತ್ಸವ ಮುನ್ನಡೆ ಯೋಜನೆ. ಅರ್ಜಿ ಸಲ್ಲಿಸಲು ಕರ್ನಾಟಕ ಮರಾಠ ಸಮುದಾಯಗಳ…

Read More

ಮಡಿಕೇರಿ ಆ.3 NEWS DESK : ಕೊಡಗು ಜಿಲ್ಲೆಗೆ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಆರ್.ಐಶ್ವರ್ಯ ಕೆಎಎಸ್ ಹಿರಿಯ ಶ್ರೇಣಿ ಅವರು ಶುಕ್ರವಾರ ಅಧಿಕಾರ ವಹಿಸಿಕೊಂಡಿದ್ದಾರೆ. ಈ ಹಿಂದೆ ಮಂಡ್ಯ ಜಿಲ್ಲೆಯಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ಹಾಗೂ ಉಪವಿಭಾಗಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಮೈಸೂರು ಮಹಾನಗರ ಪಾಲಿಕೆಯಲ್ಲಿ ಸೇವೆ ಸಲ್ಲಿಸಿದ್ದಾರೆ. ಬೆಂಗಳೂರಿನಲ್ಲಿ ವಿಶೇಷ ಜಿಲ್ಲಾಧಿಕಾರಿಯಗಿ ಕಾರ್ಯನಿರ್ವಹಿಸಿದ್ದಾರೆ.

Read More

ಬೆಂಗಳೂರು ಆ.3 NEWS DESK : ವಯನಾಡು ಭೂ ಕುಸಿತ ಸಂತ್ರಸ್ತರಿಗೆ 100 ಮನೆಗಳನ್ನು ನಿರ್ಮಿಸಿಕೊಡುವುದಾಗಿ ಕರ್ನಾಟಕ ಸರ್ಕಾರ ಘೋಷಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ ಈ ಮಹತ್ವದ ನಿರ್ಧಾರ ತಿಳಿಸಿದ್ದಾರೆ. ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಿಂದ ತತ್ತರಿಸಿರುವ ಕೇರಳದ ಜೊತೆ ರಾಜ್ಯ ಸರ್ಕಾರ ನಿಂತಿದೆ. ಭೂಕುಸಿತದಿಂದ ಸೂರು ಕಳೆದುಕೊಂಡ 100 ಕುಟುಂಬಗಳಿಗೆ ನಮ್ಮ ಸರ್ಕಾರ ಮಾನವೀಯ ನೆಲೆಯಲ್ಲಿ ಮತ್ತೆ ಮನೆ ನಿರ್ಮಿಸಿಕೊಡಲಿದೆ ಎಂಬ ಭರವಸೆಯನ್ನು ಕೇರಳದ ಮುಖ್ಯಮಂತ್ರಿ Pinarayi Vijayan ಅವರಿಗೆ ನೀಡಿದ್ದೇನೆ. ಸಂಕಷ್ಟದ ಕಾಲದಲ್ಲಿ ಜೊತೆ ನಿಂತು ಭರವಸೆಯನ್ನು ಮರಳಿ ಕಟ್ಟೋಣ ಎಂದು ಹೇಳಿದ್ದಾರೆ.

Read More

ವಿರಾಜಪೇಟೆ ಆ.2 NEWS DESK : ಪ್ರತಿಯೊಬ್ಬರ ಬದುಕಿನಲ್ಲೂ ಗುರುವಾಗಿ ಯಾರಾದರೊಬ್ಬರು ಜೀವನಕ್ಕೆ ಸರಿಯಾದ ಮಾರ್ಗದರ್ಶನವನ್ನು ತೋರಿಸುತ್ತಾರೆ. ಅಂತಹ ವ್ಯಕ್ತಿಗಳಿಗೆ ಗೌರವ ಸಲ್ಲಿಸಲು ಪ್ರತಿ ವರ್ಷ ಆಷಾಢ ತಿಂಗಳ ಹುಣ್ಣಿಮೆಯಂದು ಗುರು ಪೂರ್ಣಿಮೆಯನ್ನು ಆಚರಿಸಲಾಗುತ್ತದೆ. ಈ ದಿನ ಅತ್ಯಂತ ಶ್ರೇಷ್ಠವೆಂದು ಪರಿಗಣಿಸಲಾಗಿದೆ ಎಂದು ನಾಟ್ಯಾಂಜಲಿ ನೃತ್ಯ ಸಂಸ್ಥೆಯ ಸಂಸ್ಥಾಪಕರು, ವಿದುಷಿ ಹೇಮಾವತಿ ಹೇಳಿದರು. ವಿರಾಜಪೇಟೆಯ ನಾಟ್ಯಾಂಜಲಿ ನೃತ್ಯ ಸಂಸ್ಥೆಯ ವಿದ್ಯಾರ್ಥಿಗಳಿಂದ ರೋಟರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಗುರುಪೂರ್ಣಿಮೆ ಕಾರ್ಯಕ್ರಮದಲ್ಲಿ ನಟರಾಜನಿಗೆ ಪೂಜೆ ಸಲ್ಲಿಸಿ ಕಾರ್ಯಕ್ರಮ ಉದ್ಘಾಟಿಸಲಾಯಿತು. ಇದೇ ವೇಳೆ ವಿದ್ಯಾರ್ಥಿಗಳು ನೃತ್ಯ ಸಂಸ್ಥೆಯ ಸಂಸ್ಥಾಪಕರು ಹಾಗೂ ಗುರುಗಳಾದ ಹೇಮಾವತಿ ಮತ್ತು ಅವರ ಪತಿ ಕಾಂತರಾಜ್ ಅವರಿಗೆ ಗುರು ಪೂಜೆ ಸಲ್ಲಿಸಿ ಸನ್ಮಾನಿಸಿದರು. ಪೂಜೆಯ ಬಳಿಕ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಹೇಮಾವತಿ ಅವರು ಬದುಕಿನ ಮೌಲ್ಯಗಳನ್ನು ತಿಳಿಸುವ ಗುರುವಿಗೆ ಪ್ರತಿಯೊಬ್ಬರ ಜೀವನದಲ್ಲೂ ಅತ್ಯಂತ ಉನ್ನತ ಮತ್ತು ಗೌರವದ ಸ್ಥಾನಮಾನವಿದೆ. ಜೀವನ ಮತ್ತು ಆಧ್ಯಾತ್ಮಿಕ ಶಕ್ತಿಯ ಮೌಲ್ಯವನ್ನು ತಿಳಿಸುವ ಗುರುವಿಗೆ ಗೌರವ ಸಲ್ಲಿಸಲು ಗುರುಪೂರ್ಣಿಮೆಯನ್ನು ಪ್ರತಿ ವರ್ಷ…

Read More