ಲೇಖಕ: admin

 ಮಡಿಕೇರಿ ಆ.3 NEWS DESK : ಪ್ರವಾಸಿಗರನ್ನು ಆಕರ್ಷಿಸುವ ಕೊಡಗಿನ ತಾಣಗಳಲ್ಲಿ ಒಂದಾಗಿರುವ ಇರ್ಪು ಜಲಪಾತ  ಮಳೆಯಿಂದ ಧುಮ್ಮಿಕ್ಕಿ ಹರಿಯುತ್ತಿದ್ದು, ಅದರ ನಯನ ಮನೋಹರ ದೃಶ್ಯ.

Read More

ಮಡಿಕೇರಿ ಆ.3 NEWS DESK : ಕೊಡಗು ಜಿಲ್ಲೆಯಲ್ಲಿ ಒತ್ತುವರಿ ಮಾಡಿಕೊಂಡಿರುವ ಸರ್ಕಾರಿ ಜಾಗವನ್ನು ಕಡಿಮೆ ದರಕ್ಕೆ ಗುತ್ತಿಗೆ ನೀಡುವ ಆದೇಶವನ್ನು ತಕ್ಷಣ ಹಿಂಪಡೆಯಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿತು. ಮಳೆಹಾನಿ ಪ್ರದೇಶ ವೀಕ್ಷಣೆಗೆ ಜಿಲ್ಲೆಗೆ ಆಗಮಿಸಿದ ಸಂದರ್ಭ ನಗರದ ಸುದರ್ಶನ ಅತಿಥಿ ಗೃಹದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರ ನೇತೃತ್ವದಲ್ಲಿ ಯೂನಿಯನ್‍ನ ಪ್ರಮುಖರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಈ ಸಂದರ್ಭ ಮಾತನಾಡಿದ ಸಿಐಟಿಯು ಜಿಲ್ಲಾಧ್ಯಕ್ಷ ಪಿ.ಆರ್.ಭರತ್, ಜಿಲ್ಲೆಯಲ್ಲಿ ಸುಮಾರು ಆರೂವರೆ ಲಕ್ಷ ಜನಸಂಖ್ಯೆಯಿದ್ದು, ಕಾಫಿ, ಮೆಣಸು, ಅಡಿಕೆ, ರಬ್ಬರ್, ಚಹಾ ಇನ್ನಿತರೆ ವಾಣಿಜ್ಯ ಬೆಳೆಗಳನ್ನು ಯಥೇಚ್ಛವಾಗಿ ಬೆಳೆಯುವ ಪ್ರದೇಶವಾಗಿದೆ. ಭಾರತ ಕಾಫಿ ಉತ್ಪಾದನೆಯಲ್ಲಿ ಕೊಡಗು ಉತ್ತಮ ಸ್ಥಾನದಲ್ಲಿದೆ. ಆದರೆ ಜಿಲ್ಲೆಯಲ್ಲಿ 3 ಲಕ್ಷಕ್ಕಿಂತಲೂ ಹೆಚ್ಚು ಕಾರ್ಮಿಕರು, ಸಂಘಟಿತ ಮತ್ತು ಅಸಂಘಟಿತ…

Read More

ಮಡಿಕೇರಿ ಆ.3 NEWS DESK : ತೋಟದ ಕಾರ್ಮಿಕ ಮಹಿಳೆಯೊಬ್ಬರ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಸುಂಟಿಕೊಪ್ಪ ಸಮೀಪದ ಅತ್ತೂರು ನಲ್ಲೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ನಲ್ಲೂರು ತೋಟದಲ್ಲಿ ನಡೆದಿದೆ. ನಲ್ಲೂರು ತೋಟದಲ್ಲಿ ಎಂದಿನಂತೆ ಕಾರ್ಮಿಕರು ತೋಟದ ಕೆಲಸಕ್ಕೆಂದು ತಯಾರಾಗುತ್ತಿದ್ದಾಗ ಮಹಿಳೆ ಮಹದೇವಮ್ಮ ಎಂಬುವವರ ಮೇಲೆ ಕಾಡಾನೆ ಏಕಾಏಕಿ ದಾಳಿ ಮಾಡಿದೆ. ಈ ಸಂದರ್ಭ ಮಹದೇವಮ್ಮ ಕಾಫಿ ಗಿಡದ ಮೇಲೆ ಬಿದ್ದ ಪರಿಣಾಮ ತೊಡೆಭಾಗಕ್ಕೆ ಗಂಭೀರ ಗಾಯವಾಗಿದೆ. ಕಾರ್ಮಿಕರು ಬೊಬ್ಬೆ ಹಾಕಿದ ಸಂದರ್ಭ ಆನೆ ಸ್ಥಳದಿಂದ ಕಾಲ್ಕಿತ್ತಿದೆ. ನಂತರ ಗಾಯಾಳು ಮಹದೇವಮ್ಮ ಅವರನ್ನು ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ ಕರೆತಂದು ದಾಖಲಿಸಲಾಗಿದೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Read More

ಸಿದ್ದಾಪುರ ಆ.3 NEWS DESK : ನೆಲ್ಲಿಹುದಿಕೇರಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಎಟಿಎಂ 24 ಗಂಟೆಯೂ ಖಾತೆದಾರರ ಸೇವೆಗೆ ಸಿಗುವಂತೆ ಮಾಡಬೇಕು ಮತ್ತು ಸಿಬ್ಬಂದಿಗಳ ಕೊರತೆಯನ್ನು ತುಂಬಬೇಕು ಎಂದು ಒತ್ತಾಯಿಸಿ ಸಾರ್ವಜನಿಕರು ಬ್ಯಾಂಕ್ ಎದುರು ಪ್ರತಿಭಟನೆ ನಡೆಸಿದರು. ಗ್ರಾಮಸ್ಥ ಪಿ.ಆರ್.ಭರತ್ ಮಾತನಾಡಿ, ಹತ್ತು ಸಾವಿರಕ್ಕೂ ಅಧಿಕ ಜನಸಂಖ್ಯೆ ಇರುವ ಗ್ರಾಮದಲ್ಲಿ ಕೇವಲ ಒಂದು ಬ್ಯಾಂಕ್ ಇದ್ದು, ಇದರ ಎಟಿಎಂ ಯಂತ್ರ ಬ್ಯಾಂಕ್ ನ ಒಳ ಭಾಗದಲ್ಲಿದೆ. ಇದರಿಂದ ಗ್ರಾಹಕರಿಗೆ ಎಟಿಎಂ ಸೇವೆ ಸರಿಯಾಗಿ ದೊರೆಯುತ್ತಿಲ್ಲ. ತಕ್ಷಣ ಎಟಿಎಂ ಯಂತ್ರವನ್ನು ಬ್ಯಾಂಕ್ ನ ಹೊರ ಭಾಗದಲ್ಲಿ ಸ್ಥಾಪಿಸಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಸ್ಥಳೀಯರಾದ ಅಜೀಜ್ ಮಾತನಾಡಿ, ಬ್ಯಾಂಕಿನಲ್ಲಿ ಸಿಬ್ಬಂದಿಗಳ ಕೊರತೆ ಇದ್ದು, ಗ್ರಾಹಕರಿಗೆ ಸೂಕ್ತ ಸೇವೆ ದೊರೆಯುತ್ತಿಲ್ಲ. ಎಂಟರಿಂದ ಹತ್ತು ಜನ ಸಿಬ್ಬಂದಿಗಳು ಕೆಲಸ ಮಾಡಬೇಕಿರುವ ಬ್ಯಾಂಕ್ ನಲ್ಲಿ ಕೇವಲ ಮೂರರಿಂದ ನಾಲ್ಕು ಮಂದಿ ಇದ್ದಾರೆ. ಕಾರ್ಮಿಕರೇ ಹೆಚ್ಚಿರುವ ಈ ಪ್ರದೇಶದಲ್ಲಿ ಬ್ಯಾಂಕ್ ನ ಕೆಲವು ಅವ್ಯವಸ್ಥೆಯಿಂದಾಗಿ…

Read More

ಮಡಿಕೇರಿ ಆ.3 NEWS DESK : ಆಟಿ ಪ್ರಯುಕ್ತ ಕೊಡಗು ಯುವ ಬಂಟ್ಸ್ ಅಸೋಸಿಯೇಷನ್ ಮತ್ತು ಮಡಿಕೇರಿ ನಗರ ಬಂಟರ ಮಹಿಳಾ ಘಟಕದ ಸಹಯೋಗದಲ್ಲಿ ಆ.4 ರಂದು ಎರಡನೇ ವರ್ಷದ ಆಟಿಡೊಂಜಿ ದಿನ ಬಂಟೆರೆನ ಸಮ್ಮಿಲನ ಕಾರ್ಯಕ್ರಮ ನಡೆಯಲಿದೆ ಎಂದು ಅಸೋಸಿಯೇಷನ್‌ನ ಜಿಲ್ಲಾಧ್ಯಕ್ಷ ಸದಾನಂದ ರೈ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಬೆಳಿಗ್ಗೆ 9.30 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಕೊಡಗು ಜಿಲ್ಲಾ ಬಂಟರ ಸಂಘದ ಗೌರವಾಧ್ಯಕ್ಷ ಐತ್ತಪ್ಪ ರೈ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಮಡಿಕೇರಿ ನಗರ ಬಂಟರ ಮಹಿಳಾ ಘಟಕದ ಅಧ್ಯಕ್ಷೆ ಸೌಮ್ಯ ಸದಾಶಿವ ರೈ ವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು. ಮುಖ್ಯ ಅತಿಥಿಗಳಾಗಿ ಮಡಿಕೇರಿ ನಿವೃತ್ತ ಪಿಎಸ್‌ಐ ಬಾಲಕೃಷ್ಣ ರೈ, ನಗರಸಭಾ ಸದಸ್ಯ ಅರುಣ್ ಶೆಟ್ಟಿ ಹಾಗೂ ಕೊಡಗು ಯುವ ಬಂಟ್ಸ್ ಅಸೋಸಿಯೇಷನ್ ಮತ್ತು ಮಡಿಕೇರಿ ನಗರ ಬಂಟರ ಮಹಿಳಾ ಘಟಕದ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದರು. ಸಂಜೆ 4.30 ಗಂಟೆಗೆ ನಡೆಯಲಿರುವ ಸಮಾರೋಪ…

Read More

ನಾಪೋಕ್ಲು ಆ.2 NEWS DESK : ಸ್ಥಳೀಯ ಕೆಪಿಎಸ್ ಶಾಲೆ ಯ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಪಿ.ಎ. ಚಂದ್ರಕಲಾ ಹಾಗೂ ಸಹ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಎ.ಎಂ.ಎಲಿಜಬೆತ್ ನಿವೃತ್ತಿ ಹೊಂದಿದ್ದು, ಇವರಿಗೆ ಶಾಲೆಯ ವತಿಯಿಂದ ಬೀಳ್ಕೊಡಲಾಗಿಯಿತು. ಇವರಿಗೆ ನಾಪೋಕ್ಲು ಕ್ಲಸ್ಟರ್ ನ ನಿಯೋಜಿತ ಸಿ ಆರ್ ಪಿ ಹಾಗೂ ಮಡಿಕೇರಿ ತಾಲೂಕಿನ ಬಿ ಆರ್ ಪಿ ಮಂಜುಳಾ ಚಿತ್ರಾಪುರ ಅವರು ಮಡಿಕೇರಿ ಬಿ.ಆರ್.ಸಿ ಕೇಂದ್ರದಲ್ಲಿ ನೆನಪಿನ ಕಾಣಿಕೆ ನೀಡುವುದರ ಮೂಲಕ ಸನ್ಮಾನಿಸಿ, ಗೌರವಿಸಿದರು. ಈ ಸಂದರ್ಭ ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿಗಳು, ಶಿಕ್ಷಣ ಸಂಯೋಜಕರು, ಮೇಕೇರಿ ಸಿಆರ್ಪಿ ಹಾಗೂ ನಿವೃತ್ತ ಶಿಕ್ಷಕರ ಕುಟುಂಬ ವರ್ಗದವರು ಹಾಜರಿದ್ದರು. ವರದಿ : ದುಗ್ಗಳ ಸದಾನಂದ.

Read More

ನಾಪೋಕ್ಲು ಆ.3 NEWS DESK : ಕೊಡಗಿನಲ್ಲಿ ಕಕ್ಕಡ ತಿಂಗಳ 18ನೇ ದಿನದಂದು ವಿಶೇಷ ಹಬ್ಬದ ದಿನ. ಈ ಹಬ್ಬವು ಕೊಡಗಿನಲ್ಲಿ ಸಾಂಪ್ರದಾಯಿಕವಾಗಿ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಕಕ್ಕಡ-18 ಹಾಗೂ ತುಳು ಭಾಷಿಕರ ಆಟಿ ಆಚರಣೆಯನ್ನು ಸಂಪ್ರದಾಯ ಬದ್ಧವಾಗಿ ಆಚರಿಸಲಾಗುತ್ತದೆ. ಕನ್ನಡದಲ್ಲಿ ಬಳಕೆಯಲ್ಲಿರುವ ಆಷಾಡ ಎಂಬ ಪದವೇ ಕೊಡವರ ಕಕ್ಕಡ ಹಾಗೂ ತುಳು ಭಾಷಿಕರ ಆಟಿ ಆಚರಣೆಯಾಗಿದೆ. ಈ ತಿಂಗಳಲ್ಲಿ ಮದ್ದು ಸೊಪ್ಪುವಿನಿಂದ ತಯಾರಿಸಿದ ತಿನಿಸುಗಳಿಗೆ ವಿಶೇಷ ಬೇಡಿಕೆ. ಈ ತಿಂಗಳಲ್ಲಿ ಮದ್ದು ಸೊಪ್ಪು ಎನ್ನುವ ಸಸ್ಯದಲ್ಲಿ-18 ತರಹದ ಔಷಧಿಯು ತುಂಬಿರುತ್ತದೆ ಎಂಬ ನಂಬಿಕೆ. ಅದರಂತೆ ಕಾಡಿನಲ್ಲಿ ಬರೆ ಕರೆಗಳಲ್ಲಿ ಬೆಳೆಯುವ ಈ ಔಷಧ ಗಿಡ 18ನೇ ದಿನದಂದು ಸುವಾಸನೆಯನ್ನು ಬೀರುತ್ತದೆ. ಆಟಿ (ಕಕ್ಕಡ) 18 ರಂದು ಉಪಯೋಗಿಸುವ ಮದ್ದು ಸೊಪ್ಪು ಮಾತ್ರ ತನ್ನದೆ ಆದ ಔಷಧಿಯ ಗುಣವನ್ನು ಹೊಂದಿದೆ ಎಂಬ ನಂಬಿಕೆ ಜನರಲ್ಲಿದೆ. ಇದು ಗ್ರಾಮೀಣ ಪ್ರದೇಶದ ಜನರು ಬಳಸುವ ಬಲು ಪ್ರಮುಖ ಜೌಷಧಿಯ ಸಸ್ಯ ಎಂದೇ ಪ್ರಚಲಿತ. ಈ ಸೊಪ್ಪನ್ನು…

Read More

ಮಡಿಕೇರಿ ಆ.3 NEWS DESK : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ವತಿಯಿಂದ ಕರ್ನಾಟಕ ಸರ್ಕಾರವು ಕೆಇಎ(ಕರ್ನಾಟಕ ಪರೀಕ್ಷಾ ಪ್ರಾಧಿಕಾರ) ಮೂಲಕ ನಡೆಸಲಿರುವ ರಾಜ್ಯ ಮಟ್ಟದ ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ಹಾಗೂ ನವದೆಹಲಿಯ ವಿಶ್ವವಿದ್ಯಾನಿಲಯದ ಧನಸಹಾಯ ಆಯೋಗದವರು ನಡೆಸಲಿರುವ ರಾಷ್ಟ್ರ ಮಟ್ಟದ ಕಾಲೇಜು ಸಹಾಯಕ ಪ್ರಾಧ್ಯಾಪಕರ (ಯುಜಿಸಿ-ನೆಟ್) ಮತ್ತು ಕಿರಿಯ ಶಿಷ್ಯವೇತನ ಸಂಶೋಧನ ಸಹಾಯಕರ(ಜೆಆರ್‍ಎಫ್) ಪರೀಕ್ಷೆಗಳಿಗೆ 45 ದಿನಗಳ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದೆ. ಆಸಕ್ತರು ಆ.9 ರೊಳಗೆ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಚೇರಿಯಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯೊಳಗಾಗಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ 0821-2515944 ದೂರವಾಣಿ ಸಂಖ್ಯೆಯಲ್ಲಿ ಸಂಪರ್ಕಿಸಬಹುದು ಎಂದು ಕರಾಮುವಿ ಕುಲಸಚಿವರಾದ ಪ್ರೊ. ಕೆ.ಬಿ.ಪ್ರವೀಣ ತಿಳಿಸಿದ್ದಾರೆ.

Read More

ಮಡಿಕೇರಿ ಆ.3 NEWS DESK : ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಎಲ್ಲಾ ಪ್ರಕಟಣೆಗಳನ್ನು ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಆಗಸ್ಸ್ 2024 ರ ಮಾಹೆಯಲ್ಲಿ ಆಗಸ್ಟ್, 31 ರವರೆಗೆ ಶೇ.50 ರಿಯಾಯಿತಿಯ ದರದಲ್ಲಿ ಮಾರಾಟ ಮಾಡಲಾಗುತ್ತಿದೆ. ಹಾಗೂ ಆನ್‍ಲೈನ್ ಮೂಲಕವೂ ಶೇ.50 ರಿಯಾಯಿತಿ ದರದಲ್ಲಿ ಪುಸ್ತಕಗಳನ್ನು ಖರೀದಿಸಬಹುದಾಗಿದೆ. ಓದುಗರು www.kuvempubhashabharathi.karnataka.gov.in ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ ಎಂದು ರಿಜಿಸ್ಟ್ರಾರ್, ಕುವೆಂಪು ಭಾಷಾಭಾರತಿ ಪ್ರಾಧಿಕಾರ, ಬೆಂಗಳೂರು ಇವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಡಿಕೇರಿ ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆಯಲು ಹಾಗೂ ಪುಸ್ತಕವನ್ನು ಖರೀದಿಸಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

Read More

ನವದೆಹಲಿ ಆ.3 NEWS DESK : ಇಂಟರ್ನ್ಯಾಷನಲ್ ಅಸೋಸಿಯೇಷನ್ ​​ಆಫ್ ಅಗ್ರಿಕಲ್ಚರಲ್ ಎಕನಾಮಿಸ್ಟ್ಸ್ ತ್ರೈವಾರ್ಷಿಕ ಆಯೋಜಿಸಿದ 32ನೇ ಅಂತರರಾಷ್ಟ್ರೀಯ ಕೃಷಿ ಅರ್ಥಶಾಸ್ತ್ರಜ್ಞರ ಸಮ್ಮೇಳನವನ್ನು ಪ್ರಧಾನಿ ಮೋದಿ ಇಂದು ದೆಹಲಿಯ ಪುಸಾ ಇನ್‌ಸ್ಟಿಟ್ಯೂಟ್‌ನಲ್ಲಿ ಉದ್ಘಾಟಿಸಿದರು.

Read More