ಮಡಿಕೇರಿ ಆ.14 NEWS DESK : ಜಿಲ್ಲೆಯ ಗೋಮಾಳ ಜಾಗವನ್ನು ಷರತ್ತು ಮುಖಾಂತರ ಗೋ ಶಾಲೆ ನಡೆಸುವವರಿಗೆ ಗುತ್ತಿಗೆ ನೀಡುವ ಮೂಲಕ ಗೋವುಗಳ ರಕ್ಷಣೆಗೆ ಜಿಲ್ಲಾಡಳಿತ ಮುಂದಾಗಬೇಕೆಂದು ಹ್ಯೂಮನ್ ರೈಟ್ಸ್ ಇಂಟರ್‍ನ್ಯಾಷನಲ್ ಫೆಡರೇಷನ್‍ನ ರಾಜ್ಯಾಧ್ಯಕ್ಷ ಹರೀಶ್ ಜಿ.ಆಚಾರ್ಯ ಒತ್ತಾಯಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗಿನಲ್ಲಿ ಬೀದಿ ಬದಿಯ ದನಗಳು ತೊಂದರೆ ಅನುಭವಿಸುತ್ತಿದ್ದು, ಮಡಿಕೇರಿಯ ಅಬ್ಬಿಫಾಲ್ಸ್ ರಸ್ತೆಯಲ್ಲಿ ಸರ್ಕಾರದ ಗೋಶಾಲೆ ಇದ್ದರೂ ಸಾರ್ವಜನಿಕರು, ರೈತರು ತಮಗೆ ಸಾಕಲು ಅಸಾಧ್ಯವಾದ ಗೋವುಗಳನ್ನು ಬಿಡಲು ಆಗುತ್ತಿಲ್ಲ. ಮಡಿಕೇರಿಯಲ್ಲಿ 24 ಎಕರೆ ಗೋಮಾಳ ಜಾಗವಿದ್ದರು ಅದರಲ್ಲಿ 8 ಎಕ್ರೆ ಜಾಗವನ್ನು ಗೋಶಾಲೆಗೆ ಬಳಸಿಕೊಳ್ಳಲಾಗಿದೆ. ಅಲ್ಲಿ ಗೋವುಗಳಿಗೆ ಶೆಡ್‍ಕಟ್ಟಿ 37 ಗೋವುಗಳಿಗೆ ಆಶ್ರಯ ಕಲ್ಲಿಸಲಾಗಿದೆ. ಆದರೆ ಗೋಶಾಲೆಯ ಅಭಿವೃದ್ಧಿಗಾಗಿ ಹಣ ಬಂದಿದ್ದರೂ ಈ 8 ಎಕ್ರೆ ಜಾಗಕ್ಕೆ ಗಿಡಮರಗಳಿಂದಲೇ ಬೇಲಿ ಹಾಕಬೇಕು ಎಂಬ ನಿಯಮವಿದೆ ಹೊರತು ತಂತಿ ಬೇಲಿ ಹಾಕಲು ಅನುಮತಿ ಇಲ್ಲದಾಗಿದೆ ಎಂದು ಟೀಕಿಸಿದರು. ರೈತರು ಸಾಕಲು ಅಸಾಧ್ಯವಾದ ಗೋವುಗಳನ್ನು ತಂದು ಜಿಲ್ಲೆಯ ಸಂಪಾಜೆ,…
ಲೇಖಕ: admin
ಮಡಿಕೇರಿ ಆ.14 NEWS DESK : ಗೊಣಿಕೊಪ್ಪ ಕಾಫಿ ಮಂಡಳಿ ಹಾಗೂ ಬಾಳೆಲೆ ಗ್ರಾ.ಪಂ ಸಹಯೋಗದಲ್ಲಿ ಸಾಮರ್ಥ್ಯ ನಿರ್ಮಾಣ ಕಾರ್ಯಾಗಾರ ನಡೆಯಿತು. ಬಾಳೆಲೆ ಗ್ರಾ.ಪಂ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಳೆಯಿoದಾಗಿ ಕಾಫಿ ಗಿಡಗಳಲ್ಲಿ ಕೊಳೆರೋಗ ಮತ್ತು ಕಾಫಿ ಉದುರುವುದರ ಬಗ್ಗೆ, ಮರು ನಾಟಿ, ಗೋಡೌನ್, ಕಾಫಿ ಕಣ, ಹೊಸ ಕೆರೆ, ಬಾವಿ, ಸ್ಪ್ರಿಂಕ್ಲೇರ್ ಉಪಕರಣ, ಮೋಟಾರ್ ಮಿನಿ ಟ್ರಾಕ್ಟರ್ ಮುಂತಾದವುಗಳಿಗೆ ಇರುವ ಸಬ್ಸಿಡಿಗಳ ಬಗ್ಗೆ ಗೊಣಿಕೊಪ್ಪಲು ಕಾಫಿ ಮಂಡಳಿಯ ಸಂಪರ್ಕಾಧಿಕಾರಿ ಡಿ.ಎಸ್.ಮುಖಾರಿಬ್ ಮಾಹಿತಿ ನೀಡಿದರು. ಬಾಳೆಲೆ ಹೋಬಳಿ ವ್ಯಪ್ತಿಯ 50ಕ್ಕೂ ಹೆಚ್ಚು ಕಾಫಿ ಬೆಳೆಗಾರರು ಭಾಗವಹಿಸಿ ಅಗತ್ಯ ಮಾಹಿತಿಯನ್ನು ಪಡೆದುಕೊಂಡರು.
ಮಡಿಕೇರಿ ಆ.14 NEWS DESK : “ಜಾತ್ಯಾತೀತತೆ ಭಾರತದ ಧರ್ಮ” ಎಂಬ ಶೀರ್ಷಿಕೆಯೊಂದಿಗೆ ಆ.15 ರಂದು ದೇಶದ ಸ್ವಾತಂತ್ರ್ಯೋತ್ಸವದ ಅಂಗವಾಗಿ ಎಸ್.ವೈ.ಎಸ್ ಕೊಡಗು ಜಿಲ್ಲಾ ಸಮಿತಿಯ ವತಿಯಿಂದ ಸಂಜೆ 4 ಗಂಟೆಗೆ ಸುಂಟಿಕೊಪ್ಪದ ಎಸ್.ಎಸ್ ಆಡಿಟೋರಿಯಂನಲ್ಲಿ ನಡೆಯುವ ರಾಷ್ಟ್ರ ರಕ್ಷಾ ಸಂಗಮ ಕಾರ್ಯಕ್ರಮನ್ನು ಯಶಸ್ವಿಗೊಳಿಸುವಂತೆ ಎಸ್.ಕೆ.ಎಸ್.ಎಸ್.ಎಫ್ ಕೊಡಗು ಜಿಲ್ಲಾ ಸಮಿತಿಯು ಕರೆ ನೀಡಿದೆ. ರಾಜ್ಯ ಪ್ರಧಾನ ಕಾರ್ಯದರ್ಶಿ ಉಸ್ತಾದ್ ಅನೀಸ್ ಕೌಸರಿ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಮತ್ತು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಭಾಗವಹಿಸಲಿದ್ದಾರೆ. ಸರ್ವ ಧರ್ಮ ಸಮಾವೇಶದಲ್ಲಿ ಕೊಡಗು ಜಿಲ್ಲಾ ಉಪ ಖಾಝಿಗಳಾದ ಶೈಖುನಾ ಎಂ.ಎಂ ಅಬ್ದುಲ್ಲಾ ಫೈಝಿ, ಕಿರಿಕೊಡ್ಲಿ ಮಠದ ಶ್ರೀ ಶ್ರೀ ಸದಾಶಿವ ಸ್ವಾಮೀಜಿ, ಫಾದರ್ ಮದುಕಿರಣ್.ಡಿ ಮತ್ತು ಇಬ್ರಾಹಿಂ ಮಾಸ್ಟರ್ ಸುಂಟಿಕೊಪ್ಪ ಭಾಗವಹಿಸಲಿದ್ದಾರೆ. ಇದಲ್ಲದೇ ಹಲವು ಸಾಮಾಜಿಕ, ರಾಜಕೀಯ…
ಸೋಮವಾರಪೇಟೆ ಆ.14 NEWS DESK : ಸೋಮವಾರಪೇಟೆ ಮಂಡಲ ಬಿಜೆಪಿ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಹರ್‍ಘರ್ ತಿರಂಗ ಅಭಿಯಾನದ ಅಂಗವಾಗಿ ಪಟ್ಟಣದಲ್ಲಿ ಬೈಕ್ ಜಾಥ ನಡೆಯಿತು. ಕಕ್ಕೆಹೊಳೆಯಿಂದ ಹೊರಟ ಬೈಕ್ ಜಾಥ, ಆನೆಕೆರೆ ಮಾರ್ಗವಾಗಿ ಜೇಸಿ ವೇದಿಕೆಯ ಮೂಲಕ ಕಕ್ಕೆಹೊಳೆ ಜಂಕ್ಷನ್‍ನಲ್ಲಿ ಮುಕ್ತಾಯವಾಯಿತು. ಜಾಥದಲ್ಲಿ 80 ಕ್ಕೂ ಅಧಿಕ ಬೈಕ್‍ಗಳು ಭಾಗವಹಿಸಿದ್ದವು. ಮಾಜಿ ಸಚಿವ ಅಪ್ಪಚ್ಚು ರಂಜನ್ ಮಾತನಾಡಿ, ಪಕ್ಷದಿಂದ ಯುವಕರಲ್ಲಿ ದೇಶಭಕ್ತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ. ಆ.14 ಮತ್ತು 15ರಂದು ಎಲ್ಲರ ಮನೆ ಮೇಲೆ ತಿರಂಗವನ್ನು ಹಾರಿಸುವ ಮೂಲಕ ದೇಶಭಕ್ತಿಯನ್ನು ಮೂಡಿಸಬೇಕಾಗಿದೆ. ಅಲ್ಲದೆ ಬಾಂಗ್ಲಾದಲ್ಲಿ ಹಿಂದುಗಳ ಮೇಲೆ ಆಗುತ್ತಿರುವ ಅನ್ಯಾಯವನ್ನು ತಡೆದು ಬಾಂಗ್ಲಾದೇಶವನ್ನು ವಶಪಡಿಸಿಕೊಳ್ಳಬೇಕೆಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು. ಪಕ್ಷದ ಮುಖಂಡರಾದ ಎಸ್.ಜಿ.ಮೇದಪ್ಪ, ಗೌತಮ್, ಬಿ.ಬಿ.ಭಾರತೀಶ್, ಮನುಕುಮಾರ್ ರೈ, ಮಹೇಶ್ ತಿಮ್ಮಯ್ಯ, ಪಿ.ಕೆ.ಚಂದ್ರು, ಮಹೇಶ್ ಇದ್ದರು.
NEWS DESK : ದೇಶದ 11 ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಖಾಲಿಯಿರುವ 4455 ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಿದೆ. ಪೂರ್ವ ಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿದೆ. ಅರ್ಜಿ ಸಲ್ಲಿಕೆ ಮತ್ತಿತರ ವಿವರಗಳು ಇಲ್ಲಿವೆ. ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ (ಐಬಿಪಿಎಸ್), ದೇಶದ ಹನ್ನೊಂದು ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿಮಾಡುವ ಪ್ರಕ್ರಿಯೆ ಆರಂಭಿಸಿದೆ. ಈ ವರ್ಷದಲ್ಲಿ ಇಲ್ಲಿಯವರೆಗೆ 20,566ಕ್ಕೂ ಹೆಚ್ಚಿನ ಬ್ಯಾಂಕ್ ಹುದ್ದೆಗಳ ನೇಮಕಾತಿಗೆ ಅರ್ಜಿ ಕರೆದಂತಾಗಿದೆ. ಪದವೀಧರ ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿ ಸಿಕೊಳ್ಳಬೇಕಾಗಿದೆ. ಈಗ ಮತ್ತೊಂದು ಸುತ್ತಿನ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಿದೆ. ಈ ಬಾರಿ 11 ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಖಾಲಿಯಿರುವ 4455 ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಿದೆ. ಎಂದಿನಂತೆ, ಪೂರ್ವ ಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿದೆ. ಒಟ್ಟು ಹುದ್ದೆಗಳಲ್ಲಿ ಪರಿಶಿಷ್ಟ ಜಾತಿಗೆ 657, ಪರಿಶಿಷ್ಟ ಪಂಗಡಕ್ಕೆ 332,…
ಸೋಮವಾರಪೇಟೆ ಆ.14 NEWS DESK : ಬಾಂಗ್ಲಾ ದೇಶದಲ್ಲಿ ಹಿಂದುಗಳ ಮೇಲೆ ದೌರ್ಜನ್ಯ ನಡೆಯುತ್ತಿದೆ ಎಂದು ಆರೋಪಿಸಿ ಹಿಂದು ಹಿತರಕ್ಷಣಾ ಸಮಿತಿ ವತಿಯಿಂದ ಪಟ್ಟಣದಲ್ಲಿ ಪ್ರತಿಭಟನೆ ನಡೆಯಿತು. ಹಿಂದುಪರ ಸಂಘಟನೆಗಳ ಪ್ರಮುಖರು ಪಟ್ಟಣದ ಪುಟ್ಟಪ್ಪ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ಘಟನೆಯನ್ನು ಖಂಡಿಸಿದರು. ಸಮಿತಿಯ ಪ್ರಮುಖರಾದ ಬೋಜೇಗೌಡ ಮಾತನಾಡಿ, ಬಾಂಗ್ಲಾ, ಪಾಕಿಸ್ತಾನದಲ್ಲಿ ಹಿಂದೂಗಳ ಹತ್ಯಾಕಾಂಡ ನಡೆಯುತ್ತಿದೆ. ಮುಂದೆ ಭಾರತಕ್ಕೂ ಈ ಪರಿಸ್ಥಿತಿ ಬರಬಾರದು ಎಂದರೆ ಹಿಂದುಗಳು ಒಗ್ಗಟ್ಟಾಗಬೇಕು. ಬಾಂಗ್ಲಾಕ್ಕೆ ಬೆಂಬಲ ನೀಡುವ ರಾಜಕಾರಣಿಗಳನ್ನು ಕ್ಷಮಿಸಬಾರದು. ಹಿಂದುಗಳ ಹತ್ಯಾಕಾಂಡ ನಡೆಯುತ್ತಿದ್ದರೂ ಜಾತ್ಯಾತೀತರು ಎನಿಸಿ ಕೊಂಡವರು ಬಾಯಿ ಬಿಡದಿರುವುದು ಆಶ್ಚರ್ಯ ತಂದಿದೆ ಎಂದು ಅರೋಪಿಸಿದರು. ಪ್ರತಿಭಟನೆಯಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ.ಮೇದಪ್ಪ, ಹಿಂದುಪರ ಸಂಘಟನೆಗಳ ಪ್ರಮುಖರಾದ ಮಹೇಶ್ ತಿಮ್ಮಯ್ಯ, ದರ್ಶನ್ ಜೋಯಪ್ಪ, ದೀಪಕ್, ಶುಭಾಷ್ ತಿಮ್ಮಯ್ಯ, ಉಮೇಶ್, ಮನುಕುಮಾರ್ ರೈ ಇದ್ದರು.
ಸೋಮವಾರಪೇಟೆ ಆ.14 NEWS DESK : ಸಿ ಮತ್ತು ಡಿ (ಕೃಷಿಗೆ ಯೋಗ್ಯವಲ್ಲದ ಭೂಮಿ) ಜಾಗ ವ್ಯವಸಾಯದ ಭೂಮಿಯಾಗಿದ್ದು, ಹಕ್ಕುಪತ್ರ ಸಿಗುವ ಹೋರಾಟ ಮುಂದುವರಿಸುವಂತೆ ರೈತ ಪ್ರಮುಖರು ಸಭೆಯಲ್ಲಿ ನಿರ್ಧರಿಸಿದರು. ಪಟ್ಟಣದ ಒಕ್ಕಲಿಗರ ಸಮೂದಾಯ ಭವನದಲ್ಲಿ ನಡೆದ ತಾಲ್ಲೂಕಿನ 40 ಗ್ರಾಮಗಳ ಗ್ರಾಮಾಭಿವೃದ್ಧಿ ಮಂಡಳಿ ಅಧ್ಯಕ್ಷರು ಹಾಗೂ ವಿವಿಧ ಸಂಘಸಂಸ್ಥೆಗಳ ಪದಾಧಿಕಾರಿಗಳು ಸಭೆಯಲ್ಲಿ ಅರಣ್ಯ ಒತ್ತುವರಿ ತೆರವು ಹಾಗೂ ಸಿ ಮತ್ತು ಡಿ ಭೂಮಿಯ ಬಗ್ಗೆ ಸುದೀರ್ಘ ಚರ್ಚೆ ನಡೆಯಿತು. ಮಡಿಕೇರಿ ಶಾಸಕ ಡಾ.ಮಂತರ್‍ಗೌಡ ಸಭೆಯಲ್ಲಿ ಭಾಗವಹಿಸಿ, ರೈತರ ಸಮಸ್ಯೆಗಳನ್ನು ಆಲಿಸಿದರು. ಶಾಂತಳ್ಳಿ ಹೋಬಳಿಯಲ್ಲಿ ಅತೀ ಹೆಚ್ಚು ಸಿ ಮತ್ತು ಡಿ ಭೂಮಿಯಿದೆ. ಈ ಭೂಮಿಯಲ್ಲೇ ಕೃಷಿ ಮಾಡುತ್ತಿದ್ದಾರೆ. ಎರಡು ಎಕರೆಯಿಂದ 5 ಎಕರೆ ಆಸ್ತಿಯಿರುವ ನೂರಾರು ಕುಟುಂಬಗಳಿವೆ. ಸಿ ಮತ್ತು ಡಿ ಭೂಮಿಗೆ ಹಕ್ಕುಪತ್ರಗಳು ಸಿಕ್ಕಿಲ್ಲ. ಯಾವುದೇ ಸೌಲಭ್ಯಗಳು ಸಿಗುತ್ತಿಲ್ಲ ಎಂದು ಗ್ರಾಮಸ್ಥರು ಸಮಸ್ಯೆ ಹೇಳಿಕೊಂಡರು. 1991ರಲ್ಲಿ ಕೆಲ ಕಂದಾಯ ಇಲಾಖೆಯ ಅಧಿಕಾರಿಗಳು ಶಾಂತಳ್ಳಿ ಹೋಬಳಿಯಲ್ಲಿನ ನೂರಾರು ಎಕರೆ ಜಮೀನನ್ನು…
ಮಡಿಕೇರಿ ಆ.14 NEWS DESK : ಗಾಂಧಿ ಸ್ಮಾರಕ ಉದ್ಯಾನವನ ಅಭಿವೃದ್ಧಿ ಸಮಿತಿ ಸಭೆಯು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸರ್ವೋದಯ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷರಾದ ಅಂಬೆಕಲ್ಲು ಕುಶಾಲಪ್ಪ, ನಿಕಟಪೂರ್ವ ಅಧ್ಯಕ್ಷರಾದ ಟಿ.ಪಿ.ರಮೇಶ್, ಸದಸ್ಯರಾದ ಮುನೀರ್ ಅಹ್ಮದ್, ಕೆ.ಟಿ.ಬೇಬಿ ಮ್ಯಾಥ್ಯೂ, ಕಾನೆಹಿತ್ಲು ಮೊಣ್ಣಪ್ಪ, ರೇವತಿ ರಮೇಶ್, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರಾದ ಸಚಿನ್, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಹಾಗೂ ಇತರರು ಪಾಲ್ಗೊಂಡಿದ್ದರು. ಸಭೆಯ ಆರಂಭದಲ್ಲಿ ಮಾಹಿತಿ ನೀಡಿದ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಸಚಿನ್, ಗಾಂಧಿ ಸ್ಮಾರಕ ಉದ್ಯಾನವನ ಕಾಮಗಾರಿಯು ಪ್ರಗತಿಯಲ್ಲಿದ್ದು, ಸದ್ಯ 60 ಲಕ್ಷ ರೂ. ವೆಚ್ಚಕ್ಕೆ ತಾತ್ಕಾಲಿಕವಾಗಿ ಕಟ್ಟಡ ಕಾಮಗಾರಿಯನ್ನು ಪೂರ್ಣಗೊಳಿಸಬಹುದಾಗಿದೆ ಎಂದು ಮಾಹಿತಿ ನೀಡಿದರು. ಗಾಂಧಿ ಸ್ಮಾರಕ ಉದ್ಯಾನವನ ಪೂರ್ಣ ಕಾಮಗಾರಿ ಗ್ರಂಥಾಲಯ, ಉದ್ಯಾನವನ, ಬೆಳಕು ವ್ಯವಸ್ಥೆ, ಮತ್ತಿತರ ಕಾಮಗಾರಿಗೆ ಸುಮಾರು 1.98 ಕೋಟಿ ರೂ. ಅಂದಾಜು…
ಮಡಿಕೇರಿ ಆ.14 NEWS DESK : ಇದೇ ಆಗಸ್ಟ್, 19 ರಂದು ನುಲಿಯ ಚಂದಯ್ಯ, ಆ.20 ರಂದು ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನ್ಮ ದಿನಾಚರಣೆ ಮತ್ತು ಶ್ರೀ ನಾರಾಯಣ ಗುರು ಜಯಂತಿ ಹಾಗೂ ಆ.26 ರಂದು ಶ್ರೀಕೃಷ್ಣ ಜನ್ಮಾಷ್ಠಮಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಯೋಜಿಸಲು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಆಗಸ್ಟ್, 20 ರಂದು ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನ್ಮ ದಿನಾಚರಣೆಯನ್ನು ನಗರದ ಗಾಂಧಿಭವನದಲ್ಲಿ ಆಚರಿಸಲು ತೀರ್ಮಾನಿಸಲಾಯಿತು. ಸಭೆಯ ಆರಂಭದಲ್ಲಿ ಮಾತನಾಡಿದ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಎಸ್.ಹೊನ್ನೇಗೌಡ ಅವರು ಡಿ.ದೇವರಾಜ ಅರಸು ಅವರ ಜಯಂತಿಯನ್ನು ಕಳೆದ ಬಾರಿಯಂತೆ ಅರ್ಥಪೂರ್ಣವಾಗಿ ಆಯೋಜಿಸಲಾಗುವುದು. ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಗೌರವಿಸಲಾಗುವುದು. ಅರಸು ಅವರ ವಿಚಾರಧಾರೆಗಳ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಲಿದ್ದು, ಎಲ್ಲರೂ ಸಹಕರಿಸುವಂತೆ ಕೋರಿದರು. ಪ್ರಮುಖರಾದ…
ಮಡಿಕೇರಿ ಆ.14 NEWS DESK : ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಜಿಲ್ಲಾಡಳಿತದಿಂದ ವಿವಿಧ ಕಾರ್ಯಕ್ರಮಗಳ ಅಯೋಜನೆ ಮೂಲಕ ಮೂರು ದಿನಗಳ ಕಾಲ ಏರ್ಪಡಿಸಿರುವ ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ ದೊರೆಯಿತು. ನಗರದ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ ನೀಡಿದರು. ಕಂದಾಯ, ಪಂಚಾಯತ್ ರಾಜ್, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ನಗರಾಭಿವೃದ್ಧಿ, ಪೌರಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದಲ್ಲಿ ವಿವಿಧ ಕಾರ್ಯಕ್ರಮಗಳು ಆರಂಭಗೊಂಡವು. ಹರ್ ಘರ್ ತಿರಂಗಾ ಅಭಿಯಾನ ಬಗ್ಗೆ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸರ್ಕಾರದ ನಿರ್ದೇಶನದಂತೆ ಹರ್ ಘರ್ ತಿರಂಗಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಶಾಲಾ ಕಾಲೇಜುಗಳಲ್ಲಿ ಚಿತ್ರಕಲೆ ಹಾಗೂ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿದೆ. ಹಾಗೆಯೇ ಕಾಲ್ನಾಡಿಗೆ ಜಾಥಾ ಕಾರ್ಯಕ್ರಮಗಳು ಜಿಲ್ಲೆಯ ವಿವಿಧ ಭಾಗಗಳಲ್ಲಿ ಜರುಗಲಿವೆ ಎಂದು ತಿಳಿಸಿದರು. ಹರ್ ಘರ್ ತಿರಂಗಾ…






