ಮಡಿಕೇರಿ NEWS DESK ಆ.2 : ಡಾ.ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಬೇಕು ಎನ್ನುವುದು ನಮ್ಮ ತೀರ್ಮಾನವಾಗಿದೆ. ಈ ಬಗ್ಗೆ ಅರಣ್ಯ ಸಚಿವರ ಜೊತೆ ಮತ್ತೊಮ್ಮೆ ಚರ್ಚಿಸಿ ನಿರ್ಧಾರ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭೂ ಕುಸಿತ ಮತ್ತು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಡಿಕೇರಿಯ ಸುದರ್ಶನ ಅತಿಥಿಗೃಹದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ರಾಜ್ಯದಲ್ಲಿ 746 ಕೋಟಿ ಮತ್ತು ಕೊಡಗು ಜಿಲ್ಲಾ ಪಿಡಿ ಖಾತೆಯಲ್ಲಿ 46 ಕೋಟಿ ಹಣ ಇದೆ. ಅಗತ್ಯಬಿದ್ದರೆ ಇನ್ನೂ ಹೆಚ್ಚಿನ ಹಣ ನೀಡಲಾಗುವುದು ಎಂದು ವಿವರಿಸಿದರು. ಮಳೆ ಬೀಳುತ್ತಲೇ ಇರುವುದರಿಂದ ಭೂ ಕುಸಿತದ ಪ್ರದೇಶವನ್ನು ಸರಿ ಪಡಿಸಲು ಕಷ್ಟ ಆಗುತ್ತಿದೆ. 20 ಕಡೆ ಭೂ ಕುಸಿತ ಆಗಿದ್ದರೆ, ಸಣ್ಣ ಪ್ರಮಾಣದಲ್ಲಿ ಭೂಮಿ ಜಾರಿರುವುದು ಹೆಚ್ಚು ಕಡೆ ಆಗಿದೆ. ಅದೃಷ್ಟವಶಾತ್ ಪ್ರಾಣ ಹಾನಿ ಆಗಿಲ್ಲ. ಹಲವರು ಗಾಯಗೊಂಡಿದ್ದಾರೆ. 67 ಮನೆಗಳು ಪೂರ್ಣಹಾನಿ ಆಗಿವೆ. 176 ಮನೆಗಳು ಭಾಗಶಃ ಹಾನಿ ಆಗಿವೆ. 24 ಗಂಟೆಗಳ ಒಳಗೆ…
ಲೇಖಕ: admin
ಮಡಿಕೇರಿ ಆ.2 NEWS DESK : ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ 29ನೇ ವರ್ಷದ “ಕಕ್ಕಡ-18” ಆಚರಣೆ ಮಡಿಕೇರಿ ಹೊರ ವಲಯದ ಕ್ಯಾಪಿಟಲ್ ವಿಲೇಜ್ ನಲ್ಲಿ ಅರ್ಥಪೂರ್ಣವಾಗಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ವಿರಾಟ್ ಹಿಂದೂಸ್ಥಾನ್ ಸಂಗಮ್ ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ವಿಶ್ವ ವಿಖ್ಯಾತ ಆರ್ಥಿಕ ತಜ್ಞ ಡಾ.ಸುಬ್ರಮಣಿಯನ್ ಸ್ವಾಮಿ ಅವರ ಆಪ್ತ, ಜಗದೀಶ್ ಶೆಟ್ಟಿ ಅವರು ಕೊಡವರ ಉಳಿವಿಗಾಗಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ನಡೆಸುತ್ತಿರುವ “ಕೊಡವ ಲ್ಯಾಂಡ್” ಪರವಾದ ಹೋರಾಟಕ್ಕೆ ಸರ್ವರೂ ಬೆಂಬಲ ನೀಡಬೇಕೆಂದು ಕರೆ ನೀಡಿದರು. ಅತ್ಯಂತ ಸೂಕ್ಷ್ಮ ಆದಿಮ ಸಂಜಾತ ಬುಡಕಟ್ಟು ಸಮುದಾಯದ ಕೊಡವರು ಮತ್ತು ಕೊಡವ ನೆಲೆ ಉಳಿಯಬೇಕಾದರೆ “ಕೊಡವ ಲ್ಯಾಂಡ್” ಘೋಷಣೆ ಅಗತ್ಯವಾಗಿದೆ. ವಿಭಿನ್ನತೆಯಲ್ಲಿ ಏಕತೆಯನ್ನು ಸಾಧಿಸಿರುವ ಭಾರತ ದೇಶದಲ್ಲಿ ಹಿಂದೂ ಧರ್ಮದಡಿ ವಿಶಿಷ್ಟ ಆಚಾರ, ವಿಚಾರ, ಸಂಸ್ಕೃತಿಯನ್ನು ಅನುಸರಿಸುವ ಅನೇಕ ಸಮುದಾಯಗಳಿವೆ. ಇವುಗಳಲ್ಲಿ ಆದಿಮ ಸಂಜಾತ ಕೊಡವ ಬುಡಕಟ್ಟು ಸಮುದಾಯ ಕೂಡ ಒಂದು. 1956 ರವರೆಗೆ…
ಮಡಿಕೇರಿ ಆ.2 NEWS DESK : ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿ ಖಾಲಿ ಇರುವ 4455 ಕ್ಕೂ ಹೆಚ್ಚು ಪ್ರೊಬೇಶನರಿ ಆಫೀಸರ್ಸ್ ಹಾಗೂ 896 ಕ್ಕೂ ಹೆಚ್ಚು ಸ್ಪೆಶಲಿಸ್ಟ್ ಆಫ಼ೀಸರ್ಸ್ ಹುದ್ದೆಗಳ ನೇಮಕಾತಿಗೆ ಐ.ಬಿ.ಪಿ.ಎಸ್ ಸಂಸ್ಥೆ ಅರ್ಜಿ ಆಹ್ವಾನಿಸಿದೆ. ಪದವೀಧರ ವಿದ್ಯಾರ್ಥಿಗಳು ಆಗಸ್ಟ್, 21 ರೊಳಗೆ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‍ಸೈಟ್ https://www.ibps.in/ವೀಕ್ಷಿಸಬಹುದಾಗಿದೆ. ಈ ವರ್ಷದಲ್ಲಿ ಇಲ್ಲಿಯವರೆಗೆ 20,566 ಕ್ಕೂ ಹೆಚ್ಚಿನ ಬ್ಯಾಂಕ್ ಹುದ್ದೆಗಳ ನೇಮಕಾತಿಗೆ ಅರ್ಜಿ ಕರೆದಂತಾಗಿದೆ. ಪದವೀಧರ ವಿದ್ಯಾರ್ಥಿಗಳು ಈ ಅವಕಾಶದ ಸದುಪಯೋಗಪಡಿಸಿಕೊಳ್ಳಬೇಕಾಗಿದೆ. ಪ್ರಸ್ತುತ ವರ್ಷದಲ್ಲಿ ಈಗಾಗಲೇ ಎರಡು ಬ್ಯಾಚ್‍ಗಳಲ್ಲಿ ಬ್ಯಾಂಕ್ ನೇಮಕಾತಿ ಪರೀಕ್ಷೆಗಳಿಗೆ ಯಶಸ್ವಿಯಾಗಿ ತರಬೇತಿ ನೀಡಿರುವ ಹಾಸನದ ಸಾಲಗಾಮೆ ರಸ್ತೆಯಲ್ಲಿರುವ ಕೃಷಿಕ್ ಸರ್ವೋದಯ ಫ಼ೌಂಡೇಶನ್(ರಿ) ನಲ್ಲಿ ಬ್ಯಾಂಕ್ ನೇಮಕಾತಿ ಪರೀಕ್ಷೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲು ಆಗಸ್ಟ್, 08 ರಂದು ಉಚಿತ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿದೆ. ಆಸಕ್ತ ಪದವೀಧರ ವಿದ್ಯಾರ್ಥಿಗಳು ಆಗಸ್ಟ್, 07 ರೊಳಗೆ ಮೊಬೈಲ್ ಸಂಖ್ಯೆ 8660217739 ನ್ನು…
ಮಡಿಕೇರಿ ಆ.2 NEWS DESK : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ 2024-25ನೇ ಸಾಲಿನಲ್ಲಿ ಡಿ.ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು-ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ), ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆ, ಹೊಲಿಗೆ ಯಂತ್ರ ವಿತರಣೆ ಯೋಜನೆ ಈ ಯೋಜನೆಗಳಿಗೆ ಸೇವಾ ಸಿಂಧು ತಂತ್ರಾಂಶದ ಮುಖಾಂತರ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಎಲ್ಲಾ ಯೋಜನೆಗಳು ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಹಟ್ಟಿಗೊಲ್ಲ, ಮರಾಠ, ಮತ್ತು ಇದರ ಉಪ ಸಮುದಾಯಗಳು ಹೊರತುಪಡಿಸಿ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ನಲ್ಲಿ ಉಳಿದ ಸಮುದಾಯಗಳಿಗೆ ಅನ್ವಯವಾಗುತ್ತದೆ. ಈ ಸೌಲಭ್ಯ ಒದಗಿಸಲು ಸೇವಾ…
ಮಡಿಕೇರಿ ಆ.2 NEWS DESK : ಕೆದಮುಳ್ಳೂರು ಗ್ರಾಮದ ಮಳೆಹಾನಿ ಪ್ರದೇಶಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲಿಸಿದರು. ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಶಾಸಕರಾದ ಡಾ.ಮಂತರ್ ಗೌಡ, ಸರ್ಕಾರದ ಕಾರ್ಯದರ್ಶಿ ಶಾಲಿನಿ ರಜನೀಶ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಕಾರ್ಯದರ್ಶಿಗಳಾದ ರಶ್ಮಿ ಮಹೇಶ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಧರ್ಮಜ ಉತ್ತಪ್ಪ ಇತರರು ಇದ್ದರು.
ಕುಶಾಲನಗರ ಆ.2 NEWS DESK : ಕುಶಾಲನಗರ ತಾಲೂಕು ಗುಡ್ಡೆ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾವೇರಿ ನದಿ ತಟದಲ್ಲಿ ನೆಲೆಸಿರುವ ನಿವಾಸಿಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕಂದಾಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕ್ಷೇತ್ರ ಶಾಸಕರು ಭೇಟಿ ನೀಡಿ ಅಗತ್ಯ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದ ಹಿನ್ನೆಲೆಯಲ್ಲಿ ಪಂಚಾಯಿತಿ ಆಡಳಿತ ಮಂಡಳಿಯ ತುರ್ತು ಸಭೆ ನಡೆಯಿತು. ಗುಡ್ಡೆ ಹೊಸೂರು ಗ್ರಾ.ಪಂ ವ್ಯಾಪ್ತಿಯ ಬಸವನಹಳ್ಳಿ ಗ್ರಾಮದ ತೆಪ್ಪದ ಕಂಡಿ ಬಳಿ ಕಾವೇರಿ ನದಿ ನೀರಿನ ಪ್ರಮಾಣ ಪ್ರತಿ ವರ್ಷ ಅಪಾಯದ ಅಂಚು ಮೀರಿ ಹರಿಯುತ್ತಿದ್ದು ಇದರಿಂದ ಅಲ್ಲಿನ ನಿವಾಸಿಗಳಿಗೆ ಸಮಸ್ಯೆ ಉಂಟಾಗಿದೆ. ಈ ಸಂಬಂಧ ಅಲ್ಲಿ ನೆಲೆಸಿರುವ 22 ಮನೆಗಳನ್ನು ಸ್ಥಳಾಂತರ ಗೊಳಿಸಿ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಪಂಚಾಯಿತಿ ಅಧ್ಯಕ್ಷ ರುಕ್ಮಿಣಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಚರ್ಚೆ ನಡೆಯಿತು. ಕೆಲವೊಂದು ನಿವಾಸಿಗಳಿಗೆ ಈಗಾಗಲೇ ಬಸವನಹಳ್ಳಿ ಬಳಿ ನಿವೇಶನ ಗುರುತಿಸಿ ನೀಡಲಾಗಿದ್ದರೂ, ಫಲಾನುಭವಿಗಳು ಮತ್ತೆ ನದಿ…
ಮಡಿಕೇರಿ ಆ.2 NEWS DESK : ಪೊನ್ನಂಪೇಟೆ ತಾಲ್ಲೂಕಿನ ಶ್ರೀಮಂಗಲ ಕುಟ್ಟದ ಗುಡ್ಡ ಕುಸಿತ ಪ್ರದೇಶಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲಿಸಿ ಅಧಿಕಾರಿಗಳು ಮತ್ತು ಸ್ಥಳೀಯರ ಜೊತೆ ಚರ್ಚಿಸಿದರು. ಗುಡ್ಡ ಕುಸಿತದ ಪರಿಣಾಮ ಸುಮಾರು 20 ಕ್ಕೂ ಹೆಚ್ಚು ಕುಟುಂಬಗಳು ಸಂಪರ್ಕ ಕಳೆದುಕೊಂಡಿದ್ದು , ಇಲ್ಲಿ ತೂಗು ಸೇತುವೆ ನಿರ್ಮಿಸುವ ಜೊತೆಗೆ ತುರ್ತಾಗಿ ರಸ್ತೆ ನಿರ್ಮಾಣದ ಜೊತೆಗೆ ಇತರೆ ದುರಸ್ತಿ ಕಾರ್ಯಗಳನ್ನು ಮುಗಿಸುವಂತೆ ಸೂಚಿಸಿದರು. ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಗುಡ್ಡ ಕುಸಿತದ ಪರಿಣಾಮಗಳನ್ನು ಮತ್ತು ತೆಗೆದುಕೊಳ್ಳಲಾಗಿರುವ ಸುರಕ್ಷತಾ ಕ್ರಮಗಳು ಹಾಗೂ ಕಾಮಗಾರಿಗಳ ಬಗ್ಗೆ ಮುಖ್ಯಮಂತ್ರಿಗಳಿಗೆ ವಿವರಿಸಿದರು. ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ಶಾಸಕ ಎ.ಎಸ್.ಪೊನ್ನಣ್ಣ , ಶಾಸಕ ಡಾ.ಮಂತರ್ ಗೌಡ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಕಾರ್ಯದರ್ಶಿಗಳಾದ ರಶ್ಮಿ ಮಹೇಶ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಗ್ಯಾರಂಟಿ ಯೋಜನೆಗಳ…
ಮಡಿಕೇರಿ ಆ.2 NEWS DESK : ಕೊಡಗು ಜಿಲ್ಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಿದರು. ಜಿಲ್ಲೆಯ ಗಡಿ ಆನೆಚೌಕೂರು ನಲ್ಲಿ ಜಿಲ್ಲಾಡಳಿತ ಹಾಗೂ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಭವ್ಯ ಸ್ವಾಗತ ಕೋರಿದರು. ಈ ಸಂದರ್ಭ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್ ಪೊನ್ನಣ್ಣ , ಶಾಸಕರಾದ ಡಾ.ಮಂತರ್ ಗೌಡ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಜಿಲ್ಲಾಧಿಕಾರಿ ವೆಂಕಟ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಕಾಂಗ್ರೆಸ್ ಮುಖಂಡ ಟಿ.ಪಿ.ರಾಮೇಶ್ ಹಾಜರಿದ್ದರು.
ಕುಶಾಲನಗರ ಆ.2 NEWS DESK : ತಾಯಂದಿರು ಎರಡು ವರ್ಷಗಳವರೆಗೆ ಮಗುವಿಗೆ ಎದೆಹಾಲು ಕುಡಿಸುವುದರಿಂದ ಮಕ್ಕಳ ಆರೋಗ್ಯ ವೃದ್ಧಿಸುತ್ತದೆ ಮತ್ತು ತಾಯಂದಿರನ್ನು ಕಾಡುವ ಸ್ತನ ಕ್ಯಾನ್ಸರ್ ದೂರವಾಗುತ್ತದೆ ಎಂದು ಕುಶಾಲನಗರ ಸರ್ಕಾರಿ ಆಸ್ಪತ್ರೆಯ ಮಕ್ಕಳ ತಜ್ಞ ಡಾ.ಶಿವಕುಮಾರ್ ಕರೆ ನೀಡಿದರು. ಕೊಡಗು ಜಿ.ಪಂ, ಕುಶಾಲನಗರ ತಾ.ಪಂ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿಗಳ ಸಂಯುಕ್ತಾಶ್ರಯದಲ್ಲಿ ಕುಶಾಲನಗರದ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಹಮ್ಮಿಕೊಂಡಿದ್ದ ” ವಿಶ್ವ ಸ್ತನ್ಯಪಾನ ಸಪ್ತಾಹ” ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತಾಯಿಯ ಎದೆಹಾಲು ಹಾಲನ್ನು ಮಗುವಿಗೆ ಕುಡಿಸುವುದರಿಂದ ತಾಯಿ ಮಗುವಿನಬಾಂಧವ್ಯ ಹೆಚ್ಚಿ, ಮಗುವಿನ ರೋಗನಿರೋಧಕ ಶಕ್ತಿಯೂ ವೃದ್ಧಿಸುತ್ತದೆ ಎಂದು ಡಾ.ಶಿವಕುಮಾರ್ ಹೇಳಿದರು. ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಇಂದೂಧರ್ ಮಾತನಾಡಿ, ತಿಂಗಳವರೆಗೆ ಮಗುವಿಗೆ ತಾಯಿ ಹಾಲು ಹೊರತಾಗಿ ಬೇರೇನೂ ಕುಡಿಸಬಾರದು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಕುಶಾಲನಗರ ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಮಧುಸೂದನ್, ಶಾಲಾ ಮಕ್ಕಳ ಆರೋಗ್ಯ ತಪಾಸಣಾ ಘಟಕದ ವೈದ್ಯರಾದ ಡಾ.ಮೇಲಪ್ಪ, ಡಾ.ನಿವೇದಿತಾ, ಡಾ.ಭರತ್, ತಾಲ್ಲೂಕು ಆರೋಗ್ಯಾಧಿಕಾರಿ ಹೆಚ್.ಕೆ.ಶಾಂತಿ, ಶುಶ್ರೂಷಕಿ ಇಂದಿರಾ ಹಾಜರಿದ್ದರು.
ಮಡಿಕೇರಿ ಆ.2 NEWS DESK : ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತೋಟಕ್ಕೆ ಎಲೆಕ್ಟ್ರಿಕ್ ಬಸ್ ಮಗುಚಿಕೊಂಡಿರುವ ಘಟನೆ ಕೊಡಗರಹಳ್ಳಿ ಬಳಿ ನಡೆದಿದೆ. ಮಡಿಕೇರಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಎಲೆಕ್ಟಿಕ್ ಬಸ್ ಎದುರು ಜೀಪೊಂದು ಏಕಾಏಕಿ ನುಗ್ಗಿದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತೋಟಕ್ಕೆ ಮಗುಚಿಕೊಂಡಿದ್ದು, ಅದೃಷ್ಟವಶಾತ್ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಸುಂಟಿಕೊಪ್ಪ ಪೊಲೀಸ್ ಠಾಣಾಧಿಕಾರಿ ಎಂ.ಸಿ.ಶ್ರೀಧರ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.






