ಮಡಿಕೇರಿ NEWS DESK ಸೆ.14 : ಐತಿಹಾಸಿಕ ಮಡಿಕೇರಿ ದಸರಾ ಸೇರಿದಂತೆ ದಕ್ಷಿಣ ಕೊಡಗಿನ ಗೋಣಿಕೊಪ್ಪಲು ದಸರಾ ಉತ್ಸವವನ್ನು ಎಲ್ಲರೂ ಒಗ್ಗಟ್ಟಾಗಿ ಆಚರಿಸಬೇಕು. ಸಂಸ್ಕೃತಿಯನ್ನು ಬೆಳೆಸುವ ನಿಟ್ಟಿನಲ್ಲಿ ಯಶಸ್ವಿ ದಸರಾ ಆಚರಣೆಗೆ ಸರ್ಕಾರ ನಿಮ್ಮೊಂದಿಗೆ ಸದಾ ಇರಲಿದೆ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಭೋಸರಾಜು ಅವರು ತಿಳಿಸಿದ್ದಾರೆ. ನಗರದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ನಡೆದ ಮಡಿಕೇರಿ ಮತ್ತು ಗೋಣಿಕೊಪ್ಪಲು ದಸರಾ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಎರಡೂ ಕಡೆಯ ದಸರಾ ಉತ್ಸವ ಆಚರಣೆಗೆ ಪೂರಕವಾಗಿ ಅಗತ್ಯ ಅನುದಾನವನ್ನು ಮುಂದಿನ ಎರಡು ಮೂರು ದಿನಗಳಲ್ಲೆ ಒದಗಿಸಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು. ಕಳೆದ ಸಾಲಿನ ಮಡಿಕೇರಿ ದಸರಾ ಉತ್ಸವಕ್ಕೆ ಸರ್ಕಾರ 95 ಲಕ್ಷ ರೂ. ಅನುದಾನವನ್ನು ಒದಗಿಸಿತ್ತು, ಈ ಬಾರಿ ಹೆಚ್ಚಿನ ಅನುದಾನವನ್ನು ಒದಗಿಸುವಂತೆ ಕೋರಲಾಗಿದೆ, ಈ ಬಾರಿ ಕಳೆದ ಬಾರಿಗಿಂತ ಒಂದಷ್ಟು ಹೆಚ್ಚಿನ ಅನುದಾನವನ್ನು ಒದಗಿಸುವ ವಿಶ್ವಾಸ ವ್ಯಕ್ತಪಡಿಸಿದ ಅವರು, ದಸರಾ ಉತ್ಸವಕ್ಕೆ ಕಳೆದ ಸಾಲಿನಂತೆಯೇ ಅಗತ್ಯ…
ಲೇಖಕ: admin
ಗುಡ್ಡೆಹೊಸೂರು NEWS DESK ಸೆ.14 : ಜೀವನ ಮೌಲ್ಯಗಳು ಕುಸಿಯುತ್ತಿರುವ ಕಾಲಘಟ್ಟದಲ್ಲಿ ನಾವಿದ್ದು, ಸಮಾಜದ 4ನೇ ಅಂಗ ಎನ್ನಿಸಿಕೊಂಡಿರುವ ಪತ್ರಿಕಾರಂಗ ಕೂಡ ನಾನಾ ಕಾರಣಗಳಿಂದ ಕಾವಲು ಹಾದಿಯಲ್ಲಿದೆ. ವಿಶ್ವಾಸರ್ಹತೆ ಕೂಡ ಕುಸಿಯುವ ಹಂತಕ್ಕೆ ಬಂದಿದ್ದು, ನಾವೆಲ್ಲರೂ ಆತ್ಮಾವಲೋಕನ ಮಾಡಿಕೊಂಡು ಎಚ್ಚೆತುಕೊಳ್ಳಬೇಕಾದ ಅನಿವಾರ್ಯತೆಯಿದೆ ಎಂದು ಕುಶಾಲನಗರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ವಿ.ಪಿ.ಶಶಿಧರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕೊಡಗು ಪತ್ರಕರ್ತರ ಸಂಘದ ಕುಶಾಲನಗರ ತಾಲೂಕು ಪತ್ರಕರ್ತರ ಸಂಘದಿAದ ಶನಿವಾರ ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ಸಮುದಾಯ ಭವನದಲ್ಲಿ ಆಯೋಜಿತಗೊಂಡ ನೇಗಿಲಯೋಗಿ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭದ ಉದ್ಘಾಟಿಸಿ ಅವರು ಮಾತನಾಡಿದರು. ಇಂದು ಒಳ್ಳೆಯವರಿಗೆ ಮತ್ತು ಒಳ್ಳೆಯದಕ್ಕೆ ಅವಕಾಶ ಮತ್ತು ಪುರಸ್ಕಾರಗಳಿಲ್ಲ. ಬದಲಾಗಿ ಹಣ ಮತ್ತು ಅಧಿಕಾರ ಇರುವವರು ಅಪರಾಧಿಯೇ ಆಗಿದ್ದರೂ ಜೈಕಾರ ಹಾಕುವ ಸಂಕೀರ್ಣ ಕಾಲಘಟ್ಟದಲ್ಲಿದ್ದು, ಬಡವಾಳ ಶಾಹಿಗಳು ಮತ್ತು ಉದ್ಯಮಿಗಳ ಹಿಡಿತದಲ್ಲಿರುವ ಹೆಚ್ಚಿನ ಮುದ್ರಣ ಮತ್ತು ದೃಶ್ಯ ಮಾದ್ಯಮಗಳು ಅವರ ಅಭಿಪ್ರಾಯಗಳನ್ನು ಸಮಾಜದ ಮೇಲೆ ಹೆರುವ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಆತಂಕ…
ಮಡಿಕೇರಿ NEWS DESK ಸೆ.14 : ಇದೇ ಅಕ್ಟೋಬರ್, 17 ರಂದು ತಲಕಾವೇರಿಯಲ್ಲಿ ಜರುಗುವ ಪವಿತ್ರ ತೀರ್ಥೋದ್ಭವ ಸಂಬAಧ ಎಲ್ಲಾ ರೀತಿಯ ಪೂರ್ವ ತಯಾರಿ ಮಾಡಿಕೊಳ್ಳುವಂತೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಸೂಚಿಸಿದ್ದಾರೆ. ಭಾಗಮಂಡಲ ‘ಶ್ರೀ ಭಗಂಡೇಶ್ವರ ದೇವಾಲಯದ ಹಳೆ ಮುಡಿಶೆಡ್ ಕಟ್ಟಡದ ಸಭಾಂಗಣದಲ್ಲಿ ಶನಿವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪವಿತ್ರ ತೀರ್ಥೋದ್ಭವ ಸಂಬಂಧ ತಲಕಾವೇರಿಯಲ್ಲಿ ಭಕ್ತಾಧಿಗಳಿಗೆ ಯಾವುದೇ ರೀತಿ ಕಿರಿಕಿರಿ ಉಂಟಾಗದAತೆ ಅಧಿಕಾರಿಗಳು ಗಮನಹರಿಸುವಂತೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು. ಈ ಬಾರಿ ಅಕ್ಟೋಬರ್, 17 ರಂದು ಬೆಳಗ್ಗೆ 7.40 ಗಂಟೆಗೆ ಪವಿತ್ರ ತೀರ್ಥೋದ್ಭವ ಸಂಭವಿಸುವುದರಿAದ ರಾತ್ರಿ ವೇಳೆಯಲ್ಲಿ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಸಾಧ್ಯತೆ ಇದ್ದು, ಆದ್ದರಿಂದ ಅಗತ್ಯ ಕ್ರಮವಹಿಸುವಂತೆ ಸಚಿವರು ಸೂಚಿಸಿದರು. ಮಳೆ ಕಡಿಮೆಯಾಗಿದ್ದು, ಕೂಡಲೇ ರಸ್ತೆ ನಿರ್ವಹಣೆ ಕೈಗೊಳ್ಳಬೇಕು. ರಸ್ತೆ ಬದಿ ಕಾಡನನ್ನು ಕಡಿಬೇಕು. ಗಿಡ ಗಂಟೆ ಸಂಬAಧ ಅರಣ್ಯ ಅಧಿಕಾರಿಗಳು ತಗಾದೆ ತೆಗೆಯಬಾರದು ಎಂದು ನಿರ್ದೇಶನ ನೀಡಿದರು. ಪೊಲೀಸ್…
*ಓಣಂ ಹಬ್ಬದ ಶುಭಾಶಯಗಳು*
*ಓಣಂ ಹಬ್ಬದ ಶುಭಾಶಯಗಳು*
ಮಡಿಕೇರಿ ಸೆ.14 NEWS DESK : ರಾಷ್ಟ್ರೀಯ ಮಟ್ಟದ ಇನ್ಪೆರ್ ಮಾನಕ್ ಅವಾರ್ಡ್ ಸ್ಪರ್ಧೆಗೆ ಎಂ.ಎಸ್.ದೇಚಮ್ಮ ಆಯ್ಕೆಯಾಗಿದ್ದಾಳೆ. ಕೊಡಗು ವಿದ್ಯಾಲಯ ಶಾಲೆಯಲ್ಲಿ 2022-23ರ ಸಾಲಿನಲ್ಲಿ 10ನೇ ತರಗತಿ ಓದುತ್ತಿದ್ದ ಎಂ.ಎಸ್.ದೇಚಮ್ಮ ಅವರು ವಿಜ್ಞಾನ ಶಿಕ್ಷಕಿ ಪೊನ್ನಮ್ಮ ಪಿ. ಎಸ್ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ್ದ ಓವರ್ ಹೆಡ್ ಟ್ಯಾಂಕ್ ಕ್ಲಿನರ್ ಪರಿಕಲ್ಪನೆಯು ರಾಷ್ಟ್ರೀಯ ಮಟ್ಟದ ಇನ್ಪೆರ್ ಮಾನಕ್ ಅವಾರ್ಡ್ ಸ್ಪರ್ಧೆಗೆ ಆಯ್ಕೆಯಾಗಿದೆ. ಈ ಪರಿಕಲ್ಪನೆಯ ಸಾಧನವು ನೀರಿನ ತೊಟ್ಟಿಗಳನ್ನು ಸ್ವಚ್ಛಗೊಳಿಸುವ ಕಾರ್ಯವನ್ನು ಸರಳಗೊಳಿಸುವ ಗುರಿಯನ್ನು ಹೊಂದಿದೆ ದೈನಂದಿನ ಜೀವನದಲ್ಲಿ ಸೃಜನ ಶೀಲ ಸಮಸ್ಯೆ ಪರಿಹರಿಸುವ ಸಾಮರ್ಥ್ಯವನ್ನು ಕೂಡ ಇದು ಹೊಂದಿದೆ. ದೇಚಮ್ಮ ಪ್ರಸ್ತುತ ನಳಂದ ಗುರುಕುಲ ಕಾಲೇಜಿನಲ್ಲಿ ದ್ವೀತಿಯ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ ತನ್ನ, ಪರಿಕಲ್ಪನೆಯು ಯಶಸ್ಸು ಗಳಿಸಲು ಬೆನ್ನೆಲುಬಾಗಿ ಸಹಕರಿಸಿದ ಮಾರ್ಗದರ್ಶಕರು, ಕೊಡಗು ವಿದ್ಯಾಲಯ ಶಾಲೆಯ ಪ್ರಾಂಶುಪಾಲರು, ಸಿಬ್ಬಂದಿ ವರ್ಗದವರು, ಕುಟುಂಬದವರು ಹಾಗೂ ಗೆಳೆಯರ ಸಹಾಯವನ್ನು ಸ್ಮರಿಸಿದಳು. ಎಂ.ಎಸ್.ದೇಚಮ್ಮಅರ್ಪಟ್ಟು ಮುಕ್ಕಾಟ್ಟಿರ ಪಿ ಸುಬ್ರಮಣಿ ಮತ್ತು ಅಂಜು ಸುಬ್ರಮಣಿ (ತಾಮನೆ ಅಮ್ಮಂಡ )…
ಮಡಿಕೇರಿ ಸೆ.14 NEWS DESK : ಕುಶಾಲನಗರ ಜ್ಞಾನಭಾರತಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಡಿ.ಎಲ್.ಚಂದ್ರಕಲಾ ಅವರು ಕರ್ನಾಟಕ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ನೀಡಲಾಗುವ ಉತ್ತಮ ಶಿಕ್ಷಕಿ ರಾಜ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಬೆಂಗಳೂರಿನ ಶಿಕ್ಷಕರ ಸದನದಲ್ಲಿ ಇಂದು ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಡಿ.ಎಲ್.ಚಂದ್ರಕಲಾ ಅವರು ಗುಮ್ಮನಕೊಲ್ಲಿ ನಿವಾಸಿ ದಿ.ಜಿ.ಕೆ.ರವೀಂದ್ರ ಅವರ ಪತ್ನಿ.
ಮಡಿಕೇರಿ ಅ.14 NEWS DESK : ಜೀವನದಿ ಕಾವೇರಿಯ ಉಗಮ ಸ್ಥಾನವಾದ ತಲಕಾವೇರಿಯಲ್ಲಿ ಅ.17 ರಂದು ಬೆಳಗ್ಗೆ 7 ಗಂಟೆ 40 ನಿಮಿಷಕ್ಕೆ ಸಲ್ಲುವ ತುಲಾ ಲಗ್ನದಲ್ಲಿ ತೀರ್ಥೋದ್ಭವ ನಡೆಯಲಿದೆ. ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆ ವತಿಯಿಂದ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ತುಲಾ ಸಂಕ್ರಮಣ ಜಾತ್ರೆಯ ಪೂರ್ವಭಾವಿಯಾಗಿ ಸೆ.26 ರಂದು ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ಬೆಳಿಗ್ಗೆ 8.35ಕ್ಕೆ ಪತ್ತಾಯಕ್ಕೆ ಅಕ್ಕಿ ಹಾಕುವುದು, ಅ.4 ರಂದು ಬೆಳಿಗ್ಗೆ 10.21ಕ್ಕೆ ಆಜ್ಞಾ ಮುಹೂರ್ತ, ಅ.14 ರಂದು ಬೆಳಗ್ಗೆ 11.35 ಗಂಟೆಗೆ ಅಕ್ಷಯ ಪಾತ್ರೆ ಇಳಿಸುವುದು, ಸಂಜೆ 4.15 ಗಂಟೆಗೆ ಕಾಣಿಕೆ ಡಬ್ಬ ಇಳಿಸುವ ಕಾರ್ಯಕ್ರಮಗಳು ನಡೆಯಲಿದೆ.
ವಿರಾಜಪೇಟೆ ಸೆ.14 NEWS DESK : ವಿರಾಜಪೆಟೆಯ ಮೂರ್ನಾಡು ರಸ್ತೆಯಲ್ಲಿನ ಶ್ರೀ ಕಾವೇರಿ ಗಣೇಶೋತ್ಸವ ಸಮಿತಿಯ 34ನೇ ವರ್ಷದ ಗೌರಿ ಗಣೇಶೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮತ್ತು ನಾಟ್ಯಾಂಜಲಿ ನೃತ್ಯ ಮತ್ತು ಸಂಗೀತ ಶಾಲೆಯ ವಿದ್ಯಾರ್ಥಿಗಳಿಂದ ವೈವಿಧ್ಯಮಯ ನೃತ್ಯ ಕಾರ್ಯಕ್ರಮ ಪ್ರೇಕ್ಷಕರನ್ನು ಮನಸೂರೆಗೊಳಿಸಿತು. ಗಣೇಶನ ಸ್ತೋತ್ರದ ನಾಟ್ಯದೊಂದಿಗೆ ಆರಂಭಗೊಂಡ ನೃತ್ಯ ವೈಭವ ರಾಮ ನೃತ್ಯ, ತೆಲುಗು ನೃತ್ಯ, ಶ್ಲೋಕಾಂಜಲಿ, ಶಿವ ತಾಂಡವ, ಭರತನಾಟ್ಯ, ಜಾನಪದ ನೃತ್ಯ ಸೇರಿದಂತೆ ವಿವಿಧ ಕಲಾ ಪ್ರಕಾರಗಳು ಪ್ರದರ್ಶನಗೊಂಡು ಹತ್ತಾರು ಸುಂದರ ವೈವಿದ್ಯಮಯ ಹಾಡಿಗೆ ವಿದ್ಯಾರ್ಥಿಗಳು ನೃತ್ಯ ಮಾಡಿ ಎಲ್ಲರನ್ನು ಮನರಂಜಿಸಿದರು. ಪುಟಾಣಿ ಮಕ್ಕಳ ಭರತನಾಟ್ಯ ಎಲ್ಲರ ಗಮನ ಸೆಳೆಯಿತು. ನಾಟ್ಯಾಂಜಲಿ ನೃತ್ಯ ಸಂಸ್ಥೆಯ ನೃತ್ಯ ಗುರುಗಳಾದ ಕಾವ್ಯಶ್ರೀ ತಮ್ಮ ಮನಮೋಹಕ ಭರತನಾಟ್ಯದ ಮೂಲಕ ಪ್ರೇಕ್ಷಕರ ಚಪ್ಪಾಳೆ ಗಿಟ್ಟಿಸಿಕೊಂಡರು. ಈ ಸಂದರ್ಭ ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ನಾಟ್ಯಾಂಜಲಿ ನೃತ್ಯ ಶಾಲೆಯ ಸಂಸ್ಥಾಪಕಿ ಹೇಮಾವತಿ ಕಾಂತರಾಜ್, ಕಾವೇರಿ ಗಣೇಶೋತ್ಸವ ಸಮಿತಿ ಅಧ್ಯಕ್ಷರಾದ ಆನಂದ್ ರಾಜಪ್ಪ,…
ಮಡಿಕೇರಿ ಸೆ.14 NEWS DESK : ಮಡಿಕೇರಿ ನಗರಸಭೆಗೆ ನೂತನ ಪೌರಾಯುಕ್ತರಾಗಿ ಹೆಚ್.ಆರ್.ರಮೇಶ್ ಅವರನ್ನು ನೇಮಕಗೊಳಿಸಿ ಕರ್ನಾಟಕ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ಕರ್ತವ್ಯದಲ್ಲಿದ್ದ ವಿಜಯ ಅವರನ್ನು ಸಕ್ಷಮ ಪ್ರಾಧಿಕಾರಕ್ಕೆ ಹಿಂಪಡೆದ ಹಿನ್ನೆಲೆ ತೆರವಾದ ಸ್ಥಾನಕ್ಕೆ ರಮೇಶ್ ಅವರನ್ನು ನಿಯೋಜಿಸಲಾಗಿದೆ. ರಮೇಶ್ ಅವರು ಈ ಹಿಂದೆ ಮಡಿಕೇರಿ ನಗರಸಭೆಯಲ್ಲಿ ಆರೋಗ್ಯಾಧಿಕಾರಿ, ಕಂದಾಯಾಧಿಕಾರಿಯಾಗಿ, ಸೋಮವಾರಪೇಟೆ, ವಿರಾಜಪೇಟೆ ತಾಲ್ಲೂಕು ಸ್ಥಳೀಯಾಡಳಿತದ ಮುಖ್ಯಾಧಿಕಾರಿಯಾಗಿ ಕಾರ್ಯ ನಿರ್ವಹಿಸಿ, ಹುಣಸೂರು ನಗರಸಭೆ ಕಮೀಷನರ್ ಆಗಿ, ಮೈಸೂರು ಕಾರ್ಪೋರೇಷನ್ ನೋಡೆಲ್ ಅಧಿಕಾರಿಯಾಗಿ, ದಕ್ಷಿಣ ಕನ್ನಡದ ವಿಟ್ಲ ಪುರಸಭೆಯ ಮುಖ್ಯಾಧಿಕಾರಿಯಾಗಿ, ಸಕಲೇಶಪುರ ನಗರಸಭೆಯಲ್ಲಿ ಕಮೀಷನರ್ ಆಗಿ ಕೆಲಸ ಮಾಡಿ ಇದೀಗ ನಗರಸಭೆಯ ಪೌರಾಯುಕ್ತರಾಗಿ ನೇಮಕಗೊಂಡಿದ್ದಾರೆ. ವಿಜಯ ಅವರ ವರ್ಗಾವಣೆಗೆ ಈ ಹಿಂದೆ ನಗರಸಭೆಯ ಎಲ್ಲಾ ಸದಸ್ಯರು ಒಮ್ಮತದ ನಿರ್ಣಯ ಕೈಗೊಂಡಿದ್ದರು.






