ಮಡಿಕೇರಿ ಸೆ.14 NEWS DESK : ನಲ್ವತ್ತೋಕ್ಲು ಚೋಕಂಡಳ್ಳಿ ಕಂದೂರಿ ಹಜ್ರತ್ ಮುಹಮ್ಮದ್ ಪೈಗಂಬರ್‍ರ ಮುಹ್‍ಜಿಸತ್ತಿನಿಂದ ಪ್ರಸಿದ್ಧಿ ಹೊಂದಿರುವ ಕಂದೂರಿ ಈದ್ ಮಿಲಾದ್ ನ್ನು ಸೆ.21 ಮತ್ತು 22 ರಂದು ವಿವಿಧ ಕಾರ್ಯಕ್ರಮಗಳೊಂದಿಗೆ ಆಚರಿಸಲಾಗುವುದು ಎಂದು ಈದ್ ಮಿಲಾದ್ ಸಂರಕ್ಷಣಾ ಸಮಿತಿ ಕಾರ್ಯದರ್ಶಿ ಪಿ.ಎ.ಸಿರಾಜುದ್ದೀನ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಎರಡು ದಿನ ನಡೆಯಲಿರುವ ಕಾರ್ಯಕ್ರಮಕ್ಕೆ ಸೆ.21 ರಂದು ಅಸರ್ ನಮಾಜಿನ ಬಳಿಕ ಈದ್ ಮಿಲಾದ್ ಸಂರಕ್ಷಣಾ ಸಮಿತಿ ಅಧ್ಯಕ್ಷ ಕೆ.ಎಂ.ರಫಿ ಧ್ವಜಾರೋಹಣ ನೆರವೇರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಎಂದರು. ಸಂಜೆ 7 ಗಂಟೆಗೆ ಅಬ್ದುಲ್ ಲತೀಫ್ ಸಖಾಫಿ ಕಾಂದಪುರಂ ನೇತೃತ್ವದಲ್ಲಿ ಮದನೀಯಂ ಸದಸ್ಸ್ ಮತ್ತು ನಸೀಹತ್ ನಡೆಯಲಿದ್ದು, ಕಾರ್ಯಕ್ರಮವನ್ನು ಸೈಯದ್ ಮಹದಿ ತಂಗಳ್ ಉದ್ಘಾಟಿಸಲಿದ್ದಾರೆ. ಮುಬಶ್ಯಿರ್ ಅಹ್ಸನಿ ಅಲ್ ಕಾಮಿಲ್ ಪ್ರಾರ್ಥನೆ ನೆರವೇರಿಸಲಿದ್ದಾರೆ. ಕಾರ್ಯಕ್ರಮದಲ್ಲಿ ನಲ್ವತೋಕ್ಲು ಚೋಕಂಡಳ್ಳಿ ಜುಮಾ ಮಸೀದಿ ಅಧ್ಯಕ್ಷ ಪಿ.ಎ.ಹನೀಫ್, ಕೊಡವ ಮುಸ್ಲಿಂ ಅಸೊಶಿಯೇಶನ್ ಅಧ್ಯಕ್ಷ ಡಿ.ಹೆಚ್.ಸೂಪಿ ಹಾಜಿ ಸೇರಿದಂತೆ ಇತರ ಗಣ್ಯರು ಪಾಲ್ಗೊಳ್ಳಲಿದ್ದಾರೆ…
ಲೇಖಕ: admin
ಬೆಂಗಳೂರು ಸೆ.14 NEWS DESK : ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಸಂಘ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ “ಪತ್ರಿಕಾ ವಿತರಕರ ಬಂಧು” ಎನ್ನುವ ಬಿರುದು ನೀಡಿ ಸನ್ಮಾನಿಸಿತು. ಪತ್ರಿಕಾ ವಿತರಕರ ನಾಲ್ಕನೇ ರಾಜ್ಯ ಸಮ್ಮೇಳನದಲ್ಲಿ ಈ ಬಿರುದು ನೀಡಲಾಗಿದ್ದು ಸಮ್ಮೇಳನಕ್ಕೆ ಮುಖ್ಯಮಂತ್ರಿಗಳು ಆಗಮಿಸಲು ಸಾಧ್ಯವಾಗದ ಕಾರಣ ಇಂದು ಕಾವೇರಿ ನಿವಾಸ ಕ್ಕೆ ಬಂದು ಗೌರವಿಸಲಾಯಿತು. ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ಪತ್ರಿಕಾ ವಿತರಕರ ಸಂಘದ ರಾಜ್ಯಾಧ್ಯಕ್ಷ ಶಂಬುಲಿಂಗ, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮತ್ತು ಕಾಂಗ್ರೆಸ್ ಮುಖಂಡರಾದ ಮಾಜಿ ವಿಧಾನ ಪರಿಷತ್ ಸದಸ್ಯ ಗೋಪಾಲ್ ಅವರು ಉಪಸ್ಥಿತರಿದ್ದು ಪತ್ರಿಕಾ ವಿತರಕ ಸಮುದಾಯಕ್ಕೆ ಸರ್ಕರ ನೀಡಿರುವ ನೆರವನ್ನು ಸ್ಮರಿಸಿ ಧನ್ಯವಾದ ಸಲ್ಲಿಸಿದರು.
ನಾಪೋಕ್ಲು ಸೆ.14 NEWS DESK : ಮೂರ್ನಾಡುವಿನಲ್ಲಿ ನಡೆದ ಮಡಿಕೇರಿ ತಾಲ್ಲೂಕು ಮಟ್ಟದ ಅಥ್ಲೆಟಿಕ್ಸ್ ಸ್ಪರ್ಧೆಯಲ್ಲಿ ಭಾಗಮಂಡಲದ ಜ್ಞಾನೋದಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಕೆ.ಆರ್.ಯಶಿಕಾ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಸ್ಪರ್ಧೆಯ ಪ್ರೌಢಶಾಲಾ ಬಾಲಕಿಯರ ವಿಭಾಗದ 100 ಮೀಟರ್ ಓಟದ ಸ್ಪರ್ಧೆ ಹಾಗೂ ಉದ್ದ ಜಿಗಿತ ಸ್ಪರ್ಧೆಯಲ್ಲಿ ಕೆ.ಆರ್.ಯಶಿಕಾ ಪ್ರಥಮ ಸ್ಥಾನ ಪಡೆದುಕೊಂಡು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. 400 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ, 4*200 ರಿಲೇ ಸ್ಪರ್ಧೆಯಲ್ಲಿ ಬಾಲಕಿಯರ ತಂಡ ತೃತೀಯ ಸ್ಥಾನ ವನ್ನು ಪಡೆದುಕೊಂಡು ಶಾಲೆಗೆ ಕೀರ್ತಿಯನ್ನು ತಂದಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರು ಮಾರ್ಗದರ್ಶ ನೀಡಿದರು.
ಮಡಿಕೇರಿ NEWS DESK ಸೆ.14 : ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಪ್ರಯತ್ನದ ಫಲವಾಗಿ ಈ ವರ್ಷದಿಂದ ಮಡಿಕೇರಿ ದಸರಾ ಉತ್ಸವಕ್ಕೆ ಕಾಫಿ ದಸರಾ ಸೇರ್ಪಡೆ ಆಗಿದೆ. ಕೊಡಗು ಕಾಫಿ ಕೃಷಿ ಜಿಲ್ಲೆ ಆಗಿರುವುದರಿಂದ ಕಾಫಿ ಕೃಷಿಕರಿಗೆ ಸೂಕ್ತ ಮಾಹಿತಿ, ಕಾಫಿಯ ಪ್ರಯೋಜನ, ತೋಟಗಾರಿಕಾ ಕೃಷಿ ಮಾಹಿತಿ ಸಂಬಂಧಿತ 20 ಮಳಿಗೆಗಳು ಕಾಫಿ ದಸರಾ ದಲ್ಲಿ ಇರುತ್ತವೆ. ಮೊದಲ ದಿನ ಕಾಫಿ ಕೃಷಿ ಬಗ್ಗೆ ಮಾಹಿತಿ ಕಾರ್ಯಾಗಾರ ಕೂಡ ಜರುಗಲಿದ್ದು ಕರ್ನಾಟಕ ಬೆಳೆಗಾರರ ಒಕ್ಕೂಟ ಕೊಡಗು ಪ್ಲಾಂಟರ್ಸ್ ಅಸೋಸಿಯೇಷನ್, ಕಾಫಿ ಮಂಡಳಿ ಸಹಕಾರವನ್ನು ಕೊಡಲಾಗುತ್ತದೆ. ಅಕ್ಟೋಬರ್ 6 ಮತ್ತು 7 ರಂದು ಈ ಕಾರ್ಯಕ್ರಮ ಆಯೋಜಿತ ಆಗಿದೆ. ಕಾಫಿ ಕೃಷಿಕರಿಗೆ ಸೂಕ್ತ ಮಾಹಿತಿ ನೆರವು ದೊರಕಬೇಕು ಎಂಬ ನಿಟ್ಟಿನಲ್ಲಿ ಶಾಸಕ ಮಂತರ್ ಗೌಡ ಅವರ ವಿಶೇಷ ಪ್ರಯತ್ನ ಈ ಕಾಫಿ ದಸರಾ ಆಗಿದೆ. ಮಕ್ಕಳ ದಸರಾ 11 ವರ್ಷ, ಮಹಿಳಾ ದಸರಾ 7 ವರ್ಷ, ಜನಪದ ದಸರಾ 5 ವರ್ಷ ಪೂರೈಸುತ್ತಿದ್ದು, ಮಡಿಕೇರಿ ದಸರಾಕ್ಕೆ ಮತ್ತೊಂದು ಪ್ರಯತ್ನವಾಗಿ ಕಾಫಿ…
ಮಡಿಕೇರಿ NEWS DESK ಸೆ.14 : ಕೇಂದ್ರ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿರುವ ವಕ್ಫ್ ಬಿಲ್-2024 ನ್ನು ವಿರೋಧಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷ ನಗರದಲ್ಲಿ ಪ್ರತಿಭಟನೆ ನಡೆಸಿತು. ನಗರದ ಇಂದಿರಾಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ವಕ್ಫ್ ತಿದ್ದುಪಡಿ ಬಿಲ್ ವಿರುದ್ಧ ಆಕ್ಷೇಪಣೆ ವ್ಯಕ್ತಪಡಿಸಿ ಜಂಟಿ ಪಾರ್ಲಿಮೆಂಟ್ ಸಮಿತಿಗೆ ಹಕ್ಕೊತ್ತಾಯ ಮಂಡಿಸಿದರು. ಎಸ್‌ಡಿಪಿಐ ಮುಖಂಡ ಹಾಗೂ ನಗರಸಭಾ ಸದಸ್ಯ ಅಮಿನ್ ಮೊಹ್ಸಿನ್ ಮಾತನಾಡಿ ವಕ್ಫ್ ಆಸ್ತಿಗಳ ಸಂರಕ್ಷಣೆ ಹಾಗೂ ವಕ್ಫ್ ಸುಧಾರಣೆಗಳ ಹೆಸರಿನಲ್ಲಿ ಇತ್ತೀಚೆಗೆ ಕೇಂದ್ರ ಸರ್ಕಾರ ವಕ್ಫ್ ಬಿಲ್ 2024 ನ್ನು ಜಾರಿಗೆ ತಂದಿರುವುದು ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ. ಮುಸ್ಲಿಂ ಸಮುದಾಯದ ಕ್ಷೇಮಾಭಿವೃದ್ಧಿಗಾಗಿ ಇರುವ ವಕ್ಫ್ ಆಸ್ತಿಗಳನ್ನು ಕಸಿದುಕೊಳ್ಳುವ ಹುನ್ನಾರ ಬಿಜೆಪಿ ಪಕ್ಷದ ಅಜೆಂಡವಾಗಿದೆ. ಹಾಲಿ ಇರುವ ವಕ್ಫ್ ಕಾಯ್ದೆಗೆ ಸುಮಾರು 40 ತಿದ್ದುಪಡಿಗಳನ್ನು ಮಾಡುವ ಮೂಲಕ ಇಡೀ ವಕ್ಫ್ ಕಾಯ್ದೆಯನ್ನೆ ನಾಶಗೊಳಿಸಲು ಪ್ರಯತ್ನಿಸಲಾಗಿದೆ. ಇದು…
ನಾಪೋಕ್ಲು ಫೆ.14 NEWS DESK : ಮೂರ್ನಾಡುವಿನಲ್ಲಿ ನಡೆದ ಮಡಿಕೇರಿ ತಾಲ್ಲೂಕು ಮಟ್ಟದ ಪ್ರೌಢಶಾಲಾ ಅಥ್ಲೆಟಿಕ್ಸ್ ಸ್ಪರ್ಧೆಯ ಭಾರದ ಗುಂಡು ಎಸೆತ ಸ್ಪರ್ಧೆಯಲ್ಲಿ ಕಕ್ಕಬ್ಬೆ ಶಾಲೆಯ ವಿದ್ಯಾರ್ಥಿನಿ ಪಿ.ಕೆ.ಫಜ್ಞ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಕೂಡಿಗೆಯ ಟರ್ಫ್ ಮೈದಾನದಲ್ಲಿ ನಡೆದ ಬಾಲಕಿಯರ ತಾಲ್ಲೂಕು ಮಟ್ಟದ ಹಾಕಿ ಪಂದ್ಯಾವಳಿಯಲ್ಲಿ ಶಾಲೆ ಯ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ವರದಿ : ದುಗ್ಗಳ ಸದಾನಂದ.
ನಾಪೋಕ್ಲು ಸೆ.14 NEWS DESK : ಕೂವಲೆ ಪುಟ್ಟ್, ಮದ್ದ್ ಪುಟ್ಟ್, ಬಾಳೆನುರ್ಕ್, ಬಡವಕಜ್ಜಾಯ, ಕೇಂಬು ಕರಿ, ಕಾಡು ಮಾಂಗೆ ಕರಿ, ಕುರುಕರಿ, ಚಕ್ಕೆಕುರು ಪಜ್ಜಿ ಒಂದೇ ಎರಡೇ ಹತ್ತು ಹಲವು ಕೊಡವ ಜನಾಂಗದ ತಿಂಡಿ ತಿನಿಸುಗಳು ನೆರೆದಿದ್ದವರ ಬಾಯಲ್ಲಿ ನೀರೂರಿಸಿದವು. ಕೈಲ್ ಪೊಳ್ದ್ ತೀನಿ ನಮ್ಮೆಯ ವೈವಿಧ್ಯಮಯ ಕಾರ್ಯಕ್ರಮಗಳಿಗೆ ನಾಪೋಕ್ಲು ಕೊಡವ ಸಮಾಜ ಸಾಕ್ಷಿಯಾಯಿತು. ನಾಪೋಕ್ಲು ಕೊಡವ ಸಮಾಜದ ಪೊಮ್ಮಕ್ಕಡ ಪರಿಷತ್ ವತಿಯಿಂದ ನಾಪೋಕ್ಲು ಕೊಡವ ಸಮಾಜದಲ್ಲಿ ನಡೆದ ಕೈಲ್ ಪೊಳ್ದ್ ತೀನಿ ನಮ್ಮೆ ಕಾರ್ಯಕ್ರಮವನ್ನು ಸಮಾಜ ಸೇವಕಿ ಕೇಟೋಳಿರ ಜಾಜಿ ಕುಟ್ಟಪ್ಪ ಮತ್ತು ಪೊಳ್ದ್ (ತೀನಿ) ತಿನಿಸುಗಳ ಪ್ರದರ್ಶನವನ್ನು ಸಮಾಜಸೇವಕಿ ಮಂಡೀರ ಸರೋಜ ದೇವಯ್ಯ ಉದ್ಘಾಟಿಸಿದರು. ನಾಪೋಕ್ಲು ಕೆಪಿಎಸ್ ಶಾಲೆಯ ಪ್ರಾಂಶುಪಾಲರಾದ ಮೇದುರ ವಿಶಾಲ ಕುಶಾಲಪ್ಪ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ ಕೊಡವ ಜನಾಂಗ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು. ಆಗಷ್ಟೇ ಜನಾಂಗದ ಅಭಿವೃದ್ಧಿ ಸಾಧ್ಯ ಎಂದರು. ಸಂಸ್ಕೃತಿ, ಆಚಾರ, ವಿಚಾರಗಳನ್ನು ಯುವ ಜನಾಂಗ ರೂಡಿಸಿಕೊಳ್ಳಬೇಕು ಎಂದ ಅವರು…
ಮಡಿಕೇರಿ ಸೆ.14 NEWS DESK : ಪೊನ್ನಂಪೇಟೆಯ ನಿನಾದ ಶಾಲೆಯಲ್ಲಿ ನಡೆದ ಪ್ರೌಢಶಾಲಾ ವಿಭಾಗದ ತಾಲ್ಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ವಿರಾಜಪೇಟೆ ಕಾವೇರಿ ಶಾಲೆಯ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಶಾಲೆಯ 10ನೇ ತರಗತಿಯ ವಿದ್ಯಾರ್ಥಿಗಳಾದ ಪಿ.ಎಸ್.ಅನಲ್, ಜಶ್ವಂತ್ ಬೋಪಣ್ಣ, 9ನೇ ತರಗತಿಯ ವಿದ್ಯಾರ್ಥಿಗಳಾದ ವೃಶಾಂಕ್ ದೇವಯ್ಯ, ಯು.ಎಸ್.ಶ್ರೀವತ್ಸ, ಎಂಟನೇ ತರಗತಿಯ ವಿದ್ಯಾರ್ಥಿಗಳಾದ ಎಂ.ಎಸ್ ಬಿಶನ್ ಮುತ್ತಣ್ಣ ಸಾಧನೆ ಮಾಡಿದ್ದಾರೆ. ಇವರ ಈ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕಿಯರು, ಸಹ ಶಿಕ್ಷಕರು ಹಾಗೂ ಪೋಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇವರುಗಳಿಗೆ ದೈಹಿಕ ಶಿಕ್ಷಕಿಯರಾದ ಮೋನಿಕಾ ಕಾವೇರಿ ಹಾಗೂ ಲಾವಣ್ಯ ತರಬೇತಿ ನೀಡಿದ್ದಾರೆ. ಈ ಸಂದರ್ಭ ಮುಖ್ಯ ಶಿಕ್ಷಕಿ ಬಿ.ಎಸ್.ಜ್ಯೋತಿ, ಪೂರ್ವ ಪ್ರಾಥಮಿಕ ಸಂಯೋಜಕಿ ಅಮೃತ ಅರ್ಜುನ್, ದೈಹಿಕ ಶಿಕ್ಷಕಿಯರುಗಳಾದ ಶ್ರೀಮತಿ ಮೋನಿಕಾ ಕಾವೇರಿ ಹಾಗೂ ಲಾವಣ್ಯ ಹಾಜರಿದ್ದರು.
ನವದೆಹಲಿ NEWS DESK ಸೆ.14 : ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದಲ್ಲಿ ಗೋವು ಕರುವಿಗೆ ಜನ್ಮ ನೀಡಿದೆ. ಕರುವಿನ ಹಣೆಯ ಮೇಲೆ ಬೆಳಕಿನ ಗುರುತು ಇರುವುದರಿಂದ ಅದಕ್ಕೆ ಪ್ರಧಾನಿ ಮೋದಿ ಅವರು ʼದೀಪಜ್ಯೋತಿʼ ಎಂದು ಹೆಸರಿಟ್ಟಿದ್ದಾರೆ.
ಮಡಿಕೇರಿ NEWS DESK ಸೆ.14 : ನಗರದ ಅಶೋಕಪುರ ಗಣೇಶ ಉತ್ಸವ ಸಮಿತಿಯ ವತಿಯಿಂದ ಗಣೇಶ ಮೂರ್ತಿ ವಿಸರ್ಜನೆ ಅಂಗವಾಗಿ ವಿವಿಧ ಕಾರ್ಯಕ್ರಮ ಆಯೋಜಿಸಿದೆ. 50ನೇ ವರ್ಷದ ಸಂಭ್ರಮಾಚರಣೆ ಹಿನ್ನೆಲೆ ಸೆ.15 ರಂದು ಬೆಳಿಗ್ಗೆ ಅನ್ನಪೂರ್ಣೇಶ್ವರಿ ದೇವಾಲಯದಲ್ಲಿ ಅಶೋಕಪುರದ ನಿವಾಸಿಗಳಿಗೆ ಆಟೋಟ ಸ್ಪರ್ಧೆ, ಸೆ.16 ರಂದು ಅಂಬೇಡ್ಕರ್ ಭವನದಲ್ಲಿ ನಾಗರಹೊಳೆಯ ನಾಣಚ್ಚಿ ಹಾಡಿ ಕಲಾತಂಡದಿಂದ ನೃತ್ಯ ಕಾರ್ಯಕ್ರಮ, ಸೆ.17 ರಂದು ಸಭಾ ಕಾರ್ಯಕ್ರಮ ಹಾಗೂ ಅಶೋಕ ಪುರದ ನಿವಾಸಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಗಣೇಶೋತ್ಸವ ಸಮಿತಿ ಅಧ್ಯಕ್ಷ ಎಂ.ಜಿ. ಸುನಿಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.






