ಲೇಖಕ: admin

ಮಡಿಕೇರಿ ಆ.12 NEWS DESK : ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡು ಪತ್ರಕರ್ತರು ಕಾರ್ಯನಿರ್ವಹಿಸಿದರೆ ಸಮಾಜದಲ್ಲಿ ಸಕರಾತ್ಮಕ ಬದಲಾವಣೆ ತರಲು ಸಾಧ್ಯವಿದೆ ಎಂದು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಹೇಳಿದರು. ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಗರದ ಪತ್ರಿಕಾ ಭವನದಲ್ಲಿ ನಡೆದ ಪತ್ರಕರ್ತರಿಗೆ ವಾರ್ಷಿಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮಾನವೀಯ ತುಡಿಗಳಿಗೆ ಸ್ಪಂದಿಸುವ ಗುಣವನ್ನು ಪತ್ರಕರ್ತರು ಹೊಂದಿರಬೇಕು. ಮಾನವೀಯ ಸಂಬಂಧಗಳನ್ನು ಬೆಳದುಕೊಂಡು ಕೆಲಸ ಮಾಡಬೇಕಾದ ಪರಿಸ್ಥಿತಿ ಇಂದಿನ ಕಾಲಘಟ್ಟದಲ್ಲಿ ಬಂದಿದೆ. ಸಮಾಜದ ಕಷ್ಟ-ಕಾರ್ಪಣ್ಯಗಳಿಗೆ ಮಿಡಿಯಬೇಕಾದರೆ ನಮ್ಮಲ್ಲಿ ಮಾನವೀಯ ಅಂತಕರಣ ಇದ್ದರೆ ಮಾತ್ರ ಸಾಧ್ಯ. ಕೇವಲ ವರದಿಗಾರಿಗೆ ಮಾತ್ರ ಪತ್ರಕರ್ತರ ಕೆಲಸವಲ್ಲ. ಜನರ ಕಣ್ಣೀರಿಗೆ ಸ್ಪಂದಿಸುವ, ಅನ್ಯಾಯಕ್ಕೆ ಒಳಗಾದವರಿಗೆ ಧ್ವನಿಯಾಗುವ ಅವಕಾಶ ಮಾಧ್ಯಮ ಕ್ಷೇತ್ರದಲ್ಲಿ ದುಡಿಯುವ ಪತ್ರಕರ್ತರಿಗಿದೆ. ಇದರ ಸದ್ಬಳಕೆ ಆಗಬೇಕು ಎಂದರು. ಕೋವಿಡ್‍ನಿಂದ ಅನೇಕ ಪತ್ರಕರ್ತರು ಪಾಣ ಕಳೆದುಕೊಂಡರು. ಅವರ ಕುಟುಂಬಕ್ಕೆ ಸರಕಾರದಿಂದ ರೂ.5 ಲಕ್ಷ ಪರಿಹಾರ ಕೊಡಿಸುವ ಕೆಲಸ ಸಂಘಟನೆಯಿಂದಾಗಿದೆ.…

Read More

ಜೈಪುರ ಆ.12 NEWS DESK : ರಾಜಸ್ಥಾನದಾದ್ಯಂತ ಭಾರೀ ಮಳೆಯಾಗಿದ್ದು, ನಿನ್ನೆ ಭಾನುವಾರ 15 ಜನರ ದುರಂತ ಸಾವಿಗೆ ಕಾರಣವಾಗಿದೆ. ವಿವಿಧ ಜಿಲ್ಲೆಗಳಲ್ಲಿ ಸಾವು ಸಂಭವಿಸಿದೆ. ಭರತ್‌ಪುರದಲ್ಲಿ ಏಳು, ಜುಂಜುನುದಲ್ಲಿ ಮೂರು, ಕರೌಲಿಯಲ್ಲಿ ಮೂರು, ಜೋಧ್‌ಪುರದಲ್ಲಿ ಒಬ್ಬರು ಮತ್ತು ಬನ್ಸ್ವಾರಾದಲ್ಲಿ ಒಬ್ಬರು ಮೃತಪಟ್ಟಿದ್ದಾರೆ ಎಂದು ಮಾಹಿತಿ ಸಿಕ್ಕಿದೆ. ಪ್ರತ್ಯೇಕ ಘಟನೆಗಳಲ್ಲಿ, ಜೈಪುರ ಸಮೀಪದ ಕನೋಟಾ ಅಣೆಕಟ್ಟಿನಲ್ಲಿ ಐವರು ಯುವಕರು ಮುಳುಗಿ ಮೃತಪಟ್ಟಿದ್ದು, ಪತ್ತೆಗಾಗಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ.ಭರತ್‌ಪುರದಲ್ಲಿ 14 ರಿಂದ 22 ವರ್ಷದೊಳಗಿನ ಏಳು ಯುವಕರು ನೀರಿನಲ್ಲಿ ಮುಳುಗಿ ಪ್ರಾಣ ಕಳೆದುಕೊಂಡಿರುವ ಭೀಕರ ಮಳೆ ಸಂಬಂಧಿತ ದುರಂತ ಸಂಭವಿಸಿದೆ.

Read More

ಕುಶಾಲನಗರ NEWS DESK ಆ.11 : ಕುಶಾಲನಗರ ತಾಲ್ಲೂಕಿನ ಬಸವನಹಳ್ಳಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ ಗ್ರೀನ್ ಅಂಡ್ ಗ್ರೀನ್ ಎಂಬ ಅಂತರರಾಷ್ಟ್ರೀಯಾ ಸಂಸ್ಥೆಯು ಕೊಡಮಾಡುವ ಗ್ರೀನ್ ಅವಾರ್ಡ್ ಪ್ರಶಸ್ತಿಗೆ ಭಾಜನವಾಗಿದೆ. ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವನಹಳ್ಳಿಯ ಗಿರಿಜನರ ಹಾಡಿಗೆ ಹೊಂದಿಕೊಂಡಂತೆ ಇರುವ ಸುಮಾರು 10 ಎಕರೆ ವಿಶಾಲ ಪ್ರದೇಶದಲ್ಲಿ ಕಳೆದ ಎರಡೂವರೆ ದಶಕಗಳ ಹಿಂದೆ ಆರಂಭವಾದ ಈ ವಸತಿ ಶಾಲೆಯಲ್ಲಿ ಗ್ರಾಮೀಣ ಪ್ರದೇಶಗಳ 250 ಮಂದಿ ಬಡ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಾ ಬಂದಿದ್ದು ಇಲ್ಲಿಯವರೆಗೆ ಹತ್ತಾರು ಸಾವಿರ ವಿದ್ಯಾರ್ಥಿಗಳು ಈ ಶಾಲೆಯಲ್ಲಿ ಉಜ್ವಲವಾದ ಭವಿಷ್ಯವನ್ನು ರೂಪಿಸಿಕೊಂಡಿದ್ದಾರೆ. ಶಾಲೆಯಲ್ಲಿನ ವಿಶಾಲ ಪ್ರದೇಶವನ್ನು ಹಸಿರು ಪರಿಸರವಾಗಿ ರೂಪಿಸುವ ಪಣ ತೊಟ್ಟ ಶಾಲಾ ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗದವರು ಶಾಲಾ ಪರಿಸರದಲ್ಲಿ ನೂರಾರು ಸಂಖ್ಯೆಯ ಪರಿಸರ ಸ್ನೇಹಿ ಗಿಡಗಳನ್ನು ನೆಟ್ಟು ಪೋಷಿಸಿ ಮರಗಳನ್ನಾಗಿಸಿರುವುದು ಹಾಗೂ ಶಾಲೆಯ ಸ್ವಚ್ಛತೆ, ವಿದ್ಯಾರ್ಥಿಗಳಿಗೆ ಗುಣಮಟ್ಟದ ಕಲಿಕೆ, ಪ್ರಾಂಶುಪಾಲರು ಹಾಗೂ ಬೋಧಕರಲ್ಲಿ ಅತ್ಯುತ್ತಮ ಹೊಂದಾಣಿಕೆ ಸೇರಿದಂತೆ ವಿವಿಧ ಆಯಾಮಗಳನ್ನು…

Read More

ಶ್ರೀಮಂಗಲ NEWS DESK ಆ.11 : ಜಬ್ಬೂಮಿ ಸಂಘಟನೆ, ರೂಟ್ಸ್ ಆಫ್ ಕೊಡಗು ಹಾಗೂ ವಿವಿಧ ಸಂಘಟನೆಗಳ ಜಂಟಿ ಆಶ್ರಯದಲ್ಲಿ “ಕೊಡಗಿನ ಕೃಷಿಯೊಂದಿಗೆ ಸಂಸ್ಕೃತಿ ಮಿಡಿತ ಹೊಂದಿದ್ದು, ಮರೆಯಾಗುತ್ತಿರುವ ಕೃಷಿ ಪರಂಪರೆ ಬಗ್ಗೆ ಅಭಿಮಾನ ಮೂಡಿಸಿ, ಉತ್ತೇಜಿಸಿ ಮತ್ತು ಕೊಡವ ಸಮುದಾಯಗಳ ನಡುವೆ ಬಾಂಧವ್ಯ ಬೆಸೆಯುವ ನಿಟ್ಟಿನಲ್ಲಿ ಆಯೋಜಿಸಿದ್ದ ಕೆಸರು ಗದ್ದೆ ಕ್ರೀಡಾಕೂಟ ಬಿಟ್ಟಂಗಾಲದಲ್ಲಿ ಸಂಭ್ರಮದಿಂದ ನಡೆಯಿತು. ಬಿಟ್ಟಂಗಾಲ ಗ್ರಾಮದ ನಾಯಡ ಕುಟುಂಬದ ಭತ್ತದ ಗದ್ದೆಯಲ್ಲಿ ಮುರುವಂಡ ಮಿಥುನ್ ಅಣ್ಣಯ್ಯ ಹಾಗೂ ಪೊನ್ನಕಚ್ಚಿರ ಪುನೀತ್ ಅವರ ಮೇಲುಸ್ತುವಾರಿಯ ಗದ್ದೆಯಲ್ಲಿ ನಡೆದ ಕ್ರೀಡಾಕೂಟದಲ್ಲಿ ನೂರಾರು ಕಿರಿಯರು, ಹಿರಿಯರು ಭಾಗವಹಿಸಿ, ಪ್ರೇಕ್ಷಕರ ಪ್ರೋತ್ಸಾಹದೊಂದಿಗೆ ಕೆಸರು ಗದ್ದೆಯಲ್ಲಿ ಎದ್ದು, ಬಿದ್ದು ಕ್ರೀಡಾ ಉತ್ಸಾಹ ಪ್ರದರ್ಶಿಸಿದರು. ನಾಟಿ ಗದ್ದೆಯ ಕ್ರೀಡಾ ಕೂಟದಲ್ಲಿ 6 ವರ್ಷದ ಮಕ್ಕಳಿಂದ ಹಿಡಿದು ಹಿರಿಯ ನಾಗರಿಕರು ಭಾಗವಹಿಸಿ ಸಂಭ್ರಮಿಸಿದರು. ಕಾರ್ಯಕ್ರಮದ ಆರಂಭದಲ್ಲಿ ಸಾಂಪ್ರದಾಯಿಕವಾಗಿ ಗೆಜ್ಜೆತಂಡ್ ಎದುರು ಪುಡಿಯೊಕ್ಕಡ ಹರೀಶ್ ಅವರ ಮೂಲಕ “ತಪ್ಪಡ್ಕ”ಕಟ್ಟಿ ಕಾರ್ಯಕ್ರಮದ ಯಶಸ್ಸು, ಕೊಡಗಿನ ಪ್ರಕೃತಿ, ಜೀವ ಜಲ, ಪರಂಪರೆಯ…

Read More

ತಿತಿಮತಿ NEWS DESK ಆ.11 : ಆದಿವಾಸಿ ಬುಡಕಟ್ಟು ಜನಾಂಗದ ರಕ್ಷಣೆಯೊಂದಿಗೆ ಆದಿವಾಸಿಗಳ ಆಚಾರ- ವಿಚಾರ, ಸಂಸ್ಕೃತಿ ಹಾಗೂ ಜೀವನ ಕ್ರಮಗಳ ಕುರಿತು ಬೆಳಕು ಚೆಲ್ಲುವ ಮೂಲಕ ಇಂದಿನ ಯುವ ಪೀಳಿಗೆಗೆ ಪರಿಚಯಿಸುವ ದಿಸೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕರ್ನಾಟಕ ರಾಜ್ಯ ಸಂಸ್ಥೆಯ ವತಿಯಿಂದ ಸ್ಕೌಟ್ಸ್ ಮತ್ತು ಗೈಡ್ಸ್ ನ ಕೊಡಗು ಜಿಲ್ಲಾ ಸಂಸ್ಥೆಯ ಆಶ್ರಯದಲ್ಲಿ ಬರುವ 2024 ರ ಡಿಸೆಂಬರ್ ತಿಂಗಳಿನಲ್ಲಿ ರಾಜ್ಯಮಟ್ಟದ ಬುಡಕಟ್ಟು ಜನಾಂಗದ ವಿದ್ಯಾರ್ಥಿಗಳ ಸಮಾವೇಶ ಸಂಘಟಿಸಲು ನಿರ್ಧರಿಸಲಾಗಿದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕೊಡಗು ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ.ಬೇಬಿಮ್ಯಾಥ್ಯೂ ತಿಳಿಸಿದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕೊಡಗು ಜಿಲ್ಲಾ ಸಂಸ್ಥೆ ಮತ್ತು ಪೊನ್ನಂಪೇಟೆ ಸ್ಥಳೀಯ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಪೊನ್ನಂಪೇಟೆ ಸಮೀಪದ ಮರೂರು- ತಿತಿಮತಿ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯಲ್ಲಿ ಏರ್ಪಡಿಸಲಾಗಿದ್ದ ವಿಶ್ವ ಬುಡಕಟ್ಟು ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮೊದಲಿಗೆ ಬುಡಕಟ್ಟು…

Read More

ಪೆರಾಜೆ NEWS DESK ಆ.11 : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು, ಸಂಪಾಜೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಪೆರಾಜೆ ಜ್ಯೋತಿ ವಿದ್ಯಾ ಸಂಘದ ಸಂಯುಕ್ತಾಶ್ರಯದಲ್ಲಿ ಜ್ಯೋತಿ ಪ್ರೌಢಶಾಲೆಯ ಸಭಾಂಗಣದಲ್ಲಿ ದಿ.ಗಂಗಾಧರ ಶೇಟ್ ಹಾಗೂ ಸುಲೋಚನಾ ಬಾಯಿ ಸ್ಮಾರಕ ದತ್ತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಪ್ರಯುಕ್ತ ಆಯೋಜಿಸಲಾಗಿದ್ದ ಕೊಡಗಿನ ಸ್ವಾತಂತ್ರ್ಯ ಹೋರಾಟಗಾರರ ನೆನಪಿನ ಉಪನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಜಿಲ್ಲೆಯ ಹಿರಿಯ ಸಾಹಿತಿ, ಕೊಡಗಿನ ಗೌರಮ್ಮ ಪ್ರಶಸ್ತಿ ಪುರಸ್ಕೃತೆ ಸಹನಾ ಕಾಂತಬೈಲು ಕೊಡಗಿನಲ್ಲಿ ನಡೆದ ಸ್ವಾತಂತ್ರ್ಯ ಹೋರಾಟದ ಮೆಲುಕು ಹಾಕಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್, ನಮ್ಮ ದೇಶಕ್ಕೆ ಸ್ವಾತಂತ್ರ‍್ಯ ಸುಲಭವಾಗಿ ಸಿಕ್ಕಿಲ್ಲ, ಹಲವರ ತ್ಯಾಗ ಬಲಿದಾನ, ಹೋರಾಟಗಳಿಂದ ದೊರೆತ್ತಿದ್ದು, ಇಂದಿನ ಯುವ ಪೀಳಿಗೆಗೆ ಇದನ್ನು ತಿಳಿಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಗೋಣಿಕೊಪ್ಪದ ಎಂ.ಜಿ.ಮೋಹನ್ ಅವರು ಅವರ ತಂದೆ ತಾಯಿಗಳ ಹೆಸರಿನಲ್ಲಿ…

Read More

ಮಡಿಕೇರಿ NEWS DESK ಆ.11 : ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ಮತ್ತು ಹಿಂದೂಗಳ ಸುರಕ್ಷತೆಗೆ ಒತ್ತಾಯಿಸಿ ಹಿಂದೂ ಹಿತರಕ್ಷಣಾ ಸಮಿತಿ ವತಿಯಿಂದ ಆ.12 ರಂದು ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತ ಹಾಗೂ ಕುಶಾಲನಗರದ ಗಣಪತಿ ದೇವಾಲಯದ ಬಳಿ ಸಂಜೆ 4 ಗಂಟೆಗೆ ಮಾನವ ಸರಪಳಿ ಪ್ರತಿಭಟನೆ ನಡೆಯಲಿದೆ ಎಂದು ಸಂಘಟನೆಯ ಪ್ರಮುಖರು ತಿಳಿಸಿದ್ದಾರೆ.

Read More

ಮಡಿಕೇರಿ NEWS DESK ಆ.11 : ಶ್ರಮಜೀವಿಗಳಾದ ಹಮಾಲಿ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಹಮಾಲಿ ಕಾರ್ಮಿಕರ ಫೆಡರೇಷನ್ ತಲೆಹೊರೆ ಕಾರ್ಮಿಕರ ಸಂಘ ಆ.18 ರಂದು ಬಳ್ಳಾರಿ ಜಿಲ್ಲೆಯ ಸಿರಗುಪ್ಪದಲ್ಲಿ ನಡೆಸುತ್ತಿರುವ ರಾಜ್ಯ ಸಮಾವೇಶದ ಪ್ರಚಾರದ ಭಿತ್ತಿಪತ್ರವನ್ನು ಇಂದು ನೆಲ್ಲಿಹುದಿಕೇರಿಯ ಕಟ್ಟಡ ಕಾರ್ಮಿಕರ ಸಂಘದ ಕಚೇರಿಯಲ್ಲಿ ಬಿಡುಗಡೆಗೊಳಿಸಲಾಯಿತು. ಹಮಾಲಿ ಕಾರ್ಮಿಕರ ಸಂಘದ ಕೊಡಗು ಜಿಲ್ಲಾ ಘಟಕದ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಭಿತ್ತಿಪತ್ರ ಬಿಡುಗಡೆಗೊಳಿಸಿ ಮಾತನಾಡಿದ ಸಂಘಟನೆಯ ಜಿಲ್ಲಾಧ್ಯಕ್ಷ ಪಿ.ಆರ್.ಭರತ್ ಅವರು, ಸಿರಗುಪ್ಪದ ಎಪಿಎಂಸಿ ಆವರಣದಲ್ಲಿ ನಡೆಯುವ ಸಮಾವೇಶದಲ್ಲಿ ಜಿಲ್ಲೆಯ ನೂರಕ್ಕೂ ಹೆಚ್ಚು ಕಾರ್ಮಿಕರು ಪಾಲ್ಗೊಳ್ಳಲಿದ್ದಾರೆ ಎಂದರು. ಹಮಾಲಿ ಕಾರ್ಮಿಕರಿಗೆ ಕಾರ್ಮಿಕ ಇಲಾಖೆ ನಿಗಧಿ ಪಡಿಸಿರುವ ಕನಿಷ್ಠ ವೇತನ ನೀಡಬೇಕು, ಕಾರ್ಮಿಕ ಕಾನೂನುಗಳನ್ನು ಕಡ್ಡಾಯವಾಗಿ ಜಾರಿಗೆ ತರಬೇಕು, ಕೆಲಸದ ಭದ್ರತೆ ಮತ್ತು ಸುರಕ್ಷತೆ ನೀಡಬೇಕು, ಕಾರ್ಮಿಕರಿಗೆ ಸಾಮಾಜಿಕ ಭದ್ರತೆಯನ್ನು ಕಲ್ಪಿಸಬೇಕು, ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಗೆ ಕಾಯಕಲ್ಪ ನೀಡಬೇಕು, ಪ್ರಧಾನಮಂತ್ರಿ ಜೀವವಿಮಾ ಯೋಜನೆ ಮತ್ತು ಪಿಂಚಣಿಯ ಶ್ರಮಯೋಗಿ ಯೋಜನೆಯ…

Read More

ಮಡಿಕೇರಿ ಆ.11 : ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಅಂಬೇಡ್ಕರ್ ಅವರ ಹೆಸರಿನಲ್ಲಿ ಶನಿವಾರಸಂತೆ ಹೋಬಳಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಭವನದ ಕಾಮಗಾರಿ ಕಳೆದ ಎರಡು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದು, ಆಡಳಿತ ವ್ಯವಸ್ಥೆಯ ನಿರ್ಲಕ್ಷ್ಯದ ವಿರುದ್ಧ ಹೋರಾಟ ನಡೆಸಲು ದಲಿತ ಸಂಘಟನೆಗಳು ನಿರ್ಧರಿಸಿವೆ. ಡಾ.ಅಂಬೇಡ್ಕರ್ ಭವನದ ನಿರ್ಲಕ್ಷ್ಯದ ಕುರಿತು ಇಂದು ಶನಿವಾರಸಂತೆಯ ಪ್ರವಾಸಿ ಮಂದಿರದಲ್ಲಿ ಸಭೆ ನಡೆಸಿದ ದಲಿತ ಸಂಘರ್ಷ ಸಮಿತಿಯ ಮುಖಂಡರು ಅಪೂರ್ಣಗೊಂಡಿರುವ ಭವನ ಪಾಳುಬಿದ್ದಿದ್ದು, ಇದು ಕಳವಳಕಾರಿ ಬೆಳವಣಿಗೆಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಸಂವಿಧಾನವನ್ನು ರಚಿಸಿ ಇಡೀ ದೇಶಕ್ಕೆ ಪ್ರೇರಣೆಯಾದ ಮಹಾನಾಯಕನ ಹೆಸರಿನ ಯೋಜನೆಯೊಂದು ಪೂರ್ಣಗೊಳ್ಳದೆ ಕಾಡು ಪಾಲಾಗಿರುವುದು ಖಂಡನೀಯ. ಆಮೆಗತಿಯ ಕಾಮಗಾರಿಯ ಕುರಿತು ಸಮಾಜ ಕಲ್ಯಾಣ ಇಲಾಖೆ ಸಚಿವರು ಹಾಗೂ ಶಾಸಕರ ಬಳಿ ದೂರಿಕೊಂಡಿದ್ದಾಗ ಉತ್ತಮ ಸ್ಪಂದನೆ ದೊರೆತು ಶೀಘ್ರ ಯೋಜನೆ ಪೂರ್ಣಗೊಳ್ಳುತ್ತದೆ ಎನ್ನುವ ವಿಶ್ವಾಸ ಮೂಡಿತ್ತು. ಆದರೆ ಎರಡು ವರ್ಷ ಕಳೆದರೂ ಭವನದ ಕಾಮಗಾರಿ ಪೂರ್ಣಗೊಂಡಿಲ್ಲ. ಈ ನಿರ್ಲಕ್ಷ್ಯ ಮನೋಭಾವ ಇಡೀ ದಲಿತ ಸಮುದಾಯಕ್ಕೆ ನೋವನ್ನುಂಟು ಮಾಡಿದೆ ಎಂದು…

Read More

ಮಡಿಕೇರಿ NEWS DESK ಆ.11 : ವಿಶ್ವದೆಲ್ಲೆಡೆ ಹಿಂದೂಗಳನ್ನು ಸಂಘಟಿಸುವ ಕಾರ್ಯದಲ್ಲಿ ಸಕ್ರಿಯವಾಗಿರುವ ವಿಶ್ವ ಹಿಂದು ಪರಿಷದ್ ಕರ್ನಾಟಕ ದಕ್ಷಿಣ ಪ್ರಾಂತದ ಕಾರ್ಯಾಲಯದ ನೂತನ ಭವನ ಇಂದು ಬೆಂಗಳೂರಿನಲ್ಲಿ ಲೋಕಾರ್ಪಣೆಗೊಂಡಿತು. ಉದ್ಘಾಟನಾ ಸಮಾರಂಭದಲ್ಲಿ ಆದಿಚುಂಚನಗಿರಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಹಾಗೂ ಆರ್ಟ್ ಆಫ್ ಲೀವಿಂಗ್‌ನ ಶ್ರೀ ರವಿಶಂಕರ ಗುರೂಜಿ ಸಾನ್ನಿಧ್ಯ ವಹಿಸಿದ್ದರು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಕಾರ್ಯವಾಹರಾದ ದತ್ತಾತ್ರೇಯ ಹೊಸಬಾಳೆ ಹಾಗೂ ವಿಶ್ವ ಹಿಂದೂ ಪರಿಷದ್ ನ ಅಂತರರಾಷ್ಟ್ರೀಯ ಅಧ್ಯಕ್ಷ ಅಲೋಕ್ ಕುಮಾರ್ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಬೆಂಗಳೂರಿನ ಚಾಮರಾಜಪೇಟೆ ಶಂಕರಮಠದ ಸಮಾನಾಂತರ ರಸ್ತೆಯಲ್ಲಿರುವ ವಿಹಿಂಪ ಕಚೇರಿ ಸ್ಥಳದಲ್ಲಿ ನೂತನವಾಗಿ ನಿರ್ಮಿಸಿರುವ ಕಾರ್ಯಾಲಯದ ಕಟ್ಟಡಕ್ಕೆ “ಧರ್ಮಶ್ರೀ” ಎಂದು ನಾಮಕರಣ ಮಾಡಲಾಗಿದೆ. ದೇಶ, ಧರ್ಮ, ಸಂಸ್ಕೃತಿ, ಸಂಸ್ಕಾರದ ಪ್ರಚಾರಕ್ಕಾಗಿ ಜಗತ್ತಿನಾದ್ಯಂತ ಇರುವ ಹಿಂದುಗಳನ್ನು ಸಂಘಟಿಸುವ ಕಾರ್ಯದಲ್ಲಿ ತೊಡಗಿರುವ ವಿಶ್ವ ಹಿಂದು ಪರಿಷದ್ ನ ವಿವಿಧ ವಿಭಾಗಗಳು ನೂತನ ಭವನ “ಧರ್ಮಶ್ರೀ” ಯಲ್ಲಿ ಕಾರ್ಯನಿರ್ವಸಲಿದೆ ಎಂದು ಕಾರ್ಯಕ್ರಮದಲ್ಲಿ ಪಾಲ್ಗೊಂಡ ಕೊಡಗು ಜಿಲ್ಲೆಯ…

Read More