ಸೋಮವಾರಪೇಟೆ ಆ.10 NEWS DESK : ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ವತಿಯಿಂದ ದೆಹಲಿಯಲ್ಲಿ ನಡೆಸಲು ಉದ್ದೇಶಿಸಿರುವ ವೀರಭದ್ರ ವರ್ಧಂತಿಹೋತ್ಸವಕ್ಕೆ ಆರ್ಟ್ ಆಫ್ ಲಿವಿಂಗ್‍ನ ಶ್ರೀ ರವಿಶಂಕರ್ ಗುರೂಜಿ ಅವರನ್ನು ಆಹ್ವಾನಿಸಿ ಕಾರ್ಯಕ್ರಮದ ಬಗ್ಗೆ ಚರ್ಚೆ ನಡೆಸಲಾಯಿತು. ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ಆಶ್ರಮದಲ್ಲಿ ರವಿಶಂಕರ್ ಗುರೂಜಿ ಅವರನ್ನು ಭೇಟಿ ಮಾಡಿದ ರಾಜ್ಯದ ವಿವಿಧ ಭಾಗಗಳ ಮಠಾಧೀಶರ ತಂಡ ಕಳೆದ 6 ವರ್ಷಗಳಿಂದ ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಈ ರಾಷ್ಟ್ರದ ಸಂಸ್ಕೃತಿ ರಕ್ಷಕ, ಆಂಜನೇಯ ಸ್ವಾಮಿಗೆ ಲಿಂಗದೀಕ್ಷೆ ನೀಡಿದ ವೀರಭದ್ರ ದೇವರ ಜಯಂತಿ ಆಚರಿಸಿಕೊಂಡು ಬರುತಿದೆ ಹಾಗೂ ಅವರ ಹೆಸರಿನಲ್ಲಿ ರಾಷ್ಟ್ರೀಯ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಈ ಭಾರಿ ರಾಷ್ಟ್ರ ರಾಜಧಾನಿ ದೆಹಲಿಯ ಭಾರತ್ ಮಂದಿರದಲ್ಲಿ ನಡೆಯಲಿರುವ ವೀರಭದ್ರೇಶ್ವರ ವರ್ಧಂತಿ ಮಹೋತ್ಸವ ಆಚರಿಸಲು ನಿರ್ಧರಿಸಲಾಗಿದೆ ಆದ್ದರಿಂದ ತಾವುಗಳು ಸಾನಿಧ್ಯ ವಹಿಸುವುದರೊಂದಿಗೆ ಅಗತ್ಯ ಮಾರ್ಗದರ್ಶನ ಮಾಡಬೇಕೆಂದು ಕೋರಿದರು. ಇದಕ್ಕೆ ಪ್ರತಿಕ್ರಿಯೆ ರವಿಶಂಕರ್ ಗುರೂಜಿ, ಪುರಾಣ ಇತಿಹಾಸದಲ್ಲಿ ವೀರಭದ್ರ ಸ್ವಾಮಿಗೆ ವಿಶೇಷ ಧಾರ್ಮಿಕ ಹಿನ್ನಲೆ…
ಲೇಖಕ: admin
ಕುಶಾಲನಗರ ಆ.10 NEWS DESK : ಕೂಡುಮಂಗಳೂರು ಗ್ರಾ.ಪಂ ನ ಸುಂದರನಗರದ ಸಮುದಾಯ ಭವನದಲ್ಲಿ ಡೆಂಗ್ಯೂ ಸಾಂಕ್ರಾಮಿಕ ರೋಗದ ಬಗ್ಗೆ ಗ್ರಾಮಸ್ಥರಿಗೆ ಅರಿವು ಮೂಡಿಸಲಾಯಿತು. ಈ ಸಂದರ್ಭ ಮಾತನಾಡಿದ ಕೂಡುಮಂಗಳೂರು ಗ್ರಾ.ಪಂ ಸದಸ್ಯ ಕೆ.ಬಿ.ಶಂಶುದ್ಧೀನ್, ಸಾರ್ವಜನಿಕರು ತಮ್ಮ ಮನೆಗಳ ಸುತ್ತಮುತ್ತ ಸ್ವಚ್ಛತೆಯೆನ್ನು ಕಾಪಾಡಬೇಕು. ಇದರಿಂದ ಡೆಂಗ್ಯೂ ರೋಗದಿಂದ ದೂರವಿರಬಹುದು ಎಂದು ಸಲಹೆ ನೀಡಿದರು. ಸುಂದರನಗರ ಅಂಗನವಾಡಿ ಶಿಕ್ಷಕಿ ಬೋಜಮ್ಮ, ಆಶಾ ಕಾರ್ಯಕರ್ತೆ ಸುಮಿತ್ರ, ಗ್ರಾ.ಪಂ ಮಾಜಿ ಸದಸ್ಯೆ ಜಯಮ್ಮ ಹಾಗೂ ಗ್ರಾಮಸ್ಥರು ಇದ್ದರು.
ಮೈಸೂರು, ಆ.10 NEWS DESK : ರಾಜಕೀಯ ಲಾಭಕ್ಕಾಗಿ ಬಿಜೆಪಿ- ಜೆಡಿಎಸ್ ನವರು ಮಾಡುತ್ತಿರುವ ಸುಳ್ಳು ಆರೋಪಗಳಿಗೆ ನಾನು ಹೆದರುವುದಿಲ್ಲ ಹಾಗೂ ಈ ಆರೋಪಗಳ ವಿರುದ್ಧ ರಾಜಕೀಯವಾಗಿ ಹಾಗೂ ಕಾನೂನಾತ್ಮಕವಾಗಿ ಹೋರಾಡಲು ಸಿದ್ದವಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬಿಜೆಪಿ ಹಾಗೂ ಜೆಡಿಎಸ್ ನ ಆರೋಪಗಳ ಬಗ್ಗೆ ಸರ್ಕಾರದ ಮುಂದಿನ ನಡೆಯ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಈ ರೀತಿ ಪ್ರತಿಕ್ರಿಯೆ ನೀಡಿದರು. ಜೆಡಿಎಸ್ ಹಾಗೂ ಬಿಜೆಪಿಯ ಪಾದಯಾತ್ರೆಗೆ ಪ್ರತ್ಯುತ್ತರವಾಗಿ ಕಾಂಗ್ರೆಸ್ ಬೃಹತ್ ಜನಾಂದೋಲನವನ್ನು ಮಾಡಿದೆ. ಬಿಜೆಪಿ ಹಾಗೂ ಜೆಡಿಎಸ್ ನವರು ಸುಳ್ಳು ಆರೋಪಗಳನ್ನು ಆಧರಿಸಿ ಮಾಡುತ್ತಿರುವ ಪಾದಯಾತ್ರೆ ಮಾಡುತ್ತಿದ್ದು, ಸಿದ್ದರಾಮಯ್ಯನಿಗೆ ಕಪ್ಪು ಬಳಿಯಲು ಪ್ರಯತ್ನಿಸುತ್ತಿದ್ದಾರೆ. ಅವರ ಆರೋಪಗಳು ಸುಳ್ಳು ಎಂದು ಜನರಿಗೆ ಮನವರಿಕೆ ಮಾಡಲು ಜನಾಂದೋಲನ ಮಾಡಲಾಗಿದೆ ಎಂದರು. ರಾಜಕೀಯವಾಗಿ ಮಣಿಸಲು ಬಿಜೆಪಿ ಜೆಡಿಎಸ್ ತಂತ್ರ: ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬಂದಿರುವ ಸರ್ಕಾರವನ್ನು ಅಸ್ಥಿರಗೊಳಿಸಲು ಸಂಚು ಹೂಡಿದ್ದಾರೆ. ಸುಳ್ಳು ಆರೋಪಗಳಿಂದ ನನ್ನ ಮೇಲೆ ಕಪ್ಪು ಬಳಿದರೆ, ರಾಜಕೀಯವಾಗಿ ನನ್ನನ್ನು ಮಣಿಸಿ ಲಾಭ ಪಡೆಯಬಹುದು…
ಮಡಿಕೇರಿ NEWS DESK ಆ.10 : ಮೈಸೂರು- ಕೊಡಗು ಕ್ಷೇತ್ರದ ಸಂಸದ ಯದುವೀರ್ ಒಡೆಯರ್ ಅವರ ನೂತನ ಕಚೇರಿ ಆ.14 ರಂದು ಮೈಸೂರಿನ ಚಾಮರಾಜ ಜೋಡಿ ರಸ್ತೆ ಬಳಿಯ ಸಾರ್ವಜನಿಕ ಕಚೇರಿಗಳ ಕಟ್ಟಡದಲ್ಲಿ ಉದ್ಘಾಟನೆಗೊಳ್ಳಲಿದೆ.
ಸಿದ್ದಾಪುರ ಆ.10 NEWS DESK : ವಿರಾಜಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘ, ವಿರಾಜಪೇಟೆ ವಲಯ ಅರಣ್ಯ ಇಲಾಖೆ ಮತ್ತು ಸಿದ್ದಾಪುರದ ಬಿ.ಜಿ.ಎಸ್.ಪಬ್ಲಿಕ್ ಶಾಲೆ ಸಹಯೋಗದೊಂದಿಗೆ ವನಮಹೋತ್ಸವ ಕಾರ್ಯಕ್ರಮ ನಡೆಯಿತು. ಶಾಲಾ ಆವರಣದಲ್ಲಿ ನಡೆದ ಕಾರ್ಯಕ್ರಮವನ್ನು ವಿರಾಜಪೇಟೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಜಗನ್ನಾಥ್ ಗಿಡ ನೆಡುವ ಮೂಲಕ ಉದ್ಘಾಟಿಸಿ ಮಾತನಾಡಿ, ಮಾನವನ ಸ್ವಯಂ ಕೃತ ಅಪರಾಧಗಳಿಂದ ಪ್ರಾಕೃತಿಕ ದುರಂತಗಳು ಸಂಭವಿಸುತ್ತಿದೆ. ಪರಿಸರವನ್ನು ನಾವು ಸಂರಕ್ಷಿಸಿದರೆ ಪರಿಸರ ನಮ್ಮನ್ನು ರಕ್ಷಿಸುತ್ತದೆ. ವನಮಹೋತ್ಸವ ಕೇವಲ ಗಿಡ ನೆಡುವುದಕ್ಕೆ ಸೀಮಿತವಾಗದೆ ಅದನ್ನು ಪೋಷಿಸಲು ಮುಂದಾಗಬೇಕೆಂದು ಹೇಳಿದ ಅವರು, ಪ್ರತಿಯೊಬ್ಬರೂ ಮನೆಯ ಅಂಗಳದಲ್ಲಿ ಸಸಿ ನೆಟ್ಟು ಸಂರಕ್ಷಿಸಬೇಕು. ಈ ದಿಸೆಯಲ್ಲಿ ಗಿಡಮರ ಉಳಿಸಿ ಪರಿಸರ ಸಂರಕ್ಷಣೆ ಮಾಡಬೇಕು. ಗಿಡಮರಗಳನ್ನು, ಪರಿಸರವನ್ನು ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ತಾಲೂಕಿನ ಪತ್ರಕರ್ತರ ಸಂಘ ಕೇವಲ ವರದಿಗಾರಿಕೆ ಮಾತ್ರವಲ್ಲದೆ ಹಲವಾರು ರೀತಿಯ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವುದು ಶ್ಲಾಘನೀಯ ಎಂದರರು. ವಿರಾಜಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಜಿತ್ ಕುಮಾರ್ ಗುಹ್ಯ ಪ್ರಾಸ್ತಾವಿಕವಾಗಿ…
NEWS DESK ಬ್ರೆಜಿಲ್ ನ ಪ್ರಾದೇಶಿಕ ಟರ್ಬೊಪ್ರೊಪ್ ವಿಮಾನವು ಬ್ರೆಜಿಲ್‌ನ ಸಾವೊ ಪಾಲೊ ಬಳಿ ಅಪಘಾತಕ್ಕೀಡಾಗಿದ್ದು, ವಿಮಾನದಲ್ಲಿದ್ದ ಎಲ್ಲಾ 62 ಮಂದಿ ಮೃತಪಟ್ಟಿದ್ದಾರೆ. 62 ಜನರನ್ನು ಹೊತ್ತೊಯ್ಯುತ್ತಿದ್ದ ವಿಮಾನ ಪತನಗೊಂಡಿದೆ.
ಮಡಿಕೇರಿ ಆ.10 NEWS DESK : ಈ ವರ್ಷದಲ್ಲಿ ಇಲ್ಲಿಯವರೆಗೆ 20,566ಕ್ಕೂ ಹೆಚ್ಚಿನ ಬ್ಯಾಂಕ್ ಹುದ್ದೆಗಳ ನೇಮಕಾತಿಗೆ ಅರ್ಜಿ ಕರೆದಂತಾಗಿದೆ. ಪದವೀಧರ ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿ ಸಿಕೊಳ್ಳಬೇಕಾಗಿದೆ. ಭಾರತದಲ್ಲಿ, ಬ್ಯಾಂಕಿಂಗ್ ವೃತ್ತಿಯನ್ನು ಆರಿಸಿಕೊಳ್ಳುವ ಹೊಸಬರಿಗೆ ಮತ್ತು ಅನುಭವಿ ವೃತ್ತಿಪರರಿಗೆ ಅತ್ಯಂತ ಪ್ರತಿಷ್ಠಿತ ಉದ್ಯೋಗಗಳಲ್ಲಿ ಒಂದಾಗಿದೆ. ಬ್ಯಾಂಕ್ಗಳು ತನ್ನ ಉದ್ಯೋಗಿಗಳಿಗೆ ಸುಂದರವಾದ ಪ್ಯಾಕೇಜ್ಗಳು, ಆಕರ್ಷಕ ಸಂಬಳ, ಉದ್ಯೋಗ ಭದ್ರತೆಯ ಜೊತೆಗೆ ಇತರ ಸವಲತ್ತುಗಳನ್ನು ನೀಡುತ್ತವೆ ಎಂಬುದು ಬಹಿರಂಗ ಸತ್ಯವಾಗಿದೆ. ಪ್ರತಿ ವರ್ಷ ದೇಶದಾದ್ಯಂತ ವಿವಿಧ ಬ್ಯಾಂಕ್ಗಳು ಮತ್ತು ಪರೀಕ್ಷಾ ಏಜೆನ್ಸಿಗಳು ನಡೆಸುವ ಬಹು ಬ್ಯಾಂಕ್ ಪರೀಕ್ಷೆಗಳಿವೆ.ಇಂತಹ ಕಾರಣಗಳಿಂದಾಗಿ ಬ್ಯಾಂಕ್ ಉದ್ಯೋಗಗಳನ್ನ ಪಡೆದುಕೊಳ್ಳಲು ಪೈಪೋಟಿ ಅತ್ಯಂತ ವೇಗದಲ್ಲಿ ಹೆಚ್ಚುತ್ತಿದೆ. ಆಕಾಂಕ್ಷಿಗಳು ಪರೀಕ್ಷೆಯಲ್ಲಿ ಯಶಸ್ಸು ಗಳಿಸಲು ಮತ್ತು ಬ್ಯಾಂಕ್ ಉದ್ಯೋಗಿಯಾಗಿ ಆಯ್ಕೆಯಾಗಲು ಸರಿಯಾದ ತಯಾರಿಯನ್ನು ಹೊಂದಿರಬೇಕು ಎಂಬುದನ್ನು ಸ್ಪರ್ಧೆಯಲ್ಲಿ ಭಾಗವಹಿಸುವ ಅಭ್ಯರ್ಥಿಗಳ ಸ್ಸಂಖ್ಯೆ ಸೂಚಿಸುತ್ತದೆ. ಒಂದು ಕಾಲದಲ್ಲಿ ಕಾಮರ್ಸ್ ಪದವಿ ಓದಿದವರು ಕೃಷಿ ಪದವಿ ಅಧ್ಯಯನ ಮಾಡಿದವರಿಗಷ್ಟೇ ಬ್ಯಾಂಕಗಳಲ್ಲಿ ಉದ್ಯೋಗ ಎನ್ನುವಂತಿತ್ತು. ಆದರೆ, ಈಗ…
ಮೈಸೂರು NEWS DESK ಆ.10 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶ್ರಾವಣ ಶನಿವಾರಧ ಪ್ರಯುಕ್ತ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿಯ ದರ್ಶನ ಪಡೆದು ವಿಶೇಷ ಪೂಜೆ ನೆರವೇರಿಸಿದರು.
ನಾಪೋಕ್ಲು ಆ.10 NEWS DESK : ನಾಪೋಕ್ಲು ವ್ಯಾಪ್ತಿಯ ವಿವಿಧೆಡೆ ನಾಗರ ಪಂಚಮಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಸಮೀಪದ ಪಾಲೂರು ಶ್ರೀ ಮಹಾಲಿಂಗೇಶ್ವರ ದೇವಾಲಯ, ಕಕ್ಕಬೆಯ ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯ, ಕೂರುಳಿ ಸುಭಾಷ್ ನಗರ ಹಾಗೂ ಬಲ್ಲಮಾವಟಿಯ ಶ್ರೀ ಭಗವತಿ ದೇವಾಲಯಗಳಲ್ಲಿ ನಾಗರ ಪಂಚಮಿಯನ್ನು ಆಚರಿಸಲಾಯಿತು. ಪಾಡಿ ಶ್ರೀ ಇಗ್ಗುತ್ತಪ್ಪದೇವಾಲಯದಲ್ಲಿ ಅರ್ಚಕ ಜಗದೀಶ್ ಭಟ್ ದೇವಾಲಯದ ನಾಗನ ಕಟ್ಟೆಯಲ್ಲಿ ವಿಶೇಷ ಪೂಜಾ ಕೈಂಕರ್ಯ ನೆರವೇರಿಸಿದರು. ಈ ಸಂದರ್ಭ ದೇವಾಲಯದ ದೇವತಕ್ಕರು, ಭಕ್ತ ಜನ ಸಂಘದ ಅಧ್ಯಕ್ಷರಾದ ಪರದಂಡ ಸುಮನ್ ಸುಬ್ರಮಣಿ ಸೇರಿದಂತೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವಿಶೇಷ ಪೂಜೆ ಸಲ್ಲಿಸಿದರು. ಪಾಲೂರಿನ ಮಹಾಲಿಂಗೇಶ್ವರ ದೇವಾಲಯದಲ್ಲಿ ಅರ್ಚಕ ದೇವಿ ಪ್ರಸಾದ್ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು. ನಾಗನ ಕಲ್ಲಿಗೆ ಹಾಲು, ಎಳೆ ನೀರು, ಅಭಿಷೇಕ ನಡೆಯಿತು. ಈ ಸಂದರ್ಭ ದೇವಾಲಯದ ಪಾರುಪತ್ತೆಗಾರ ಮನು ಸೇರಿದಂತೆ ಭಕ್ತಾದಿಗಳು ಪಾಲ್ಗೊಂಡಿದ್ದರು. ಕೂರುಳಿ ಸುಭಾಷ್ ನಗರದಲ್ಲಿ ಶ್ರೀ ಭಗವತಿ ದೇವಾಲಯದ ಅರ್ಚಕ ಹರೀಶ್ ಭಟ್ ನಾಗನಕಟ್ಟೆಯಲ್ಲಿ…
ಸಕಲೇಶಪುರ NEWS DESK ಆ.10 : ಸಕಲೇಶಪುರ ತಾಲ್ಲೂಕಿನ ಬಾಳ್ಳುಪೇಟೆ ಸಮೀಪ ಕಿಲೋಮೀಟರ್ ಸಂಖ್ಯೆ 42/43ರ ಮಧ್ಯೆ ಭೂಕುಸಿತವಾಗಿದೆ. ಇದರಿಂದ ಹಾಸನ-ಮಂಗಳೂರು ಮಾರ್ಗದ ರೈಲುಗಳ ಸಂಚಾರ ಸ್ಥಗಿತವಾಗಿದೆ. ಶುಕ್ರವಾರ ಮಧ್ಯರಾತ್ರಿ ರೈಲ್ವೆ ಹಳಿ ಮೇಲೆ ಮತ್ತೆ ಭಾರೀ ಪ್ರಮಾಣದಲ್ಲಿ ಮರ, ಕಲ್ಲುಗಳ ಸಹಿತ ಮಣ್ಣು ಕುಸಿದಿದೆ. ಹಾಸನದಿಂದ ಮಂಗಳೂರಿಗೆ, ಮಂಗಳೂರಿನಿಂದ ಹಾಸನಕ್ಕೆ ತೆರಳುತ್ತಿದ್ದ ರೈಲುಗಳ ಸಂಚಾರ ಸ್ಥಗಿತವಾಗಿದೆ. ಸಕಲೇಶಪುರ, ಯಡಕುಮಾರಿ, ಶಿರವಾಗಿಲು, ಆಲೂರು ಸೇರಿ ಆರು ಕಡೆ ಆರು ರೈಲುಗಳು ನಿಂತಿವೆ. ದಿಢೀರ್ ರೈಲುಗಳು ಸ್ಥಗಿತಗೊಂಡಿದ್ದರಿಂದ ಪ್ರಯಾಣಿಕರಿಗೆ ಪರದಾಡುವಂತ್ತಾಗಿದೆ. ಮಣ್ಣು ತೆರವು ಕಾರ್ಯಾಚರಣೆ ನಡೆಯುತ್ತಿದ್ದು, ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.






