ಲೇಖಕ: admin

ಸುಂಟಿಕೊಪ್ಪ ಆ.10 NEWS DESK : ಜಿಲ್ಲೆಯಾದ್ಯಂತ ನಾಗಾರಪಂಚಮಿ ಹಬ್ಬವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಕೊಡಗರಹಳ್ಳಿಯಲ್ಲಿರುವ ಶ್ರೀ ಬೈತೂರಪ್ಪ, ಪೊವ್ವೆದಿ ಬಸವೇಶ್ವರ ದೇವಾಲಯದ ಆವರಣದಲ್ಲಿ ಇರುವ ನಾಗಸ್ಥಾನದಲ್ಲಿ ನಾಗರಪಂಚಮಿ ಪ್ರಯುಕ್ತವಾಗಿ ವಿಶೇಷ ಪೂಜೆ ನಡೆಯಿತು. ದೇವಾಲಯದ ಮುಖ್ಯ ಆರ್ಚಕರಾದ ನರಸಿಂಹಭಟ್, ಸಹಾರ್ಚಕರಾದ ರಾಮಶರ್ಮ ಪೂಜಾ ಕೈಂಕರ್ಯಗಳನ್ನು ನೆರವೇರಿಸಿದರು. ಈ ಸಂದರ್ಭ ದೇವಾಲಯ ಟ್ರಸ್ಟ್ ಅಧ್ಯಕ್ಷ ಕೆ.ಎನ್.ಪೂಣ್ಣಚ್ಚ, ಕಾರ್ಯದರ್ಶಿ ಬಿ.ಸಿ.ದಿನೇಶ್, ಖಜಾಂಚಿ ಡಾ.ತಮ್ಮಯ್ಯ, ಟ್ರಸ್ಟಿಗಳು, ದೇವಾಲಯ ಪಾರುಪಾತ್ಯದಾರ ಅಕ್ಕಪಂಡ ರಾಜೇಂದ್ರ ಸೇರಿದಂತೆ ನೂರಾರು ಭಕ್ತಾಧಿಗಳು ಶೃದ್ಧಾಭಕ್ತಿಯಿಂದ ಪಾಲ್ಗೊಂಡಿದ್ದರು. ಸುಂಟಿಕೊಪ್ಪ ಪನ್ಯ ಗ್ರಾಮದ ಶ್ರೀ ಮಳೂರು ಬೆಳ್ಳಾರಿಕ್ಕಮ್ಮ ದೇವಾಲಯದಲ್ಲಿ ಹಾಗೂ ಪಟ್ಟಣ ವ್ಯಾಪ್ತಿಯ ವಿವಿಧ ದೇವಾಲಯ ದೇವಾಲಯಗಳಲ್ಲಿ ನಾಗಾರಪಂಚಮಿ ಹಬ್ಬವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ದೇವಾಲಯಕ್ಕೆ ಆಗಮಿಸಿ ನಾಗನ ಕಲ್ಲಿಗೆ ಹಾಲಿನ ಅಭಿಷೇಕ ಮಾಡಿ, ವಿಶೇಷ ಪೂಜೆ ಸಲ್ಲಿಸಿದರು. 

Read More

ಮಡಿಕೇರಿ ಆ.10 NEWS DESK : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಪುತ್ತೂರು ವಿಭಾಗ ಶಿಶಿಕ್ಷು ಅಧಿನಿಯಮ 1961 ರನ್ವಯ ಪೂರ್ಣ ಅವಧಿಯ ತಾಂತ್ರಿಕ ವೃತ್ತಿಯಲ್ಲಿ ತರಬೇತಿ ಪಡೆಯಲು ಇಚ್ಛಿಸುವ ಅಭ್ಯರ್ಥಿಗಳಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಪುತ್ತೂರು ವಿಭಾಗದಿಂದ ಶಿಶಿಕ್ಷು ವೃತ್ತಿಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಐಟಿಐ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳಿಗೆ ಮೆಕ್ಯಾನಿಕ್ ಡೀಸೆಲ್(25 ಹುದ್ದೆ), ಇಲೆಕ್ಟ್ರಾನಿಕ್ಸ್ ಮೆಕ್ಯಾನಿಕ್, ಎಲೆಕ್ಟ್ರೀಷಿಯನ್, ಮೋಟಾರ್ ಮೆಕ್ಯಾನಿಕ್ ವೆಹಿಕಲ್, ವೆಲ್ಡರ್, ಫಿಟ್ಟರ್, ಮೋಟಾರ್ ವೆಹಿಕಲ್ ಬಾಡಿ ಬಿಲ್ಡರ್, ಮೆಕ್ಯಾನಿಕ್ ಆಟೋಮೊಬೈಲ್, ಪಾಸಾ ಹುದ್ದೆಗಳು ಖಾಲಿ ಇವೆ. ಎಸ್ಸೆಸ್ಸೆಲ್ಸಿ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳಿಗೆ ಮೆಕ್ಯಾನಿಕ್ ಡೀಸೆಲ್(30 ಹುದ್ದೆ) ಹುದ್ದೆ ಖಾಲಿ ಇದ್ದು, 2 ವರ್ಷ ತರಬೇತಿ ಅವಧಿ. ಅರ್ಜಿ ಸಲ್ಲಿಸುವಾಗ ಕನಿಷ್ಠ 18 ವರ್ಷ ತುಂಬಿರಬೇಕು ಹಾಗೂ ಎಸ್ಸೆಸ್ಸೆಲ್ಸಿ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 21 ವರ್ಷ ಮೀರಿರಬಾರದು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಸೈನಿಕರ ಮಕ್ಕಳಿಗೆ ನಿಯಮಾವಳಿಯನ್ವಯ ಮೀಸಲಾತಿ ನೀಡಲಾಗುವುದು.…

Read More

ಮಡಿಕೇರಿ ಆ.10 NEWS DESK : ಕೇಂದ್ರ ಸರ್ಕಾರದ ನಿರ್ದೇಶನದಂತೆ ಜಿಲ್ಲೆಯಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ನಶಾಮುಕ್ತ ಭಾರತ ಅಭಿಯಾನ ಪ್ರಾರಂಭವಾಗಿ 5 ನೇ ವರ್ಷದ ಪ್ರಯುಕ್ತ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ. ಆಗಸ್ಟ್ 12 ಬೆಳಗ್ಗೆ 9 ಗಂಟೆಗೆ ಎಲ್ಲಾ ಶಾಲಾ ಕಾಲೇಜುಗಳು, ಮಹಾವಿದ್ಯಾಲಯಗಳು, ತಾಂತ್ರಿಕ, ವೈದ್ಯಕೀಯ ಮಹಾವಿದ್ಯಾಲಯಗಳಲ್ಲಿ, ಐಐಟಿಸ್, ಐಐಎಂಎಸ್, ಪಾಲಿಟೆಕ್ನಿಕ್ ಕಾಲೇಜುಗಳು, ಪ್ಯಾಷನ್ ಇನ್ಸಿಟ್ಯೂಟ್ಸ ಮತ್ತು ಸಾರ್ವಜನಿಕ ಸಂಸ್ಥೆಗಳಲ್ಲಿ ಮಾದಕ ವಸ್ತು ಸೇವನೆ ಮಾಡದಿರಲು ಪ್ರತಿಜ್ಞೆ ಸ್ವೀಕರಿಸುವುದು. ಶೈಕ್ಷಣಿಕ ಸಂಸ್ಥೆಗಳಲ್ಲಿ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು, ಮಾದಕ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ವಿಚಾರಗೋಷ್ಠಿ ಮತ್ತು ಕಾರ್ಯಗಾರ ಮತ್ತು ರ್ಯಾಲಿ, ಮ್ಯಾರಥಾನ್ ಬೀದಿ ನಾಟಕಗಳನ್ನು ಆಯೋಜಿಸುವುದು. ಶಾಲಾ ಕಾಲೇಜು ಆವರಣಗಳಲ್ಲಿ ನಶಾ ಮುಕ್ತ ಭಾರತ ಅಭಿಯಾನದ ನೆನಪಿನ ಪ್ರಯುಕ್ತ ಸಸಿ ನೆಡುವುದು. ನಶಾಮುಕ್ತ ಭಾರತ್ ಅಭಿಯಾನದ ಎಲ್ಲಾ ಕಾರ್ಯಕ್ರಮಗಳನ್ನು ಕಚೇರಿ, ಶಾಲಾ ಕಾಲೇಜು, ವಿಶ್ವವಿದ್ಯಾಲಯಗಳು, ವಸತಿ ನಿಲಯ, ಸಮುದಾಯದಲ್ಲಿ ಹಾಗೂ ಸಂಘ ಸಂಸ್ಥೆಗಳಲ್ಲಿ ಅಯೋಜಿಸುವ…

Read More

ಮಡಿಕೇರಿ ಆ.10 NEWS DESK : ಕನ್ನಡ ಜಾಣ-ಜಾಣೆಯರ ವೇದಿಕೆ ಬೆಂಗಳೂರು ಇವರ ಸಹಯೋಗದಲ್ಲಿ 2024ರ ಸೆಪ್ಟೆಂಬರ್ ಕೊನೆಯ ವಾರದಲ್ಲಿ ಹಾಸನ ಜಿಲ್ಲೆಯಲ್ಲಿ ರಾಜ್ಯ ಮಟ್ಟದ ಮೂರು ದಿನಗಳ ಪಿ.ಲಂಕೇಶ್ ಕೃತಿಗಳ ಅಧ್ಯಯನ ಶಿಬಿರ ನಡೆಸಲು ಉದ್ದೇಶಿಸಿದ್ದು, ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿಯಿರುವ 20 ರಿಂದ 40 ವರ್ಷ ವಯಸ್ಸಿನ ರಾಜ್ಯದ ಎಲ್ಲಾ ಭಾಗದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಆಗಸ್ಟ್, 17 ಕೊನೆಯ ದಿನವಾಗಿದೆ. ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಸಾಹಿತ್ಯ ಅಕಾಡೆಮಿಯ ವೆಬ್‍ಸೈಟ್ http://karnatakasahithyaacademy.org ಇಂದ ಅರ್ಜಿ ನಮೂನೆ ಹಾಗೂ ವಿವರಗಳನ್ನು ಪಡೆದುಕೊಳ್ಳಬಹುದು ಎಂದು ರಿಜಿಸ್ಟ್ರಾರ್, ಕರ್ನಾಟಕ ಸಾಹಿತ್ಯ ಅಕಾಡೆಮಿ, ಬೆಂಗಳೂರು ಇವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಮಡಿಕೇರಿಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಹಾಗೂ ಸಿಬ್ಬಂದಿಗಳನ್ನು ಕಚೇರಿ ವೇಳೆಯಲ್ಲಿ ಭೇಟಿ ಮಾಡಬಹುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

Read More

ಮಡಿಕೇರಿ ಆ.10 NEWS DESK : ಸ್ಟಾಫ್ ಸೆಲೆಕ್ಷನ್ ಕಮಿಷನ್ ಭಾರತ ಸರ್ಕಾರ ಇವರು ಕೇಂದ್ರ ಸರ್ಕಾರದ ವ್ಯಾಪ್ತಿಗೆ ಒಳಪಡುವ ಶೀಘ್ರಲಿಪಿಗಾರರು ಗ್ರೇಡ್ ‘ಸಿ’ ಮತ್ತು ‘ಡಿ’ ನೇಮಕಾತಿ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ. ಪ್ರಸಕ್ತ ಅರ್ಹ ಅಭ್ಯರ್ಥಿಗಳು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಆಗಸ್ಟ್, 17 ಕೊನೆಯ ದಿನವಾಗಿದೆ. ವಿದ್ಯಾರ್ಹತೆ ಪಿಯುಸಿ ಅಥವಾ ತತ್ಸಮಾನ ಉತ್ತೀರ್ಣರಾಗಿ, ಶೀಘ್ರಲಿಪಿ ಮತ್ತು ಬೆರಳಚ್ಚು ಕೌಶಲ್ಯ ಹೊಂದಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ವಯೋಮಿತಿ: ಸ್ಟೆನೋಗ್ರಾಫರ್ ಗ್ರೇಡ್ “ಸಿ” 01.08.2024ರಂತೆ 18 ರಿಂದ 30 ವರ್ಷಗಳು, ಸ್ಟೆನೋಗ್ರಾಫರ್ ಗ್ರೇಡ್ “ಡಿ “01.08.2024ರಂತೆ 18 ರಿಂದ 27 ವರ್ಷಗಳು, ಖಾಲಿ ಹುದ್ದೆಗಳ ಸಂಖ್ಯೆ: 2,006, ಶುಲ್ಕ ಪಾವತಿ ವಿಧಾನ: ಆನ್‍ಲೈನ್/ ನೆಟ್ ಬ್ಯಾಂಕಿಂಗ್ ಅಥವಾ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಚಲನ್ ಮುಖಾಂತರ ಶುಲ್ಕ ಪಾವತಿ ಮಾಡಬಹುದಾಗಿದೆ. ಅರ್ಜಿ ಶುಲ್ಕ: ಸಾಮಾನ್ಯ ವರ್ಗ, ಪ್ರವರ್ಗ -2ಎ, 2ಬಿ, 3ಎ, 3ಬಿ, ಗೆ ಸೇರಿದ ಪುರುಷ ಅಭ್ಯರ್ಥಿಗಳಿಗೆ…

Read More

ಮೈಸೂರು NEWS DESK ಆ.9 : ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ, ಜೆಡಿಎಸ್ ಮೈತ್ರಿ ಕೂಟ ನಡೆಸುತ್ತಿರುವ ಮೈಸೂರು ಚಲೋ 7ನೇ ದಿನದ ಪಾದಯಾತ್ರೆ ಇಂದು ಸಂಜೆ ಅರಮನೆ ನಗರಿ ಮೈಸೂರು ತಲುಪಿತು. ಆಗಸ್ಟ್ 10 ರ ಶನಿವಾರ ಮೈಸೂರಿನ ಮಹಾರಾಜ ಮೈದಾನದಲ್ಲಿ ಪಾದಯಾತ್ರೆಯ ಸಮಾರೋಪ ಸಮಾವೇಶ ನಡೆಯಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ, ವಿರೋಧ ಪಕ್ಷದ ನಾಯಕ ಆರ್.ಅಶೋಕ್, ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ವಿರೋಧ ಪಕ್ಷ ಉಪನಾಯಕ ಅರವಿಂದ್ ಬೆಲ್ಲದ್, ಮಾಜಿ ಉಪಮುಖ್ಯಮಂತ್ರಿಗಳಾದ ಡಾ ಸಿ.ಎನ್.ಅಶ್ವಥ್ ನಾರಾಯಣ್, ಸಂಸದ ಯುಧುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್, ವಿಧಾನ ಪರಿಷತ್  ಸದಸ್ಯ ಸಿ.ಟಿ.ರವಿ, ಮಾಜಿ ಸಚಿವ ಶ್ರೀರಾಮುಲು, ಜೆಡಿಎಸ್ ಪಕ್ಷದ ಶಾಸಕಾಂಗ ನಾಯಕ ಸಿ.ಬಿ.ಸುರೇಶ್ ಬಾಬು, ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಶಾಸಕರು, ಮಾಜಿ ಶಾಸಕರು, ಮಾಜಿ ಸಂಸದರು, ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Read More

ಸೋಮವಾರಪೇಟೆ NEWS DESK ಆ.9 : ಸೋಮವಾರಪೇಟೆ ಪಟ್ಟಣ ಸೇರಿದಂತೆ ಗ್ರಾಮೀಣ ಭಾಗಗಳಲ್ಲಿ ಶುಕ್ರವಾರ ಶ್ರದ್ಧಾ ಭಕ್ತಿಯಿಂದ ನಾಗರಪಂಚಮಿ ಆಚರಿಸಲಾಯಿತು. ಇಲ್ಲಿನ ಶ್ರೀ ಮುತ್ತಪ್ಪ ಅಯ್ಯಪ್ಪ ದೇವಾಲಯದಲ್ಲಿ ಬೆಳಗ್ಗಿನಿಂದಲೇ ನಾಗರಬನದಲ್ಲಿ ವಿಶೇಷ ಪೂಜೆ ಅರ್ಚಕ ಮಣಿಕಂಠ ನಂಬೂದರಿ ನೇತೃತ್ವದಲ್ಲಿ ನಡೆಯಿತು. ನಾಗರ ಬನದಲ್ಲಿ ಹಾಲಭಿಷೇಕ, ಅರಶಿಣ, ಎಳನೀರು ಹಾಗೂ ಕುಂಕುಮ ಅಭಿಷೇಕ ಮತ್ತು ಮಹಾ ಮಂಗಳಾರತಿ ಮತ್ತು ದೀಪರಾಧನೆ ನಡೆಯಿತು ದೇವಾಲಯದಲ್ಲಿ ನಡೆದ ಪೂಜಾ ಕಾರ್ಯದಲ್ಲಿ ಹಲವು ಭಕ್ತರು ಪಾಲ್ಗೊಂಡಿದ್ದರು. ತಾಲ್ಲೂಕಿನ ಅರಿಶಿಣಗುಪ್ಪೆಯ ಶ್ರೀ ಮಂಜುನಾಥದೇವಾಲಯದ ನಾಗರಬನದಲ್ಲಿ, ಸೋಮೇಶ್ವರ ದೇವಾಲಯದ ನಾಗರಕಲ್ಲಿಗೂ ಜನರು ಹಾಲಿನ ಅಭಿಷೇಕ ಮಾಡಿ, ವಿಶೇಷ ಪೂಜೆ ಸಲ್ಲಿಸಿದರು.

Read More

ಸೋಮವಾರಪೇಟೆ NEWS DESK ಆ.9 : ಕೊಡಗರಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂದಗೋವೆ ಪೈಸಾರಿ ಗ್ರಾಮದಲ್ಲಿ ನಡೆದ ಕಾಡಾನೆ ಧಾಳಿಯಿಂದ ಗಾಯಗೊಂಡಿದ್ದ ವಾಟರ್‌ಮೆನ್ ಹುಸೇನ್ ಅವರಿಗೆ ಸೋಮವಾರಪೇಟೆ-ಕುಶಾಲನಗರ ತಾಲೂಕು ನೀರು ನಿರ್ವಾಹಕರ ಸಂಘದ ವತಿಯಿಂದ ಆರ್ಥಿಕ ನೆರವು ಒದಗಿಸಲಾಯಿತು. ಗಾಯಾಳುವನ್ನು ಭೇಟಿ ಮಾಡಿ ಸಾಂತ್ವನ ಹೇಳಿದ ಸಂಘದ ಪದಾಧಿಕಾರಿಗಳು, ಚಿಕಿತ್ಸೆಗೆ ಆರ್ಥಿಕ ನೆರವು ಒದಗಿಸಿದರು. ಈ ಸಂದರ್ಭ ಸಂಘದ ಅಧ್ಯಕ್ಷ ಎಚ್.ಎನ್. ಶಂಕರ್, ಉಪಾಧ್ಯಕ್ಷ ಆಸಿಫ್, ಪ್ರಧಾನ ಕಾರ್ಯದರ್ಶಿ ಎಚ್.ಟಿ. ಶಶಿಕುಮಾರ್, ಪದಾಧಿಕಾರಿಗಳಾದ ಬಿ.ಆರ್. ವಸಂತ್, ಕೆ.ಪಿ. ಶಶಿಕುಮಾರ್ ಅವರುಗಳು ಉಪಸ್ಥಿತರಿದ್ದು, ನೆರವು ಹಸ್ತಾಂತರಿಸಿದರು.

Read More

ಸೋಮವಾರಪೇಟೆ NEWS DESK ಆ.9 : ಬೆಂಗಳೂರಿನ ಆಶಾ ಕಿರಣ ಕಲಾ ಟ್ರಸ್ಟ್ ವತಿಯಿಂದ ಗಳನ್ನು ಮಳೆಹಾನಿ ಸಂತ್ರಸ್ತರಿಗೆ ಆಹಾರ ಕಿಟ್ ಈಚೆಗೆ ವಿತರಿಸಲಾಯಿತು. ಕರ್ನಾಟಕ ರಕ್ಷಣಾ ವೇದಿಕೆಯ ತಾಲ್ಲೂಕು ಅಧ್ಯಕ್ಷ ಫ್ರಾನ್ಸಿಸ್ ಡಿಸೋಜ ಅವರು ಮಳೆಯಿಂದ ಬಡವರು ಸಂಕಷ್ಟದಲ್ಲಿರುವ ಬಗ್ಗೆ ಟ್ರಸ್ಟ್ ಅಧ್ಯಕ್ಷರಾದ ಮಾಲತಿ ಅವರಿಗೆ ಮನವಿ ಸಲ್ಲಿಸಿದ ಮೇರೆಗೆ ರಾಮನಳ್ಳಿ, ಎಳೆನೀರುಗುಂಡಿ, ನಂದಿಗುಂದ, ಬೀಟಿಕಟ್ಟೆ, ಹೊನವಳ್ಳಿ, ಬೀಟಿಕಟ್ಟೆ, ಚನ್ನಾಪುರ, ಶುಂಠಿ ಗ್ರಾಮದ 27 ಕುಟುಂಬಗಳ ಸಂತ್ರಸ್ತರಿಗೆ ಆಹಾರ ಸಾಮಾಗ್ರಿಗಳ ಕಿಟ್ ಫ್ರಾನ್ಸಿಸ್ ಡಿಸೋಜ ವಿತರಿಸಿದರು.

Read More

ಗೋಣಿಕೊಪ್ಪ NEWS DESK ಆ.9 : ರಾಜ್ಯಸಭೆಯಲ್ಲಿ ಕೊಡವ ಹಾಕಿ ನಮ್ಮೆಯ ಕುರಿತು ಪ್ರಸ್ತಾಪಿಸಿ, ಕೊಡವರ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ ರಾಜ್ಯಸಭಾ ಸದಸ್ಯ ಅಜಯ್ ಮಾಖೇನ್ ಅವರಿಗೆ ಕೊಡವಾಮೆರ ಕೊಂಡಾಟ ಸಂಘಟನೆ ಕೊಡವ ಜನಾಂಗದ ಪರವಾಗಿ ಅಭಿನಂದನೆ ಸಲ್ಲಿಸಿದೆ. ಈ ಕುರಿತು ಪತ್ರ ಬರೆದಿರುವ ಸಂಘಟನೆ ಅಧ್ಯಕ್ಷ ಚಾಮೆರ ದಿನೇಶ್ ಬೆಳ್ಯಪ್ಪ ಅವರು, ಅಜಯ್ ಮಾಕೇನ್ ಅವರಿಗೆ ಇಮೈಲ್, ಎಕ್ಸ್ ಮತ್ತು ವಾಟ್ಸಾಪ್ ಮೂಲಕ ಧನ್ಯವಾದದ ಸಂದೇಶ ಕಳುಹಿಸಿದ್ದಾರೆ. ಗಿನ್ನಿಸ್ ವಿಶ್ವ ದಾಖಲೆಯಲ್ಲಿ ಸ್ಥಾನ ಪಡೆದಿರುವ, ಕೊಡವ ಹಾಕಿ ನಮ್ಮೆಗೆ ಕೇಂದ್ರ ಸರ್ಕಾರ ಅನುದಾನ ನೀಡಬೇಕು, ಭಾರತ ಹಾಕಿಗೆ ಕೊಡವ ಜನಾಂಗ ನೀಡಿರುವ ಕೊಡುಗೆ ಅಪಾರವಾಗಿದ್ದು, ಅವರ ಈ ಸಾಧನೆಯೂ ಕೇಂದ್ರ ಸರ್ಕಾರದ ಯಾವುದೇ ಸಹಾಯ, ಅನುದಾನ  ಇಲ್ಲದೆಯೆ ಮಾಡಿರುವ ಹೆಗ್ಗಳಿಕೆಯಾಗಿದೆ. ಕೊಡಗಿನ ಕ್ರೀಡಾ ಸ್ಫೂರ್ತಿಯನ್ನ ಮನಗಂಡು ಸರ್ಕಾರ ತಕ್ಷಣ ಅರುಣಾಚಲದ ಕೂನೂರ್ ಮಾದರಿಯಲ್ಲಿ ಉನ್ನತ ದರ್ಜೆಯ ಕ್ರೀಡಾ ತರಭೇತಿ ಕೇಂದ್ರವನ್ನು ತೆರೆಯಬೇಕೆಂದು ಅಜಯ್ ಮಾಖೇನ್ ಕೇಂದ್ರ ಸರ್ಕಾರವನ್ನ ಒತ್ತಾಯಿಸಿದ್ದರು. ದೆಹಲಿ…

Read More