ಮಡಿಕೇರಿ ಸೆ.12 NEWS DESK : ಬ್ಯಾಂಕ್ ವ್ಯವಸ್ಥಾಪಕರೊಬ್ಬರು ತಾವು ಕರ್ತವ್ಯ ನಿರ್ವಹಿಸುತ್ತಿದ್ದ ಬ್ಯಾಂಕ್ ನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕೊಡಗು ಜಿಲ್ಲೆಯ ನಾಪೋಕ್ಲು ಬಳಿಯ ಕಕ್ಕಬ್ಬೆಯಲ್ಲಿ ಬುಧವಾರ ಸಂಜೆ ನಡೆದಿದೆ. ರಾಷ್ಟ್ರೀಕೃತ ಬ್ಯಾಂಕ್ ವೊಂದರ ಕಕ್ಕಬ್ಬೆ ಶಾಖೆಯ ವ್ಯವಸ್ಥಾಪಕ ವಿಜು(46) ಎಂಬುವವರೇ ಕಕ್ಕಬ್ಬೆ ಬ್ಯಾಂಕ್ ನಲ್ಲಿ ನೇಣಿಗೆ ಶರಣಾದ ವ್ಯಕ್ತಿ. ಇವರು ಮೂಲತ: ಕೇರಳದ ಆಲಪುಯ ಆಯಿಕ್ಕಾಡ್ ಚಿಂಗೋಲಿ ಗ್ರಾಮದ ನಿವಾಸಿಯಾಗಿದ್ದು, ಪತ್ನಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ಪತ್ನಿ ಇದೇ ರಾಷ್ಟ್ರೀಕೃತ ಬ್ಯಾಂಕ್ ನ ಬೆಟ್ಟಗೇರಿ ಶಾಖೆಯ ವ್ಯವಸ್ಥಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ನಾಪೋಕ್ಲು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಲೇಖಕ: admin
ಮಡಿಕೇರಿ ಸೆ.13 NEWS DESK : ಮೂರ್ನಾಡು ಪ್ರೌಢಶಾಲಾ ಮೈದಾನದಲ್ಲಿ ನಡೆದ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಹ್ಯಾಂಡ್ ಬಾಲ್ ಪಂದ್ಯಾವಳಿಯಲ್ಲಿ ಚೆಟ್ಟಳ್ಳಿ ಪ್ರೌಢಶಾಲಾ ಬಾಲಕಿಯರ ತಂಡ ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿದೆ. ಮೂರ್ನಾಡುವಿನ ಮಾರುತಿ ವಿದ್ಯಾಸಂಸ್ಥೆಯ ಬಾಲಕಿಯರ ತಂಡದೊಂದಿಗೆ 1-0 ಗೋಲುಗಳ ಅಂತರದಿಂದ ಗೆಲುವು ಸಾಧಿಸಿದೆ. ಈ ಸಂದರ್ಭ ಚೆಟ್ಟಳ್ಳಿ ಪ್ರೌಢಶಾಲೆಯ ದೈಹಿಕ ಶಿಕ್ಷಕಿ ಗೀತಾ ಇದ್ದರು.
ಮಡಿಕೇರಿ ಸೆ.12 NEWS DESK : ತಾಳತ್ತಮನೆಯಲ್ಲಿ ಸೆ.13 ರಂದು ಉಚಿತ ರೇಬಿಸ್ (ಹುಚ್ಚು ನಾಯಿ) ಲಸಿಕಾ ಶಿಬಿರ ನಡೆಯಲಿದೆ. ಜಿಲ್ಲಾ ಪಂಚಾಯಿತಿ, ಕೊಡಗು ಪಶು ಪಲನಾ ಹಾಗೂ ಪಶು ವೈದ್ಯಕೀಯ ಇಲಾಖೆ, ಮಡಿಕೇರಿ ನೆಹರು ಯುವ ಕೇಂದ್ರ, ಮಡಿಕೇರಿ ತಾಲೂಕು ಯುವ ಒಕ್ಕೂಟ, ತಾಳತ್ತಮನೆ ನೇತಾಜಿ ಯುವತಿ ಮಂಡಳಿ ಹಾಗೂ ನೇತಾಜಿ ಯುವಕ ಮಂಡಲದ ಸಂಯುಕ್ತಶ್ರಾಯದಲ್ಲಿ ಬೆಳಿಗ್ಗೆ 9.30 ರಿಂದ 11.30 ಗಂಟೆಯವರೆಗೆ ತಾಳತ್ತಮನೆ ಆಟದ ಮೈದಾನದಲ್ಲಿ ಶಿಬಿರ ನಡೆಯಲಿದ್ದು, ತಾಳತ್ತಮನೆಯ ಹಾಗೂ ಸುತ್ತಮುತ್ತಲಿನ ಜನರು ತಮ್ಮ ಸಾಕು ಪ್ರಾಣಿಗಳನ್ನು ತರುವಂತೆ ನೇತಾಜಿ ಯುವಕ ಮಂಡಲದ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಮನವಿ ಮಾಡಿದ್ದಾರೆ.
ಕೂಡಿಗೆ ಸೆ.12 NEWS DESK : ಮೈಸೂರು ರಾಜ್ಯವು ಕರ್ನಾಟಕ ರಾಜ್ಯ ಎಂದು ನಾಮಕರಣಗೊಂಡು 50 ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಕರ್ನಾಟಕ ಸುವರ್ಣ ಸಂಭ್ರಮ: 50 ರ ಅಂಗವಾಗಿ ರಾಜ್ಯಾದ್ಯಂತ ಸಂಚರಿಸುತ್ತಿರುವ ಕನ್ನಡ ಜ್ಯೋತಿ ರಥವು ಕೊಡಗು ಜಿಲ್ಲೆಯಲ್ಲಿ ಐದು ದಿನಗಳ ಕಾಲ ಸಂಚರಿಸಿ ಕುಶಾಲನಗರ ತಾಲ್ಲೂಕಿನಿಂದ ನೆರೆಯ ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿಗೆ ತೆರಳಿತು. ಕನ್ನಡ ಜ್ಯೋತಿ ರಥಕ್ಕೆ ಕೊಡಗಿನ ಗಡಿಭಾಗವಾದ ಶಿರಂಗಾಲ ಗೇಟ್ ಬಳಿ ಹಾಸನ ಜಿಲ್ಲೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪರವಾಗಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್ ಮತ್ತು ಶಿರಂಗಾಲ ಗ್ರಾಮಸ್ಥರು ಸಾಂಪ್ರದಾಯಿಕವಾಗಿ ಬೀಳ್ಕೊಟ್ಟರು. ಕೂಡಿಗೆಯಲ್ಲಿ ಕರ್ನಾಟಕ ಸುವರ್ಣ ಸಂಭ್ರಮ :: ಇದಕ್ಕೂ ಮುನ್ನ ಕೂಡಿಗೆ ವೃತ್ತದ ಹಾಲಿನ ಡೇರಿ ಬಳಿ ಕನ್ನಡ ಜ್ಯೋತಿ ರಥವನ್ನು ಸ್ವಾಗತಿಸಿ ಮುಂದಿನ ಗ್ರಾಮಗಳಿಗೆ ಬೀಳ್ಕೊಡಲಾಯಿತು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕುಶಾಲನಗರ ತಾಲ್ಲೂಕು ಸ್ಥಳೀಯ ಸಂಸ್ಥೆ, ಕುಶಾಲನಗರ ಲಯನ್ಸ್ ಕ್ಲಬ್…
ಮಡಿಕೇರಿ ಸೆ.12 NEWS DESK : ಕರ್ನಾಟಕ ಮತ್ತು ಬಾಗಲಕೋಟೆ ಜಿಲ್ಲಾ ಕಿವುಡರ ಸಂಘದಿಂದ ಸೆ.27 ರಿಂದ ಬಾಗಲಕೋಟೆಯಲ್ಲಿ 14ನೇ ಕರ್ನಾಟಕ ರಾಜ್ಯ ಕಿವುಡರ ಕ್ರೀಡಾಕೂಟ ನಡೆಯಲಿದೆ. ಬಾಗಲಕೋಟೆಯ ಕಾಲೇಜು ಮೈದಾನದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಕ್ರೀಡಾಕೂಟದಲ್ಲಿ ಸುಮಾರು 20 ಜಿಲ್ಲೆಗಳಿಂದ ಸ್ಪರ್ಧಿಗಳು ಭಾಗವಹಿಸಲಿದ್ದು, ಕೊಡಗು ಜಿಲೆಯಿಂದಲೂ ಸ್ಪರ್ಧಿಗಳು ಭಾಗವಹಿಸಲಿದ್ದಾರೆ. ಇಲ್ಲಿ ಆಯ್ಕೆಯಾದ ಕ್ರೀಡಾಪಟುಗಳು ಗ್ವಾಲಿಯರ್ನಲ್ಲಿ ನಡೆಯಲಿರುವ 26ನೇ ಕಿವುಡರ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ ಎಂದು ಕೊಡಗು ಜಿಲ್ಲಾ ಕಿವುಡರ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ತಿಳಿಸಿದ್ದಾರೆ.
ಮಡಿಕೇರಿ ಸೆ.12 NEWS DESK : ಇಂಚರ ಶ್ರೀ ಶಕ್ತಿ ಸಂಘದ 10ನೇ ವಾರ್ಷಿಕೋತ್ಸವದ ಪ್ರಯುಕ್ತ ನಗರದ ರಾಘವೇಂದ್ರ ದೇವಾಲಯದ ಬಳಿ ಇರುವ ಅಂಗನವಾಡಿ ಕೇಂದ್ರದಲ್ಲಿ ಅಡುಗೆ ಸ್ಪರ್ಧೆಯ ಮೂಲಕ ವಿನೂತನವಾಗಿ ಪೋಷಣ್ ಮಾಸಾಚರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಾಂಡ ಸವಿತಾ ಕೀರ್ತನ್ ಉದ್ಘಾಟಿಸಿ ಮಾತಾಡಿ ಪೌಷ್ಟಿಕ ಆಹಾರದ ಬಗ್ಗೆ ಅರಿವು ಮೂಡಿಸಿದರು. ಪೌಷ್ಟಿಕ ಆಹಾರ ನಮ್ಮ ದೈನಂದಿನ ಜೀವನದಲ್ಲಿ ತುಂಬಾ ಮುಖ್ಯವಾಗಿದೆ.ಆರೋಗ್ಯಕರ ಜೀವನ ನಡೆಸಲು ಇಂತಹ ಆಹಾರ ತುಂಬಾ ಅವಶ್ಯಕ ಎಂದರು. ಕಾರ್ಯಕ್ರಮದಲ್ಲಿ ಇಂಚರ ಶ್ರೀ ಶಕ್ತಿ ಸಂಘದ ಪದಾಧಿಕಾರಿಗಳು, ಸಹಾಯಕಿ ಅನಿತಾ ಪಾಲ್ಗೊಂಡಿದ್ದರು. ಅಂಗನವಾಡಿ ಕಾರ್ಯಕರ್ತೆ ಗೀತಾ ಕಾರ್ಯಕ್ರಮ ನಿರೂಪಿಸಿದರು. ಇದೇ ಸಂದರ್ಭ ಮಾತೃ ವಂದನ ನೊಂದಣಿ ಕಾರ್ಯಕ್ರಮ ನಡೆಯಿತು.
ಮಡಿಕೇರಿ ಸೆ.12 NEWS DESK : ದಿ. ವಿ.ಟಿ.ಶ್ರೀನಿವಾಸ್ ಸಂಗೀತ ರಂಗದಲ್ಲಿ ಅತ್ಯದ್ಭುತ ಸಾಧನೆ ಮಾಡಿದ ಕಲಾವಿದರಾಗಿದ್ದು, ತಬಲ ಕ್ಯಾಸಿಯೋ ವಾದನೆಗಳಲ್ಲಿ ಪರಿಣಿತರಾಗಿದ್ದರು ಯಾವುದೇ ರಾಗವನ್ನು ನಿಮಿಷ ಮಾತ್ರದಲ್ಲಿ ಕ್ಯಾಸಿಯೋದಲ್ಲಿ ಅಳವಡಿಸುವ ಕಲೆ ಹೊಂದಿದ್ದರು ಎಂದು ನೀನಾದ ಸಂಗೀತ ನೃತ್ಯ ಸಂಸ್ಥೆಯ ಅಧ್ಯಕ್ಷ ಚೇಂದಿರ ನಿರ್ಮಲಾ ಬೋಪಣ್ಣ ನುಡಿದರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಪೊನ್ನಂಪೇಟೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು, ಪೊನ್ನಂಪೇಟೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು, ಮತ್ತು ಗೋಣಿಕೊಪ್ಪಲು ಪ್ರೌಢಶಾಲೆಯ ಸಂಯುಕ್ತಾಶ್ರಯದಲ್ಲಿ ಗೋಣಿಕೊಪ್ಪಲು ಪ್ರೌಢಶಾಲಾ ಸಭಾಂಗಣದಲ್ಲಿ ಜರುಗಿದ ಕಲಾವಿದ ದಿ.ಶ್ರೀನಿವಾಸ್ ನೆನಪು ನುಡಿ ಮತ್ತು ಗಾನ ನಮನ ಕಾರ್ಯಕ್ರಮವನ್ನು ಯಾವ ಮೋಹನ ಮುರಳಿ ಕರೆಯಿತು ದೂರ ತೀರಕೆ ನಿನ್ನನ್ನು ಎನ್ನುವ ಗಾಯನದೊಂದಿಗೆ ಉದ್ಘಾಟಿಸಿ ಅವರು ಮಾತನಾಡಿದರು. ಅಜಾತಶತ್ರುವಾಗಿದ್ದ ಅವರು ಸಾವಿರಾರು ಸಂಗೀತ ಮತ್ತು ನೃತ್ಯ ಶಿಷ್ಯರನ್ನು ಹೊಂದಿದ್ದು ಅವರ ನಿಧನವು ಸಂಗೀತ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ ಎಂದರು. ಪ್ರಾಸ್ತಾವಿಕವಾಗಿ ಮಾತನಾಡಿದ ಪೊನ್ನಂಪೇಟೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ…
ಬೆಂಗಳೂರು ಸೆ.12 NEWS DESK : ಬೆಂಗಳೂರು ನಗರದ ಜನತೆಯ ಅನುಕೂಲಕ್ಕೆ ಮೊದಲ ಹಂತದ 100 ನೂತನ ಬಿಎಂಟಿಸಿ ಬಸ್ ಗಳನ್ನು ಲೋಕಾರ್ಪಣೆ ಮಾಡಿದ್ದೇವೆ. ಒಟ್ಟು 840 ನೂತನಬಸ್‌ಗಳು ಬಿಎಂಟಿಸಿ ಸೇರಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ ಬಳಿ ಸಾರಿಗೆ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 100 ನೂತನ ಬಿಎಂಟಿಸಿ ಬಸ್‌ಗಳನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು. “ಬೆಂಗಳೂರು ನಗರದಲ್ಲಿ ಜನಸಂಖ್ಯೆ ಹೆಚ್ಚುತ್ತಿದೆ. ಇಲ್ಲಿನ ಹೆಚ್ಚುತ್ತಿರುವ ಶ್ರಮಿಕ ವರ್ಗಗಳಿಗೆ ಅನುಕೂಲ ಮಾಡುವ ಉದ್ದೇಶದಿಂದ ನೂತನಬಸ್‌ಗಳನ್ನು ಬಿಎಂಟಿಸಿಗೆ ಸೇರ್ಪಡೆಗೊಳಿಸುವ ಜೊತೆಗೆ ಹಿಂದಿನ ಸರ್ಕಾರ ಸ್ಥಗಿತಗೊಳಿಸಿದ್ದ ಇಂದಿರಾ ಕ್ಯಾಂಟೀನ್‌ಗಳನ್ನು ಆರಂಭಿಸಿದ್ದಲ್ಲದೆ ನೂತನವಾಗಿ ಇನ್ನಷ್ಟು ಕ್ಯಾಂಟೀನ್‌ಗಳನ್ನು ಆರಂಭಿಸುತ್ತಿದ್ದೇವೆ” ಎಂದರು. “ಬಡವರ ಮತ್ತು ಮಧ್ಯಮ ವರ್ಗದ ವಿರೋಧಿಯಾಗಿರುವ ಬಿಜೆಪಿ ಈ ಗ್ಯಾರಂಟಿ ಯೋಜನೆಗಳ ವಿರುದ್ಧ ಅಪಪ್ರಚಾರ ಮಾಡುತ್ತಿವೆ. ಈ ಅಪಪ್ರಚಾರಕ್ಕೆ ಕಿವಿಗೊಡಬೇಡಿ. ಈ ಗ್ಯಾರಂಟಿಗಳು ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿ ಆಗಲಿವೆ”. “ಗೃಹಲಕ್ಷ್ಮಿ ಹಣದಿಂದ ಸಾವಿರಾರು ಕುಟುಂಬಗಳು ನಾನಾ ರೀತಿಯ ಅನುಕೂಲಗಳನ್ನು ಒದಗಿಸಿಕೊಳ್ಳುತ್ತಿರುವ ಬಗ್ಗೆ ಪ್ರತಿದಿನ ಮಾಧ್ಯಮಗಳು…
NEWS DESK :: ದೇವರ ನಾಡೆಂದು ಪ್ರಸಿದ್ಧವಾಗಿರುವ ಕೇರಳ ರಾಜ್ಯದ ಪ್ರಸಿದ್ಧ ಹಬ್ಬ ಓಣಂ. ಇದನ್ನು ಪುರಾತನ ಕಾಲದಿಂದಲ್ಲೂ ಸಂಭ್ರಮದಿಂದ ಆಚರಿಸಿಕೊಂಡು ಬರಲಾಗುತ್ತದೆ. ಇದು ಕೇರಳದವರ ಪಾಲಿಗೆ ನಾಡ ಹಬ್ಬವಿದ್ದಂತೆ ಎನ್ನಬಹುದು. ಕೃಷಿ ಹಿನ್ನಲೆಯಲ್ಲಿ ಆಚರಿಸುವ ಈ ಹಬ್ಬವು ಮಳೆಗಾಳಿಗೆ ದುಡಿದು ಬೆಂಡದಾ ಜೀವಗಳಿಗೆ ಸಂತಸ ಸಂಭ್ರಮವನ್ನು ಉಂಟುಮಾಡುವ ಹಬ್ಬ. ಮಳೆಯ ಆರ್ಭಟದ ನಡುವೆ ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡವರು ತಮ್ಮ ಕೆಲಸಗಳನ್ನೆಲ್ಲ ಮುಗಿಸಿ ನೆಮ್ಮದಿಯ ನಿಟ್ಟುಸಿರು ಬಿಟ್ಟು ಕೂರುವ ಸಮಯದಲ್ಲಿ ಬರುವ ಈ ಹಬ್ಬ ಶುಭ ಸೂಚನೆಯ ಸಂಕೇತವಾಗಿದೆ. 10 ದಿನಗಳ ಕಾಲ ನಡೆಯುವ ಓಣಂ ಹಬ್ಬವನ್ನು ಮಲೆಯಾಳಂನ ಆಯಾ ಮಾಸದಲ್ಲಿ ಅಂದರೆ ಸಿಂಹಮಾಸದಲ್ಲಿ ಅಥವಾ ಆಗಸ್ಟ್ ಕೊನೆಯ ವಾರ ಅಥವಾ ಸೆಪ್ಟಂಬರ್ ತಿಂಗಳಿನಲ್ಲಿ ಆಚರಿಸುತ್ತಾರೆ. ಈ ಬಾರಿ ಓಣಂ ಹಬ್ಬವು ಸೆ.15 ರಂದು ಆಚರಣೆ ಮಾಡಲಾಗುತ್ತದೆ. ಹತ್ತು ದಿನಗಳ ಕಾಲ ಆತ್ತಂನಿಂದ ಪ್ರಾರಂಭಗೊಂಡು ಚಿತ್ತಿರ, ಚೂದಿ, ವಿಶಾಖಂ, ಆನಿಯ, ತ್ರಿಕೇಟಾ, ಮೂಲಂ, ಪೇರಾಡಂ, ಉತ್ರಾಡಂ ಮತ್ತು 10ನೇ ದಿನ ತಿರುಓಣಂ…
ಮೂರ್ನಾಡು ಸೆ.12 NEWS DESK : ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕೋಡಂಬೂರಿನ ಜ್ಞಾನಜ್ಯೋತಿ ಎಜುಕೇಷಟಿನ್ ಸೊಸೈಟಿಯ ಸಂಯುಕ್ತಾಶ್ರಯದಲ್ಲಿ ಪ್ರಸಕ್ತ ಸಾಲಿನ ಮಡಿಕೇರಿ ತಾಲ್ಲೂಕು ಮಟ್ಟದ ಅಂತರ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಬಾಲಕ, ಬಾಲಕಿಯರ ಕ್ರೀಡಾಕೂಟವು ಮೂರ್ನಾಡು ವಿದ್ಯಾಸಂಸ್ಥೆಯ ಕ್ರೀಡಾಂಗಣದಲ್ಲಿ ನಡೆಯಿತು. ಮಡಿಕೇರಿ ತಾಲ್ಲೂಕು ಮಟ್ಟದ ಕ್ರೀಡಾಕೂಟ ಸಮಾರಂಭವನ್ನು ಕಾಂತೂರು-ಮೂರ್ನಾಡು ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ಎಸ್.ಕುಶನ್ ರೈ ಉದ್ಘಾಟಿಸಿ ಮಾತನಾಡಿ, ಕ್ರೀಡಾಪಟುಗಳಲ್ಲಿ ಕ್ರೀಡಾ ಮನೋಭಾವ ಮತ್ತು ಶಿಸ್ತು ಇರಬೇಕು ಎಂದು ಹೇಳಿದರು. ಜ್ಞಾನಜ್ಯೋತಿ ಎಜುಕೇಷನ್ ಸೊಸೈಟಿಯ ಅಧ್ಯಕ್ಷ ಮುಕ್ಕಾಟಿರ ರವಿ ಚೀಯಣ್ಣ ಕ್ರೀಡಾ ಧ್ವಜಾರೋಹಣ ನೇರವೇರಿಸಿ, ಮಾತನಾಡಿ, ಓದು ಎಷ್ಟು ಮುಖ್ಯವೊ ಅಷ್ಟೆ ಕ್ರೀಡೆಯು ವಿದ್ಯಾರ್ಥಿಗಳಿಗೆ ಮುಖ್ಯವಾಗಿದೆ. ಕ್ರೀಡೆಯಲ್ಲಿಯೂ ಉತ್ತಮ ಭವಿಷ್ಯವನ್ನು ಕಂಡುಕೊಳ್ಳಬಹುದು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಜ್ಞಾನಜ್ಯೋತಿ ಎಜುಕೇಷನ್ ಸೊಸೈಟಿಯ ನಿವೃತ್ತ ಮುಖ್ಯೋಪಾಧ್ಯಾಯಿನಿ ಶೀಲಾ ಅಬ್ದುಲ್ಲಾ, ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಬಿ.ಸಿ.ದೊಡ್ಡೇಗೌಡ ಮತ್ತು ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಬಿ.ಆರ್.ಗಾಯಿತ್ರಿ,…






