ಲೇಖಕ: admin

ಮಡಿಕೇರಿ ಆ.9 NEWS DESK : ನಗರದ ಕೊಡಗು ವಿದ್ಯಾಲಯದ ದೈಹಿಕ ಶಿಕ್ಷಕರಾದ ದಿನೇಶ್ ಮತ್ತು ಪಾರ್ವತಿ ಅವರನ್ನು ಶಾಲಾ ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. 2012 ರಿಂದ ಶಾಲೆಯ ವಿದ್ಯಾರ್ಥಿಗಳಿಗೆ ಹಾಕಿ ಕ್ರೀಡೆಯಲ್ಲಿ ಗೆಲುವಿನ ಹಾದಿಗ ಸೂಕ್ತ ಮಾಗ೯ದ೯ಶನ ಮಾಡುತ್ತಾ ಬಂದಿರುವ ದಿನೇಶ್, ಈ ವರ್ಷವೂ ಶಾಲೆಯ ಹಾಕಿ ತಂಡವು ದಕ್ಷಿಣ ವಲಯದಲ್ಲಿ ಜಯಗಳಿಸುವ ಮೂಲಕ ರಾಷ್ಟ್ರೀಯ ಮಟ್ಟದ ವಿಜೇತರಾಗಿ ಐತಿಹಾಸಿಕ ಸಾಧನೆ ಮಾಡಲು ಕಾರಣರಾಗಿದ್ದಾರೆ. ಈ ವರ್ಷ ದಿನೇಶ್ ಅವರ ಮಾರ್ಗದರ್ಶನದಲ್ಲಿ ಬಾಲಕರು ಮತ್ತು ಬಾಲಕಿಯರು ದ್ವಿತೀಯ ಸ್ಥಾನ ಪಡೆದು ಭೂಪಾಲದಲ್ಲಿ ನಡೆಯುವ ರಾಷ್ಟ್ರೀಯ ಹಾಕಿ ಟೂರ್ನಿಗೆ ಸಜ್ಜಾಗಿದ್ದಾರೆ. ಹಾಕಿ ಇಂಡಿಯಾ ಸೆಮಿನಾರ್‌ನಲ್ಲಿ ಲೆವೆಲ್ ಒನ್ ತರಬೇತಿದಾರರಾಗಿ ಗುರುತಿಸಿಕೊಂಡಿರುವ ದಿನೇಶ್, ರಾಜ್ಯ ಮಟ್ಟದ ಪಂದ್ಯಗಳಲ್ಲಿ ಅಂಪೈರ್ ಆಗಿ ಕೂಡ ಕಾರ್ಯನಿರ್ವಹಿಸುತ್ತಿದ್ದಾರೆ. ಶಾಲೆಯ ರಿಂಕ್ ಹಾಕಿ ವಿಜೇತ ತಂಡದ ಆಟಗಾರರನ್ನೂ ಈ ಸಂದರ್ಭ ಕೊಡಗು ವಿದ್ಯಾಲಯದ ಪ್ರಾಂಶುಪಾಲರಾದ ಸುಮಿತ್ರಾ ಸನ್ಮಾನಿಸಿದರು. ಅಂತೆಯೇ ಕ್ರೀಡಾ ತರಬೇತುಗಾರರಾದ ಪಾರ್ವತಿ ಅವರಿಗೂ ಪ್ರಶಂಸನಾ…

Read More

ಮಡಿಕೇರಿ NEWS DESK ಆ.9 : ಮಡಿಕೇರಿ ದಸರಾ ದಶಮಂಟಪ ಸಮಿತಿಯ ನೂತನ ಅಧ್ಯಕ್ಷರಾಗಿ ಜಿ.ಸಿ.ಜಗದೀಶ್, ಪ್ರಧಾನ ಕಾರ್ಯದರ್ಶಿಯಾಗಿ ಯೋಗೇಶ್ ಹೆಚ್.ಎಲ್ ಹಾಗೂ ಖಜಾಂಚಿಯಾಗಿ ಸದಾ ಮುದ್ದಪ್ಪ ಆಯ್ಕೆಯಾಗಿದ್ದಾರೆ.

Read More

ನಾಪೋಕ್ಲು ಆ.9 NEWS DESK : ಮರಂದೋಡ ಗ್ರಾಮದಲ್ಲಿ ಕಾಡಾನೆಗಳ ದಾಳಿಯಿಂದ ಭತ್ತದ ಗದ್ದೆಗಳು ಹಾನಿಗೀಡಾಗಿದ್ದು, ಕೃಷಿಕರು ಆತಂಕ ಪಡುವಂತಾಗಿದೆ. ಗ್ರಾಮದ ಕೃಷಿಕರಾದ ಚೋಯಮಾದಂಡ ಪೂಣಚ್ಚ, ವಿಜು ಮೊಣ್ಣಪ್ಪ,ಸರು ಅಪ್ಪಚ್ಚು ಅವರ ಗದ್ದೆಗಳಲ್ಲಿ ಅಡ್ಡಾಡಿರುವ ಕಾಡಾನೆಗಳು ನಾಟಿ ಮಾಡಿದ್ದ ಪೈರುಗಳನ್ನು ತುಳಿದು ನಾಶಪಡಿಸಿವೆ. ಸಮೀಪದ ಕಾಫಿ ತೋಟಗಳಿಗೂ ನುಗ್ಗಿ ಹಾನಿಪಡಿಸಿದೆ. ಕಳೆದ ಹತ್ತು ದಿನಗಳಿಂದ ಕಾಡಾನೆಗಳು ಗ್ರಾಮದ ಕಾಫಿ ತೋಟಗಳಲ್ಲಿ ಬೀಡುಬಿಟ್ಟಿದ್ದು,  ಸಂಬಂಧಪಟ್ಟ ಅಧಿಕಾರಿಗಳು ಅರಣ್ಯ ಇಲಾಖೆ ಕಾಡಾನೆಗಳನ್ನು ಕಾಡಿಗಟ್ಟಲು ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.  ಗ್ರಾಮದಲ್ಲಿ ಹಾಗಲಿನ ವೇಳೆಯೆ ಕಾಡಾನೆಗಳ ಓಡಾಡುತ್ತಿದ್ದು, ಕೂಲಿಕಾರ್ಮಿಕರು, ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಇತೆರೆಡೆ ತೆರಳಲು ಭಯಪಡುವಂತಾಗಿದೆ ಎಂದು ಪಂಚಾಯಿತಿ ಸದಸ್ಯ ಹರೀಶ್ ಮೊಣ್ಣಪ್ಪ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ವರದಿ : ದುಗ್ಗಳ ಸದಾನಂದ 

Read More

ಮಡಿಕೇರಿ NEWS DESK ಆ.9 : ನಾಪೋಕ್ಲು ಕೊಡವ ಸಮಾಜದ ಕಾರ್ಯದರ್ಶಿಯಾಗಿ ಕುಲ್ಲೇಟಿರ ಅಜಿತ್ ನಾಣಯ್ಯ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಕಳೆದ ಸೆಪ್ಟಂಬರ್ ನಲ್ಲಿ ನಡೆದ ನಾಪೋಕ್ಲು ಕೊಡವ ಸಮಾಜದ ಚುನಾವಣೆ ಸಂದರ್ಭ ತೆರವಾಗಿದ್ದ ಕಾರ್ಯದರ್ಶಿ ಸ್ಥಾನಕ್ಕೆ ಅಜಿತ್ ನಾಣಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು. ಸಮಾಜದ ವಾರ್ಷಿಕ ಮಹಾಸಭೆಯ ನಿರ್ಣಯದಂತೆ ಇತ್ತೀಚೆಗೆ ಅವರು ಅಧಿಕಾರ ವಹಿಸಿಕೊಂಡರು. ಈ ಹಿಂದೆ ನಾಪೋಕ್ಲು ಕೊಡವ ಸಾಮಾಜದ ನಿರ್ದೇಶಕರಾಗಿ, ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿರುವ ಅಜಿತ್ ನಾಣಯ್ಯ ಅವರು, ಕೊಡಗು ಪತ್ರಕರ್ತರ ಸಂಘದ ಸದಸ್ಯರಾಗಿದ್ದು, ವಿವಿಧ ಸಂಘ ಸಂಸ್ಥೆಗಳಲ್ಲೂ ಸೇವೆ ಸಲ್ಲಿಸುತ್ತಿದ್ದಾರೆ.

Read More

ನಾಪೋಕ್ಲು ಆ.9 NEWS DESK : ಕಕ್ಕುಂದ ಕಾಡು ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಾಲಯದಲ್ಲಿ ಶ್ರಾವಣ ಶನಿವಾರ ಪೂಜಾ ಕಾರ್ಯಕ್ರಮಗಳು ಆ.10 ರಿಂದ 31 ರವರೆಗೆ ನಡೆಯಲಿವೆ. ಆ ದಿನಗಳಂದು ಬೆಳಿಗ್ಗೆ ಏಳು ಗಂಟೆಗೆ ಅಭಿಷೇಕ, 11 ಗಂಟೆಯಿಂದ 12 ಗಂಟೆವರೆಗೆ ಸೇವೆಯ ಸಂಕಲ್ಪ, ಮಧ್ಯಾಹ್ನ 12.30 ಕ್ಕೆ ಮಹಾಪೂಜೆ, ತೀರ್ಥ ಪ್ರಸಾದ ವಿತರಣೆ ಬಳಿಕ ಅನ್ನದಾನ ನೆರವೇರಿಲಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯ ಪಾಲ್ಗೊಳ್ಳುವಂತೆ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನದ ಆಡಳಿತ ಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ವರದಿ : ದುಗ್ಗಳ ಸದಾನಂದ.

Read More

ಮಡಿಕೇರಿ ಆ.9 NEWS DESK : 2020-21 ರಲ್ಲಿ ಅಥವಾ ನಂತರ ಐ.ಟಿ.ಐ ಉತ್ತೀರ್ಣರಾಗಿರುವ, ತಾಂತ್ರಿಕ ಕೌಶಲ್ಯದ ಕೋರ್ಸ್‍ನಲ್ಲಿ ಪ್ರಮಾಣ ಪತ್ರ ಹೊಂದಿರುವ 18 ರಿಂದ 23 ವರ್ಷ ವಯೋಮಿತಿಯವರಾಗಿ ದುಬೈ ಶಿಪ್‍ಯಾರ್ಡ್‍ನಲ್ಲಿ ತರಬೇತಿ/ ನೇಮಕಾತಿಗೆ ಅವಕಾಶ ಕಲ್ಪಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಉಚಿತ ತರಬೇತಿ, ಉಚಿತ ವಿಮಾನ ಟಿಕೆಟ್, ಉಚಿತ ವಸತಿ, ಆರೋಗ್ಯ ವಿಮೆ, ವಾರ್ಷಿಕ ರಜೆಗಳು ಹಾಗೂ ಹಿಂದಿರುಗುವ ಪ್ರಯಾಣದ ವಿಮಾನ ಟಿಕೇಟ್ ಸೌಲಭ್ಯಗಳಿವೆ. ಅರ್ಜಿ ಸಲ್ಲಿಸಲು ಆ.11 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ವೆಬ್‍ಸೈಟ್ ವಿಳಾಸ http://imck.kaushalkar.com/ ಹಾಗೂ ಮೊ.ಸಂ.9483223884 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಹಾಗೂ ಉದ್ಯೋಗಾಧಿಕಾರಿ ರೇಖಾ ಗಣಪತಿ  ತಿಳಿಸಿದ್ದಾರೆ. 

Read More

ಮಡಿಕೇರಿ ಆ.9 NEWS DESK : ತಾಳತ್ತಮನೆಯ ಶ್ರೀ ದುರ್ಗಾಭಗವತಿ ದೇವಾಲಯದಲ್ಲಿ ಶ್ರಾವಣ ಮಾಸದ ಮೊದಲ ಹಬ್ಬ ನಾಗರ ಪಂಚಮಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.  ದೇವಾಲಯದಲ್ಲಿರುವ ನಾಗನ ಕಟ್ಟೆಯ ನಾಗನಕಲ್ಲಿಗೆ ಹಾಲಿನ ಅಭಿಷೇಕ, ಅಲಂಕಾರ ಪೂಜೆ, ಎಳನೀರಭಿಷೇಕ, ಕ್ಷೀರಾಭಿಷೇಕ, ಸಂಕಲ್ಪ ಪೂಜೆ ಮಹಪೂಜೆ ಹಾಗೂ ವಿಶೇಷ ಧಾರ್ಮಿಕ ವಿಧಿ ವಿಧಾನಗಳು ಜರುಗಿದವು.ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ನಾಗನ ಕಲ್ಲಿಗೆ ಪುಷ್ಪಾರ್ಚನೆ ಮತ್ತು ಹಾಲಿನ ಅಭಿಷೇಕ ಮಾಡಿದರು.

Read More

ಮಡಿಕೇರಿ ಆ.9 NEWS DESK : ಶ್ರಾವಣ ಮಾಸದ ಮೊದಲ ಹಬ್ಬ ನಾಗರ ಪಂಚಮಿಯನ್ನು ಕೊಡಗಿನ ವಿವಿಧೆಡೆ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.   ನಗರದ ಶ್ರೀ ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಾಲಯ, ಶ್ರೀ ದಂಡಿನ ಮಾರಿಯಮ್ಮ ದೇವಾಲಯ, ಶ್ರೀ ಕೋಟೆ ಮಾರಿಯಮ್ಮ ದೇವಾಲಯ, ಬ್ರಾಹ್ಮಣರ ಬೀದಿಯ ಅಶ್ವತ್ಥ ಕಟ್ಟೆ ಸೇರಿದಂತೆ ಜಿಲ್ಲೆಯ ವಿವಿಧೆಡೆ ನಾಗನಕಲ್ಲಿಗೆ ಹಾಲಿನ ಅಭಿಷೇಕ, ಅಲಂಕಾರ ಪೂಜೆ, ಎಳನೀರಭಿಷೇಕ, ಕ್ಷೀರಾಭಿಷೇಕ, ಸಂಕಲ್ಪ ಪೂಜೆ ಮಹಪೂಜೆ ಹಾಗೂ ವಿಶೇಷ ಧಾರ್ಮಿಕ ವಿಧಿ ವಿಧಾನಗಳು ಜರುಗಿದವು.ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ನಾಗನ ಕಲ್ಲಿಗೆ ಪುಷ್ಪಾರ್ಚನೆ ಮತ್ತು ಹಾಲಿನ ಅಭಿಷೇಕ ಮಾಡಿದರು.

Read More

ಮಡಿಕೇರಿ ಆ.9 NEWS DESK : ಕರ್ನಾಟಕ ಲೋಕಾಯುಕ್ತ, ಕೊಡಗು ಜಿಲ್ಲೆ, ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ಆ.14 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಕುಶಾಲನಗರ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ವಿತರಿಸಿ, ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಫಿಡೆವಿಟ್ ಮಾಡಿಸಿದ ಅರ್ಜಿ ಸ್ವೀಕರಿಸಲಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ, ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದು. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಕೋರಿದೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ ಮಡಿಕೇರಿ ದೂ.ಸಂ.08272-295297 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.

Read More

ಸುಂಟಿಕೊಪ್ಪ NEWS DESK ಆ.9 : ಬೈಕ್ ಮರಕ್ಕೆ ಅಪ್ಪಳಿಸಿದ ಪರಿಣಾಮ ಇಬ್ಬರು ಸವಾರರು ಮೃತಪಟ್ಟಿರುವ ಘಟನೆ ಸುಂಟಿಕೊಪ್ಪ ಸಮೀಪ ರಾಷ್ಟ್ರೀಯ ಹೆದ್ದಾರಿಯ ಶಾಂತಿಗೇರಿ ಎಂಬಲ್ಲಿ ನಡೆದಿದೆ. ಪಿರಿಯಾಪಟ್ಟಣ ತಾಲ್ಲೂಕು ನವಿಲೂರು ಗ್ರಾಮದ ಆಕಾಶ್ ಹಾಗೂ ಪ್ರಸನ್ನ ಮೃತ ದುರ್ದೈವಿಗಳಾಗಿದ್ದಾರೆ. ಕಟ್ಟಡ ನಿರ್ಮಾಣದ ಸೆಂಟ್ರಿಂಗ್ ಕೆಲಸಕ್ಕೆಂದು ಪಿರಿಯಾಪಟ್ಟಣದಿಂದ ಮಡಿಕೇರಿಗೆ ಗುರುವಾರ ರಾತ್ರಿ ಆಗಮಿಸುತ್ತಿದ್ದ ಸಂದರ್ಭ ಈ ದುರ್ಘಟನೆ ನಡೆದಿದೆ. ಗಂಭೀರವಾಗಿ ಗಾಯಗೊಂಡ ಆಕಾಶ್ ಸ್ಥಳದಲ್ಲೇ ಮೃತಪಟ್ಟರೆ, ಪ್ರಸನ್ನ ಚಿಕಿತ್ಸೆ ಫಲಕಾರಿಯಾಗದೆ ಮಡಿಕೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ. ಸುಂಟಿಕೊಪ್ಪ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More