ಮಡಿಕೇರಿ ಜೂ.3 NEWS DESK : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜೂ.5 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ. ಈ ನೇರ ಸಂದರ್ಶನದಲ್ಲಿ ‘ಕಲ್ಯಾಣಿ ಮೋಟಾರ್ಸ್ ಮಡಿಕೇರಿ’ ಇವರು ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಈ ನೇರ ಸಂದರ್ಶನದಲ್ಲಿ ಎಸ್‍ಎಸ್‍ಎಲ್‍ಸಿ, ಪಿಯುಸಿ., ಐಟಿಐ, ಡಿಪ್ಲೋಮ, ಪದವಿ ಹಾಗೂ ಸ್ನಾತಕೋತರ ಪದವಿ. ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಭಾಗವಹಿಸಿ ಉದ್ಯೋಗದ ನೇರವನ್ನು ಪಡೆಯಬಹುದಾಗಿದೆ. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು, ಅನುಭವ ಪ್ರಮಾಣಪತ್ರ (ಅನ್ವಯಿಸುವವರಿಗೆ ಮಾತ್ರ) ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಸಿ.ಬಿ.ಮಂಜುನಾಥ ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಜಾಬ್ ಕೋಆರ್ಡಿನೇಟರ್ 8296020826 ಇವರನ್ನು ಸಂಪರ್ಕಿಸಬಹುದು.
ಲೇಖಕ: admin
ಮಡಿಕೇರಿ ಮೇ 3 NEWS DESK : ಕಳೆದ ಹಲವು ದಿನಗಳಿಂದ ಸಾರ್ವಜನಿಕರು ಹಾಗೂ ಸಂಚಾರಕ್ಕೆ ಸವಾಲಾಗಿದ್ದ ಮಡಿಕೇರಿ ನಗರದ ರಾಜಾಸೀಟು ರಸ್ತೆಯ ಗುಂಡಿಗಳನ್ನು ಸಾರ್ವಜನಿಕರ ಹಿತದೃಷ್ಟಿಯಿಂದ ಆಟೋ ಚಾಲಕ ಮುಚ್ಚುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಯಾವುದೇ ಅಧಿಕಾರಿಗಳು ಅಥವಾ ಜನಪ್ರತಿನಿಧಿಗಳು ಗಮನ ಹರಿಸದಿದ್ದರೂ, ತಮ್ಮ ಆಟೋದಲ್ಲಿ ಇಟ್ಟಿಗೆ ತುಂಡುಗಳು ಮತ್ತು ಮಣ್ಣನ್ನು ತಂದುಕೊಟ್ಟರು ಗುಂಡಿಗಳನ್ನ ಮುಚ್ಚಿ ಸವಾರರಿಗೆ ನೆರವಾದರು. ವರದಿ : ಸುಮನ್ ಸುರೇಶ್ ಲಾಲಿಪಾಳ್ಯ
ಮಡಿಕೇರಿ ಜೂ.3 NEWS DESK : ಮನ-ಮನೆಯಲ್ಲಿ ಸರಸ್ವತಿ ನೆಲೆಸಿದರೆ ಲಕ್ಷ್ಮಿ ತನಿಷ್ಟಕ್ಕೆ ಒಲಿಯುವಳು. ಲಕ್ಷ್ಮಿ ಖಾಲಿಯಾದರೂ ಸರಸ್ವತಿ ಸಂಪನ್ನಳು ಎಂದು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ ದೃಢವಾದ ನುಡಿಗಳನ್ನಾಡಿದರು. ಕಡಿಯತ್ತನಾಡು ಬಲಂಬೇರಿಯಲ್ಲಿರುವ ಪಾಲಂದಿರ ಮುಂದುಮನೆಯಲ್ಲಿ ನಡೆದ ಕೊಡವ ಪುಸ್ತಕ ಪತ್ತಾಯದ 11 ನೇ ಆವೃತ್ತಿಯನ್ನು ತೆರೆಯುವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ನಾಚಯ್ಯ, ನಮ್ಮ ಬದುಕಿನಲ್ಲಿ ಓದಿ, ಕೇಳಿ, ತಿಳಿದು ಕಲಿತದ್ದು ಎಂದಿಗೂ ನಮ್ಮ ಮನಸ್ಸಿನಿಂದ ಮರೆಯಾಗುವುದಿಲ್ಲ. ಇದರೊಂದಿಗೆ ಪುಸ್ತಕಗಳಲ್ಲಿ ಅಡಗಿರುವ ಅಗಾದವಾದ ಜ್ಞಾನ ಎಂದಿಗೂ ಮಾಸುವುದಿಲ್ಲ. ಆದ್ದರಿಂದ ಪುಸ್ತಕದ ಜ್ಞಾನ ಎಂಬುವುದು ಒಳ್ಳೆಯ ಸಂಸ್ಕಾರ-ಸಂಸ್ಕೃತಿಗೆ ದಾರಿ ತೋರಿಸಬಲ್ಲದು. ಕೊಡವರ ವಿಶೇಷ ಸಂಸ್ಕೃತಿ ಇಡೀ ಜನಾಂಗದ ಹೆಸರನ್ನು ಎತ್ತಿ ಹಿಡಿಯಲು ಕಾರಣವಾಗಿದೆ. ಹೀಗಿರುವಾಗ ದಿನಕ್ಕೆ ಅರ್ಧ ಗಂಟೆಗಳ ಸಮಯವಾದರೂ ಮೊಬೈಲನ್ನು ದೂರವಿಟ್ಟು ಪುಸ್ತಕ ಓದುವ ಸಂಸ್ಕøತಿ ಬೆಳೆಸಿಕೊಳ್ಳುವುದು ಉತ್ತಮ ಎಂದರು. ಮುಂದುವರಿದು ಮಾತನಾಡಿದ ಅವರು, ಪಾಲಂದಿರ ಕುಟುಂಬದ ಹಿನ್ನಲೆ, ಹಿರಿಯರ ಸಾಮಾಜಿಕ, ಸಾಂಸ್ಕøತಿಕ ಕ್ಷೇತ್ರದಲ್ಲಿ…
ಮಡಿಕೇರಿ ಜೂ.3 NEWS DESK : ವಿಪತ್ತು ನಿರ್ವಹಣೆ ಸಂಬಂಧ ಈಗಾಗಲೇ ನಿಯೋಜಿಸಲಾಗಿರುವ ನೋಡಲ್ ಅಧಿಕಾರಿಗಳು, ಸಹಾಯಕ ನೋಡಲ್ ಅಧಿಕಾರಿಗಳು ಸೇರಿದಂತೆ ಎಲ್ಲಾ ಹಂತದ ಅಧಿಕಾರಿಗಳು ತಮ್ಮ ವ್ಯಾಪ್ತಿಗೆ ಮತ್ತೊಮ್ಮೆ ಭೇಟಿ ನೀಡಿ ಅಗತ್ಯ ಮುನ್ನೆಚ್ಚರ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ನಿರ್ದೇಶನ ನೀಡಿದ್ದಾರೆ. ಜಿಲ್ಲಾ ವಿಪತ್ತು ನಿರ್ವಹಣೆ ಸಂಬಂಧಿಸಿದಂತೆ ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣ, ಕುಶಾಲನಗರದ ಪುರಸಭೆ ಸಭಾಂಗಣ ಹಾಗೂ ಪೊನ್ನಂಪೇಟೆಯ ತಾ.ಪಂ.ಸಭಾಂಗಣದಲ್ಲಿ ಮಂಗಳವಾರ ಪ್ರತ್ಯೇಕವಾಗಿ ತಹಶೀಲ್ದಾರರು, ತಾ.ಪಂ.ಇಒಗಳು, ಎಂಜಿನಿಯರ್‍ಗಳು, ನೋಡಲ್ ಅಧಿಕಾರಿಗಳು, ಸಹಾಯಕ ನೋಡಲ್ ಅಧಿಕಾರಿಗಳು, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಜೊತೆ ವಿಪತ್ತು ನಿರ್ವಹಣೆ ಸಂಬಂಧ ನಡೆದ ಸಭೆಯಲ್ಲಿ ಇದುವರೆಗೆ ಕೈಗೊಳ್ಳಲಾಗಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದು ಅವರು ಮಾತನಾಡಿದರು. ಎಲ್ಲಾ ಹಂತದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು ಕರ್ತವ್ಯ ನಿರ್ವಹಿಸಬೇಕು. ಈಗಾಗಲೇ ತಮ್ಮ ವ್ಯಾಪ್ತಿಯ ಸೂಕ್ಷ್ಮ ಹಾಗೂ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಮಾಹಿತಿ ಪಡೆದು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು. ಭೂಕುಸಿತ ಹಾಗೂ…
ಮಡಿಕೇರಿ ಮೇ 3 NEWS DESK : ಕೊಡ್ಲಿಪೇಟೆ ಕಲ್ಲುಮಠದ ಎಸ್.ಕೆ.ಎಸ್. ಶ್ರೀ ಶಿವಕುಮಾರ ಸ್ವಾಮೀಜಿ ಆಂಗ್ಲ ಮಾಧ್ಯಮ ಶಾಲೆ, ಕಲ್ಲು ಮಠ, ಇಲ್ಲಿ 2026–27ನೇ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಸಂಸ್ಥೆಯ ಅಧ್ಯಕ್ಷರಾದ ಪೂಜ್ಯ ಶ್ರೀ ಶ್ರೀ ಚರಮೂರ್ತಿ ಮಹಾಂತ ಸ್ವಾಮೀಜಿಯವರು ಆಗಮಿಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕೋರಿದರು ಹಾಗೂ ಆಶೀರ್ವಚನ ನೀಡಿದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಹೂಗುಚ್ಛ ಹಾಗೂ ಬಲೂನುಗಳನ್ನು ನೀಡಿ ಆತ್ಮೀಯವಾಗಿ ಸ್ವಾಗತಿಸಲಾಯಿತು. ಸಂಸ್ಥೆಯ ಉಪಾಧ್ಯಕ್ಷರಾದ ವಿಶ್ವನಾಥ್, ಕಾರ್ಯದರ್ಶಿಗಳಾದ ಎಚ್.ಎಂ ದಿವಾಕರ್, ಶಾಲೆಯ ಮುಖ್ಯ ಶಿಕ್ಷಕರಾದ ಅಭಿಲಾಶ್ ಎಚ್.ಎಂ. ಹಾಗೂ ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದು, ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ಹೊಸ ಶೈಕ್ಷಣಿಕ ವರ್ಷದ ಶುಭಾಶಯಗಳನ್ನು ಕೋರಿದರು. ಕಾರ್ಯಕ್ರಮದಲ್ಲಿ ಶಿಕ್ಷಕ ವೃಂದ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದ್ದರು. ಕಾರ್ಯಕ್ರಮದ ಸಂದರ್ಭದಲ್ಲಿ ಪೂಜ್ಯ ಸ್ವಾಮೀಜಿಯವರು ವಿದ್ಯಾರ್ಥಿಗಳು ವಿದ್ಯಾಭ್ಯಾಸದಲ್ಲಿ ಉತ್ತಮ ಸಾಧನೆ ಮಾಡಿ ಮುಂದಿನ ದಿನಗಳಲ್ಲಿ ಉತ್ತಮ ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ, ಆರೋಗ್ಯ ಹಾಗೂ…
ಮಡಿಕೇರಿ NEWS DESK ಜೂ.2 : ಕೊಡಗು ವೈದ್ಯಕಿಯ ವಿಜ್ಞಾನಗಳ ಸಂಸ್ಥೆಯ ಸಹ ಪ್ರಾಧ್ಯಾಪಕಿ ಡಾ.ಮಮತಾ ವೈ. ಅವರಿಗೆ ಉತ್ತಮ ಸೇವೆಯನ್ನು ಪರಿಗಣಿಸಿ ಜ್ಞಾನಜ್ಯೋತಿ ಸಮಾಜಿಕ, ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಟ್ರಸ್ಟ್ “ಸಮಾಜ ಸೇವಾ ರತ್ನ” ಪ್ರಶಸ್ತಿಯನ್ನು ನೀಡಿ ಗೌರವಿಸಿತು. ಬೆಂಗಳೂರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಡೆದ “ನಾಡು-ನುಡಿ ಸಾಂಸ್ಕೃತಿಕ ಉತ್ಸವ 2026” ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಡಾ.ಮಮತಾ ವೈ. ಅವರು ಈ ಹಿಂದೆ ಡಾ.ಬಿ.ಆರ್.ಅಂಬೇಡ್ಕರ್ ರಾಷ್ಟ್ರೀಯ ಪ್ರಶಸ್ತಿ ಮತ್ತು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮಡಿಕೇರಿ ಘಟಕದಿಂದ ಉತ್ತಮ ಸೇವಾ ಪ್ರಶಸ್ತಿಯನ್ನು ಪಡೆದಿದ್ದಾರೆ.
ಮಡಿಕೇರಿ NEWS DESK ಜೂ.2 : ಕೊಡಗು ಜಿಲ್ಲೆಯ ಜನಸ್ನೇಹಿ ಶಾಸಕದ್ವಯರಿಗೆ ನೂತನ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡುವ ಮೂಲಕ ರಾಜ್ಯ ಮಟ್ಟದಲ್ಲಿ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸಬೇಕು ಎಂದು ಕೊಡಗು ಜಿಲ್ಲಾ ಕ್ರೈಸ್ತ ಸೇವಾ ಸಂಘ ಮನವಿ ಮಾಡಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಸಂಘದ ಅಧ್ಯಕ್ಷ ಕೆ.ಟಿ.ಬೇಬಿ ಮ್ಯಾಥ್ಯು ಅವರು ಕೊಡಗು ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗಾಗಿ ಕಳೆದ ಮೂರು ವರ್ಷಗಳಿಂದ ಅವಿರತ ಶ್ರಮ ವಹಿಸುತ್ತಿರುವ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಹಾಗೂ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅವರು ಸಚಿವ ಸ್ಥಾನವನ್ನು ಹೊಂದಲು ಅರ್ಹರಾಗಿದ್ದಾರೆ. ಜಿಲ್ಲೆಯಲ್ಲಿ ಮತ್ತಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು, ಸರ್ವ ಜನಾಂಗಗಳ ಪ್ರಗತಿಗಾಗಿ ಸ್ಪಂದಿಸಲು ಮತ್ತು ರಾಜ್ಯದ ಜನರ ಸೇವೆ ಮಾಡಲು ಇವರಿಬ್ಬರಿಗೆ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿದ್ದಾರೆ. ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಬ್ಬರು ಸಜ್ಜನ ಶಾಸಕರಿಗೆ ಸಚಿವ ಸ್ಥಾನ ನೀಡಿದರೆ ದಕ್ಷ ಆಡಳಿತದಿಂದ ಸರಕಾರದ ಘನತೆ ಮತ್ತಷ್ಟು ಹೆಚ್ಚಲಿದೆ. ಅಲ್ಲದೆ ಎಲ್ಲಾ ಸಮುದಾಯಗಳ ಪ್ರೀತಿ,…
ಮಡಿಕೇರಿ NEWS DESK ಜೂ.2 : ರಾಜ್ಯ ಸರಕಾರದ ನೂತನ ಸಚಿವ ಸಂಪುಟದಲ್ಲಿ ಕೊಡಗು ಜಿಲ್ಲೆಯ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಕೊಡಗು ಗೌಡ ಯುವ ವೇದಿಕೆ ಒತ್ತಾಯಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಯುವ ವೇದಿಕೆಯ ಅಧ್ಯಕ್ಷ ಬಾಲಾಡಿ ಮನೋಜ್ ಹಾಗೂ ಆಡಳಿತ ಮಂಡಳಿಯ ಸದಸ್ಯರು ಕೊಡಗಿನ ಜನತೆಯ ಆಕಾಂಕ್ಷೆ ಹಾಗೂ ವಿಶೇಷವಾಗಿ ಕೊಡಗಿನ ಒಕ್ಕಲಿಗ ಜನಾಂಗದ ನಿರೀಕ್ಷೆಯಂತೆ ಡಿ.ಕೆ.ಶಿವಕುಮಾರ್ ಅವರು ಕರ್ನಾಟಕ ರಾಜ್ಯದ 25ನೇ ಮುಖ್ಯಮುಖ್ಯಂತ್ರಿಗಳಾಗಿ ಅಧಿಕಾರ ಸ್ವೀಕರಿಸುತ್ತಿರುವುದು ಹೆಮ್ಮೆ ಎನಿಸಿದೆ. ನೂತನ ಸಚಿವ ಸಂಪುಟದಲ್ಲಿ ಯುವ ಶಾಸಕರಾದ ಡಾ.ಮಂತರ್ ಗೌಡ ಹಾಗೂ ಎ.ಎಸ್.ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡಿದರೆ ಯುವ ಸಮೂಹಕ್ಕೆ ಮತ್ತಷ್ಟು ಬಲ ಬಂದoತ್ತಾಗುತ್ತದೆ ಮತ್ತು ರಾಜಕೀಯ ಸ್ಫೂರ್ತಿ ತುಂಬಿದoತ್ತಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಜಿಲ್ಲೆಯ ಇಬ್ಬರು ಶಾಸಕರು ಅಭಿವೃದ್ಧಿ ಕಾರ್ಯಗಳನ್ನು ಜಾತ್ಯಾತೀತ ಮತ್ತು ಪಕ್ಷಾತೀತವಾಗಿ ನಡೆಸುತ್ತಿದ್ದಾರೆ. ವೀರ ಸೈನಿಕರ ಪ್ರತಿಮೆ ಮರುನಿರ್ಮಾಣ ಕಾರ್ಯ,…
ಮಡಿಕೇರಿ NEWS DESK ಜೂ.2 : ರಾಜ್ಯದಲ್ಲಿ ನೂತನ ಮಂತ್ರಿಮoಡಲ ರಚನೆಯ ಸಂದರ್ಭ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಆರ್.ಪಿ.ಚಂದ್ರಶೇಖರ್ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಅನುಭವಿ ರಾಜಕಾರಣಿಗಳಾಗಿ ಆಡಳಿತದಲ್ಲಿ ದಕ್ಷತೆಯನ್ನು ಮೆರೆದು ಜನಸ್ನೇಹಿ ನಾಯಕರಾಗಿ ಗುರುತಿಸಿಕೊಂಡಿರುವ ಇಬ್ಬರು ಶಾಸಕರಿಗೆ ಸಚಿವ ಸ್ಥಾನ ಲಭಿಸಿದರೆ ಕೊಡಗಿನ ಸಮಗ್ರ ಅಭಿವೃದ್ಧಿಯಾಗಲಿದೆ. ಎಂದು ತಿಳಿಸಿದ್ದಾರೆ. ಕಳೆದ ಮೂರು ವರ್ಷಗಳಿಂದ ಶಾಸಕದ್ವಯರು ಎಲ್ಲಾ ಜಾತಿ, ಜನಾಂಗದ ಶ್ರೇಯೋಭಿವೃದ್ಧಿಗಾಗಿ ಶ್ರಮಿಸಿದ್ದಾರೆ. ಜಿಲ್ಲೆಯ ಅಭಿವೃದ್ಧಿಗೆ ಸರಕಾರದಿಂದ ಸಾಕಷ್ಟು ಅನುದಾನ ತಂದಿದ್ದಾರೆ. ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲೂ ಮೇಲುಗೈ ಸಾಧಿಸಿದ್ದಾರೆ. ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಮುಂಚೂಣಿಯಲ್ಲಿದ್ದಾರೆ. ಅಭಿವೃದ್ಧಿಪರ ಚಿಂತನೆಯ ಯುವ ಶಾಸಕರಿಗೆ ಸಚಿವ ಸ್ಥಾನದ ಅಧಿಕಾರ ದೊರೆತರೆ ರಾಜ್ಯ ಮಟ್ಟದಲ್ಲಿ ಉತ್ತಮ ಸೇವೆ ಮಾಡಲು ಅವಕಾಶ ಲಭಿಸಿದಂತ್ತಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಕರ್ನಾಟಕ ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಅಧಿಕಾರ…
ಮೈಸೂರು NEWS DESK ಜೂ.2 : ಕೊಡಗು ಜಿಲ್ಲೆಯ ಮೂಲಕ ಹಾದುಹೋಗುವ ಯಾವುದೇ ರೈಲು ಮಾರ್ಗಕ್ಕೆ ಸಂಬಂಧಿಸಿದಂತೆ ಪ್ರಸ್ತುತ ರೈಲ್ವೆ ಸಚಿವಾಲಯದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು, ಸ್ಪಷ್ಟಪಡಿಸಿದ್ದಾರೆ. ಈ ಸ್ಪಷ್ಟೀಕರಣವು ಅವರು ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿದ ನಂತರ ಹೊರಬಂದಿದ್ದು, ಈ ಸಂದರ್ಭದಲ್ಲಿ ಮೈಸೂರು–ಕೊಡಗು ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ವಿವಿಧ ರೈಲ್ವೆ ಮೂಲಸೌಕರ್ಯ ಮತ್ತು ಸಂಪರ್ಕ ವ್ಯವಸ್ಥೆಗಳ ಕುರಿತು ಚರ್ಚೆ ನಡೆಸಲಾಯಿತು. ಇತ್ತೀಚಿನ ದಿನಗಳಲ್ಲಿ ಹರಿದಾಡುತ್ತಿರುವ ಕೆಲವು ವರದಿಗಳು ಮತ್ತು ಚರ್ಚೆಗಳು ಕೊಡಗಿನ ಮೂಲಕ ರೈಲು ಮಾರ್ಗ ಹಾದುಹೋಗುವ ಸಾಧ್ಯತೆಯ ಬಗ್ಗೆ ಸಾರ್ವಜನಿಕರ ಒಂದು ವಲಯದಲ್ಲಿ ಆತಂಕವನ್ನು ಉಂಟುಮಾಡಿವೆ ಎಂದು ಶ್ರೀ ಯದುವೀರ್ ತಿಳಿಸಿದ್ದಾರೆ. ಆದರೆ, ರೈಲ್ವೆ ಸಚಿವರೊಂದಿಗೆ ನಡೆದ ಮಾತುಕತೆಯಲ್ಲಿ ಇಂತಹ ಯಾವುದೇ ಪ್ರಸ್ತಾವನೆ ಪ್ರಸ್ತುತ ಸಚಿವಾಲಯದ ಪರಿಗಣನೆಯಲ್ಲಿಲ್ಲ ಎಂಬುದು ದೃಢಪಟ್ಟಿದೆ. ಪ್ರದೇಶಕ್ಕೆ ಸಂಬಂಧಿಸಿದ ಯಾವುದೇ ಭವಿಷ್ಯದ ಮೂಲಸೌಕರ್ಯ ಯೋಜನೆಯನ್ನು ಕೈಗೊಳ್ಳುವ ಮೊದಲು…






