ಲೇಖಕ: admin

ಮಡಿಕೇರಿ ಸೆ.11 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ ತಾಲ್ಲೂಕು ಕಸಾಪ ಮತ್ತು ಮೂರ್ನಾಡು ಪದವಿ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ಸೆ.14 ರಂದು ಕನ್ನಡ ಸಾಹಿತ್ಯ ಪರಿಷತ್ತಿನ ಮೂರ್ನಾಡು ಹೋಬಳಿ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಹಾಗೂ ವಿಷಯ ಸಂಕಲನ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ. ಮೂರ್ನಾಡು ಪದವಿ ಪೂರ್ವ ಕಾಲೇಜಿನ ಕಾವೇರಿ ಸಭಾಂಗಣದಲ್ಲಿ ಪೂರ್ವಾಹ್ನ 10.30 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಕಾಲೇಜಿನ ಅಧ್ಯಕ್ಷ ಡಾ.ಚೌರೀರ ಜಗತ್ ತಿಮ್ಮಯ್ಯ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಕೊಡಗು ಜಿಲ್ಲಾ ಕಸಾಪ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ವಹಿಸಲಿದ್ದಾರೆ. ನಿಯೋಜಿತ ಹೋಬಳಿ ಅಧ್ಯಕ್ಷೆ ಈರಮಂಡ ಹರಿಣಿ ವಿಜಯ್, ಪುಸ್ತಕ ಬಿಡುಗಡೆ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಪಿ.ಎಂ.ದೇವಕ್ಕಿ, ಸಾಹಿತಿ ಗೌರಮ್ಮ ಮಾದಮಯ್ಯ ವಿಷಯ ಸಂಕಲನ ಲೇಖಕರು, ಮಡಿಕೇರಿ ಗ್ರಾಮಾಂತರ ವೃತ್ತ ನಿರೀಕ್ಷ ಪಿ.ಅನೂಪ್ ಮಾದಪ್ಪ “ಸಂಚಾರ ನಿಯಮ ಹಾಗೂ ಕಾನೂನು” ವಿಷಯದ ಕುರಿತು ಉಪನ್ಯಾಸ ನೀಡಲಿದ್ದು, ಕೊಡಗು ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ…

Read More

ಮಡಿಕೇರಿ ಸೆ.11 NEWS DESK : ಕನ್ನಡ ಸಾಹಿತ್ಯ ಪರಿಷತ್ತು ಮೂರ್ನಾಡು ಹೋಬಳಿ ಘಟಕದ ವತಿಯಿಂದ ಕರ್ನಾಟಕ ಸುವರ್ಣ ಸಂಭ್ರಮ ರಥಕ್ಕೆ ಭವ್ಯ ಸ್ವಾಗತ ಕೋರಲಾಯಿತು. ಮೂರ್ನಾಡು ಪಂಚಾಯಿತಿ ಸದಸ್ಯ  ಮುಂಡಾಂಡ ವಿಜು ಹಾಗೂ ಕಸಪಾ ಮೂರ್ನಾಡು ಘಟಕದ ಪದಾಧಿಕಾರಿಗಳು  ಕನ್ನಡ ರಥದ ಭುವನೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು. ಈ ಸಂದರ್ಭ ಕಸಪಾ ಮೂರ್ನಾಡು ಘಟಕದ ಅಧ್ಯಕ್ಷರಾದ ಈರಮಂಡ ಹರಿಣಿ ವಿಜಯ್, ಸಂಘಟನೆ ಕಾರ್ಯದರ್ಶಿ ಜಾಶೀರ್ , ಸದಸ್ಯ ಕೊಳುಮಾಡಾಂಡ ಮಣಿ ಚೆಂಗಪ್ಪ ಹಾಗೂ ಇತರ ಸದಸ್ಯರು ಹಾಜರಿದ್ದರು.

Read More

ವಿರಾಜಪೇಟೆ ಸೆ.11 NEWS DESK : ವಿದ್ಯಾರ್ಥಿಗಳು ಶಿಕ್ಷಣದ ಹಂತದಿಂದಲೇ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ತಿತಿಮತಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಚಾರ್ಲ್ಸ್ ಡಿಸೋಜಾ ಕರೆ ನೀಡಿದರು. ವಿರಾಜಪೇಟೆ ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್.ಎಸ್.ಎಸ್ ಹಾಗೂ ಯುವ ರೆಡ್ ಕ್ರಾಸ್ ಘಟಕವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಯಾವುದೇ ಕೆಲಸವನ್ನು ಸ್ವ ಇಚ್ಛೆಯಿಂದ ಮಾಡಬೇಕು. ಆ ನಿಟ್ಟಿನಲ್ಲಿ ಎನ್.ಎಸ್.ಎಸ್ ಮತ್ತು ರೆಡ್ ಕ್ರಾಸ್ ಘಟಕಗಳ ಸಾಮಾಜಿಕ ಕಾರ್ಯಗಳು ಪ್ರಮುಖವಾಗಿದೆ ಎಂದು ಅಭಿಪ್ರಾಯಪಟ್ಟರು. ಸಂತ ಅನ್ನಮ್ಮ ಪಿಯು ಕಾಲೇಜಿನ ಪ್ರಾಂಶುಪಾಲರು ಹಾಗೂ ಪದವಿ ಕಾಲೇಜಿನ ವ್ಯವಸ್ಥಾಪಕ ರೆ.ಫಾ.ಮದಲೈ ಮುತ್ತು  ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿಯನ್ನು ಭೋದಿಸಿ ಮಾತನಾಡಿ, ವಿದ್ಯಾರ್ಥಿಗಳು ಈ ಹಂತದಿಂದಲೇ ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು. ಪರರ ಸೇವೆಯಲ್ಲಿ ತೊಡಗಿಸಿಕೊಂಡು ನಿಸ್ವಾರ್ಥ ಸೇವೆಗೆ ಬದ್ಧರಾಗಿರಬೇಕು. ಪರಸ್ಪರ ಸಹಕಾರ, ಪ್ರೀತಿ, ವಿಶ್ವಾಸವು ಉತ್ತಮ ವ್ಯಕ್ತಿಯನ್ನಾಗಿ ಮಾಡುತ್ತದೆ. ಮಾನವೀಯ ಆದರ್ಶಗಳನ್ನು ಬೆಳೆಸಿ ಸಮಾಜ ಹಾಗೂ ರಾಷ್ಟ್ರಕ್ಕೆ ಕೊಡುಗೆಯನ್ನು ನೀಡಿ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ…

Read More

ಬೆಂಗಳೂರು ಸೆ.11 NEWS DESK : ಪ್ರಕೃತಿಯಿಂದ ಲಾಭ ಪಡೆಯುತ್ತಿರುವ ಎಲ್ಲರಿಗೂ ಪ್ರಕೃತಿ ರಕ್ಷಣೆಯ ಹೊಣೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ರಾಷ್ಟ್ರೀಯ ಅರಣ್ಯ ಹುತಾತ್ಮ‌ರ ದಿ‌ನದ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅರಣ್ಯ ಭವನದಲ್ಲಿನ‌ ಹುತತ್ಮರ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು. ರಾಜ್ಯದಲ್ಲಿ ಅನುಪಾತಕ್ಕೆ ತಕ್ಕಷ್ಟು ಅರಣ್ಯವಿಲ್ಲ. ಆದ್ದರಿಂದ ಅರಣ್ಯೀಕರಣ ಹೆಚ್ಚಾಗಬೇಕು. ಕಾಡು ಮತ್ತು ವನ್ಯ ಪ್ರಾಣಿ ಸಂಪತ್ತಿನ‌ ರಕ್ಷಣೆ ಕೇವಲ ಅರಣ್ಯಾಧಿಕಾರಿಗಳು ಮತ್ತು ಸಿಬ್ಬಂದಿಯ ಕರ್ತವ್ಯ ಎಂದರೆ ನಾವು ನಮ್ಮ‌ ಹೊಣೆಗಾರಿಕೆಯಿಂದ ತಪ್ಪಿಸಿಕೊಂಡಂತಾಗುತ್ತದೆ ಎಂದರು. ರಾಜ್ಯದಲ್ಲಿ ಆನೆ, ಹುಲಿಗಳ ಸಂಖ್ಯೆ ಹೆಚ್ಚುತ್ತಿರುವುದು ಸಂತೋಷದ ಸಂಗತಿ. ಆದರೆ ಪ್ರಾಣಿ-ಮನುಷ್ಯ ಸಂಘರ್ಷ ತಪ್ಪಿಸಿ ಮಾನವ, ಪ್ರಾಣಿ ಸಂಪತ್ತನ್ನು ಕಾಪಾಡುವ ದಿಕ್ಕಿನಲ್ಲಿ ಇನ್ನಷ್ಟು ಪರಿಣಾಮಕಾರಿ ಕೆಲಸಗಳು ಆಗಬೇಕಿದೆ. ಇದಕ್ಕಾಗಿ ಲಭ್ಯ ಇರುವ ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಳ್ಳಬೇಕು ಎಂದು ಕರೆ ನೀಡಿದರು. ಅರಣ್ಯ ಹುತಾತ್ಮರ ಕುಟುಂಬಕ್ಕೆ ನೀಡುವ ಪರಿಹಾರ ಮೊತ್ತವನ್ನು 30 ರಿಂದ 50 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಅರಣ್ಯ ಹುತಾತ್ಮರು ಮನುಕುಲದ ಸಂರಕ್ಷಕರು.…

Read More

ನವದೆಹಲಿ NEWS DESK ಸೆ.11 :  ಸೈಬರ್‌ ಭದ್ರತೆಯು ದೇಶದ ಆಂತರಿಕ, ರಾಷ್ಟ್ರೀಯ ಭದ್ರತೆಯ ಪ್ರಶ್ನೆಯಾಗಿದೆ. ಸೈಬರ್‌ ಅಪರಾಧಗಳಿಗೆ ಸಂಬಂಧಿಸಿದಂತೆ ಮೋದಿ ಸರ್ಕಾರವು ಕಾರ್ಯನಿರತವಾಗಿದ್ದು, ಸೈಬರ್‌ ಭದ್ರತೆಗಾಗಿ ಅನೇಕ ಕ್ರಮಗಳನ್ನು ಕೈಗೊಂಡಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ತಿಳಿಸಿದ್ದಾರೆ. ಭಾರತದಲ್ಲಿನ ಸೈಬರ್‌ ಅಪರಾಧಗಳನ್ನು ತಡೆಯಲು ಮುಂದಿನ ಐದು ವರ್ಷಗಳಲ್ಲಿ 5 ಸಾವಿರ ಸೈಬರ್‌ ಕಮಾಂಡೊಗಳಿಗೆ ತರಬೇತಿ ನೀಡುವ ಬಗ್ಗೆ ಸರ್ಕಾರ ಯೋಜಿಸಿದೆ. ಜಗತ್ತಿನ ಶೇ 47ರಷ್ಟು ಡಿಜಿಟಲ್‌ ವ್ಯವಹಾರಗಳು ಭಾರತದಲ್ಲೇ ನಡೆಯುತ್ತವೆ. ಹೀಗಾಗಿ ಸೈಬರ್‌ ಭದ್ರತೆ ಅತಿ ಅಗತ್ಯವಾದುದು’ ಎಂದು ಪುನರುಚ್ಚರಿಸಿದರು. ಕಾರ್ಯಕ್ರಮದಲ್ಲಿ ಶಾ, ದೇಶದಲ್ಲಿ ಸೈಬರ್‌ ಅಪರಾಧ ತಡೆಗೆ ಹೊಸದಾಗಿ ನಾಲ್ಕು ಪ್ಲಾಟ್‌ಫಾರ್ಮ್‌ಗಳನ್ನು ಉದ್ಘಾಟಿಸಿದರು. ಕೇಂದ್ರ ಗೃಹ ಸಚಿವಾಲಯವು ಸೈಬರ್‌ ಅಪರಾಧ ಸಮನ್ವಯ ಕೇಂದ್ರವನ್ನು 2018ರಲ್ಲಿ ಸ್ಥಾಪಿಸಿದೆ. ದೇಶದಲ್ಲಿ ನಡೆಯುವ ಸೈಬರ್‌ ಅಪರಾಧಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ರಾಷ್ಟ್ರಮಟ್ಟದಲ್ಲಿ ಸಮನ್ವಯ ಸಾಧಿಸುವುದೇ ಇದರ ಮುಖ್ಯ ಉದ್ದೇಶವಾಗಿದೆ.

Read More

ಸೋಮವಾರಪೇಟೆ NEWS DESK ಸೆ.11 : ಸೋಮವಾರಪೇಟೆ ಪಟ್ಟಣ ಪಂಚಾಯ್ತಿ ಆಡಳಿತ ಬಿಜೆಪಿ- ಜೆಡಿಎಸ್ ಮೈತ್ರಿ ಕೂಟದ ಪಾಲಾಗಿದೆ. ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಇಂದು ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಒಂದೊಂದೇ ನಾಮಪತ್ರ ಸಲ್ಲಿಕೆಯಾಗಿತ್ತು. ಬಿಜೆಪಿ, ಜೆಡಿಎಸ್ ಮೈತ್ರಿಕೂಟದ (ಸಾಮಾನ್ಯ ಮಹಿಳೆ)ಜೆಡಿಎಸ್‌ ನ ಜಯಂತಿ ಅಧ್ಯಕ್ಷರಾಗಿ ಹಾಗೂ (ಪರಿಶಿಷ್ಠ ಜಾತಿ ಮಹಿಳೆ)ಬಿಜೆಪಿಯ ಮೋಹಿನಿ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು. ವಾರ್ಡ್ ಸಂಖ್ಯೆ 10ರಲ್ಲಿ ಜೆಡಿಎಸ್ ನಿಂದ ಜಯಂತಿ  ಜಯಗಳಿಸಿದ್ದರೆ, ವಾರ್ಡ್ ಸಂಖ್ಯೆ 3ರಲ್ಲಿ ಬಿಜೆಪಿಯಿಂದ ಮೋಹಿನಿ ಗೆಲುವು ದಾಖಲಿಸಿದ್ದರು. ಕೇವಲ 3 ಸದಸ್ಯರನ್ನು ಹೊಂದಿರುವ ಕಾಂಗ್ರೆಸ್ ತಟಸ್ಥವಾಗಿತ್ತು.

Read More

ಸಿದ್ದಾಪುರ ಸೆ.11 NEWS DESK :  ಪುಲಿಯೇರಿ ಗ್ರಾಮದ ಇಂಜಿಲಗೆರೆಯಲ್ಲಿ ಶ್ರೀ ವಿನಾಯಕ ಮಿತ್ರ ಮಂಡಳಿ ವತಿಯಿಂದ ದ್ವಿತೀಯ ವರ್ಷದ ಗೌರಿ-ಗಣೇಶ ವಿಸರ್ಜನೋತ್ಸವವು ಸಂಭ್ರಮದಿಂದ ನಡೆಯಿತು. ಉತ್ಸವದ ಅಂಗವಾಗಿ ಮಹಾಪೂಜೆ, ಮಹಾ ಮಂಗಳಾರತಿ ನಡೆಯಿತು. ನೆರದಿದ್ದ ಭಕ್ತಾದಿಗಳಿಗೆ ಪ್ರಸಾದ ವಿತರಣೆ ಹಾಗೂ ಅನ್ನದಾನ ನೆರವೇರಿತು. ನಂತರ ಗೌರಿ ಗಣೇಶ ಮೂರ್ತಿಯನ್ನು ಅಲಂಕೃತ ಮಂಟಪದಲ್ಲಿ ಕುಳ್ಳಿರಿಸಿ ವಾದ್ಯ ಮೇಳದೊಂದಿಗೆ ಇಂಜಿಲಗೆರೆ ಹಾಗೂ ಪುಲಿಯೇರಿ ಮುಖ್ಯ ಬೀದಿಗಳಲ್ಲಿ ಮೆರವಣಿಗೆ ಸಾಗಿ ಬಳಿಕ ಗ್ರಾಮದ ಕೆರೆಯಲ್ಲಿ ವಿಸರ್ಜಿಸಲಾಯಿತು. ಈ ಸಂದರ್ಭ ವಿನಾಯಕ ಮಿತ್ರ ಮಂಡಳಿಯ ಪದಾಧಿಕಾರಿಗಳಾದ ರತೀಶ್, ಶಶಿಕುಮಾರ್, ಸುದೀಶ್, ಮನೀಶ್, ರಜೀಶ್ ನೂತನ್ ಮತ್ತು ಶರತ್ ಸೇರಿದಂತೆ ಸುತ್ತಮುತ್ತಲ ಗ್ರಾಮದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಸೌಹಾರ್ದತೆಗೆ ಸಾಕ್ಷಿಯಾದ ಇಂಜಲಗೆರೆ : :  ಗೌರಿ-ಗಣೇಶ ವಿಸರ್ಜನೋತ್ಸವ ಸಂದರ್ಭ ಹಿಂಜಲಗೆರೆ ಕಲ್ಲುಕೋರೆ ಬಳಿಯ ಬದ್ರಿಯಾ ಮಸೀದಿ ಕಮಿಟಿ ವತಿಯಿಂದ ಭಕ್ತಾದಿಗಳಿಗೆ ಬಾದಾಮಿ ಹಾಲು ಬಿಸ್ಕೆಟ್ ಗಳನ್ನು ವಿತರಿಸಿ ಪರಸ್ಪರ ಸೌಹಾರ್ದತೆ ಮೆರೆದರು.

Read More

ಮಂಗಳೂರು NEWS DESK ಸೆ.11 : ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಮಗುಚಿದ ಆಟೋರಿಕ್ಷಾವನ್ನು ಮೇಲೆತ್ತಿ ತಾಯಿಯನ್ನು ರಕ್ಷಿಸಿದ 7ನೇ ತರಗತಿಯ ವಿದ್ಯಾರ್ಥಿನಿ ವೈಭವಿಯನ್ನು ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಸನ್ಮಾನಿಸಿ ಪ್ರಶಂಸೆ ವ್ಯಕ್ತಪಡಿಸಿದೆ. ಕಿನ್ನಿಗೋಳಿಯಲ್ಲಿ ರಸ್ತೆ ದಾಟುತ್ತಿದ್ದ ಸಂದರ್ಭ ರಿಕ್ಷಾ ಡಿಕ್ಕಿಯಾಗಿ ಅದರಡಿಗೆ ಬಿದ್ದ ತಾಯಿಯನ್ನು ತಕ್ಷಣವೇ ಧಾವಿಸಿ ಬಂದು ರಕ್ಷಿಸಿದ ಬಾಲಕಿ ವೈಭವಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ಶ್ಲಾಘಿಸಿದ್ದರು. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಷೈ ಮುಗಿಲನ್ ಅವರು ವೈಭವಿಯನ್ನು ತಮ್ಮ ಕಚೇರಿಗೆ ಕರೆಸಿ ಸನ್ಮಾನಿಸಿದರು. ಧೈರ್ಯ ಮೆರೆದ ಬಾಲಕಿಗೆ ಪೇಟ, ಹಾರ ಹಾಕಿದ ಡಿಸಿ ಸಮಯಪ್ರಜ್ಞೆಯ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದರು. “ವೈಭವಿಯ ಈ ಸಾಹಸ ಎಲ್ಲರಿಗೂ ಮಾದರಿಯಾಗಿದೆ. ಶಾಲಾ ಹಂತದಲ್ಲಿ ಮಕ್ಕಳಿಗೆ ಇಂತಹ ಸಮಯಪ್ರಜ್ಞೆ ಮತ್ತು ಧೈರ್ಯ ಮೂಡಿ ಬರಬೇಕಿದೆ” ಎಂದು ಹೇಳಿದರು. ಅಪರ ಜಿಲ್ಲಾಧಿಕಾರಿ ಡಾ.ಜಿ.ಸಂತೋಷ್ ಕುಮಾರ್, ಸಮಾಜ ಕಲ್ಯಾಣ ಉಪನಿರ್ದೇಶಕ ಹೇಮಲತಾ, ಸಹಾಯಕ ನಿರ್ದೇಶಕ ಸುರೇಶ್ ಅಡಿಗ ಹಾಗೂ ವೈಭವಿ ಪಾಲಕರು ಉಪಸ್ಥಿತರಿದ್ದರು. ಮಂಗಳೂರು…

Read More

ಮಡಿಕೇರಿ ಸೆ.11 NEWS DESK : ತಾಲ್ಲೂಕು ಮಟ್ಟದ ಕಾಲ್ಚೆಂಡು ಪಂದ್ಯಾವಳಿಯಲ್ಲಿ ನೆಲ್ಲಿಹುದಿಕೇರಿ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಾಥಮಿಕ ವಿದ್ಯಾರ್ಥಿಗಳು ಗೆಲುವು ಸಾಧಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬಸವನಹಳ್ಳಿ ಸರಕಾರಿ ಪ್ರೌಢಶಾಲಾ ಮೈದಾನದಲ್ಲಿ ನಡೆದ ಪಂದ್ಯಾವಳಿಯಲ್ಲಿ ಕಾಜೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿರುದ್ಧ 4-0 ಗೋಲುಗಳ ಗೆಲುವು ದಾಖಲಿಸಿದರು.

Read More

  ಮಡಿಕೇರಿ ಸೆ.11 NEWS DESK : ಮಡಿಕೇರಿ‌ ಕೊಡವ ಸಮಾಜದ ವತಿಯಿಂದ ಕೈಲ್ ಪೊಳ್ದ್ ಹಬ್ಬದ ಪ್ರಯುಕ್ತ ಸಾಂಕೇತಿಕ ಆಯುಧ ಪೂಜೆಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಸಮಾಜದ ಸಭಾಂಗಣದಲ್ಲಿ ಕೋವಿ, ಕತ್ತಿಗೆ ಸಮಾಜದ ಅಧ್ಯಕ್ಷ ಮಂಡುವಂಡ ಪಿ.ಮುತ್ತಪ್ಪ ಪೂಜೆಸಲ್ಲಿಸಿದರು. ನಂತರ ತೆಂಗಿನ ಕಾಯಿಗೆ ಗುಂಡುಹೊಡೆಯಲಾಯಿತು. ಈ ಸಂದರ್ಭ ಸಮಾಜದ ಉಪಾಧ್ಯಕ್ಷ ಕೇಕಡ ವಿಜುದೇವಯ್ಯ, ಕಾರ್ಯದರ್ಶಿ ಕನ್ನಂಡ ಸಂಪತ್ ಕುಮಾರ್, ಜಂಟಿ ಕಾರ್ಯದರ್ಶಿ ನಂದಿನೆರವಂಡ ದಿನೇಶ್, ನಿರ್ದೇಶಕರಾದ ಕನ್ನಂಡ ಕವಿತ ಬೊಳ್ಳಪ್ಪ, ಬೊಪ್ಪಂಡ ಸರಳಾ ಕರುಂಬಯ್ಯ, ಕಾಂಡೇರ ಲಲ್ಲು ಕುಟ್ಟಪ್ಪ, ನಂದಿನೆರವಂಡ ರವಿ ಬಸಪ್ಪ, ಕಾಳಚಂಡ ಅಪ್ಪಣ್ಣ, ಶಾಂತೆಯಂಡ ವಿಶಾಲ್ ಕಾರ್ಯಪ್ಪ, ಮೂವೇರ ಜಯರಾಂ, ಪುತ್ತರಿರ ಕರುಣ್ ಕಾಳಯ್ಯ, ಕೊಡವ ಸಮಾಜ, ಕೊಡವ ಸೌಹಾರ್ದ ಪತ್ತಿನ ಸಹಕಾರ ಸಂಘ ಹಾಗೂ ಕೊಡವ ವಿದ್ಯಾಧಿಯ ವ್ಯವಸ್ಥಾಪಕರು‌, ಸಿಬ್ಬಂದಿ ವರ್ಗ ಹಾಜರಿದ್ದರು.

Read More