ಲೇಖಕ: admin

ಕಾರ್ಕಳ ಸೆ.11 NEWS DESK :  ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸಪ್ತಸ್ವರ ಸಭಾಂಗಣದಲ್ಲಿ ವಿಶ್ವ ಆತ್ಮಹತ್ಯೆ ವಿರೋಧಿ ದಿನಾಚರಣೆಯ ಕುರಿತು ಮಾಹಿತಿ ಕಾರ್ಯಗಾರ ನಡೆಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಕ್ಲಿನಿಕಲ್ ಸೈಕಾಲಜಿಸ್ಟ್ ಕ್ಯಾಥರೀನ್ ಜೆನ್ನಿಫರ್ ಮಾತನಾಡಿ  ಸ್ಪರ್ಧಾತ್ಮಕ ಯುಗದಲ್ಲಿ ನಮ್ಮ ಸಾಮರ್ಥ್ಯವೇನು ಎಂಬುದನ್ನು ಅರಿತು ಅದರಂತೆ ಜೀವಿಸಬೇಕು. ಬೇರೆಯವರ ಜೀವನಶೈಲಿ ನಮ್ಮದಾಗದಿರಲಿ. ಸಕಾರಾತ್ಮಕ ಮನೋಭಾವ, ಚಿಂತನೆಗಳನ್ನು ಅನುಸರಿಸಬೇಕು ಎಂದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಕಾರ್ಕಳ ತಾಲ್ಲೂಕು ಆರೋಗ್ಯಾಧಿಕಾರಿಗಳಾದ ಡಾ.ಸಂದೀಪ್ ಕುದ್ವ ಪ್ರಾಸ್ತಾವಿಕ ನುಡಿಗಳನ್ನಾಡುತ್ತಾ ‘ಮಾನಸಿಕ ಸಮತೋಲನ ಕಾಯ್ದುಕೊಳ್ಳುವಿಕೆಯಿಂದ ಆತ್ಮಹತ್ಯೆಯಂತಹ ಘಟನೆಗಳನ್ನು ತಡೆಗಟ್ಟಲು ಸಾಧ್ಯ’ ಎಂದರು. ಪ್ರಭಾರ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಹೆಚ್.ಶಶಿಧರ್, ‘ವೈಜ್ಞಾನಿಕ ಚಿಕಿತ್ಸಾ ಪದ್ಧತಿಗಳಿಗೆ ಹೊಂದಿಕೊಂಡು ಉತ್ತಮ ಜೀವನ ರೂಪಿಸಿಕೊಳ್ಳಬೇಕು’ ಎಂದರು. ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ಕಾರ್ಯಕ್ರಮದ ಕುರಿತು ಅಧ್ಯಕ್ಷೀಯ ನುಡಿಗಳನ್ನಾಡುತ್ತಾ ‘ಪ್ರತಿಯೊಂದು ಸಮಸ್ಯೆಗೂ ಪರಿಹಾರ ಎಂಬುವುದಿದೆ. ಆತ್ಮಹತ್ಯೆ ಪರಿಹಾರವಲ್ಲ. ಆತ್ಮಹತ್ಯೆ ಎಂಬ ಸಾವು ಸಾಧನೆಯಲ್ಲ. ಬದುಕಿ ಬದುಕನ್ನು ಗೆದ್ದು ಸಾಧಿಸಿ ತೋರಿಸಬೇಕು’…

Read More

ಸುಳ್ಯ NEWS DESK ಸೆ.11 : ದಕ್ಷಿಣ ಕನ್ನಡ ಜಿಲ್ಲಾ ಒಕ್ಕೂಟ ಸೌಹಾರ್ದ ಸಹಕಾರಿಯ ನೂತನ ಅಧ್ಯಕ್ಷರಾಗಿ ಭಾಸ್ಕರ ದೇವಸ್ಯ ಆಯ್ಕೆಯಾಗಿದ್ದಾರೆ.

Read More

ವಿರಾಜಪೇಟೆ ಸೆ.11 NEWS DESK :  ಕೆದಮುಳ್ಳೂರು ಗ್ರಾಮದ ತೆರ್ಮೆಮೊಟ್ಟೆಯ ಶ್ರೀ ವಿನಾಯಕ ಸೇವಾ ಸಮಿತಿ ವತಿಯಿಂದ 19ನೇ ವರ್ಷದ ಗಣೇಶೋತ್ಸವವನ್ನು ಮೂರು ದಿನಗಳ ಕಾಲ ಸಂಭ್ರಮದಿಂದ ಆಚರಿಸಲಾಯಿತು. ಉತ್ಸವದ ಪ್ರಯುಕ್ತ ಗಣಪತಿ ಹೋಮ,  ಮಹಾ ಪೂಜೆ, ಪ್ರಸಾದ ವಿನಿಯೋಗ ಮತ್ತು ಅನ್ನ ಸಂತರ್ಪಣೆ ನಡೆಸಲಾಯಿತು. ಗ್ರಾಮಸ್ಥರಿಗಾಗಿ ವಿವಿಧ ಆಟೋಟಗಳ ಸ್ಪರ್ಧೆ ಹಾಗೂ ಮನರಂಜನೆಯ ಕಾರ್ಯಕ್ರಮ ಮತ್ತು ಬಹುಮಾನ ವಿತರಣೆ ಮಾಡಲಾಯಿತು.ಮೂರನೇ ದಿನ ರಾತ್ರಿ ಮಹಾ ಪೂಜೆಯ ನಂತರ ವಿದ್ಯುತ್‌ ಅಲಂಕಾರ ಮಂಟಪ ದಲ್ಲಿ ಗಣೇಶ ಮೂರ್ತಿಯನ್ನು ಕುಳ್ಳಿರಿಸಿ ಮೆರವಣಿಗೆ ನಡೆಸಿ ಮಹಾದೇವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಕೀರ್ತಿ ಹೊಳೆಯಲ್ಲಿ ಗಣೇಶ ಮೂರ್ತಿಯನ್ನು ವಿಸರ್ಜಿಸಲಾಯಿತು.

Read More

ದೇವರಪಲ್ಲಿ NEWS DESK ಸೆ.11 : ಲಾರಿ ಪಲ್ಟಿಯಾಗಿ ಸ್ಥಳದಲ್ಲೇ 7 ಕೂಲಿ ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ದೇವರಪಲ್ಲಿ ತಾಲ್ಲೂಕಿನ ಚಿಲಕವಾರಿಪಾಕಲ ಎಂಬ ಗ್ರಾಮದಲ್ಲಿ ನಡೆದಿದೆ. ಗೋಡಂಬಿ ತುಂಬಿಕೊAಡು ತೆರಳುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ಭೀಕರ ಅಪಘಾತದಲ್ಲಿ ಏಳು ಮಂದಿ ಸ್ಥಳದಲ್ಲೇ ಮೃತಪಟ್ಟರು. ಮೃತರ ಪೈಕಿ 6 ಕಾರ್ಮಿಕರು ತಾಡಿಮಳ್ಳ ಗ್ರಾಮದ ನಿವಾಸಿಗಳು. ಘಟನೆಯಲ್ಲಿ ಹಲವರಿಗೆ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

Read More

ಸುಂಟಿಕೊಪ್ಪ ಸೆ.11 NEWS DESK : ಸಂತ ಮೇರಿ ಆಂಗ್ಲ ಮಾಧ್ಯಮ ವಿದ್ಯಾ ಸಂಸ್ಥೆಯ ಪ್ರೌಢಶಾಲಾ ಬಾಲಕರ ತಂಡ ಫುಟ್ಬಾಲ್ ವಿಭಾಗದಲ್ಲಿ ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅಮ್ಮತ್ತಿ ಸರಕಾರಿ ಪ್ರೌಢಶಾಲಾ ಮೈದಾನದಲ್ಲಿ ನಡೆದ ಪೈನಲ್ ಪಂದ್ಯಾವಳಿಯಲ್ಲಿ ಸಂತ ಮೇರಿ ಆಂಗ್ಲ ಮಾಧ್ಯಮ ವಿದ್ಯಾ ಸಂಸ್ಥೆಯ ಬಾಲಕರ ತಂಡವು ಪಾಲಿಬೆಟ್ಟ ತಂಡವನ್ನು 5-4 ಗೋಲುಗಳನ್ನು ಗಳಿಸುವ ಮೂಲಕ ಗೆಲುವು ಸಾಧಿಸಿ ವಿಭಾಗೀಯ ಮಟ್ಟಕ್ಕೆ ಪ್ರವೇಶ ಪಡೆದುಕೊಂಡಿದೆ. ಸೆ.12 ರಿಂದ ದಕ್ಷಿಣ ಕನ್ನಡದಲ್ಲಿ ಆರಂಭಗೊಳ್ಳಲಿರುವ ಪಂದ್ಯಾವಳಿಯಲ್ಲಿ ಪ್ರೌಢಶಾಲಾ ಬಾಲಕರ ತಂಡ ಪಾಲ್ಗೊಳ್ಳಲಿದೆ. ಬಾಲಕರ ತಂಡದ ಸಾಧನೆಗೆ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರುಗಳಾದ ಸುನಿಲ್, ಶುೃತಿ, ಚಂದ್ರಶೇಖರ್ ತರಬೇತಿ ನೀಡಿರುತ್ತಾರೆ. ಬಾಲಕರ ತಂಡದ ಕ್ರೀಡಾ ಸಾಧನೆಯನ್ನು ಶಾಲೆಯ ವ್ಯವಸ್ಥಾಪಕರಾದ ರೇ.ಫಾ.ವಿಜಯಕುಮಾರ್, ಸಂತ ಮೇರಿ ಆಂಗ್ಲ ವಿದ್ಯಾ ಸಂಸ್ಥೆಯ ಪ್ರಾಂಶುಪಾಲÀ ಸೇಲ್ವರಾಜ್ ಅಭಿನಂದಿಸಿ ಶುಭ ಹಾರೈಸಿದ್ದಾರೆ.

Read More

ಮಡಿಕೇರಿ NEWS DESK ಸೆ.11 : ಗೋಣಿಕೊಪ್ಪಲು ನಿವಾಸಿ ವಿನಾಯಕ ಪ್ರಿಂಟರ್ಸ್ ಮಾಲೀಕ ರಾಮಕೃಷ್ಣ ಅವರ ಪತ್ನಿ ಹಾಗೂ  ಗೋಣಿಕೊಪ್ಪಲು ಎಸ್ ಎನ್ ಡಿ ಪಿ ಕಾರ್ಯಕಾರಿ ಸಮಿತಿ ಸದಸ್ಯರಾದ ವತ್ಸಲ (66) ಇಂದು ಬೆಳಿಗ್ಗೆ 6.30 ಗಂಟೆಗೆ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಇವರ ಅಂತ್ಯಕ್ರಿಯೆ ಇಂದು ಸಾಯಂಕಾಲ ಕೇರಳ ಮಟ್ಟನೂರ್ ನ  ಸ್ವಗೃಹದಲ್ಲಿ ನಡೆಯಲಿದೆ ಎಂದು ಕುಟುಂಬ ವರ್ಗ ತಿಳಿಸಿದೆ.

Read More

ಸುಂಟಿಕೊಪ್ಪ ಸೆ.11 NEWS DESK : ಹೆಸರಾಯಿತು ಕನ್ನಡ ಉಸಿರಾಗಲಿ ಕನ್ನಡ ಕರ್ನಾಟಕ ಸಂಭ್ರಮ 50ನೇ ಅಭಿಯಾನದ ಅಂಗವಾಗಿ ನಾಡಿನಾದ್ಯಂತ ಸಂಚರಿಸುತ್ತಿರುವ ಕನ್ನಡಾಂಬೆ ಭುವನೇಶ್ವರಿಯ ರಥವನ್ನು ಐಗೂರಿನಲ್ಲಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಐಗೂರು ಗ್ರಾ.ಪಂ, ಕನ್ನಡ ಸಾಹಿತ್ಯ ಪರಿಷತ್ ಘಟಕ, ಐಗೂರು ಸರಕಾರಿ ಪ್ರೌಢಶಾಲೆ, ಕಾಜೂರು ಪ್ರಾಥಮಿಕ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು, ಸಾರ್ವಜನಿಕರು ಕನ್ನಡ ರಥದ ಭುವನೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು. ಶಾಲಾ ವಿದ್ಯಾರ್ಥಿನಿಯರು ಪೂರ್ಣಕುಂಭದೊಂದಿಗೆ ರಥವನ್ನು ಸ್ವಾಗತಿಸಿದರು. ಕಾಜೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಅಜಿತ್ ಕುಮಾರ್, ಸೋಮವಾರಪೇಟೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಕಾರ್ಯದರ್ಶಿ ದಿನೇಶ್, ಐಗೂರು ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಟಿ.ಎಸ್.ಪೂರ್ಣಕುಮಾರ್ ಸುವರ್ಣ ಕರ್ನಾಟಕದ ಮಹತ್ವ ಬೆಳೆದು ಬಂದ ದಾರಿಯ ಬಗ್ಗೆ ವಿವರಿಸಿದರು. ಈ ಸಂದರ್ಭ ಐಗೂರು ಗ್ರಾ.ಪಂ ಅಧ್ಯಕ್ಷ ಜಿ.ಕೆ.ವಿನೋದ್, ಉಪಾಧ್ಯಕ್ಷ ಗೌರಮ್ಮ, ಐಗೂರು ಕನ್ನಡ ಸಾಹಿತ್ಯ ಪರಿಷತ್ ಘಟಕದ ಅಧ್ಯಕ್ಷ ಬಾರನ ಕೀರ್ತಿಕುಮಾರ್, ಗೌರವ ಅಧ್ಯಕ್ಷ ಕೇಕಡ ವಾಸು ಪೂವಯ್ಯ, ಸಂಘಟನಾ…

Read More

ಸೋಮವಾರಪೇಟೆ NEWS DESK ಸೆ.10 : ಮಾಸಿಕ ಸಂಬಳಕ್ಕೆ ಆಗ್ರಹಿಸಿ ಸರ್ಕಾರಿ ಸಾರ್ವಜನಿಕರ ಆಸ್ಪತ್ರೆ ಡಿ ಗ್ರೂಪ್ ನೌಕರರು ಮಂಗಳವಾರ ಸೋಮವಾರಪೇಟೆ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದರು. ಕಳೆದ 5 ತಿಂಗಳಿನಿಂದ ಸಂಬಳ ನೀಡಿಲ್ಲ. ಕಸ ಗುಡಿಸಿ, ಸ್ವಚ್ಚತೆ ಮಾಡುವ ನಮಗೆ ಜೀವನ ಸಾಗಿಸುವುದೆ ಕಷ್ಟವಾಗಿದೆ ಎಂದು ಪ್ರತಿಭಟನಾಕಾರರು ಸಂಕಟ ತೋಡಿಕೊಂಡರು. ಬೆಂಗಳೂರಿನ ಎಸ್‌ಎಲ್‌ಎನ್ ಸಂಸ್ಥೆ ಸಿಬ್ಬಂದಿಗಳನ್ನು ನೀಡುವ ಗುತ್ತಿಗೆ ಪಡೆದಿದ್ದು, 12 ಜನರು ಡಿ ಗ್ರೂಪ್ ನೌಕರರನ್ನು ನೇಮಿಸಿದ್ದಾರೆ. ಸಂಬಳವನ್ನೇ ನಂಬಿಕೊAಡು ಕೆಲಸ ಮಾಡುತ್ತಿರುವ ನಮಗೆ 5 ತಿಂಗಳಿನಿಂದ ಸಂಬಳ ನೀಡಿಲ್ಲ. ಕಳೆದ ಒಂದು ತಿಂಗಳ ಹಿಂದೆಯೇ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದೆವು. ಆದರೆ, ಪ್ರತಿಭಟನೆ ಬೇಡ, ಸಂಬಳ ನೀಡುತ್ತೇವೆ ಎಂದು ಭರವಸೆ ನೀಡಿದ್ದರು. ಇಂದಿಗೂ ಸಂಬಳ ನೀಡಲು ಸಂಸ್ಥೆ ಮುಂದಾಗದ ಹಿನ್ನೆಲೆಯಲ್ಲಿ ಇಂದು ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ಭವ್ಯ ತಿಳಿಸಿದರು. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ತಾಲ್ಲೂಕು ಆರೋಗ್ಯಾಧಿಕಾರಿ ಇಂದೂಧರ್, ಸಮಸ್ಯೆ ಆಲಿಸಿದರು. ಸೋಮವಾರ ಸಂಬಳ ನೀಡಲು ವ್ಯವಸ್ಥೆ ಮಾಡಲಾಗುವುದು ಎಂದು…

Read More

ಕುಶಾಲನಗರ NEWS DESK ಸೆ 10 : ಕುಶಾಲನಗರದ ಐತಿಹಾಸಿಕ  ಶ್ರೀ ಗಣಪತಿ ದೇವಸ್ಥಾನ‌ದ ಅಭಿವೃದ್ಧಿಗೆ ಸುದೀರ್ಘ 45 ವರ್ಷಗಳ‌ ಕಾಲ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ ಸಮಿತಿ ಆಡಳಿತ ಮಂಡಳಿಯ  ಅಧ್ಯಕ್ಷ ಸ್ಥಾನದಿಂದ ನಿವೃತ್ತಿ ಹೊಂದಿದ ವಿ.ಎನ್.ವಸಂತಕುಮಾರ್ ಅವರಿಗೆ ದೇವಸ್ಥಾನದ‌ ನೂತನ ಸಮಿತಿಯ ಆಡಳಿತ ಮಂಡಳಿ ವತಿಯಿಂದ ಪೌರ ಸನ್ಮಾನ ಕಾರ್ಯಕ್ರಮ ಕುಶಾಲನಗರದಲ್ಲಿ ಹಮ್ಮಿಕೊಳ್ಳಲಾಗಿತ್ತು. ಕುಶಾಲನಗರ ಮಾರುತಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮಕ್ಕೆ ಮಡಿಕೇರಿ ಕ್ಷೇತ್ರದ ಮಾಜಿ ಶಾಸಕ ಅಪ್ಪಚ್ಚುರಂಜನ್ ಚಾಲನೆ ನೀಡಿದರು.  ನಂತರ ಮಾತನಾಡಿದ ಅವರು, ದೇವಾಲಯ ಕಾರ್ಯಗಳನ್ನು ಸುಸೂತ್ರವಾಗಿ ನಡೆಸಿಕೊಂಡು ಬರಲು ಎಲ್ಲರಿಗೂ ಸಾಧ್ಯವಾಗುವುದಿಲ್ಲ. 1980 ರಲ್ಲಿ ಸಮಿತಿ ಅಧ್ಯಕ್ಷರಾಗಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ‌ ವಸಂತಕುಮಾರ್ ಅವರ ಕಾರ್ಯ ಶ್ಲಾಘನೀಯ. ಧಾರ್ಮಿಕ ಕೆಲಸ ಕಾರ್ಯಗಳನ್ನು ನಡೆಸುವುದು ಕೇವಲ‌ ಸಂಪತ್ತಿನಿಂದ ಮಾತ್ರವಲ್ಲದೆ ಶುದ್ದ‌ ಮನಸ್ಥಿತಿ ಮೂಲಕ ಕೆಲಸ ನಿರ್ವಹಿಸಬೇಕಾದ ಜವಾಬ್ದಾರಿ ಇರುತ್ತದೆ. ಅಜಾತಶತ್ರು ಗುಣವುಳ್ಳ ಕಾರಣ ವಸಂತಕುಮಾರ್ ಅವರಿಂದ ಈ ಸುದೀರ್ಘ ಕಾರ್ಯ ಸಾಧ್ಯವಾಗಿದೆ. ಅವರ ನಿವೃತ್ತಿ ಜೀವನ ಸುಖಕರವಾಗಿರಲಿ ಎಂದು ಹಾರೈಸಿದರು. ವಿ.ಎನ್.ವಸಂತಕುಮಾರ್ ದಂಪತಿಗಳಿಗೆ ಸನ್ಮಾನ…

Read More

ಮಡಿಕೇರಿ NEWS DESK ಸೆ.10 : 371 ಜೆ  ಮೀಸಲಾತಿ ಕುರಿತು 42 ಅಭ್ಯರ್ಥಿಗಳು ನ್ಯಾಯಾಲಯದಲ್ಲಿ ಪ್ರಕರಣ ದಾಖಲು ಮಾಡಿ  ನ್ಯಾಯಾಲಯ ತಡೆಯಾಜ್ಞೆ ನೀಡಲಾಗಿತ್ತು. ಉಳಿದ 1100ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ತೊಂದರೆಯಾಗುತ್ತಿರುವ ನಿಟ್ಟಿನಲ್ಲಿ ಉನ್ನತ ಶಿಕ್ಷಣ ಸಚಿವರೊಂದಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಅವರು ಉನ್ನತ ಶಿಕ್ಷಣ ಸಚಿವರೊಂದಿಗೆ ಚರ್ಚೆ  ನಡೆಸಿ ಅಗತ್ಯ ಕಾನೂನು ಸಲಹೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ದಿನಾಂಕ  5/9/24  ಶಿಕ್ಷಕರ ದಿನಾಚರಣೆಯಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾಗೂ  ಉನ್ನತ ಶಿಕ್ಷಣ  ಸಚಿವ ಎಂ.ಸಿ.ಸುಧಾಕರ್ ಅವರು ಗೆಜೆಟ್ ಪ್ರಕಟಣೆಯನ್ನು ಬಿಡುಗಡೆ ಮಾಡಿದರು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಅವರು ನೀಡಿದ ಅಗತ್ಯ ಕಾನೂನು ಸಲಹೆಯಂತೆ ಸರ್ಕಾರ  ಆದೇಶ ಹೊರಡಿಸಿದೆ. ಸಹಾಯಕ ಪ್ರಾಧ್ಯಾಪಕರ 2021ರ ಆಯ್ಕೆ ಅಭ್ಯರ್ಥಿಗಳು ಶಾಸಕ ಎ.ಎಸ್ ಪೊನ್ನಣ್ಣ ಅವರನ್ನು ಇಂದು ವಿಧಾನಸೌಧದ ಕಚೇರಿಯಲ್ಲಿ ಅಭಿನಂದಿಸಿದರು.

Read More