ಮಡಿಕೇರಿ NEWS DESK ಸೆ.8 : ಹಾಕತ್ತೂರು- ತೊಂಭತ್ತಮನೆಯಲ್ಲಿ 25ನೇ ವರ್ಷದ ಗಣೇಶೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಶ್ರೀವಿನಾಯಕ ಸಮಿತಿಯ ವತಿಯಿಂದ ಭಜನಾ ಮಂದಿರದಲ್ಲಿ ವಿಶೇಷ ಪೂಜೆ, ಭಜನೆ ಹಾಗೂ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಗಣಪನ ಮೂರ್ತಿಯನ್ನು ವಿದ್ಯುತ್ ಅಲಂಕೃತ ಮಂಟಪದಲ್ಲಿ ಮೆರವಣಿಗೆಯಲ್ಲಿ ಕೊಂಡೊಯ್ದು ಮುತ್ತಾರ್ಮುಡಿ ಹೊಳೆಯಲ್ಲಿ ವಿಸರ್ಜಿಸಲಾಯಿತು. ವಿನಾಯಕನಿಂದ ರಾಕ್ಷಸ ಸಂಹಾರದ ಕಥಾ ಭಾಗದ ಕಲಾಕೃತಿಯ ಚಲನವಲನ ಜನಸ್ತೋಮವನ್ನು ಆಕರ್ಷಿಸಿತು. ಶ್ರೀವಿನಾಯಕ ಸಮಿತಿಯ ಅಧ್ಯಕ್ಷ ರಮೇಶ್ ರೈ, ಕಾರ್ಯದರ್ಶಿ ಟಿ.ಬಿ.ಮಂಜುನಾಥ್. ಉತ್ಸವ ಸಮಿತಿ ಅಧ್ಯಕ್ಷ ಪಿ.ಇ.ದೇವಿಪ್ರಸಾದ್, ಸಮಿತಿ ಸದಸ್ಯರು, ಭಕ್ತರು ಹಾಗೂ ಗ್ರಾಮಸ್ಥರು ಹಾಜರಿದ್ದರು.
ಲೇಖಕ: admin
ಬೆಳಗಾವಿ NEWS DESK ಸೆ.8 : ಬೋಟ್ ಮಗುಚಿ ಇಬ್ಬರು ಯೋಧರು ಸಾವನ್ನಪ್ಪಿರುವ ಘಟನೆ ಭಾನುವಾರ ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಚಂದಘಡ ತಾಲ್ಲೂಕಿನ ಹಾಜಗೋಳಿ ಬಳಿ ನಡೆದಿದೆ. ರಾಜಸ್ಥಾನದ ವಿಜಯಕುಮಾರ್(28) ಹಾಗೂ ಪಶ್ಚಿಮ ಬಂಗಾಳದ ದಿವಾಕರ್ ರಾಯ್(26) ಮೃತಪಟ್ಟಿರುವ ಜೂನಿಯರ್ ಕಮಾಂಡೋಗಳು. ಭಾರತೀಯ ಸೇನೆಯ ಕಮಾಂಡೋಗಳ ತರಬೇತಿ ವೇಳೆ ದುರಂತ ಸಂಭವಿಸಿದೆ. ಬೋಟ್ ನಲ್ಲಿದ್ದ 6 ಮಂದಿಯಲ್ಲಿ ನಾಲ್ವರು ಈಜಿ ಜೀವ ಉಳಿಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನವದೆಹಲಿ NEWS DESK ಸೆ.8 : ಏಷ್ಯನ್ ಚಾಂಪಿಯನ್ಸ್ ಟ್ರೋಫಿಯಲ್ಲಿ ಚೀನಾ ವಿರುದ್ಧ ಭಾರತದ ಪುರುಷರ ಹಾಕಿ ತಂಡ 3-0 ಗೋಲುಗಳಿಂದ ಗೆಲುವು ಸಾಧಿಸಿದೆ. ಭಾರತದ ಪರ ಸುಖ್ ಜೀತ್ ಸಿಂಗ್ (14ನೇ ನಿಮಿಷ), ಉತ್ತಮ್ ಸಿಂಗ್ (27ನೇ), ಮತ್ತು ಅಭಿಷೇಕ್ (32ನೇ) ಗೋಲು ಗಳಿಸಿದರು. ಚೀನಾ ಶೂನ್ಯ ಸಾಧನೆ ಮಾಡಿತು.
ವಿರಾಜಪೇಟೆ NEWS DESK ಸೆ.8 : ಗ್ರಾಮೀಣ ಭಾಗದ ಜನರು ಒಗ್ಗಟ್ಟಿನಿಂದ ಒಂದೆಡೆ ಸೇರಲು ಸಾರ್ವಜನಿಕ ಗಣೇಶೋತ್ಸವವು ವೇದಿಕೆಯಾಗಿದೆ ಎಂದು ವಿರಾಜಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ತಾತಂಡ ಜ್ಯೋತಿ ಪ್ರಕಾಶ್ ಅವರು ಅಭಿಪ್ರಾಯಪಟ್ಟರು. ಬೇಟೋಳಿ ರಾಮನಗರದ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಗಣೇಶೋತ್ಸವದ ಪ್ರಯುಕ್ತ ನಡೆದ ಶಾಲಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು. ಗ್ರಾಮೀಣ ಪ್ರದೇಶದ ಮಕ್ಕಳು ಪ್ರತಿಭೆಯನ್ನು ಅಸಾಧಾರಣವಾಗಿ ಪ್ರದರ್ಶಿಸುತ್ತಿದ್ದಾರೆ. ಮನುಷ್ಯನು ಏನನ್ನು ಬೇಕಾದರೂ ಹಣವನ್ನು ಬಳಸಿ ಪಡೆಯಬಹುದು ಆದರೇ ಸಂತೋಷವನ್ನು ಖರೀದಿಸಲು ಸಾಧ್ಯವಿಲ್ಲ. ಒಬ್ಬರು ಇನ್ನೊಬ್ಬರಿಗೆ ಸಹಾಯ ಮಾಡಿದಾಗ ಮಾತ್ರ ಜೀವನ ಸಾರ್ಥಕವಾಗುತ್ತದೆ. ಜೀವನದ ಪ್ರತಿಯೊಂದು ಕ್ಷಣವನ್ನು ಆನಂದಿಸುವಂತಾಗಬೇಕು ಎಂದರು. ಗಣೇಶೋತ್ಸವದ ಆಚರಣೆಯು ಸಮಾಜದಲ್ಲಿ ಐಕ್ಯತೆ, ಸಾಮರಸ್ಯವನ್ನು ಮೂಡಿಸುತ್ತದೆ ಎಂದು ಹೇಳಿದರು. ಗ್ರಾಮೀಣ ಮಕ್ಕಳು ಶಿಕ್ಷಣದ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಸಾಧನೆಯನ್ನು ತೋರುತ್ತಿರುವುದು ಗಮನಾರ್ಹವಾಗಿದೆ ಎಂದರು. ಈ ಸಂದರ್ಭದಲ್ಲಿ ಹೆಗ್ಗಳ ಶಾಲಾ ಮಕ್ಕಳು ಹಾಗೂ…
ವಿರಾಜಪೇಟೆ NEWS DESK ಸೆ.8 : ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆ.ಎಂ.ಎ.) ನ ಸ್ಥಾಪಕ ಅಧ್ಯಕ್ಷರೂ ಆಗಿರುವ ಹಿರಿಯ ಪತ್ರಕರ್ತ ಮತ್ತು ಕಿತ್ತಳೆ ನಾಡು ಕನ್ನಡ ವಾರಪತ್ರಿಕೆಯ ಪ್ರಧಾನ ಸಂಪಾದಕರಾದ ಕುವೇಂಡ ವೈ.ಹಂಝತುಲ್ಲಾ ಅವರಿಗೆ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ವತಿಯಿಂದ ಮಂಗಳೂರಿನ ಕುದ್ಮಲ್ ರಂಗರಾವ್ ಪುರಭವನದಲ್ಲಿ ಅಕಾಡೆಮಿ ಅಧ್ಯಕ್ಷರಾದ ಯು. ಎಚ್. ಉಮರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಕುವೇಂಡ ವೈ. ಹಂಝತುಲ್ಲಾ ಅವರು, ಕಡಲ ತೀರದ ಶಿಕ್ಷಣ ಪ್ರೇಮಿ, ಅಕ್ಷರ ಸಂತ ಪದ್ಮಶ್ರೀ ಹರೇಕಳ ಹಾಜಬ್ಬ ಅವರಿಂದ ರೂ.50000/- ಸಾವಿರ ನಗದು ಬಹುಮಾನವನ್ನು ಒಳಗೊಂಡ ಈ ಗೌರವ ಪ್ರಶಸ್ತಿಯನ್ನು ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ಮಂಗಳೂರು ವಿಶ್ವವಿದ್ಯಾಲಯದ ಬ್ಯಾರಿ ಅಧ್ಯಯನ ಪೀಠದ ಸಂಯೋಜಕರಾದ ಡಾ. ಅಬೂಬಕ್ಕರ್ ಸಿದ್ದೀಕ್, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ತಾರಾನಾಥ್ ಗಟ್ಟಿ ಕಾಪಿಕಾಡ್, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸ್ಟ್ಯಾನಿ ಜೋಕಿಂ ಆಳ್ವಾರಿಸ್, ಕರ್ನಾಟಕ…
ಮಡಿಕೇರಿ NEWS DESK ಸೆ.8 : ನಾಪೋಕ್ಲು ಕೊಡವ ಸಮಾಜ ರಸ್ತೆಯಲ್ಲಿ ವಾಹನ ನಿಲುಗಡೆ ವ್ಯವಸ್ಥೆಯನ್ನು ಸುಗಮಗೊಳಿಸಬೇಕೆಂದು ಒತ್ತಾಯಿಸಿ ಕೊಡವ ಸಮಾಜದ ಪ್ರಮುಖರು ನಾಪೋಕ್ಲು ಠಾಣಾಧಿಕಾರಿ ಮಂಜುನಾಥ ಅವರಿಗೆ ಮನವಿ ಪತ್ರ ಸಲ್ಲಿಸಿದರು. ನಾಪೋಕ್ಲು ಪಟ್ಟಣದ ಮುಖ್ಯ ರಸ್ತೆ ಹಾಗೂ ಕೊಡವ ಸಮಾಜ ರಸ್ತೆಯಲ್ಲಿ ವಾಹನದಟ್ಟಣೆ ಹೆಚ್ಚಾಗುತ್ತಿದೆ. ಕೊಡವ ಸಮಾಜದಲ್ಲಿ ವಿವಾಹ ಮತ್ತಿತರ ಕಾರ್ಯಕ್ರಮಗಳು ನಡೆಯುವಾಗ ಅತಿ ಹೆಚ್ಚಿನ ವಾಹನಗಳು ಮತ್ತು ಸಾವಿರಾರು ಜನರ ಓಡಾಟವಿರುತ್ತದೆ. ಈ ರಸ್ತೆಯ ಎರಡೂ ಬದಿಯಲ್ಲಿ ಸುಮಾರು ಅರ್ಧ ಕಿ.ಮೀ ದೂರದವರೆಗೂ ವಾಹನಗಳನ್ನು ನಿಲುಗಡೆಗೊಳಿಸುತ್ತಿರುವುದರಿಂದ ಸುಗಮ ಸಂಚಾರಕ್ಕೆ ಅಡಚಣೆಯಾಗುತ್ತಿದೆ. ಅಲ್ಲದೆ ವಾಹನ ನಿಲುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ಚಾಲಕರುಗಳ ನಡುವೆ ಕಲಹ ಏರ್ಪಡುತ್ತಿದೆ. ಆದ್ದರಿಂದ ಪೊಲೀಸ್ ಇಲಾಖೆ ಒಂದೇ ಬದಿಯಲ್ಲಿ ವಾಹನ ನಿಲುಗಡೆಗೆ ವ್ಯವಸ್ಥೆ ಕಲ್ಪಿಸಬೇಕು ಮತ್ತು ವಾಹನಗಳ ಸುಗಮ ಸಂಚಾರಕ್ಕೆ ಕ್ರಮ ಕೈಗೊಳ್ಳಬೇಕೆಂದು ಠಾಣಾಧಿಕಾರಿಗಳ ಬಳಿ ಕೊಡವ ಸಮಾಜದ ಪದಾಧಿಕಾರಿಗಳು ಮನವಿ ಮಾಡಿಕೊಂಡರು. ಮನವಿ ಪತ್ರ ಸಲ್ಲಿಸುವ ಸಂದರ್ಭ ಕೊಡವ ಸಮಾಜದ ಅಧ್ಯಕ್ಷ ಮುಂಡಂಡ ಸಿ.ನಾಣಯ್ಯ,…
ಮಡಿಕೇರಿ NEWS DESK ಸೆ.7 : ಮಡಿಕೇರಿಯ ಇತಿಹಾಸ ಪ್ರಸಿದ್ಧ ಕೋಟೆ ಮಹಾಗಣಪತಿ ದೇವಾಲಯದಲ್ಲಿ ಶ್ರೀಗಣೇಶ ಚತುರ್ಥಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಬೆಳಗ್ಗಿನಿಂದಲೇ ಹೋಮಹವನಾದಿ ವಿಶೇಷ ಪೂಜೆಗಳು ಜರುಗಿದವು. ಅಭಿಷೇಕ, ಅಲಂಕಾರ ಪೂಜೆ, ಅರ್ಚನೆ, ಮಹಾಪೂಜೆಗೆ ಅಧಿಕ ಸಂಖ್ಯೆಯ ಭಕ್ತರು ಸಾಕ್ಷಿಯಾದರು. ಹರಕೆಯ ರೂಪದಲ್ಲಿ ಭಕ್ತರು ಸಾವಿರಾರು ಸಂಖ್ಯೆಯ ಈಡುಗಾಯಿ ಸೇವೆ ಅರ್ಪಿಸಿದರು. ಮಹಾ ಮಂಗಳಾರತಿಯ ನಂತರ ಭಕ್ತ ಸಮೂಹಕ್ಕೆ ಪ್ರಸಾದ ವಿತರಿಸಲಾಯಿತು.
ಮಡಿಕೇರಿ NEWS DESK ಸೆ.7 : ನಗರದ ಶ್ರೀಚೌಡೇಶ್ವರಿ ದೇವಾಲಯದಲ್ಲಿ ಶ್ರೀಗಣೇಶ ಚತುರ್ಥಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಮೆರವಣಿಗೆಯ ಮೂಲಕ ಗಣಪನ ಮೂರ್ತಿಯನ್ನು ತಂದು ದೇವಾಲಯದಲ್ಲಿ ಪ್ರತಿಷ್ಠಾಪಿಸಲಾಯಿತು. ಮೆರಣಿಗೆ ಸಂದರ್ಭ ಸ್ಥಳೀಯ ನಿವಾಸಿಗಳು ವಿಘ್ನ ನಿವಾರಕನಿಗೆ ಪೂಜೆ ಸಲ್ಲಿಸಿದರು. ಮಹಾ ಮಂಗಳಾರತಿಯ ನಂತರ ಭಕ್ತರಿಗೆ ಪ್ರಸಾದ ವಿನಿಯೋಗವಾಯಿತು. ಪ್ರಧಾನ ಅರ್ಚಕ ಸತ್ಯೇಶ್ ಭಟ್ ಅವರ ನೇತೃತ್ವದಲ್ಲಿ ಗೌರಿ ಹಾಗೂ ಗಣೇಶನಿಗೆ ಪೂಜಾ ಕೈಂಕರ್ಯಗಳು ನಡೆದವು.
ಮಡಿಕೇರಿ NEWS DESK ಸೆ.7 : ಮಡಿಕೇರಿ ನಗರದ ಕನ್ನಂಡಬಾಣೆ ಬಡಾವಣೆಯ ಶ್ರೀದೃಷ್ಟಿ ಗಣಪತಿ ದೇವಾಲಯದಲ್ಲಿ ಶ್ರೀಗಣೇಶ ಚತುರ್ಥಿ ಶ್ರದ್ಧಾಭಕ್ತಿಯಿಂದ ಜರುಗಿತು. ಹೋಮ ಹವನಾದಿ, ವಿವಿಧ ಧಾರ್ಮಿಕ ಕೈಂಕರ್ಯ, ಅಭಿಷೇಕ, ಅಲಂಕಾರ ಪೂಜೆ, ಅರ್ಚನೆ, ಮಹಾಪೂಜೆಗೆ ನೂರಾರು ಭಕ್ತರು ಸಾಕ್ಷಿಯಾದರು. ಭಕ್ತರಿಗೆ ಪ್ರಸಾದ ಹಾಗೂ ಅನ್ನಸಂತರ್ಪಣೆಯ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು.
ಮಡಿಕೇರಿ NEWS DESK ಸೆ.7 : ಕೊಡವಾಮೆರ ಕೊಂಡಾಟ ಸಂಘಟನೆಯ ಬೇಡಿಕೆಯಂತೆ ಕೊಡಗು ಜಿಲ್ಲೆಗೆ ಪ್ರತ್ಯೇಕ ಅರಣ್ಯ ವಲಯ ಘೋಷಣೆ ಕುರಿತು ಬೆಂಗಳೂರಿನ ಅರಣ್ಯ ಭವನದಲ್ಲಿ ನಡೆದ ರಾಜ್ಯ ವನ್ಯಜೀವಿ ಮಂಡಳಿ ಸಭೆಯಲ್ಲಿ ಅನೌಪಚಾರಿಕವಾಗಿ ಮಂಡಿಸಲಾಗಿದೆ. ಮುಂದಿನವಾರ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಮತ್ತೊಂದು ಸಭೆ ನಡೆಯಲಿದೆ. ಅಲ್ಲಿ ಮತ್ತೊಮ್ಮೆ ವಿಚಾರವನ್ನು ವಿವರಿಸಿ, ಮುಂದಿನ ಒಂದು ವರ್ಷದ ಅವಧಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳುವ ಪ್ರಯತ್ನ ಮಾಡಲಾಗುವುದು ಎಂದು ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ಮೇರಿಯಂಡ ಸಂಕೇತ್ ಪೂವಯ್ಯ ಅವರು ಹೇಳಿದರು. ಈ ಕುರಿತು ಮನವಿ ಮಾಡಿದ್ದ ಕೊಡವಾಮೆರ ಕೊಂಡಾಟ ಸಂಘಟನೆಯ ಪದಾಧಿಕಾರಿಗಳನ್ನು ಕರೆದು ಸಭೆ ನಡೆಸಿ ಹೆಚ್ಚಿನ ಮಾಹಿತಿ ಪಡೆದ ಅವರು, ಅರಣ್ಯ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿ ಇದರ ಅನಿವಾರ್ಯತೆಯ ಬಗ್ಗೆ ಮನವರಿಕೆ ಮಾಡಲಾಗಿದೆ ಎಂದರು. ಮುಂದಿನವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ ಮತ್ತೆ ವಿಚಾರ ಮಂಡಿಸಲಾಗುವುದು. ಈ ಯೋಜನೆಯಿಂದ ಕೊಡಗಿನ ಅರಣ್ಯ ಗೊಂದಲ ನಿವಾರಣೆ, ಮಾನವ- ವನ್ಯಪ್ರಾಣಿ ಸಂಘರ್ಷವನ್ನೂ…






