ಮಡಿಕೇರಿ NEWS DESK ಜೂ.2 : ರಾಜ್ಯ ಸರಕಾರದ ನೂತನ ಸಚಿವ ಸಂಪುಟದಲ್ಲಿ ಕೊಡಗು ಜಿಲ್ಲೆಯ ಶಾಸಕದ್ವಯರಿಗೆ ಸಚಿವ ಸ್ಥಾನ ನೀಡಬೇಕೆಂದು ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್ ಒತ್ತಾಯಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಮಹಿಳಾ ಕಾಂಗ್ರೆಸ್ ನಗರಾಧ್ಯಕ್ಷೆ ಶಶಿಕಲಾ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ.ಶಿವಕುಮಾರ್ ಅವರು ಈ ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳುತ್ತಿರುವುದು ಹೆಮ್ಮೆ ಎನಿಸಿದೆ. ಇವರ ನೇತೃತ್ವದ ಸಚಿವ ಸಂಪುಟದಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡಿದಲ್ಲಿ ರಾಜ್ಯದ ಪ್ರಗತಿಗೆ ಮತ್ತು ಉತ್ತಮ ಆಡಳಿತಕ್ಕೆ ಸಹಕಾರಿಯಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಜಿಲ್ಲೆಯ ಇಬ್ಬರು ಶಾಸಕರು ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿ ಮಹಿಳಾ ಸಬಲೀಕರಣ ಮತ್ತು ಸ್ವಾಭಿಮಾನದ ಬದುಕಿಗೆ ಸಹಕಾರ ನೀಡಿದ್ದಾರೆ. ಮಹಿಳಾ ಕಾಂಗ್ರೆಸ್ ಘಟಕದ ಸಂಘಟನೆಗೂ ಪ್ರೋತ್ಸಾಹ ನೀಡಿರುವ ಇವರು ಜನಸ್ನೇಹಿ ಶಾಸಕರಾಗಿ ಜಿಲ್ಲೆ ಮಾತ್ರವಲ್ಲದೆ ರಾಜ್ಯದಲ್ಲೂ ಮನೆ ಮಾತಾಗಿದ್ದಾರೆ. ಅಭಿವೃದ್ಧಿ…
ಲೇಖಕ: admin
ಮಡಿಕೇರಿ NEWS DESK ಜೂ.2 : ಶಾಸಕಾಂಗ ಪಕ್ಷದ ನಾಯಕ ಡಿ.ಕೆ.ಶಿವಕುಮಾರ್ ಅವರ ನೇತೃತ್ವದ ಸರಕಾರ ರಚನೆಯ ಸಂದರ್ಭ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಕೊಡಗು ಜಿಲ್ಲಾ ತೀಯನ್ ಮಹಾಸಭಾ ಒತ್ತಾಯಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಮಹಾಸಭಾದ ಸಂಘಟನಾ ಕಾರ್ಯದರ್ಶಿ ಸುದರ್ಶನ್ ಎನ್.ಸಿ ಅವರು ದಕ್ಷ ಆಡಳಿತಕ್ಕೆ ಹೆಸರಾಗಿರುವ ಜಿಲ್ಲೆಯ ಇಬ್ಬರು ಶಾಸಕರು ಸಚಿವ ಸ್ಥಾನವನ್ನು ಅಲಂಕರಿಸಲು ಸಮರ್ಥರಾಗಿದ್ದಾರೆ. ಇವರ ಸೇವೆ ರಾಜ್ಯ ಮಟ್ಟಕ್ಕೆ ವ್ಯಾಪಿಸಲು ಸಚಿವ ಸ್ಥಾನವನ್ನು ನೀಡುವುದು ಸೂಕ್ತ ಎಂದು ತಿಳಿಸಿದ್ದಾರೆ. ಕೊಡಗಿನ ಅಭಿವೃದ್ಧಿಗೆ ಆದ್ಯತೆ ನೀಡಿರುವ ಶಾಸಕರು ಕಳೆದ ಮೂರು ವರ್ಷಗಳಲ್ಲಿ ಅನೇಕ ಪ್ರಗತಿ ಕಾರ್ಯಗಳನ್ನು ಕೈಗೊಂಡಿದ್ದಾರೆ. ಎಲ್ಲಾ ಸಮುದಾಯವನ್ನು ಒಗ್ಗಟ್ಟಿನಿಂದ ಮುನ್ನಡೆಸುತ್ತಿದ್ದು, ಪ್ರತಿಯೊಂದು ಜನಾಂಗದ ಶ್ರೇಯೋಭಿವೃದ್ಧಿಗೆ ಸಹಕಾರ ನೀಡುತ್ತಿದ್ದಾರೆ. ಇವರಿಬ್ಬರಿಗೆ ಸಚಿವ ಸ್ಥಾನ ನೀಡಿದರೆ ಜಿಲ್ಲೆ ಮತ್ತಷ್ಟು ಅಭಿವೃದ್ಧಿ ಹೊಂದಲಿದೆ, ಅಲ್ಲದೆ ಜನಪರ ಕಾರ್ಯಗಳು ಅನುಷ್ಠಾನಗೊಳ್ಳಲಿದೆ. ನೂತನ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು…
ಕೂಡಿಗೆ, ಮೇ 1 NEWS DESK : ಕೊಡಗು ಸೇರಿದಂತೆ ಹಾಸನ, ಚಿಕ್ಕಮಗಳೂರು ಜಿಲ್ಲೆಯು ಹಾಸನ ಹಾಲು ಒಕ್ಕೂಟಕ್ಕೆ ಒಳಗೊಂಡಿದ್ದು , ಮೂರು ಜಿಲ್ಲೆಯ ಹಾಲು ಉತ್ಪಾದಕರ ಸಹಕಾರ ಸಂಘಗಳ ಮೂಲಕ ದಿನಂಪ್ರತಿ ಬೆಳಿಗ್ಗೆ ಮತ್ತು ಸಂಜೆ ಸೇರಿದಂತೆ ಒಂದು ದಿನಕ್ಕೆ 16.ಲಕ್ಷ ಲೀಟರ್ ಹಾಲು ಸಂಗ್ರಹಿಸಲಾಗುತ್ತಿದೆ. ಅದರ ಮುಖೇನ ರೈತರ ಅಭಿವೃದ್ಧಿ ಸಹಕಾರ ಮತ್ತು ಸಹಕಾರ ಸಂಘಗಳು ಪ್ರಗತಿಗೆ ಪೂರಕವಾದ ಯೋಜನೆಗಳನ್ನು ಹಮ್ಮಿಕೊಂಡು ಒಕ್ಕೂಟವು ಪ್ರಗತಿಯತ್ತ ಸಾಗುತ್ತಿದೆ. ರೈತರು ಗುಣಮಟ್ಟದ ಹಾಲನ್ನು ಸಂಘಕ್ಕೆ ಹಾಕಬೇಕಾಗಿದೆ ಎಂದು ಕೊಡಗು ಜಿಲ್ಲೆಯ ಹಾಸನ ಹಾಲು ಒಕ್ಕೂಟದ ಜಿಲ್ಲಾ ನಿರ್ದೇಶಕ, ಕೂಡುಮಂಗಳೂರು ಸಹಕಾರ ಸಂಘದ ಅಧ್ಯಕ್ಷ ಕೆ.ಕೆ.ಹೇಮಂತ್ ಕುಮಾರ್ ಅವರು ಹೇಳಿದರು. ವಿಶ್ವ ಹಾಲು ದಿನಾಚರಣೆ ಅಂಗವಾಗಿ ಶಿರಂಗಾಲ ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ನಡೆದ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತಾನಾಡಿದರು. ಹೆಚ್ಚು ಹಾಲು ಸಂಗ್ರಹದಿಂದ ಹೆಚ್ಚು ಉತ್ಪನ್ನಗಳು ತಯಾರಿಸುವ ಹಿನ್ನೆಲೆಯಲ್ಲಿ ಈಗಾಗಲೇ ಒಕ್ಕೂಟದ ಅಧ್ಯಕ್ಷ ಹೆಚ್.ಡಿ. ರೇವಣ್ಣ ಅವರ…
ವಿರಾಜಪೇಟೆ ಜೂ.1 NEWS DESK : ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ವಿರಾಜಪೇಟೆಯವರಾದ ಮುಲ್ಲೇರ ಪೊನ್ನಮ್ಮ ಪೂವಣ್ಣ ಅವರು ಸಾಧನೆ ಮಾಡಿದ್ದಾರೆ. ಗೋವಾದ ಬ್ಯಾಂಬೋಲಿಮ್ ನಲ್ಲಿ ಜರುಗಿದ ಮೂರನೇ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ಭಾಗವಹಿಸಿ ಶೋಟ್ ಪುಟ್ ನಲ್ಲಿ ಪ್ರಥಮ ಸ್ಥಾನ ಹಾಗೂ 100 ಮೀ ಓಟದಲ್ಲಿ ಹಾಗೂ ಜಾವೆಲಿನ್ ನಲ್ಲಿಯೂ ಪ್ರಥಮ ಸ್ಥಾನ ಪಡೆದು ಜಿಲ್ಲೆಗೆ ಹಾಗೂ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.
ಸೋಮವಾರಪೇಟೆ ಜೂ.1 NEWS DESK : ಕೊಡಗು ಜಿಲ್ಲೆಯ ವೀರಶೈವ ಜಂಗಮ ಅರ್ಚಕರ ಮತ್ತು ಪುರೋಹಿತರ ಸಂಘದ ವಾರ್ಷಿಕ ಮಹಾಸಭೆ ಸೋಮವಾರಪೇಟೆಯ ವಿರಕ್ತ ಮಠದಲ್ಲಿ ಭಾನುವಾರ ಜರುಗಿತು. ಕೊಡ್ಲಿಪೇಟೆ ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ ಹಾಗೂ ಸೋಮವಾರಪೇಟೆ ವಿರಕ್ತ ಮಠದ ಶ್ರೀ ನಿಶ್ಚಲ ನಿರಂಜನ ದೇಶಿಕೇಂದ್ರ ಮಹಾಸ್ವಾಮಿ ಅವರ ಸಾನಿಧ್ಯದಲ್ಲಿ ಸಭೆ ನಡೆಯಿತು. ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಮೂರ್ತಿ, ಅರ್ಚಕರು ಮತ್ತು ಪುರೋಹಿತರ ಪುರೋಹಿತರ ಸಂಘದ ಜಿಲ್ಲಾ ಅಧ್ಯಕ್ಷ ಎಫ್.ಸಿ.ಹಿರೇಮಠಶಾಸ್ತ್ರಿ, ಉಪಾಧ್ಯಕ್ಷ ಮಹೇಶ್ ಜಿ.ಶಾಸ್ತ್ರಿ, ಕಾರ್ಯದರ್ಶಿ ಬಸವಕುಮಾರ ಶಾಸ್ತ್ರಿ, ಖಜಾಂಚಿ ಅಭಿಮಠದ ಮಹೇಶ್ ಶಾಸ್ತ್ರಿ, ನಿರ್ದೇಶಕರಾದ ಚಂದ್ರಶೇಖರ ಶಾಸ್ತ್ರಿ, ವೀರಯ್ಯ ಹಿರೇಮಠ, ಶಾಂತಮಲ್ಲಯ್ಯ, ನಂಜುಂಡಪ್ಪ, ಜಂಬೂರು ನಂಜಪ್ಪ,ಸೋಮಶೇಖರ, ಪುಷ್ಪಗಿರಿ ನಂದೀಶ್,ತ್ರಿಶಂಕು ಕುಮಾರ್, ವಿರೂಪಾಕ್ಷ ಇದ್ದರು.
ಮಡಿಕೇರಿ ಜೂ.1 NEWS DESK : ಹೂಗುಚ್ಛ ಮತ್ತು ಸಿಹಿಯನ್ನು ನೀಡುವುದರೊಂದಿಗೆ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಲಾಯಿತು. ಮಡಿಕೇರಿ ಪಿಎಂಶ್ರೀ ಶಾಲೆ ವತಿಯಿಂದ ಶಾಲಾ ಪ್ರಾರಂಭೋತ್ಸವ ಪ್ರಯುಕ್ತ ವಿದ್ಯಾರ್ಥಿಗಳಿಗೆ ಹೂಗುಚ್ಛ ಮತ್ತು ಸಿಹಿಯನ್ನು ವಿತರಿಸುವ ಮೂಲಕ ವಿದ್ಯಾರ್ಥಿಗಳನ್ನು ಶಾಲೆಗೆ ಸ್ವಾಗತದ ಮೂಲಕ ಬರಮಾಡಿಕೊಳ್ಳಲಾಯಿತು. ವಿದ್ಯಾರ್ಥಿಗಳು ತುಂಬಾ ಆಸಕ್ತಿಯಿಂದ ಸರ್ಕಾರಿ ಶಾಲೆಗೆ ಬರುವುದರಿಂದ ಸರ್ಕಾರಿ ಶಾಲೆಯ ಗುಣಮಟ್ಟ ಹೆಚ್ಚಾಗುತ್ತದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಬಸವರಾಜು ತಿಳಿಸಿದರು. ಹಾಗೆಯೇ ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ಮಾಡಿದಾಗ ವಿದ್ಯಾರ್ಥಿಗಳು ತುಂಬಾ ಸಂತಸದಿಂದ ಶಾಲೆಗೆ ಬಂದಿದ್ದೇವೆ ಎಂಬ ಮಾತನ್ನು ವ್ಯಕ್ತಪಡಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್, ಎಸ್ಡಿಎಂಸಿ ಅಧ್ಯಕ್ಷರಾದ ಜಗದೀಶ್, ಶಾಲಾ ಮುಖ್ಯೋಪಾಧ್ಯಾಯನಿ ಭವಾನಿ, ಉಪ ನಿರ್ದೇಶಕರ ಕಚೇರಿಯ ಡಿಪಿಇಒ ಶ್ರೀನಿವಾಸ್, ಡಿವೈಪಿಸಿ ಕೃಷ್ಣಪ್ಪ, ವಿಷಯ ಪರಿವೀಕ್ಷಕರಾದ ಬಿಂದು, ಕ್ಷೇತ್ರ ಸಮನ್ವಯ ಅಧಿಕಾರಿ ಶರ್ಮಿಳ, ಡಾ.ಸದಾಶಿವಯ್ಯ ಎಸ್ ಪಲ್ಲೆದ್, ಶಾಲಾ ಶಿಕ್ಷಕರು ಮತ್ತು ಪೆÇೀಷಕರು ಒಳಗೊಂಡಂತೆ ವಿದ್ಯಾರ್ಥಿಗಳನ್ನು ಸಂಭ್ರಮದಿಂದ ಶಾಲೆಗೆ ಬರಮಾಡಿಕೊಳ್ಳಲಾಯಿತು.
ಮಡಿಕೇರಿ ಜೂ.1 NEWSD DESK : ಮಕ್ಕಳಲ್ಲಿ ಕನ್ನಡ ಪ್ರೇಮವನ್ನು ಕಡ್ಡಾಯವಾಗಿ ಬೆಳೆಸಿ ಎಂದು ಪೊನ್ನಂಪೇಟೆ ತಾಲ್ಲೂಕು ಕನ್ನಡ ಸಾಹಿತ್ಯ ಪ್ರಥಮ ಸಮ್ಮೇಳನ ಅಧ್ಯಕ್ಷರಾದ ಟಿ.ಎಸ್.ಗೋಪಾಲ್ ಅವರು ಕರೆ ನೀಡಿದ್ದಾರೆ. ಪೊನ್ನಂಪೇಟೆ ತಾಲ್ಲೂಕಿನ ಹುದಿಕೇರಿಯ ಜನತಾ ಪ್ರೌಢಶಾಲಾ ಮೈದಾನದ ಕೂರ್ಗ್ ಸ್ಟಾರ್ ಚೆಕ್ಕೇರ ಅಪ್ಪಯ್ಯ ವೇದಿಕೆಯಲ್ಲಿ ಸೋಮವಾರ ನಡೆದ ತಾಲ್ಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕನ್ನಡ ಭಾಷೆಗೆ ಸುಮಾರು 2 ಸಾವಿರಕ್ಕೂ ಹೆಚ್ಚು ವರ್ಷಗಳ ಇತಿಹಾಸವಿದ್ದು, ತನ್ನದೇ ಆದ ಪ್ರಾಚೀನ ಇತಿಹಾಸ ಹೊಂದಿದೆ. ದಕ್ಷಿಣ ಭಾರತದ ದ್ರಾವಿಡ ಭಾಷೆಯಲ್ಲಿ ಕನ್ನಡ ಸೊಗಸಾದ ಭಾಷೆಯಾಗಿದ್ದು, ಮಕ್ಕಳಿಗೆ ಕನ್ನಡ ಭಾಷೆಯನ್ನು ಸರಳೀಕರಿಸಿ ಕಲಿಸುವಂತಾಗಬೇಕು ಎಂದು ಸಲಹೆ ಮಾಡಿದರು. ನಾಡಿನ ಭಾಷೆಯಾದ ಕನ್ನಡವನ್ನು ಹೆಚ್ಚು ಹೆಚ್ಚು ಕಲಿಯಬೇಕು. ಮಾತೃ ಭಾಷೆ ಜೊತೆಗೆ ನಾಡಿನ ಭಾಷೆಯನ್ನು ಕಲಿಸಬೇಕು ಎಂದು ಟಿ.ಎಸ್.ಗೋಪಾಲ್ ಅವರು ಹೇಳಿದರು. ದಕ್ಷಿಣ ಕೊಡಗಿನ ಭಾಗದಲ್ಲಿ ಕೇರಳ ರಾಜ್ಯಕ್ಕೆ ಹೊಂದಿಕೊಂಡಿರುವುದರಿಂದ ಕನ್ನಡ, ಕೊಡವ, ಮಲೆಯಾಳ, ಆದಿವಾಸಿ ಭಾಷೆಗಳನ್ನು ಮಾತನಾಡುತ್ತಾರೆ.…
ಸುಂಟಿಕೊಪ್ಪ ಜೂ.1 NEWS DESK : ಶಾಲಾ ಪ್ರಾರಂಭೋತ್ಸವದ ಅಂಗವಾಗಿ ಸುಂಟಿಕೊಪ್ಪ ವ್ಯಾಪ್ತಿಯ ಶಾಲೆಗಳಲ್ಲಿ ಬಾಳೆಗಿಡ ತಳಿರುತೋರಣ ಮಕ್ಕಳಿಗೆ ಪುಷ್ಪ ನೀಡಿ ಸಿಹಿ ಹಂಚುವ ಮೂಲಕ ಶಿಕ್ಷಕರು ಸ್ವಾಗತ ಕೋರಿದರು. ಸುಂಟಿಕೊಪ್ಪ ಸರಕಾರಿ ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಸಂತ ಅಂತೋಣಿ ಹಿರಿಯ ಪ್ರಾಥಮಿಕ ಹಾಗೂ ಗದ್ದೆಹಳ್ಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಸೋಮವಾರದಂದು ಹಬ್ಬದ ವಾತವರಣ ಕಂಡು ಬಂತು 2 ತಿಂಗಳ ಬರೋಬರಿ ರಜೆಯನ್ನು ಮುಗಿಸಿ ಮರಳಿ ಶಾಲೆಗೆ ಹೋಗುವ ದಿನ ಸಮೀಪಿಸಿ ಇಂದಿನಿಂದ ಸರಕಾರದ ಘೋಷವಾಕ್ಯವಾದ ಮರಳಿ ಶಾಲೆಗೆ ಬಾ ಎಂಬುದನ್ನು ಪೋಷಕರು ಮಕ್ಕಳನ್ನು ಶಾಲೆಗೆ ತಂದು ಬಿಡುತ್ತಿದ್ದದು ಕಂಡು ಬಂತು. ಶಿಕ್ಷಣ ಇಲಾಖೆಯ ಸುತ್ತೋಲೆಯಂತೆ ಜೂ.1 ರಂದು ಶಾಲೆಗಳನ್ನು ತೆರೆಯುವ ಆದೇಶದ ಮೇರೆ ಮಕ್ಕಳಿಗೆ ಅಧಿಕೃತವಾಗಿ ಶಾಲಾ ಪ್ರಾರಂಭೋತ್ಸವವನ್ನು ಮಾಡಿದ ಹಿನ್ನಲೆಯಲ್ಲಿ ಇದೀಗ ಪ್ರಾಥಮಿಕ ಪ್ರೌಢಶಾಲಾ ಮತ್ತೊಂದು ವರ್ಷದ ಶೈಕ್ಷಣಿಕ ಸಾಧನೆಗಾಗಿ ಶಾಲೆಯತ್ತ ಮುಖ ಮಾಡಿದ್ದಾರೆ. ಸರಕಾರಿ ಪ್ರಾಥಮಿಕ ಶಾಲೆಯ ಮುಖ್ಯೋಪಾದ್ಯಾಯರಾದ ವೈ.ಸಿ.ಕುಮಾರ್, ಪ್ರೌಢಶಾಲೆಯ ಮುಖ್ಯೋಪಾದ್ಯಾಯರಾದ ಬಾಲಕೃಷ್ಣ, ಸಂತ…
ಮಡಿಕೇರಿ ಜೂ.1 NEWS DESK : ಸರ್ಕಾರಿ ಶಾಲೆ ಶಿಕ್ಷಕರೊಬ್ಬರು ವಯೋನಿವೃತ್ತಿ ಬಳಿಕ ಒಂದು ವರ್ಷ ಕಾಲ ಸ್ವಇಚ್ಛೆಯಿಂದ ತನ್ನ ಸೇವೆಯನ್ನು ನೀಡುವ ಮಹತ್ವ ನಿರ್ಧಾರ ಕೈಗೊಳ್ಳುವ ಮೂಲಕ ಮಾದರಿ ನಡೆ ತೋರಿದ್ದಾರೆ. ಮಡಿಕೇರಿ ತಾಲೂಕಿನ ಕ್ಲೋಸ್‌ಬರ್ನ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯಶಿಕ್ಷಕರಾಗಿದ್ದ ಎಂ.ಟಿ. ಲಕ್ಷ್ಮೀ ಈ ಮಾದರಿ ನಿರ್ಧಾರ ತೆಗೆದುಕೊಂಡವರು. 32 ವರ್ಷ ಕಾಲ ಶಿಕ್ಷಕರಾಗಿ ಕಾರ್ಯನಿರ್ವಹಿಸಿದ ಅವರು ಮೇ 30ಕ್ಕೆ ವಯೋನಿವೃತ್ತಿಯಾದರು. ಈ ಹಿನ್ನೆಲೆಯಲ್ಲಿ ಅವರಿಗೆ ಬೀಳ್ಕೊಡುಗೆ ಸಮಾರಂಭ ಶಾಲೆಯಲ್ಲಿ ನಡೆಯಿತು. ಈ ವೇಳೆ ಸಹಶಿಕ್ಷಕರು, ಎಸ್‌ಡಿಎಂಸಿ, ಹಳೆ ವಿದ್ಯಾರ್ಥಿಗಳು ಉಡುಗೊರೆ, ಫಲತಾಂಬೂಲ ನೀಡಿ ಗೌರವಿಸಿದರು. ಗೌರವ ಸ್ವೀಕರಿಸಿ ಮಾತನಾಡಿದ ಲಕ್ಷ್ಮೀ, 1994ರಲ್ಲಿ ಆರಂಭಿಸಿ ಶಿಕ್ಷಕ ವೃತ್ತಿ ವಿವಿಧ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸಲು ಅವಕಾಶ ಮಾಡಿಕೊಟ್ಟಿದೆ. ಈ ಅವಧಿಯಲ್ಲಿ ಸಹಶಿಕ್ಷಕರು, ವಿದ್ಯಾರ್ಥಿಗಳು, ಶಿಕ್ಷಕರು, ಗ್ರಾಮಸ್ಥರು ನನಗೆ ಸಹಕರಿಸಿದ್ದಾರೆ. ಮಕ್ಕಳೊಂದಿಗೆ ಬೆರೆತು ಪಠ್ಯ ಚಟುವಟಿಕೆಯನ್ನು ಕಲಿಸುವುದನ್ನು ಆರಂಭದಿಂದಲೇ ಮೈಗೂಡಿಸಿಕೊಂಡಿದ್ದೆ. ಇಂದಿನವರೆಗೂ ಅದನ್ನೇ ಮುಂದುವರೆಕೊಂಡು ಬಂದಿದ್ದೇನೆ ಎಂದರು. ಕ್ಲೋಸ್‌ಬರ್ನ್ ಶಾಲೆಯಲ್ಲಿ…
ಕುಶಾಲನಗರ ಜೂ.1 NEWS DESK : ನದಿ ಪರಿಸರ ಸಂರಕ್ಷಣೆ ಬಗ್ಗೆ ಗಮನಹರಿಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ ಎಂದು ಕುಶಾಲನಗರ ತಾಲೂಕು ತಹಸಿಲ್ದಾರ್ ಕಿರಣ್ ಜಿ.ಗೌರಯ್ಯ ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಕುಶಾಲನಗರ ಕಾವೇರಿ ಮಹಾ ಆರತಿ ಬಳಗ ಮತ್ತು ನಮಾಮಿ ಕಾವೇರಿ ಆಶ್ರಯದಲ್ಲಿ ನಡೆದ 186 ನೇ ಮಹಾ ಆರತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ನದಿ ಕೆರೆ ತಟಗಳಲ್ಲಿ ಯಾವುದೇ ಶಾಶ್ವತ ಕಟ್ಟಡಗಳ ನಿರ್ಮಾಣ ಸಂದರ್ಭ ಸರ್ಕಾರದ ಅಗತ್ಯ ನಿಯಮಗಳನ್ನು ಪಾಲಿಸುವ ಮೂಲಕ ನದಿ ತಟಗಳ ಅಭಿವೃದ್ಧಿಗೆ ಕೈಜೋಡಿಸಬೇಕು. ಕಳೆದ ಹಲವು ವರ್ಷಗಳಿಂದ ಕಾವೇರಿ ನದಿ ಸ್ವಚ್ಛತಾ ಆಂದೋಲನ ಕಾರ್ಯಕ್ರಮ ಮೂಲಕ ಸ್ವಚ್ಛಕಾವೇರಿಯ ಕಾರ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಜನರಲ್ಲಿ ಜಾಗೃತಿ ಮೂಡಿಸಿರುವ ಬಗ್ಗೆ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭ ಆರತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಡಗು ಜಿಲ್ಲಾ ನಿರ್ದೇಶಕರಾದ ವಿಠ್ಠಲ್ ಸಾಲಿಯಾನ್ ಮಾತನಾಡಿ, ಯೋಜನೆಯ ಸದಸ್ಯರು ಕಾರ್ಯಕರ್ತರು ಧಾರ್ಮಿಕ ಮತ್ತು ಶ್ರದ್ಧಾ ಕೇಂದ್ರಗಳ ಸ್ವಚ್ಛತಾ…






