ಮಡಿಕೇರಿ ಸೆ.6 NEWS DESK : ರಾಜ್ಯವು ಕರ್ನಾಟಕವೆಂದು ನಾಮಕರಣಗೊಂಡು ಐದು ದಶಕಗಳು ಪೂರೈಸಿದ ಹಿನ್ನೆಲೆಯಲ್ಲಿ ‘ಕನ್ನಡ ಸುವರ್ಣ ಸಂಭ್ರಮ ರಥ’ಯಾತ್ರೆಯು ಕೊಡಗು ಜಿಲ್ಲೆಯ ಪೊನ್ನಂಪೇಟೆಗೆ ಸೆ.7 ರಂದು ಆಗಮಿಸಲಿದೆ. ಆ ನಿಟ್ಟಿನಲ್ಲಿ ಸೆ.7 ರಂದು ಬೆಳಗ್ಗೆ 9 ಗಂಟೆಗೆ ಪೊನ್ನಂಪೇಟೆ ತಾಲ್ಲೂಕಿನ ಆನೆಚೌಕುರಿನ ಗೇಟಿನ ಬಳಿ ‘ಕರ್ನಾಟಕ ಸಂಭ್ರಮ-50 ರ ಪ್ರಯುಕ್ತ ಜ್ಯೋತಿ ರಥಯಾತ್ರೆಯನ್ನು ಬರಮಾಡಿಕೊಳ್ಳಲಾಗುತ್ತದೆ. ಸೆ.8 ರಂದು ಪೊನ್ನಂಪೇಟೆಯಿಂದ ಹೊರಟು ವಿರಾಜಪೇಟೆ, ಸೆಪ್ಟೆಂಬರ್, 09 ರಂದು ವಿರಾಜಪೇಟೆಯಿಂದ ಮಡಿಕೇರಿಗೆ ಆಗಮಿಸಲಿದೆ. ಸೆಪ್ಟೆಂಬರ್, 10 ರಂದು ಮಡಿಕೇರಿಯಿಂದ ಸೋಮವಾರಪೇಟೆ ಮತ್ತು ಸೆಪ್ಟೆಂಬರ್, 11 ರಂದು ಸೋಮವಾರಪೇಟೆಯಿಂದ ಕುಶಾಲನಗರಕ್ಕೆ ತೆರಳಲಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ.
ಲೇಖಕ: admin
ಮೂರ್ನಾಡು ಸೆ.6 NEWS DESK : ಮೂರ್ನಾಡಿನ ಸಹಕಾರ ಸ್ಪೋಟ್ರ್ಸ್ ಕ್ಲಬ್ ವತಿಯಿಂದ 100ನೇ ವರ್ಷದ ಕೈಲ್ ಮುಹೂರ್ತ (ಕೈಲ್‍ಪೊಳ್ದ್) ಹಬ್ಬದ ಶತಮಾನೋತ್ಸವ ಸಂಭ್ರಮದ ಆಟೋಟಗಳ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು. ಮೂರ್ನಾಡು ವಿದ್ಯಾ ಸಂಸ್ಥೆಯ ಬಾಚೆಟ್ಟಿರ ಲಾಲು ಮುದ್ದಯ್ಯ ಕ್ರೀಡಾಂಗಣದಲ್ಲಿ ಕ್ಲಬ್ ವತಿಯಿಂದ ಆಯೋಜಿಸಲಾಗಿದ್ದ ಆಟೋಟಗಳ ಕಾರ್ಯಕ್ರಮಗಳನ್ನು ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಂದರ್ ರಾಜ್ ತೆಂಗಿನ ಕಾಯಿಗೆ ಗುಂಡು ಹೊಡೆಯುವ ಮೂಲಕ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಕೊಡಗು ಜಿಲ್ಲೆಯಲ್ಲಿ ಕೈಲ್ ಮುಹೂರ್ತ ಹಬ್ಬವನ್ನು ಬಹಳ ಸಂಭ್ರಮ ಸಡಗರದಿಂದ ಆಚರಿಸಲಾಗುತ್ತದೆ. ಹಬ್ಬದ ದಿನದಂದು ಎಲ್ಲರೂ ಒಟ್ಟಾಗಿ ಸೇರುವ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದು ಸಂತೋಷದ ವಿಷಯವಾಗಿದೆ ಎಂದು ಹೇಳಿದರು. ಜಿಲ್ಲಾ ಅಪರ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಮಾತನಾಡಿ ಕೊಡಗಿನ ಹಬ್ಬಗಳ ಆಚರಣೆಗಳು ವಿಶೇಷ, ವೈಶಿಷ್ಟ್ಯಗಳಿಂದ ಕೂಡಿದೆ. ಕ್ರೀಡೆಗೆ ಹೆಸರುವಾಸಿಯಾದ ಕೊಡಗು ಜಿಲ್ಲೆಯ ಜನತೆ ಗ್ರಾಮೀಣ ಮಟ್ಟದಲ್ಲಿ ಹಲವಾರು ಕ್ರೀಡೆಗಳನ್ನು ಆಯೋಜಿಸಿ ಭಾಗವಹಿಸುವುದು ಕೂಡ ವಿಶೇಷ ಎಂದು ಅಭಿಪ್ರಾಯಪಟ್ಟರು. ಪುರುಷರು, ಮಹಿಳೆಯರು, ಶಾಲಾ…
ಸಿದ್ದಾಪುರ ಆ.6 NEWS DESK : ವಿರಾಜಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು. ಸಿದ್ದಾಪುರ ಪ್ರೌಢಶಾಲೆಯಲ್ಲಿ ಹಲವು ವರ್ಷ ಸೇವೆ ಸಲ್ಲಸಿ, ನಿವೃತ್ತರಾಗಿರುವ ಕೃಷ್ಣವೇಣಿ ಮತ್ತು ವೇಣುಗೋಪಾಲ್ ದಂಪತಿಗಳನ್ನು ಸಂಘದ ವತಿಯಿಂದ ಸನ್ಮಾನಿ ಗೌರವಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ನಿವೃತ ಶಿಕ್ಷಕಿ ಕೃಷ್ಣವೇಣಿ, ಗುರುಶ್ರೇಷ್ಠರಾದ ಭಾರತರತ್ನ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನವನ್ನು ಶಿಕ್ಷಕರ ದಿನವಾಗಿ ಆಚರಿಸುತ್ತಿದ್ದು, ತಮ್ಮ ಸೇವೆಯನ್ನು ಗುರುತಿಸಿ ಸನ್ಮಾನಿಸುತ್ತಿರುವುದು ನಿವೃತ ಬದುಕಿನಲ್ಲಿ ಸಂತೋಷ ತಂದಿದೆ ಎಂದರು. ಸಂಘದ ಅಧ್ಯಕ್ಷರಾದ ರೆಜಿತ್ ಕುಮಾರ್ ಗುಹ್ಯ ಮಾತನಾಡಿ, ಜೀವನದ ಅಮೂಲ್ಯವಾದ ಸಂಪತ್ತು ವಿದ್ಯೆ. ವಿದ್ಯಾರ್ಥಿ ಜೀವನದಲ್ಲಿ ನಮ್ಮ ತಪ್ಪುಗಳನ್ನು ತಿದ್ದಿ, ಉತ್ತಮ ಭವಿಷ್ಯದೆಡೆಗೆ ದಾರಿ ತೋರಿಸಿದ ಶಿಕ್ಷಕರನ್ನು ಗೌರವಿಸಬೇಕು. ನೂರಾರು ವಿದ್ಯಾರ್ಥಿಗಳ ಬದುಕನ್ನು ರೂಪಿಸಿದ ಶಿಕ್ಷಕರಿಗೆ ಗೌರವ ನೀಡಬೇಕು ಎಂದರು. ಈ ಸಂದರ್ಭ ವಿರಾಜಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತ ಸಂಘದ ಪ್ರಧಾನ ಕಾರ್ಯದರ್ಶಿ ಎ.ಎಸ್.ಮುಸ್ತಫ, ಉಪಾಧ್ಯಕ್ಷ ಪುತ್ತಂ ಪ್ರದೀಪ್, ಸದಸ್ಯರಾದ ಎ.ಎನ್.ವಾಸು,…
ಸುಂಟಿಕೊಪ್ಪ NEWS DESK ಸೆ.5 : ಕೊಡಗರಹಳ್ಳಿಯ ನಡಿಕೇರಿಯಂಡ ದಿ.ದೇವಯ್ಯ ಅವರ ಪತ್ನಿ ನಂಜಮ್ಮ ದೇವಯ್ಯ (105) ಅವರು ಗುರುವಾರ ಸಂಜೆ 4 ಗಂಟೆಗೆ ನಿಧನ ಹೊಂದಿದರು. ಮೃತರ ಅಂತ್ಯಕ್ರಿಯೆ ಶುಕ್ರವಾರ (ಸೆ.6) ಮಧ್ಯಾಹ್ನ 2 ಗಂಟೆಗೆ ಮೃತರ ಸ್ವಗೃಹದಲ್ಲಿ ನೇರವೇರಲಿದೆ. ಮೃತರು ನಾಲ್ವರು ಪುತ್ರಿಯರು ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.
ಸುಂಟಿಕೊಪ್ಪ NEWS DESK ಸೆ.5 : ಸುಂಟಿಕೊಪ್ಪ ಸರಕಾರಿ ಪದವಿಪೂರ್ವ ಕಾಲೇಜ್ ನಲ್ಲಿ ಶಿಕ್ಷಕರ ದಿನಾಚರಣೆ ಸಮಾರಂಭ ಅರ್ಥಪೂರ್ಣವಾಗಿ ಜರುಗಿತು. ವಿದ್ಯಾರ್ಥಿಗಳು ಗುರುಗಳನ್ನು ಗೌರವಿಸಬೇಕು, ಗುರುಗಳು ಹಾಕಿಕೊಟ್ಟ ಮಾರ್ಗದಲ್ಲಿ ಮುನ್ನಡೆಯಬೇಕು ಎಂದು ಪ್ರಮುಖರಾದ ಶ್ರೀಲತಾ ಕಿವಿಮಾತು ಹೇಳಿದರು. ಸರ್ವಪಲ್ಲಿ ಡಾ.ರಾಧಕೃಷ್ಣ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ವಿದ್ಯಾರ್ಥಿಗಳು ಉಪನ್ಯಾಸಕರಿಗಾಗಿ ವಿವಿಧ ಕ್ರೀಡಾ ಚಟುವಟಿಕೆಗಳನ್ನು ಏರ್ಪಡಿಸಿ ಗಮನ ಸೆಳೆದರು. ಅಲ್ಲದೆ ವಿದ್ಯಾರ್ಥಿಗಳಿಂದ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಮೂರ್ನಾಡು NEWS DESK ಸೆ.5 : ದಾನಿಗಳ ಸಹಕಾರದಿಂದ ಮೂರ್ನಾಡಿನಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಸುಸಜ್ಜಿತ ಹಿಂದೂ ರುದ್ರಭೂಮಿಗೆ ಹಿಂದೂ ಮಲೆಯಾಳಿ ಸಂಘ ಸ್ಟçಕ್ಚರ್ ನ್ನು ಕೊಡುಗೆಯಾಗಿ ನೀಡಿದೆ. ಸುಮಾರು 40 ಸಾವಿರ ರೂ. ಮೌಲ್ಯದ ಸ್ಟ್ರಕ್ಚರ್ ನ್ನು ನೀಡುವ ಮೂಲಕ ಮೃತದೇಹಗಳನ್ನು ಸುಲಭವಾಗಿ ಸಾಗಾಟ ಮಾಡಲು ಸಹಕರಿಸಿದೆ. ಸ್ಟ್ರಕ್ಚರ್ ಹಸ್ತಾಂತರದ ಸಂದರ್ಭ ಹಿಂದೂ ಮಲೆಯಾಳಿ ಸಂಘ ಹಾಗೂ ಮೂರ್ನಾಡು ಹಿಂದೂ ರುದ್ರಭೂಮಿ ಸಮಿತಿಯ ಪದಾಧಿಕಾರಿಗಳು ಹಾಜರಿದ್ದರು.
ಮಡಿಕೇರಿ ಸೆ.5 NEWS DESK : ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ ಪಶು ವೈದ್ಯಕೀಯ ಉಚಿತ ತುರ್ತು ಚಿಕಿತ್ಸೆಗಾಗಿ ಟೋಲ್ ಫ್ರೀ ಸಹಾಯವಾಣಿ ಸಂಖ್ಯೆ 1962 ನ್ನು ಸಂಪರ್ಕಿಸಬಹುದಾಗಿದೆ. ಈ ಸಂಬಂಧ ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರಾದ ಲಿಂಗರಾಜು ದೊಡ್ಡಮನಿ ಭಿತ್ತಿಪತ್ರವನ್ನು ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಬಿಡುಗಡೆ ಮಾಡಿದರು.
ಮಡಿಕೇರಿ ಸೆ.5 NEWS DESK : ಶಿಕ್ಷಕರು ಮಕ್ಕಳ ಹೃದಯದಲ್ಲಿ ಸದಾ ಇರುತ್ತಾರೆ. ಮಕ್ಕಳ ಮನಸ್ಸಿನಿಂದ ಶಿಕ್ಷಕರನ್ನು ತೆಗೆಯಲು ಸಾಧ್ಯವಿಲ್ಲ. ಆ ದಿಸೆಯಲ್ಲಿ ಶಿಕ್ಷಕರೇ ದೇವರು ಎಂದು ಶಾಸಕ ಡಾ.ಮಂತರ್ ಗೌಡ ಪ್ರತಿಪಾದಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಸಂಯುಕ್ತಾಶ್ರಯದಲ್ಲಿ ನಗರದ ಕೊಡಗು ಗೌಡ ಸಮಾಜದ ಮುಖ್ಯ ಸಭಾಂಗಣದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಹಾಗೂ ಜಿಲ್ಲಾ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶಿಕ್ಷಕರು ಮಕ್ಕಳಲ್ಲಿ ಹೆಚ್ಚಿನ ಪ್ರಭಾವ ಬೀರುತ್ತಾರೆ. ಶಿಕ್ಷಕರ ಪ್ರತಿಯೊಂದು ಗುಣವು ಮಕ್ಕಳ ಮೇಲೆ ಪರಿಣಾಮ ಬೀರುತ್ತದೆ. ಶಿಕ್ಷಕರ ಮಾರ್ಗದರ್ಶನ ಸದಾ ಸ್ಮರಣೀಯವಾಗಿದೆ ಎಂದು ಡಾ.ಮಂತರ್ ಗೌಡ ಹೇಳಿದರು. ಕೊಡಗು ಜಿಲ್ಲೆ ಎಸ್‍ಎಸ್‍ಎಲ್‍ಸಿ ಪರೀಕ್ಷಾ ಫಲಿತಾಂಶದಲ್ಲಿ ನಾಲ್ಕನೇ ಸ್ಥಾನ ಪಡೆದಿರುವುದು ಹಾಗೂ ಗುಣಮಟ್ಟದ ಶಿಕ್ಷಣದಲ್ಲಿ ಪ್ರಥಮ ಸ್ಥಾನ ಪಡೆದಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದು ಶಾಸಕರು ಮೆಚ್ಚುಗೆ ವ್ಯಕ್ತಪಡಿಸಿದರು. ಶಿಕ್ಷಕರು ವಿದ್ಯಾರ್ಥಿಗಳಲ್ಲಿ…
ಮಡಿಕೇರಿ ಸೆ.5 NEWS DESK : ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯು ಕೊಡವ ಸಂಸ್ಕೃತಿ ಹಾಗೂ ಚರಿತ್ರೆಗಳ ಸಂಶೋಧನೆ-ಅಧ್ಯಯನದ ದಿಸೆಯಲ್ಲಿ ಕಾರ್ಯಯೋಜನೆ ರೂಪಿಸಿದೆ. ಈ ದಿಸೆಯಲ್ಲಿ ಕೊಡವ ಭಾಷೆ-ಸಾಹಿತ್ಯ, ಸಂಸ್ಕೃತಿ, ಆಚಾರ-ವಿಚಾರ, ಪದ್ಧತಿ-ಪರಂಪರೆಗಳ ಹಾಗೂ ಕೊಡವ-ಕೊಡಗಿನ ಸಂಬಂಧಿತ ಚರಿತ್ರೆಗಳ ಬಗ್ಗೆ ಆಳವಾದ ಸಂಶೋಧನೆಗೆ ಅಕಾಡೆಮಿಯ ಕಾರ್ಯಸೂಚಿಯನ್ವಯ ಅರ್ಹ-ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಕಾರ್ಯನಿರ್ವಹಿಸಲು ಬಯಸಿದ್ದಲ್ಲಿ ಹೆಚ್ಚಿನ ವಿವರಗಳಿಗೆ ಅಧ್ಯಕ್ಷರು, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ, ಜೂನಿಯರ್ ಕಾಲೇಜು ರಸ್ತೆ, ಸ್ಕೌಟ್ಸ್ ಮತ್ತು ಗೈಡ್ಸ್ ಭವನ, ಮ್ಯಾನ್ಸ್ ಕಾಪೌಂಡ್ ಹತ್ತಿರ ಮಡಿಕೇರಿ. ಇವರಿಗೆ ಪತ್ರ ಬರೆಯುವಂತೆ ತಿಳಿಸಲಾಗಿದೆ ಎಂದು ಅಧ್ಯಕ್ಷರಾದ ಅಜ್ಜಿನಿಕಂಡ ಸಿ. ಮಹೇಶ್ ನಾಚಯ್ಯ ತಿಳಿಸಿದ್ದಾರೆ.
ನಾಪೋಕ್ಲು ಸೆ.5 NEWS DESK : ಮೈಸೂರು ದೇವಧನ್ ಫೌಂಡೇಶನ್ ಹಾಗೂ ಶ್ರೀ ರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯ ಇಂಟರಾಕ್ಟ್ ಸಂಘ ಸಹಯೋಗದಲ್ಲಿ ವಿದ್ಯಾರ್ಥಿಗಳಿಗೆ ವಿಚಾರ ಸಂಕಿರಣ ನಡೆಯಿತು. ಫೌಂಡೇಶನ್ ನ ಪ್ರಮುಖರಾದ ಬಲ್ಲಚಂಡ ಧನ್ಯ ಪೊನ್ನಮ್ಮ, ಕೋಟೆರ ದೇವಯ್ಯ ಹಾಗೂ ತಂಡದಿಂದ ವಿದ್ಯಾರ್ಥಿಗಳಿಗೆ ಏಕಾಗ್ರತೆ, ಖಿನ್ನತೆ ಹಾಗೂ ಆಕ್ರಮಣಕಾರಿ ವರ್ತನೆಯ ಬಗ್ಗೆ ಮಾಹಿತಿ ನೀಡಿ ವಿದ್ಯಾರ್ಥಿಗಳು ಯಾವುದೇ ಸಂದರ್ಭದಲ್ಲಿ ಖಿನ್ನತೆಗೆ ಒಳಗಾಗಬಾರದು. ಉತ್ತಮ ಗುಣ ನಡತೆಗಳನ್ನು ರೂಪಿಸಿಕೊಳ್ಳಬೇಕು. ಮುಂದಿನ ಭವಿಷ್ಯವನ್ನು ರೂಪಿಸಿಕೊಳ್ಳಲು ಈಗಿನಿಂದಲೇ ಯೋಜನೆ ಹಾಕಿಕೊಳ್ಳಬೇಕು ಎಂದ ಮಾರ್ಗದರ್ಶನ ನೀಡಿದರು. ಈ ಸಂದರ್ಭ ಸಂಘದ ಸಂಚಾಲಕಿ ಕೆ.ಎಸ್. ಶೋಭ, ಸ್ಮಿತಾ , ಸಂಘದ ಸದಸ್ಯರು, ವಿದ್ಯಾರ್ಥಿಗಳು ಶಿಕ್ಷಕರು ಪಾಲ್ಗೊಂಡಿದ್ದರು.






