ಸುಂಟಿಕೊಪ್ಪ,ಆ.3 NEWS DESK : ಹರದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುತ್ತಿನ ತೋಟದಲ್ಲಿ ಕಡು ಬಡತನದಲ್ಲಿರುವ ವೃದ್ಧ ದಂಪತಿಗಳಿಗೆ ಬಿಜೆಪಿ ಕಾರ್ಯಕರ್ತರು ನೆರವು ನೀಡಿದರು. ಗ್ರಾಮದ ಮಾಹಿಲ ಮತ್ತು ಗಿರಿಜ ದಂಪತಿಗಳ ಮನೆಗೆ ಭೇಟಿದ ನೀಡಿದ ಜಿಲ್ಲಾ ಬಿಜೆಪಿ ನಿಕಟ ಪೂರ್ವ ಅಧ್ಯಕ್ಷ ಬಿ.ಬಿ.ಭಾರತೀಶ್, ಸೋಮವಾರಪೇಟೆ ಮಂಡಲ ಅಧ್ಯಕ್ಷ ಗೌತಮ್ ಸೋಮವಾರಪೇಟೆ ಮಂಡಲ ಓಬಿಸಿ ಅಧ್ಯಕ್ಷ ಪಿಆರ್ ಸುನಿಲ್ ಕುಮಾರ್ ದಂಪತಿಗಳಿಗೆ ಆಹಾರ ಕಿಟ್ ವಿತರಿಸಿದರಲ್ಲದೆ, ಮಳೆಯಿಂದ ಶಿಥಿಲಾವಸ್ಥೆಯಿಂದ ಸೋರುತ್ತಿದ್ದನ್ನು ಮನಗಂಡು ಮನೆಯ ಮೇಲ್ಛಾವಣಿಗೆ ಪ್ಲಾಸ್ಟಿಕ್ ಹೊದಿಕೆಯನ್ನು ನೀಡಿದರು. ಮನೆಯ ನಿರ್ಮಾಣಕ್ಕೆ ಪಂಚಾಯಿತಿ ವತಿಯಿಂದ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ಸಹಕರಿಸುವಂತೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಲ್ಲಿ ಮನವಿ ಮಾಡಿದರು. ಈ ಸಂದರ್ಭ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಪದ್ಮನಾಭ, ಗ್ರಾ.ಪಂ ಮಾಜಿ ಅಧ್ಯಕ್ಷ ಪದ್ಮನಾಭ, ಲಿಖಿತ್ ದಾಮೋದರ ಹೊಸತೋಟ, ಭೂತ್ ಅಧ್ಯಕ್ಷ ಚಿದಾನಂದ ಉಲ್ಲಾಸ್, ಸುಂಟಿಕೊಪ್ಪ ಶಕ್ತಿ ಕೇಂದ್ರ ಅಧ್ಯಕ್ಷ ಧನು ಕಾವೇರಪ್ಪ, ಕೆದಕಲ್ ಕನೀಸ್ ಸೇರಿದಂತೆ ಮತ್ತಿತರರು ಇದ್ದರು.
ಲೇಖಕ: admin
ಮಡಿಕೇರಿ NEWS DESK ಆ.3 : ಒಂಟಿ ಸಲಗವೊಂದು ದಾಳಿ ಮಾಡಿದ ಸಂದರ್ಭ ಸಮಯ ಪ್ರಜ್ಞೆಯಿಂದ ವಾಟರ್ ಮ್ಯಾನ್ ವೊಬ್ಬರು ಜೀವ ಉಳಿಸಿಕೊಂಡ ಘಟನೆ ಸುಂಟಿಕೊಪ್ಪ ಸಮೀಪ ಕೊಡಗರಹಳ್ಳಿಯ 7ನೇ ಹೊಸಕೋಟೆ ಅಂದಗೋವೆ ಗ್ರಾಮದಲ್ಲಿ ನಡೆದಿದೆ. ಕೊಡಗರಹಳ್ಳಿ ಗ್ರಾಮಸ್ಥರನ್ನು ನಿತ್ಯ ಕಾಡುತ್ತಿರುವ ಕಾಡಾನೆಯೊಂದು ಇಂದು ಕೂಡ ಬೆಳ್ಳಂಬೆಳಗ್ಗೆ ಅಂದಗೋವೆ ಗ್ರಾಮದಲ್ಲಿ ಪ್ರತ್ಯಕ್ಷವಾಗಿದೆ. ಕೊಡಗರಹಳ್ಳಿ ಗ್ರಾ.ಪಂ ಯ ವಾಟರ್ ಮ್ಯಾನ್ ಹುಸೇನ್ ಎಂಬುವವರು ಕರ್ತವ್ಯಕ್ಕೆಂದು ತೆರಳುತ್ತಿದ್ದಾಗ ಆನೆ ದಿಢೀರ್ ದಾಳಿ ಮಾಡಿದೆ. ಸೊಂಡಿಲಿನಿಂದ ತಳ್ಳಿದ ಪರಿಣಾಮ ಮೋರಿಯ ಪೈಪ್ ವೊಂದರ ಬಳಿ ಹುಸೇನ್ ಬಿದ್ದಿದ್ದಾರೆ. ಆನೆ ಮತ್ತೆ ದಾಳಿ ಮಾಡಲು ಧಾವಿಸಿದಾಗ ಸಮಯ ಪ್ರಜ್ಞೆ ಮೆರೆದ ಹುಸೇನ್ ಅವರು ಮೋರಿಯ ಪೈಪ್ ನೊಳಗೆ ನುಸುಳಿಕೊಂಡಿದ್ದಾರೆ. ಆದರೂ ಬಿಡದ ಕಾಡಾನೆ ಪೈನ್ ಮೇಲೆ ದಾಳಿ ಮಾಡಿ ಹಾನಿ ಮಾಡಿದೆ. ಅದೃಷ್ಟವಶಾತ್ ಹುಸೇನ್ ಅವರು ಜೀವ ಉಳಿಸಿಕೊಂಡಿದ್ದಾರೆ. ಕಾಡಾನೆ ತೆರಳಿದ ನಂತರ ಗ್ರಾಮಸ್ಥರು ಗಾಯಾಳು ಹುಸೇನ್ ಅವರನ್ನು ಮಡಿಕೇರಿಯ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಸುಂಟಿಕೊಪ್ಪ, ಕೊಡಗರಹಳ್ಳಿ, 7ನೇ…
ಮಡಿಕೇರಿ NEWS DESK ಆ.3 : ಚಿಕ್ಕಮಗಳೂರಿನಿಂದ ಮಡಿಕೇರಿಗೆ ಆಗಮಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಮತ್ತು ಕೊಡ್ಲಿಪೇಟೆಯಿಂದ ಕಾಗನೂರಿಗೆ ತೆರಳುತ್ತಿದ್ದ ಕಾರಿನ ನಡುವೆ ಇಂದು ಬೆಳಿಗ್ಗೆ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಗಾಯಗೊಂಡವರಿಗೆ ಕೊಡ್ಲಿಪೇಟೆ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಕೊಡ್ಲಿಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮಡಿಕೇರಿ NEWS DESK ಆ.2 : ಕೊಡಗು ಜಿಲ್ಲೆಯಲ್ಲಿ 2018-19 ನೇ ಸಾಲಿನಲ್ಲಿ ನಡೆದ ಪ್ರಾಕೃತಿಕ ವಿಕೋಪ ಸೇರಿದಂತೆ ಕೊರೋನ ಸಂಕಷ್ಟಗಳ ನಡುವೆಯೂ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಿರುವ ಜಿಲ್ಲೆಯ ಗುತ್ತಿಗೆದಾರರಿಗೆ ವಿವಿಧ ಇಲಾಖೆಗಳಿಂದ ಒಟ್ಟು 165.84 ಕೋಟಿ ಗುತ್ತಿಗೆ ಹಣ ಪಾವತಿಗೆ ಬಾಕಿ ಇದೆ ಎಂದು ಮಡಿಕೇರಿ ತಾಲ್ಲೂಕು PWD ಗುತ್ತಿಗೆದಾರರ ಸಂಘದ ಅಧ್ಯಕ್ಷ ರಾಜೀವ ಲೋಚನ ಬಿ.ಪಿ ಅವರು ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಲವು ಬಾರಿ ಸರ್ಕಾರ, ಸಂಬಂಧಪಟ್ಟ ಶಾಸಕರು, ಸಂಸದರಿಗೆ, ಜಿಲ್ಲಾಧಿಕಾರಿಗಳಿಗೆ ಈ ಬಗ್ಗೆ ಮನವಿ ಸಲ್ಲಿಸಿದರು ಬಾಕಿ ಮೊತ್ತ ಪಾವತಿಗೆ ಸಂಬಂಧಿಸಿದಂತೆ ಸೂಕ್ತ ಸ್ಪಂದನ ದೊರಕಿಲ್ಲ. ಇದರಿಂದ ಜಿಲ್ಲಾ ವ್ಯಾಪ್ತಿಯ ನೂರಕ್ಕೂ ಹೆಚ್ಚಿನ ಗುತ್ತಿಗೆದಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮುಂದಿನ ಆ.15ರ ಒಳಗಾಗಿ ಬಾಕಿ ಮೊತ್ತದ ಪಾವತಿಗೆ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ‘ಅಹೋ ರಾತ್ರಿ ಪ್ರತಿಭಟನೆ’ ಹಮ್ಮಿಕೊಳ್ಳುವುದಾಗಿ ಎಚ್ಚರಿಕೆ ನೀಡಿದರು. ಸಂಕಷ್ಟದ ಸಂದರ್ಭಗಳಲ್ಲಿ ಜಿಲ್ಲೆಗೆ ಗುತ್ತಿಗೆದಾರರು ಅಗತ್ಯ ಕಾಮಗಾರಿಗಳನ್ನು ಸಾಲಮಾಡಿ ನಿರ್ವಹಿಸಿದ್ದಾರೆ.…
ಮಡಿಕೇರಿ ಆ.2 NEWS DESK : 2024-25ನೇ ಸಾಲಿನ 32ನೇ ರಾಜ್ಯಮಟ್ಟದ ಮುಕ್ತ ಕೆಸರು ಗದ್ದೆ ಕ್ರೀಡಾಕೂಟ ಮತ್ತು ಆಟೋಟ ಸ್ಪರ್ಧೆಗಳು ಆ.10 ರಂದು ಕಗ್ಗೋಡ್ಲು ಗ್ರಾಮದ ದಿ.ಸಿ.ಡಿ.ದೇವಯ್ಯ ಅವರ ಗದ್ದೆಯಲ್ಲಿ ನಡೆಯಲಿದೆ ಎಂದು ಕೊಡಗು ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಪಿ.ಪಿ.ಸುಕುಮಾರ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗು ಜಿಲ್ಲಾ ಪಂಚಾಯತ್, ಜಿಲ್ಲಾಡಳಿತ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಯೂತ್ ಹಾಸ್ಟೇಲ್ ಅಸೋಸಿಯೇಶನ್ ಆಫ್ ಇಂಡಿಯಾದ ಮಡಿಕೇರಿ ಘಟಕ, ಕೊಡಗು ಜಿಲ್ಲಾ ಯುವ ಒಕ್ಕೂಟ, ಮಡಿಕೇರಿ, ವಿರಾಜಪೇಟೆ ಮತ್ತು ಸೋಮವಾರಪೇಟೆ ತಾಲ್ಲೂಕು ಯುವ ಒಕ್ಕೂಟ ಹಾಗೂ ಕಗ್ಗೊಡ್ಲು ಕಾವೇರಿ ಯುವಕ ಸಂಘದ ಸಂಯುಕ್ತಾಶ್ರಯದಲ್ಲಿ ಅಂದು ಬೆಳಗ್ಗೆ 9.30 ರಿಂದ ಸ್ಪರ್ಧೆಗಳು ನಡೆಯಲಿದೆಯೆಂದು ಹೇಳಿದರು. ಕೆಸರು ಗದ್ದೆ ಕ್ರೀಡಾಕೂಟದಲ್ಲಿ ಸಾರ್ವಜನಿಕ ಪುರುಷ ಮತ್ತು ಮಹಿಳೆಯರ ಹಗ್ಗ ಜಗ್ಗಾಟ (7 ಸದಸ್ಯರ ತಂಡ), ಸಾರ್ವಜನಿಕ ಪುರುಷರ ವಾಲಿಬಾಲ್ (7 ಸದಸ್ಯರ ಜನರ ತಂಡ), ಸಾರ್ವಜನಿಕ ಮಹಿಳೆಯರು ಸೇರಿದಂತೆ ಪ್ರೌಢ…
ಸೋಮವಾರಪೇಟೆ NEWS DESK ಆ.2 : ಕಾರಿಗೆ ಜಾಗ ಬಿಡುವ ಸಂದರ್ಭ ಚಾಲಕನ ನಿಯಂತ್ರಣ ಕಳೆದುಕೊಂಡು ಶಾಲಾ ವಾಹನವೊಂದು ರಸ್ತೆ ಬದಿ ಪಲ್ಟಿಯಾದ ಘಟನೆ ಸೋಮವಾರಪೇಟೆ ಪಟ್ಟಣದಲ್ಲಿ ನಡೆದಿದೆ. ಇಂದು ಸಂಜೆ ಮಕ್ಕಳನ್ನು ಮನೆಗೆ ಕರೆ ತರುವ ಸಂದರ್ಭ ಜೇನಿಗರ ಕೊಪ್ಪದಲ್ಲಿ ವಾಹನ ಪಲ್ಟಿಯಾಗಿದೆ. ಸೋಮವಾರಪೇಟೆಯಿಂದ ಗೆಜ್ಜೆ ಹಣಕೊಡು, ಚಿಕ್ಕತೋಳೂರು ಮಾರ್ಗದಲ್ಲಿ ಪ್ರತಿ ದಿನ ಚಲಿಸುವ ಶಾಲಾ ವಾಹನ ಇದಾಗಿದೆ. ಅದೃಷ್ಟವಶಾತ್ ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ.
ಸೋಮವಾರಪೇಟೆ NEWS DESK ಆ.2 : ಆಟೋ ಚಾಲಕರು ಮತ್ತು ಮಾಲೀಕರ ಸಂಘದ ವಾರ್ಷಿಕ ಮಹಾಸಭೆ ಆ. 18ರಂದು ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಎಚ್.ಕೆ. ಗಂಗಾಧರ್ ತಿಳಿಸಿದ್ದಾರೆ. ಇಲ್ಲಿನ ಕೊಡವ ಸಮಾಜದಲ್ಲಿ ಅಂದು ಬೆಳಿಗ್ಗೆ 9-30 ರಿಂದ 12-30ರ ವರೆಗೆ ಮಹಾಸಭೆ ನಡೆಯಲಿದೆ. ಮಧ್ಯಾಹ್ನ 2ರಿಂದ ನೂತನ ಆಡಳಿತ ಮಂಡಳಿಗೆ ಚುನಾವಣೆ ನಡೆಯಲಿದೆ. 4-30ಕ್ಕೆ ಮತ ಎಣಿಕೆ ನಡೆಯಲಿರುವುದಾಗಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು. ವಾರ್ಷಿಕ ಸಭೆಯಲ್ಲಿ ಪಾಲ್ಗೊಳ್ಳಲು ಸಂಘದಲ್ಲಿ ತಮ್ಮ ಸದಸ್ಯತ್ವವನ್ನು ನವೀಕರಿಸಿ ರಶೀದಿಯನ್ನು ಕಡ್ಡಾಯವಾಗಿ ಪಡೆದಿರಬೇಕು. ಆ.4ರ ಸಂಜೆ 5ರ ವರೆಗೆ ಸಂಘದ ಕಚೇರಿಯಲ್ಲಿ ಸದಸ್ಯತ್ವ ನವೀಕರಣಕ್ಕೆ ಅವಕಾಶ ಮಾಡಿಕೊಡಲಾಗಿದೆ. ಸಂಘದ ವಾರ್ಷಿಕ ಸಭೆಯಲ್ಲಿ ಎಲ್ಲ ಸದಸ್ಯರು ಪಾಲ್ಗೊಂಡು ತಮ್ಮ ಸಲಹೆ ಸೂಚನೆಗಳನ್ನು ನೀಡಬೇಕೆಂದು ತಿಳಿಸಿದರು. ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿ, ಉಪಕಾರ್ಯದರ್ಶಿ ಹಾಗು ಖಜಾಂಚಿ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಸಂಘದ ಕಚೇರಿಯಲ್ಲಿ ಚುನಾವಣೆಗೆ ಸ್ಪರ್ಧಿಸುವವರು ನಾಮಪತ್ರ ಸಲ್ಲಿಸಲು ಆ. 7 ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ…
ಸೋಮವಾರಪೇಟೆ NEWS DESK ಆ.2 : ಸೋಮವಾರಪೇಟೆ ತಾಲ್ಲೂಕಿನ ಶಾಂತಳ್ಳಿ ಮತ್ತು ಶನಿವಾರಸಂತೆ ವ್ಯಾಪ್ತಿಯಲ್ಲಿ ಧಾರಾಕಾರ ಮಳೆ ಸುರಿದ ಹಿನ್ನೆಲೆಯಲ್ಲಿ ಮಳೆಹಾನಿ ಜಾಗಗಳಿಗೆ ಮಾಜಿ ಉಪ ಮುಖ್ಯಮಂತ್ರಿ ಹಾಗೂ ಬಿಜೆಪಿ ಶಾಸಕ ಅಶ್ವಥ್ ನಾರಾಯಣ ಗೌಡ ಭೇಟಿ ನೀಡಿ ಪರಿಶೀಲಿಸಿದರು. ಅತೀ ಹೆಚ್ಚು ಮಳೆಯಾಗಿರುವ ಶಾಂತಳ್ಳಿ ಹೋಬಳಿ ವ್ಯಾಪ್ತಿಯಲ್ಲಿ ಗುಡ್ಡ ಕುಸಿತ, ಮನೆ ಕುಸಿತ, ಕೊಳೆರೋಗಕ್ಕೆ ತುತ್ತಾಗಿರುವ ಕಾಫಿ ತೋಟವನ್ನು ಪರಿಶೀಲಿಸಿ, ಹಾನಿಗೀಡಾಗಿರುವ ಮನೆಗಳನ್ನು ವೀಕ್ಷಿಸಿ, ಮಾಜಿ ಸಚಿವ ಅಪ್ಪಚ್ಚು ರಂಜನ್ ಅವರ ಮೂಲಕ ಅಗತ್ಯ ದಿನಸಿ ಸಾಮಾಗ್ರಿಗಳನ್ನು ವಿತರಿಸಿದರು. ಶಾಂತಳ್ಳಿ-ಸೋಮವಾರಪೇಟೆ ರಾಜ್ಯ ಹೆದ್ದಾರಿಯ ಜೇಡಿಗುಂಡಿಯಲ್ಲಿ ಗುಡ್ಡ ಕುಸಿತ, ಬಸವನಕಟ್ಟೆ, ನಗರಳ್ಳಿಯಲ್ಲಿ ಕಾಫಿ ತೋಟವನ್ನು ವೀಕ್ಷಿಸಿದರು. ಮಳೆ-ಗಾಳಿಗೆ ಕಾಫಿ ತೋಟದಲ್ಲಿ ಭಾರೀ ಪ್ರಮಾಣದ ನಷ್ಟವಾಗಿದ್ದು, ಮರಗಳು ಬಿದ್ದು ಕಾಫಿ ಗಿಡಗಳು ಮುರಿದಿರುವುದು ಒಂದೆಡೆಯಾದರೆ, ಅತಿಯಾದ ಮಳೆಗೆ ಕೊಳೆರೋಗ ಬಂದು ಕಾಫಿ ಕಾಯಿಗಳು ನೆಲಕ್ಕೆ ಬಿದ್ದಿರುವದರಿಂದ ಫಸಲು ನಷ್ಟ ಅನುಭವಿಸಬೇಕಾಗಿದೆ. ಈ ಬಗ್ಗೆ ಸರ್ಕಾರದ ಗಮನ ಸೆಳೆದು ತಕ್ಷಣ ಪರಿಹಾರ ಒದಗಿಸಲು ಕ್ರಮ…
ಮಡಿಕೇರಿ NEWS DESK ಆ.2 : ವಯನಾಡಿಗೆ ಅಜ್ಜ ಅಜ್ಜಿ ಮನೆಗೆ ಹೋಗಿ ಭೂ ಕುಸಿತದಲ್ಲಿ ಮೃತಪಟ್ಟ ವಿರಾಜಪೇಟೆ ತಾಲ್ಲೂಕಿನ ಗುಹ್ಯ ಗ್ರಾಮದ 4 ನೇ ತರಗತಿ ವಿದ್ಯಾರ್ಥಿ ರೋಹಿತ್ ನ ತಾಯಿ ಕವಿತಾ ಅವರ ಜೊತೆ ದೂರವಾಣಿ ಮೂಲಕ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಂತ್ವನ ಹೇಳಿ ಪರಿಹಾರ ಕೊಡುವ ಭರವಸೆ ನೀಡಿದರು. ಈ ಸಂದರ್ಭ ಸುದರ್ಶನ ಅತಿಥಿಗೃಹದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬೋಸರಾಜು, ಶಾಸಕರಾದ ಎ.ಎಸ್.ಪೊನ್ನಣ್ಣ, ಡಾ.ಮಂಥರ್ ಗೌಡ, ಮಾಜಿ ಸಚಿವ ಎಂ.ಸಿ.ನಾಣಯ್ಯ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಮತ್ತಿತರರು ಉಪಸ್ಥಿತರಿದ್ದರು.
ಮಡಿಕೇರಿ NEWS DESK ಆ.2 : ಡಾ.ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಬೇಕು ಎನ್ನುವುದು ನಮ್ಮ ತೀರ್ಮಾನವಾಗಿದೆ. ಈ ಬಗ್ಗೆ ಅರಣ್ಯ ಸಚಿವರ ಜೊತೆ ಮತ್ತೊಮ್ಮೆ ಚರ್ಚಿಸಿ ನಿರ್ಧಾರ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭೂ ಕುಸಿತ ಮತ್ತು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಡಿಕೇರಿಯ ಸುದರ್ಶನ ಅತಿಥಿಗೃಹದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ರಾಜ್ಯದಲ್ಲಿ 746 ಕೋಟಿ ಮತ್ತು ಕೊಡಗು ಜಿಲ್ಲಾ ಪಿಡಿ ಖಾತೆಯಲ್ಲಿ 46 ಕೋಟಿ ಹಣ ಇದೆ. ಅಗತ್ಯಬಿದ್ದರೆ ಇನ್ನೂ ಹೆಚ್ಚಿನ ಹಣ ನೀಡಲಾಗುವುದು ಎಂದು ವಿವರಿಸಿದರು. ಮಳೆ ಬೀಳುತ್ತಲೇ ಇರುವುದರಿಂದ ಭೂ ಕುಸಿತದ ಪ್ರದೇಶವನ್ನು ಸರಿ ಪಡಿಸಲು ಕಷ್ಟ ಆಗುತ್ತಿದೆ. 20 ಕಡೆ ಭೂ ಕುಸಿತ ಆಗಿದ್ದರೆ, ಸಣ್ಣ ಪ್ರಮಾಣದಲ್ಲಿ ಭೂಮಿ ಜಾರಿರುವುದು ಹೆಚ್ಚು ಕಡೆ ಆಗಿದೆ. ಅದೃಷ್ಟವಶಾತ್ ಪ್ರಾಣ ಹಾನಿ ಆಗಿಲ್ಲ. ಹಲವರು ಗಾಯಗೊಂಡಿದ್ದಾರೆ. 67 ಮನೆಗಳು ಪೂರ್ಣಹಾನಿ ಆಗಿವೆ. 176 ಮನೆಗಳು ಭಾಗಶಃ ಹಾನಿ ಆಗಿವೆ. 24 ಗಂಟೆಗಳ ಒಳಗೆ…






