ಲೇಖಕ: admin

ಪೊನ್ನಂಪೇಟೆ, ಸೆ.5 NEWS DESK : ಭಾರತೀಯ ಜನತಾ ಪಾರ್ಟಿಯ ವಿರಾಜಪೇಟೆ ಮಂಡಲ ವ್ಯಾಪ್ತಿಯ ಹಾತೂರು ಶಕ್ತಿ ಕೇಂದ್ರದ ಪ್ರಮುಖರಾಗಿ ಮುರುವಂಡ ಸವನ್ ಸೋಮಣ್ಣ ಹಾಗೂ ಪಡಿಕಲ್ ಯದುಕುಮಾರ್ ಆಯ್ಕೆಯಾಗಿದ್ದಾರೆ. ಹಾತೂರಿನಲ್ಲಿ ನಡೆದ ಪಕ್ಷದ ಶಕ್ತಿಕೇಂದ್ರದ ಪುನರ್ ರಚನಾ ಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು. ಸಭೆಯಲ್ಲಿ ಹಾತೂರು ಬಿಜೆಪಿ ಶಕ್ತಿ ಕೇಂದ್ರದ ಸಹ ಪ್ರಮುಖರಾಗಿ ತೀತಮಾಡ ತಿಮ್ಮಯ್ಯ ಹಾಗೂ ಕಾಡ್ಯಮಾಡ ವಿನೋದ್ ಅವರನ್ನು ಆಯ್ಕೆಗೊಳಿಸಲಾಯಿತು. ಸಭೆಯಲ್ಲಿ ವಿರಾಜಪೇಟೆ ಮಂಡಲ ಬಿಜೆಪಿ ಅಧ್ಯಕ್ಷ ಮಾಚಿಮಂಡ ಸುವಿನ್ ಗಣಪತಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಗುಮ್ಮಟ್ಟಿರ ಕಿಲನ್ ಗಣಪತಿ, ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಮುದ್ದಿಯಡ ಮಂಜು ಗಣಪತಿ, ಅಜಿತ್ ಕರುಂಬಯ್ಯ, ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ, ತಾಲೂಕು ಉಪಾಧ್ಯಕ್ಷ ಕಬೀರ್ ದಾಸ್, ಮಲ್ಲoಡ ಮಧು ಸೇರಿದಂತೆ ಪಕ್ಷದ ಹಿರಿಯರು, ಹಾತೂರು ಶಕ್ತಿ ಕೇಂದ್ರದ ಪದಾಧಿಕಾರಿಗಳು, ವಿವಿಧ ಬೂತ್ ಸಮಿತಿ ಸದಸ್ಯರು, ಜಿಲ್ಲಾ ಹಾಗೂ ತಾಲೂಕು ಸಮಿತಿ ಪ್ರಮುಖರು, ಪಕ್ಷದ ವಿವಿಧ ಮೋರ್ಚಾದ ಪದಾಧಿಕಾರಿಗಳು,…

Read More

ಮಡಿಕೇರಿ ಸೆ.5 NEWS DESK : ಶಿಕ್ಷಕರ ದಿನಾಚರಣೆಯ ಅಂಗವಾಗಿ ರೋಟರಿ ಮಡಿಕೇರಿ ವುಡ್ಸ್ ಸಂಸ್ಥೆ ವತಿಯಿಂದ ನಾಲ್ವರು ಶಿಕ್ಷಕರಿಗೆ ನೇಶನ್ ಬಿಲ್ಡರ್ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಭಾಗಮಂಡಲ ಕೆ.ವಿ.ಜಿ.ಐಟಿಐನ ಪದ್ಮಕುಮಾರ್ ರೈ, ನಾಪೋಕ್ಲು ಪಬ್ಲಿಕ್ ಶಾಲೆಯ ಉಷಾರಾಣಿ, ಪೆರಾಜೆ ಅಮೆಚೂರು ಪ್ರಾಥಮಿಕ ಶಾಲೆಯ ಲಾಲಿ ಮತ್ತು ಚೇರಂಬಾಣೆ ಅರುಣಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ರಾಮಕೃಷ್ಣ ಅವರಿಗೆ ನೇಶನ್ ಬಿಲ್ಡರ್ ಪ್ರಶಸ್ತಿ ಪ್ರದಾನ ಮಾಡಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ರೋಟರಿ ಅಸಿಸ್ಟೆಂಟ್ ಗವರ್ನರ್, ದೇವಣಿರ ಕಿರಣ್, ನೆಶನ್ ಬಿಲ್ಡರ್ ಪ್ರಶಸ್ತಿಯ ಇತಿಹಾಸ ಮತ್ತು ಮಹತ್ವವನ್ನು ವಿವರಿಸಿದರು. ರೋಟರಿ ವುಡ್ಸ್ ಕ್ಲಬ್ ಈ ಕಾರ್ಯಕ್ರಮ ಮಾಡುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು. ವಲಯ ಸೇನಾನಿ ಅನಿತಾ ಪೂವಯ್ಯ ಮಾತನಾಡಿ ವುಡ್ಸ್ ಸಂಸ್ಥೆಯ ಪ್ರಮುಖ ಕಾರ್ಯಕ್ರಮಗಳನ್ನು ಶ್ಲಾಘಿಸುವ ಜೊತೆಗೆ ಪ್ರಶಸ್ತಿಗೆ ಭಾಜನರಾದ ಶಿಕ್ಷಕರಿಗೆ ಅಭಿನಂದನೆಗಳನ್ನು ತಿಳಿಸಿದರು. ರೋಟರಿ ವುಡ್ಸ್ ಅಧ್ಯಕ್ಷ ಹರೀಶ್ ಕಿಗ್ಗಾಲ್ ಮಾತನಾಡಿ, ಅರ್ಹ ಶಿಕ್ಷಕರನ್ನು ಹುಡುಕಿ ರೋಟರಿ ವುಡ್ಸ್ ವತಿಯಿಂದ ಗೌರವಿಸಲಾಗಿದೆ ಎಂದರು. ಕಾರ್ಯಕ್ರಮದಲ್ಲಿ ಕ್ಲಬ್…

Read More

ಮಡಿಕೇರಿ NEWS DESK ಸೆ.5 : ಖ್ಯಾತ ನಿದೇರ್ಶಕ, ನಟ ರಕ್ಷಿತ್ ಶೆಟ್ಟಿ ಅವರ ಪರಂವಃ ಸ್ಟುಡಿಯೋಸ್ ನಿರ್ಮಾಣ ಮಾಡಿರುವ “ಇಬ್ಬನಿ ತಬ್ಬಿದ ಇಳೆಯಲಿ” ಚಿತ್ರ ರಾಜ್ಯಾದ್ಯಂತ ಇಂದು ಚಿತ್ರಮಂದಿರಗಳಲ್ಲಿ ತೆರೆ ಕಂಡು ಯಶಸ್ವೀ ಪ್ರದರ್ಶನ ಕಾಣುತ್ತಿದೆ. ಮಡಿಕೇರಿ ನಿವಾಸಿ, ನಿವೃತ್ತ ಸುಬೇದಾರ್ ಮೇಜರ್ ಪೂಜಾರೀರ ಬೆಳ್ಯಪ್ಪ ಹಾಗೂ ವೇದಾವತಿ ದಂಪತಿಯ ಪುತ್ರ ಪೂಜಾರೀರ ಬಿ.ಚಂದ್ರಜಿತ್ ಈ ಚಿತ್ರವನ್ನು ನಿರ್ದೇಶಿಸಿರುವುದು ವಿಶೇಷ. ಚಿತ್ರದ ಕಥೆ ಮತ್ತು ಹಾಡುಗಳನ್ನು ಇವರೇ ಬರೆದಿದ್ದು, ಈಗಾಗಲೇ “ಇಬ್ಬನಿ ತಬ್ಬಿದ ಇಳೆಯಲಿ” ಚಿತ್ರ ಸಿನಿ ವಿಮರ್ಶಕರ ಅಪಾರ ಮೆಚ್ಚುಗೆಗೆ ಪಾತ್ರವಾಗಿದೆ. “ಬ್ಲಾಗ್ ಬರವಣಿಗೆಯ ಕಾಲದಲ್ಲಿ ಒಂಬತ್ತು ವರ್ಷಗಳ ಹಿಂದೆ ಚಂದ್ರಜಿತ್ ನೀಡಿದ್ದ ಲಿಂಕ್ ಇಂದು ಸಿನಿಮಾವಾಗಿದೆ. ಆ ಬರಹ ತುಂಬಾ ವಿಶೇಷವಾಗಿತ್ತು. ಅದೇ ಬ್ಲಾಗ್ ಕಥೆ ಇಂದು ಸಿನಿಮಾವಾಗಿದೆ. ಈ ರೀತಿಯ ಕಥೆ ಇರುವ ಸಿನಿಮಾ ಈ ಹಿಂದೆ ಬಂದಿರಬಹುದು. ಆದರೆ, ಇಂತಹ ನಿರೂಪಣೆಯ ಚಿತ್ರ ಸ್ಯಾಂಡಲ್‌ವುಡ್‌ನಲ್ಲಿ ಬಂದಿಲ್ಲ ಎಂದು ರಕ್ಷಿತ್ ಶೆಟ್ಟಿ ಅವರು ಪೂಜಾರೀರ ಚಂದ್ರಜಿತ್…

Read More

ಮಡಿಕೇರಿ ಸೆ.5 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಇವರ ಸಂಯುಕ್ತಾಶ್ರಯದಲ್ಲಿ ನಗರದ ಕೊಡಗು ಗೌಡ ಸಮಾಜದಲ್ಲಿ ಶಿಕ್ಷಕರ ದಿನಾಚರಣೆ ನಡೆಯಿತು. ಕಾರ್ಯಕ್ರಮವನ್ನು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಅತ್ಯುತ್ತಮ ಶಿಕ್ಷಕರನ್ನು ಸನ್ಮಾನಿಸಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಸಂದರ್ಭ ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಮೈಸೂರು ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ನಿವೃತ್ತ ಪ್ರಾಧ್ಯಾಪಕರಾದ ಪ್ರೊ.ನೀಲಗಿರಿ ಎಂ.ತಳವಾರ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಐಶ್ವರ್ಯ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಂದರ್‌ರಾಜ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಪಿ.ಕೆ.ಶ್ರೀನಿವಾಸ್, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಹ ಕಾರ್ಯದರ್ಶಿ ಎಚ್.ಎಸ್.ಚೇತನ್ ಇತರರು ಪಾಲ್ಗೊಂಡಿದ್ದರು. ಪ್ರಶಸ್ತಿ ಪ್ರದಾನ :: ಕಿರಿಯ ಪ್ರಾಥಮಿಕ ಶಾಲಾ ವಿಭಾಗದ ಶಿಕ್ಷಕರ…

Read More

ಮಡಿಕೇರಿ ಸೆ.5 NEWS DESK : ವಿರಾಜಪೇಟೆ ಕ್ರಿಕೆಟ್ ಹಬ್ಬ (ವಿ.ಸಿ.ಎಫ್)ದ ಲೋಗೋ ವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಬಿಡುಗಡೆಗೊಳಿಸಿದರು.  ವಿರಾಜಪೇಟೆಯ ಶಾಸಕ ಕಚೇರಿಯಲ್ಲಿ ಬಿಡುಗಡೆಗೊಳಿಸಿ ಶುಭಹಾರೈಸಿದರು. ಈ ಸಂದರ್ಭ ಪಂದ್ಯಾವಳಿಯ ಆಯೋಜಕರಾದ ಮಾದಂಡ ತಿಮ್ಮಯ್ಯ, ನಿತಿನ್ ಲೇಪು, ಆತಿಪ್ ಮನ್ನಾ ಹಾಗೂ ತಂಡದ ಮಾಲೀಕರು ಹಾಜರಿದ್ದರು.

Read More

ಮಡಿಕೇರಿ ಸೆ.5 NEWS DESK : ಪ್ರಸಕ್ತ (2024-25) ಸಾಲಿನ ದೀನದಯಾಳ ಅಂತ್ಯೋದಯ ಯೋಜನೆ ನಲ್ಮ್ ರಾಷ್ಟ್ರೀಯ ಜೀವನೋಪಾಯ ಅಭಿಯಾನ ಯೋಜನೆಯಡಿ ಸ್ವಯಂ ಉದ್ಯೋಗ ಹಾಗೂ ಗುಂಪು ಉದ್ಯಮಶೀಲತೆ ಮತ್ತು ಎಸ್‍ಎಚ್‍ಜಿ ಗುಂಪು ರಚನೆಗಾಗಿ ಮಡಿಕೇರಿ ನಗರ ಸಭೆಯಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿಯುಳ್ಳವರು ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಉದ್ದೇಶಿಸಿರುವ ಚಟುವಟಿಕೆಯ ಬಗ್ಗೆ ಅನುಭವ ಹೊಂದಿದ್ದರೆ/ ತರಬೇತಿ ಪಡೆದಿದ್ದರೆ ಪ್ರಮಾಣ ಪತ್ರ, ಯೋಜನಾ ವರದಿ, ಬಿಪಿಎಲ್ ಪಡಿತರ ಚೀಟಿ, ವಿದ್ಯಾರ್ಹತೆ ಪ್ರಮಾಣ ಪತ್ರ, ವೈಯಕ್ತಿಕ ಉಳಿತಾಯ ಖಾತೆಯ ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ, ಇತ್ತೀಚಿನ ಭಾವಚಿತ್ರ, ಅಂಗವಿಕಲರಾಗಿದ್ದಲ್ಲಿ ಅಂಗವಿಕಲ ಪ್ರಮಾಣ ಪತ್ರ, ಚುನಾವಣೆ ಗುರುತಿನ ಚೀಟಿ, ಆಧಾರ್ ಕಾರ್ಡ್, ರೂ.20 ಛಾಪಾ ಕಾಗದದ ಮೇಲೆ ನಲ್ಮ್ ಯೋಜನೆಯ ಪೋಷಣ್ ಪ್ರಮಾಣ ಪತ್ರ ನೋಟರಿಯಿಂದ ದೃಢೀಕರಿಸಿದ ಪ್ರತಿ ಸಲ್ಲಿಸತಕ್ಕದ್ದು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್, 20 ಕೊನೆಯ ದಿನವಾಗಿದೆ. ನಂತರ ಬಂದಂತಹ ಅರ್ಜಿಗಳನ್ನು ಪರಿಗಣಿಸುವುದಿಲ್ಲ. ಸೂಚನೆ: ಮುಂದೆ ಹಾಜರು ಪಡಿಸಬಹುದಾದಂತಹ ಅಗತ್ಯ ದಾಖಲಾತಿಗಳನ್ನು…

Read More

ಮಡಿಕೇರಿ ಸೆ.5 NEWS DESK : ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ “ಮಹಾತ್ಮಗಾಂಧೀ ಸೇವಾ ಪ್ರಶಸ್ತಿ-ಕರ್ನಾಟಕ”ಗೆ 2024 ನೇ ಸಾಲಿಗೆ ಅರ್ಹ ಸಾಧಕರನ್ನು ಅಥವಾ ಸಂಘ ಸಂಸ್ಥೆಗಳನ್ನು ಆಯ್ಕೆ ಮಾಡಲು ನಾಮನಿರ್ದೇಶನಗಳನ್ನು ಆಹ್ವಾನಿಸಲಾಗಿದೆ. ಸಾರ್ವಜನಿಕ ಜೀವನದಲ್ಲಿ ಮಹಾತ್ಮ ಗಾಂಧೀಜಿಯವರ ಆದರ್ಶಗಳನ್ನು ಅಳವಡಿಸಿಕೊಂಡು ಜೀವನ ನಡೆಸುತ್ತಿರುವ ಕನಿಷ್ಠ 60 ವರ್ಷಗಳಾಗಿರುವ ವ್ಯಕ್ತಿಗಳು ಅಥವಾ 25 ವರ್ಷಗಳು ತುಂಬಿರುವ ಸೇವಾ ಸಂಸ್ಥೆಗಳನ್ನು ಈ ಪ್ರಶಸ್ತಿಗೆ ಪರಿಗಣಿಸಲಾಗುವುದು. ಪ್ರಶಸ್ತಿಯನ್ನು ಆಯ್ಕೆ ಮಾಡಲು ಆಯ್ಕೆ ಸಮಿತಿಯನ್ನು ರಚಿಸಲಾಗುವುದು. 2024 ರ ಅಕ್ಟೋಬರ್ 02 ರಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು. ಮಹಾತ್ಮಗಾಂಧೀಜಿಯವರು ಪ್ರಚುರಪಡಿಸಿದ ಜನಪರ ಕಾರ್ಯಕ್ರಮಗಳಾದ ಅಸ್ಪø್ಪಶ್ಯತೆ ನಿವಾರಣೆ, ಅಹಿಂಸೆ, ಮಹಿಳಾ ಸಬಲೀಕರಣ, ಗ್ರಾಮೀಣ ನೈರ್ಮಲ್ಯ, ಮದ್ಯಪಾನ ವಿರೋಧಿ ನೀತಿ, ಖಾದಿ ಮತ್ತು ಸ್ವದೇಶಿವಸ್ತು ಬಳಕೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉದ್ದಾರ, ಈ ಕ್ಷೇತ್ರಗಳಲ್ಲಿ ಸ್ವಯಂ ಪ್ರೇರಣೆಯಿಂದ ತೊಡಗಿರುವ ವ್ಯಕ್ತಿಗಳು ಅಥವಾ ಸಂಸ್ಥೆಗಳು…

Read More

ಮಡಿಕೇರಿ ಸೆ.5 NEWS DESK : ಪ್ರಸಕ್ತ(2024-25) ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ssp.postmatric.karnataka.gov.in ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೋಮವಾರಪೇಟೆ ಮತ್ತು ಕುಶಾಲನಗರ ತಾಲ್ಲೂಕು ವ್ಯಾಪ್ತಿಯ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ವೆಬ್‍ಸೈಟ್‍ನಲ್ಲಿ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿಯ ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ(ಆದಾಯ ಮಿತಿ 2.50 ಲಕ್ಷ), ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ, ಆಧಾರ್ ಕಾರ್ಡ್ ಪ್ರತಿ(ಕಡ್ಡಾಯವಾಗಿ ಆಧಾರ್ ಸೀಡಿಂಗ್ ಮತ್ತು ಎನ್‍ಪಿಸಿಐ ಮ್ಯಾಪಿಂಗ್ ಮಾಡಿಸಿರಬೇಕು), ಚಾಲ್ತಿಯಲ್ಲಿರುವ ಆಧಾರ್ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ(ಕಡ್ಡಾಯ), ಹಿಂದಿನ ವರ್ಷದ ಅಂಕಪಟ್ಟಿ ಪ್ರತಿ, ಇತ್ತೀಚಿನ ಭಾವಚಿತ್ರ, ಅಧ್ಯಯನ ಪ್ರಮಾಣ ಪತ್ರ (ಮೆಟ್ರಿಕ್ ನಂತರದ ಕೋರ್ಸ್‍ಗಳಿಗೆ), ಶುಲ್ಕ ರಶೀದಿ(ಮೆಟ್ರಿಕ್ ನಂತರದ ಕೋರ್ಸುಗಳಿಗೆ), ತಂದೆ, ತಾಯಿ, ಪೋಷಕರ ಆಧಾರ್ ಪ್ರತಿ, ಆದಾಯ ಮತಿತಿ 2.50 ಲಕ್ಷಕಿಂತ ಒಳಗಿರುವ ಸಿಇಟಿ ಮೂಲ ಎಂಬಿಬಿಎಸ್, ಬಿಡಿಎಸ್, ಬಿ.ಇ, ಬಿಟೆಕ್,…

Read More

ಮಡಿಕೇರಿ ಸೆ.5 NEWS DESK : ಗ್ರಾಮ ಮಟ್ಟದಲ್ಲಿ ಜನರ ಆರೋಗ್ಯವನ್ನು ಉತ್ತಮಪಡಿಸುವಲ್ಲಿ ಗ್ರಾಮ ಆರೋಗ್ಯ ಕಾರ್ಯಕ್ರಮ ಅತ್ಯಂತ ಉಪಯೋಗಕಾರಿಯಾಗಿದೆ ಎಂದು ಕೊಡಗು ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿ ಜಿ.ಧನರಾಜು ತಿಳಿಸಿದರು. ನಗರದ ಜಿ.ಪಂ.ಕಚೇರಿಯಲ್ಲಿ ನಡೆದ ಗ್ರಾಮ ಆರೋಗ್ಯ ಕಾರ್ಯಕ್ರಮದ ಜಿಲ್ಲಾ ಮಟ್ಟದ ತರಬೇತಿ ಕಾರ್ಯಕ್ರಮವನ್ನು ಗಿಡಕ್ಕೆ ನೀರೆರೆಯುವ ಮೂಲಕ ಚಾಲನೆ ನೀಡಿ ಮಾತನಾಡಿದರು. ಗ್ರಾಮೀಣ ಜನರಿಗೆ ಆರೋಗ್ಯದ ಕುರಿತು ಜ್ಞಾನ ಮತ್ತು ಅರಿವನ್ನು ಮೂಡಿಸುವುದು ಗ್ರಾಮ ಆರೋಗ್ಯ ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದೊಂದಿಗೆ ಈ ಮಹತ್ತರ ಗ್ರಾಮ ಆರೋಗ್ಯ ಕಾರ್ಯಕ್ರಮವನ್ನು ಹಮ್ಮಕೊಳ್ಳಲಾಗಿದ್ದು 2 ದಿನಗಳ ಕಾಲ ತರಬೇತಿ ನಡೆಯಲಿದೆ ಎಂದರು. ಈ ತರಬೇತಿ ಕಾರ್ಯಕ್ರಮದಲ್ಲಿ ಅಪೌಷ್ಟಿಕತೆ, ರಕ್ತಹೀನತೆ, ಮುಟ್ಟಿನ ನೈರ್ಮಲ್ಯ, ಕ್ಷಯ, ಅಸಾಂಕ್ರಾಮಿಕ ರೋಗಗಳಾದ ಮಧುಮೇಹ ಮತ್ತು ಅಧಿಕ ರಕ್ತದೊತ್ತಡ, ಮಾನಸಿಕ ಆರೋಗ್ಯ ಕುರಿತಂತೆ ಜಿಲ್ಲಾ ಮಟ್ಟದ…

Read More

ಮಡಿಕೇರಿ ಸೆ.5 NEWS DESK : ಕೊಡಗು ಜಿಲ್ಲೆಯ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆಯು ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ನಗರದ ಜಿ.ಪಂ.ಸಿಇಒ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಕಚೇರಿಯ ಕಾರ್ಯಪಾಲಕ ಅಭಿಯಂತರರಾದ ಪಿ.ಆರ್. ಸುರೇಶ್ ಕುಮಾರ್ ಅವರು ಜಿಲ್ಲೆ ಹಾಗೂ ತಾಲ್ಲೂಕು ಪ್ರಯೋಗಾಲಯಗಳಿಂದ ಏಪ್ರಿಲ್, 2024 ರಿಂದ ಇಲ್ಲಿಯವರೆಗೆ ನೀರಿನ ಮಾದರಿ ಪರೀಕ್ಷೆಗಳ ವಿವರಣೆ ನೀಡಿದರು. ನೀರಿನ ಮಾದರಿ ಪರೀಕ್ಷೆಗಳಲ್ಲಿ ಕಂಡುಬಂದಿರುವ ರಾಸಾಯನಿಕ ವರದಿಗಳನ್ನು ವಿಸ್ತೃತವಾಗಿ ಮಂಡಿಸಿದ್ದರು. ಹಾಗೆಯೇ ಪಂಚಾಯಿತಿ ಮಟ್ಟದಲ್ಲಿ ಎಫ್‍ಟಿಕೆ ಕಿಟ್ ಉಪಯೋಗಿಸಿಕೊಂಡು ನೀರಿನ ಮಾದರಿಯನ್ನು ಪರೀಕ್ಷಿಸಿ ಶುದ್ಧವಾಗಿರುವ ನೀರನ್ನು ಕುಡಿಯಲು ಪೂರೈಸುವಂತೆ ನಿರ್ದೇಶನ ನೀಡಿದರು. ಜಿಲ್ಲೆಯಲ್ಲಿ ಹೊಸದಾಗಿ ಅನುಷ್ಠಾನ ಮಾಡಲು ಉದ್ದೇಶಿಸಿರುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಸಂಬಂಧಿಸಿದಂತೆ ಇಲಾಖೆ ನಿರ್ದೇಶಕರಿಗೆ ಪತ್ರ ಪಡೆದು ಮಾಹಿತಿ ಪಡೆಯುವಂತೆ ಸೂಚಿಸಿದರು. ಜಲಜೀವನ್ ಮಿಷನ್ ಬ್ಯಾಚು ಒಂದು ಯೋಜನೆಯಡಿ ಮಡಿಕೇರಿ ತಾಲ್ಲೂಕಿನಲ್ಲಿ…

Read More