ಪಾಟ್ನಾ ಆ.2 NEWS DESK : ಬಿಹಾರದಲ್ಲಿ ಕಳೆದ 24 ಗಂಟೆಗಳಲ್ಲಿ ಸಿಡಿಲು ಬಡಿದು ಕನಿಷ್ಠ 15 ಮಂದಿ ಸಾವನ್ನಪ್ಪಿದ್ದಾರೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಇಲಾಖೆ ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ಔರಂಗಾಬಾದ್, ಜೆಹಾನಾಬಾದ್, ಸರನ್, ರೋಹ್ತಾಸ್, ನಳಂದಾ ಮತ್ತು ಜಮುಯಿ ಜಿಲ್ಲೆಗಳಲ್ಲಿ ಸಿಡಿಲು ಬಡಿದು 15 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಾಟ್ನಾ ಮತ್ತು ವೈಶಾಲಿ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ರಾಜ್ಯ ವಿಪತ್ತು ನಿರ್ವಹಣಾ ಇಲಾಖೆ ಎಚ್ಚರಿಕೆ ನೀಡಿದೆ. ಔರಂಗಾಬಾದ್‌ನಲ್ಲಿ ಮೂವರು ಮಹಿಳೆಯರು ಸೇರಿದಂತೆ ಗರಿಷ್ಠ ನಾಲ್ವರು ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಜೆಹಾನಾಬಾದ್‌ನಲ್ಲಿ, ತಾಂಡ್ವಾ ಪ್ರದೇಶದ ಸರೇನ್ ಗ್ರಾಮದಲ್ಲಿ ಭತ್ತದ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ಮೂವರು ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದ್ದಾರೆ. ಸರನ್‌ನ ಮಾಂಝಿ ಪೊಲೀಸ್ ಠಾಣೆ ವ್ಯಾಪ್ತಿಯ ನರ್ವನ್ ಗ್ರಾಮದಲ್ಲಿ ಬುಧವಾರ ಸಂಜೆ 48 ವರ್ಷದ ವ್ಯಕ್ತಿಯೊಬ್ಬರು ಸಡಿಲು ಬಡಿದು ಸಾವನ್ನಪ್ಪಿದ್ದಾರೆ. ದನ ಮೇಯಿಸಲು ಊರ ಹೊರಗೆ ಹೋಗಿದ್ದ ವೇಳೆ…
ಲೇಖಕ: admin
ನಾಪೋಕ್ಲು ಆ.2 NEWS DESK : ಪಟ್ಟಣದ ಇಂದಿರಾನಗರದಲ್ಲಿ ಬರೆ ಕುಸಿದಿದ್ದು, ಮೂರು ಮನೆಗಳಿಗೆ ಹಾನಿಯಾಗಿ ಅಪಾಯದ ಪರಿಸ್ಥಿತಿ ನಿರ್ಮಾಣವಾಗಿದೆ. ವಿಪರೀತ ಮಳೆ ಗಾಳಿಯಿಂದಾಗಿ ನಗರದ ನಿವಾಸಿ ಮಂಜುಳಾ, ವಿನಾಯಕ, ರಾಣಿ ಎಂಬವರ ಮನೆಗಳ ಸಮೀಪ ಬರೆ ಕುಸಿತು ಮನೆಗೆ ತೀವ್ರ ಅಪಾಯ ಮಟ್ಟಕ್ಕೆ ತಲುಪಿದ್ದು, ಆತಂಕದಲ್ಲಿ ಜೀವನ ಸಾಗಿಸುವಂತಾಗಿದೆ. ಈ ಸಂದರ್ಭ ನಿವಾಸಿಗಳು ಮಾತನಾಡಿ, ಕಳೆದ ಹತ್ತು ವರ್ಷಗಳಿಂದ ವಾಸವಾಗಿದ್ದು, ಇದುವರೆಗೆ ಯಾವುದೇ ಅನಾಹುತ ಸಂಭವಿಸಿಲ್ಲ. ಆದರೆ ಇದೀಗ ಕೆಳಭಾಗದಲ್ಲಿ ಲೇಔಟ್ ಮಾಡಲು ಯಂತ್ರಗಳ ಮುಖಾಂತರ ಚರಂಡಿ ತೆಗೆದಿರುವುದರಿಂದಾಗಿ ಸಮಸ್ಯೆ ಉದ್ಭವಿಸಿದೆ ಎಂದು ಆರೋಪಿಸಿದರು. ಹೆಚ್ಚಿನ ಅನಾಹುತ ಸಂಭವಿಸುವುದರ ಮುನ್ನ ಅಧಿಕಾರಿಗಳು ಹಾಗೂ ಚುನಾಯಿತ ಪ್ರತಿನಿಧಿಗಳು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ನಿವಾಸಿಗಳು ಒತ್ತಾಯಿಸಿದ್ದಾರೆ. ಮಡಿಕೇರಿ ತಾಲೂಕು ಬಿಜೆಪಿ ಉಪಾಧ್ಯಕ್ಷ ಮನು ಮಹೇಶ್ ಮಾತನಾಡಿ, ಮೂರು ಮನೆಗಳಿಗೆ ಅಪಾಯ ತಟ್ಟುವ ಭೀತಿ ಇದೆ. ಕಂದಾಯ ಇಲಾಖೆಯ ಮೂಲಕ ಸೂಕ್ತ ಕ್ರಮ ಕೈಗೊಳ್ಳಲು ಮನವಿ ಮಾಡಲಾಗಿದೆ ಎಂದರು. ಈ ಸಂದರ್ಭ ಕಂಗಂಡ…
ಮಡಿಕೇರಿ ಆ.2 NEWS DESK : ತಾಯಿಯ ಎದೆಹಾಲು ಪ್ರಕೃತಿದತ್ತವಾದ ದೇವರ ಕೊಡುಗೆಯಾಗಿದೆ. ಎದೆಹಾಲಿನಿಂದ ಮಗುವಿನ ಆರೋಗ್ಯ ಮತ್ತು ಬೆಳವಣಿಗೆ ಜೊತೆಗೆ ಭವಿಷ್ಯದ ವ್ಯಕ್ತಿಯಾಗಿ ರೂಪಿಸುವ ಚೈತನ್ಯ ಶಕ್ತಿ ಅಡಗಿದ್ದು ಮಗು ಜನಿಸಿದ ಆರು ತಿಂಗಳ ಕಾಲ ವಿಶೇಷ ಎದೆ ಹಾಲುಣಿಸುವಿಕೆಯನ್ನು ಉತ್ತೇಜಿಸುವ ಉದ್ದೇಶದಿಂದ 1991 ರಲ್ಲಿ ವಿಶ್ವ ಆರೋಗ್ಯ ಸಂಸ್ಥೆ, ಯುನೆಸೆಫ್, ಡಬ್ಲ್ಯು ಬಿ ಡಬ್ಲ್ಯು ಸಹಯೋಗದಲ್ಲಿ ಆರಂಭಿಸಲಾಯಿತು. ಪ್ರತಿ ವರ್ಷ ಆಗಸ್ಟ್ 1 ರಿಂದ 7 ರವರೆಗೆ ಸಪ್ತಾಹದೊಂದಿಗೆ ಈ ಕುರಿತು ತಾಯಂದಿರಿಗೆ ಹೆಚ್ಚಿನ ಅರಿವು ಮೂಡಿಸುವ ಜಾಗೃತಿ ಕಾರ್ಯ 120 ಕ್ಕೂ ಹೆಚ್ಚು ದೇಶಗಳಲ್ಲಿ ನಡೆಸಲಾಗುತ್ತಿದೆ. ಇತ್ತೀಚಿನ ಆಧುನಿಕ ಯುಗದಲ್ಲಿ ಮಹಿಳೆಯರಲ್ಲಿ ತಪ್ಪು ಕಲ್ಪನೆಗಳಿಂದ, ಉದ್ಯೋಗಸ್ಥ ಮಹಿಳೆಯರಿಗೆ ಸಮಯದ ಅಭಾವದಿಂದಲೋ ಅಥವಾ ತಪ್ಪು ತಿಳುವಳಿಕೆಯಿಂದ ಆದಷ್ಟು ಬೇಗ ಮಗುವಿಗೆ ಎದೆ ಹಾಲು ಬಿಡಿಸಿ ಬಾಟಲಿ ಹಾಲನ್ನು ನೀಡಲು ಮುಂದಾಗುತ್ತಿರುವುದು ವಿಷದಾನಿಯ. ಜೀವನ ಮಟ್ಟ ಕಡಿಮೆ ಇರುವ, ಶಿಕ್ಷಣ ಮಟ್ಟ ಕಡಿಮೆ ಇರುವುದು, ಎದೆಹಾಲು ಕೊಡುವ ಬಗ್ಗೆ ಶುಚಿತ್ವಕ್ಕೆ…
ಸುಂಟಿಕೊಪ್ಪ ಆ.2 NEWS DESK : ಸುಂಟಿಕೊಪ್ಪ ಹೋಬಳಿ ವ್ಯಾಪ್ತಿಯಲ್ಲಿ ಗಾಳಿ ಮಳೆಯ ಪ್ರಮಾಣ ಇಳಿಮುಖಗೊಂಡಿದ್ದರೂ ಅಲ್ಲಲ್ಲಿ ಅವಾಂತರಗಳು ಸೃಷ್ಟಿಸುತ್ತಲೇ ಇದೆ. ಕೆಲವು ಕಡೆ ರಸ್ತೆಗೆ ಮರಗಳು ಬಿದ್ದು ಸಂಚಾರಕ್ಕೆ ಅಡ್ಡಿ ಉಂಟಾಗಿದ್ದು, ಕೊಡಗರಹಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮರ ಬಿದ್ದು ಪರಿಣಾಮ ಕೆಲಕಾಲ ವಾಹನ ಸಂಚಾರಕ್ಕೆ ಅಡ್ಡಿಯಾಗಿತ್ತು. ಮಾಹಿತಿ ತಿಳಿದು ಕಾರ್ಯಪ್ರವೃತ್ತರಾದ ಕೊಡಗರಹಳ್ಳಿ ಗ್ರಾ.ಪಂ ಪಿಡಿಒ ಸುಮೇಶ್, ಗ್ರಾ.ಪಂ ಸದಸ್ಯರು ಹಾಗೂ ಗ್ರಾಮಸ್ಥರ ಸಹಕಾರದಿಂದ ತ್ವರಿತಗತಿಯಲ್ಲಿ ಮರವನ್ನು ತೆರವುಗೊಳಿಸಿ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಈ ಸಂದರ್ಭ ಗ್ರಾ.ಪಂ ಸದಸ್ಯರು, ಸಿಬ್ಬಂದಿ ಧನಂಜಯ ಇದ್ದರು.
ಮಡಿಕೇರಿ NEWS DESK ಆ.1 : ಅಧಿಕ ಮಳೆಯಿಂದ ಕೊಡಗು ಜಿಲ್ಲೆ ನಲುಗಿ ಹೋಗಿರುವ ಹಂತದಲ್ಲೇ ಕಿಡಿಗೇಡಿಗಳು ಸುಳ್ಳು ಸುದ್ದಿಗಳನ್ನು ಹರಡುತ್ತಿದ್ದು, ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕೊಡವಾಮೆರ ಕೊಂಡಾಟ ಸಂಘಟನೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ಸಲ್ಲಿಸಿದೆ. ಕೊಡಗು ಅತವೃಷ್ಟಿಯಿಂದ ತತ್ತರಿಸಿ ಹೋಗಿದ್ದು, ಶಾಲಾಕಾಲೇಜುಗಳಿಗೆ ಬರುವ ಮಕ್ಕಳಿಗೆ ತೊಂದರೆಯಾಗಬಹುದೆಂದು ಜಿಲ್ಲಾಡಳಿತ ಮತ್ತು ಶಿಕ್ಷಣ ಇಲಾಖೆ ಪರಿಸ್ಥಿತಿಗನುಗುಣವಾಗಿ ರಜೆ ಘೋಷಿಸುತ್ತಿದೆ. ರಜೆ ಕುರಿತು ಜಿಲ್ಲಾಡಳಿತದಿಂದ ಬಿಡುಗಡೆಯಾಗುವ ಮಾಹಿತಿಗಾಗಿ ಪೋಷಕರು ಹಾಗೂ ವಿದ್ಯಾರ್ಥಿಗಳು ಕಾದು ಕುಳಿತಿರುತ್ತಾರೆ. ಆದರೆ ಕೆಲವು ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಪ್ರಕಟಿಸುತ್ತಿದ್ದಾರೆ. ಜಿಲ್ಲಾಧಿಕಾರಿಗಳ ಸಹಿ ಮತ್ತು ಮೊಹರನ್ನು ನಕಲಿ ಮಾಡಿದ್ದಾರೆ, ಅಸಲಿ ಯಾವುದು, ನಕಲಿ ಯಾವುದು ಎನ್ನುವ ಬಗ್ಗೆ ಜನ ಗೊಂದಲ ಮತ್ತು ಆತಂಕ ಪಡುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಈ ರೀತಿಯ ಆತಂಕಕಾರಿ ಬೆಳವಣಿಗೆ ನಡೆಯದಂತೆ ಎಚ್ಚರಿಕೆಯ ಸಂದೇಶ ರವಾನಿಸಬೇಕೆಂದು ಕೊಡವಾಮೆರ ಕೊಂಡಾಟ ಸಂಘಟನೆಯ ಅಧ್ಯಕ್ಷ ಚಾಮೆರ ದಿನೇಶ್ಬೆಳ್ಯಪ್ಪ ಅವರ ನಿರ್ದೇಶನದ…
ಮಡಿಕೇರಿ NEWS DESK ಆ.1 : ಮಳೆಹಾನಿ ಪರಿಸ್ಥಿತಿ ನಿಭಾಯಿಸುವಲ್ಲಿ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಕೊಡಗು ಜಿಲ್ಲೆಯಲ್ಲಿ ಕಾಳಜಿ ಕೇಂದ್ರಗಳನ್ನು ಆರಂಭಿಸಿರುವುದು ಬಿಟ್ಟರೆ ಬೇರೆ ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲವೆAದು ಬಿಜೆಪಿ ಮುಖಂಡ ಹಾಗೂ ಮಾಜಿ ಉಪಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ್ ಟೀಕಿಸಿದ್ದಾರೆ. ಕೊಡಗು ಜಿಲ್ಲೆಯ ವಿವಿಧೆಡೆ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ಅವರು ಸಂಕಷ್ಟದಲ್ಲಿರುವ ಜನರಿಗೆ ಸಾಂತ್ವನ ಹೇಳಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಡಿಸಿಎಂ, ಪ್ರವಾಹ ಮತ್ತು ಭೂಕುಸಿತದಿಂದ ಸಂಭವಿಸುತ್ತಿರುವ ಸಮಸ್ಯೆಗಳಿಗೆ ಸರ್ಕಾರ ಶಾಶ್ವತ ಪರಿಹಾರ ಸೂಚಿಸಬೇಕು ಎಂದು ಒತ್ತಾಯಿಸಿದರು. ಅಧಿಕ ಮಳೆಯಿಂದ ಕೊಡಗು ಜಿಲ್ಲೆಯಲ್ಲಿ ಅಪಾರ ಹಾನಿಯಾಗಿದ್ದು, ಪರಿಹಾರದ ರೂಪದಲ್ಲಿ ಹೆಚ್ಚಿನ ಅನುದಾನ ಬಿಡುಗಡೆ ಮಾಡಬೇಕು. ಮನೆ ಕಳೆದುಕೊಂಡವರಿಗೆ ಮನೆ ಬಾಡಿಗೆ ನೀಡಬೇಕು ಮತ್ತು ನೂತನ ಮನೆ ನಿರ್ಮಿಸಿಕೊಡಬೇಕು. ಕಾಫಿ ಸೇರಿದಂತೆ ಎಲ್ಲಾ ಬೆಳೆಗಳು ನಾಶವಾಗಿದ್ದು, ಸರ್ಕಾರ ಬೆಳೆ ಪರಿಹಾರವನ್ನು ಶೀಘ್ರ ನೀಡಬೇಕು. ಜಿಲ್ಲೆಗೆ ಆಗಮಿಸಲಿರುವ ಮುಖ್ಯಮಂತ್ರಿಗಳು ಈ ಬಗ್ಗೆ ಗಮನ ಹರಿಸಬೇಕು ಎಂದು ಆಗ್ರಹಿಸಿದರು. ಭಾರೀ ಗಾಳಿಮಳೆಯಿಂದ ಹೆಚ್ಚಿನ…
ಮಡಿಕೇರಿ NEWS DESK ಆ.1 : ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಹಾಗೂ ಬೋಧಕ ಆಸ್ಪತ್ರೆಯ ಮಹಿಳಾ ಮತ್ತು ಮಕ್ಕಳ ವಿಭಾಗದಲ್ಲಿ ಗುರುವಾರ ಜಿಲ್ಲಾಸ್ಪತ್ರೆಯಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ನಡೆಯಿತು. ಆ.7 ರವರೆಗೆ ನಡೆಯುವ ‘ವಿಶ್ವ ಸ್ತನ್ಯಪಾನ ಸಪ್ತಾಹ’ ಕಾರ್ಯಕ್ರಮವನ್ನು “ಕೊರತೆಗಳನ್ನು ಕೊನೆಗೊಳಿಸಿ: ಸರ್ವರಿಗೂ ಸ್ತನ್ಯಪಾನದ ಬೆಂಬಲ ನೀಡಿ” ಎಂಬ ಘೋಷವಾಕ್ಯದೊಂದಿಗೆ ಗಿಡಕ್ಕೆ ನೀರು ಹಾಕುವ ಮೂಲಕ ಜಿಲ್ಲಾ ಶಸ್ತçಚಿಕಿತ್ಸಕರಾದ ಡಾ.ನಂಜುಂಡಯ್ಯ ಅವರು ಚಾಲನೆ ನೀಡಿದರು. ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಮಧುಸೂಧನ್ ಎ.ಆರ್. ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಪ್ರತೀ ವರ್ಷದಂತೆ ಈ ವರ್ಷವೂ ಆಗಸ್ಟ್ 1 ರಿಂದ 7ರವರೆಗೆ ವಿಶ್ವ ಸ್ತನ್ಯಪಾನ ಸಪ್ತಾಹವನ್ನು ಆಚರಣೆ ಮಾಡಲಾಗುತ್ತಿದ್ದು, ಸಾರ್ವಜನಿಕರಿಗೆ ಸ್ತನ್ಯಪಾನದ ಪ್ರಯೋಜನಗಳನ್ನು ಉತ್ತೇಜಿಸಲು ಮತ್ತು ಮಕ್ಕಳ ಬೆಳವಣಿಗೆಗೆ ಹೇಗೆ ಸಹಾಯ ಮಾಡುತ್ತದೆ ಎಂಬುದನ್ನು ಉತ್ತೇಜಿಸುವುದು ಇದರ ಉದ್ದೇಶವಾಗಿದ್ದು, ಜಿಲ್ಲೆಯಾದ್ಯಂತ ಎಲ್ಲಾ ಜಿಲ್ಲಾ ಆಸ್ಪತ್ರೆ/ ತಾಲ್ಲೂಕು ಆಸ್ಪತ್ರೆ, ಸ.ಆ.ಕೇಂದ್ರ, ಪ್ರಾ.ಆ.ಕೇಂದ್ರಗಳಲ್ಲಿ ಆಚರಿಸಲಾಗುತ್ತಿದೆ ಎಂದು ತಿಳಿಸಿದರು. ಜಿಲ್ಲಾ ಶಸ್ತçಚಿಕಿತ್ಸಕರಾದ ಡಾ.ನಂಜುAಡಯ್ಯ ಅವರು ಮಾತನಾಡಿ ಸ್ತನ್ಯಪಾನವು ಅಭಿವೃದ್ಧಿಶೀಲ…
ಮಡಿಕೇರಿ NEWS DESK ಆ.1 : ಕೊಡಗಿನ ಪರಿಸರಕ್ಕೆ ಪೂರಕವಾದ ಮತ್ತು ಸ್ಥಳೀಯವಾಗಿ ಲಭ್ಯವಾಗುವ ಕಚ್ಚಾ ವಸ್ತುಗಳನ್ನು ಬಳಸಿ ಉದ್ದಿಮೆಗಳ ಆರಂಭಕ್ಕೆ ಯುವ ಸಮೂಹಕ್ಕೆ ಪ್ರೇರಣೆ ನೀಡುವ ನಿಟ್ಟಿನಲ್ಲಿ ಕೊಡಗು ಹಿಂದು ಎಕನಾಮಿಕ್ ಫೋರಂ ಹಾಗೂ ಲಘು ಉದ್ಯೋಗ ಭಾರತಿ ಸಂಸ್ಥೆಯ ಮೈಸೂರು ವಿಭಾಗದ ವತಿಯಿಂದ ಆ.3 ರಂದು ಗೋಣಿಕೊಪ್ಪಲಿನಲ್ಲಿ ವಿಶೇಷ ಕಾರ್ಯಾಗಾರ ನಡೆಯಲಿದೆ. ಸುದ್ದಿಗೋಷ್ಠಿಯಲ್ಲಿ ಕೊಡಗು ಹಿಂದು ಎಕನಾಮಿಕ್ ಫೋರಂನ ಕಾರ್ಯಾಧ್ಯಕ್ಷ ಟಿ.ಕೆ.ಸುಧೀರ್ ಈ ಕುರಿತು ಮಾಹಿತಿ ನೀಡಿ, ಅಂದು ಗೋಣಿಕೊಪ್ಪಲಿನ ಪರಿಮಳ ಮಂಗಳ ವಿಹಾರದಲ್ಲಿ ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30ರವರೆಗೆ ಯುವ ಉದ್ಯಮಿಗಳಿಗೆ ಕಾರ್ಯಾಗಾರದ ಮೂಲಕ ಉದ್ದಿಮೆಗಳ ಕುರಿತು ಅಗತ್ಯ ಮಾಹಿತಿಗಳನ್ನು ಒದಗಿಸಲಾಗುತ್ತದೆ ಎಂದು ತಿಳಿಸಿದರು. ಕಾರ್ಯಾಗಾರದಲ್ಲಿ ಸಿಎಸ್‌ಐಆರ್ ಮತ್ತು ಸಿಎಫ್‌ಟಿಆರ್‌ಐನ ಮುಖ್ಯ ವಿಜ್ಞಾನಿಗಳಾದ ಡಾ.ಪುಷ್ಪ ಎಸ್. ಮೂರ್ತಿ ಅವರು ಕೃಷಿ ಉತ್ಪನ್ನಗಳು, ಸಾಂಬಾರ ಪದಾರ್ಥ ಮತ್ತು ಪರಿಮಳ ತಂತ್ರಜ್ಞಾನಗಳ ಕುರಿತು ಮಾಹಿತಿ ಒದಗಿಸಲಿದ್ದಾರೆ. ಸಿಎಸ್‌ಐಆರ್ ಮತ್ತು ಸಿಎಫ್‌ಟಿಆರ್‌ಐನ ವಿಜ್ಞಾನಿ ಡಾ. ನೇಗಿ ಪಿ.ಎಸ್. ಅವರು, ಹಣ್ಣು…
ಮಡಿಕೇರಿ ಆ.1 NEWS DESK : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಪಾಜೆ ಸ್ಥಳೀಯ ಸಂಸ್ಥೆ ಹಾಗೂ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಚೆಂಬು ಸರಕಾರಿ ಪ್ರೌಢಶಾಲೆಯಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ನಡೆಯಿತು. ಕಾರ್ಯಕ್ರಮವನ್ನು ಮಡಿಕೇರಿ ಜಿಲ್ಲಾಸ್ಪತ್ರೆಯ ರಕ್ತನಿಧಿ ಕೇಂದ್ರದ ಡಾ.ಸಂಪತ್ ಹಾಗೂ ಚೆಂಬು ಶಾಲೆಯ ಪ್ರಬಾರ ಮುಖ್ಯ ಶಿಕ್ಷಕ ಡಾ.ಯೋಗೇಶ್ ಉದ್ಘಾಟಿಸಿದರು. ನಂತರ ಮಾತನಾಡಿದ ಡಾ.ಸಂಪತ್ ರಕ್ತದಾನ ಮಹತ್ವದ ಕುರಿತು ವಿವರಿಸಿ ಜನರಲ್ಲಿ ಜಾಗೃತಿ ಮೂಡಿಸಿದರು. ಡಾ.ಯೋಗೇಶ್ ಮಾತನಾಡಿ ರಕ್ತದಾನ ಮಾಡುವುದರಿಂದ ಆಗುವ ಆರೋಗ್ಯದ ಅನುಕೂಲತೆ ಬಗ್ಗೆ ವಿವರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಚೆಂಬು ಪ್ರೌಢಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ರಮೇಶ್ ಕುಮಾರ್ ನಂಬಿಯಾರ್, ರಕ್ತದಾನಕ್ಕಿಂತ ಶ್ರೇಷ್ಠ ದಾನ ಮತ್ತೊಂದಿಲ್ಲ. ಸ್ಕೌಟ್ಸ್ ಮತ್ತು ಗೈಡ್ಸ್ ಚೆಂಬು ಸ್ಥಳೀಯ ಸಂಸ್ಥೆ ಉತ್ತಮ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಮಾದರಿಯಾಗಿದೆ ಎಂದು ಶ್ಲಾಘಿಸಿದರು. ನಿವೃತ್ತ ಶಿಕ್ಷಕರಿಗೆ ಅಭಿನಂದನೆ ಸಲ್ಲಿಸಿ, ಶುಭಹಾರೈಸಿದರು. ಕಾರ್ಯಕ್ರಮದಲ್ಲಿ ಕುದುರೆಪಾಯ ದೇವಿ ಭಜನಾ ಮಂಡಳಿಯ ಅಧ್ಯಕ್ಷ ಸತೀಶ್ ಪಾಡಿಕಾನ, ಚೆಂಬು…
ಮಡಿಕೇರಿ ಆ.1 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆ.2 ರಂದು ಕೊಡಗು ಜಿಲ್ಲೆಗೆ ಭೇಟಿ ಸಂದರ್ಭ ಮಡಿಕೇರಿಗೆ ಆಗಮಿಸಲಿದ್ದು, ಈ ಸಂಬಂಧ ಸಂಚಾರಿ ಪೊಲೀಸ್ ಇಲಾಖೆಯಿಂದ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು. ಈ ನಿಟ್ಟಿನಲ್ಲಿ ಮಡಿಕೇರಿಯ ಫೀ.ಮಾ.ಕಾರ್ಯಪ್ಪ ವೃತ್ತದಿಂದ ಜನರಲ್ ತಿಮ್ಮಯ್ಯ ವೃತ್ತದ ವರೆಗೆ ರಸ್ತೆಯ ಎರಡು ಬದಿಯಲ್ಲಿಯೂ ಎಲ್ಲಾ ಮಾದರಿಯ ವಾಹನಗಳ ಪಾರ್ಕಿಂಗ್ ನ್ನು ಸಂಪೂರ್ಣವಾಗಿ ನಿಷೇದಿಸಲಾಗಿದೆ. ಅಲ್ಲದೆ ಅದೇ ಭಾಗದಲ್ಲಿ ತತಳ್ಳುಗಾಡಿ, ಪೆಟ್ಟಿಗೆ ಅಂಗಡಿ ಹಾಗೂ ಇನ್ನಿತರೆ ಬೀದಿವ್ಯಾಪಾರಕ್ಕೆ ಯಾವುದೇ ಅವಕಾಶವಿರುವುದಿಲ್ಲ.ಆದ್ದರಿಂದ ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಕೊಡಗು ಜಿಲ್ಲಾ ಪೊಲೀಸ್ ಇಲಾಖೆ ಮನವಿ ಮಾಡಿದೆ.






