ಲೇಖಕ: admin

ಮಡಿಕೇರಿ ಜೂ.31 NEWS DESK : ಕುತಂತ್ರದಿ0ದ ಕೊಡವರ ಹತ್ಯೆಯಾದ ದೇವಟ್ ಪರಂಬು ಸ್ಮಾರಕ ಪ್ರದೇಶದಲ್ಲಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಮಾಸಿಕ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಸಿತು. ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ ದೇವಟ್ ಪರಂಬುವಿಗೆ ತೆರಳಿದ ಪ್ರಮುಖರು ಹಿರಿಯರಿಗೆ ಪುಷ್ಪನಮನ ಸಲ್ಲಿಸಿ ಕೊಡವಲ್ಯಾಂಡ್ ಪರ ಹಕ್ಕೊತ್ತಾಯ ಮಂಡಿಸಿದರು. ವಿಶ್ವಾಸಘಾತುಕ “ಕೆಳದಿ/ಪಾಲೇರಿ ರಾಜ ಪರಿವಾರದ ಅಧೀನದಲ್ಲಿದ್ದ ಕೊಡಗು ರಾಜ್ಯವನ್ನು ಪರಾಕ್ರಮಿ ಕೊಡವರು ಹೈದರ್ ಮತ್ತು ಟಿಪ್ಪುವಿನ ಆಕ್ರಮಣದಿಂದ 32 ಕ್ಕೂ ಹೆಚ್ಚು ಬಾರಿ ಕಾಪಾಡಿದರು. ಈ ಸೋಲಿನ ಸೇಡು ತೀರಿಸಿಕೊಳ್ಳಲು, ಟಿಪ್ಪು ಕೊಡವ ಬುಡಕಟ್ಟು ಜನಾಂಗವನ್ನು ವಂಚನೆಯ ಮೂಲಕ ಸಂಪೂರ್ಣವಾಗಿ ನಾಶಮಾಡಲು ಸಂಚು ಹೂಡಿದನು. ಟಿಪ್ಪು ಸಂಚಿನಿ0ದ ದೇವಟ್ ಪರಂಬುವಿನಲ್ಲಿ ನಡೆದ ನರಮೇಧದ ಸ್ಮರಣಾರ್ಥ ಅಂತರರಾಷ್ಟ್ರೀಯ ಸ್ಮಾರಕ ನಿರ್ಮಾಣ ಮಾಡಬೇಕು ಹಾಗೂ ಕೊಡವರ ನರಮೇಧವನ್ನು ವಿಶ್ವ ರಾಷ್ಟ್ರಸಂಸ್ಥೆ ಯುಎನ್‌ಒ ಅಂತರರಾಷ್ಟ್ರೀಯ ಹತ್ಯಾಕಾಂಡದ ನೆನಪಿನ ಪಟ್ಟಿಯಲ್ಲಿ ಸೇರಿಸಬೇಕು ಎಂದು ನಾಚಪ್ಪ ಇದೇ ಸಂದರ್ಭ ಒತ್ತಾಯಿಸಿದರು. ಕೊಡವಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆ ನೀಡಬೇಕು, ಆದಿಮಸಂಜಾತ…

Read More

ಮಡಿಕೇರ ಜು.31 NEWS DESK : ಪೇಟೆ ಶ್ರೀರಾಮ ಮಂದಿರದ ದಸರಾ ಸಮಿತಿಯ ನೂತನ ಅಧ್ಯಕ್ಷರಾಗಿ ಎಂ.ಚೇತನ್, ಪ್ರಧಾನ ಕಾರ್ಯದರ್ಶಿಯಾಗಿ ಪಿ.ಎನ್.ಪ್ರಮೋದ್ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ನಿತಿನ್, ಕಾರ್ಯದರ್ಶಿಯಾಗಿ ದಿನೇಶ್ ಜಿ.ಆಚಾರ್ಯ, ಖಜಾಂಚಿಯಾಗಿ ಲೋಹಿತ್ ಚಿನ್ನಪ್ಪ, ಸಂಘಟನಾ ಕಾರ್ಯದರ್ಶಿಯಾಗಿ            ಸುನಿಲ್ ಮುತ್ತಪ್ಪ ನೇಮಕಗೊಂಡಿದ್ದಾರೆ.

Read More

ಮಡಿಕೇರಿ ಜು.31 NEWS DESK : ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಕುಶಾಲನಗರ ತಾಲ್ಲೂಕಿನ ಅತ್ತೂರು ಗ್ರಾಮ ಹಾಗೂ ತೆಪ್ಪಗುಂಡಿ ಗ್ರಾಮಗಳಿಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಹಾಗೂ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಜಂಟಿಯಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಂತ್ರಸ್ತ ಕುಟುಂಬಗಳನ್ನು ಭೇಟಿ ಅವರಿಗೆ ಧೈರ್ಯ ಹೇಳಿದರು. ವಾಲ್ನೂರು ತ್ಯಾಗತ್ತೂರು ಕಾಳಜಿ ಕೇಂದ್ರಕ್ಕೆ ಸಚಿವದ್ವಯರು ಹಾಗೂ ಶಾಸಕರು ಭೇಟಿ ನೀಡಿ ಸಂತ್ರಸ್ತರ ಅಹವಾಲು ಆಲಿಸಿದರು. ಹಾನಿಯಾದ ಮನೆ, ಸ್ವತ್ತುಗಳಿಗೆ ಅಗತ್ಯ ವಸ್ತುಗಳನ್ನು ನೀಡುವಂತೆ ಹಾಗೂ ಪ್ರಾಣ ಹಾನಿ ಆಗದಂತೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಇದೇ ಸಂದರ್ಭ ಸೂಚಿಸಿದರು. ಈ ಸಂದರ್ಭ ಶಾಸಕ ಡಾ.ಮಂತರ್ ಗೌಡ, ಜಿಲ್ಲಾಧಿಕಾರಿ ವೆಂಕಟರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ ಸೇರಿದಂತೆ ಇತರ ಅಧಿಕಾರಿಗಳು ಹಾಜರಿದ್ದರು.

Read More

ಮಡಿಕೇರಿ ಜು.31 NEWS DESK : ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ 29ನೇ ವರ್ಷದ “ಕಕ್ಕಡ-18” ಆಚರಣೆ ಆ.2 ರಂದು ಮಡಿಕೇರಿ ಹೊರ ವಲಯದ ಕ್ಯಾಪಿಟಲ್ ವಿಲೇಜ್ ನಲ್ಲಿ ನಡೆಯಲಿದೆ ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಅಂದು ಬೆಳಿಗ್ಗೆ 10.30 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ವಿಶ್ವ ವಿಖ್ಯಾತ ಆರ್ಥಿಕ ತಜ್ಞ ಡಾ.ಸುಬ್ರಮಣಿಯನ್ ಸ್ವಾಮಿ ಅವರ ಆಪ್ತ, ವಿರಾಟ್ ಹಿಂದೂಸ್ಥಾನ್ ಸಂಗಮ್ ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜಗದೀಶ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಕಾರ್ಯಕ್ರಮದ ಆರಂಭದಲ್ಲಿ ಕೊಡವ ಗುರುಕಾರೋಣರನ್ನು ಸ್ಮರಿಸಿ ಪ್ರಾರ್ಥಿಸಲಾಗುವುದು ಮತ್ತು “ಕಕ್ಕಡ-18” ರ ವಿಶೇಷ ಖಾದ್ಯಗಳನ್ನು ಅರ್ಪಿಸಲಾಗುವುದು. ನಂತರ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಕೊಡವರು ಆರಾಧಿಸುವ ಪ್ರಕೃತಿ ಸಿರಿಯ ಕೊಡವ ಮಾತೃಭೂಮಿಯನ್ನು ಉಳಿಸಿಕೊಳ್ಳುವ ಕುರಿತು ಪ್ರತಿಜ್ಞಾವಿಧಿ ಸ್ವೀಕರಿಸಲಾಗುವುದು. ಕೊಡವಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆಯ ಸ್ವಯಂ ಆಡಳಿತ ನೀಡಬೇಕು, ಕೊಡವರಿಗೆ ಎಸ್‌ಟಿ ಟ್ಯಾಗ್ ಘೋಷಿಸಬೇಕು, ಆರ್ಟಿಕಲ್ 244ನೇ ವಿಧಿ ಮತ್ತು 6 ಮತ್ತು 8ನೇ…

Read More

ಮಡಿಕೇರಿ ಜು.31 NEWS DESK : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಹಳೇ ವಿದ್ಯಾರ್ಥಿ ಸಂಘದ ವಾರ್ಷಿಕ ಮಹಾಸಭೆಯು ಆ.4 ರಂದು ನಡೆಯಲಿದೆ. ಕಾಲೇಜಿನ ಸಭಾಂಗಣದಲ್ಲಿ ಬೆಳಗ್ಗೆ 10.30 ಗಂಟೆಗೆ ಸಂಘದ ಅಧ್ಯಕ್ಷೆ ಡಾ.ಪಾರ್ವತಿ ಅಪ್ಪಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ನೂತನ ಆಡಳಿತ ಮಂಡಳಿಯನ್ನು ರಚಿಸಲಾಗುವುದು. ಮುಂದಿನ ವರ್ಷದ ಕಾರ್ಯಯೋಜನೆ ಹಾಗೂ ಇತರ ವಿಷಯಗಳ ಬಗ್ಗೆ ಚರ್ಚಿಸಲಾಗುವುದು. ಸಭೆಯಲ್ಲಿ ವಾರ್ಷಿಕ ವರದಿ ಹಾಗೂ ಲೆಕ್ಕಪತ್ರ ಮಂಡನೆ, ವಿಶ್ವವಿದ್ಯಾಲಯ ಮಟ್ಟದಲ್ಲಿ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳು, ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ವಿಜೇತರಾದ ಕ್ರೀಡಾ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು. ಅಲ್ಲದೆ ಹಳೇ ವಿದ್ಯಾರ್ಥಿ ಸಂಘದ ವತಿಯಿಂದ ಆಯೋಜಿಸಲಾದ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ಕಾಲೇಜಿನ ವಿದ್ಯಾರ್ಥಿ, ವಿದ್ಯಾರ್ಥಿಯನಿಯರಿಗೆ ಬಹುಮಾನವನ್ನು ನೀಡಲಾಗುವುದು. ಆದ್ದರಿಂದ ಸಂಘದ ಎಲ್ಲಾ ಸದಸ್ಯರು ಹಾಗೂ ಸದಸ್ಯರಾಗಲು ಇಚ್ಚಿಸುವವರು ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಸಂಘದ ಅಧ್ಯಕ್ಷೆ ಡಾ.ಪಾರ್ವತಿ ಅಪ್ಪಯ್ಯ ಮನವಿ ಮಾಡಿದ್ದಾರೆ.

Read More

ಮಡಿಕೇರಿ ಜು.31 NEWS DESK : ವಿದ್ಯುತ್ ಸೇರಿದಂತೆ ಮೂಲಸೌಲಭ್ಯಗಳ ಬಗ್ಗೆ ಗ್ರಾಹಕರಿಗೆ ಸರಿಯಾದ ಜಾಗೃತಿ ಇಲ್ಲದಿರುವುದರಿಂದಲೇ ಅನೇಕ ಸಮಸ್ಯೆಗಳಿಗೆ ನಿರೀಕ್ಷಿತ ಪರಿಹಾರ ದೊರಕದಾಗಿದೆ. ತಮ್ಮ ಮೂಲ ಹಕ್ಕುಗಳ ಬಗ್ಗೆ ಗ್ರಾಹಕರು ಜಾಗೃತರಾಗಬೇಕಾದ ಅನಿವಾಯ೯ತೆ ಇಂದಿನ ಕಾಲಘಟ್ಟದಲ್ಲಿದೆ ಎಂದು ಬೆಂಗಳೂರಿನ ಗ್ರಾಹಕರ ಹಕ್ಕುಗಳ ಶಿಕ್ಷಣ ಮತ್ತು ಜಾಗೃತಿ ಟ್ರಸ್ಟ್ ಸ್ಥಾಪಕಾಧ್ಯಕ್ಷ ವೈ.ಜಿ.ಮುರಳೀಧರನ್ ಕರೆ ನೀಡಿದ್ದಾರೆ. ನಗರದಲ್ಲಿ ಕೊಡಗು ಪ್ಲಾಂಟರ್ಸ್ ಅಸೋಸಿಯೇಷನ್ ವತಿಯಿಂದ ಆಯೋಜಿತ ಗ್ರಾಹಕರ ಹಕ್ಕುಗಳ ಕುರಿತ ಸಂವಾದ ಕಾಯ೯ಕ್ರಮದಲ್ಲಿ ಮಾತನಾಡಿದ ಅವರು, ವಿದ್ಯುತ್, ಆಹಾರಪದಾಥ೯ ಸೇರಿದಂತೆ ಅನೇಕ ವಿಚಾರಗಳ ಬಗ್ಗೆ ಅದನ್ನು ಬಳಸುವ ಗ್ರಾಹಕರಿಗೆ ತಮ್ಮ ಮೂಲ ಹಕ್ಕುಗಳ ಬಗ್ಗೆಯೇ ಸರಿಯಾದ ತಿಳುವಳಿಕೆ ಇಲ್ಲದಾಗಿದೆ. ಇದರಿಂದಾಗಿಯೇ ಸಮಸ್ಯೆಗಳು ಪರಿಹಾರ ಕಾಣುವ ಬದಲಿಗೆ ಮತ್ತಷ್ಟು ಹೆಚ್ಚಾಗುತ್ತಿದೆ, ಗ್ರಾಹಕರು  ಜಾಗೃತರಾದಾಗ ಮಾತ್ರ ಅನೇಕ ಸಮಸ್ಯೆಗಳು ಸಮಾಜದಲ್ಲಿ ಪರಿಹಾರವಾಗುತ್ತದೆ ಎಂದು ಅಭಿಪ್ರಾಯಪಟ್ಟರು. ಪರಿಸರ ಸಂರಕ್ಷಣೆ ಹಾಗೂ ಅಭಿವೖದ್ದಿ ಯೋಜನೆಗಳಲ್ಲಿ ಸಮನ್ವಯ ಇದ್ದಾಗ ಯಾವುದೇ ಸಮಸ್ಯೆಯಾಗುವುದಿಲ್ಲ,  ದೇಶದಲ್ಲಿ ಅಭಿವೃದ್ಧಿ ಯೋಜನೆಗಳು ಪರಿಸರ ಸಮತೋಲನದೊಂದಿಗೆ ಜಾರಿಯಾದಾಗ ದೇಶದ…

Read More

ಮಡಿಕೇರಿ ಜು 31 NEWS DESK : ಮಡಿಕೇರಿ ಮೂಲದ ಮೇಜರ್ ಸುಮುಖ್ ಸ್ವರೂಪ್ ಚೆನ್ನೈ ನ “ಐ ಐ ಟಿ ಮದ್ರಾಸ್ ” ನಲ್ಲಿ ಎಂ.ಟೆಕ್ ಪದವಿಯಲ್ಲಿ  ಶೇ.91 ಅಂಕಗಳಿಸಿ ತೇಗ೯ಡೆ ಹೊಂದಿದ್ದಾರೆ. “ಆಂತರಿಕ ಕರ್ಮಯೋಗ”  ವಿಭಾಗದಲ್ಲಿ ಚಿನ್ನದ ಪದಕವನ್ನು ಗಳಿಸಿರುವ ಸ್ವರೂಪ್ ಗೆ ಚೆನ್ನೈ ನಲ್ಲಿ ನಡೆದ ಘಟಿಕೋತ್ಸವ ಸಮಾರಂಭದಲ್ಲಿ  ಪದವಿ ಪ್ರದಾನ ಮಾಡಲಾಯಿತು. ಭಾರತೀಯ ಭೂಸೇನೆಯಲ್ಲಿ ಅಧಿಕಾರಿಯಾಗಿರುವ ಇವರು  ಮಡಿಕೇರಿಯ ಸಿವಿಎಸ್ ಬ್ರದಸ್೯ ನ ಸಿ.ಎಸ್.ವಿಶಾಲಾಕ್ಷಿ ಮತ್ತು ದಿ.ಸಿ.ವಿ. ಸದಾಶಿವ ರಾವ್ ಅವರ ಮೊಮ್ಮಗನಾಗಿದ್ದು,  ದಿ.ಸಿ.ಎಸ್.ರಾಮ್ ಸ್ವರೂಪ್ ಮತ್ತು ಸಿ.ಆರ್.ವಿದ್ಯಾ ದಂಪತಿಯ ಪುತ್ರ.

Read More

ಮಡಿಕೇರಿ ಜು.31 NEWS DESK : ಪ್ರಾಕೃತಿಕ ವಿಕೋಪ ನಿರ್ವಹಣೆ ಸಂಬಂಧ ಕಂದಾಯ ಸಚಿವ  ಕೃಷ್ಣ ಬೈರೇಗೌಡ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರಿಂದ ಹಾರಂಗಿ ಪ್ರವಾಸಿ ಮಂದಿರದಲ್ಲಿ ಮಾಹಿತಿ ಪಡೆದರು. ರಸ್ತೆ, ಸೇತುವೆ, ವಿದ್ಯುತ್ ಕಂಬ ಮತ್ತು ಪರಿವರ್ತಕಗಳು, ಬೆಳೆ ಹಾಗೂ ಮನೆ ಹಾನಿ ಹೀಗೆ ಪ್ರಾಕೃತಿಕ ವಿಕೋಪದಿಂದ ಉಂಟಾದ ನಷ್ಟದ ಬಗ್ಗೆ ಮಾಹಿತಿ ಪಡೆದರು.

Read More

ಮಡಿಕೇರಿ ಜು.31 NEWS DESK : ಪಶ್ಚಿಮ ಘಟ್ಟವೂ ಸೇರಿದಂತೆ ದೇಶಾದ್ಯಂತ ಗುಡ್ಡ ಪ್ರದೇಶಗಳ ಸಂಪೂರ್ಣ ಅಧ್ಯಯನದ ಭೂಕುಸಿತ ಒಳಗಾಗುವ ಮ್ಯಾಪಿಂಗ್ (Landslide suspectibility Mapping-LSM) ಕುರಿತಂತೆ ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ (Geological survey of India-GSI) ಗೆ ಸರ್ಕಾರ ಹೆಚ್ಚಿನ ಹಣವನ್ನು ಮೀಸಲು ಇಟ್ಟು, ಈ ಮ್ಯಾಪ್ ಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಕ್ರಮ ಕೈಗೊಳ್ಳಬೇಕೆಂದು ಶಾಸಕ ಡಾ.ಮಂತರ್ ಗೌಡ‌ ತಿಳಿಸಿದರು. ಭೂಕುಸಿತಕ್ಕೆ ಒಳಗಾಗುವ ಮ್ಯಾಪಿಂಗ್ (LSM) ಮೆಸ್ಕೋ (mesco) (1:10,000) ಸ್ಕೇಲ್ ಮೇಲೆ ನಡಿಯುತ್ತಿರುವ ಯೋಜನೆಗಳನ್ನು ಆದಷ್ಟು ಬೇಗ ಪೂರ್ಣಗೊಳಿಸಲು ಇನ್ನಷ್ಟು ಹಣಕಾಸಿನ ನೆರವಿನ ಅಗತ್ಯ ಇದೆ ಎಂದು ಅವರು ಅಭಿಪ್ರಾಯಪಟ್ಟರು. ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ ಕೊಡಗಿನ ಗಾಳಿಬೀಡು‌-ಆಂಚಾಲ್ ಪ್ರದೇಶದ ಮ್ಯಾಪಿಂಗ್ ಸೇರಿದಂತೆ ಒಟ್ಟು 37 ಯೋಜನೆಗಳನ್ನು 2023-2024 ರಲ್ಲಿ ಕೈಗೊಂಡಿದೆ. ಆದರೆ ಈ ಯೋಜನೆಗಳು ವೇಗವಾಗಿ ಗುರಿ ಮುಟ್ಟಬೇಕಾದರೆ ಹಣಕಾಸಿನ ನೆರವು ಅಗತ್ಯವಿದೆ. ಈ ವಿಷಯವನ್ನು ನಾವು ಗಂಭೀರವಾಗಿ ಪರಿಗಣಿಸಬೇಕಾಗಿದೆ ಎಂದು ಶಾಸಕರು ಹೇಳಿದರು. ಭವಿಷ್ಯದ…

Read More