ನಾಪೋಕ್ಲು ಸೆ.3 NEWS DESK : ಮೈಸೂರಿನ ಕೊಡಗು ಗೌಡ ಸಮಾಜದ ವತಿಯಿಂದ ಕೈಲು ಮುಹೂರ್ತ (ಕೈಲ್ ಪೊಳ್ದ್) ಪ್ರಯುಕ್ತ ಜನಾಂಗ ಬಂಧುಗಳಿಗೆ ಕ್ರೀಡಾಕೂಟ ನಡೆಯಿತು. ಮೈಸೂರಿನ ವಿಶ್ವ ವಿದ್ಯಾಲಯ ಕ್ರೀಡಾ ಮೈದಾನದಲ್ಲಿ ನಡೆದ ಕ್ರೀಡಾಕೂಟ ವನ್ನು ಕೊಡಗು ಗೌಡ ಸಮಾಜದ ಅಧ್ಯಕ್ಷ ಕೊಂಬಾರನ ಬಸಪ್ಪ ಬಲೂನು ಹಾರಿಬಿಡುವ ಮೂಲಕ ಉದ್ಘಾಟಿಸಿದರು. ನಂತರ ನಡೆದ ಕ್ರೀಡಾಕೂಟದಲ್ಲಿ 5 ವರ್ಷದ ಮಕ್ಕಳಿಂದ ಹಿಡಿದು 70 ವರ್ಷ ವಯಸ್ಸಿನ, ಪುರುಷ ಮತ್ತು ಮಹಿಳಾ ವಿಭಾಗದಲ್ಲಿ ತಲಾ ಎರಡು ಸ್ಪರ್ಧೆ ಗಳಂತೆ ಒಟ್ಟು 40 ಸ್ಪರ್ಧೆಗಳು ನಡೆದವು. ಇದರೊಂದಿಗೆ ಸಾಂಪ್ರದಾಯಿಕ ಕಾಯಿಗೆ ಕಲ್ಲು ಹೊಡೆಯುವ ಸ್ಪರ್ಧೆಯು ನಡೆಯಿತು. ಇದೆ ಕ್ರೀಡಾ ಕೂಟದ ಭಾಗವಾಗಿ ಪುರುಷರು ಮತ್ತು ಮಹಿಳೆಯರಿಗೆ ಶಟಲ್ ಬ್ಯಾಡ್ಮಿಂಟನ್ ಸ್ಪರ್ದೆ ಹಾಗೂ ಕ್ರಿಕೆಟ್ ಪಂದ್ಯಾಟ ಗಳು ನಡೆದವು. ಈ ಸಂದರ್ಭ ವೇದಿಕೆಯಲ್ಲಿ ಮೈಸೂರು ಕೊಡಗು ಗೌಡ ಸಮಾಜದ ಮಾಜಿ ಅಧ್ಯಕ್ಷ ತೋಟಂಬೈಲು ಮನೋಹರ್, ಕ್ರೀಡಾ ಸಂಚಾಲಕ ಕೊಂಬಾರಾನ ಸುಬ್ಬಯ್ಯ, ಮಾಜಿ ಸೈನಿಕರ ಸಂಘದ ಅಧ್ಯಕ್ಷ…
ಲೇಖಕ: admin
ಕೊಡ್ಲಿಪೇಟೆ ಸೆ.3 NEWS DESK : ಮನುಕುಲಕ್ಕೆ ನೈತಿಕತೆಯ ಪಾಠಮಾಡಿ ಸತ್ಯ-ಶುದ್ಧ ಸನ್ನಡತೆಯ ಸಾತ್ವಿಕ ಬದುಕಿನ ಸಂಸ್ಕಾರ ಅರುಹಿದ ಚೈತನ್ಯ ಶಕ್ತಿಯೇ ಶ್ರೀ ವೀರಭದ್ರ ದೇವರು. ಬದುಕಿನ ಶ್ರೇಷ್ಠ ನಡೆ-ನುಡಿಗೆ ಅಗತ್ಯವಾದ ಧರ್ಮ ಮಾರ್ಗದಲ್ಲಿ ಕೈಹಿಡಿದು ಮುನ್ನಡೆಸಿದ ಮಹಾನುಭಾವನೇ ಶ್ರೀ ವೀರಭದ್ರ ಎಂದು ಕಿರಿಕೊಡ್ಲಿ ಮಠಾಧ್ಯಕ್ಷ ಶ್ರೀ ಸದಾಶಿವ ಸ್ವಾಮೀಜಿ ಹೇಳಿದರು. ಕೊಡಗು ವೀರಶೈವ ಲಿಂಗಾಯತ ಸಂಘಟನಾ ವೇದಿಕೆ, ನೀರುಗುಂದ ಶ್ರೀ ವೀರಭದ್ರೇಶ್ವರ ದೇವಾಲಯ ಸಮಿತಿಯ ಸಹಯೋಗದೊಂದಿಗೆ ನಡೆದ ಶ್ರೀ ವೀರಭದ್ರೇಶ್ವರ ಸ್ವಾಮಿ ಜನ್ಮ ವರ್ಧಂತಿ ಆರನೇ ವರ್ಷದ ಮಹೋತ್ಸವ ಕಾರ್ಯಕ್ರಮಕ್ಕೆ ನೀರಗುಂದ ಶ್ರೀ ವೀರಭದ್ರೇಶ್ವರ ದೇವಾಲಯದಲ್ಲಿ ಚಾಲನೆ ನೀಡಿ ಆಶೀರ್ವಚನದಲ್ಲಿ ಮಾತನಾಡಿದ ಅವರು, ಭಾದ್ರಪದ ಮಾಸದ ಮೊದಲ ಮಂಗಳವಾರದಂದು ಪ್ರತೀ ವರ್ಷ ಶ್ರೀ ಸ್ವಾಮಿಯ ಜಯಂತಿ ಆಚರಿಸಲಾಗುತ್ತಿದೆ. ಮಾನವನ ಇಹದ ಬದುಕಿನ ಸ್ತರಗಳಲ್ಲಿ ಇರಬಹುದಾದ ಜನವಿರೋಧಿ ಕೃತ್ಯಗಳ ನಿವಾರಣೆಗೆ ಶ್ರೀ ವೀರಭದ್ರ ದೇವರ ಮಹಾಶಕ್ತಿ ಸಂಚಯವು ನಿರಂತರ ಪ್ರಭಾವ ಬೀರುತ್ತದೆ ಎಂದರು. ಸಾಕ್ಷಾತ್ ಶಿವನೇ ತೊಂದರೆಯಲ್ಲಿದ್ದಾಗ ರಕ್ಷಣೆಗೆ ಅವತರಿಸಿದ ದೈವ…
ಮಡಿಕೇರಿ ಸೆ.3 NEWS DESK : ಕಳೆದ ಎರಡು ದಿನಗಳು ಸುರಿದ ಮಳೆಯಿಂದಾಗಿ ಶನಿವಾರಸಂತೆಯ ಗೌಡಳ್ಳಿ ಗ್ರಾಮ ಪಂಚಾಯತಿಗೆ ಸೇರಿದ ರಾಮನಹಳ್ಳಿ ಗ್ರಾಮದ ಸುರೇಶ್ ಎಂಬುವರ ಮನೆ ಸಂಪೂರ್ಣವಾಗಿ ಹಾನಿಗೊಳಗಾಗಿದ್ದು, ದಿನಬಳಕೆಯ ವಸ್ತುಗಳು ಸಂಪೂರ್ಣವಾಗಿ ಹಾನಿಯಾಗಿದೆ. ಸರ್ಕಾರದಿಂದ ತಕ್ಷಣ ಪರಿಹಾರ ಕೊಡಬೇಕು ಹಾಗೂ ನೂತನ ಮನೆ ನಿರ್ಮಿಸಿಕೊಡಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಮನವಿ ಮಾಡಿದೆ.
ನಾಪೋಕ್ಲು ಸೆ.3 NEWS DESK : ಭಗವತಿ ಯುವಕ ಸಂಘ ದ ವತಿಯಿಂದ ಸ್ಥಳೀಯ (ಕೆ ಪಿ ಎಸ್) ಸರ್ಕಾರಿ ಪ್ರಾಥಮಿಕ ಶಾಲಾ ಮಕ್ಕಳಿಗೆ ಸ್ಟೀಲ್ ಊಟದ ತಟ್ಟೆ ಹಾಗೂ ಲೋಟವನ್ನು ಕೊಡುಗೆಯಾಗಿ ವಿತರಿಸಲಾಯಿತು. ಈ ಕಾರ್ಯಕ್ರಮ ದಲ್ಲಿ ಕೆ ಪಿ ಎಸ್ ಶಾಲಾ ಉಪಾಧ್ಯಕ್ಷ ಎನ್. ಎಸ್. ಉದಯಶಂಕರ್, ಭಗವತಿ ಯುವಕ ಸಂಘ ದ ಅಧ್ಯಕ್ಷ ಕುಲ್ಲೇಟ್ಟಿರ ದೇವಿ ದೇವಯ್ಯ, ಕಾರ್ಯದರ್ಶಿ ಶಿವಚಾಳಿಯಂಡ ಕಿಶೋರ್ ಬೋಪಣ್ಣ, ಮಾಜಿ ಅಧ್ಯಕ್ಷ ಜಾಲಿ ಪೂವಪ್ಪ, ಗ್ರಾ.ಪಂ ಸದಸ್ಯ ಶಿವಚಾಳಿಯಂಡ ಜಗದೀಶ್, ಯುವಕ ಸಂಘ ದ ಸದಸ್ಯ ಬೊಪ್ಪಂಡ ವೀರನ್ ಶಾಲಾ ಶಿಕ್ಷಕರು ಹಾಗೂ ಸಿಬ್ಬಂದಿ ಹಾಜರಿದ್ದರು. ವರದಿ : ದುಗ್ಗಳ ಸದಾನಂದ.
ಮಡಿಕೇರಿ ಸೆ.3 NEWS DESK : ಕೊಡಗು ಪತ್ರಕರ್ತರ ಸಂಘದ ಸೋಮವಾರಪೇಟೆ ತಾಲೂಕು ಘಟಕ ರಚಿಸಲಾಗಿದ್ದು, ಅಧ್ಯಕ್ಷರಾಗಿ ಕನ್ನಡಪ್ರಭ ಶನಿವಾರಸಂತೆ ವರದಿಗಾರ ಹೆಚ್.ಆರ್.ಹರೀಶ್ ಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಪ್ರಜಾವಾಣಿ ಸೋಮವಾರಪೇಟೆ ವರದಿಗಾರ ಡಿ.ಪಿ.ಲೋಕೇಶ್ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ವಿಜಯ ಕರ್ನಾಟಕ ಸೋಮವಾರಪೇಟೆ ವರದಿಗಾರ ತೇಲಪಂಡ ಕವನ್ ಕಾರ್ಯಪ್ಪ, ಖಜಾಂಚಿಯಾಗಿ ಸೋಮವಾರಪೇಟೆ ಕೊಡಗು ಚಾನೆಲ್ ವರದಿಗಾರ ದುಷ್ಯಂತ್ ಕುಮಾರ್, ಸಹ ಕಾರ್ಯದರ್ಶಿಯಾಗಿ ಕಾವೇರಿ ವೆಬ್ ಚಾನೆಲ್ ನ ಶನಿವಾರಸಂತೆ ವರದಿಗಾರ ಹೋಮೇಶ್ ಮಣಗಲಿ ಆಯ್ಕೆಯಾಗಿದ್ದಾರೆ. ನಿರ್ದೇಶಕರಾಗಿ ಜಯಪ್ಪ ಹಾನಗಲ್, ಟೋಮಿ ಥಾಮಸ್, ಎಸ್.ಆರ್.ವಸಂತ್, ಸುಕುಮಾರ್ ಆಯ್ಕೆಯಾಗಿದ್ದಾರೆ. ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಎ.ಎಸ್.ಮುರುಳೀಧರ್ ಅಧ್ಯಕ್ಷತೆಯಲ್ಲಿ ಸೋಮವಾರಪೇಟೆ ಪತ್ರಿಕಾ ಭವನದಲ್ಲಿ ನಡೆದ ಸಭೆಯಲ್ಲಿ ನೂತನ ಆಡಳಿತ ಮಂಡಳಿಯನ್ನು ರಚಿಸಲಾಯಿತು.
ಮಡಿಕೇರಿ ಸೆ.3 NEWS DESK : ಗೌಳಿಬೀದಿಯ ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಸ್ಪರ್ಧೆ ಹಾಗೂ ಮಕ್ಕಳ ಛದ್ಮವೇಷ ಸಂಭ್ರಮದಿಂದ ನಡೆಯಿತು. ಗೌಳಿ ಸಮುದಾಯದವರು ಅನಾದಿ ಕಾಲದಿಂದಲೂ ವಿಶೇಷವಾಗಿ ಆಚರಿಸಿಕೊಂಡು ಬರುತ್ತಿರುವಂತೆ ಶ್ರೀ ಕೃಷ್ಣ ಜಯಂತಿಯನ್ನು ಈ ವರ್ಷವೂ ದೇವಾಲಯ ಸಮಿತಿಯಿಂದ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಮೊಸರು ಕುಡಿಕೆ ಒಡೆಯುವ ಸ್ಪರ್ಧಿಗಳಾಗಿ ಸಂತೋಷ್ ಬಲರಾಮ್ ಹಾಗೂ ಮಹೇಶ್ ರಾಮು ಭಾಗವಹಿಸಿದರು. ಸ್ಪರ್ಧೆಗೂ ಮುನ್ನ ದೇವಾಲಯದಲ್ಲಿ ಶ್ರೀ ಕೃಷ್ಣನಿಗೆ ವಿಶೇಷ ಪೂಜೆ, ಶ್ರೀ ರಾಮಾಂಜನೇಯ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ನಡೆಯಿತು. ನೆರೆದಿದ್ದ ಭಕ್ತರಿಗೆ ಪ್ರಸಾದ ವಿನಿಯೋಗ ಮಾಡಲಾಯಿತು. ನಂತರ ಇಬ್ಬರು ಯುವಕರು ಮೊಸರು ಕುಡಿಕೆ ಒಡೆಯಲು ಮುಂದಾದರು.. ಯುವಕರು ನೀರಿನೇಟನ್ನು ಲೆಕ್ಕಿಸದೆ ವಾದ್ಯಕ್ಕೆ ಸರಿಯಾಗಿ ಹೆಜ್ಜೆ ಹಾಕುತ್ತಾ ಮೊಸರು ಕುಡಿಕೆ ಓಡೆಯುವಲ್ಲಿ ಯಶಸ್ವಿಯಾದರು.ವಿಜೇತರಾದ ಸ್ಪರ್ಧಿಗಳಿಗೆ ದೇವಾಲಯದಲ್ಲಿ ಸಾಂಪ್ರದಾಯಕ ಬಹುಮಾನ ನೀಡಿ ಗೌರವಿಸಲಾಯಿತು. ಛದ್ಮ ವೇಷ ಸ್ಪರ್ಧೆ :: ಮೊಸರು ಕುಡಿಕೆ ಸ್ಪರ್ಧೆಯ ನಂತರ ಮಕ್ಕಳಿಗೆ ಏರ್ಪಡಿಸಲಾಗಿದ್ದ…
ಮಡಿಕೇರಿ ಸೆ.3 NEWS DESK : ಕೊಡಗು ಜಿಲ್ಲಾ ದಸಾಪದ ಉದ್ಘಾಟನಾ ಸಮಾರಂಭದ ಪ್ರಯುಕ್ತ ಕೊಡಗು ಜಿಲ್ಲೆಯ ಕನ್ನಡ ಭಾಷಾ ಬೋಧಕರಿಗೆ “ಕನ್ನಡ ಸಾಹಿತ್ಯದಲ್ಲಿ ಪರಿವರ್ತನೆಯ ಹೆಗ್ಗುರುತುಗಳು” ಎಂಬ ವಿಷಯದ ಕುರಿತು ಸೆ.22 ರಂದು ಒಂದು ದಿನದ ಕಾರ್ಯಾಗಾರ ನಡೆಯಲಿದೆ. ಅಂದು ಬೆಳಿಗ್ಗೆ 10 ಗಂಟೆಯಿಂದ ಅಪರಾಹ್ನ3 ಗಂಟೆಯವರೆಗೆ ಮಡಿಕೇರಿಯ ಕೊಹಿನೂರು ರಸ್ತೆಯ ಎಸ್ ಬಿಐ ಬ್ಯಾಂಕ್ ಹತ್ತಿರದ “ವಾಣಿಜ್ಯೋದ್ಯಮಿಗಳ ವಿವಿಧೋದ್ದೇಶ ಸಹಕಾರ ಸಂಘ” ದ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಕೊಡಗು ವಿಶ್ವವಿದ್ಯಾಲಯದ ಕುಲಪತಿ ಡಾ. ಅಶೋಕ ಸಂಗಪ್ಪ ಆಲೂರ ಉದ್ಘಾಟಿಸಲಿದ್ದು, ದಲಿತ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ.ಅರ್ಜುನ ಗೊಳಸಂಗಿ ಅಧ್ಯಕ್ಷತೆ ವಹಿಸಲಿದ್ದಾರೆ. ಉಪನ್ಯಾಸ ಹಾಗೂ ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ಮೈಸೂರು ವಿಶ್ವವಿದ್ಯಾನಿಲಯದ ಗಾಂಧಿ ಸಂಶೋಧನಾ ಕೇಂದ್ರದ ನಿರ್ದೇಶಕ ಪ್ರೊ.ನರೇಂದ್ರಕುಮಾರ್ ಭಾಗವಹಿಸಲಿದ್ದಾರೆ. ಕೊಡಗು ದಸಾಪದ ಜಿಲ್ಲಾಧ್ಯಕ್ಷ ಅರ್ಜುನ್ ಮೌರ್ಯ, ದಸಾಪ ದ ಮೈಸೂರು ವಿಭಾಗೀಯ ಸಂಯೋಜಕ ಡಾ.ಚಂದ್ರಗುಪ್ತ ಸೇರಿದಂತೆ ಕೊಡಗಿನ ವಿವಿಧ ಕ್ಷೇತ್ರದ ಸಂಘಟಕರುಗಳು ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ದಸಾಪ ಪತ್ರಿಕೆ…
ಮಡಿಕೇರಿ ಸೆ.3 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಪೋಷಣ್ ಅಭಿಯಾನ ಯೋಜನೆಯಡಿ ಮಡಿಕೇರಿ ನಗರದ ಚಾಮುಂಡೇಶ್ವರಿ ಅಂಗನವಾಡಿ ಕೇಂದ್ರದಲ್ಲಿ ಮಡಿಕೇರಿ ತಾಲೂಕು ಮಟ್ಟದ ಪೋಷಣ್ ಅಭಿಯಾನ ಮಾಸಾಚರಣೆ ಕಾರ್ಯಕ್ರಮ ನಡೆಯಿತು. ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯಕ್ರಮ ಸಂಚಾಲಕರಾದ ಕಾವ್ಯ ಹಾಗೂ ಅಂಗನವಾಡಿ ಮಕ್ಕಳ ಪೋಷಕರು, ಅಂಗನವಾಡಿ ಕೇಂದ್ರದ ಆವರಣದಲ್ಲಿ ಗಿಡ ನೆಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪ್ರಬಾರೆ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೀಲ ಪೋಷಣ್ ಅಭಿಯಾನ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು. ಈ ಸಂದರ್ಭ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯಕ್ರಮ ಸಂಚಾಲಕರಾದ ಜಯಂತಿ, ನಿತಿನ್, ಎಂಎಸ್‌ಡಬ್ಲ್ಯೂ ವಿದ್ಯಾರ್ಥಿಗಳು ನಗರಸಭಾ ಮಾಜಿ ಸದಸ್ಯ, ಬಾಲ ವಿಕಾಸ ಸಮಿತಿಯ ಅಧ್ಯಕ್ಷರು, ಸದಸ್ಯರು ಮಕ್ಕಳ ತಾಯಂದಿರು, ಗರ್ಭಿಣಿಯರು, ಅಂಗನವಾಡಿ ಕಾರ್ಯಕರ್ತೆ ವಿಜಯ, ಸಹಾಯಕಿ ಯಶೋಧ ಹಾಜರಿದ್ದರು.
ಚೆಟ್ಟಳ್ಳಿ ಸೆ.3 NEWS DESK : ಮಡಿಕೇರಿ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಚೆಟ್ಟಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಬಾಲಕರ ಫುಟ್ಬಾಲ್ ಮತ್ತು ಬಾಲಕಿಯರ ಥ್ರೋಬಾಲ್ ತಂಡ ಪ್ರಥಮ ಸ್ಥಾನಗಳಿಸಿ ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಮಡಿಕೇರಿಯ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆದ ಫುಟ್ಬಾಲ್ ಫೈನಲ್ ಪಂದ್ಯದಲ್ಲಿ ಮಡಿಕೇರಿಯ ಸ.ಮಾ.ಪ್ರಾ. ಶಾಲಾ ಬಾಲಕರ ತಂಡವನ್ನು ಮಣಿಸಿ ಚೆಟ್ಟಳ್ಳಿ ಸರ್ಕಾರಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಗೆಲುವು ಸಾಧಿಸಿದ್ದಾರೆ. ಥ್ರೋಬಾಲ್ ಫೈನಲ್ ಪಂದ್ಯದಲ್ಲಿ ಸಂತ ಮೈಕಲರ ಶಾಲಾ ಬಾಲಕಿಯರು ತಂಡವನ್ನು ಮಣಿಸಿ ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಈ ಸಂದರ್ಭ ಚೆಟ್ಟಳ್ಳಿ ಶಾಲೆಯ ದೈಹಿಕ ಶಿಕ್ಷಕ ಕುಶಾಲಪ್ಪ, ಸಹ ಶಿಕ್ಷಕರಾದ ಅಶೋಕ, ರಸೀನ ಮತ್ತು ಶಾಂಭವಿ ಇದ್ದರು.
ಮಡಿಕೇರಿ ಸೆ.3 NEWS DESK : ಕತ್ತಲೆಕಾಡು, ಜೇನುಕೊಲ್ಲಿ ಗ್ರಾಮದ ಶ್ರೀ ವಿನಾಯಕ ಸೇವಾ ಟ್ರಸ್ಟ್ ನ ಲೋಗೋ ಬಿಡುಗಡೆಗೊಂಡಿತು. ಟ್ರಸ್ಟ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಡಿಕೇರಿಯ ಶ್ರೀ ರಾಮಾಂಜನೇಯ ಭಜನಾ ತಂಡದ ಮುಖ್ಯಸ್ಥ ಕುಮಾರ್ ಲಾಂಛನ ಬಿಡುಗಡೆ ಮಾಡಿದರು. ಟ್ರಸ್ಟ್ ಪ್ರಮುಖರು ಮಾತನಾಡಿ, 18ನೇ ವರ್ಷದ ಗೌರಿ ಗಣೇಶೋತ್ಸವವನ್ನು ಮೂರು ದಿನ ಕಾಲ ಆಚರಿಸಲಾಗುತ್ತದೆ. ಸೆ.7ರಂದು ಭಾರತ್ ಮತಾ ಪೂಜೆ, ಧ್ವಜಾರೋಹಣದೊಂದಿಗೆ ಗಣೇಶ ಪ್ರತಿಷ್ಠಾಪನೆ, 8 ರಂದು ಬೆಳಗ್ಗೆ 10 ಗಂಟೆಗೆ ಸತ್ಯನಾರಾಯಣ ಪೂಜೆ, 9ಕ್ಕೆ ಮಧ್ಯಾಹ್ನ ಮಹಾಪೂಜೆ ಬಳಿಕ ಮೆರವಣಿಗೆ ನಡೆಸಿ ವಿಸರ್ಜನೆ ಮಾಡಲಾಗುವುದೆಂದು ತಿಳಿಸಿದರು. ಟ್ರಸ್ಟ್ ಅಧ್ಯಕ್ಷ ಹೊನ್ನಪ್ಪ ಆಚಾರ್ಯ, ಉಪಾಧ್ಯಕ್ಷ ಚಂದ್ರಶೇಖರ ರೈ, ಕಾರ್ಯದರ್ಶಿ ಬ್ರಿಜೇಶ್ ಖಜಾಂಚಿ ನವೀನ್, ಗಣೇಶೋತ್ಸವ ಸಮಿತಿ ಅಧ್ಯಕ್ಷ ಅಶೋಕ, ಸಹ ಖಜಾಂಚಿ ಜಯಪ್ರಕಾಶ್, ಮಹಿಳಾ ಘಟಕದ ಪುಷ್ಪಾವತಿ, ಸುಶೀಲ, ವಿದ್ಯಾರ್ಥಿ ಘಟಕದ ಸದಸ್ಯರು, ಸಾರ್ವಜನಿಕರು ಹಾಜರಿದ್ದರು.






