ಮಡಿಕೇರಿ NEWS DESK ಸೆ.18 : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ 8 ಹೋಬಳಿ ಕೇಂದ್ರದ ಶಾಲಾ ಆಟದ ಮೈದಾನವನ್ನು ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ತಲಾ 25 ಲಕ್ಷ ರೂ. ಬಿಡುಗಡೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ತಿಳಿಸಿದ್ದಾರೆ. ಕೊಡಗು ಜಿಲ್ಲಾಡಳಿತ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕು ಇವರ ಸಂಯುಕ್ತ ಆಶ್ರಯದಲ್ಲಿ ಹುದಿಕೇರಿ ಜನತಾ ಪ್ರೌಢಶಾಲೆಯಲ್ಲಿ ಕೊಡಗು ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ ಮತ್ತು ಬಾಲಕಿಯರ ಕ್ರೀಡಾಕೂಟಕ್ಕೆ ಬುಧವಾರ ಚಾಲನೆ ನೀಡಿ ಅವರು ಮಾತನಾಡಿದರು. ಕೊಡಗು ಜಿಲ್ಲೆ ಕ್ರೀಡಾಕ್ಷೇತ್ರದಲ್ಲಿ ತನ್ನದೇ ಆದ ಹೆಸರು ಗಳಿಸಿದ್ದು, ಕ್ರೀಡಾಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡುವ ನಿಟ್ಟಿನಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ 8 ಹೋಬಳಿಯ ಶಾಲಾ ಆಟದ ಮೈದಾನಗಳನ್ನು ಅಭಿವೃದ್ಧಿ ಪಡಿಸಲು ಮುಂದಾಗಲಾಗಿದೆ. ಆ ನಿಟ್ಟಿನಲ್ಲಿ ಈಗಾಗಲೇ ವಿರಾಜಪೇಟೆ ಮತ್ತು ಹುದಿಕೇರಿಯಲ್ಲಿ ಕಾಮಗಾರಿ ನಡೆದಿದೆ. ಉಳಿದ 6 ಆಟದ ಮೈದಾನದ…
ಲೇಖಕ: admin
ಮಡಿಕೇರಿ ಸೆ.18 NEWS DESK : ರೋಟರಿ ಮಡಿಕೇರಿ ಸಂಸ್ಥೆಯಿಂದ ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜ್ ನಲ್ಲಿ ಇಂಟರ‍್ಯಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ನಡೆಯಿತು. ಸರ್ಕಾರಿ ಪದವಿ ಪೂರ್ವ ಕಾಲೇಜ್ ನ ಇಂಟರ್ಯಾಕ್ಟ್ ಕ್ಲಬ್ ನ ಅಧ್ಯಕ್ಷರಾಗಿ ದ್ವಿತೀಯ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿ ಮಿಥುನ್ ಪೂವಯ್ಯ ಹಾಗೂ ಕಾರ್ಯದರ್ಶಿಯಾಗಿ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಕೆ.ಅನುಷಾ ಅಧಿಕಾರ ಸ್ವೀಕರಿಸಿದರು. ಪಿ.ಡಿ.ಜಿ.ರೋಟರಿಯನ್ ಡಾ.ಕೆ.ರವಿ ಅಪ್ಪಾಜಿ ಪದಗ್ರಹಣ ಅಧಿಕಾರಿಯಾಗಿ ಪಾಲ್ಗೊಂಡು ಕ್ಲಬ್‍ನ 25 ಸದಸ್ಯರುಗಳಿಗೆ ಪ್ರಮಾಣ ವಚನ ಬೋಧಿಸಿದರು. ನಂತರ ಮಾತನಾಡಿದ ಅವರು, ವಿದ್ಯಾರ್ಥಿಗಳು ಜೀವನದಲ್ಲಿ ತಾಳ್ಮೆಯನ್ನು ರೂಢಿಸಿಕೊಂಡರೆ ಆತ್ಮಸ್ಥೈರ್ಯ ಹೆಚ್ಚಾಗಿ ಮುಂದೆ ಎದುರಾಗಬಹುದಾದ ಎಲ್ಲಾ ಕಷ್ಟಗಳನ್ನು ಎದುರಿಸಬಹುದಾಗಿದೆ. ಪ್ರಪಂಚದ ಅತ್ಯಂತ ಯಶಸ್ವಿ ವ್ಯಕ್ತಿಗಳು ಜೀವನದಲ್ಲಿ ತಾಳ್ಮೆಯಿಂದ ಎಲ್ಲಾ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ ಎನ್ನುವ ಸತ್ಯವನ್ನು ಅಮೆರಿಕದ ಸ್ಟೆಂಡ್‍ಫರ್‍ಡ್ ವಿಶ್ವವಿದ್ಯಾನಿಲಯ ನಡೆಸಿದ ಸಂಶೋಧನೆ ಬಹಿರಂಗ ಪಡಿಸಿದೆ ಎಂದು ತಿಳಿಸಿದರು. ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ರೋಟರಿ ಸಂಸ್ಥೆಯ ಅಧ್ಯಕ್ಷ ರೋಟರಿಯನ್ ಎಂ.ಸುದಯ್…
ಕೊಡ್ಲಿಪೇಟೆ ಸೆ.18 NEWS DESK : ಮಕ್ಕಳಲ್ಲಿ ಅಡಗಿರುವ ಅಂತರಿಕ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಲು ಪ್ರತಿಭಾ ಕಾರಂಜಿ ಸಾಂಸ್ಕೃತಿಕ ಕಾಲೋತ್ಸವ ಸ್ಪರ್ಧೆಗಳು ಉತ್ತಮ ವೇದಿಕೆಯಾಗಿವೆ ಎಂದು ಕೊಡ್ಲಿಪೇಟೆ ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ ಹೇಳಿದರು. ಕೊಡಗು ಜಿಲ್ಲಾ ಪಂಚಾಯಿತಿ,ಶಾಲಾ ಶಿಕ್ಷಣ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಮತ್ತು ಸಮನ್ವಯಾಧಿಕಾರಿಗಳ ಕಚೇರಿ ಸೋಮವಾರಪೇಟೆ, ಸಮೂಹ ಸಂಪನ್ಮೂಲ ಕೇಂದ್ರ ಕೊಡ್ಲಿಪೇಟೆ ಸಂಯುಕ್ತಾಶ್ರಯದಲ್ಲಿ ಕೊಡ್ಲಿಪೇಟೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಬುಧವಾರ ಏರ್ಪಡಿಸಿದ್ದ ಪ್ರತಿಭಾ ಕಾರಂಜಿ ಸಾಂಸ್ಕೃತಿಕ ಕಾಲೋತ್ಸವ ಸ್ಪರ್ಧಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳಿಗೆ ಕೇವಲ ಶಿಕ್ಷಣ, ಕ್ರೀಡೆ ಕೊಟ್ಟರೆ ಸಾಲದು ಜೊತೆಗೆ ಮಕ್ಕಳಲ್ಲಿ ಅಂತರಿಕವಾಗಿ ಅಡಗಿರುವ ಪ್ರತಿಭೆಯನ್ನು ಹೊರತರುವ ಕೆಲಸವನ್ನು ಮಾಡಬೇಕು. ಶಾಲಾಭಿವೃದ್ಧಿ ಸಮಿತಿ, ಪೋಷಕರು ಹಾಗೂ ಶಿಕ್ಷಕ ಸಮನ್ವಯತೆ ಕೆಲಸ ಮಾಡಿದರೆ ಗುಣಮಟ್ಟದ ಶಿಕ್ಷಣದೊಂದಿಗೆ ಉತ್ತಮ ಶಾಲೆಯಾಗಿ ರೂಪುಗೊಳಿಸಲು ಸಾಧ್ಯವಾಗುತ್ತದೆ ಎಂದರು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳನ್ನು ಶೇಕಡಾವಾರು ಅಂಕಗಳಲ್ಲಿ ಗುರುತಿಸುವ ಕೆಲಸ ಮಾಡುತ್ತಿರುವುದು ಸರಿಯಲ್ಲ.…
ನಾಪೋಕ್ಲು ಸೆ.18 NEWS DESK : ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಕ್ಕಬ್ಬೆ ಕಾರ್ಯಕ್ಷೇತ್ರದ ಸ್ಫೂರ್ತಿ ಜ್ಞಾನ ವಿಕಾಸ ಕೇಂದ್ರ ಸಭೆಯನ್ನು ಕಕ್ಕಬ್ಬೆ ಮಹಿಳಾ ಸಮಾಜದಲ್ಲಿ ನಡೆಸಲಾಯಿತು. ಸಭೆಯಲ್ಲಿ ನಾಪೋಕ್ಲು ಗ್ರಾ.ಪಂ ಸದಸ್ಯರಾದ ಅರುಣ್ ಬೇಬ ಅವರು ವಿಕಾಸ ಕೇಂದ್ರ ಸದಸ್ಯರಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳ ಬಗ್ಗೆ ಉತ್ತಮವಾದ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಸದಸ್ಯರಿಗೆ ಕೆಲವು ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತರಾದವರಿಗೆ ಬಹುಮಾನವನ್ನು ವಿತರಿಸಲಾಯಿತು. ಸಭೆಯಲ್ಲಿ ಜ್ಞಾನ ವಿಕಾಸ ಸಮನ್ವಯಧಿಕಾರಿ ಮಾಲಿನಿ , ಸೇವಾಪ್ರತಿನಿಧಿ ಹಾಗೂ ಸಂಘಗಳ ಸದಸ್ಯರು ಹಾಜರಿದ್ದರು. ವರದಿ : ದುಗ್ಗಳ ಸದಾನಂದ.
ಪುತ್ತೂರು ಸೆ.18 NEWS DESK : ನಮ್ಮ ಕನ್ನಡದ ನೆಲ ವಿಜ್ಞಾನ ತಂತ್ರಜ್ಞಾನದ ತವರೂರಾಗಿದೆ. ಇದರ ಬುನಾದಿಯಲ್ಲಿ ಸರ್.ಎಂ.ವಿಶ್ವೇಶ್ವರಯ್ಯನವರ ಆಗಾಧ ಪರಿಶ್ರಮ, ದೂರದೃಷ್ಟಿ ಹಾಗೂ ಸಮಾಜಮುಖಿ ಯೋಜನೆಗಳಿವೆ. ಇವರ ಕಾರ್ಯತತ್ಪರತೆಯು ಇಂದಿನ ಯುವ ಜನತೆಗೆ ದಾರಿದೀಪವಾಗಿದೆ ಎಂದು ಅಸೋಸಿಯೇಶನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್(ಇಂಡಿಯಾ) ಬೆಳ್ತಂಗಡಿ ಘಟಕದ ಅಧ್ಯಕ್ಷ ಜಗದೀಶ್ ಪ್ರಸಾದ್.ಎನ್ ಹೇಳಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಆಶ್ರಯದಲ್ಲಿ ನಡೆದ ಇಂಜಿನಿಯರ್ಸ್ ಡೇ ಆಚರಣೆ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತಾಡಿದರು. ಯಾವುದೇ ಕೆಲಸ ಮಾಡುವಾಗ ತಮ್ಮ ಆತ್ಮಸಾಕ್ಷಿಗೆ ತಕ್ಕಂತೆ ಕೆಲಸ ಮಾಡಬೇಕು, ದಿನದಿಂದ ದಿನಕ್ಕೆ ಬದಲಾಗುವ ತಂತ್ರಜ್ಞಾನವನ್ನು ಇಂಜಿನಿಯರುಗಳು ತಮ್ಮ ಕಾರ್ಯಕ್ಷೇತ್ರದಲ್ಲಿ ಅಳವಡಿಸಿಕೊಂಡು ಸಮಾಜದ ಉನ್ನತಿಗೆ ಮತ್ತು ರಾಷ್ಟ್ರದ ಏಳಿಗೆಗೆ ಶ್ರಮಿಸಬೇಕು ಎಂದರು. ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ ಮಾತನಾಡಿ ವಿಶ್ವೇಶವರಯ್ಯನವರಿಗೆ ಹೋಲಿಸುವ ಇನ್ನೊಬ್ಬ ವ್ಯಕ್ತಿ ನಮಗೆ ಸಿಗಲಾರರು. ಲಂಚಕೋರತನ, ಲಾಭಕೋರತನದ ಸವಾಲನ್ನು ಎದುರಿಸುತ್ತಿರುವ ಸಮಾಜದಲ್ಲಿ ಸರ್.ಎಂ.ವಿ ಯವರ ನಿಸ್ವಾರ್ಥ ದುಡಿಮೆ ನಮಗೆ…
ಮಡಿಕೇರಿ ಸೆ.18 NEWS DESK : ನಾಪೋಕ್ಲು ಟೌನ್ ಮುಹಿಯದ್ದೀನ್ ಸುನ್ನಿ ಮುಸ್ಲಿಂ ಜಮಾಅತ್ ಆಶ್ರಯದಲ್ಲಿ ಸೆ.20 ರಿಂದ 22ರ ವರೆಗೆ “ಮದದೇ ಮದೀನಾ” ಬೃಹತ್ ಮಿಲಾದ್ ಸಮಾವೇಶ ನಾಪೋಕ್ಲುವಿನಲ್ಲಿ ನಡೆಯಲಿದೆ ಎಂದು ಜಮಾಅತ್‍ನ ಅಧ್ಯಕ್ಷ ಎಂ.ಹೆಚ್.ಅಬ್ದುಲ್ ರೆಹಮಾನ್ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಪೋಕ್ಲು ಮಾರುಕಟ್ಟೆ ಆವರಣದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಸಮಾವೇಶಕ್ಕೆ ಸೆ.20 ರಂದು ಜುಮುಅ ನಮಾಜ್‍ನ ನಂತರ ನಾಪೋಕ್ಲು ಟೌನ್ ಮುಹಿಯದ್ದೀನ್ ಸುನ್ನಿ ಮುಸ್ಲಿಂ ಜಮಾಅತ್‍ನ ಅಧ್ಯಕ್ಷ ಎಂ.ಹೆಚ್.ಅಬ್ದುಲ್ ರೆಹಮಾನ್ ನೇತೃತ್ವದಲ್ಲಿ ಧ್ವಜಾರೋಹಣ ನೆರವೇರಿಸುವ ಮೂಲಕ ಚಾಲನೆ ದೊರೆಯಲಿದೆ ಎಂದರು. ಸಂಜೆ 7 ಗಂಟೆಗೆ ಧಾರ್ಮಿಕ ಪ್ರಭಾಷಣ ನಡೆಯಲಿದ್ದು, ನಾಪೋಕ್ಲು ಟೌನ್ ಮುಸ್ಲಿಂ ಜಮಾಅತ್ ಮುದರಿಸ್ ಅಶ್ರಫ್ ಅಹ್ಸನಿ ಕಾಮಿಲ್ ಸಖಾಫಿ ಉದ್ಘಾಟಿಸಲಿದ್ದಾರೆ. ಮಿಲಾದ್ ಸ್ವಾಗತ ಸಮಿತಿ ಗೌರವಾಧ್ಯಕ್ಷ ಉಸ್ಮಾನ್ ಹಾಜಿ ಅಧ್ಯಕ್ಷತೆ ವಹಿಸಲಿದ್ದು, ನಾಪೋಕ್ಲು ಟೌನ್ ಸುನ್ನಿ ಮುಸ್ಲಿಂ ಜಮಾಅತ್ ಖತೀಬ್ ಉಬೈದ್ ಸಖಾಫಿ ಅಲ್ ಅಝ್‍ಹರಿ ವಯನಾಡ್ ಮುಖ್ಯ ಪ್ರಭಾಷಣ ಮಾಡಲಿದ್ದಾರೆ.…
ಮಡಿಕೇರಿ ಸೆ.18 NEWS DESK : ಕೊಡಗು ಪ್ರೆಸ್ ಕ್ಲಬ್ ನ ನೂತನ ಆಡಳಿತ ಮಂಡಳಿಯ ಪದಗ್ರಹಣ ಸಮಾರಂಭ ಸೆ.22 ರಂದು ಬೆಳಿಗ್ಗೆ 10.30 ಗಂಟೆಗೆ ಮಡಿಕೇರಿ ಸಮೀಪದ ಕ್ಯಾಪಿಟಲ್ ವಿಲೇಜ್ ನಲ್ಲಿ ನಡೆಯಲಿದೆ. ಶಕ್ತಿ ದಿನಪತ್ರಿಕೆಯ ಪ್ರಧಾನ ಸಂಪಾದಕ ಜಿ.ರಾಜೇಂದ್ರ ಅವರು, ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ನೂತನ ಅಧ್ಯಕ್ಷರಾಗಿ ಬೊಳ್ಳಜಿರ ಬಿ.ಅಯ್ಯಪ್ಪ ಹಾಗೂ ಪದಾಧಿಕಾರಿಗಳು ಅಧಿಕಾರ ಸ್ವೀಕರಿಸಲಿದ್ದಾರೆ. ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಹಾಗೂ ಕೊಡಗು ಪ್ರೆಸ್ ಕ್ಲಬ್ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾದ ಅಜ್ಜಮಾಡ ರಮೇಶ್ ಕುಟ್ಟಪ್ಪ ಅವರು ಪ್ರಮಾಣ ವಚನ ಬೋಧಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷೆ ಬಿ.ಆರ್.ಸವಿತಾ ರೈ ಪಾಲ್ಗೊಳ್ಳಲಿದ್ದಾರೆ.
ಸುಂಟಿಕೊಪ್ಪ ಸೆ.18 NEWS DESK : ಶ್ರೀದೇವಿ ನಾರ್ಗಾಣೆ ಗ್ರಾಮದ ಶ್ರೀ ವಿನಾಯಕ ಸೇವಾ ಸಮಿತಿಯ 11ನೇ ವರ್ಷದ ಗೌರಿ ಗಣೇಶೋತ್ಸವದ ಅಂಗವಾಗಿ ಅಣ್ಣಪ್ಪಸ್ವಾಮಿ ದೇವಸ್ಥಾನದಲ್ಲಿ ಶ್ರೀ ಗೌರಿ ಗಣೇಶ ಉತ್ಸವ ಮೂರ್ತಿಯನ್ನು ಶ್ರದ್ಧಾಭಕ್ತಿಯಿಂದ ವಿಸರ್ಜಿಸಲಾಯಿತು. ಗಣೇಶನ ಮೂರ್ತಿಯನ್ನು ಭವ್ಯ ಮಂಟಪದಲ್ಲಿರಿಸಿ ಗ್ರಾಮದ ಮುಖ್ಯ ಬೀದಿಯಲ್ಲಿ ಅದ್ಧೂರಿಯಾಗಿ ಮೆರವಣಿಗೆ ನಡೆಸಲಾಯಿತು. ಅಣ್ಣಪ್ಪಸ್ವಾಮಿ ದೇವಾಲಯದಲ್ಲಿ ಶ್ರೀಗೌರಿ ಗಣೇಶ ಉತ್ಸವ ಮೂರ್ತಿಗೆ 9 ದಿನಗಳ ಕಾಲ ಆರ್ಚಕರುಗಳಾದ ಅವಿನಾಶ್ ಆರಾಧ್ಯ, ಲೋಕೇಶ್ ಆರಾಧ್ಯ ಹಾಗೂ ಪ್ರಕಾಶ್ ಆರಾಧ್ಯ ತಂಡದವರು ವಿಶೇಷ ಪೂಜೆಯನ್ನು ಸಲ್ಲಿಸಿದರು. ನಂತರ ಶ್ರೀಗೌರಿ ಗಣೇಶ ಉತ್ಸವ ಮೂರ್ತಿಯನ್ನು ಗದ್ದೆಹಳ್ಳದ ವರೆಗೆ ಶೋಭಾಯಾತ್ರೆ ಡಿಜೆ ಪಟಾಕಿಗಳನ್ನು ಸಿಡಿಸುವ ಮೂಲಕ ಉತ್ಸವ ಮೂರ್ತಿಯನ್ನು ನಾರ್ಗಾಣೆ ಗ್ರಾಮದ ಶ್ರೀದೇವಿ ಕೆರೆಯಲ್ಲಿ ವಿಸರ್ಜಿಸಲಾಯಿತು. ಈ ಸಂದರ್ಭ ಅಧ್ಯಕ್ಷ ಪುನೀತ್ ಕುಮಾರ್, ಉಪಾಧ್ಯಕ್ಷ ಮನುಕುಮಾರ್, ಪ್ರಧಾನ ಕಾರ್ಯದರ್ಶಿ ಆಕಾಶ್, ಖಜಾಂಚಿ ಮೋಹನ, ಸಹಕಾರ್ಯದರ್ಶಿಗಳಾಗಿ ಶಿವಪ್ರಸಾದ್, ಅನಿ, ಸಂಘಟನಾ ಕಾರ್ಯದರ್ಶಿ ಶ್ರೀನಿ, ಮುರುಗ, ಬಿಂದು, ಮಣಿ, ವಸಂತ, ದಯಾನಂದ, ಕಿರಣ್,…
ಕುಶಾಲನಗರ ಸೆ.18 NEWS DESK : ಮಾನವನ ಉತ್ತಮ ಆರೋಗ್ಯಕ್ಕೆ ಶುದ್ಧ ಗಾಳಿ ಹಾಗೂ ಪರಿಶುದ್ಧ ನೀರು ಅತೀ ಮುಖ್ಯವಾಗಿದ್ದು, ಇದನ್ನು ಸಂರಕ್ಷಿಸಿ ಮುಂದಿನ ಪೀಳಿಗೆಗೂ ಜೋಪಾನಗೊಳಿಸಬೇಕಾದುದು ಎಲ್ಲರ ಕರ್ತವ್ಯ ಎಂದು ಕೂಡಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ದೀಪಿಕಾ ಮೂರ್ತಿ ಹೇಳಿದರು. ಕೂಡ್ಲೂರು ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ “ಪರಿಸರ ಮಾಲಿನ್ಯ ತಡೆಗಟ್ಟಲು ಸಾರ್ವಜನಿಕರ ಪಾತ್ರ ” ಎಂಬ ಪ್ರಬಂಧ ಸ್ಪರ್ಧೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ಸುತ್ತಮುತ್ತಲಿನ ಪರಿಸರವ ಕಲುಷಿತವಾಗದಂತೆ ಸ್ವಚ್ಛಂದವಾಗಿ ಇಟ್ಟುಕೊಳ್ಳುವ ಮೂಲಕ ಉತ್ತಮ ಆರೋಗ್ಯ ಹೊಂದಲು ಅವರು ಕರೆ ನೀಡಿದರು. ಆರೋಗ್ಯ ಶಿಕ್ಷಣ ಅಧಿಕಾರಿ ಹೆಚ್.ಕೆ.ಶಾಂತಿ ಈ ಸಂದರ್ಭ ಮಾತನಾಡಿ, ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆಗೆ ಹೆಚ್ಚಿನ ಒತ್ತು ನೀಡುವ ಮೂಲಕ ಗಾಳಿ, ನೀರು ಹಾಗೂ ಮಣ್ಣನ್ನು ಸಂರಕ್ಷಿಸಬೇಕೆಂದರು. ಕೂಡ್ಲೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ಮಾತನಾಡಿ ವಿದ್ಯಾರ್ಥಿಗಳಲ್ಲಿ ಪರಿಸರದ ಜಾಗೃತಿ ಮೂಡಿಸುವ ಸಲುವಾಗಿ ಕೂಡ್ಲೂರು ಸರ್ಕಾರಿ…
ಮಡಿಕೇರಿ ಸೆ.18 NEWS DESK : ಮಡಿಕೇರಿ ಪಟ್ಟಣ ಸಹಕಾರ ಬ್ಯಾಂಕ್ ಪ್ರಗತಿಯ ಪಥದಲ್ಲಿ ಮುನ್ನಡೆಯುತ್ತಿದ್ದು, 2023-24ನೇ ಸಾಲಿನಲ್ಲಿ 33.09 ಲಕ್ಷ ನಿವ್ವಳ ಲಾಭ ಗಳಿಸಿದ್ದು, ಸಂಘದ ಮಹಾಸಭೆ ಸೆ.21 ರಂದು ನಗರದ ಕೊಡವ ಸಮಾಜದಲ್ಲಿ ನಡೆಯಲಿದೆಯೆಂದು ಸಂಘದ ಅಧ್ಯಕ್ಷರಾದ ಜಿ.ಎಂ.ಸತೀಶ್ ಪೈ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬ್ಯಾಂಕಿನಿಂದ ಗ್ರಾಹಕರುಗಳಿಗೆ 2847.48 ಲಕ್ಷ ರೂ. ವಿವಿಧ ರೂಪದ ಸಾಲಗಳನ್ನು ವಿತರಿಸಿದೆ. ಇದರಲ್ಲಿ ಜಾಮೀನು ಸಾಲವಾಗಿ 579.98 ಲಕ್ಷ, ಮನೆ ಆಧಾರ ಸಾಲ 959.04 ಲಕ್ಷ, ಚಿನ್ನಾಭರಣ ಈಡಿನ ಸಾಲವಾಗಿ 1,048 ಲಕ್ಷ ಸಾಲ ನೀಡಲಾಗಿದೆ. ಬ್ಯಾಂಕ್ ಪ್ರಸಕ್ತ ಸಾಲಿನಲ್ಲಿ ಒಟ್ಟು 481.23 ಲಕ್ಷ ವಹಿವಾಟು ನಡೆಸಿದೆ. ಸಾಲ ವಸೂಲಾತಿಯ ಪ್ರಮಾಣ ಶೇ.95.50 ರಷ್ಟು ಇರುವುದಾಗಿ ತಿಳಿಸಿದರು. ಬ್ಯಾಂಕಿನ ಜನರಲ್ ತಿಮ್ಮಯ್ಯ ರಸ್ತೆಯಲ್ಲಿನ ಶಾಖೆಯಲ್ಲಿ 106.15 ಲಕ್ಷ ಒಟ್ಟು ವ್ಯವಹಾರ ನಡೆಸಲಾಗಿದ್ದು, 16.50 ಲಕ್ಷ ಲಾಭ ಗಳಿಸಿದೆ ಹಾಗೂ 620.67 ಲಕ್ಷ ರೂ.ಗಳನ್ನು ವಿವಿಧ ರೂಪದ ಸಾಲವಾಗಿ ವಿತರಿಸಲಾಗಿದೆ ಎಂದರು. ಸುದ್ದಿಗೋಷ್ಠಿಯಲ್ಲಿ…






