ಮಡಿಕೇರಿ ಜು.30 NEWS DESK : ಸ್ಕೂಟರ್ ನಲ್ಲಿ ತೆರಳುತ್ತಿದ್ದ ದಂಪತಿಗಳನ್ನು ಅಡ್ಡಗಟ್ಟಿ, ಹಲ್ಲೆ ಮಾಡಿ 6.18ಲಕ್ಷ ರೂ. ನಗದನ್ನು ದರೋಡೆ ಮಾಡಿರುವ ಘಟನೆ ಸೋಮವಾರಪೇಟೆ ಪಟ್ಟಣದ ಕಿಬ್ಬೆಟ್ಟ ಗ್ರಾಮದ ರಸ್ತೆಯಲ್ಲಿ ಸೋಮವಾರ ರಾತ್ರಿ ನಡೆದಿದೆ. ಪಟ್ಟಣದ ಖಾಸಗಿ ಬಸ್ ನಿಲ್ದಾಣ ಸಮೀಪ ಅನುಷಾ ಮಾರ್ಕೆಟಿಂಗ್ ಮೊಬೈಲ್ ಕರೆನ್ಸಿ ಹೋಲ್‌ಸೇಲ್ ಅಂಗಡಿಯ ಮಾಲೀಕ ಕೆ.ಎಂ.ನೇಮಿರಾಜ್ ಹಣ ಕಳೆದುಕೊಂಡ ವರ್ತಕರಾಗಿದ್ದಾರೆ. ಸೋಮವಾರ ರಾತ್ರಿ ಪತ್ನಿ ಆಶಾ ಅವರೊಂದಿಗೆ ವ್ಯಾಪಾರದ ಹಣವನ್ನು ಸ್ಕೂಟರ್ ನಲ್ಲಿಟ್ಟುಕೊಂಡು ಕಿಬ್ಬೆಟ್ಟ ಗ್ರಾಮದ ಮನೆಗೆ ತೆರಳುತ್ತಿದ್ದ ಸಂದರ್ಭ ಕಾರು ಮತ್ತು ಬೈಕ್‌ನಲ್ಲಿ ಬಂದ ಐವರು ಆಗುಂತಕರು ಸ್ಕೂಟರ್ ರನ್ನು ಅಡ್ಡಗಟ್ಟಿದ್ದಾರೆ. ಆಶಾ ಅವರನ್ನು ತಳ್ಳಿ, ತಲೆಗೆ ಸ್ಟೀಲ್ ಪ್ಲಾಸ್ಕ್ನಿಂದ ಹಲ್ಲೆ ಮಾಡಿದ್ದಾರೆ. ನಂತರ ನೇಮಿರಾಜ್ ಮುಖಕ್ಕೆ ಖಾರದ ಪುಡಿ ಎರಚಿ, ಹಣದ ಬ್ಯಾಗ್ ನ್ನು ಕಸಿದುಕೊಂಡು ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಸೋಮವಾರ ರಾತ್ರಿಯೇ ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ನೇಮಿರಾಜ್ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡಿರುವ ಠಾಣಾಧಿಕಾರಿ ಮುದ್ದು ಮಹಾದೇವ್…
ಲೇಖಕ: admin
ನವದೆಹಲಿ NEWS DESK ಜು.30 : ಭೂ ಕುಸಿತದಿಂದ ತತ್ತರಿಸಿರುವ ವಯನಾಡಿನಲ್ಲಿ ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗೆ ಎಲ್ಲ ರೀತಿಯ ಸಹಕಾರ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದು ಇದಕ್ಕಾಗಿ ಇಬ್ಬರು IAS ಅಧಿಕಾರಿಗಳನ್ನು ನಿಯೋಜಿಸಿದ್ದಾರೆ. ನವದೆಹಲಿಯಲ್ಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಅವರು ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ್ದು ವಯನಾಡಿನಲ್ಲಿ ರಕ್ಷಣೆ ಹಾಗೂ ಪರಿಹಾರ ಕಾರ್ಯಾಚರಣೆಗೆ ನೆರವಾಗಲು ಬೆಂಗಳೂರಿನಲ್ಲಿರುವ ಎನ್ ಡಿ ಆರ್ ಎಫ್ ತಂಡ ಹಾಗೂ ಮದ್ರಾಸ್ ಎಂಜಿನಿಯರ್ ಗ್ರೂಪ್ ಸೇನಾ ಪಡೆಯ ತಂಡಗಳು ತ್ವರಿತವಾಗಿ ತೆರಳಲು ಹಾಗೂ ಅಗತ್ಯ ಉಪಕರಣಗಳು ಮತ್ತು ಇತರ ಅಗತ್ಯ ಪರಿಹಾರ ಸಾಮಗ್ರಿಗಳನ್ನು ರವಾನೆ ಮಾಡಲು ನೆರವು ನೀಡಲಾಗಿದೆ. ಎಂಇಜಿ ಯ ಒಬ್ಬರು ಅಧಿಕಾರಿ, ಇಬ್ಬರು ಜೆ.ಸಿ.ಓ. ಗಳು ಹಾಗೂ 70 ಮಂದಿ ವಿವಿಧ ರ್ಯಾಂಕಿನ ಸಿಬ್ಬಂದಿ ಈಗಾಗಲೇ ರಕ್ಷಣೆ ಹಾಗೂ ಪರಿಹಾರ ಸಾಮಗ್ರಿಗಳೊಂದಿಗೆ 15 ವಾಹನಗಳಲ್ಲಿ ವಯನಾಡಿಗೆ ತೆರಳಿದ್ದಾರೆ. ಇನ್ನೂ ಇಬ್ಬರು ಅಧಿಕಾರಿಗಳು, ನಾಲ್ಕು ಮಂದಿ ಜೆ.ಸಿ.ಓ.ಗಳು, ಹಾಗೂ 100 ಮಂದಿ ಸೇನಾ ಸಿಬ್ಬಂದಿ…
ಮಡಿಕೇರಿ ಜು.30 NEWS DESK : ಜಿಲ್ಲೆಯಾದ್ಯಂತ ಮಳೆ ತೀವ್ರಗೊಳ್ಳುತ್ತಿರುವುದರಿಂದ ತುರ್ತಾಗಿ ಮಡಿಕೇರಿ ನಗರದಲ್ಲಿ ಮೂಲಭೂತ ಸೌಲಭ್ಯವಿರುವ ಕಾಳಜಿ ಕೇಂದ್ರವನ್ನು ಆರಂಭಿಸಬೇಕೆ0ದು ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಮನವಿ ಮಾಡಿದೆ. ನಗರಸಭಾ ಪೌರಾಯುಕ್ತರಿಗೆ ಮನವಿ ಪತ್ರ ಸಲ್ಲಿಸಿದ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಕೆ.ಜಿ.ಪೀಟರ್ ಹಾಗೂ ಪ್ರಮುಖರು, ಭಾರೀ ಗಾಳಿ ಮಳೆಯಿಂದಾಗಿ ಬಡವರು, ಕೂಲಿ ಕಾರ್ಮಿಕರು ಹಾಗೂ ಬೆಟ್ಟಗುಡ್ಡದ ನಿವಾಸಿಗಳು ಸಂಕಷ್ಟವನ್ನು ಎದುರಿಸುತ್ತಿದ್ದಾರೆ ಎಂದು ಗಮನ ಸೆಳೆದರು. ಕೆ.ಜಿ.ಪೀಟರ್ ಮಾತನಾಡಿ ಕೊಡಗು ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು, ಮಡಿಕೇರಿ ನಗರದಲ್ಲಿ ಕೂಡ ಗಾಳಿ ಮಳೆಯ ಪ್ರಮಾಣ ಅಧಿಕವಾಗುತ್ತಿದೆ. ಮಳೆ ನಿರಂತರವಾಗಿರುವುದರಿ0ದ ಅಪಾಯದ ಮುನ್ಸೂಚನೆ ಎದುರಾಗಿದೆ. ಮಡಿಕೇರಿ ನಗರದಲ್ಲಿ ಅನೇಕ ಬಡವರ ಹಾಗೂ ಕೂಲಿ ಕಾರ್ಮಿಕರ ಮನೆಗಳು ಎತ್ತರ ಮತ್ತು ತಗ್ಗು ಪ್ರದೇಶದಲ್ಲಿದ್ದು, ಅನಾಹುತ ಸಂಭವಿಸುವ ಮೊದಲು ಎಚ್ಚೆತ್ತುಕೊಳ್ಳಬೇಕಾಗಿದೆ ಎಂದರು. ತುರ್ತಾಗಿ ನಗರಸಭೆ ಮೂಲಕ ಮೂಲಭೂತ ಸೌಲಭ್ಯವಿರುವ ಕಾಳಜಿ ಕೇಂದ್ರವನ್ನು ಸ್ಥಾಪಿಸಿ ಅಪಾಯದಂಚಿನಲ್ಲಿರುವವರಿಗೆ ತಾತ್ಕಾಲಿಕ ಆಶ್ರಯ ಕಲ್ಪಿಸಬೇಕು. ಅಲ್ಲದೆ ಬಡವರ ಮನೆಗಳ ಸುರಕ್ಷತೆಗಾಗಿ ಪ್ರತಿವರ್ಷದಂತೆ…
ಮಡಿಕೇರಿ ಜು.30 NEWS DESK : ಆಟಿ ಪ್ರಯುಕ್ತ ಕೊಡಗು ಯುವ ಬಂಟ್ಸ್ ಅಸೋಸಿಯೇಷನ್ ಮತ್ತು ಮಡಿಕೇರಿ ನಗರ ಬಂಟರ ಮಹಿಳಾ ಘಟಕದ ಸಹಯೋಗದಲ್ಲಿ ಆ.4 ರಂದು ಎರಡನೇ ವರ್ಷದ ಆಟಿಡೊಂಜಿ ದಿನ ಬಂಟೆರೆನ ಸಮ್ಮಿಲನ ಕಾರ್ಯಕ್ರಮ ನಡೆಯಲಿದೆ ಎಂದು ಅಸೋಸಿಯೇಷನ್‌ನ ಜಿಲ್ಲಾಧ್ಯಕ್ಷ ಸದಾನಂದ ರೈ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಬೆಳಿಗ್ಗೆ 9.30 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಕೊಡಗು ಜಿಲ್ಲಾ ಬಂಟರ ಸಂಘದ ಗೌರವಾಧ್ಯಕ್ಷ ಐತ್ತಪ್ಪ ರೈ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಮಡಿಕೇರಿ ನಗರ ಬಂಟರ ಮಹಿಳಾ ಘಟಕದ ಅಧ್ಯಕ್ಷೆ ಸೌಮ್ಯ ಸದಾಶಿವ ರೈ ವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು. ಮುಖ್ಯ ಅತಿಥಿಗಳಾಗಿ ಮಡಿಕೇರಿ ನಿವೃತ್ತ ಪಿಎಸ್‌ಐ ಬಾಲಕೃಷ್ಣ ರೈ, ನಗರಸಭಾ ಸದಸ್ಯ ಅರುಣ್ ಶೆಟ್ಟಿ ಹಾಗೂ ಕೊಡಗು ಯುವ ಬಂಟ್ಸ್ ಅಸೋಸಿಯೇಷನ್ ಮತ್ತು ಮಡಿಕೇರಿ ನಗರ ಬಂಟರ ಮಹಿಳಾ ಘಟಕದ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದರು. ಸಂಜೆ 4.30 ಗಂಟೆಗೆ ನಡೆಯಲಿರುವ ಸಮಾರೋಪ…
ಮಡಿಕೇರಿ ಜು.30 NEWS DESK : ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಮತ್ತು ಮಡಿಕೇರಿ ಕೊಡವ ಸಮಾಜದ ಪೊಮ್ಮಕ್ಕಡ ಕೂಟದ ಸಂಯುಕ್ತಾಶ್ರಯದಲ್ಲಿ ಆ.4 ರಂದು ನಗರದಲ್ಲಿ ಕೊಡವ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಚಿಂತನೆಯಡಿ ‘ಕಕ್ಕಡ ನಮ್ಮೆ’ಯನ್ನು ಆಯೋಜಿಸಲಾಗಿದೆ ಎಂದು ಅಕಾಡೆಮಿ ಅಧ್ಯಕ್ಷರಾದ ಅಜ್ಜಿನಿಕಂಡ ಮಹೇಶ್ ನಾಚಯ್ಯ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 10 ಗಂಟೆಗೆ ಕಕ್ಕಡ ನಮ್ಮೆಗೆ ನಗರದ ಕೊಡವ ಸಮಾಜದ ಸಭಾಂಗಣದಲ್ಲಿ ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷರಾದ ಮಂಡುವ0ಡ ಮುತ್ತಪ್ಪ ಅವರು ಚಾಲನೆ ನೀಡಲಿದ್ದಾರೆ. ಅಧ್ಯಕ್ಷತೆಯನ್ನು ತಾವೇ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಮೈಸೂರಿನ ಉದ್ಯಮಿ ಕುಪ್ಪಂಡ ಛಾಯಾ ನಂಜಪ್ಪ, ಪೊಮ್ಮಕ್ಕಡ ಕೂಟದ ಅಧ್ಯಕ್ಷರಾದ ಕನ್ನಂಡ ಕವಿತ ಬೊಳ್ಳಮ್ಮ ಪಾಲ್ಗೊಳ್ಳಲಿದ್ದಾರೆ ಎಂದರು. ಕೊಡವ ಮಾಸ ‘ಕಕ್ಕಡ’ ಜುಲೈ 16 ರಂದು ಆರಂಭಗೊಳ್ಳುತ್ತದೆ. ಈ ಮಾಸದ 18 ನೇ ದಿನವಾದ ಆ.3 ರಂದು ಕೊಡಗಿನಾದ್ಯಂತ ಇಲ್ಲಿನ ಸಂಸ್ಕೃತಿಗೆ ತಕ್ಕಂತೆ ಪ್ರತಿ ಮನೆ ಮನೆಗಳಲ್ಲಿ ‘ಮದ್ದ್ ಪಾಯಸ’ವನ್ನು ಮಾಡಿ ಕಕ್ಕಡವನ್ನು ಹಬ್ಬದಂತೆ ಆಚರಣೆ…
ಮಡಿಕೇರಿ ಜು.30 NEWS DESK : ಮಾಯಮುಡಿ ಗ್ರಾಮ ಪಂಚಾಯಿತಿ ವತಿಯಿಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ ರೋಜ್‌ಗಾರ್ ದಿನಾಚರಣೆಯನ್ನು ಆಚರಿಸಲಾಯಿತು. ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಗ್ರಾ.ಪಂ ಅಧ್ಯಕ್ಷ ಆಪಟ್ಟೀರ ಎ.ಎಸ್.ಟಾಟು ಮೊಣ್ಣಪ್ಪ, ಯೋಜನೆಯ ಉದ್ದೇಶದ ಬಗ್ಗೆ ತಿಳಿಸಿದರು. ಬೇಡಿಕೆಯ ಪ್ರಕಾರ ಒಂದು ಆರ್ಥಿಕ ವರ್ಷದಲ್ಲಿ ಗ್ರಾಮೀಣ ಪ್ರದೇಶದಲ್ಲಿ ಪ್ರತಿ ಕುಟುಂಬಕ್ಕೆ 100 ದಿನಗಳಿಗಿಂತ ಕಡಿಮೆ ಇಲ್ಲದಂತೆ ಉದ್ಯೋಗವನ್ನು ನೀಡಿ ಗುಣಮಟ್ಟದ ಕಾಮಗಾರಿಯನ್ನು ಕೈಗೆತ್ತಿಕೊಳ್ಳಬೇಕು. ಗಂಡು ಮತ್ತು ಹೆಣ್ಣಿಗೆ ಸಮಾನ ಕೂಲಿ ಒಂದು ದಿನಕ್ಕೆ ರೂ.349 ನ್ನು ನೀಡಲಾಗುವುದು. ವಿಶೇಷ ಚೇತನರು ಹಾಗೂ 60 ವರ್ಷ ಮೇಲ್ಪಟ್ಟವರಿಗೆ ಕೆಲಸದಲ್ಲಿ ಶೇ.50 ರಷ್ಟು ರಿಯಾಯಿತಿ, ಅರ್ಧ ಕೆಲಸಕ್ಕೆ ಪ್ರತಿ ಕೂಲಿ ಪಾವತಿಸಲಾಗುವುದು ಎಂದು ಹೇಳಿದರು. ಮಹಿಳಾ ಒಕ್ಕೂಟಗಳಿಗೆ ಎನ್‌ಆರ್‌ಎಲ್‌ಎಂ ಶೆಡ್ ನಿರ್ಮಾಣಕ್ಕೆ ಅವಕಾಶವಿದ್ದು, 17.50 ಲಕ್ಷ ರೂ. ಆರ್ಥಿಕ ನೆರವು ನೀಡಲಾಗುವುದು ಎಂದು ತಿಳಿಸಿದರು. ಬಿಪಿಎಲ್ ಕಾರ್ಡ್ ಹೊಂದಿರುವ ರೈತರಿಗೆ ಹೈನುಗಾರಿಕೆಗೆ ಮನರೇಗಾ ಯೋಜನೆ…
ಮಡಿಕೇರಿ ಜು.30 NEWS DESK : ಮಿಷನ್ ಮೋದಿ ಡೆಮಾಕ್ರಸಿ ಡೆವೆಲಪ್ ಮೆಂಟ್ ಟ್ರಸ್ಟ್ ಸಂಘಟನೆಯ ವಿಶೇಷ ಕಾರ್ಯಕಾರಣಿ ಸಭೆಯು ಹುಬ್ಬಳ್ಳಿಯಲ್ಲಿ ನಡೆಯಿತು. ಟ್ರಸ್ಟ್ ನ ರಾಷ್ಟ್ರೀಯ ಅಧ್ಯಕ್ಷ ರಾಮ್ ಗೋಪಾಲ್ ಕಾಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಘಟನೆಯ ಧ್ಯೆಯವಾಕ್ಯ “ಹರ್ ಹರ್ ಮೋದಿ, ಘರ್ ಘರ್ ಮೋದಿ” ಎಂಬಂತೆ ಸಮಾಜದಲ್ಲಿ ಸಮರ್ಪಣಾ ಮನೋಭಾವದಿಂದ ಸೇವೆ ಸಲ್ಲಿಸುತ್ತಿರುವ ಸ್ವಯಂ ಸೇವಕರ ತಂಡಗಳು ದೇಶದ 200ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಮುಂದಿನ ದಿನಗಳಲ್ಲಿ ಎಲ್ಲಾ ರಾಜ್ಯಗಳಿಗೂ ಕಾರ್ಯ ಚಟುವಟಿಕೆಗಳನ್ನು ವಿಸ್ತರಿಸುವ ಗುರಿ ಹೊಂದಲಾಗಿದೆ ಎಂದು ವಿವರಿಸಿದರು. ಸಭೆಯಲ್ಲಿ ಸಂಘಟನೆಯ ರಾಜ್ಯಾಧ್ಯಕ್ಷ ಗೋವಿಂದ ಕುಲಕರ್ಣಿ, ಮೈಸೂರು ಜಿಲ್ಲಾಧ್ಯಕ್ಷ ಲೋಕೇಶ್ ನಾಗಪ್ಪ, ಉಪಾಧ್ಯಕ್ಷ ಸುರೇಶ್ ಬಾಬು, ಸಂಘಟನಾ ಕಾರ್ಯದರ್ಶಿಗಳಾದ ರವಿಶಂಕರ್, ವಿಷ್ಣು ನಾಚಪ್ಪ ಹಾಗೂ ರಾಜ್ಯದ ವಿವಿಧ ಜಿಲ್ಲೆಗಳಿಂದ ಪದಾಧಿಕಾರಿಗಳು ಹಾಜರಿದ್ದರು.
ಪ್ಯಾರಿಸ್ NEWS DESK ಜು.30 : ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ 10 ಮೀ. ಏರ್ ಪಿಸ್ತೂಲ್ ಮಿಶ್ರ ತಂಡ ವಿಭಾಗದ ಸ್ಪರ್ಧೆಯಲ್ಲಿ ಸರಬ್ಜೋತ್ ಸಿಂಗ್ ಹಾಗೂ ಮನು ಭಾಕರ್ ಜೋಡಿ ಕಂಚಿನ ಪದಕ ಗೆದ್ದಿದೆ. ಆ ಮೂಲಕ ಭಾರತ ಮತ್ತೊಂದು ಪದಕವನ್ನು ತನ್ನದಾಗಿಸಿಕೊಂಡಿದೆ. ಒಂದೇ ಒಲಿಂಪಿಕ್ಸ್ ನಲ್ಲಿ 2 ಪದಕ ಜಯಿಸಿದ ಭಾರತದ ಮೊದಲ ಮಹಿಳಾ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಮನು ಭಾಕರ್ ಪಾತ್ರರಾಗಿದ್ದಾರೆ. ಮಹಿಳೆಯರ 10 ಮೀ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಎರಡು ದಿನಗಳ ಹಿಂದೆ ಕಂಚಿನ ಪದಕ ಗೆದ್ದು ಭಾರತಕ್ಕೆ ಮೊದಲ ಪದಕ ತಂದುಕೊಟ್ಟಿದ್ದ ಮನು, ಇದೀಗ 2ನೇ ಪದಕ ಗೆದ್ದಿದ್ದಾರೆ.
ಮಡಿಕೇರಿ ಜು.30 NEWS DESK : ಶ್ರೀಲಂಕಾದ ಕೊಲೊಂಬೊದಲ್ಲಿ ನಡೆಯುತ್ತಿರುವ ಸಿಲನ್ ಮಾಸ್ಟರ್ಸ್ ಇಂಟರ್‌ನ್ಯಾಷನಲ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್ ನಲ್ಲಿ ಕೊಡಗಿನ ತಾತಪಂಡ ಜ್ಯೋತಿ ಸೋಮಯ್ಯ ಎರಡು ಬೆಳ್ಳಿ ಪದಕ ಗೆದ್ದಿದ್ದಾರೆ. 60 ವಯೋಮಿತಿಯ ಸಿಂಗಲ್ಸ್ ವಿಭಾಗ ಮತ್ತು ಮಿಶ್ರ ಡಬಲ್ಸ್ 130 ಕಂಬೈನ್‌ಡ್ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದು ಸಾಧನೆ ಮಾಡಿದ್ದಾರೆ.
ಸಕಲೇಶಪುರ NEWS DESK ಜು.30 : ಪಶ್ಚಿಮಘಟ್ಟ ಪ್ರದೇಶದಲ್ಲಿ ನಿರಂತರವಾಗಿ ಧಾರಾಕಾರ ಮಳೆಯಾಗುತ್ತಿದ್ದು, ಸಕಲೇಶಪುರದ ಶಿರಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ ಉಂಟಾಗಿದೆ. ದೊಡ್ಡತಪ್ಪಲು ಸಮೀಪ ಒಂದು ಟ್ಯಾಂಕರ್, ಒಂದು ಟಿಪ್ಪರ್ ಮತ್ತು ಎರಡು ಕಾರುಗಳು ಭೂಕುಸಿತದ ಕೆಸರಿನಲ್ಲಿ ಸಿಲುಕಿಕೊಂಡಿವೆ. ಅದೃಷ್ಟವಶಾತ್ ಯಾವುದೇ ಜೀವಹಾನಿ ಸಂಭವಿಸಿಲ್ಲ. ಭಾರೀ ಭೂಕುಸಿತವಾಗುತ್ತಿರುವ ಹಿನ್ನೆಲೆಯಲ್ಲಿ ಶಿರಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲಾಗಿದೆ. ಪ್ರಯಾಣಿಕರು ಹಾಗೂ ವಾಹನ ಚಾಲಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.






