ಮಡಿಕೇರಿ ಜು.30 NEWS DESK : ಕಳೆದ 10 ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆ ಹಾಗೂ ವಿಪರೀತ ಗಾಳಿಯಿಂದ ಕಂಬದ ಬದಲಾವಣೆ ಪದೇ ಪದೇ ವಿದ್ಯುತ್ ಜಾಲಕ್ಕೆ ಹಾನಿ ಉಂಟಾಗುತ್ತಿರುವುದರಿ0ದ ವಿದ್ಯುತ್ ವ್ಯತ್ಯಯವಾಗುತ್ತಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಮಡಿಕೇರಿ ವಿಭಾಗದ ಕಾರ್ಯನಿರ್ವಹಕ ಇಂಜಿನಿಯರ್ ಕೋರಿದ್ದಾರೆ. ತೀವ್ರವಾದ ಮಳೆಗಾಳಿಯಿಂದಾಗಿ ಕೊಡಗು ಜಿಲ್ಲೆಯಲ್ಲಿ ಈವರೆಗೆ ಒಟ್ಟು 2454 ಕಂಬಗಳು ಹಾಗೂ 46 ಸಂಖ್ಯೆಯ ವಿದ್ಯುತ್ ಪರಿವರ್ತಕಗಳು ಮತ್ತು 1.72 ಕಿ.ಲೋಮೀಟರ್ ವಾಹಕಗಳು ಹಾನಿಗೊಳಗಾಗಿರುತ್ತದೆ. ಈಗಾಗಲೇ 2150 ಕಂಬಗಳನ್ನು ಹಾಗೂ ಎಲ್ಲಾ ಪರಿವರ್ತಕಗಳನ್ನು ದುರಸ್ಥಿಗೊಳಿಸಿ ಬದಲಾಯಿಸಲಾಗಿದೆ. ದೈನಂದಿನ ಚಟುವಟಿಕೆಯಲ್ಲಿ ಸರಾಸರಿ 100 ಕಂಬಗಳ ಬದಲಾವಣೆಯ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದೆ. ಮಳೆಗಾಳಿಯ ತೀವ್ರತೆ ಹೆಚ್ಚಾಗಿರುವುದರಿಂದ ಪ್ರತಿದಿನ ಸರಾಸರಿ 80-100 ಕಂಬಗಳ ಮುರಿವಿಕೆ ವರಿಯಾಗುತ್ತಿದೆ. ವಿದ್ಯುತ್ ಜಾಲದ ದುರಸ್ಥಿ ಕಾರ್ಯವನ್ನು ಚುರುಕುಗೊಳಿಸಲು, ವಿದ್ಯುತ್ ಜಾಲವನ್ನು ಪುನಃ ಸ್ಥಾಪಿಸಲು ಮಡಿಕೇರಿ ವಿಭಾಗದ 231 ಸಂಖ್ಯೆಯ ಸಿಬ್ಬಂದಿ, ಇತರೆ ವಿಭಾಗಗಳಿಂದ ಹಾಗೂ ಹೊರಗುತ್ತಿಗೆಯಿಂದ 136 ಸಿಬ್ಬಂದಿ, ವಿದ್ಯುತ್ ಗುತ್ತಿಗೆದಾರರ…
ಲೇಖಕ: admin
ಮಡಿಕೇರಿ ಜು.30 NEWS DESK : ಹವಮಾನ ಇಲಾಖೆ ಮುಂದಿನ 2 ದಿನಗಳ ಕಾಲ ಕೊಡಗು ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಿದೆ.
ನಾಪೋಕ್ಲು ಜು.30 NEWS DESK : ಸಾರ್ವಜನಿಕರು ದೂರವಾಣಿ ಕರೆ ಮಾಡಿ ಸಂಕಷ್ಟ ತೋಡಿಕೊಂಡಾಗ ಅವರಿಗೆ ಸ್ಪಂದಿಸುವ ಗುಣವನ್ನು ರೂಡಿಸಿಕೊಳ್ಳಿ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅಧಿಕಾರಿಗಳಿಗೆ ಸೂಚನೆ ನೀಡಿದರು. ಎಮ್ಮೆಮಾಡು ಪಂಚಾಯಿತಿ ವ್ಯಾಪ್ತಿಯ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ನಂತರ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಅಧಿಕಾರಿಗಳು ತಮ್ಮ ದೂರವಾಣಿ ಕರೆ ಸ್ವೀಕರಿಸುವುದಿಲ್ಲ ಎಂದು ಗ್ರಾಮಸ್ಥರು ಅಳಲು ತೋಡಿಕೊಂಡರು. ಈ ಸಂದರ್ಭ ಮಾತನಾಡಿದ ಶಾಸಕರು, ಮಳೆಗಾಳಿಗೆ ಗ್ರಾಮೀಣ ಪ್ರದೇಶದಲ್ಲಿ ರಸ್ತೆ, ವಿದ್ಯುತ್ ಮತ್ತು ನೀರಿನ ವ್ಯವಸ್ಥೆ ಸಹಜವಾಗಿ ಹದಗೆಡುತ್ತದೆ. ಈ ಸಂಧರ್ಭದಲ್ಲಿ ಜನರು ಸಂಭಂದಿಸಿದ ಅಧಿಕಾರಿ, ಸಿಬ್ಬಂದಿಗಳಿಗೆ ಕರೆ ಮಾಡುತ್ತಾರೆ. ಅವರ ಕರೆಯನ್ನು ಸ್ವೀಕರಿಸುವ ಸೌಜನ್ಯ ಬೆಳೆಸಿಕೊಳ್ಳಿ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಅತೀ ಗಾಳಿಯಿಂದ ಜಿಲ್ಲೆಯಲ್ಲಿ 2318 ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದು, ಇವುಗಳನ್ನು ತ್ವರಿತವಾಗಿ ಸರಿಪಡಿಸಲು ಇಲಾಖೆಗೆ ಸೂಚನೆ ನೀಡಲಾಗಿದೆ ಸಾರ್ವಜನಿಕರು ಸಹಕರಿಸಬೇಕಾಗಿ ಕೋರಿದರು. ಕ್ಷೇತ್ರದಲ್ಲಿ ಮಳೆಯಿಂದ ಹಾನಿಯಾಗಿರುವ ರಸ್ತೆಗಳ ಬಗ್ಗೆ…
ನಾಪೋಕ್ಲು ಜು.30 NEWS DESK : ನಾಪೋಕ್ಲು ಸ್ಥಳೀಯ ಲಯನ್ಸ್ ಕ್ಲಬ್ ಮತ್ತು ಗ್ರಾಮ ಪಂಚಾಯಿತಿಯ ಸಂಯುಕ್ತಾಶ್ರಯದಲ್ಲಿ ಡೆಂಗ್ಯೂ ಜ್ವರ ನಿಯಂತ್ರಣದ ಕುರಿತು ಜನಜಾಗೃತಿ ಕಾರ್ಯಕ್ರಮ ನಡೆಯಿತು. ನಾಪೋಕ್ಲು ಪಟ್ಟಣದ ಮುಖ್ಯ ಬೀದಿಗಳಲ್ಲಿ ಲಯನ್ಸ್ ಕ್ಲಬ್ ನ ಪದಾಧಿಕಾರಿಗಳು, ಗ್ರಾ.ಪಂ ಚುನಾಯಿತ ಪ್ರತಿನಿಧಿಗಳು ಹಾಗೂ ಲಿಯೋ ಕ್ಲಬ್ ನ ಪದಾಧಿಕಾರಿ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರು ಬಿತ್ತಿ ಪತ್ರ ಹಂಚಿ ಮಾಹಿತಿ ನೀಡುವುದರ ಮೂಲಕ ಜಾಗೃತಿ ಮೂಡಿಸಿದರು. ಇದಕ್ಕೂ ಮೊದಲು ಗ್ರಾ.ಪಂ ಸಭಾಂಗಣದಲ್ಲಿ ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಠಾಣಾಧಿಕಾರಿ ಮಂಜುನಾಥ್ ಉದ್ಘಾಟಿಸಿ ಮಾತನಾಡಿ, ಡೆಂಗ್ಯೂ ತಡೆಗಟ್ಟುವ ಹಾಗೂ ಸೈಬರ್ ಕ್ರೈಂ ಅಪರಾಧದ ಬಗ್ಗೆ ಮುನ್ನೆಚ್ಚರಿಕೆ ಮಾಹಿತಿ ನೀಡಿದರು. ಲಯನ್ಸ್ ಕ್ಲಬ್ ಅಧ್ಯಕ್ಷ ಬಿದ್ದಾಟ೦ಡ ಮೇರಿ ಚಿಟ್ಟಿಯಪ್ಪ ಮಾತನಾಡಿ, ಮಳೆಗಾಲದಲ್ಲಿ ಡೆಂಗ್ಯೂ ರೋಗ ಉಲ್ಪಣಿಸುತ್ತಿದೆ. ಜನರು ಜಾಗೃತರಾಗಿರಬೇಕು. ಮನೆಯ ಸುತ್ತಮುತ್ತಲಿನ ಪರಿಸರದಲ್ಲಿ ನೀರು ನಿಲ್ಲದಂತೆ ನೋಡಿಕೊಂಡು ಸೊಳ್ಳೆ ಉತ್ಪತ್ತಿಯಾಗುವುದನ್ನು ತಡೆಗಟ್ಟವ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡರೆ ಡೆಂಗ್ಯೂ…
ವಯನಾಡು NEWS DESK ಜು.30 : ಕೇರಳ ರಾಜ್ಯದ ವಯನಾಡು ಜಿಲ್ಲೆಯಲ್ಲಿ ಅಧಿಕ ಮಳೆಯಿಂದ ಸಂಭವಿಸಿದ ಜಲಸ್ಫೋಟ ಮತ್ತು ಗುಡ್ಡ ಕುಸಿತದಲ್ಲಿ ಮಕ್ಕಳು ಸೇರಿದಂತೆ 40ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ನೂರಾರು ಮಂದಿ ಮಣ್ಣಿನಡಿ ಸಿಲುಕಿರುವ ಸಂಶಯವಿದೆ. ವಯನಾಡು ಜಿಲ್ಲೆಯಲ್ಲಿ ಭೂಕುಸಿತ ಮತ್ತು ಇತರ ಮಳೆ ಸಂಬಂಧಿತ ಅನಾಹುತಗಳ ಹಿನ್ನೆಲೆಯಲ್ಲಿ, ಆರೋಗ್ಯ ಇಲಾಖೆ ರಾಷ್ಟ್ರೀಯ ಆರೋಗ್ಯ ಮಿಷನ್ ನಿಯಂತ್ರಣ ಕೊಠಡಿಯನ್ನು ತೆರೆದಿದೆ. ತುರ್ತು ಸಹಾಯದ ಅಗತ್ಯವಿರುವವರು ಈ ಎರಡು ಸಂಖ್ಯೆಗಳ ಮೂಲಕ ಅಧಿಕಾರಿಗಳನ್ನು ಸಂಪರ್ಕಿಸಬಹುದು 9656938689 ಮತ್ತು 8086010833 ಎಂದು ಪ್ರಕಟಣೆ ತಿಳಿಸಿದೆ. ಕೇರಳದ ವಯನಾಡು ಜಿಲ್ಲೆಯ ಮೆಪ್ಪಾಡಿ ಬಳಿಯ ವಿವಿಧ ಗುಡ್ಡಗಾಡು ಪ್ರದೇಶಗಳಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು, ನೂರಾರು ಮಂದಿ ಸಿಲುಕಿರುವ ಭೀತಿಯ ಹಿನ್ನೆಲೆಯಲ್ಲಿ ಎಲ್ಲಾ ಸರ್ಕಾರಿ ಸಂಸ್ಥೆಗಳು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ ಹೇಳಿದ್ದಾರೆ. ಭಾರೀ ಮಳೆಯಿಂದ ಉಂಟಾದ ಪ್ರವಾಹದಿಂದಾಗಿ ಚುರಲಮಲದಿಂದ ಮುಂಡಕೈಗೆ ಸಂಪರ್ಕ ಕಲ್ಪಿಸುವ ಸೇತುವೆ ಕೊಚ್ಚಿ…
ನಾಪೋಕ್ಲು ಜು.30 NEWS DESK : ಬೆಟ್ಟಗೇರಿ ಗ್ರಾಮ ಪಂಚಾಯಿತಿ ವ್ಯಾಪತಿಯ ಅರ್ವತೋಕ್ಲು ಗ್ರಾಮದ ಬೇಕೋಟ್ ಮಕ್ಕ ಕ್ಲಬ್ ವತಿಯಿಂದ ಸಾಂಪ್ರದಾಯಿಕ ಕ್ರೀಡೆಗಳಾದ ಗೂಟ ಓಟ, ದಂಪತಿಗಳಿಗೆ ಹಾಳೆಎಳೆಯುವುದು, ವಯೋಮಿತಿಗೆ ತಕ್ಕಂತೆ ಓಟದ ಸ್ಪರ್ಧೆ, ಮುಂತಾದ ಮನರಂಜನಾ ಕ್ರೀಡೆಗಳು ತಳೂರು ಎಂ.ಚಂಗಪ್ಪ ಹಾಗೂ ಕುಶಾಲಪ್ಪನವರ ಗದ್ದೆಯಲ್ಲಿ ನೆರವೇರಿತು. ಕ್ರಿಕೆಟ್ ನಲ್ಲಿ ಟೀಮ್ ಭಗವತಿ ಪ್ರಥಮ ಸ್ಥಾನ ಹಾಗೂ ಎಂಸಿಬಿ ಗೋಳಿಕಟ್ಟೆ ತಂಡವು ದ್ವಿತೀಯ ಸ್ಥಾನ ಪಡೆದುಕೊಂಡವು. ಹಗ್ಗಜಗ್ಗಾಟ ಪುರುಷರ ಪಂದ್ಯಾವಳಿಯಲ್ಲಿ ಶ್ರೀ ರಾಮಭಕ್ತಾ0ಜನೇಯ “ಎ ” ತಂಡವು ಮೊದಲನೇ ಸ್ಥಾನ ಪಡೆದುಕೊಂಡರೆ, ಶ್ರೀ ರಾಮಭಕ್ತಾ0ಜನೇಯ “ಬಿ” ತಂಡವು ಎರಡನೇ ಸ್ಥಾನ ಪಡೆದುಕೊಂಡರು. ಮಹಿಳೆಯರ ಹಗ್ಗಜಗ್ಗಾಟ ಪಂದ್ಯಾವಳಿಯಲ್ಲಿ ನಾಗಶ್ರೀ ಸುಳ್ಯ ತಂಡವು ಮೊದಲನೇ ಸ್ಥಾನ ಪಡೆದುಕೊಂಡರೆ, ಮಹಾದೇವ ಸ್ಪರ‍್ಟ್ ಕ್ಲಬ್ ಬಲಮುರಿ ಎರಡನೇ ಸ್ಥಾನ ಪಡೆದುಕೊಂಡರು. 20 ತಂಡಗಳನ್ನು ಒಳಗೊಂಡ ಕ್ರಿಕೆಟ್ ಪಂದ್ಯಾವಳಿ ಹಾಗೂ 7 ಮಂದಿಯನ್ನೊಳಗೊಂಡ ಪುರುಷರ ಮತ್ತು ಮಹಿಳೆಯರ ಹಗ್ಗ ಜಗ್ಗಾಟ ಹಾಗೂ ಮುಕ್ತ ಓಟ ಕ್ರೀಡಾಭಿಮಾನಿಗಳ ಗಮನ ಸೆಳೆಯಿತು.…
ಸೋಮವಾರಪೇಟೆ ಜು.30 NEWS DESK : ಸೋಮವಾರಪೇಟೆ ಪುಷ್ಪಗಿರಿ ಜೆಸಿಐ ವತಿಯಿಂದ ಉದ್ಯಮಿ ಹಾಗೂ ದಾನಿಗಳಾದ ಹರಪಳ್ಳಿ ರವೀಂದ್ರ ಅವರನ್ನು ಸನ್ಮಾನಿಸಲಾಯಿತು. ಸೋಮವಾರಪೇಟೆ ಜಾನಕಿ ಸಭಾಂಗಣದಲ್ಲಿ ನಡೆದ ವಲಯ ಮಟ್ಟದ ಜೇಸಿ ಮಹಿಳಾ ಸಮ್ಮೇಳನದಲ್ಲಿ ಜೆಸಿಐ ಪ್ರಮುಖರು ರವೀಂದ್ರ ಅವರನ್ನು ಸನ್ಮಾನಿಸಿ ಗೌರವಿಸಿದರು. ಜೆಸಿಐ ವಲಯಯಾಧ್ಯಕ್ಷೆ ಆಶಾ ಜೈನ್, ವಲಯ ಮಹಿಳಾ ಘಟಕದ ಅಧ್ಯಕ್ಷೆ ರೂಪ ಗೋಪಾಲಕೃಷ್ಣ, ರಾಷ್ಟ್ರೀಯ ಮಹಿಳಾ ಸಂಯೋಜಕಿ ಯಶಸ್ವಿನಿ, ಸೋಮವಾರಪೇಟೆ ಘಟಕದ ಅಧ್ಯಕ್ಷ ಎಸ್.ಆರ್.ವಸಂತ್, ಜೆಎಸಿ ವಲಯಾಧ್ಯಕ್ಷ ರಂಗಸ್ವಾಮಿ, ಕಾನೂನು ವಿಭಾಗದ ಸೌಜನ್ಯ ಹೆಗಡೆ, ವಲಯಾ ಉಪಾಧ್ಯಕ್ಷೆ ಮಾಯಾ ಗಿರೀಶ್, ಯುವ ಜೆಸಿ ಅಧ್ಯಕ್ಷ ಪ್ರಶಾಂತ್ ಸೇರಿದಂತೆ ಮತ್ತಿತರ ಗಣ್ಯರು ಹಾಜರಿದ್ದರು.
ಮಡಿಕೇರಿ ಜು.30 NEWS DESK : ದಕ್ಷಿಣ ಕೊಡಗಿನಲ್ಲಿ ಗಾಳಿ ಸಹಿತ ಉತ್ತಮ ಮಳೆಯಾಗುತ್ತಿದೆ. ವಿರಾಜಪೇಟೆ ಹೋಬಳಿಯ ಬೇತ್ರಿ ಕಾವೇರಿ ನದಿಯ ಹಿನ್ನೀರಿನಲ್ಲಿ ಸಿಲುಕಿದ ಆರು ಮಂದಿಯನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ರಕ್ಷಣೆ ಮಾಡಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ್ದಾರೆ. ಈ ಸಂದರ್ಭ ತಹಶೀಲ್ದಾರರಾದ ರಾಮಚಂದ್ರ ಮತ್ತು ನೋಡಲ್ ಅಧಿಕಾರಿಗಳು ಹಾಜರಿದ್ದರು.
ವಾರಪೇಟೆ NEWS DESK ಜು.30 : ಸೋಮವಾರಪೇಟೆ ತಾಲೂಕಿನ ಕುಂದಳ್ಳಿ, ಕುಮಾರಳ್ಳಿ ಗ್ರಾಮಕ್ಕೆ ವಿದ್ಯುತ್ ಒದಗಿಸಬೇಕೆಂದು ಆಗ್ರಹಿಸಿ ಗ್ರಾಮಸ್ಥರು ಇಲ್ಲಿನ ಸೆಸ್ಕ್ ಕಾರ್ಯಪಾಲಕ ಅಭಿಯಂತರರ ಕಚೇರಿಗೆ ಮುತ್ತಿಗೆ ಹಾಕಿ ಸೋಮವಾರ ಪ್ರತಿಭಟಿಸಿದರು. ಕಳೆದ 20 ದಿನಗಳಿಂದ ಗ್ರಾಮಗಳಿಗೆ ವಿದ್ಯುತ್ ಸ್ಥಗಿತಗೊಂಡಿದೆ. ಸೆಸ್ಕ್ ಇಂಜಿನಿಯರ್‌ಗೆ ತಿಳಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಗ್ರಾಮಗಳು ಕತ್ತಲೆಯಲ್ಲಿ ಮುಳುಗಿವೆ. ಮುರಿದು ಬಿದ್ದಿರುವ ಕಂಬಗಳನ್ನು ಬದಲಾಯಿಸುವಲ್ಲಿ ಸೆಸ್ಕ್ ಇಂಜಿನಿಯರ್ ವಿಫಲರಾಗಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಯಡೂರು, ಕಂಬಳ್ಳಿ, ಮಾರ್ಗವು ಅರಣ್ಯ ಪ್ರದೇಶದೊಳಗೆ ಹಾದು ಹೋಗಿರುವುದರಿಂದ ಆಗಾಗ್ಗೆ ಮರಗಳು ಬಿದ್ದು, ಮಳೆಗಾಲದಲ್ಲಿ ತಿಂಗಳುಗಟ್ಟಲೆ ವಿದ್ಯುತ್ ಸ್ಥಗಿತವಾಗುತ್ತಿದೆ. ಈ ಹಿನ್ನೆಲೆ ಮಾರ್ಗವನ್ನು ಬದಲಿಸಬೇಕೆಂದು ಒತ್ತಾಯಿಸಿದರು. ಶಾಂತಳ್ಳಿಯಿಂದ ಬೆಟ್ಟದಳ್ಳಿ, ಬೇಕನಳ್ಳಿ, ಕುಂದಳ್ಳಿ ಮುಖ್ಯರಸ್ತೆಯ ಬದಿಯಲ್ಲಿ ಕಂಬಗಳನ್ನು ಅಳವಡಿಸಿ ಹೊಸ ಮಾರ್ಗ ರಚಿಸಬೇಕು. ಅಥವಾ ಬಸವನಕಟ್ಟೆ, ನಗರಳ್ಳಿಯಿಂದ ರಸ್ತೆ ಬದಿಯಲ್ಲಿ ಕಂಬಗಳನ್ನು ಅಳವಡಿಸಿ ಕುಂದಳ್ಳಿ, ಕುಮಾರಳ್ಳಿಗೆ ವಿದ್ಯುತ್ ಒದಗಿಸಬೇಕು. ಆಗಸ್ಟ್ ಅಂತ್ಯದೊಳಗೆ ಈ ಕೆಲಸ ಆರಂಭವಾಗದಿದ್ದರೆ ಸೆಸ್ಕ್ ಕಚೇರಿ ಎದುರು ಗ್ರಾಮಸ್ಥರು ಆಹೋರಾತ್ರಿ ಧರಣಿ…
ಮಡಿಕೇರಿ ಜು.30 NEWS DESK : ಕೊಡಗಿನಲ್ಲಿ ಕ್ರೀಡೆಯ ಸ್ವಚ್ಛ ಆಡಳಿತಗಾರ, ಸಂಘಟನೆಗಾರ, ತರಬೇತುದಾರ ಹಾಗು ಬಂಗಾರದ ಹೆಜ್ಜೆ ಗುರುತು ಮೂಡಿಸಿದ ನಿಸ್ವರ‍್ಥ ಸೇವಕ ಎಂದರೆ ಅದು ಚೆಪ್ಪುಡೀರ ಸುಭಾಷ್ ಮುತ್ತಣ್ಣನವರು. ಚೆಪ್ಪುಡೀರ ಅಪ್ಪಣ್ಣ ಹಾಗೂ ಬೊಳ್ಳಮ್ಮ (ತಾಮನೆ ಪಾಂಡಂಡ) ದಂಪತಿಗಳ ಪುತ್ರನಾಗಿ 20 ಜೂನ್ 1946 ರಂದು ಸುಭಾಷ್ ಮುತ್ತಣ್ಣನವರು ಜನಿಸಿದರು. ವಿದ್ಯಾಭ್ಯಾಸ : ಮಡಿಕೇರಿ ರ‍್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾಭ್ಯಾಸ ಮುಗಿಸಿ, ಅಲಹಾಬಾದ್ ನಲ್ಲಿ ಬಿ.ಎಸ್ಸಿ. ಅಗ್ರಿಕಲ್ಚರ್ ಪರ‍್ಣಗೊಳಿಸಿದರು. ಕ್ರೀಡಾ ಸಾಧನೆ : ಅಲಹಾಬಾದ್ ವಿಶ್ವವಿದ್ಯಾನಿಲಯಕ್ಕೆ ಬಾಸ್ಕೆಟ್ ಬಾಲ್, ಹಾಕಿ, ಅಥ್ಲೆಟಿಕ್ಸ್ ಹಾಗೂ ಬಾಸ್ಕೆಟ್ ಬಾಲ್ ಆಟದಲ್ಲಿ ಉತ್ತರ ಪ್ರದೇಶವನ್ನು ಪ್ರತಿನಿಧಿಸುತ್ತಾರೆ. ಇವರ 400 ಮೀಟರ್ ಹರ್ಡ್ಲ್ಸ್ ನ ದಾಖಲೆ ಅಲಹಾಬಾದ್ ವಿಶ್ವವಿದ್ಯಾನಿಲಯದಲ್ಲಿ ಇನ್ನೂ ಇದೆ. ಲಯನ್ಸ್ ಕ್ಲಬ್ : ಲೈನ್ಸ್ ಕ್ಲಬ್ ನ ಚರ‍್ಟೆಡ್ ಸದಸ್ಯರಾಗಿ 1973 ರಲ್ಲಿ ಸೇರುತ್ತಾರೆ. ನಂತರದ ದಿನಗಳಲ್ಲಿ ಕ್ಲಬ್ ನ ಅಧ್ಯಕ್ಷ, ವಲಯದ ಅಧ್ಯಕ್ಷ, ಜಿಲ್ಲಾಧ್ಯಕ್ಷ ಹಾಗೂ ಗರ‍್ನರ್ ಆಗಿ ಪದವಿಯನ್ನು ಅಲಂಕರಿಸುತ್ತಾರೆ.…






