ಲೇಖಕ: admin

ಮಡಿಕೇರಿ ಸೆ.17 NEWS DESK : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಭಾರತದ ಮೀಸಲಾತಿ ವ್ಯವಸ್ಥೆ ಕುರಿತು ಅಮೆರಿಕಾದಲ್ಲಿ ನೀಡಿರುವ ಹೇಳಿಕೆ ಸಂವಿಧಾನ ವಿರೋಧಿಯಾಗಿದೆ ಎಂದು ಆರೋಪಿಸಿ ಕೊಡಗು ಜಿಲ್ಲಾ ಭಾರತೀಯ ಜನತಾ ಪಾರ್ಟಿಯ ಎಸ್.ಟಿ ಮೋರ್ಚಾ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ರಾಹುಲ್ ಗಾಂಧಿ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು ಕಾಂಗ್ರೆಸ್ ಪಕ್ಷ ಪರಿಶಿಷ್ಟ ಜಾತಿ ಮತ್ತು ಪಂಗಡಗಳನ್ನು ಕೇವಲ ಓಟ್ ಬ್ಯಾಂಕ್ ರಾಜಕಾರಣಕ್ಕಾಗಿ ಮಾತ್ರ ಬಳಸಿಕೊಳ್ಳುತ್ತಿವೆ ಎಂದು ಆರೋಪಿಸಿದರು. ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದ ಎಸ್.ಟಿ ಮೋರ್ಚಾದ ಜಿಲ್ಲಾಧ್ಯಕ್ಷ ಎಂ.ಎಂ.ಪರಮೇಶ್ವರ ಅವರು, ಪರಿಶಿಷ್ಟರ ಭಾವನೆಗೆ ವಿರುದ್ಧವಾದ ಹೇಳಿಕೆ ನೀಡಿರುವ ರಾಹುಲ್ ಗಾಂಧಿ ಅವರನ್ನು ಸಂಸತ್ ಸ್ಥಾನದಿಂದ ತಕ್ಷಣ ವಜಾಗೊಳಸಬೇಕೆಂದು ಒತ್ತಾಯಿಸಿದರು. ಲೋಕಸಭೆಯ ವಿರೋಧ ಪಕ್ಷದ ನಾಯಕನ ಸ್ಥಾನದಲ್ಲಿದ್ದುಕೊಂಡು ದೇಶದ ಬಗ್ಗೆ ಗೌರವಯುತವಾಗಿ ನಡೆದುಕೊಳ್ಳದೆ ವಿದೇಶದಲ್ಲಿ ಅಗೌರವದ ಮಾತುಗಳನ್ನಾಡಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಆದಿವಾಸಿ, ಹಿಂದುಳಿದ…

Read More

ಮಡಿಕೇರಿ ಸೆ.17 NEWS DESK : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 74ನೇ ಜನ್ಮದಿನಾಚರಣೆಯ ಪ್ರಯುಕ್ತ  ಸಿದ್ದಾಪುರದ ಕೇಸರಿ ಯೂತ್ ಮೂವ್ ಮೆಂಟ್ ವತಿಯಿಂದ ಸಿದ್ದಾಪುರ ಸರ್ಕಾರಿ ಆಸ್ಪತ್ರೆಯ ಒಳರೋಗಿಗಳಿಗೆ, ವೈದ್ಯರುಗಳಿಗೆ, ಆಸ್ಪತ್ರೆಯ ಸಿಬ್ಬಂದಿಗಳಿಗೆ ಮತ್ತು ಸಾರ್ವಜನಿಕರಿಗೆ ಹಣ್ಣು-ಹಂಪಲುಗಳು ಮತ್ತು ಬ್ರೆಡ್ ಗಳನ್ನು ವಿತರಿಸಲಾಯಿತು.  ಈ ಸಂಧರ್ಭ ಕೇಸರಿ ಯೂತ್ ಮೂವ್ ಮೆಂಟ್ ನ ಪದಾದಿಕಾರಿಗಳು ಹಾಜರಿದ್ದರು.

Read More

ನವದೆಹಲಿ NEWS DESK ಸೆ.17 : ಕೊಡಗು, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ರೈತರ ಪ್ರಮುಖ ಬೆಳೆಯಾದ ಕರಿಮೆಣಸಿಗೆ ಲಗತ್ತಿಸಲ್ಪಡುವ ಜಿ.ಎಸ್.ಟಿ ವಿನಾಯಿತಿ ಕುರಿತು ಮೈಸೂರು- ಕೊಡಗು ಕ್ಷೇತ್ರದ ಸಂಸದ ಯದುವೀರ್ ಒಡೆಯರ್ ಅವರು ಕೇಂದ್ರ ಹಣಕಾಸು ಸಚಿವರಾದ ನಿರ್ಮಲ ಸೀತಾರಾಮನ್ ಅವರೊಂದಿಗೆ ಚರ್ಚಿಸಿದರು. ಕರಿಮೆಣಸಿಗೆ ವಿಧಿಸುವ ಜಿ.ಎಸ್.ಟಿಯಿಂದಾಗುವ ಸಾಧಕ ಬಾಧಕಗಳ ಬಗ್ಗೆ ಗಮನ ಸೆಳೆದ ಸಂಸದರು ವಿನಾಯಿತಿಯನ್ನು ಮುಂದುವರಿಸುವAತೆ ಕೋರಿ ಮನವಿ ಸಲ್ಲಿಸಿದರು.

Read More

ಸುಂಟಿಕೊಪ್ಪ ಸೆ.17 NEWS DESK : ಸುಂಟಿಕೊಪ್ಪದಲ್ಲಿ ಮುಸ್ಲಿಂ ಬಾಂಧವರು ಈದ್ ಮಿಲಾದನ್ನು ಸಂಭ್ರಮದಿಂದ ಆಚರಿಸಿದರು. ಮುಂಜಾನೆ ಸುಂಟಿಕೊಪ್ಪ ಪಟ್ಟಣದ ವಿವಿಧ ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸಿ ನಂತರ ಮಿಲಾದ್ ಸಂದೇಶ ಜಾಥಾ ನಡೆಸಿ ಶಾಂತಿ ಸೌಹಾರ್ದತೆಯ ಸಂದೇಶ ಸಾರಿದರು. ವಿಶೇಷ ಉಡುಗೆಗಳನ್ನು ತೊಟ್ಟು ದಫ್ ಪ್ರದರ್ಶನ ನೀಡಿದರು. ಸುಂಟಿಕೊಪ್ಪ ಶ್ರೀ ಕೋದಂಡ ರಾಮ ದೇವಾಲಯದ ಬಳಿಯಲ್ಲಿ ಪಂಚಾಯಿತಿ ಸದಸ್ಯ ಮಂಜು, ಬಿ.ಎಂ.ಸುರೇಶ್, ಉದ್ಯಮಿ ದೀನು ದೇವಯ್ಯ, ಧನು ಕಾವೇರಪ್ಪ, ಸುರೇಶ್‍ಗೋಪಿ, ಎಂ.ಎಸ್.ಸುನಿಲ್ ಹಾಗೂ ಭುವಿತ್ ಮುಸ್ಲಿಂ ಬಾಂಧವರಿಗೆ ತಂಪು ಪಾನೀಯವನ್ನು ವಿತರಿಸುವ ಮೂಲಕ ಸೌಹಾರ್ದತೆಯನ್ನು ಮೆರೆದರು. ಸುಂಟಿಕೊಪ್ಪ ಪಟ್ಟಣದ ಸುಂಟಿಕೊಪ್ಪ ಮುಸ್ಲಿಂ ಜಮಾಯತ್‍ನ ಇಬ್ರಾಹಿಂ ಹ್ಯಾಸನಿ, ಸುನ್ನಿ ಹನಫಿ ಮುಸ್ಲಿಂ ಜಮೀಯ ಮಸೀದಿ ಮೌಲನಾ ಜುಬ್ಬೇರ್ ಅಜಾರತ್, ಸುನ್ನಿ ಶಾಫಿ ಜುಮಾ ಮಸ್ಜಿದ್ ಧಾರ್ಮಿಕ ಮೌಲವಿ ಮೊಹಮದ್ ಹುಸೈನ್ ಹಾಗೂ ಗದ್ದೆಹಳ್ಳದ ನೂರು ಜುಮ್ಮ ಮಸ್ಜಿದ್‍ನ ಅಬ್ಧುಲ್ ಅಜೀಜ್ ಅವರುಗಳು ಧಾರ್ಮಿಕ ಪ್ರವಚ ನೀಡಿದರು. ಮುಂಜಾಗೃತ ಕ್ರಮವಾಗಿ ಕೊಡಗು ಜಿಲ್ಲಾ ವರೀಷ್ಠಾಧಿಕಾರಿ…

Read More

ಸುಂಟಿಕೊಪ್ಪ ಸೆ.17 NEWS DESK : ಮಹಾಗಣಪತಿ ಮತ್ತು ಗೋಪಾಲಕೃಷ್ಣ ದೇವಾಲಯದಲ್ಲಿ ಪ್ರತಿಷ್ಠಾಪಿಸಲಾಗಿದ್ದ 39ನೇ ವರ್ಷದ ಗೌರಿ ಗಣೇಶ ವಿಸರ್ಜನಾಮಹೋತ್ಸವವು ಶ್ರದ್ಧಾಭಕ್ತಿಯಿಂದ ನೆರವೇರಿತು. ವಿಸರ್ಜನೋತ್ಸವದ ಪ್ರಯುಕ್ತ ದೇವಾಲಯದಲ್ಲಿ ಮುಂಜಾನೆಯಿಂದಲೇ ನಿತ್ಯ ಪೂಜೆ, ಗಣಪತಿ ಹೋಮ ಹಾಗೂ ಮಹಾಮಂಗಳಾರತಿ ನಡೆಯಿತು. ಮಧ್ಯಾಹ್ನ ನೆರೆದಿದ್ದ ಭಕ್ತಾಧಿಗಳಿಗೆ ಅನ್ನದಾನ ನೆರವೇರಿತು. ಸಂಜೆ ವಿದ್ಯುತ್ ದೀಪಾಲಂಕೃತ ಭವ್ಯ ಮಂಟಪದಲ್ಲಿ ಗೌರಿ ಗಣೇಶ ಉತ್ಸವ ಮೂರ್ತಿಗಳನ್ನು ಕುಳ್ಳಿರಿಸಿ ಡಿಜೆ ಸಂಗೀತ, ಗೊಂಬೆ ಕುಣಿತ, ಡೊಳ್ಳು ಕುಣಿತದೊಂದಿಗೆ ಆರಂಭಗೊಂಡ ಶೋಭಯಾತ್ರೆಯು ಮೆಟ್ನಳ್ಳ ಸರ್ಕಲ್ ವರೆಗೆ ತೆರಳಿ ಅಲ್ಲಿಂದ ಹಿಂತಿರುಗಿ ಮುಖ್ಯ ರಸ್ತೆಯಲ್ಲಿ ಸಾಗಿ ರಾತ್ರಿ ದಾಸಂಡ ರಮೇಶ್ ಚಂಗಪ್ಪ ಅವರ ಜಾಗದಲ್ಲಿರುವ ಕೆರೆಯಲ್ಲಿ ವಿಸರ್ಜಿಸಲಾಯಿತು. ಈ ಸಂದರ್ಭ ಪ್ರಮುಖರಾದ ದಾಸಂಡ ರಮೇಶ್ ಚಂಗಪ್ಪ, ದಾಸಂಡ ಜಗದೀಶ್, ದಾಸಂಡ ರಂಜನ್, ಮಹೇಶ್ ಸೇರಿದಂತೆ ಸಮಿತಿಯ ಪದಾಧಿಕಾರಿಗಳು ಇದ್ದರು. ಮುಂಜಾಗ್ರತಾ ಕ್ರಮವಾಗಿ ಸುಂಟಿಕೊಪ್ಪ ಪೊಲೀಸ್ ಠಾಣಾವತಿಯಿಂದ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು.

Read More

ನಾಪೋಕ್ಲು ಸೆ.17 NEWS DESK : ಪ್ರವಾದಿ ಮಹಮ್ಮದ್ ಪೈಗಂಬರ್ ಅವರ ಜನ್ಮದಿನದ ಅಂಗವಾಗಿ ವಿವಿಧ ಕಾರ್ಯಕ್ರಮಗಳೊಂದಿಗೆ ಈದ್ ಮಿಲಾದ್ ಅನ್ನು ಸಂಭ್ರಮದಿಂದ ಆಚರಿಸಲಾಯಿತು. ನಾಪೋಕ್ಲು ವ್ಯಾಪ್ತಿಯ ವಿವಿಧ ಮಸೀದಿ, ಮದರಸಗಳಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳು ನಡೆಯಿತು. ವಿವಿಧ ಜಮಾಯತ್ ಗಳಿಂದ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಯಿತು. ಮದರಸ ವಿದ್ಯಾರ್ಥಿಗಳಿಂದ ಹಾಗೂ ಯುವಕರಿಂದ ದಫ್ ಪ್ರದರ್ಶನ ನಡೆಯಿತು. ಹಳೆ ತಾಲೂಕಿನ ಜುಮ್ಮಾ ಮಸೀದಿ, ಸೇರಿದಂತೆ ವಿವಿಧ ಜಮಾಯತ್ ಪದಾಧಿಕಾರಿಗಳು ಮುಸ್ಲಿಂ ಬಾಂಧವರು ಮೆರವಣಿಗೆಯಲ್ಲಿ ತೆರಳಿದರು. ಮುಹಮ್ಮದ್ ನಬಿ 99ನೇ ಯ ಜನ್ಮದಿನದ ಅಂಗವಾಗಿ ಕೊಳಕೇರಿ ಸುನ್ನಿ ಮುಸ್ಲಿಂ ಜಮಾಯತ್ ವತಿಯಿಂದ ನಡೆದ ಈದ್ ಮಿಲಾದ್ ಜಾಥಾ ಗಮನ ಸೆಳೆಯಿತು.ಮೆರವಣಿಗೆ ಯಲ್ಲಿ ಜುಮಾ ಮಸೀದಿಯ ಖತೀಬ್ ಜುರೈಜ್ ಸಹದಿ, ಅಧ್ಯಕ್ಷ ಎ.ಎ.ಅಶ್ರಫ್ , ಉಪಾಧ್ಯಕ್ಷ ಎಂ.ವೈ.ಹಫೀಲ್ ಸಹದಿ ಖಜಾಂಚಿ ಕೆ.ವೈ.ಅಶ್ರಫ್, ಕಾರ್ಯದರ್ಶಿ ಎಂ.ಯಚ್ ರಫೀಕ್ ಮತ್ತು ಗ್ರಾಮಸ್ಥರು ಪುಟಾಣಿ ಮಕ್ಕಳು ಮೆರವಣಿಗೆಯಲ್ಲಿ ಹಾಜರಿದ್ದರು. ಮೆರವಣಿಗೆಯು ಕಾಲ್ನಡಿಗೆಯಲ್ಲಿ ಕೊಳಕೇರಿಯಿಂದ ಕುಂಜಿಲದವರೆಗೆ ಸಾಗಿತು. ಸಮೀಪದ ಕೊಟ್ಟಮುಡಿ, ಎಮ್ಮೆಮಾಡು, ಪಡಿಯಾಣಿ ಮತ್ತಿತರ…

Read More

ಮಡಿಕೇರಿ ಸೆ.17 NEWS DESK : ಭಾರತೀಯ ಶಿಕ್ಷಣ ಪಿತಾಮಹ ಡಾ. ಸರ್ವಪಲ್ಲಿ ರಾಧಕೃಷ್ಣನ್ ಅವರ 136ನೇ ಜನ್ಮ ದಿನಾಚರಣೆ( ಶಿಕ್ಷಕರ ದಿನಾಚರಣೆ)ಯ ಅಂಗವಾಗಿ ಬೆಂಗಳೂರಿನ ಕರ್ನಾಟಕ ಪ್ರೆಸ್ಸ್ ಕ್ಲಬ್ ವತಿಯಿಂದ ಆಯೋಜಿಸಲಾದ ರಾಜ್ಯ ಮಟ್ಟದ ಗುರು ಶ್ರೇಷ್ಟ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ  ಭಾಗಮಂಡಲದ ಜ್ಞಾನೋದಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಚೀಯಕಪೂವಂಡ ಶ್ವೇತನ್ ಚೆಂಗಪ್ಪ ಅವರಿಗೆ “ರಾಜ್ಯ ಮಟ್ಟದ ಶಿಕ್ಷಣ ಸೇವಾ ರತ್ನ ಪ್ರಶಸ್ತಿ” ಪ್ರದಾನ ಮಾಡಲಾಯಿತು. ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ಅಮೂಲ್ಯವಾದ ಸೇವೆಯನ್ನು ಪರಿಗಣಿಸಿ ಗಣ್ಯರು ಪ್ರಶಸ್ತಿ ನೀಡಿ ಗೌರವಿಸಿದರು. ಕೊಡಗು ಜಿಲ್ಲಾ ಪಂಚಾಯತಿ, ಶಾಲಾ ಶಿಕ್ಷಣ ಇಲಾಖೆ, ಶಿಕ್ಷಕರ ಕಲ್ಯಾಣ ನಿಧಿ ಮತ್ತು ಬೆಂಗಳೂರು ವಿದ್ಯಾರ್ಥಿಗಳ ಕ್ಷೇಮಾಭಿವೃಧಿ ನಿಧಿ ವತಿಯಿಂದ 2024-25ನೇ ಸಾಲಿನಲ್ಲಿ ನೀಡಿದ”ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ”ಪ್ರಶಸ್ತಿಗೂ ಇವರು ಭಾಜಿನರಾಗಿದ್ದಾರೆ.

Read More

ಮಡಿಕೇರಿ ಸೆ.17 NEWS DESK : ದಲಿತ ಸಾಹಿತ್ಯ ಪರಿಷತ್ತು ಕೊಡಗು ಜಿಲ್ಲಾ ಘಟಕದ ಉದ್ಘಾಟನಾ ಸಮಾರಂಭ ಹಾಗೂ ಕನ್ನಡ ಭಾಷಾ ಬೋಧಕರಿಗೆ ಜಿಲ್ಲಾ ಮಟ್ಟದ ಕಾರ್ಯಾಗಾರ ಸಮಾರಂಭವು ಸೆ.22 ರಂದು ಮಡಿಕೇರಿಯಲ್ಲಿ ನಡೆಯಲಿದೆ ಎಂದು ದಸಾಪ ಅಧ್ಯಕ್ಷ ಅರ್ಜುನ್ ಮೌರ್ಯ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು, ನಗರದ ವಾಣಿಜ್ಯೋದ್ಯಮಿಗಳ ಸಹಕಾರ ಸಂಘದ ಸಭಾಂಗಣದಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಕೊಡಗು ವಿಶ್ವವಿದ್ಯಾಲಯದ ಕುಲಪತಿ ಡಾ.ಅಶೋಕ ಸಂಗಪ್ಪ ಆಲೂರ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ದಲಿತ ಸಾಹಿತ್ಯ ಪರಿಷತ್ತು ರಾಜ್ಯಾಧ್ಯಕ್ಷ ಡಾ.ಅರ್ಜುನ್ ಗೋಳಸಂಗಿ ವಹಿಸಿದ್ದಾರೆ. ಮೈಸೂರು ವಿಶ್ವವಿದ್ಯಾನಿಯಲದ ಗಾಂಧಿ ಅಧ್ಯಯನ ಕೇಂದ್ರದ ನಿರ್ದೇಶಕ ಪ್ರೊ.ಎಸ್.ನರೇಂದ್ರ ಕುಮಾರ್ ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡು “ಕನ್ನಡ ಸಾಹಿತ್ಯದಲ್ಲಿ ಪರಿವರ್ತನೆಯ ಹೆಗ್ಗುರುತುಗಳು” ಎಂಬ ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ ಎಂದರು. ವಿಶೇಷ ಆಹ್ವಾನಿತರಾಗಿ ದಸಾಪ ಮೈಸೂರು ವಿಭಾಗೀಯ ಸಂಯೋಜಕ ಡಾ.ಚಂದ್ರಗುಪ್ತ, ಮಡಿಕೇರಿ ನಗರಸಭಾ ಮಾಜಿ ಅಧ್ಯಕ್ಷ ಹೆಚ್.ಎಂ.ನಂದಕುಮಾರ್, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ…

Read More

ಗೋಣಿಕೊಪ್ಪ ಸೆ.17 NEWS DESK : ಚೇತನ ಫೌಂಡೇಶನ್ ಕರ್ನಾಟಕ ಮತ್ತು ಕರ್ನಾಟಕ ಸೋಶಿಯಲ್ ಕ್ಲಬ್ ಸಹಯೋಗದಲ್ಲಿ ಶಿಕ್ಷಣ ಕ್ಷೇತ್ರದ ಸಾಧನೆಗಾಗಿ ಶಿಕ್ಷಕಿ ವಾಮನ ಅವರಿಗೆ ಸಾವಿತ್ರಿಬಾಯಿ ಫುಲೆ ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ. ಧಾರವಾಡದ ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ನಡೆದ ಸಾಧಕರ ಸಮಾಗಮ ಕಾರ್ಯಕ್ರಮದಲ್ಲಿ ಗಣ್ಯರು ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.

Read More

ಮಡಿಕೇರಿ ಸೆ.17 NEWS DESK  : ಕನ್ನಡ ನಾಡಿನ ಸರ್ವತೋಮುಖ ಅಭಿವೃದ್ಧಿಯಲ್ಲಿ ಪ್ರಮುಖರಾದ ಸರ್.ಎಂ.ವಿಶ್ವೇಶ್ವರಯ್ಯರವರು ಸಾಹಿತ್ಯ ಸಂಸ್ಕೃತಿಯನ್ನು ಬೆಳೆಸುವಲ್ಲಿ ದಾರ್ಶನಿಕರಾಗಿ ದುಡಿದವರು ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ಪಿ ರಮೇಶ್ ನುಡಿದರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಏರ್ಪಡಿಸಿದ್ದ ಕನ್ನಡ ಸಾಹಿತ್ಯ ಪರಿಷತ್ತು ಸ್ಥಾಪಕರಲ್ಲಿ ಒಬ್ಬರಾದ ಸರ್.ಎಂ ವಿಶ್ವೇಶ್ವರಯ್ಯ ಅವರು 164ನೇ ಜನ್ಮದಿನಾಚರಣೆಯ ಕುರಿತು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಉಪನ್ಯಾಸ ನೀಡಿದರು. ಸರ್.ಎಂ. ವಿಶ್ವೇಶ್ವರಯ್ಯ ಜನ್ಮದಿನವನ್ನು ಇಂಜಿನಿಯರ್ಸ್ ಡೇ – ಅಭಿಯಂತರರ ದಿನವನ್ನಾಗಿ ಕರ್ನಾಟಕ ಸರ್ಕಾರ ಆಚರಿಸುತ್ತಿದೆ. 15.09.1861ರಲ್ಲಿ ಶ್ರೀನಿವಾಸ ಶಾಸ್ತ್ರಿ ಮತ್ತು ವೆಂಕಟಲಕ್ಷ್ಮಮ್ಮ ದಂಪತಿಗಳ ಪುತ್ರನಾಗಿ ಇಂದಿನ ಕೋಲಾರ ಜಿಲ್ಲೆಯ ಮುದ್ದೇನಹಳ್ಳಿ ಗ್ರಾಮದಲ್ಲಿ ಜನ್ಮ ಪಡೆದರು. ಇವರು ಬೆಂಗಳೂರು ಮತ್ತು ಪೂನಾದಲ್ಲಿ ವಿದ್ಯಾಭ್ಯಾಸ ಪಡೆದು ಇಂಜಿನಿಯರ್ ಪದವೀಧರರಾದರು.ಮುಂಬೈ ಕರ್ನಾಟಕದ ಕುಡಿಯುವ ನೀರು ಯೋಜನೆ, ಹೈದರಾಬಾದ್ ನಿಜಾಮರ ಆಡಳಿತದಲ್ಲಿ ಹೈದರಾಬಾದಿಗೆ ಒಳಚರಂಡಿ ನಿರ್ಮಾಣ ಕಾರ್ಯ ರಚಿಸಿದರು.…

Read More