ಮಡಿಕೇರಿ ಜು.16 NEWS DESK : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ನೀಡಲಾಗುವ ಪ್ರತಿಷ್ಠಿತ ಫ್ಲಾರೆನ್ಸ್ ನೈಟಿಂಗೇಲ್ ಪ್ರಶಸ್ತಿಗೆ ಭಾಜನರಾದ ಆರೋಗ್ಯ ಇಲಾಖೆಯ ಹಿರಿಯ ನರ್ಸಿಂಗ್ ಅಧಿಕಾರಿ ಮಡಿಕೇರಿಯ ಬಂಗಾಡುಮನೆ ವಸಂತಿ ಅವರಿಗೆ ಹೃದಯ ತುಂಬಿದ ಅಭಿನಂದನೆಗಳು.
ಲೇಖಕ: admin
ಮಡಿಕೇರಿ ಜು.16 NEWS DESK : 50ನೇ ವರ್ಷದ ಸಂಭ್ರಮದಲ್ಲಿರುವ ನಗರದ ಅಶೋಕಪುರದ ಶ್ರೀ ಗಣಪತಿ ಉತ್ಸವ ಸಮಿತಿ ಅಧ್ಯಕ್ಷರಾಗಿ ಎಂ.ಜಿ.ಸುನಿಲ್ ಮರು ಆಯ್ಕೆಗೊಂಡಿದ್ದಾರೆ. ಇತ್ತೀಚಿಗೆ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಈಶ್ವರ್, ಕಾರ್ಯದರ್ಶಿಯಾಗಿ ಭರತ್, ಉಪಕಾರ್ಯದರ್ಶಿಯಾಗಿ ಚಂದ್ರಮೌಳಿ, ಖಜಾಂಚಿಯಾಗಿ ಪ್ರಜ್ವಲ್, ಉಪ ಖಜಾಂಚಿಯಾಗಿ ಕಾರ್ತಿಕ್, ಸಂಘಟನಾ ಕಾರ್ಯದರ್ಶಿಗಳಾಗಿ ಕೌಶಿಕ್, ಯತೀಶ್, ಅರ್ಜುನ್, ಅಭಿಲಾಷ್ ಅವರುಗಳನ್ನು ನೇಮಕ ಮಾಡಲಾಯಿತು.
ಮಡಿಕೇರಿ ಜು.16 NEWS DESK : ಅಂತರಾಷ್ಟ್ರೀಯ ಗುಣಮಟ್ಟದ ಬೆಂಗಳೂರಿನ ಹೃದಯ ಭಾಗದಲ್ಲಿರುವ, ಐದು ದಶಕಗಳ ಕಾಲ ಬಹಳಷ್ಟು ಆಟಗಾರರಿಗೆ ಜೀವನ ರೂಪಿಸಿ ಕೊಟ್ಟಂತಹ ಸುಲ್ಲಿವನ್ ಹಾಕಿ ಮೈದಾನವನ್ನು ಜೋಪಾನವಾಗಿ ಕಾಪಾಡಿಕೊಂಡು ಬಂದ ಮಹಾನ್ ವ್ಯಕ್ತಿ K.S.R.P ಯ ಕಮಾಂಡೆಂಟ್ ಕಂಜಿತಂಡ ಮುತ್ತಪ್ಪ ಈಗ ನೆನಪು ಮಾತ್ರ. ಕಂಜಿತಂಡ ಕಾರ್ಯಪ್ಪ ಹಾಗೂ ದೇಚಮ್ಮ (ತಾಮನೆ ಕೊಡಂದೇರ) ದಂಪತಿಯರ ಪುತ್ರನಾಗಿ ಕಂಜಿತಂಡ ಮುತ್ತಪ್ಪ (ರಾಮು)ಅವರು 12/04/1931 ರಂದು ದೇವರಪುರದಲ್ಲಿ ಜನಿಸಿದರು. ಮುತ್ತಪ್ಪ ಅವರು ವಿದ್ಯಾಭ್ಯಾಸವನ್ನು ಪೊನ್ನಂಪೇಟೆಯ ಸರ್ಕಾರಿ ಶಾಲೆಯಲ್ಲಿ ಮುಗಿಸಿ, ತಮ್ಮ 18ನೇ ವಯಸ್ಸಿನಲ್ಲಿ ಸೈನ್ಯಕ್ಕೆ ಸೇರಿದರು. 1951 ರಲ್ಲಿ ಎಚ್.ಎಸ್.ಆರ್.ಪಿ (ಹೈದರಾಬಾದ್ ರಾಜ್ಯ ಮೀಸಲು ಪೊಲೀಸ್)ಯ ಪೊಲೀಸ್ ಆಗಿ ಭರ್ತಿ ಹೊಂದಿದರು. ಇದು ನಂತರದ ದಿನಗಳಲ್ಲಿ ಎಂ.ಎಸ್.ಆರ್.ಪಿ(ಮೈಸೂರು ರಾಜ್ಯ ಮೀಸಲು ಪೊಲೀಸ್) ಯೊಂದಿಗೆ ವಿಲೀನಗೊಂಡಿತು. ಇವರು 1964ರಲ್ಲಿ ಇನ್ಸ್ಪೆಕ್ಟರ್ ಆಗಿ ಬಡ್ತಿ ಹೊಂದಿದರು. 1977ರಲ್ಲಿ ಕೆ.ಎಸ್.ಆರ್.ಪಿ (ಕರ್ನಾಟಕ ರಾಜ್ಯ ಮೀಸಲು ಪೊಲೀಸ್)ಯ ಅಸಿಸ್ಟೆಂಟ್ ಕಮಾಂಡೆಂಟ್ ಹಾಗೂ 1982 ರಲ್ಲಿ ಕಮಾಂಡೆಂಟ್ ಆಗಿ…
ಸಿದ್ದಾಪುರ ಜು.16 NEWS DESK : ವಿರಾಜಪೇಟೆ ತಾಲೂಕಿನ ಸಿದ್ದಾಪುರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಧಾರಾಕಾರ ಮಳೆಯಾಗಿದ್ದು, ಚೆನ್ನಯ್ಯನ ಕೋಟೆ ಗ್ರಾಮದ ಕೂಲಿ ಕಾರ್ಮಿಕ ಹೆಚ್ .ಕೆ.ಉದಯ ಎಂಬುವರಿಗೆ ಸೇರಿದ ಮನೆಯ ಗೋಡೆ ಕುಸಿದು ಬಿದ್ದಿದೆ. ಮನೆಯ ಎರಡು ಗೋಡೆ ಸಂಪೂರ್ಣ ಕುಸಿತಗೊಂಡಿದ್ದು, ಇನ್ನುಳಿದ ಗೋಡೆಗಳು ಭಾರಿ ಪ್ರಮಾಣದಲ್ಲಿ ಬಿರುಕು ಕಾಣಿಸಿಕೊಂಡಿವೆ. ಮನೆಯಲ್ಲಿದ್ದವರು ಮನೆಯಿಂದ ಹೊರ ಬಂದು ಪ್ರಾಣಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಪಂಚಾಯಿತಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಡಿಕೇರಿ ಜು.15 NEWS DESK : ಕೊಡಗು ಜಿಲ್ಲೆಯಲ್ಲಿ ಗಾಳಿ ಮಳೆ ತೀವ್ರತೆ ಪಡೆದುಕೊಂಡಿರುವುದರಿಂದ ಪದವಿ ಮತ್ತು ಸ್ನಾತಕೋತ್ತರ ಪದವಿ ಕಾಲೇಜುಗಳನ್ನು ಹೊರತುಪಡಿಸಿ ಅಂಗನವಾಡಿ ಹಾಗೂ ಶಾಲಾ ಕಾಲೇಜುಗಳಿಗೆ ಜುಲೈ 16 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಆದೇಶಿಸಿದ್ದಾರೆ.
ಮಡಿಕೇರಿ ಜು.15 NEWS DESK : ಕೊಡಗು ಜಿಲ್ಲೆಯಲ್ಲಿ ಗಾಳಿ ಮಳೆ ತೀವ್ರತೆ ಪಡೆದುಕೊಂಡಿರುವುದರಿಂದ ಪದವಿ ಮತ್ತು ಸ್ನಾತಕೋತ್ತರ ಪದವಿ ಕಾಲೇಜುಗಳನ್ನು ಹೊರತುಪಡಿಸಿ ಅಂಗನವಾಡಿ ಹಾಗೂ ಶಾಲಾ ಕಾಲೇಜುಗಳಿಗೆ ಜುಲೈ 16 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಆದೇಶಿಸಿದ್ದಾರೆ.
ಮಡಿಕೇರಿ ಜು.15 NEWS DESK : 2024-25 ನೇ ಸಾಲಿನಲ್ಲಿ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯನ್ನು ಕೊಡಗು ಜಿಲ್ಲೆಯ ಎಲ್ಲಾ 3 ತಾಲೂಕುಗಳಲ್ಲಿ ಜಿಲ್ಲೆಯ ಮುಖ್ಯ ಬಹುವಾರ್ಷಿಕ ಬೆಳೆಗಳಾದ ಕಾಳು ಮೆಣಸು ಹಾಗೂ ಅಡಿಕೆ ಬೆಳೆಗಳಿಗೆ ಅನುಷ್ಠಾನಗೊಳಿಸಲಾಗುವುದು. ಹವಾಮಾನ ಅಂಶಗಳಾದ ಮಳೆಯ ಪ್ರಮಾಣ, ತಾಪಮಾನ ಆರ್ದತೆ ಮತ್ತಿತರ ಮಾಹಿತಿಗಳನ್ನು ಸ್ಥಳೀಯವಾಗಿ ಲಭ್ಯವಿರುವ ಟೆಲಿಮೆಟ್ರಿಕ್ ಮಳೆ ಮಾಪನ ಕೇಂದ್ರಗಳಲ್ಲಿ ದಾಖಲಿಸುವ ಅಂಶಗಳ ಆಧಾರದ ಮೇಲೆ ಬೆಳೆ ವಿಮೆ ನಷ್ಟವನ್ನು ತೀರ್ಮಾನಿಸಲಾಗುವುದು. ಈ ಯೋಜನೆಯ ವಿಮೆ ನೋಂದಣಿಗೆ ಜುಲೈ, 31 ಕೊನೆಯ ದಿನವಾಗಿದೆ. 2024-25 ನೇ ಸಾಲಿನಲ್ಲಿ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ಬೆಳೆವಾರು ವಿಮಾ ಮೊತ್ತ ಹಾಗೂ ಕಂತಿನ ವಿವರ ಇಂತಿದೆ. ಕಾಳು ಮೆಣಸು ಬೆಳೆಗೆ ಪ್ರತಿ ಹೆಕ್ಟೇರ್‍ಗೆ ವಿಮಾ ಮೊತ್ತ (ರೂ.ಗಳಲ್ಲಿ) ರೂ.47000, ಪ್ರತಿ ಹೆಕ್ಟೇರ್‍ಗೆ ವಿಮಾ ಕಂತು(ಶೇ.30) ರೂ.14,100 ಮತ್ತು ರೈತರು ಪಾವತಿಸಬೇಕಾಗಿರುವ ಕಂತು(ಶೇ.5) ರೂ.2350.…
ಮಡಿಕೇರಿ ಜು.15 NEWS DESK : ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಕಳೆದ ಎರಡು ದಿನಗಳಿಂದ ಮಳೆ ತೀವ್ರತೆಯನ್ನು ಪಡೆದುಕೊಂಡಿದೆ. ಜಿಲ್ಲೆಯಲ್ಲಿ ಜನವರಿಯಿಂದ ಇಲ್ಲಿಯವರೆಗೆ 48 ಇಂಚು ಮಳೆಯಾಗಿದ್ದು, ಮಡಿಕೇರಿ ತಾಲ್ಲೂಕಿನಲ್ಲಿ ಅತಿಹೆಚ್ಚು 74 ಇಂಚು ಮಳೆಯಾಗಿದೆ. ಎರಡು ದಿನಗಳ ಧಾರಾಕಾರ ಮಳೆಯಿಂದ ಹಲವೆಡೆ ಹಾನಿಯಾಗಿದೆ. ಜಿಲ್ಲೆಯಲ್ಲಿನ ನದಿ, ತೊರೆ, ಹಳ್ಳಕೊಳ್ಳ, ಜಲಾಶಯಗಳಲ್ಲಿನ ನೀರಿನ ಮಟ್ಟ ಏರಿಕೆಯಾಗಿದೆ. ಜಿಲ್ಲೆಯ ಶಾಂತಳ್ಳಿ, ಭಾಗಮಂಡಲ, ಸೋಮವಾರಪೇಟೆ, ಮಡಿಕೇರಿ, ಸುಂಟಿಕೊಪ್ಪ, ನಾಪೋಕ್ಲು, ಶನಿವಾರಸಂತೆ, ಶ್ರೀಮಂಗಲ, ಸಂಪಾಜೆ, ಹೀಗೆ ವಿವಿಧ ಕಡೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಭಾಗಮಂಡಲ ತ್ರಿವೇಣಿ ಸಂಗಮ ತುಂಬಿ ಹರಿಯುತ್ತಿದೆ. ಕಾವೇರಿ ನದಿ ಪಾತ್ರದಲ್ಲಿ ನೀರಿನ ಹರಿವು ಹೆಚ್ಚಳವಾಗಿದೆ. ವಿವಿಧೆಡೆ ಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದ್ದು, ಮರ, ಬರೆ ಮತ್ತು ವಿದ್ಯುತ್ ಕಂಬಗಳು ಬಿದ್ದು ಹಾನಿಯುಂಟಾಗಿದೆ. ಮಡಿಕೇರಿ ನಗರಸಭಾ ವ್ಯಾಪ್ತಿಯಲ್ಲಿ ಸಣ್ಣಪುಟ್ಟ ಹಾನಿಯಾಗಿದ್ದು, ನಗರಸಭೆ ಪೌರಾಯುಕ್ತ ವಿಜಯ್ ಹಾನಿ ಆಗಿರುವ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.…
ಮಡಿಕೇರಿ ಜು.15 NEWS DESK : ಆರ್ಥಿಕ ಹೊರೆಯನ್ನು ಅನುಭವಿಸುತ್ತಿರುವ ರಾಜ್ಯ ಸರ್ಕಾರ ಆರ್ಥಿಕ ಸಂಪನ್ಮೂಲ ಕ್ರೋಢೀಕರಣಕ್ಕಾಗಿ ಕೊಡಗು ಜಿಲ್ಲೆಯಲ್ಲಿ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಗೆ ಪರೋಕ್ಷವಾಗಿ ಉತ್ತೇಜನ ನೀಡುತ್ತಿದೆ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು.ನಾಚಪ್ಪ ಗಂಭೀರ ಆರೋಪ ಮಾಡಿದ್ದಾರೆ. ಸಿದ್ದಾಪುರದ ಕಾಫಿ ತೋಟಗಳು ಸೇರಿದಂತೆ ಕೊಡಗು ಜಿಲ್ಲೆಯ ವಿವಿಧೆಡೆ ನಡೆಯುತ್ತಿರುವ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯನ್ನು ಸ್ಥಗಿತಗೊಳಿಸಬೇಕೆಂದು ಒತ್ತಾಯಿಸಿ ಸಿಎನ್‍ಸಿ ವತಿಯಿಂದ ಪೊನ್ನಂಪೇಟೆ ಪಟ್ಟಣದಲ್ಲಿ ನಡೆದ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮದ ನೇತೃತ್ವ ವಹಿಸಿ ಅವರು ಮಾತನಾಡಿದರು. ಭೂಪರಿವರ್ತನೆ ಮತ್ತು ನೋಂದಣಿಗೆ ದೊಡ್ಡ ಮೊತ್ತದ ಶುಲ್ಕ ವಸೂಲಿ ಮಾಡುತ್ತಿರುವ ಸರ್ಕಾರ ಕೊಡಗು ಜಿಲ್ಲೆಯ ಕೃಷಿಭೂಮಿಯನ್ನು ಸುಲಭವಾಗಿ ಪರಭಾರೆ ಮಾಡಲು ಅವಕಾಶ ನೀಡುತ್ತಿದೆ. ಸರ್ಕಾರ ದಿನಕ್ಕೊಂದು ಕರಾಳ ಕಾನೂನನ್ನು ಜಾರಿಗೆ ತಂದು ಕೊಡವರಿಗೆ ಕಿರುಕುಳ ನೀಡುತ್ತಿದೆ. ಕೊಡವ ಲ್ಯಾಂಡ್ ನಿಂದಲೇ ಒಕ್ಕಲೆಬ್ಬಿಸುವ ಪ್ರಯತ್ನಗಳು ನಡೆಯುತ್ತಿದೆ. ದೊಡ್ಡ ದೊಡ್ಡ ಬಂಡವಾಳಶಾಹಿಗಳ ಪರ ನಿರ್ಣಯಗಳನ್ನು ತೆಗೆದುಕೊಳ್ಳುತ್ತಿರುವ ಸರ್ಕಾರ ಮತಬ್ಯಾಂಕ್ ಗಾಗಿ ಕೊಡಗನ್ನು…
ಪುತ್ತೂರು ಜು.15 NEWS DESK : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿಗಳು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವು ನಡೆಸಿದ 2023-24ನೇ ಶೈಕ್ಷಣಿಕ ಸಾಲಿನ ಅಂತಿಮ ವರ್ಷದ ಇಂಜಿನಿಯರಿಂಗ್ ಪರೀಕ್ಷೆಯಲ್ಲಿ 2 ರ‍್ಯಾಂಕ್ ಗಳನ್ನು ಪಡೆದುಕೊಂಡಿದ್ದಾರೆ. ಕಾಲೇಜಿನ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಕೇಶವ ಪ್ರಜ್ವಲ್.ಪಿ 9.38 ಸಿಜಿಪಿಎ ಅಂಕಗಳೊಂದಿಗೆ 3ನೇ ರ‍್ಯಾಂಕ್ ಹಾಗೂ ಕೆ.ಪಲ್ಲವಿ 9.33 ಸಿಜಿಪಿಎ ಅಂಕಗಳೊಂದಿಗೆ 5ನೇ ರ‍್ಯಾಂಕ್ ಗಳಿಸಿಕೊಂಡಿದ್ದಾರೆ. ಸಿವಿಲ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥ ಪ್ರೊ.ಪ್ರಶಾಂತ್ ಹಾಗೂ ಪ್ರಾಧ್ಯಾಪಕರ ಸಮರ್ಥ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಈ ಸಾಧನೆಯನ್ನು ಮಾಡಿದ್ದಾರೆ. ಕೇಶವ ಪ್ರಜ್ವಲ್.ಪಿ ಅವರು ಕುಂಬ್ಳೆಯ ಶ್ರೀವಾಣಿ ಹಾಗೂ ಉದಯಶಂಕರ ಭಟ್ ಅವರ ಪುತ್ರ. ಕೆ.ಪಲ್ಲವಿ ಅವರು ಬಂಟ್ವಾಳದ ಅಲ್ಲಿಪಾದೆಯ ಚಂದ್ರಿಕಾ ಹಾಗೂ ಕೆ.ಕಿಶೋರ್ ಕುಮಾರ್ ಅವರ ಪುತ್ರಿ. ವಿದ್ಯಾರ್ಥಿಗಳ ಈ ಸಾಧನೆಗೆ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್, ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ…






