ಲೇಖಕ: admin

ಮಡಿಕೇರಿ ಜು.26 NEWS DESK : ಕೊಡಗು ಜಿಲ್ಲೆಯಲ್ಲಿರುವ ಪರಿಶಿಷ್ಟ ಪಂಗಡದ ವಾಲ್ಮೀಕಿ ಆಶ್ರಮ ಶಾಲೆಗಳಲ್ಲಿರುವ ವಿದ್ಯಾರ್ಥಿಗಳಿಗೆ ಇಂಗ್ಲೀಷ್ ಕಲಿಕೆಗಾಗಿ ಗೌರವಧನದ ಆಧಾರದ ಮೇಲೆ 9 ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ, 31 ಕೊನೆಯ ದಿನವಾಗಿದೆ. ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿರುವಂತೆ ಗೌರವಧನ ಮಾಹೆಯಾನ ರೂ.10 ಸಾವಿರ ನಿಗಧಿಪಡಿಸಿದೆ. ಇಂಗ್ಲಿಷ್ ಐಚ್ಛಿಕ ವಿಷಯದಲ್ಲಿ ಪದವಿ ಮತ್ತು ಬಿ.ಎಡ್ ಪೂರ್ಣಗೊಳಿಸಿದ ಅಭ್ಯರ್ಥಿಗಳಾಗಿರಬೇಕು. ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿರುವ ಜಿಲ್ಲಾ ಮಟ್ಟದ ಸಮಿತಿಯಲ್ಲಿ ಮಂಡಿಸಿ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಅರ್ಜಿಯನ್ನು ಯೋಜನಾ ಸಮನ್ವಯಾಧಿಕಾರಿಗಳು, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ಕೊಡಗು ಜಿಲ್ಲೆ, ಮಡಿಕೇರಿರವರ ಕಚೇರಿ, ಹೊಸ ಜಿಲ್ಲಾ ಪಂಚಾಯತ್ ಕಟ್ಟಡ ಇಲ್ಲಿಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ ಕಚೇರಿ ದೂ.ಸಂ.08272-200500 ನ್ನು ಸಂಪರ್ಕಿಸಬಹುದು ಎಂದು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಇಲಾಖೆಯ ಯೋಜನಾ ಸಮನ್ವಯಾಧಿಕಾರಿ ತಿಳಿಸಿದ್ದಾರೆ.

Read More

ಮಡಿಕೇರಿ ಜು.26 NEWS DESK : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜುಲೈ, 30 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ‘’ಉದ್ಯೋಗ ಮೇಳ’ ನಡೆಯಲಿದೆ. ಈ ಉದ್ಯೋಗ ಮೇಳದಲ್ಲಿ, ರಾಣಿ ಮದ್ರಾಸ್ ಮೈಸೂರು, ಹಿಮಂತ್ಸಾ ಸಿಂಗ್ ಕಾ ಲಿನೆನ್ ಹಾಸನ, ತಾಜ್ ರೆಸಾರ್ಟ್, ಮಡಿಕೇರಿ, ಕಲ್ಯಾಣಿ ಮೋಟರ‍್ಸ್, ಮಡಿಕೇರಿ, ಪೆಂಟೆಟೆಕ್, ಮಡಿಕೇರಿ, ಎಸ್‌ಎಲ್‌ಎನ್ ಕಾಫಿ ವರ್ಕ್ ಲಿ. ಕೂಡಿಗೆ, ಮುತ್ತೂಟ್ ಪೈನಾನ್ಸ್, ಮೈಸೂರು ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಈ ಮೇಳದಲ್ಲಿ ಖಾಸಗಿ ಕಂಪೆನಿಗಳು ಭಾಗವಹಿಸಿ ತಮ್ಮಲ್ಲಿ ಖಾಲಿಯಿರುವ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಈ ಉದ್ಯೋಗ ಮೇಳದಲ್ಲಿ ಎಸ್‌ಎಸ್‌ಎಲ್‌ಸಿಗಿಂತ ಕಡಿಮೆ, ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೋಮ, ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಉದ್ಯೋಗಾಕಾಂಕ್ಷಿಗಳು ಭಾಗವಹಿಸಿ ಉದ್ಯೋಗದ ನೆರವು ಪಡೆಯಬಹುದು. ಅಭ್ಯರ್ಥಿಗಳು ಸ್ವಯಂ-ವಿವರ (ಬಯೋಡೇಟಾ)ಗಳ ಪ್ರತಿಗಳೊಂದಿಗೆ ಉದ್ಯೋಗ ಮೇಳಕ್ಕೆ ಹಾಜರಾಗುವಂತೆ ಜಿಲ್ಲಾ ಉದ್ಯೋಗಾಧಿಕಾರಿ…

Read More

ಕುಶಾಲನಗರ ಜು.26 NEWS DESK :  ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕೊಡಗು ಜಿಲ್ಲಾ ಸಂಸ್ಥೆ ಮತ್ತು ಕುಶಾಲನಗರ ಸ್ಥಳೀಯ ಸಂಸ್ಥೆ, ಅತ್ತೂರು ಹಾರಂಗಿ ಜ್ಞಾನಗಂಗಾ ಶಾಲೆ ಹಾಗೂ ಕುಶಾಲನಗರ ಮಾಜಿ ಸೈನಿಕರ ಸಂಘದ ವತಿಯಿಂದ ಕುಶಾಲನಗರದ ಮುಳ್ಳುಸೋಗೆಯಲ್ಲಿರುವ ಮಾಜಿ ಸೈನಿಕರ ಸಂಘದ ಸಭಾಂಗಣದಲ್ಲಿ 25ನೇ ವರ್ಷದ ಕಾರ್ಗಿಲ್ ವಿಜಯೋತ್ಸವ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರ ಸೇವೆಯನ್ನು ಸ್ಮರಿಸಿ, ಶ್ರದ್ಧಾಂಜಲಿ ಸಲ್ಲಿಸಲಾಯಿತು. ಜ್ಞಾನಗಂಗಾ ವಸತಿ ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಹಾಗೂ ಎನ್.ಸಿ.ಸಿ.ಕೆಡೆಟ್ ಗಳು ಕಾರ್ಗಿಲ್ ಯುದ್ಧದಲ್ಲಿ ಭಾಗಿಯಾಗಿ ನಿವೃತ್ತರಾಗಿರುವ ಸೈನಿಕರು ಮತ್ತು ಸಂಘದ ಮಾಜಿ ಸೈನಿಕರಿಗೆ ಪುಷ್ಪ ನೀಡಿ ಅಭಿನಂದನೆ ಸಲ್ಲಿಸಿದರು. ಇದೇ ವೇಳೆ ಮಾಜಿ ಸೈನಿಕರು ಕಾರ್ಗಿಲ್ ಯುದ್ಧದ ತಮ್ಮ ಅನುಭವವನ್ನು ಹಂಚಿಕೊಂಡರು. ಅಧ್ಯಕ್ಷತೆ ವಹಿಸಿದ್ದರ ಮಾಜಿ ಸೈನಿಕರ ಸಂಘದ ಉಪಾಧ್ಯಕ್ಷ ಪಿ.ಎ.ನಂಜುಂಡ ಮಾತನಾಡಿ, ಸೈನಿಕರು ಶಿಶ್ತು, ಸಮಯ ಪಾಲನೆ, ರಾಷ್ಟ್ರ ಪ್ರೇಮಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಾರೆ, ರಾಷ್ಟ್ರಭಿಮಾನ ಇರುವ ಉದ್ದೇಶದಿಂದ ನಮ್ಮ…

Read More

ಮಡಿಕೇರಿ ಜು.26 NEWS DESK : ವಾರಣಾಸಿಯ ಗಂಗಾ ಆರತಿಯ ಮಾದರಿಯಲ್ಲಿ ಜೀವನದಿ ಕಾವೇರಿಗೆ ಆರತಿ ಬೆಳಗುವ ಕಾರ್ಯಕ್ರಮ ಮೂಲ ಕಾವೇರಿಯ ನಾಡು ಕೊಡಗಿನಲ್ಲೆ ಆಯೋಜಿಸುವಂತೆ ಕಾವೇರಿ ರಿವರ್ ಟ್ರಸ್ಟ್ ಮತ್ತು ಕಾವೇರಿ ಮಹಾ ಆರತಿ ಬಳಗ ಸರ್ಕಾರವನ್ನು ಆಗ್ರಹಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾವೇರಿ ರಿವರ್ ಸೇವಾ ಟ್ರಸ್ಟ್ ಅಧ್ಯಕ್ಷ ಎಂ.ಎನ್.ಚ0ದ್ರಮೋಹನ್ ಅವರು, ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇತ್ತೀಚೆಗೆ ಕಾವೇರಿ ಆರತಿ ಕಾರ್ಯಕ್ರಮವನ್ನು ಆಯೋಜಿಸಲು ಉದ್ದೇಶಿಸಿರುವುದು ಅತ್ಯಂತ ಶ್ಲಾಘನೀಯ ವಿಚಾರ. ಇಂತಹ ಮಹತ್ವದ ಕಾರ್ಯವನ್ನು ಬೇರೆಲ್ಲೋ ನಡೆಸುವುದಕ್ಕಿಂತ ಕಾವೇರಿಯ ನಾಡು ಕೊಡಗಿನಲ್ಲಿ ನಡೆಸಿದಲ್ಲಿ ಅದಕ್ಕೊಂದು ಐತಿಹಾಸಿಕ, ಧಾರ್ಮಿಕ ಹಿನ್ನೆಲೆ ಇರುತ್ತದೆ ಎಂದರು. ಕಾವೇರಿ ಆರತಿ ಕಾರ್ಯಕ್ರಮವನ್ನು ಕಾವೇರಿಯ ಉಗಮ ಸ್ಥಾನವಾದ ತಲಕಾವೇರಿ, ಸಂಗಮ ಕ್ಷೇತ್ರವಾದ ಭಾಗಮಂಡಲ, ನದಿ ಪಾತ್ರದ ಪವಿತ್ರ ಸ್ಥಳವಾದ ಕಣಿವೆ, ಬಲಮುರಿ, ಗುಹ್ಯ ಕ್ಷೇತ್ರಗಳಲ್ಲಿಯೂ ನಡೆಸಬಹುದಾಗಿದೆ. ಇಂತಹ ಸ್ಥಳಗಳಲ್ಲಿ ಕಾವೇರಿ ಆರತಿಯನ್ನು ನಡೆಸಿದಲ್ಲಿ ಧಾರ್ಮಿಕ ಮತ್ತು ಸಾಂಸ್ಕೃತಿಕ ಮೌಲ್ಯಗಳನ್ನು ಉತ್ತೇಜಿಸಿದಂತೆ ಆಗುತ್ತದಲ್ಲದೆ, ಮೇಲ್ಪಂಕ್ತಿಯನ್ನು ಹಾಕಿಕೊಟ್ಟಂತಾಗುತ್ತದೆ…

Read More

ವಿರಾಜಪೇಟೆ ಜು.26 NEWS DESK : ವಿರಾಜಪೇಟೆ -ಕರಡವನ್ನು ಸಂಪರ್ಕಿಸುವ ರಸ್ತೆಯು ಕೆದಮುಳ್ಳೂರು ಗ್ರಾಮ ಸಮೀಪದ ತೆರ್ಮೆಮೊಟ್ಟೆ ಎಂಬಲ್ಲಿ ಬಿರುಕು ಬಿಟ್ಟಿದ್ದು, ಇಲಾಖಾ ವತಿಯಿಂದ ರಸ್ತೆಗೆ ಟಾರ್ಪಲ್ ಹೊದಿಕೆಯನ್ನು ಅಳವಡಿಸಿದ್ದರು. ತದನಂತರ ಸಾರ್ವಜನಿಕರಿಗೆ ಸಂಚಾರಕ್ಕೆ ಅನಾನುಕೂಲ ಎದುರಾಗಿತ್ತು. ಇತ್ತೀಚಿಗೆ ಸಾರ್ವಜನಿಕರು ಹಾಗೂ ಸ್ಥಳೀಯರು ಬದಲಿ ರಸ್ತೆಯ ವ್ಯವಸ್ಥೆಯನ್ನು ಸಂಚಾರಕ್ಕೆ ಅನುವು ಮಾಡಿಕೊಡಬೇಕಾಗಿ ಪ್ರತಿಭಟನೆಯನ್ನು ನಡೆಸಿದರು. ಮತ್ತು ಗ್ರಾಮ ಪಂಚಾಯತ್ ಕಚೇರಿಗೆ ಮುತ್ತಿಗೆ ಹಾಕಲಾಗುತ್ತದೆ ಎಂದು ಹೇಳಿದ್ದರು. ಇದೀಗ ವಿರಾಜಪೇಟೆ ತಹಶೀಲ್ದಾರ್ ಹಾಗೂ ತಾಲ್ಲೂಕು ದಂಡಧಿಕಾರಿ ಹೆಚ್.ಎನ್.ರಾಮಚಂದ್ರ ತಾಲ್ಲೂಕು ಇಲಾಖಾ ಸಿಬ್ಬಂದಿಗಳು ಹಾಗೂ ಲೋಕೋಪಯೋಗಿ ಇಲಾಖೆಯ ಜೊತೆಯಲ್ಲಿ ಆಗಮಿಸಿ ಗ್ರಾಮಸ್ಥರ ಸಮ್ಮುಖದಲ್ಲಿ ಸ್ಥಳ ಪರಿಶೀಲನೆಯನ್ನು ಮಾಡಿದರು. ಕೆದಮುಳ್ಳೂರು ಗ್ರಾ.ಪಂ ಉಪಾಧ್ಯಕ್ಷ ಎಂ. ಪರಮೇಶ್ವರ್ ತಹಶೀಲ್ದಾರ್ ಅವರಿಗೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಆಗುತ್ತಿರುವ ತೊಂದರೆಗಳನ್ನು ವಿವರಿಸಿದರು. ಮತ್ತು ಬದಲಿ ರಸ್ತೆಯನ್ನು ದುರಸ್ಥಿ ಪಡಿಸಿ ಸಂಚಾರಕ್ಕೆ ಅನುವು ಮಾಡಿಕೊಡಬೇಕಾಗಿ ಮನವಿ ಮಾಡಿದರು. ಇದಕ್ಕೆ ಸಕಾರಾತ್ಮಕವಾಗಿ ಪ್ರತಿಕ್ರಿಯೆ ನೀಡಿದ ತಹಸೀಲ್ದಾರ್ ರಾಮಚಂದ್ರ  ಕಾಲ್ನಡಿಗೆಯಲ್ಲಿಯೇ ಸುಮಾರು ಒಂದು ಕಿಲೋಮೀಟರ್…

Read More

ಮಡಿಕೇರಿ ಜು.26 NEWS DESK : ಸಿದ್ದಾಪುರದ ಕಾಫಿ ತೋಟಗಳು ಸೇರಿದಂತೆ ಕೊಡಗು ಜಿಲ್ಲೆಯ ವಿವಿಧೆಡೆ ನಡೆಯುತ್ತಿರುವ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯನ್ನು ಸ್ಥಗಿತಗೊಳಿಸಬೇಕೆಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ಜು.29 ರಂದು ದಕ್ಷಿಣ ಕೊಡಗಿನ ಟಿ.ಶೆಟ್ಟಿಗೇರಿಯಲ್ಲಿ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮ ನಡೆಯಲಿದೆ ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಅಂದು 10.30 ಗಂಟೆಗೆ ಮಾನವ ಸರಪಳಿ ನಿರ್ಮಿಸಿ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯನ್ನು ವಿರೋಧಿಸಿ ಹಕ್ಕೊತ್ತಾಯ ಮಂಡಿಸಲಾಗುವುದು. ಕೊಡವ ಲ್ಯಾಂಡ್ ನ ಸಂರಕ್ಷಣೆಗಾಗಿ ಸರ್ವ ಕೊಡವರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಪತ್ರಿಕಾ ಪ್ರಕಟಣೆಯಲ್ಲಿ ಅವರು ಮನವಿ ಮಾಡಿದ್ದಾರೆ. ಕರ್ನಾಟಕ ಭೂಸುಧಾರಣಾ ತಿದ್ದುಪಡಿ ಕಾಯ್ದೆ 79ಎ ಮತ್ತು 79ಬಿಯನ್ನು ದುರ್ಲಾಭಪಡಿಸಿಕೊಂಡು ಕೃಷಿ ಜಮೀನು, ಭತ್ತದ ಗದ್ದೆಗಳು ಮತ್ತು ಕಾಫಿ ತೋಟಗಳನ್ನು ಪರಿವರ್ತನೆ ಮಾಡಲಾಗುತ್ತಿದೆ. ಕೊಡಗು ಜಿಲ್ಲೆಯಲ್ಲೂ ಆಂಧ್ರದ ಹಣ ಬಳಕೆಯಾಗುತ್ತಿದ್ದು, ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯಾಗುತ್ತಿದೆ. ಬೆಂಗಳೂರು, ತಿರುವನಂತಪುರ, ಚೆನ್ನೈ ಹೈದರಬಾದ್ ಸೇರಿದಂತೆ ದೇಶದ ವಿವಿಧೆಡೆಯ ಭೂಮಾಫಿಯ ಮತ್ತು…

Read More

ವಿರಾಜಪೇಟೆ ಜು.26 NEWS DESK : ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಮನೆಯ ಗೋಡೆ ಕುಸಿದು ಅಪಾರ ಪ್ರಮಾಣದಲ್ಲಿ ನಷ್ಟ ಸಂಭವಿಸಿರುವ ಘಟನೆ ವಿರಾಜಪೇಟೆ ಬಿಳುಗುಂದ ಗ್ರಾಮದಲ್ಲಿ ನಡೆದಿದೆ. ವಿರಾಜಪೇಟೆ ತಾಲ್ಲೂಕಿನ ಬಿಳುಗುಂದ ಗ್ರಾ.ಪಂ ವ್ಯಾಪ್ತಿಯ ಬಿಳುಗುಂದ ಗ್ರಾಮ ಮೇಕೇರಿ ಹರಿಜನ ಕಾಲೋನಿಯ ನಿವಾಸಿ ಕಾಂತಿ ಎಂಬವರ ಮನೆಯ ಒಂದು ಭಾಗ ಕುಸಿದು ಬಿದ್ದಿದೆ. ಸ್ಥಳಕ್ಕೆ ಕಂದಾಯ ಇಲಾಖೆಯ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವರದಿ : ಕಿಶೋರ್ ಕುಮಾರ್ ಶೆಟ್ಟಿ

Read More

ಕುಶಾಲನಗರ ಜು.26 NEWS DESK :  ಕುಶಾಲನಗರ ತಾಲೂಕು ಗುಡ್ಡೆ ಹೊಸೂರಿನಲ್ಲಿ ಶ್ರೀ ಧರ್ಮಸ್ಥಳ ಸಿರಿ ಮಿಲ್ಲೆಟ್ ಹೌಸ್ ಕೇಂದ್ರದವನ್ನು ಕೊಡಗು ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯ ಎಂ.ಎನ್.ಚಂದ್ರಮೋಹನ್ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು, ಆಹಾರ ಪದ್ಧತಿ ಬದಲಾವಣೆ ಮೂಲಕ ಆರೋಗ್ಯ ಸ್ಥಿತಿಯಲ್ಲಿ ಏರುಪೇರು ಉಂಟಾಗುವ ಸಾಧ್ಯತೆಗಳು ಅಧಿಕವಾಗಿದೆ. ಪ್ರತಿಯೊಬ್ಬರು ಆಹಾರ ವಸ್ತುಗಳ ಗುಣಮಟ್ಟಗಳ ಬಗ್ಗೆ ಎಚ್ಚರಿಕೆ ವಹಿಸಬೇಕಾಗಿದೆ ಎಂದರು. ಉತ್ತಮ ಆರೋಗ್ಯ ಮೂಲಕ ಸ್ವಾಸ್ಥ್ಯ ಸಮಾಜ ಕಾಣಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಈ ಸಂರ‍್ಭ ನಡೆದ ಸರಳ ಕರ‍್ಯಕ್ರಮದಲ್ಲಿ ಶ್ರೀ ಕ್ಷೇತ್ರ ರ‍್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಡಗು ಜಿಲ್ಲಾ ನರ‍್ದೇಶಕಿ ಲೀಲಾವತಿ ಅವರು ದೀಪ ಪ್ರಜ್ವಲನೆ ಮಾಡಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಡಗು ಜಿಲ್ಲಾ ನಿರ್ದೇಶಕಿ ಲೀಲಾವತಿ ದೀಪ ಪ್ರಜ್ವಲನೆ ಮಾಡಿ ಮಾತನಾಡಿದರು. ಧರ್ಮಸ್ಥಳ ಸಿರಿ ಮಿಲ್ಲೆಟ್ ಯೋಜನಾಧಿಕಾರಿ ಯು.ಎಂ.ರಮೇಶ್, ಸಿರಿ ಆಹಾರ ಧಾನ್ಯಗಳ ಬಗ್ಗೆ ಸಮಗ್ರ ಮಾಹಿತಿ ಒದಗಿಸಿದರು. ಮುಖ್ಯ ಅತಿಥಿಗಳಾಗಿ…

Read More

ಮಡಿಕೇರಿ ಜು.26 NEWS DESK : ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೖತ್ತರಾದ ನಾಲ್ವರು ಯೋಧರಿಗೆ ಸನ್ಮಾನದ ಗೌರವ ಸಲ್ಲಿಸುವ ಮೂಲಕ ರೋಟರಿ ಮಡಿಕೇರಿ ವುಡ್ಸ್ ವತಿಯಿಂದ ಕಾಗಿ೯ಲ್ ವಿಜಯೋತ್ಸವ ಆಚರಿಸಲಾಯಿತು. ನಗರದ ರೋಟರಿ ಸಭಾಂಗಣದಲ್ಲಿ ಆಯೋಜಿತ ಕಾಗಿ೯ಲ್ ವಿಜಯ ದಿನದ ಸಮಾರಂಭದಲ್ಲಿ ಮಾಜಿ ಸೇನಾಧಿಕಾರಿಗಳಾದ ಹಾನರರಿ ಕ್ಯಾಪ್ನನ್ ಜಿ.ಎಸ್.ರಾಜಾರಾಮ್, ಎನ್.ಚಂದ್ರನ್, ಸಿ.ಪ್ರಮೋದ್ ಕುಮಾರ್, ಬಾಬು ಪ್ರಸಾದ್ ರೈ ಅವರನ್ನು ರೋಟರಿ ವುಡ್ಸ್ ಅಧ್ಯಕ್ಷ ಹರೀಶ್ ಕಿಗ್ಗಾಲು, ಕಾಯ೯ದಶಿ೯ ಕಿರಣ್ ಕುಂದರ್, ವಲಯ ಸೇನಾನಿ ಅನಿತಾ ಪೂವಯ್ಯ, ಅರಣ್ಯಾಧಿಕಾರಿ ಮಯೂರ್, ರೋಟರಿ ಪ್ರಮುಖರಾದ ಬಿ,ಜಿ, ಅನಂತಶಯನ, ಅನಿಲ್ ಹೆಚ್,ಟಿ, ಎಸ್ ಎಸ್ ಸಂಪತ್ ಕುಮಾರ್, ಸನ್ಮಾನಿಸಿ ಗೌರವಿಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಜಿ.ಎಸ್.ರಾಜಾರಾಮ್, ಕಾಗಿ೯ಲ್ ಪ್ರದೇಶದಲ್ಲಿ ದೇಶರಕ್ಷಣೆಗಾಗಿ ಕತ೯ವ್ಯ ಸಲ್ಲಿಸುವುದು ಜೀವನದ ಮಹೋನ್ನತ ಅನುಭವವಾಗಿದೆ, ಕಾಗಿ೯ಲ್ ಸಮರದ ಬಳಿಯ ದೇಶದ ರಕ್ಷಣಾ ಇಲಾಖೆಯು ಕಾಗಿ೯ಲ್ ಗೆ ಅಗತ್ಯವಾಗಿದ್ದ ಅತ್ಯಾಧುನಿಕ ರಕ್ಷಣಾ ಉಪಕರಣ 445 ಕಿ.ಮೀ. ವಿದ್ಯುತ್ ಬೇಲಿ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸಿತ್ತು…

Read More

ಮಡಿಕೇರಿ ಜು.26 NEWS DESK : ಯಡವನಾಡು ಗ್ರಾಮದ ಯಾಲದಾಳು ನಿತಿನ್ ಅವರ ತೋಟದಲ್ಲಿದ್ದ ಬೃಹತ್ ಗಾತ್ರದ ಹೆಬ್ಬಾವನ್ನು ರಕ್ಷಣೆ ಮಾಡಲಾಗಿದೆ. ಉರಗ ತಜ್ಞ ಬಾರನ ಶೇಖರ್ ಹಾವನ್ನು ರಕ್ಷಿಸಿ ಅರಣ್ಯ ಇಲಾಖೆಯ ಡಿಆರ್‌ಎಫ್ ಚಂದ್ರಶೇಖರ್ ಹಾಗೂ ಸಿಬ್ಬಂದಿ ಭೀಮಣ್ಣ ಅವರ ನೇತೃತ್ವದಲ್ಲಿ ಯಡವನಾಡು ಮೀಸಲು ಅರಣ್ಯಕ್ಕೆ ಬಿಟ್ಟರು.

Read More