ಲೇಖಕ: admin

ಮಡಿಕೇರಿ ಮಾ.9 NEWS DESK : ಪಂಜರಪೇಟೆಯ ಕೊಡವ ಕೇರಿಯ ವತಿಯಿಂದ ಹೆಗ್ಗಳ ಗ್ರಾಮದ ವೃದ್ಧಾಶ್ರಮದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.ಅನಾಥಾಶ್ರಮಕ್ಕೆ ಭೇಟಿ ನೀಡಿ ಅಲ್ಲಿನ ನಿವಾಸಿಗಳ ಆರೋಗ್ಯ ವಿಚಾರಿಸಲಾಯಿತು. ಸುಮಾರು 42 ವಾಸಿಗಳಿಗೆ ಕೇರಿಯ ವತಿಯಿಂದ ಮೊಟ್ಟೆ, ಪರೋಟ, ಪಪ್ಸ್, ಕಲ್ಲಂಗಡಿ, ಬ್ರಷ್, ಬಟ್ಟೆ, ಸಾಬೂನು, ಪೇಸ್ಟ್, ಟವಲ್, ಬಿಸ್ಕೆಟ್ಸ್, ಸೊಳ್ಳೆ ಬತ್ತಿ, ಜ್ಯೂಸ್  ಸೇರಿದಂತೆ ಅಗತ್ಯ ಸಾಮಾಗ್ರಿಗಳನ್ನು ವಿತರಿಸಲಾಯಿತು. ಮಹಿಳಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಿದವು. ಕೇರಿಯ ಪರವಾಗಿ ಅಧ್ಯಕ್ಷರಾದ ವಾಂಚೀರ ನಾಣಯ್ಯ, ಸದಸ್ಯರಾದ ಡಿ.ಸಿ.ಧ್ರುವಕುಮಾರ್, ಚರ್ಮನ್, ಸುರೇಶ್, ಪರದಂಡ ವಿಠಲ, ಅಶ್ವಿನಿ, ನವಿತಾ, ಧ್ರುವ, ದೇಶ್ ಹಾಜರಿದ್ದರು.

Read More

ಮಡಿಕೇರಿ ಮಾ.9 NEWS DESK : ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಕೊಡವ ಕೂಟಾಳಿಯಡ ಕೂಟದ ವತಿಯಿಂದ ಸಾಧಕ ಕೊಡವ ಮಹಿಳೆಯರನ್ನು ಸನ್ಮಾನಿಸಲಾಯಿತು. ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮಾರಮಾಡ ಮಾಚಮ್ಮ, ಕಾಡ್ಯಮಾಡ ರೀಟಾ ಬೋಪಯ್ಯ,  ಕರೋಟಿರ ಶಶಿ ಸುಬ್ರಮಣಿ, ಮಾಳೇಟಿರ ಸೀತಮ್ಮ ವಿವೇಕ್ ಅವರನ್ನು ಕೂಟದ ಪ್ರಮುಖರು ಹಾಗೂ ಪದಾಧಿಕಾರಿಗಳು ಅವರ ಮನೆಗೆ ತೆರಳಿ ಸನ್ಮಾನಿಸಿ, ಗೌರವಿಸಿರು. ಈ ಸಂದರ್ಭ ಕೂಟದ ಅಧ್ಯಕ್ಷರಾದ ಚೊಟ್ಟಂಡ ಪ್ರಭು ಸೋಮಯ್ಯ, ಕಾರ್ಯದರ್ಶಿ ಕಬ್ಬಚ್ಚಿರ ರಶ್ಮಿ ಕಾರ್ಯಪ್ಪ ಹಾಗೂ ಆಡಳಿತ ಮಂಡಳಿಯ ಪದಾಧಿಕಾರಿಗಳು ಹಾಜರಿದ್ದರು.

Read More

ಮಡಿಕೇರಿ ಮಾ.9 NEWS DESK : ಸೌರ್ಥನ್ ಆಫ್ ರೋಡ್ ವತಿಯಿಂದ ಮಂಗಳೂರಿನ ಉಪ್ಪಿನಂಗಡಿಯಲ್ಲಿ ನಡೆದ ಆಫ್ ರೋಡ್ ಚಾಲೆಂಜರ್ಸ್  ಸ್ಪರ್ಧೆಯ ಸ್ಟಾಕ್ ಜಿಪ್ಸಿ ಪೆಟ್ರೋಲ್ ಕ್ಲಾಸ್ ವಿಭಾಗದಲ್ಲಿ ಮಡಿಕೇರಿಯ ಜತೀನ್ ಕರ್ಕೆರ ಹಾಗೂ ಹಾರ್ಧಿಕ್ ಕರ್ಕೆರ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ರಾಜ್ಯದ ಹಲವು ಭಾಗಗಳಿಂದ ಸ್ಪರ್ಧಿಗಳು ಭಾಗವಹಿಸಿದ್ದರು. ಇವರು ಮಡಿಕೇರಿಯ ಉದ್ಯಮಿ ರವಿ ಅವರ ಪುತ್ರರು.

Read More

ಸೋಮವಾರಪೇಟೆ ಮಾ.9 NEWS DESK : ರಾಜ್ಯ ಸರ್ಕಾರ ಬಡವರು, ಕೂಲಿ ಕಾರ್ಮಿಕರು ಹಾಗೂ ಗ್ರಾಮೀಣ ಭಾಗದ ಬಡ ರೈತರ ಬಿಪಿಎಲ್ ಪಡಿತರ ಚೀಟಿಗಳನ್ನು ಅವೈಜ್ಞಾನಿಕವಾಗಿ ಎಪಿಲ್ ಕಾರ್ಡ್‍ಗಳನ್ನಾಗಿ ಪರಿವರ್ತಿಸಲಾಗುತ್ತಿದೆ ಎಂದು ಆರೋಪಿಸಿ ಬಿಜೆಪಿ ಸೋಮವಾರಪೇಟೆ ಮಂಡಲ ಯುವ ಮೋರ್ಚಾ ಸೋಮವಾರಪೇಟೆ ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿತು. ಈ ಸಂದರ್ಭ ಮಾತನಾಡಿದ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಮಹೇಶ್ ತಿಮ್ಮಯ್ಯ, ಕೊಡಗು ಜಿಲ್ಲೆಯಲ್ಲಿ ಸಾವಿರಾರು ಬಿಪಿಎಲ್ ಪಡಿತರ ಕಾರ್ಡ್‍ಗಳು ರದ್ದಾಗಿದ್ದು, ಸೋಮವಾರಪೇಟೆ ತಾಲ್ಲೂಕು ವ್ಯಾಪ್ತಿಯಲ್ಲಿ 975 ಬಿಪಿಎಲ್ ಕಾರ್ಡ್ ರದ್ದು ಮಾಡಿದ್ದು, ಇದರಲ್ಲಿ ಬಿಪಿಎಲ್ ಕಾರ್ಡ್‍ಗಳನ್ನು ಹೊಂದಲು ಅರ್ಹವಾಗಿರುವ ಎಷ್ಟೋ ಕುಟುಂಬಗಳು ತಮ್ಮ ಪಡಿತರ ಚೀಟಿಯನ್ನು ಕಳೆದುಕೊಂಡು ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಹಲವು ಕುಟುಂಬಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ತಾಲೂಕಿನ ಚೌಡ್ಲು ಗ್ರಾ ಪಂ ವ್ಯಾಪ್ತಿಯ ಶನಿವಾರಸಂತೆ, ಕೊಡ್ಲಿಪೇಟೆ, ಶಾಂತಳ್ಳಿ, ಗೌಡಳ್ಳಿ, ಮಾದಾಪುರ, ಟೌನ್ ಪಂಚಾಯಿತಿ ಸೇರಿದಂತೆ ಸೋಮವಾರಪೇಟೆ ತಾಲೂಕಿನ ಸುಮಾರು 975 ಕಾರ್ಡ್ ಗಳನ್ನು ಅನರ್ಹಗೊಳಿಸಲಾಗಿದೆ ಎಂದರು. ಬಿಪಿಎಲ್ ಕಾರ್ಡ್‍ಗಳನ್ನು…

Read More

ಮಡಿಕೇರಿ, NEWS DESK ಮಾ.೯ : ಕಾಡಾನೆ ದಾಳಿಗೆ ಸಿಲುಕಿ ಗ್ರಾ.ಪಂ ಮಾಜಿ ಸದಸ್ಯರೊಬ್ಬರು ಮೃತಪಟ್ಟಿರುವ ಘಟನೆ ಕುಶಾಲನಗರ ತಾಲ್ಲೂಕಿನ ವಾಲ್ನೂರು ತ್ಯಾಗತ್ತೂರು ಗ್ರಾ.ಪಂ ವ್ಯಾಪ್ತಿಯ ಬಾಳೆಗುಂಡಿ ಗಿರಿಜನ ಹಾಡಿಯ ಮೀನುಕೊಲ್ಲಿ ಎಂಬಲ್ಲಿ ನಡೆದಿದೆ. ನಂಜರಾಯಪಟ್ಟಣ ಗ್ರಾ.ಪಂ ಮಾಜಿ ಸದಸ್ಯೆ, ಬಾಳೆಗುಂಡಿ ಹಾಡಿ ನಿವಾಸಿ ಸ್ವಾಮಿ ಎಂಬುವವರ ಪತ್ನಿ ಜಲಜಾಕ್ಷಿ (೫೩) ಮೃತ ದುರ್ದೈವಿ. ಇಂದು ಬೆಳಿಗ್ಗೆ ಹಾಡಿ ಮುಂಭಾಗದಲ್ಲಿ ಆರು ಮಹಿಳೆಯರು ಹೋಗುತ್ತಿದ್ದಾಗ ಕಾಡಾನೆ ಏಕಾಏಕಿ ದಾಳಿ ಮಾಡಿದೆ. ಜಲಜಾಕ್ಷಿ ಅವರು ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉಳಿದವರು ಓಡಿ ಹೋಗಿ ತಪ್ಪಿಸಿಕೊಂಡಿದ್ದಾರೆ. ಸ್ಥಳಕ್ಕೆ ಎಸಿಎಫ್ ಗೋಪಾಲ್ ಸೇರಿದಂತೆ ವಲಯ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ಇದೇ ಸಂದರ್ಭ ಕಾಡಾನೆ ಹಾವಳಿ ತಡೆಗಟ್ಟಬೇಕು, ಸ್ಥಳದಲ್ಲೇ ಪರಿಹಾರ ಘೋಷಿಸಬೇಕು ಎಂದು ಹಾಡಿ ನಿವಾಸಿಗಳು ಒತ್ತಾಯಿಸಿದರು. ಕಾಡಾನೆ ಹಾವಳಿ ತಡೆಗಟ್ಟಲು ಅರಣ್ಯ ಇಲಾಖೆಯಿಂದ ಈ ಭಾಗದಲ್ಲಿ ಕೈಗೊಂಡಿರುವ ಯೋಜನೆಗಳು ವಿಫಲವಾಗಿವೆ ಎಂದು ನಂಜರಾಯಪಟ್ಟಣ ಗ್ರಾ.ಪಂ ಮಾಜಿ ಅಧ್ಯಕ್ಷ ಸಿ.ಎಲ್.ವಿಶ್ವ ಆರೋಪಿಸಿದರು. ನಂಜರಾಯಪಟ್ಟಣ ಗ್ರಾ.ಪಂ…

Read More

ಮಡಿಕೇರಿ, NEWS DESK ಮಾ.೯ : ಜಿಲ್ಲೆಯ ಮತ್ತಿಗೋಡು ಸಾಕಾನೆ ಶಿಬಿರದ ಆನೆ “ಅಭಿ” (೨೧) ಅನಾರೋಗ್ಯದಿಂದ ಮೃತಪಟ್ಟಿದೆ. ಕಾಡಾನೆ ಸೆರೆ ಕಾರ್ಯಾಚರಣೆಯಲ್ಲಿ ಬಳಕೆಯಾಗುತ್ತಿದ್ದ “ಅಭಿ” ಕಳೆದ ೬ ತಿಂಗಳಿನಿAದ ಕಾಲು ನೋವಿನಿಂದ ಬಳಲುತ್ತಿದ್ದ. ಸುದೀರ್ಘ ಕಾಲದ ಚಿಕಿತ್ಸೆ ಫಲಿಸದೆ ಭಾನುವಾರ ರಾತ್ರಿ ಮೃತಪಟ್ಟಿದ್ದಾನೆ. ಪಶುವೈದ್ಯ ಡಾ.ರಮೇಶ ಮರಣೋತ್ತರ ಪರೀಕ್ಷೆ ನಡೆಸಿದರು. ಡಿಎಫ್ ಓ, ಡಿಸಿಎಫ್ ಹಾಗೂ ಹಿರಿಯ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.

Read More

ಮಡಿಕೇರಿ, NEWS DESK ಮಾ.09 : ಕಾಡಾನೆ ದಾಳಿಯಿಂದಾಗಿ ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ ಸುಮಾರು ನಾಲ್ಕು ಮಂದಿ ಸಾವನ್ನಪ್ಪಿದ್ದು, ಕಾಡಾನೆ ಹಾವಳಿ ನಿಯಂತ್ರಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಸಮಾಜ ಸೇವಕ ಪ್ರಸನ್ನ ಎಡಿಕೇರಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ‌. ಪತ್ರಿಕಾ ಹೇಳಿಕೆ ನೀಡಿರುವ ಅವರು, ಸೋಮವಾರ ಕುಶಾಲನಗರ ತಾಲೂಕಿನ ನಂಜರಾಯಪಟ್ಟಣ ಗ್ರಾಪಂ ಮಾಜಿ ಸದಸ್ಯೆ ಜಲಜಾಕ್ಷಿ(53) ಕಾಡಾನೆ ದಾಳಿಗೆ ಮೃತಪಟ್ಟಿದ್ದಾರೆ. ಕಾಡಾನೆ ದಾಳಿಯಿಂದ ಕೊಡಗು ಜಿಲ್ಲೆಯಲ್ಲಿ ಜ.1ರಂದು ಶನಿವಾರಸಂತೆ ಸಮೀಪದ ಗಣಗೂರಿನಲ್ಲಿ ಪೊನ್ನಪ್ಪ(61), ಜನವರಿ 29ರಂದು ವಿರಾಜಪೇಟೆ ತಾಲೂಕಿನ ಸಿದ್ದಾಪುರ ಕಾಫಿ ತೋಟದಲ್ಲಿ ಲತೀಫ್(72), ಫೆ.28ರಂದು ಮಡಿಕೇರಿ ತಾಲೂಕಿನ ಮದೆನಾಡುವಿನಲ್ಲಿ ಪಿಯುಸಿ ವಿದ್ಯಾರ್ಥಿನಿ ಪೂಜಾ(17) ಮೃತಪಟ್ಟಿದ್ದಾರೆ. ಎರಡು ತಿಂಗಳಲ್ಲಿ ನಾಲ್ಕು ಮಂದಿ ಮೃತಪಟ್ಟಿದ್ದರೂ ಕೂಡ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ಆರೋಪಿಸಿದರು. ಹೀಗೆ ಮುಂದುವರೆದರೆ ಅಮಾಯಕ ಕಾರ್ಮಿಕರು ಕಾಡಾನೆ ದಾಳಿಗೆ ತುತ್ತಾಗುತ್ತಾರೆ. ಆದ್ದರಿಂದ ಆದಷ್ಟು ಕೂಡಲೇ ಸಂಬಂಧಿಸಿದ ಇಲಾಖೆ ಎಚ್ಚೆತ್ತುಕೊಂಡು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಮುಂದೆ ಇಂತಹ…

Read More

ಕಣಿವೆ, NEWS DESK ಮಾ.09: ಅತ್ತೂರಿನ ಜ್ಞಾನಗಂಗಾ ವಸತಿ ಶಾಲೆಯ ಪ್ರಾಂಶುಪಾಲರು ಹಾಗೂ ಬೋಧಕರ ತಂಡದಿಂದ ಅಂತರರಾಷ್ಟ್ರೀಯ ಮಹಿಳಾ ದಿನ ಆಚರಿಸಲಾಯಿತು. ಶಿಕ್ಷಕರು ಸಾಮೂಹಿಕವಾಗಿ ಕೇಕ್ ಕತ್ತರಿಸಿ ವಿದ್ಯಾರ್ಥಿಗಳಿಗೆ ಸಿಹಿ ನೀಡುವ ಮೂಲಕ ಸಂಭ್ರಮಿಸಿದರು. ಶಾಲಾ ಆಡಳಿತ ಮಂಡಳಿ ಕಾರ್ಯದರ್ಶಿ ಬಿ.ಎಸ್.ನಿಂಗಪ್ಪ, ಪ್ರಾಂಶುಪಾಲೆ ಸತ್ಯ ಸುಲೋಚನಾ ಹಾಗೂ ಶಿಕ್ಷಕರಿದ್ದರು.

Read More

ಮಡಿಕೇರಿ, NEWS DESK ಮಾ.09:-ಅಂಚೆ ಅದಾಲತ್‍ನ ಮುಂದಿನ ಸಭೆಯು ಮಾರ್ಚ್, 16 ರಂದು ಬೆಳಗ್ಗೆ 11 ಗಂಟೆಗೆ ಕೊಡಗು ಅಂಚೆ ವಿಭಾಗದ ವಿಭಾಗೀಯ ಕಚೇರಿ, ಸಿದ್ದಾಪುರ ರಸ್ತೆ, ಅಶೋಕ್‍ಪುರದಲ್ಲಿ ನಡೆಯಲಿದೆ. ಸಭೆಯಲ್ಲಿ ಕೊಡಗು ಅಂಚೆ ವಿಭಾಗದ ಅಂಚೆ ಸೇವೆಗೆ ಸಂಬಂಧಿಸಿದ ಎಲ್ಲಾ ತರಹದ ದೂರುಗಳನ್ನು ಸ್ವೀಕರಿಸಿ ಚರ್ಚಿಸಲಾಗುತ್ತದೆ. ದೂರುಗಳಿದ್ದಲ್ಲಿ ‘ಅಂಚೆ ಅದಾಲತ್’ಎಂದು ಬರೆದು ಅಂಚೆ ಅಧೀಕ್ಷಕರು, ಕೊಡಗು ಅಂಚೆ ವಿಭಾಗ, ಮಡಿಕೇರಿ ಇವರಿಗೆ ಮಾರ್ಚ್, 13 ರೊಳಗೆ ತಲುಪುವಂತೆ ಕಳುಹಿಸಬೇಕು. ನಂತರ ಮಾರ್ಚ್, 16 ರಂದು ನಡೆಯುವ ಸಭೆಯಲ್ಲಿ ಭಾಗವಹಿಸಬಹುದು ಎಂದು ಕೊಡಗು ಅಂಚೆ ವಿಭಾಗದ ಅಂಚೆ ಅಧೀಕ್ಷಕರು ತಿಳಿಸಿದ್ದಾರೆ.

Read More

ಮಡಿಕೇರಿ, NEWS DESK ಮಾ.9 : ಕೊಡಗು ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾಗಿ ಡಿ.ವಿನೋದ್ ಖನ್ನಾ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.

Read More