ಮಡಿಕೇರಿ ಜು.25 NEWS DESK : ಸಿದ್ದಾಪುರ ಸಮೀಪದ ಪಳ್ಳೆಕೆರೆ ಎಂಬಲ್ಲಿ ಹುಲಿಯ ಹೆಜ್ಜೆ ಗುರುತುಗಳು ಗೋಚರಿಸಿ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಪಳ್ಳೆಕೆರೆ ಗ್ರಾಮದ ಕಾಫಿ ತೋಟವೊಂದರಲ್ಲಿ ಇಂದು ಬೆಳಗ್ಗಿನ ಜಾವ ಕಾರ್ಮಿಕರು ಕೆಲಸಕ್ಕೆ ತೆರಳುವ ಸಂದರ್ಭ ಹುಲಿಯ ಹೆಜ್ಜೆ ಗುರುತು ಹಸಿ ಮಣ್ಣಿನಲ್ಲಿ ಮೂಡಿರುವುದು ಗೋಚರಿಸಿದೆ. ಸ್ಥಳೀಯರು ಇದರ ಫೋಟೋ ತೆಗೆದು ಅರಣ್ಯ ಇಲಾಖೆ ಸಿಬ್ಬಂದಿಗೆ ಕಳುಹಿಸಿದ್ದು, ಅಧಿಕಾರಿಗಳು ಹುಲಿ ಹೆಜ್ಜೆ ಎಂದು ಸ್ಪಷ್ಟಪಡಿಸಿದ್ದಾರೆ. ಸುತ್ತಮುತ್ತಲಿನ ಪ್ರದೇಶಗಳಲ್ಲಿ ವನ್ಯಜೀವಿಗಳ ಉಪಟಳ ಮಿತಿಮೀರಿದ್ದು, ಎರಡು ದಿನಗಳ ಹಿಂದೆ ಕಾಡಾನೆ ಗುಂಪು ಗುಹ್ಯ ಶಾಲಾ ವಠಾರಕ್ಕೆ ಲಗ್ಗೆ ಇಟ್ಟು ಬಾಳೆ, ತೆಂಗು ಗಿಡ ನಾಶ ಪಡಿಸಿವೆ. ಅರಣ್ಯ ಇಲಾಖೆ ಅಧಿಕಾರಿಗಳು ಈ ಸಂಬAಧ ಕಾರ್ಯಾಚರಣೆ ನಡೆಸಿ ತೋಟಗಳಲ್ಲಿ ಬೀಡುಬಿಟ್ಟಿರುವ ವನ್ಯ ಪ್ರಾಣಿಗಳನ್ನು ಕಾಡಿಗಟ್ಟುವಂತೆ ಒತ್ತಾಯಿಸಿದ್ದಾರೆ.
ಲೇಖಕ: admin
ನವದೆಹಲಿ ಜು.25 NEWS DESK : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಭವನದೊಳಗಿನ ಎರಡು ಮಹತ್ವದ ಸಭಾಂಗಣಗಳಾದ ದರ್ಬಾರ್ ಹಾಲ್ ಮತ್ತು ಅಶೋಕ್ ಹಾಲ್ ನ ಹೆಸರು ಬದಲಾವಣೆ ಮಾಡಿದ್ದು, ಕ್ರಮವಾಗಿ ಗಣತಂತ್ರ ಮಂಟಪ್ ಹಾಗೂ ಆಶೋಕ ಮಂಟಪ್ ಎಂದು ಮರುನಾಮಕರಣ ಮಾಡಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ಭಾರತೀಯ ಸಂಸ್ಕೃತಿಯ ಸಾಂಸ್ಕೃತಿಕ ಮೌಲ್ಯಗಳು ಹಾಗೂ ನೈತಿಕತೆಯನ್ನು ಪಸರಿಸುವ ನಿರಂತರ ವಾತಾವರಣವನ್ನು ನಿರ್ಮಿಸುವ ಪ್ರಯತ್ನ ಇದಾಗಿದೆ ಎಂದು ರಾಷ್ಟ್ರಪತಿ ಭವನದ ಸೆಕ್ರೆಟ್ರಿಯೇಟ್ ಪ್ರಕಟಣೆಯಲ್ಲಿ ತಿಳಿಸಿದೆ. ಐತಿಹಾಸಿಕವಾಗಿ ಪ್ರಸಿದ್ಧವಾಗಿರುವ ‘ದರ್ಬಾರ್ ಹಾಲ್’ ಮತ್ತು ‘ಅಶೋಕ್ ಹಾಲ್’ ಅನ್ನು ಈಗ ಕ್ರಮವಾಗಿ ‘ಗಣತಂತ್ರ ಮಂಟಪ’ ಮತ್ತು ‘ಅಶೋಕ ಮಂಟಪ’ ಎಂದು ಕರೆಯಲಾಗುತ್ತದೆ. ಭಾರತದ ಗಣರಾಜ್ಯ ಮತ್ತು ಅದರ ಇತಿಹಾಸವನ್ನು ಪ್ರತಿಬಿಂಬಿಸಲು ಈ ಬದಲಾವಣೆಯನ್ನು ಮಾಡಲಾಗಿದೆ. ಹೆಸರು ಬದಲಾವಣೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸಂತಸ ವ್ಯಕ್ತಪಡಿಸಿದ್ದಾರೆ ಎಂದು ರಾಷ್ಟ್ರಪತಿ ಭವನದ ಪ್ರಕಟಣೆ ತಿಳಿಸಿದೆ.
ಮಡಿಕೇರಿ ಜು.25 NEWS DESK : ಗಾಳಿಯ ರಭಸಕ್ಕೆ ಅಪಾಯದ ಮುನ್ಸೂಚನೆ ಇದ್ದರೂ ಸೋಮವಾರಪೇಟೆ ಮತ್ತು ಕುಶಾಲನಗರ ತಾಲ್ಲೂಕು ವ್ಯಾಪ್ತಿಯ ಶಾಲೆಗಳಿಗೆ ಬೆಳಿಗ್ಗೆ ರಜೆ ಘೋಷಿಸಲಾಗಿದೆ. ಬುಧವಾರ ಮತ್ತು ಗುರುವಾರ ಎರಡೂ ದಿನವೂ ಹೀಗೆ ಮಾಡಲಾಗಿದೆ. ಇದರಿಂದ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಗೊಂದಲ ಸೃಷ್ಟಿಯಾಗಿದೆ. ಕೆಲವು ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸುರಿಯುವ ಮಳೆಯ ನಡುವೆ ಶಾಲೆಗೆ ಬಂದು ಮತ್ತೆ ಮನೆಗೆ ಮರಳಿದ್ದಾರೆ. ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಶಿಕ್ಷಣಾಧಿಕಾರಿಗಳು ಸಕಾಲದಲ್ಲಿ ಸಂಜೆಯೇ ರಜೆ ಘೋಷಣೆ ಮಾಡಬೇಕು ಎಂದ ಪೋಷಕರು ಒತ್ತಾಯಿಸಿದ್ದಾರೆ.
ಮಡಿಕೇರಿ ಜು.25 NEWS DESK : ಕೊಡಗು ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡ0ತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 63.38 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 96.97 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1770.53 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1063.37 ಮಿ.ಮೀ ಮಳೆಯಾಗಿತ್ತು. ಸೋಮವಾರಪೇಟೆ ತಾಲ್ಲೂಕಿನ ಶಾಂತಳ್ಳಿ ಭಾಗದಲ್ಲಿ ಕಳೆದ 24 ಗಂಟೆಗಳಲ್ಲಿ ದಾಖಲೆಯ 9 ಇಂಚು ಮಳೆಯಾಗಿದೆ. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 54.90 ಮಿ.ಮೀ. ಕಳೆದ ವರ್ಷ ಇದೇ ದಿನ 133.38 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2428.60 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1772.32 ಮಿ.ಮೀ. ಮಳೆಯಾಗಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 44.60 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 111.85 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1650.65 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 864.21 ಮಿ.ಮೀ. ಮಳೆಯಾಗಿತ್ತು.…
ಮಡಿಕೇರಿ ಜು.25 NEWS DESK : ನಗರದ ಶ್ರೀ ಓಂಕಾರೇಶ್ವರ ದೇವಾಲಯ ರಸ್ತೆಯ ಒಂದು ಭಾಗ ಭಾರೀ ಮಳೆಗೆ ಕುಸಿದಿದೆ. ರಸ್ತೆಯ ಕೆಳಭಾಗದಲ್ಲಿ ಸುಮಾರು 10 ಕುಟುಂಬಗಳು ವಾಸಿಸುತ್ತಿವೆ. ಗಾಳಿ ಮಳೆಯ ಅಬ್ಬರ ಹೆಚ್ಚಾಗುತ್ತಲೇ ಇದ್ದು, ಮಣ್ಣು ಕುಸಿಯುವ ಆತಂಕ ಎದುರಾಗಿದೆ. ಬರೆ ಕುಸಿದಿರುವುದರಿಂದ ಕುಡಿಯುವ ನೀರು ಸರಬರಾಜಿನ ಪೈಪ್ ಗೂ ಹಾನಿಯಾಗಿ ಈ ಭಾಗದ ಮನೆಗಳಿಗೆ ನೀರಿನ ಕೊರತೆ ಎದುರಾಗಿದೆ. ತಕ್ಷಣ ನಗರಸಭೆ ಕುಡಿಯುವ ನೀರಿಗೆ ವ್ಯವಸ್ಥೆ ಮಾಡಬೇಕು ಮತ್ತು ರಸ್ತೆ ಬಿರುಕು ಬಿಟ್ಟು ಅನಾಹುತ ಎದುರಾಗುವ ಮೊದಲು ಸೂಕ್ರ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸ್ಥಳೀಯ ನಿವಾಸಿಗಳು ಒತ್ತಾಯಿಸಿದ್ದಾರೆ.
ಮಡಿಕೇರಿ ಜು.25 NEWS DESK : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು 13 ಫಲಾನುಭವಿ ಆಧಾರಿತ ಯೋಜನೆಗಳನ್ನು 2024-25ನೇ ಸಾಲಿನಲ್ಲಿ ಸೇವಾ ಸಿಂಧು, ಗ್ರಾಮ ಒನ್, ಕರ್ನಾಟಕ ಒನ್ ಆನ್‌ಲೈನ್ ವೇದಿಕೆ ತಂತ್ರಾ0ಶದಡಿ ಆಳವಡಿಸಲಾಗಿರುತ್ತದೆ. ಆದ್ದರಿಂದ ಈ ಕೆಳಕಂಡ ಯೋಜನೆಗಳನ್ನು ಆನ್‌ಲೈನ್ ಮೂಲಕ ಅನುಷ್ಠಾನಗೊಳಿಸುವ ಉದ್ದೇಶದಿಂದ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ 13 ಫಲಾನುಭವಿ ಆಧಾರಿತ ಯೋಜನೆಗಳಿಗೆ 2024-25ನೇ ಸಾಲಿಗೆ ವಿಕಲಚೇತನ ಫಲಾನುಭವಿಗಳು ಆನ್‌ಲೈನ್ ಮೂಲಕ https://sevasindhu.karnataka.gov.in/Sevasindhu/DepartmentServicesKannada ಪೋರ್ಟ್ಲ್‌ನಲ್ಲಿ ಅರ್ಜಿ ಸಲ್ಲಿಸಲು ಆಗಸ್ಟ್, 31 ಕೊನೆಯ ದಿನವಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ. ಯೋಜನೆಗಳ ವಿವರ: ಪ್ರತಿಭಾವಂತ ಅಂಗವಿಕಲ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಯೋಜನೆ, ವೈದ್ಯಕೀಯ ಪರಿಹಾರ ನಿಧಿ ಯೋಜನೆ, ಶಿಶುಪಾಲನಾ ಭತ್ಯೆ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್ ಟಾಪ್, ನಿರುದ್ಯೋಗ ಭತ್ಯೆ, ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ಯೋಜನೆ, ಆಧಾರ ಯೋಜನೆ, ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ ಯೋಜನೆ, ಮರಣ…
ಮಡಿಕೇರಿ ಜು.25 NEWS DESK : 2023-24ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು 2 ನೇ ವರ್ಷದ ಪಿಯುಸಿ ಸಾರ್ವತ್ರಿಕ ಪರೀಕ್ಷೆಗಳಲ್ಲಿ ಗರಿಷ್ಠ ಅಂಕ ಪಡೆದ ಕರ್ನಾಟಕದ ಮೂಲ ನಿವಾಸಿ ಮಾಜಿ ಸೈನಿಕರ ಗಂಡು ಮತ್ತು ಹೆಣ್ಣು ಮಕ್ಕಳಿಗೆ, ಜನರಲ್ ಕೆ.ಎಸ್ ತಿಮ್ಮಯ್ಯ ನಗದು ಪ್ರಶಸ್ತಿ ಮಂಜೂರು ಮಾಡಲು ತ್ರಿಪ್ರತಿಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯ ಮಾದರಿಗಳನ್ನು, ಜಂಟಿ ನಿರ್ದೇಶಕರ ಕಾರ್ಯಾಲಯ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮಡಿಕೇರಿ ಅವರಿಂದ ಪಡೆದು ನವೆಂಬರ್, 15 ರೊಳಗೆ ಸಲ್ಲಿಸಬೇಕು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ಮಡಿಕೇರಿ ಜು.24 NEWS DESK : ಕರ್ನಾಟಕ ಸಾಹಿತ್ಯ ಅಕಾಡೆಮಿಯು 2023 ನೇ ವರ್ಷದಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡಿರುವ ಸಾಹಿತ್ಯದ ವಿವಿಧ ಪ್ರಕಾರಗಳ ಕೃತಿಗಳನ್ನು ಬಹುಮಾನಕ್ಕಾಗಿ ಆಹ್ವಾನಿಸಲಾಗಿದೆ. ಲೇಖಕರು, ಪ್ರಕಾಶಕರು, ಸಾಹಿತ್ಯಾಸಕ್ತ ಸಾರ್ವಜನಿಕರು ನಾಲ್ಕು ಪ್ರತಿಗಳನ್ನು ರಿಜಿಸ್ಟಾರ್, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002 ಈ ವಿಳಾಸಕ್ಕೆ ರಿಜಿಸ್ರ‍್ಡ್ ಅಂಚೆ, ಕೋರಿಯರ್ ಮೂಲಕ ಅಥವಾ ಖುದ್ದಾಗಿ 2024ರ ಆಗಸ್ಟ್, 31 ರೊಳಗೆ ತಲುಪುವಂತೆ ಕಳುಹಿಸಬೇಕು. ಹೆಚ್ಚಿನ ವಿವರಗಳಿಗೆ ಅಕಾಡೆಮಿಯ ವೆಬ್‌ಸೈಟ್ www.sahithyaacademy.karnataka.gov.in ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ರಿಜಿಸ್ಟಾರ್ ಎನ್.ಕರಿಯಪ್ಪ ಅವರು ತಿಳಿಸಿದ್ದಾರೆ.
ಮಡಿಕೇರಿ ಜು.25 NEWS DESK : ಸೋಮವಾರಪೇಟೆ ತಾಲ್ಲೂಕು ಶಾಂತಳ್ಳಿ ಹೋಬಳಿ ತೋಳೂರು ಶೆಟ್ಟಳ್ಳಿ ಗ್ರಾಮದ ನಿವಾಸಿಯಾದ ಕೆ.ಜೆ.ಪಾರ್ವತಿ ಜೋಯಪ್ಪ ಅವರ ವಾಸದ ಮನೆ ಗೋಡೆ ಮತ್ತು ಛಾವಣಿ ಬಿದ್ದು ಹಾನಿಯಾಗಿದೆ. ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ವಿರಾಜಪೇಟೆ ಜು.25 NEWS DESK : ಕುಶಾಲನಗರ ಕ್ರಿಯೇಟಿವ್ ಡ್ಶಾನ್ಸ್ ಅಕಾಡೆಮಿ ಮತ್ತು ಡ್ಶಾನ್ಸ್ ಇವೆಂಟ್ ಸ್ಟುಡಿಯೊ ಆಶ್ರಯದಲ್ಲಿ ನಡೆದ ರಾಜ್ಯಮಟ್ಟದ ನೃತ್ಯ ಸ್ಪರ್ಧೆಯಲ್ಲಿ ವಿರಾಜಪೇಟೆಯ ಬಾಚಮ್ಮಂಡ ವಿಮರ್ಶ ಮತ್ತು ಕೆ.ಸಿ.ತನ್ವಿ ದೇಚಮ್ಮ ಕಪಲ್ಸ್ ವಿಭಾಗದಲ್ಲಿ ತೃತೀಯ ಸ್ಥಾನ ಗಳಿಸಿದ್ದಾರೆ. ಬಾಚಮ್ಮಂಡ ವಿಮರ್ಶ ವಿರಾಜಪೇಟೆಯ ಸಂತ ಅನ್ನಮ್ಮ ಶಾಲೆಯಲ್ಲಿ 8ನೇ ತರಗತಿಯಲ್ಲಿ ಓದುತ್ತಿದ್ದು, ನಿಸರ್ಗ ಬಡಾವಣೆ ನಿವಾಸಿ ಬಾಚಮ್ಮಂಡ ಕಿಶೋರ್ ಮತ್ತು ವಕೀಲರಾದ ಅನುಮಪ ಕಿಶೋರ್ ದಂಪತಿಯ ಪುತ್ರಿ. ತನ್ವಿ ದೇಚಮ್ಮ ಆಶಾ ಅವರ ಪುತ್ರಿಯಾಗಿದ್ದು, ಅರಮೇರಿಯ ಎಸ್.ಎಂ.ಎಸ್ ಶಾಲೆಯಲ್ಲಿ 8ನೇ ತರಗತಿಯಲ್ಲಿ ಓದುತ್ತಿದ್ದಾಳೆ. ವಿರಾಜಪೇಟೆಯ ಟೀಮ್ ಇಂಟೋಫೀಸ್ ನೃತ್ಯ ಶಾಲೆಯ ನೃತ್ಯ ಸಂಯೋಜಕ ವಿಷ್ಣು ಅವರಲ್ಲಿ ತರಬೇತಿ ಪಡೆಯುತ್ತಿದ್ದಾರೆ.






